Subscribe to Updates
Get the latest creative news from FooBar about art, design and business.
Author: kannadanewsnow09
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಶವ ಹೂತಿಟ್ಟಿದ್ದಾಗಿ ತಪ್ಪೊಪ್ಪಿಕೊಂಡಿದ್ದಂತ ದೂರುದಾರ ಬುರುಡೆ ಚಿನ್ನಯ್ಯ ಜೈಲುಪಾಲಾಗಿದ್ದರು. ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯ ಆದೇಶವನ್ನು ಸೆಪ್ಟೆಂಬರ್.16ಕ್ಕೆ ಕಾಯ್ದಿರಿಸಿದೆ. ಇಂದು ಬೆಳ್ತಂಗಡಿ ಕೋರ್ಟ್ ನಲ್ಲಿ ಬುರುಡೆ ಚಿನ್ನಯ್ಯ ಪರ ವಕೀಲರು ಜಾಮೀನಿಗಾಗಿ ಸಲ್ಲಿಸಿದ್ದಂತ ಅರ್ಜಿಯನ್ನು ವಿಚಾರಣೆ ನಡೆಸಿತು. ವಿಚಾರಣೆಯ ಬಳಿಕ ಸೆಪ್ಟೆಂಬರ್.16ಕ್ಕೆ ಜಾಮೀನು ಆದೇಶ ಕಾಯ್ದಿರಿಸಿದೆ. ಜಾಮೀನಿಗೆ ಎಸ್ಐಟಿ ಪರ ವಕೀಲರು ಆಕ್ಷೇಪಣೆ ಸಲ್ಲಿಸಿದ್ದರು. ಈ ಎಲ್ಲವನ್ನು ವಿಚಾರಣೆ ನಡೆಸಿದಂತ ನ್ಯಾಯಾಲಯವು ತನ್ನ ಆದೇಶವನ್ನು ಕಾಯ್ದಿರಿಸಿದೆ. https://kannadanewsnow.com/kannada/the-suspect-who-shot-trumps-close-aide-charlie-kirk-has-been-arrested/ https://kannadanewsnow.com/kannada/charlie-kirks-killer-arrested-in-custody-trump-claims/
ಅಮೇರಿಕಾ: ಸಂಪ್ರದಾಯವಾದಿ ಕಾರ್ಯಕರ್ತ ಚಾರ್ಲಿ ಕಿರ್ಕ್ ಮೇಲೆ ಗುಂಡು ಹಾರಿಸಿದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ ದೃಢಪಡಿಸಿದರು. ಫಾಕ್ಸ್ ನ್ಯೂಸ್‌ನಲ್ಲಿ ಮಾತನಾಡಿದ ಟ್ರಂಪ್, “ತಮಗೆ ತುಂಬಾ ಹತ್ತಿರವಿರುವ ಯಾರೋ ಒಬ್ಬರು ಅವರನ್ನು ಒಪ್ಪಿಸಿದ್ದಾರೆ” ಮತ್ತು ಶುಕ್ರವಾರದ ನಂತರ ಅಧಿಕೃತ ಘೋಷಣೆ ಹೊರಬೀಳಲಿದೆ ಎಂದು ಹೇಳಿದರು. https://twitter.com/RapidResponse47/status/1966474851809403193 ಆತ (ಶಂಕಿತ) ಬಂಧನದಲ್ಲಿದ್ದಾನೆ ಎಂದು ನನಗೆ ಖಚಿತವಾಗಿದೆ ಎಂದು ಅಮೆರಿಕ ಅಧ್ಯಕ್ಷರು ಹೇಳಿದರು. ಕಿರ್ಕ್ ಕೊಲೆಗಾರನಿಗೆ ಮರಣದಂಡನೆ ವಿಧಿಸಬೇಕೆಂದು ಅವರು ಆಶಿಸಿದ್ದಾರೆ. ಕಿರ್ಕ್ ಅತ್ಯುತ್ತಮ ವ್ಯಕ್ತಿ ಮತ್ತು ಅವರು ಇದಕ್ಕೆ ಅರ್ಹರಾಗಿರಲಿಲ್ಲ ಎಂದಿದ್ದಾರೆ.
