Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯ ಸರ್ಕಾರದಿಂದ ನಿಯೋಜನೆಯ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ನಿಯೋಜನೆಯನ್ನು ಈ ಕೂಡಲೇ ಜಾರಿಗೆ ಬರುವಂತೆ ರದ್ದುಗೊಳಿಸಿ ಆದೇಶಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದಂತ ಡಾ.ಕೆವಿ ತ್ರಿಲೋಕ ಚಂದ್ರ ಅವರು ಅಧಿಕೃತ ಜ್ಞಾಪನವನ್ನು ಹೊರಡಿಸಿದ್ದಾರೆ. ಅದರಲ್ಲಿ ಶಾಲಾ ಶಿಕ್ಷಣ ಇಲಾಖೆಯಲ್ಲಿ ಸರ್ಕಾರದ ಆದೇಶಾನುಸಾರ 2024-25ನೇ ಸಾಲಿನ ಶೈಕ್ಷಣಿಕ ಅವಧಿಯವರೆಗೆ ಕೆಲವು ಶಿಕ್ಷಕರುಗಳನ್ನು ಸರ್ಕಾರವು ತಾತ್ಕಾಲಿಕವಾಗಿ ನಿಯೋಜಿಸಿದೆ. ಆದರೆ ಕೆಲವು ಜಿಲ್ಲೆಗಳ ಉಪನಿರ್ದೇಶಕರುಗಳು ಹಾಗೂ ಕ್ಷೇತ್ರಶಿಕ್ಷಣಾಧಿಕಾರಿಗಳು ನಿಯೋಜನ ಮೇಲಿರುವ ಶಿಕ್ಷಕರುಗಳನ್ನು ಮಾರ್ಚಿ ಅಂತ್ಯಕ್ಕೆ ಕರ್ತವ್ಯದಿಂದ ಬಿಡುಗಡೆಗೊಳಿಸದಿರುವುದು ಗಮನಕ್ಕೆ ಬಂದಿರುತ್ತದೆ ಎಂದು ಹೇಳಿದ್ದಾರೆ. ಪ್ರಸ್ತುತ ಹೆಚ್ಚುವರಿ ಶಿಕ್ಷಕರ ಮರುಹೊಂದಾಣಿಕೆ ಪ್ರಕ್ರಿಯೆ ಚಾಲ್ತಿಯಲ್ಲಿರುವುದರಿಂದ ನಿಯೋಜನೆಯ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ನಿಯೋಜನೆಯನ್ನು – ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಿ ಆದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅಂತಹ ಶಿಕ್ಷಕರುಗಳನ್ನು ಕೂಡಲೆ ಶಾಲಾ ಕರ್ತವ್ಯದಿಂದ ಬಿಡುಗಡೆಗೊಳಿಸತಕ್ಕದ್ದು ಹಾಗೂ ಬಿಡುಗಡೆಗೊಂಡ ಶಿಕ್ಷಕರು ದಿನಾಂಕ: 09/04/2025 ರೊಳಗೆ…
ಶಿವಮೊಗ್ಗ : ರಾಜ್ಯದಲ್ಲಿ ಮನಕಲಕುವ ಘಟನೆ ಎನ್ನುವಂತೆ ಕಡಿಮೆ ಮಾರ್ಕ್ಸ್ ಬಂದಿದ್ದರಿಂದ ಪೋಷಕರು ಬೈದಿದ್ದಕ್ಕೆ ಮನನೊಂದು 7ನೇ ತರಗತಿ ಬಾಲಕಿಯೊಬ್ಬಳು ನೇಣಿಗೆ ಶರಣಾಗಿರುವಂತ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಬಸವಾನಿಯಲ್ಲಿ 7ನೇ ತರಗತಿ ವಿದ್ಯಾರ್ಥಿನಿ ಇಂಚರ ಎಂಬಾಕೆಯೇ ನೇಣಿಗೆ ಶರಣಾದಂತ ಬಾಲಕಿಯಾಗಿದ್ದಾರೆ. ಮೃತ ಇಂಚರ ತೀರ್ಥಹಳ್ಳಿಯ ಬಸವಾನಿಯಲ್ಲಿ 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಇಂದು ಶಾಲೆಯಲ್ಲಿ ಮಾರ್ಕ್ಸ್ ಕಾರ್ಡ್ ವಿತರಣೆಯನ್ನು ಮಾಡಲಾಗುತ್ತಿತ್ತು. ಈ ವೇಳೆಯಲ್ಲಿ ತನ್ನ ಮಾರ್ಕ್ಸ್ ಕಾರ್ಡ್ ಪಡೆದು ಮನೆಗೆ ಮರಳಿದ್ದಾಳೆ. ಹೊಳೆಕೊಪ್ಪದ ಮನೆಗೆ ಮರಳಿದಂತ ಇಂಚರ ಮಾರ್ಕ್ಸ್ ಕಾರ್ಡ್ ಪಡೆದಂತ ಪೋಷಕರು, ಪರಿಶೀಲಿಸಿದಾಗ ಕಡಿಮೆ ಬಂದಿರೋದು ಗಮನಕ್ಕೆ ಬಂದಿದೆ. ಈ ಕಾರಣಕ್ಕೆ ಯಾಕೆ ಇಷ್ಟು ಕಡಿಮೆ ಮಾರ್ಕ್ಸ್ ತೆಗೆದಿದ್ದೀಯ ಅಂತ ಬೈದಿದ್ದಾರೆ. ಇಷ್ಟಕ್ಕೇ ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಕೂಡಲೇ ಆಕೆಯನ್ನು ತೀರ್ಥಹಳ್ಳಿಯ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ. ಅಂದಹಾಗೇ ಇಂಚರ ಶಾಲೆಯಲ್ಲಿ ಸದಾ ಚುರುಕಿನ ಬಾಲಕಿಯಾಗಿದ್ದಳು. ಇಂತಹ ಇಂಚರ…
ನವದೆಹಲಿ: ಹಿರಿಯ ನಾಯಕ ಮತ್ತು ಮಾಜಿ ಕೇಂದ್ರ ಹಣಕಾಸು ಸಚಿವ ಪಿ. ಚಿದಂಬರಂ ಮಂಗಳವಾರ ಅಹಮದಾಬಾದ್‌ನ ಸಬರಮತಿ ಆಶ್ರಮದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆ ಮತ್ತು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ರಾಷ್ಟ್ರೀಯ ಅಧಿವೇಶನದ ನಡುವೆ ಬಿಸಿಲಿನ ತಾಪದಿಂದ ಪ್ರಜ್ಞೆ ತಪ್ಪಿದರು. ಚಿದಂಬರಂ ಅವರನ್ನು ಪಕ್ಷದ ಕಾರ್ಯಕರ್ತರು ಆಸ್ಪತ್ರೆಗೆ ಕರೆದೊಯ್ದು, ಆಸ್ಪತ್ರೆಗೆ ಸೇರಿಸಲಾಗಿದೆ. https://twitter.com/ANI/status/1909605761841299697 ಗುಜರಾತ್‌ನ ಅಹಮದಾಬಾದ್‌ನಲ್ಲಿ ಇಂದು ಬಿಸಿಲಿನ ತಾಪದಿಂದಾಗಿ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಪ್ರಜ್ಞೆ ತಪ್ಪಿ ಬಿದ್ದರು. ಒಂದು ವಿಡಿಯೋದಲ್ಲಿ, ಹಲವಾರು ಕಾಂಗ್ರೆಸ್ ಸದಸ್ಯರು ಚಿದಂಬರಂ ಅವರನ್ನು ಹೊತ್ತುಕೊಂಡು ಆಂಬ್ಯುಲೆನ್ಸ್‌ಗೆ ಕರೆದೊಯ್ಯುತ್ತಿರುವುದು ಕಂಡುಬಂದಿದೆ. ಸುದ್ದಿ ಸಂಸ್ಥೆ ಎಎನ್‌ಐ ಪೋಸ್ಟ್ ಮಾಡಿದ ವೀಡಿಯೊಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಸಂಸದ ಮತ್ತು ಪಿ. ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ, “ನನ್ನ ತಂದೆ ಆರೋಗ್ಯವಾಗಿದ್ದಾರೆ ಮತ್ತು ವೈದ್ಯರು ಅವರನ್ನು ಪರೀಕ್ಷಿಸುತ್ತಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ. https://kannadanewsnow.com/kannada/15-killed-as-roof-collapses-at-dominican-republic-nightclub/ https://kannadanewsnow.com/kannada/the-health-department-has-released-shocking-information-about-the-quality-of-medicines-being-sold-in-the-state/
