Author: kannadanewsnow09

ಮಡಿಕೇರಿ: ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ಹೊರಹಾಕಿದರು. ಮಡಿಕೇರಿಯಲ್ಲಿ ನಡೆದ ಬಿಜೆಪಿ ಜನಾಕ್ರೋಶ ಹೋರಾಟದಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆಯಾಗಿದೆ. ಪ್ರಶಾಂತ್‌ ಪೂಜಾರಿ, ಆರ್‌ಎಸ್‌ಎಸ್‌ ರಾಜು, ರಾಜೇಶ್‌ ಕೋಟ್ಯಾನ್‌, ಪ್ರವೀಣ್‌ ಪೂಜಾರಿ, ಚರಣ್‌ ಪೂಜಾರಿ, ವಿಶ್ವನಾಥ್‌ ಹೀಗೆ ಅನೇಕ ಹಿಂದೂ ಕಾರ್ಯಕರ್ತರ ಕೊಲೆ ಪಿಎಫ್‌ಐ, ಎಸ್‌ಡಿಪಿಐ ಮೊದಲಾದ ಮುಸ್ಲಿಂ ಸಂಘಟನೆಗಳಿಂದ ನಡೆದಿದೆ. ಈಗ ಕೊಡಗಿನ ವಿನಯ್‌ ಸೋಮಯ್ಯ ಕಿರುಕುಳಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಿಂದೂಗಳನ್ನು ಟಾರ್ಗೆಟ್‌ ಮಾಡುವುದು ಬಹಳ ದಿನ ನಡೆಯುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ಕೊಡಗಿನಲ್ಲಿ ಈ ಹಿಂದೆ ಟಿಪ್ಪು ಜಯಂತಿ ನಡೆದಾಗ ಕುಟ್ಟಪ್ಪ ಎಂಬುವರು ಹತ್ಯೆಯಾಗಿದ್ದರು. ಕಾಂಗ್ರೆಸ್‌ ಸರ್ಕಾರ ಹಿಂದೂಗಳನ್ನು ಬೇರೆ ಮಾಡಲು ಯತ್ನಿಸುತ್ತಿದೆ. ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಮೀಸಲಾತಿ ನೀಡಲಾಗಿದೆ. ಸಿದ್ದರಾಮಯ್ಯ ಅಧಿಕಾರದಲ್ಲಿ ಇದ್ದರೆ ಕರ್ನಾಟಕವನ್ನು ಪಾಕಿಸ್ತಾನಕ್ಕೆ ಕೊಟ್ಟುಬಿಡುತ್ತಾರೆ ಎಂದರು. ಹಿಂದೆ ಮುಸ್ಲಿಮರು ಹಿಂದೂಗಳ ಮೇಲೆ ದಾಳಿ ಮಾಡುವುದು ಜಮ್ಮು-ಕಾಶ್ಮೀರದಲ್ಲಿ ನಡೆಯುತ್ತಿತ್ತು.…

Read More

ಮಂಡ್ಯ : ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮತ್ತು ಜಿಎಸ್‌ಟಿ ಕಟ್ಟುವುದರಲ್ಲಿ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ರಾಜ್ಯದ ಆರ್ಥಿಕ ಸ್ಥಿತಿ ಸಶಕ್ತವಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಮಂಡ್ಯ ಜಿಲ್ಲಾ ಪೊಲೀಸ್ ಘಟಕದ ಪ್ರಗತಿ ಪರಿಶೀಲನೆಗೆ ಅಗಮಿಸಿದ್ದ ವೇಳೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಸುದ್ದಿಗಾರರನ್ನು ಉದ್ದೇಶಿಸಿ ಅವರು ಮಾತನಾಡಿದರು. ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದೆ ಎಂಬುದು ಬಿಜೆಪಿಯವರಿಗೆ ಈಗ ಅರ್ಥವಾಗಿದೆ. ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ರಾಷ್ಟ್ರದ ಗಮನ ಸೆಳೆದಿದ್ದೇವೆ. ಜಿಎಸ್‌ಟಿ ಕಟ್ಟುವುದರಲ್ಲಿ ದೇಶದಲ್ಲಿ 2ನೇ ಸ್ಥಾನದಲ್ಲಿದ್ದೇವೆ. ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮತ್ತು ತೆರಿಗೆ ಕಟ್ಟುವುದರಿಂದ ಆರ್ಥಿಕ ಸ್ಥಿತಿ ಹೇಗಿದೆ ಎಂಬುದು ಗೊತ್ತಾಗುತ್ತದೆ‌‌ ಎಂದರು. ಗ್ಯಾರಂಟಿ ಯೋಜನೆಗಳನ್ನು ಅನುಷ್ಟಾನಗೊಳಿಸುವುದಿಲ್ಲ. ಕೊಟ್ಟ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲರಾಗುತ್ತಾರೆ ಎಂದು ಬಿಜೆಪಿಯವರು ಆರೋಪಿಸುತ್ತಿದ್ದರು. ಐದು ಗ್ಯಾರಂಟಿ ಯೋಜನೆಗಳಿಗೆ ಬಜೆಟ್‌ನಲ್ಲಿ ಹಣ ಮೀಸಲಿಟ್ಟಿದ್ದೇವೆ. ಜಾತಿ, ಧರ್ಮ, ಪಕ್ಷ ಬೇದವಿಲ್ಲದೆ ಎಲ್ಲರಿಗೂ ಸಮಾನವಾಗಿ ಯೋಜನೆಗಳನ್ನು ಕೊಟ್ಟಿದ್ದೇವೆ. ಹೆಣ್ಣು ಮಕ್ಕಳು ಆರ್ಥಿಕಶಕ್ತಿ…

