Subscribe to Updates
Get the latest creative news from FooBar about art, design and business.
Author: kannadanewsnow09
ರಾಜಸ್ಥಾನ: ಇಲ್ಲಿನ ಫಲೋಡಿ ಜಿಲ್ಲೆಯ ಮಾತೋಡಾ ಪ್ರದೇಶದಲ್ಲಿ ನಿಂತಿದ್ದಂತ ಟ್ರಕ್ ಗೆ ಟೆಂಪೋ ಟ್ರಾವೆಲ್ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 18 ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ. ಇನ್ನೂ ಈ ಅಪಘಾತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಜೋಧ್ ಪುರ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತರನ್ನು ಜೋಧ್ ಪುರದ ಸುರ್ಸಾಗರ್ ನ ಮಾಲಿ ಸಮುದಾಯದವರು ಎಂಬುದಾಗಿ ತಿಳಿದು ಬಂದಿದೆ. ಬಿಕಾನೇರ್ ನ ಕೊಲಾಯತ್ ದೇಗುಲದಿಂದ ವಾಪಾಸ್ ಆಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. https://twitter.com/PTI_News/status/1985008698637287699 https://kannadanewsnow.com/kannada/what-are-the-duties-of-gram-panchayat-watermen-pump-operators-and-mechanics-in-the-state-here-is-the-information/ https://kannadanewsnow.com/kannada/useful-information-for-the-public-these-are-the-duties-of-the-village-accountant/
ರಾಜಸ್ಥಾನ: ರಾಜಸ್ಥಾನದಲ್ಲಿ ನಿಲ್ಲಿಸಿದ್ದ ಟ್ರೇಲರ್ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 18 ಭಕ್ತರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಜಧಾನಿ ಜೈಪುರದಿಂದ ಸುಮಾರು 400 ಕಿ.ಮೀ ದೂರದಲ್ಲಿರುವ ಫಲೋಡಿ ಜಿಲ್ಲೆಯಿಂದ ಈ ಅಪಘಾತ ವರದಿಯಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. ಬಿಕಾನೇರ್ನ ಕೊಲಾಯತ್ಗೆ ಭೇಟಿ ನೀಡಿದ ನಂತರ ಭಕ್ತರು ಜೋಧ್ಪುರದ ಸುರ್ಸಾಗರ್ನಿಂದ ಹಿಂತಿರುಗುತ್ತಿದ್ದರು. ಈ ದುಃಖದ ಸಮಯದಲ್ಲಿ ಸರ್ಕಾರ ಸಂತ್ರಸ್ತರೊಂದಿಗೆ ನಿಂತಿದೆ ಎಂದು ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಹೇಳಿದ್ದಾರೆ. https://kannadanewsnow.com/kannada/another-good-news-for-the-women-of-the-state-akka-pade-to-be-launched-on-november-19th/ https://kannadanewsnow.com/kannada/what-are-the-duties-of-gram-panchayat-watermen-pump-operators-and-mechanics-in-the-state-here-is-the-information/
ಬೆಂಗಳೂರು: ಬಿಜೆಪಿ ನಾಯಕರು ‘ಲಾಲ್ಬಾಗ್ ಉಳಿಸಿ’ ಎಂದು ನಾಟಕವಾಡುತ್ತಿದ್ದಾರೆ. ಲಾಲ್ಬಾಗ್ ಬಗ್ಗೆ ನಿಮ್ಮದು ಕಾಳಜಿಯೋ? ರಾಜಕೀಯವೋ? ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಪ್ರಶ್ನಿಸಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ನಿಮಗೆ ಲಾಲ್ಬಾಗ್ ಬಗ್ಗೆ ನಿಜವಾಗಿಯೂ ಕಾಳಜಿ ಇದ್ದರೆ, ಇಡೀ ಯೋಜನೆಯನ್ನು ರದ್ದುಪಡಿಸಲು ಹಠ ಹಿಡಿಯುವ ಬದಲು, ಸುರಂಗದ ಪ್ರವೇಶ ಮತ್ತು ನಿರ್ಗಮನಕ್ಕೆ ಪರ್ಯಾಯ ಜಾಗವನ್ನು ಸೂಚಿಸುವ ಧೈರ್ಯ ತೋರಿ. ಅದನ್ನು ಬಿಟ್ಟು, ಜನರ ದಾರಿ ತಪ್ಪಿಸುವ ರಾಜಕೀಯ ಗಿಮಿಕ್ ಏಕೆ? ಎಂದು ಕೇಳಿದ್ದಾರೆ. ನಿಮ್ಮ ದ್ವಂದ್ವ ನೀತಿಗೆ ಇದಕ್ಕಿಂತ ಸಾಕ್ಷಿ ಬೇಕೇ? ಎಂಬುದಾಗಿ ಈ ಕೆಳಗಿನಂತೆ ಪಟ್ಟಿ ನೀಡಿದ್ದಾರೆ. ಡಾ. ಎಂ.ಎಚ್. ಮರಿಗೌಡರು ಲಾಲ್ಬಾಗ್ ಅನ್ನು 240 ಎಕರೆಗೆ ವಿಸ್ತರಿಸಿ, ತೋಟಗಾರಿಕಾ ಕ್ಷೇತ್ರಕ್ಕೆ ಮಹತ್ತರ ಕೊಡುಗೆ ನೀಡಿದರು. 2003ರಲ್ಲಿ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಶ್ರೀ ಎಸ್ಎಂ ಕೃಷ್ಣ ಅವರು ಲಾಲ್ಬಾಗ್ನ ಪುನರುಜ್ಜೀವನಕ್ಕಾಗಿ ₹17 ಕೋಟಿ ಮಂಜೂರು ಮಾಡಿದ್ದರು. ಎರಡು ಬಾರಿ ಅಧಿಕಾರದಲ್ಲಿದ್ದ ಬಿಜೆಪಿ ಲಾಲ್ಬಾಗ್ಗೆ ಏನು ಕೊಡುಗೆ…
ವಿಜಯಪುರ: ಜನಪ್ರತಿನಿಧಿ ಅಂದ್ರೆ ತಮ್ಮನ್ನು ಅರಸಿ ಬರುವಂತ ಜನರ ಕಷ್ಟವನ್ನು ಕೇಳಿ, ಅದಕ್ಕೆ ಸೂಕ್ತ ರೀತಿಯಲ್ಲಿ ಪ್ರತಿಸ್ಪಂದಿಸೋದು. ಹೀಗೆ ಪ್ರತಿಸ್ಪಂದಿಸಿದಾಗಲೇ ಜನಪ್ರತಿನಿಧಿ ಅಂದ್ರೆ ಹೀಗೆ ಇರಬೇಕು ಎಂಬುದಾಗೇ ಅನೇಕರು ಹೇಳುತ್ತಾರೆ. ಇದಕ್ಕೆ ಸಾಕ್ಷಿ ಎನ್ನುವಂತೆ ಸಚಿವ ಎಂ.