ಡೊಮಿನಿಕನ್ ಗಣರಾಜ್ಯ: ಇಲ್ಲಿ ಮಂಗಳವಾರ ಮುಂಜಾನೆ ನೈಟ್‌ಕ್ಲಬ್‌ನ ಛಾವಣಿ ಕುಸಿದು ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ ಎಂದು ತುರ್ತು ನಿರ್ವಹಣಾ ಅಧಿಕಾರಿಗಳು ತಿಳಿಸಿದ್ದಾರೆ. ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಸರಣಿಯಲ್ಲಿ, ರಾಜಧಾನಿಯ ಸ್ಯಾಂಟೊ ಡೊಮಿಂಗೊದಲ್ಲಿರುವ ಜೆಟ್ ಸೆಟ್ ನೈಟ್‌ಕ್ಲಬ್‌ನಲ್ಲಿ ಛಾವಣಿ ಕುಸಿದ ನಂತರ ರಕ್ಷಣಾ ಕಾರ್ಯಕರ್ತರು ಆಸ್ಪತ್ರೆಗಳಿಗೆ 101 ಆಂಬ್ಯುಲೆನ್ಸ್‌ಗಳನ್ನು ಸಾಗಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಅನೇಕ ಜನರು ಗಾಯಗೊಂಡಿದ್ದರಿಂದ ಆಂಬ್ಯುಲೆನ್ಸ್‌ಗಳು ಆರಂಭದಲ್ಲಿ ಒಂದೇ ಬಾರಿಗೆ ಎರಡು ಅಥವಾ ಮೂವರನ್ನು ಆಸ್ಪತ್ರೆಗೆ ಸಾಗಿಸಬೇಕಾಯಿತು. ಅಂದರೆ 100 ಕ್ಕೂ ಹೆಚ್ಚು ಜನರು ಗಾಯಗೊಂಡರು ಎಂದು ತುರ್ತು ಕಾರ್ಯಾಚರಣೆ ಕೇಂದ್ರದ ನಿರ್ದೇಶಕ ಜುವಾನ್ ಮ್ಯಾನುಯೆಲ್ ಮೆಂಡೆಜ್ ರಾಷ್ಟ್ರೀಯ ಪೊಲೀಸರು ಹಂಚಿಕೊಂಡ ಇನ್‌ಸ್ಟಾಗ್ರಾಮ್ ವೀಡಿಯೊದಲ್ಲಿ ತಿಳಿಸಿದ್ದಾರೆ. ನಾವು ಜೀವಂತವಾಗಿ ರಕ್ಷಿಸಬಹುದಾದ ಜನರನ್ನು ಹೊರಗೆ ಕರೆದೊಯ್ಯುತ್ತಿದ್ದೇವೆ ಎಂದು ಮೆಂಡೆಜ್ ಹೇಳಿದರು. ಸಹಾಯಕ್ಕಾಗಿ ಕೇಳುತ್ತಿರುವ ಜನರು ನಿಮಗೆ ಕೇಳಿಸುತ್ತಿದ್ದಾರೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ಬೆಳಿಗ್ಗೆ 7 ಗಂಟೆಗೆ ಸ್ವಲ್ಪ ಮೊದಲು ನಡೆದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.…
ಒಂದು ಮಂತ್ರ ಸಾಕು ಸಾಲ ತೀರುತ್ತೆ. ಈ ಮಂತ್ರ ಹೇಳಿದರೆ ಮೂವತ್ತು ದಿನಗಳಲ್ಲಿ ಸಾಲ ತೀರುತ್ತೆ ಅನ್ನೋ ಕುತೂಹಲಕಾರಿ ಮತ್ತು ರಹಸ್ಯ ಮಾಹಿತಿಯನ್ನು ಇಲ್ಲಿ ನಾವು ನಿಮಗೆ ತಿಳಿಸಿಕೊಡುತ್ತೇವೆ. ಕಾಲಭೈರವ ಅಂದ್ರೆ ಶಿವನ ಸ್ವರೂಪ. 64 ಭೈರವ ರೂಪದಲ್ಲಿ ಕಾಲಭೈರವನೇ ಪ್ರಮುಖವಾದವನು. ಕಾಲ ಅಂದ್ರೆ ಸಮಯವನ್ನು ಸೂಚಿಸುವವನು ಎಂದರ್ಥ. ಭೈರವನ ಪೂಜೆ ಮಾಡೋದ್ರಿಂದ ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ…