ಯುಕೆ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತ ಚಾರ್ಲಿ ಕಿರ್ಕ್ ಅವರನ್ನು ಕಾರ್ಯಕ್ರಮವೊಂದರಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ನಿನ್ನೆಯಷ್ಟೇ ಎಫ್ ಬಿ ಐ ನಿಂದ ಆರೋಪಿಯ ಪ್ರಥಮ ಪೋಟೋ ಕೂಡ ಬಿಡುಗಡೆ ಮಾಡಲಾಗಿತ್ತು. ಈ ಬೆನ್ನಲ್ಲೇ ಇಂದು ಚಾರ್ಲಿ ಕಿರ್ಕ್ ಗುಂಡಿಕ್ಕಿ ಹತ್ಯೆಗೈದಿದ್ದಂತ ಆರೋಪಿಯನ್ನು ಬಂಧಿಸಿದ್ದಾರೆ. ಸೆಪ್ಟೆಂಬರ್.11ರಂದು ಅಮೆರಿಕದ ಉತಾಹ್ ವ್ಯಾಲಿ ವಿಶ್ವವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಂಪ್ರದಾಯವಾದಿ ಯುವ ನಾಯಕ ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತ ಸಹಾಯಕ ಚಾರ್ಲಿ ಕಿರ್ಕ್ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು. ವಿಶ್ವವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅವರಿಗೆ ಗುಂಡು ಹಾರಿಸಿ, ಹತ್ಯೆಗೈಯ್ಯಲಾಗಿತ್ತು. ಇದೀಗ ಚಾರ್ಲಿ ಕಿರ್ಕ್ ಹಂತಕನ ಬಂಧಿಸಲಾಗಿದೆ. ಅಲ್ಲದೇ ಎಫ್ ಬಿ ಐ ಆತನನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಇದನ್ನು ಟ್ರಂಪ್ ದೃಢಪಡಿಸಿದ್ದಾರೆ. https://kannadanewsnow.com/kannada/from-september-27-neha-hiremaths-murder-case-trial-court-has-scheduled-the-date/ https://kannadanewsnow.com/kannada/fir-registered-against-bjp-leaders-who-protested-regarding-internal-reservations-in-bangalore/
ಹುಬ್ಬಳ್ಳಿ: ಸೆಪ್ಟೆಂಬರ್.27ರಿಂದ ನೇಹಾ ಹಿರೇಮಠ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ರಯಲ್ ನಡೆಸಲು ದಿನಾಂಕವನ್ನು ಕೋರ್ಟ್ ನಿಗದಿ ಪಡಿಸಿದೆ. ಹುಬ್ಬಳ್ಳಿಯ 1ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ನಲ್ಲಿ ಟ್ರಯಲ್ ನಡೆಯಲಿದೆ. ನೇಹಾ ಹಿರೇಮಠ್ ಹತ್ಯೆಯಾದ 17 ತಿಂಗಳ ನಂತ್ರ ಟ್ರಯಲ್ ಆರಂಭಗೊಳ್ಳುತ್ತಿದೆ. ಏಪ್ರಿಲ್ 18, 2024ರಂದು ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆಯಾಗಿತ್ತು. ಹುಬ್ಬಳ್ಳಿಯ ಕೆ ಎಲ್ ಇ ವಿವಿ ಆವರಣದಲ್ಲಿ ನೇಹಾ ಹತ್ಯೆಯಾಗಿತ್ತು. https://kannadanewsnow.com/kannada/420-crores-allocated-for-social-and-educational-survey-in-the-state-cm-siddaramaiah/ https://kannadanewsnow.com/kannada/fir-registered-against-bjp-leaders-who-protested-regarding-internal-reservations-in-bangalore/
ಬೆಂಗಳೂರು: ನಗರದ ಫ್ರೀಡಂ ಪಾರ್ಕ್ ನಲ್ಲಿ ಒಳ ಮೀಸಲಾತಿ ವಿಚಾರವಾಗಿ ಪ್ರತಿಭಟಿಸಿದಂತ ಬಿಜೆಪಿ ಮುಖಂಡ ಪಿ.ರಾಜೀವ್ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಬೆಂಗಳೂರಲ್ಲಿ ಒಳ ಮೀಸಲಾತಿ ವಿಚಾರವಾಗಿ ಬಿಜೆಪಿಯ ಪಿ.ರಾಜೀವ್ ಸೇರಿದಂತೆ ವಿವಿಧ ಮುಖಂಡರಿಂದ ಪ್ರತಿಭಟನೆ ನಡೆಸಲಾಗಿತ್ತು. ವಿಧಾನಸೌಧಕ್ಕೂ ಮುತ್ತಿಗೆ ಹಾಕೋದಕ್ಕೆ ಯತ್ನಿಸಲಾಗಿತ್ತು. ಹೀಗೆ ಪ್ರತಿಭಟನೆ ನಡೆಸಿದಂತ ಬಿಜೆಪಿ ಮುಖಂಡರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸೆಪ್ಟೆಂಬರ್.10ರಂದು ಫ್ರೀಡಂ ಪಾರ್ಕ್ ನಲ್ಲಿ ನಡೆಸಿದ್ದಂತ ಪ್ರತಿಭಟನೆ ಸಂಬಂಧ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್ ಸೇರಿದಂತೆ ಹಲವರ ವಿರುದ್ಧ ಉಪ್ಪಾರಪೇಟೆ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. https://kannadanewsnow.com/kannada/420-crores-allocated-for-social-and-educational-survey-in-the-state-cm-siddaramaiah/ https://kannadanewsnow.com/kannada/accurate-information-collection-through-the-use-of-technology-for-caste-survey-in-the-state-cm-siddaramaiah/