ಬಿ ಪಾಟೀಲ್ 6 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಎಂಬಿಬಿಎಸ್ ಶಿಕ್ಷಣ ನೆರವೇರಿಸಲು ಲಕ್ಷ ಲಕ್ಷ ಆರ್ಥಿಕ ನೆರವಿನ ಸಹಾಯ ಹಸ್ತ ಚಾಚಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ವಿಜಯಪುರ ಜಿಲ್ಲೆಯ 6 ಪ್ರತಿಭಾವಂತ ವಿದ್ಯಾರ್ಥಿಗಳಿಗೆ MBBS ಶಿಕ್ಷಣಕ್ಕೆ ನೆರವಾಗಿದ್ದೇನೆ. ನೀಟ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಸರ್ಕಾರಿ ಕೋಟಾದಡಿ MBBS ಸೀಟು ಪಡೆದರೂ, ಆರ್ಥಿಕ ಅಡಚಣೆಯಿಂದಾಗಿ ತಮ್ಮ ಕನಸಿನ ಶಿಕ್ಷಣವನ್ನು ಮುಂದುವರಿಸಲಾಗದೆ ಕಷ್ಟಪಡುತ್ತಿದ್ದ 6 ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೆರವು ನೀಡಿದ ಸಂತಸ ನನ್ನದು ಎಂದಿದ್ದಾರೆ. ಈ ಕೆಳಕಂಡ ವಿದ್ಯಾರ್ಥಿಗಳು ಎಂಬಿಬಿಎಸ್ ವ್ಯಾಸಂಗ ಮುಗಿಸಲು ಸಚಿವ ಎಂ.ಬಿ ಪಾಟೀಲ್ ಆರ್ಥಿಕ ನೆರವು ಬಾಬಾನಗರದ ಕೃಷಿ ಕಾರ್ಮಿಕ ಗಣಪತಿ ಶಿಂಧೆ ಅವರ ಪುತ್ರಿ…
ಕೊಪ್ಪಳ: ರಾಜ್ಯದಲ್ಲಿ ಸಿಎಂ, ಕೆಪಿಸಿಸಿ ಅಧ್ಯಕ್ಷರ ಹುದ್ದೆ ಖಾಲಿಯಿಲ್ಲ. 2028ರವರೆಗೆ ಸಿದ್ಧರಾಮಯ್ಯನವರೇ ಮುಖ್ಯಮಂತ್ರಿಯಾಗಿ ಇರಲಿದ್ದಾರೆ. ಆ ಬಳಿಕ ಡಿ.ಕೆ ಶಿವಕುಮಾರ್ ಸಿಎಂ ಆಗಬೇಕು ಎಂಬುದು ನನ್ನ ಆಸೆಯಾಗಿದೆ ಎಂಬುದಾಗಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಿಎಂ ಆಗಬೇಕು ಎನ್ನುವಂತ ಆಸೆ ಎಲ್ಲರಿಗೂ ಇರುತ್ತದೆ. ಡಿ.ಕೆ ಶಿವಕುಮಾರ್ ಅವರ ಅಭಿಮಾನಿಗಳು ಕೂಡ ಆಸೆಯನ್ನು ಇಟ್ಟುಕೊಂಡಿರುತ್ತಾರೆ. ಸಿಎಂ ಸಿದ್ಧರಾಮಯ್ಯ ಅವರಿಗೆ ಎಲ್ಲಾ ಶಾಸಕರ ಬೆಂಬಲವಿದ್ದು, ಅವರೇ ಪೂರ್ಣ ಅವಧಿಗೆ ಮುಖ್ಯಮಂತ್ರಿ ಆಗಿರುತ್ತಾರೆ. ಆ ಬಳಿಕ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ ಎಂದರು. ಡಿ.ಕೆ ಶಿವಕುಮಾರ್ ಅವರು ಅಪಾರ ದೈವಭಕ್ತರಾಗಿದ್ದಾರೆ. ಮೊದಲಿನಿಂದಲೂ ಅವರು ದೇವಸ್ಥಾನಗಳಿಗೆ ಹೋಗುವುದು ಸಾಮಾನ್ಯವಾಗಿದೆ. ಅವರು ದೇವಸ್ಥಾನಕ್ಕೆ ಹೋಗೋದಕ್ಕೂ, ಮುಖ್ಯಮಂತ್ರಿ ಸ್ಥಾನದ ಪೈಪೋಟಿಗೂ ಯಾವುದೇ ಸಂಬಂಧವಿಲ್ಲ. ನವೆಂಬರ್ ನಲ್ಲಿ ರಾಜ್ಯದಲ್ಲಿ ಯಾವುದೇ ಕ್ರಾಂತಿಯೂ ನಡೆಯೋದಿಲ್ಲ. ಇದೆಲ್ಲವೂ ಬಿಜೆಪಿಯ ಕಟ್ಟು ಕಥೆ ಎಂದರು. https://kannadanewsnow.com/kannada/safari-shutdown-if-human-wildlife-conflict-in-bandipur-mysore-not-brought-to-a-standstill-minister-eshwar-khandre/ https://kannadanewsnow.com/kannada/another-good-news-for-the-women-of-the-state-akka-pade-to-be-launched-on-november-19th/