Read More

ಬೆಂಗಳೂರು: ಮಾಜಿ ಸಚಿವ ಬಿ.ನಾಗೇಂದ್ರಗೆ ಶಿಕ್ಷೆಯನ್ನು ಪ್ರಕಟಿಸಿ ಕೋರ್ಟ್ ಆದೇಶಿಸಿದೆ. ಬರೋಬ್ಬರಿ 1 ಕೋಟಿ 25 ಲಕ್ಷ ದಂಡವನ್ನು ವಿಧಿಸಿದೆ. ಈ ಮೂಲಕ ಮಾಜಿ ಸಚಿವ ಬಿ.ನಾಗೇಂದ್ರಗೆ ಬಿಗ್ ಶಾಕ್ ನೀಡಿದೆ. ಮಾಜಿ ಸಚಿವ ಬಿ ನಾಗೇಂದ್ರಗೆ ಚೆಕ್ ಬೌನ್ಸ್ ಪ್ರಕರಣದಲ್ಲಿ ಕೋರ್ಟ್ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಿದೆ. 1 ಕೋಟಿ 25 ಲಕ್ಷ ದಂಡ ಪಾವತಿಸಲು ಮೂವರು ಆರೋಪಿಗಳಿಗೆ ಶಿಕ್ಷೆ ವಿಧಿಸಿದೆ. ಇನ್ನೂ ದಂಡ ಪಾವತಿಸದೇ ಇದ್ದರೇ 1 ವರ್ಷ ಸೆರೆವಾಸ ಅನುಭವಿಸುವಂತೆ 42ನೇ ಎಸಿಜೆಎಂ ಕೋರ್ಟ್ ನ ನ್ಯಾಯಮೂರ್ತಿ ಶಿವಕುಮಾರ್ ಆದೇಶಿಸಿದ್ದಾರೆ. ಅಂದಹಾಗೇ ವಿಎಸ್ ಎಲ್ ಸ್ಟೀಲ್ ಲಿಮಿಟೆಡ್ ಮಾಜಿ ಸಚಿವ ಬಿ ನಾಗೇಂದ್ರ ಸೇರಿದಂತೆ ಮೂವರ ವಿರುದ್ಧ ಚೆಕ್ ಬೌನ್ಸ್ ಕೇಸ್ ದಾಖಲಿಸಿತ್ತು. ಈ ಪ್ರಕರಣದಲ್ಲಿ ಇಂದು ಕೋರ್ಟ್ ತೀರ್ಪು ನೀಡಿದೆ. https://kannadanewsnow.com/kannada/jds-launches-sakappa-saku-congress-sarkar-campaign-nikhil-kumaraswamy/ https://kannadanewsnow.com/kannada/alert-those-who-sleep-with-their-mobile-phones-near-their-heads-should-read-this/