ಬೆಂಗಳೂರು: ರಾಜ್ಯದಲ್ಲಿ ಸೆಪ್ಟಂಬರ್ 22ರಿಂದ ಆರಂಭಗೊಳ್ಳುತ್ತಿರುವಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಾಗಿ 420 ಕೋಟಿ ನಿಗದಿ ಮಾಡಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025ರ ಕುರಿತು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ನಾಡಿನ 7 ಕೋಟಿ ಜನರ ಸಾಮಾಜಿಕ, ಶೈಕ್ಷಣಿಕ ಪರಿಸ್ಥಿತಿಯನ್ನು ತಿಳಿದುಕೊಳ್ಳುವ ಉದ್ದೇಶದಿಂದ ಮಧುಸೂಧನ ನಾಯ್ಕ್ ಅವರ ಅಧ್ಯಕ್ಷತೆಯಲ್ಲಿ ಆಯೋಗ ಸಮೀಕ್ಷೆ ಕಾರ್ಯ ಕೈಗೊಳ್ಳಲಿದೆ ಎಂದರು. ಆದಷ್ಟು ಎಚ್ಚರಿಕೆಯಿಂದ, ಪ್ರತಿಯೊಬ್ಬರನ್ನೂ ಒಳಗೊಂಡಂತೆ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ಡಿಸೆಂಬರ್ ಒಳಗಾಗಿ ವರದಿಯನ್ನು ಸಲ್ಲಿಸಲು ಸೂಚಿಸಲಾಗಿದೆ. ದಸರಾ ರಜೆ ಅವಧಿಯಲ್ಲಿ ಶಿಕ್ಷಕರ ಸೇವೆಯನ್ನು ಬಳಸಿಕೊಂಡು ಸಮೀಕ್ಷೆ ಕಾರ್ಯ ನಡೆಯಲಿದೆ. 1.75 ಲಕ್ಷ ಶಿಕ್ಷಕರನ್ನು ಈ ಕಾರ್ಯಕ್ಕೆ ಬಳಸಲಾಗುವುದು. ಅವರಿಗೆ ರೂ.20 ಸಾವಿರವರೆಗೆ ಗೌರವ ಸಂಭಾವನೆ ನೀಡಲಾಗುವುದು. ಶಿಕ್ಷಕರ ಸಂಭಾವನೆಗೆ ರೂ. 325 ಕೋಟಿ ವೆಚ್ಚವಾಗಲಿದೆ. ತಾತ್ಕಾಲಿಕವಾಗಿ ರೂ.420 ಕೋಟಿ ಸಮೀಕ್ಷೆ ಕಾರ್ಯಕ್ಕೆ ನಿಗದಿಪಡಿಸಲಾಗಿದೆ. ಅಗತ್ಯ ಬಿದ್ದರೆ ಹೆಚ್ಚುವರಿ ಅನುದಾನ ಒದಗಿಸಲಾಗುವುದು ಎಂದು ತಿಳಿಸಿದರು.…
ಬೆಂಗಳೂರು: ಸೆಪ್ಟೆಂಬರ್.22ರಿಂದ ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭಗೊಳ್ಳಲಿದೆ. ತಂತ್ರಜ್ಞಾನ ಬಳಕೆ ಮೂಲಕ ನಿಖರ ಮಾಹಿತಿಯನ್ನು ಸಂಗ್ರಹ ಮಾಡಲಾಗುತ್ತದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025ರ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಆಯೋಗ ವೈಜ್ಞಾನಿಕವಾಗಿ, ಯಾವುದೇ ಲೋಪವಾಗದಂತೆ ಸಮೀಕ್ಷೆ ಕಾರ್ಯ ನಡೆಸಬೇಕು. ನಿಗದಿತ ಅವಧಿಯ ಒಳಗಾಗಿ ಸಮೀಕ್ಷೆ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸಬೇಕು ಎಂದರು. ನಾಗಮೋಹನ ದಾಸ್ ಅವರು ಒಳಮೀಸಲಾತಿ ಸಮೀಕ್ಷೆಗೆ ವಿಶೇಷ ತಂತ್ರಜ್ಞಾನ ಬಳಸಿಕೊಂಡ ರೀತಿಯಲ್ಲಿ ಈ ಸಮೀಕ್ಷೆಯನ್ನು ಸಹ ಕೈಗೊಳ್ಳಲಾಗುವುದು. ಪ್ರತಿಯೊಂದು ಮನೆಯ ವಿದ್ಯುತ್ ಮೀಟರ್ ಆಧಾರದಲ್ಲಿ ಮನೆಯ ಜಿಯೋ ಟ್ಯಾಗ್ ಮಾಡಿ UHID ವಿಶೇಷ ಸಂಖ್ಯೆಯನ್ನು ನಮೂದಿಸಲಾಗುವುದು. ಈಗಾಗಲೇ 1.55 ಲಕ್ಷ ಮನೆಗಳಿಗೆ ಸಂಖ್ಯೆಯನ್ನು ಅಳವಡಿಸಲಾಗಿದೆ. ವಿದ್ಯುತ್ ಸಂಪರ್ಕ ಇಲ್ಲದ ಮನೆಗಳ ಸಮೀಕ್ಷೆಯನ್ನು ಸಹ ಮಾಡಲಾಗುವುದು ಎಂದರು. ಸಮೀಕ್ಷೆ ಸಂದರ್ಭದಲ್ಲಿ ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಅನ್ನು ಮೊಬೈಲ್ ಸಂಖ್ಯೆಗೆ ಲಿಂಕ್ ಮಾಡುವ ಕಾರ್ಯವನ್ನು ಮಾಡಲಾಗುವುದು…
ಬೆಂಗಳೂರು: ನಾನು ಮುಸ್ಲೀಂ ಆಗಿರೋ ಒಂದೇ ಒಂದು ಕಾರಣದಿಂದ ನನಗೆ ಟೆರರಿಸ್ಟ್ ಗಳಿಂದ, ಇಸ್ಲಾಂ ಸಮುದಾಯದಿಂದ ನನ್ನ ಖಾತೆಗೆ ಹಣ ಬಂದಿದೆ ಎಂಬುದಾಗಿ ಆರೋಪಿಸಲಾಗುತ್ತಿದೆ. ಆದರೇ ಇದೆಲ್ಲವೂ ಸುಳ್ಳು. ನನಗೆ ಒಂದೇ ಒಂದು ರೂಪಾಯಿ ಆ ರೀತಿಯ ಹಣ ಬಂದಿಲ್ಲ ಎಂಬುದಾಗಿ ಯೂಟ್ಯೂಬರ್ ಸಮೀರ್.ಎಂ.ಡಿ ಸ್ಪಷ್ಟ ಪಡಿಸಿದ್ದಾರೆ. ಇಂದು ತಮ್ಮ ಇನ್ಸ್ ಸ್ಟಾಗ್ರಾಮ್ ನಲ್ಲಿ ಹೊಸ ವೀಡಿಯೋ ಬಿಡುಗಡೆ ಮಾಡಿರುವಂತ ಅವರು, ನಾನು ಸೌಜನ್ಯ ಪರವಾಗಿ ನಿಂತಾಗಿನಿಂದ ಒಂದಿಲ್ಲೊಂದು ಆರೋಪಗಳನ್ನು ಎದುರಿಸುತ್ತಿದ್ದೇನೆ. ಅವತ್ತು ಹೇಳಿದ್ದೆ, ಇವತ್ತು ಹೇಳ್ತಾ ಇದ್ದೇನೆ. ನನಗೆ ಯಾವುದೇ ರೀತಿಯ ಫಂಡ್ ಬಂದಿಲ್ಲ. ಹಾಗೆ ನಾನು ದುಡ್ಡು ತೆಗೆದುಕೊಂಡು ವೀಡಿಯೋ ಮಾಡಿದ್ದರೇ ಪೊಲೀಸರ ತನಿಖೆಯಲ್ಲಿ ಇಷ್ಟೊತ್ತಿಗೆ ಹೊರಗೆ ಬಂದಿರೋದಲ್ವ? ಇದಕ್ಕೆ ಕಾರಣ ನಾನು ಮುಸ್ಲೀಂ ಆಗಿರೋದು ಎಂದು ಹೇಳಿದ್ದಾರೆ. ಪೊಲೀಸರ ಬಳಿಯಲ್ಲಿ ನನ್ನ ಆಧಾರ್ ಕಾರ್ಡ್ ನಿಂದ ಹಿಡಿದು, ಡ್ರೈವಿಂಗ್ ಲೈಸೆನ್ಸ್, ಫ್ಯಾನ್ ಕಾರ್ಡ್, ನಾನು ಓದಿರುವಂತ ಸ್ಕೂಲ್ ಡೀಟೆಲ್ಸ್, ನನ್ನ ಹತ್ತಿರ ಇರುವಂತ ಕಾರ್ ಆರ್ ಸಿ…
ಬೆಂಗಳೂರು: ನನಗೆ ವಿದೇಶದಿಂದ ಯಾವುದೇ ಫಂಡ್ ಬಂದಿಲ್ಲ ಎಂಬುದಾಗಿ ತನ್ನ ಖಾತೆಯನ್ನು ತೋರಿಸುವ ಮೂಲಕ, ಹೊಸ ವೀಡಿಯೋವನ್ನು ಯೂಟ್ಯೂಬರ್ ಸಮೀರ್.ಎಂ.ಡಿ ಬಿಡುಗಡೆ ಮಾಡಿದ್ದಾರೆ. ಯೂಟ್ಯೂಬರ್ ಸಮೀರ್ ಎಂ.