ಚಾಮರಾಜನಗರ: ಬಂಡೀಪುರ, ಮೈಸೂರು ಜಿಲ್ಲೆಯಲ್ಲಿ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚುತ್ತಿದ್ದು, ಇದು ತಹಬಂದಿಗೆ ಬಾರದಿದ್ದರೆ ಸಫಾರಿಯನ್ನು ಸಂಪೂರ್ಣ ಬಂದ್ ಮಾಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ. ಚಾಮರಾಜನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಅರಣ್ಯ, ಕಂದಾಯ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ವನ್ಯಜೀವಿ- ಮಾನವ ಸಂಘರ್ಷ ಇರುವ ಸ್ಥಳದಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜಿಸಲು ಸಿಬ್ಬಂದಿ ಕೊರತೆ ಎನ್ನುತ್ತೀರಿ. ಹಾಗಾದರೆ ಸಫಾರಿಗೆ ನಿಯೋಜಿಸಿರುವ ಸಿಬ್ಬಂದಿಯನ್ನೇ ಅಲ್ಲಿಗೆ ನಿಯೋಜಿಸಬೇಕಾಗುತ್ತದೆ ಎಂದು ಹೇಳಿದರು. ಮಾನವ-ವನ್ಯಜೀವಿ ಸಂಘರ್ಷ ತಪ್ಪಿಸಲು ಅರಣ್ಯ ಇಲಾಖೆ ಕಂದಾಯ ಮತ್ತು ಪೊಲೀಸ್ ಇಲಾಖೆಯೊಂದಿಗೆ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಸಮನ್ವಯದ ಕೊರತೆ, ಪರಸ್ಪರ ದೋಷಾರೋಪವನ್ನು ಸರ್ಕಾರ ಕ್ಷಮಿಸುವುದಿಲ್ಲ ಸಬೂಬುಗಳಿಗೆ ಅವಕಾಶವಿಲ್ಲ. ಎಲ್ಲ ಇಲಾಖೆಗಳೂ ಜೊತೆಗೂಡಿ ಮಾನವ- ವನ್ಯಜೀವಿ ಸಂಘರ್ಷ ನಿಯಂತ್ರಿಸಬೇಕು ಎಂದು ಸೂಚಿಸಿದರು. ಆನೆ, ಹುಲಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಇದು ನಿಮಗೂ ತಿಳಿದಿದೆ. ಹೆಚ್ಚುತ್ತಿರುವ ಪ್ರಾಣಿಗಳಿಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳ ಮಾಡಲು…
ಬೆಂಗಳೂರು: ಎಂಬಿಎ, ಎಂಸಿಎ, ಎಂಇ, ಎಂ.ಟೆಕ್, ಎಂ.ಆರ್ಕ್ ಕೋರ್ಸ್ ಗಳ ಪ್ರವೇಶಕ್ಕೆ ಮೂರನೇ ಸುತ್ತಿನ ಸೀಟು ಹಂಚಿಕೆಗೆ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ನ.4ರಿಂದ 6ರವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. 