Read More

ಚೀನಾ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಅಮೆರಿಕ ಮತ್ತು ಚೀನಾ ನಡುವಿನ ವ್ಯಾಪಾರ ಯುದ್ಧವು ಉಲ್ಬಣಗೊಳ್ಳುತ್ತಿದ್ದಂತೆ, ಚೀನಾ ತನ್ನ ಇತ್ತೀಚಿನ ಕ್ರಮದಲ್ಲಿ ಎಲ್ಲಾ ಯುಎಸ್ ಉತ್ಪನ್ನಗಳ ಮೇಲೆ ಶೇಕಡಾ 84 ರಷ್ಟು ಸುಂಕವನ್ನು ವಿಧಿಸಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಚೀನಾದ ಹಣಕಾಸು ಸಚಿವಾಲಯವು ಇತ್ತೀಚಿನ ಕ್ರಮವನ್ನು ಘೋಷಿಸುವಾಗ, ಹೊಸ ಶುಲ್ಕಗಳು ಏಪ್ರಿಲ್ 10 ರಿಂದ ಜಾರಿಗೆ ಬರುತ್ತವೆ ಎಂದು ಪ್ರತಿಪಾದಿಸಿದೆ. ಅಮೆರಿಕ ಮತ್ತು ಚೀನಾ ನಡುವೆ ನಡೆಯುತ್ತಿರುವ ವ್ಯಾಪಾರ ವಿವಾದದ ಮಧ್ಯೆ ಅಮೆರಿಕದ ಸರಕುಗಳ ಮೇಲೆ ತನ್ನದೇ ಆದ ಶೇಕಡಾ 84 ರಷ್ಟು ಹೆಚ್ಚುವರಿ ಸುಂಕವನ್ನು ವಿಧಿಸುವ ಮೂಲಕ ಡೊನಾಲ್ಡ್ ಟ್ರಂಪ್ ಅವರ ಶೇಕಡಾ 104 ರಷ್ಟು ಸುಂಕದ ವಿರುದ್ಧ ಚೀನಾ ಪ್ರತೀಕಾರ ತೀರಿಸಿಕೊಂಡಿದೆ. ಈ ಹೊಸ ಸುಂಕಗಳು ಏಪ್ರಿಲ್ 10 ರಿಂದ ಜಾರಿಗೆ ಬರಲಿವೆ ಎಂದು ಚೀನಾದ ಹಣಕಾಸು ಸಚಿವಾಲಯ ಘೋಷಿಸಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಈ ಕ್ರಮವು ಯುಎಸ್ ಸರಕುಗಳ ಮೇಲಿನ ಚೀನಾದ ಸುಂಕ…

Read More

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ದರ ಏರಿಕೆ, ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದಿರುವ ಜೆಡಿಎಸ್ ಪಕ್ಷವು, ಸರಕಾರದ ವಿರುದ್ಧ ವಿನೂತನ ಅಭಿಯಾನ ಆರಂಭಿಸಿದೆ. ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ‘ಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರ’ ಎಂಬ ಅಭಿಯಾನ ಆರಂಭ ಮಾಡಿದ್ದು, ಈ ಅಭಿಯಾನ ಇಡೀ ದೇಶಾದ್ಯಂತ ಸದ್ದು ಮಾಡುತ್ತಿದೆ. ಅಲ್ಲದೆ, ಅಭಿಯಾನದ ಬಗ್ಗೆ ಪಕ್ಷ ಕಚೇರಿ ಜೆಪಿ ಭವನದಲ್ಲಿ ಮಾಹಿತಿ ನೀಡಿದ ನಿಖಿಲ್ ಕುಮಾರಸ್ವಾಮಿ ಅವರು; https://www.saakappasaaku.com ಎಂಬ ನೂತನ ವೆಬ್ಸೈಟ್ ಅನ್ನು ಲೋಕಾರ್ಪಣೆ ಮಾಡಿದರು. ಈ ವೆಬ್ ತಾಣದಲ್ಲಿ ಜೆಡಿಎಸ್ ಕಾರ್ಯಕರ್ತರು ಮಾತ್ರವಲ್ಲ, ರಾಜ್ಯದ ಯಾರೇ ಆದರೂ ನೋಂದಣಿ ಮಾಡಿಕೊಂಡು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಅವರು ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದಲೂ ಜನರ ಮೇಲೆ ಬೆಲೆ ಏರಿಕೆ ಬರೆ ಎಳೆಯುತ್ತಿದೆ. ಆರ್ಥಿಕವಾಗಿ ರಾಜ್ಯವನ್ನು ವಿಕೋಪದ ಪರಿಸ್ಥಿತಿಗೆ ದೂಡಿರುವ ಕಾಂಗ್ರೆಸ್ ಸರಕಾರವು, ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಸೃಷ್ಟಿಸಿದೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಗಂಭೀರ…