ಡಿ ಇದೀಗ ಇನ್ಸ್ ಟಾಗ್ರಾಮ್ ನಲ್ಲಿ ಹೊಸ ವೀಡೀಯೋ ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ನನಗೆ ವಿದೇಶದಿಂದ ಯಾವುದೇ ಫಂಡ್ ಬಂದಿಲ್ಲ. ಬ್ಯಾಂಕ್ ದಾಖಲೆ ತೋರಿಸಿ ವೀಡಿಯೋವನ್ನು ಬಿಡುಗಡೆ ಮಾಡಿದ್ದಾರೆ. ಎಸ್ಐಟಿ ವಿಚಾರಣೆ ಬಳಿಕ ಸಮೀರ್ ಮೊದಲ ಮಾತು ಇದಾಗಿದೆ. ವೀಡಿಯೋದಲ್ಲಿ ನನಗೆ ಇಸ್ಲಾಂ ದೇಶಗಳಿಂದ, ಟೆರರಿಸ್ಟ್ ನಿಂದ ಕೋಟ್ಯಂತರ ಹಣ ಬಂದಿದೆ ಎಂಬುದಾಗಿ ಆರೋಪಿಸಲಾಗಿದೆ. ಆದರೇ ನಾನು ಮುಸ್ಲೀಂ ಆಗಿರುವ ಕಾರಣ ಈ ರೀತಿಯ ಆರೋಪ ಮಾಡಲಾಗುತ್ತಿದೆ. ಆದರೇ ನನ್ನ ಬ್ಯಾಂಕ್ ಖಾತೆಗೆ ಆ ರೀತಿಯ ಯಾವುದೇ ಹಣ ಬಂದಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ. ನಾನು ಸೌಜನ್ಯ ಪರವಾಗಿ ನಿಂತಾಗಿನಿಂದ ಇಂತಹ ಆರೋಪಗಳನ್ನು ಎದುರಿಸುತ್ತಿದ್ದೇನೆ. ಒಂದು ಸಾವಿಗೆ ನ್ಯಾಯ ಕೊಡಿಸೋದಕ್ಕೆ ನಿಂತ ನಾನು ಇಷ್ಟು ಕೀಳು ಮಟ್ಟಕ್ಕೆ ಇಳಿಯುವುದಿಲ್ಲ. ನನ್ನ ಬ್ಯಾಂಕ್ ಖಾತೆಯ ಎಲ್ಲಾ…
ಉಡುಪಿ: ರಾಜ್ಯ ಸರ್ಕಾರದ ಜನಪ್ರಿಯತೆಯನ್ನು ಸಹಿಸದ ಬಿಜೆಪಿ ನಾಯಕರು ಅನಾವಶ್ಯಕವಾಗಿ ಅಪಪ್ರಚಾರ ಮಾಡುತ್ತಿದ್ದು, ಸಮಾಜದಲ್ಲಿ ಕೋಮು ಸೌಹಾರ್ದತೆಯನ್ನು ಕೆಡಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದರು. ನೀರೆ ಗ್ರಾಮ ಪಂಚಾಯತ್ ನೂತನ ಕಟ್ಟಡವನ್ನು ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸರ್ಕಾರವನ್ನ ಹಿಂದು ವಿರೋಧಿ ಎಂದು ಬಿಂಬಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದರು. ಸರ್ಕಾರದ ವಿರುದ್ಧ ಆರೋಪ ಮಾಡಲು ವಿಪಕ್ಷಗಳಿಗೆ ಬೇರೆ ವಿಚಾರ ಇಲ್ಲ. ರಾಜ್ಯ ಸರ್ಕಾರ ಬೀಳುತ್ತದೆ, ಗ್ಯಾರಂಟಿ ಯೋಜನೆಗಳು ಜಾರಿ ಆಗಲ್ಲ, ಒಂದು ವೇಳೆ ಜಾರಿಯಾದರೂ ನಾಲ್ಕು ತಿಂಗಳಿಗೆ ಯೋಜನೆಗಳನ್ನು ನಿಲ್ಲಿಸಲಾಗುತ್ತದೆ ಎಂದು ಅಪಪ್ರಚಾರ ಮಾಡಲಾಯಿತು. ರಾಜ್ಯದ ಜನತೆಗೆ ನಮ್ಮ ಸರ್ಕಾರ ಸಾಕಷ್ಟು ಅನುಕೂಲ ಮಾಡಿಕೊಟ್ಟಿದೆ. ಇದನ್ನು ಸಹಿಸದ ಬಿಜೆಪಿ ನಾಯಕರು ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದರು. ಬಿಜೆಪಿ ಶಾಸಕ ಸಿ.ಟಿ.ರವಿ ವಿರುದ್ಧ ಎಫ್ ಐಆರ್ ದಾಖಲಿಸಿರುವುದಕ್ಕೆ ವಿಪಕ್ಷಗಳು ಖಂಡಿಸಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಅವರು…