3ನೇ ಸುತ್ತಿನಲ್ಲಿ ಲಭ್ಯವಿರುವ ಸೀಟುಗಳ ವಿವರಗಳನ್ನು ನ.4ರಂದು KEA ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುತ್ತದೆ. ಆಸಕ್ತರು ₹25,000 ಕಾಷನ್ ಡೆಪಾಸಿಟ್ ಕಟ್ಟಿ ಇಚ್ಛೆ/ಆಯ್ಕೆಗಳನ್ನು ದಾಖಲಿಸಬಹುದು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ನ.7ರಂದು ಮಧ್ಯಾಹ್ನ 2ಗಂಟೆಗೆ ತಾತ್ಕಾಲಿಕ ಫಲಿತಾಂಶ ಪ್ರಕಟ. ನ.8ರಂದು ಮಧ್ಯಾಹ್ನ 2 ಗಂಟೆಗೆ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ಸೀಟು ಹಂಚಿಕೆಯಾದವರು ನ.10ರಿಂದ 12ರವರೆಗೆ ಶುಲ್ಕ ಕಟ್ಟಿ ಸೀಟು ಖಾತರಿ ಚೀಟಿ ಡೌನ್ಲೋಡ್ ಮಾಡಿಕೊಂಡು ನ.13ರೊಳಗೆ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ. ಮೊದಲ ಮತ್ತು ಎರಡನೇ ಸುತ್ತಿನಲ್ಲಿ ಸಿಕ್ಕಿರುವ ಸೀಟು ರದ್ದುಪಡಿಸಿಕೊಳ್ಳಲು ನ.6ರವರೆಗೆ ಅವಕಾಶ ನೀಡಲಾಗಿದೆ. ಸೀಟು ರದ್ದುಪಡಿಸಿಕೊಂಡವರಿಗೆ 3ನೇ ಸುತ್ತಿನಲ್ಲಿ ಭಾಗವಹಿಸಲು ಅವಕಾಶ ಇರುವುದಿಲ್ಲ ಎಂದು ಅವರು…
ಬೆಂಗಳೂರು : ನಮ್ಮ ಸರ್ಕಾರ ಕ್ರೀಡೆಗೆ ನಿರಂತರವಾಗಿ ಸಹಕಾರ ನೀಡುತ್ತಿದೆ. ನಿಮ್ಮ ಉತ್ಸಾಹಕ್ಕೆ ತಕ್ಕಂತೆ ನಮ್ಮ ಪ್ರೋತ್ಸಾಹ ಸದಾ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಕ್ರೀಡಾ ಮತ್ತು ಯುವಜನ ಸೇವಾ ಇಲಾಖೆ ಮತ್ತು ರಾಜ್ಯ ಒಲಂಪಿಕ್ ಅಸೋಸಿಯೇಷನ್ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 14 ವರ್ಷದೊಳಗಿನ ಮಕ್ಕಳ ಮಿನಿ ಕರ್ನಾಟಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮ ಸರ್ಕಾರ ಕ್ರೀಡೆಗೆ ನಿರಂತರವಾಗಿ ಪ್ರೋತ್ಸಾಹ ಕೊಟ್ಟುಕೊಂಡೇ ಬರುತ್ತಿದೆ. ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸಲು ಇಂಥಾ ಕ್ರೀಡಾಕೂಟ ಸಹಕಾರಿ ಆಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಉತ್ಸಾಹದಿಂದ ಭಾಗವಹಿಸಿ. ಕ್ರೀಡೆಯಲ್ಲಿ ಗೆಲುವು ಸೋಲಿಗಿಂತ ಭಾಗವಹಿಸುವಿಕೆ ಅತೀ ಮುಖ್ಯ ಎಂದರು. ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಪಟುಗಳಿಗೆ ಪೊಲೀಸ್ ಇಲಾಖೆಯಲ್ಲಿ ನೇರ ನೇಮಕಾತಿ ಮಾಡಿಕೊಳ್ಳಲು ನಮ್ಮ ಸರ್ಕಾರ ನಿರ್ಧರಿಸಿದೆ. ಪೊಲೀಸ್ ಇಲಾಖೆಯಲ್ಲಿ ಶೇ3 ರಷ್ಟು ಹುದ್ದೆಗಳು ಮತ್ತು ಇತರೆ ಇಲಾಖೆಗಳಲ್ಲಿ ಶೇ2 ರಷ್ಟು ಹುದ್ದೆಗಳನ್ನು ಒದಗಿಸಲಾಗುತ್ತದೆ ಎಂದರು. ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ವಿಜೇತರಾಗಿ ಪದಕ ತಂದ ಕ್ರೀಡಾ…