Read More

ಉತ್ತರ ಕನ್ನಡ: ಜಿಲ್ಲೆಯಲ್ಲಿನ 32 ಚಾರಣ ಪ್ರಿಯರಿಗೆ ಗುಡ್ ನ್ಯೂಸ್ ಎನ್ನುವಂತೆ ಚಾರಣಕ್ಕೆ ಅವಕಾಶ ನೀಡುವ ಸಂಬಂಧ ಚಾರಣ ಪಥವನ್ನು ಜಿಲ್ಲಾಡಳಿತ ಗುರುತಿಸಿದೆ. ಈ ಬಗ್ಗೆ ಮಾಹಿತಿ ನೀಡಿರುವಂತ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಅವರು, ಅರಣ್ಯ ಇಲಾಖೆ ಹಾಗೂ ಜಿಲ್ಲಾಡಳಿತ ಸೇರಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಚಾರಣಕ್ಕೆ ಉತ್ತಮ ಎನಿಸುವ ಪ್ರದೇಶಗಳ ಬಗ್ಗೆ ಸರ್ವೆ ನಡೆಸಲಾಯಿತು. ಈ ಸರ್ವೆಯಲ್ಲಿ 32 ಚಾರಣ ಪಥಗಳನ್ನು ಗುರಿತಿಸಲಾಗಿದೆ ಎಂದರು. ಉತ್ತರ ಕನ್ನಡ ಜಿಲ್ಲೆಯಲ್ಲಿ ಚಾರಣಕ್ಕಾಗಿ ಗುರುತಿಸಿರುವಂತ 32 ಸ್ಥಳಗಳನ್ನು ಚಾರಣ ಪಥಗಳಾಗಿ ಅನುಮತಿಸಲು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಲ್ಲಿ ಮನವಿ ಮಾಡಲಾಗಿದೆ. ಅರಣ್ಯ ಇಲಾಖೆಯಿಂದ ಅನುಮತಿ ನೀಡಿದ ಬಳಿಕ 32 ಕಡೆ ಚಾರಣಕ್ಕೆ ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ. ಅರಣ್ಯ ಸಂರಕ್ಷಣಾಧಿಕಾರಿಗಳು ಅನುಮತಿ ನೀಡಿದ ಬಳಿಕ ಉತ್ತರ ಕನ್ನಡ ಜಿಲ್ಲೆಯ 32 ಚಾರಣ ಪಥಗಳ ಬಗ್ಗೆ ವೆಬ್ ಸೈಟ್ ಹಾಗೂ ಪ್ರವಾಸೋದ್ಯ ಇಲಾಖೆಯ ಮೂಲಕ ಪ್ರಚಾರ ನೀಡಲಾಗುತ್ತದೆ. ಈ ಚಾರಣ ಸ್ಥಳಗಳನ್ನು…

Read More

ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳ ವ್ಯಾಪ್ತಿಯ ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿ ಹಂತದಲ್ಲಿ ಆಧಾರ್ ದೃಢೀಕರಣ (ಇ-ಕೆವೈಸಿ) ಯನ್ನು ಉಚಿತವಾಗಿ ಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ತಿಳಿಸಿದೆ. ಪಡಿತರ ಚೀಟಿದಾರರು ಆಧಾರ್ ದೃಢೀಕರಣ (ಇ-ಕೆವೈಸಿ) ಯನ್ನು ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ, ಬೆರಳಚ್ಚು ಮೂಲಕ ತಮ್ಮ ಗುರುತು, ನೋಂದಣಿ ಅಥವಾ ಮರು ನೋಂದಣಿ ಮಾಡಿಸದೆ ಇರುವ ಎಲ್ಲಾ ಸದಸ್ಯರು ಏ.30 ರೊಳಗೆ ಬಯೋಮೆಟ್ರಿಕ್ ಸಂಗ್ರಹಣೆ (ಇ-ಕೆವೈಸಿ) ಮಾಡಿಸಿಕೊಳ್ಳಲು ಅಂತಿಮ ಅವಕಾಶವನ್ನು ನೀಡಲಾಗಿದ್ದು, ಇದಕ್ಕೆ ಯಾವುದೇ ಹಣ ನೀಡುವಂತಿಲ್ಲ ಎಂದಿದೆ. ಇ-ಕೆವೈಸಿ ಮಾಡಿಸಿಕೊಳ್ಳದೇ ಇರುವ ಪಡಿತರ ಚೀಟಿದಾರರಿಗೆ ಮುಂದಿನ ತಿಂಗಳು ಆಹಾರ ಧಾನ್ಯ ವಿತರಣೆಯನ್ನು ಸ್ಥಗಿತಗೊಳಿಸಲಾಗುವುದು ಮತ್ತು ಆಧಾರ್ ದೃಢೀಕರಣ (ಇ-ಕೆವೈಸಿ)ಯನ್ನು ಮಾಡದೇ ಇರುವ ಫಲಾನುಭವಿಗಳಿಗೆ ಡಿಸೆಂಬರ್ ಮಾಹೆಯಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ. https://kannadanewsnow.com/kannada/dr-mallikarjuna-kalamarahallis-kadugolla-tribal-kulakathana-wins-book-title/…