ಶಿವಮೊಗ್ಗ: ರಕ್ತದಾನದ ಮೂಲಕ ಇನ್ನೊಬ್ಬರ ಜೀವ ಉಳಿಸಲು ಸಾಧ್ಯವಿದೆ. ರಕ್ತದಾನ ಮಾಡುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದಿಲ್ಲ ಎನ್ನುವುದು ವೈಜ್ಞಾನಿಕವಾಗಿ ಸಾಬೀತಾಗಿದೆ ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ರೋಟರಿ ರೆಡ್ಕ್ರಾಸ್ ರಕ್ತನಿಧಿ ಕೇಂದ್ರದ 7ನೇ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದಂತ ಅವರು, ನಾನು ಆರಂಭದ ದಿನಗಳಲ್ಲಿ ನಮ್ಮ ಸಂಸ್ಥೆ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಿ ಅತಿಹೆಚ್ಚು ಯೂನಿಟ್ ರಕ್ತ ಸಂಗ್ರಹ ಮಾಡಿ ಕೊಟ್ಟಿದ್ದು ಇಂದಿಗೂ ನೆನಪಿದೆ ಎಂದು ನೆನಪು ಮಾಡಿಕೊಂಡರು. ರಕ್ತದಾನ ಅತ್ಯಂತ ಶ್ರೇಷ್ಟವಾದ ಕೆಲಸ. ತುರ್ತು ಸಂದರ್ಭದಲ್ಲಿ ರಕ್ತ ಸಿಗದೆ ಸಾವುನೋವು ಸಂಭವಿಸಿದ ಅನೇಕ ಉದಾಹರಣೆ ಇದೆ. ಸಾಗರದಲ್ಲಿ ರೋಟರಿ ರೆಡ್ಕ್ರಾಸ್ ರಕ್ತನಿಧಿ ಕೇಂದ್ರ ಪ್ರಾರಂಭವಾಗಿದ್ದು ಹೆಚ್ಚು ಜನರಿಗೆ ಅನುಕೂಲವಾಗಿದೆ. ರಕ್ತದಾನದ ಬಗ್ಗೆ ಸಮಾಜ ಇನ್ನಷ್ಟು ಜಾಗೃತಿ ಹೊಂದುವ ಅಗತ್ಯವಿದೆ. ಗ್ರಾಮೀಣ ಭಾಗದ ಜನರಲ್ಲಿ ರಕ್ತದಾನದ ಬಗ್ಗೆ ಇರುವ ಭಯ ನಿವಾರಣೆ ಮಾಡಬೇಕು. ಏಳು…
ತುಳಸಿ ವಿವಾಹದ ದಿನದಂದು ಮಹಿಳೆಯರು ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬಾರದು. 01, ತುಳಸಿ ವಿವಾಹದ ದಿನದಂದು ತುಳಸಿಯ ಎಲೆಗಳನ್ನು ಕೇಳಬಾರದು ಅಥವಾ ತುಳಸಿಯ ಗಿಡವನ್ನು ಕಿತ್ತು ಹಾಕಬಾರದು. 02, ತುಳಸಿ ವಿವಾಹದ ದಿನದಂದು ಮಾಂಸ ಆಹಾರವನ್ನು ಸೇವಿಸಬಾರದು, 03, ಈ ದಿನದಂದು ಆಲ್ಕೋಹಾಲ್ ಯುಕ್ತ ಪದಾರ್ಥಗಳನ್ನು ಅಥವಾ ಪಾನೀಯಗಳನ್ನು ಸೇವಿಸಬಾರದು, ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ 04 ತುಳಸಿಯ ವಿವಾಹ ದಿನದಂದು ಇತರರನ್ನು ಕೆಟ್ಟದಾಗಿ ನೋಡುವುದು ನಿಂದನೆ ಮಾಡುವುದನ್ನು ಮಾಡಬಾರದು, 05, ಈ ತುಳಸಿ ವಿವಾಹದ ದಿನದಂದು ಬೆಳ್ಳುಳ್ಳಿ ಮತ್ತು ಈರುಳ್ಳಿ ಅಂತಹ ಪದಾರ್ಥಗಳನ್ನು ಸೇವಿಸಬಾರದು, 06, ತುಳಸಿ ವಿವಾಹದ ದಿನದಂದು ಮಹಿಳೆಯರು ಅನ್ನವನ್ನು ಸೇವಿಸಬಾರದು ಅದನ್ನು ಅಶುಭವೆಂದು ಪರಿಗಣಿಸಲಾಗಿದೆ, 07, ಈ ದಿನದಂದು…