Read More

ಹುಬ್ಬಳ್ಳಿ: ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಶ್ರೀ ಸಿದ್ಧರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ಗುಜರಾತ್ ರಾಜ್ಯದ ಅಹಮದಾಬಾದ್ ಹತ್ತಿರವಿರುವ ವಾಟ್ವಾ ನಿಲ್ದಾಣಗಳ ನಡುವೆ ಬೇಸಿಗೆ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆಯು ನಿರ್ಧರಿಸಿದೆ. ರೈಲು ಸಂಖ್ಯೆ 07333 ಎಸ್ಎಸ್ಎಸ್ ಹುಬ್ಬಳ್ಳಿಯಿಂದ ವಾಟ್ವಾಗೆ ಏಪ್ರಿಲ್ 13 ರಿಂದ ಜೂನ್ 15, 2025 ರವರೆಗೆ ಪ್ರತಿ ಭಾನುವಾರದಂದ ಸಂಜೆ 7:30 ಗಂಟೆಗೆ ಹುಬ್ಬಳ್ಳಿಯಿಂದ ಹೊರಡಲಿದೆ. ಈ ರೈಲು ಮರುದಿನ ಸೋಮವಾರ ಸಂಜೆ 6:45 ಗಂಟೆಗೆ ತನ್ನ ಗಮ್ಯಸ್ಥಾನವಾದ ವಾಟ್ವಾವನ್ನು ತಲುಪಲಿದೆ. ರೈಲು ಸಂಖ್ಯೆ 07334 ವಾಟ್ವಾದಿಂದ ಎಸ್ಎಸ್ಎಸ್ ಹುಬ್ಬಳ್ಳಿಗೆ ಏಪ್ರಿಲ್ 14 ರಿಂದ ಜೂನ್ 16, 2025 ರವರೆಗೆ ಪ್ರತಿ ಸೋಮವಾರ ವಾಟ್ವಾದಿಂದ ರಾತ್ರಿ 9:45 ಗಂಟೆಗೆ ಹೊರಡಲಿದೆ. ಈ ರೈಲು ಮಂಗಳವಾರ ರಾತ್ರಿ 7:45ಕ್ಕೆ ಹುಬ್ಬಳ್ಳಿಗೆ ಆಗಮಿಸಲಿದೆ. ಈ ವಿಶೇಷ ರೈಲು ಎರಡೂ ಮಾರ್ಗಗಳಲ್ಲಿ ಧಾರವಾಡ, ಅಳ್ನಾವರ, ಲೋಂಡಾ, ಬೆಳಗಾವಿ, ಗೋಕಾಕ್ ರೋಡ್, ಘಟಪ್ರಭಾ, ರಾಯಬಾಗ,…

Read More

ಬೆಂಗಳೂರು: ಡಾ.ಮಲ್ಲಿಕಾರ್ಜುನ ಕಲಮರಹಳ್ಳಿ ಅವರ ಕಾಡುಗೊಲ್ಲ ಬುಡಕಟ್ಟು ಕುಲಕಥನಕ್ಕೆ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಕೊಡ ಮಾಡುವಂತ ಪುಸ್ತಕ ಸೊಗಸು ಬಹುಮಾನ ಸಂದಿದೆ. ಇಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದಂತ ಡಾ.ಮಾನಸ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2022, 2023 ಮತ್ತು 2024ನೇ ಸಾಲಿನ ಕನ್ನಡ ಪುಸ್ತಕ ಸೊಗಡು ಹಾಗೂ ಮುದ್ರಣ ಸೊಗಡು ಬಹುಮಾನಗಳಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿತತು. ನಿನ್ನೆ ಈ ಸಂಬಂಧ ಉಪ ಸಮಿತಿ ಸಭೆ ನಡೆಯಿತು. ಈ ಸಭೆಯಲ್ಲಿ ಮೂರು ವರ್ಷಗಳ ಬಹುಮಾನಗಳಿಗಾಗಿ ಅರ್ಹ ಪುಸ್ತಕಗಳನ್ನು ಆಯ್ಕೆ ಮಾಡಲಾಗಿದೆ ಎಂದಿದ್ದಾರೆ. 2023ನೇ ಸಾಲಿನ ಕನ್ನಡ ಪುಸ್ತ ಪ್ರಾಧಿಕಾರದಿಂದ ಕೊಡ ಮಾಡುವಂತ ಪುಸ್ತಕ ಸೊಗಡು ಎರಡನೇ ಬಹುಮಾನವನ್ನು ಡಾ.ಮಲ್ಲಿಕಾರ್ಜುನ ಕಲಮರಹಳ್ಳಿ ಅವರ ಕಾಡುಗೊಲ್ಲ ಬುಡಕಟ್ಟು ಕುಲಕಥನ ಪುಸ್ತಕವನ್ನು ಆಯ್ಕೆ ಮಾಡಲಾಗಿದೆ. ಶಿವಮೊಗ್ಗದ ಗೀತಾಂಜಲಿ ಪುಸ್ತಕ ಪ್ರಕಾಶನದ ಪುಸ್ತಕಕಕ್ಕೆ 2023ನೇ ಸಾಲಿನ ಪುಸ್ತಕ ಸೊಗಡು ಎರಡನೇ ಬಹುಮಾನಕ್ಕೆ ಆಯ್ಕೆ ಮಾಡಲಾಗಿದ್ದು, ರೂ.20,000 ಬಹುಮಾನ ಒಳಗೊಂಡಿರುತ್ತದೆ ಅಂತ ತಿಳಿಸಿದ್ದಾರೆ. ವರದಿ: ವಸಂತ ಬಿ ಈಶ್ವರಗೆರೆ…

Read More

ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದಿಂದ 2022, 2023 ಮತ್ತು 2024ನೇ ಸಾಲಿನ ಕನ್ನಡ ಪುಸ್ತಕ ಸೊಗಸು ಹಾಗೂ ಮುದ್ರಣ ಸೊಗಸು ಬಹುಮಾನವನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2022, 2023 ಮತ್ತು 2024ನೇ ಸಾಲಿನ ಕನ್ನಡ ಪುಸ್ತಕ ಸೊಗಸು ಹಾಗೂ ಮುದ್ರಣ ಸೊಗಸು ಬಹುಮಾನಗಳಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಸಂಬಂಧ ನಿನ್ನೆ ಆಯ್ಕೆ ಉಪ ಸಮಿತಿಯ ಸಭೆಯು ಮೂರು ವರ್ಷಗಳ ಬಹುಮಾನಗಳಿಗೆ ಅರ್ಹ ಪುಸ್ತಕಗಳನ್ನು ಆಯ್ಕೆ ಮಾಡಿದೆ ಎಂದಿದೆ. 2022ನೇ ಸಾಲಿನ ಬಹುಮಾನಗಳ ಪಟ್ಟಿ ಹೀಗಿದೆ.. ಪುಸ್ತಕ ಸೊಗಸು ಮೊದಲ ಬಹುಮಾನ – ಗೇಬ್ರಿಯಲ್ ಗಾರ್ಸಿಯ ಮಾರ್ಕೇಸ್ ಗದ್ಯ ಗಾರುಡು – ಲೇಖಕರು ಕೇಶವ ಮಳಗಿ, ದೀಪಂಕರ ಪುಸ್ತಕ ಪ್ರಕಾಶನ, ತುಮಕೂರು- ಈ ಪ್ರಶಸ್ತಿ 25 ರೂ ಬಹುಮಾನ ಒಳಗೊಂಡಿದೆ. ಪುಸ್ತಕ ಸೊಗಸು ಎರಡನೇ ಬಹುಮಾನ ರೂ.20,000 – ಅಧಿಷ್ಠಾನ ಬಾಯಿ ಪಾಠ ಪುಸ್ತಕ – ಜಿಕೆ ದೇವರಾಜ ಸ್ವಾಮಿ, ಯುವಸಾಧನೆ ಪ್ರಕಾಶನ,…

Read More