ಬೆಂಗಳೂರು: ನಗರದಲ್ಲಿ ಉದ್ದೇಶಿತ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಾಜ್ಯ ಸರಕಾರವು ಗುರುತಿಸಿರುವ ಮೂರು ಸ್ಥಳಗಳ ಪೈಕಿ ಕನಕಪುರ ರಸ್ತೆಯಲ್ಲಿರುವ ಎರಡು ತಾಣಗಳ ಪರಿಶೀಲನೆಯನ್ನು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಉನ್ನತ ಮಟ್ಟದ ತಂಡವು ಮಂಗಳವಾರ ನಡೆಸಿತು. ನಂತರ ತಂಡದ ಸದಸ್ಯರು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರನ್ನು ಭೇಟಿಯಾಗಿ ವಿಚಾರ ವಿನಿಮಯ ನಡೆಸಿದರು. ಈ ಸಂದರ್ಭದಲ್ಲಿ ಸಚಿವರು ಕೂಡ ಉದ್ದೇಶಿತ ವಿಮಾನ ನಿಲ್ದಾಣದ ಅಗತ್ಯ, ಬೆಂಗಳೂರಿನ ನಾಗರಿಕ ಮತ್ತು ಕೈಗಾರಿಕಾ ಅಗತ್ಯ ಇತ್ಯಾದಿಗಳನ್ನು ತಂಡದ ಸದಸ್ಯರಿಗೆ ವಿವರಿಸಿ, ಪ್ರಾತ್ಯಕ್ಷಿಕೆ ಪ್ರದರ್ಶಿಸಿದರು. ಅತ್ಯಂತ ಪಾರದರ್ಶಕವಾಗಿ ಸ್ಥಳ ಗುರುತಿಸುವ ಕೆಲಸ ಆಗಲಿ ಎಂದು ತಂಡಕ್ಕೆ ಸಲಹೆ ನೀಡಿದರು. ನಾಳೆಯೂ ಈ ತಂಡ ನೆಲಮಂಗಲ- ಕುಣಿಗಲ್ ರಸ್ತೆಯ ಸ್ಥಳ ಪರಿಶೀಲನೆ ನಡೆಸಲಿದೆ. ಉದ್ದೇಶಿತ ಎರಡನೆಯ ವಿಮಾನ ನಿಲ್ದಾಣವನ್ನು ಬೆಂಗಳೂರಿನ ಅಗತ್ಯಗಳನ್ನು ಗಮನದಲ್ಲಿ ಇಟ್ಟುಕೊಂಡು ನಿರ್ಮಿಸಲು ಸರಕಾರ ತೀರ್ಮಾನಿಸಿದೆ. ಸ್ಥಳ ಪರಿಶೀಲನೆಯ ಬಳಿಕ ಪ್ರಾಧಿಕಾರದ ಅಭಿಪ್ರಾಯ ಏನೆಂಬುದನ್ನು ತಿಳಿದುಕೊಂಡು, ಅಂತಿಮ ನಿರ್ಧಾರವನ್ನು…
ಬೆಂಗಳೂರು: ನಗರದಲ್ಲಿ ಚಿನ್ನಾಭರಣ, ಬೆಳ್ಳಿಯ ವಸ್ತು, ಕಾರು ಹಾಗೂ ದ್ವಿ-ಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳ ಬಂಧಿಸಲಾಗಿದೆ. ಬಂಧಿತ ಆರೋಪಿಗಳಿಂದ 25 ಗ್ರಾಂ ಚಿನ್ನಾಭರಣ, 124 ಗ್ರಾಂ ಬೆಳ್ಳಿಯ ವಸ್ತುಗಳು, 3 ಕಾರುಗಳು, 6 ದ್ವಿ-ಚಕ್ರ ವಾಹನಗಳು ಹಾಗೂ 6000/-ನಗದು ವಶ, ಒಟ್ಟು ಮೌಲ್ಯ 34.27 ಲಕ್ಷ ಆಗಿದೆ. ಎಸ್.ಜೆ ಪಾರ್ಕ್ ಪೊಲೀಸ್ ಠಾಣಾ ಸರಹದ್ದಿನ, ಎಸ್.ಜೆ.ಪಿ ರಸ್ತೆಯ ಶಾಂತಪ್ಪ ಲೇನ್‌ನಲ್ಲಿ ಪಿರಾದುದಾರರು ಹಾರ್ಡ್‌ವೇರ್ ಅಂಗಡಿಯೊಂದನ್ನು ಇಟ್ಟುಕೊಂಡಿದ್ದರು. ಪಿರಾದುದಾರರು ದಿನಾಂಕ:11/03/2025 ರಂದು ಎಸ್.ಜೆ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು ದಿನಾಂಕ:10/03/2025 ರಂದು ರಾತ್ರಿ ಅಂಗಡಿಗೆ ಬೀಗ ಹಾಕಿಕೊಂಡು ಮನೆಗೆ ಹೋಗಿರುತ್ತಾರೆ. ಮಾರನೇಯ ದಿನ, ದಿನಾಂಕ:11/03/2025 ರಂದು ಬೆಳಿಗ್ಗೆ ಬಂದು ನೋಡಲಾಗಿ ಅಂಗಡಿಯ ಬಾಗಿಲ ಬೀಗ ಮುರಿದಿರುವುದು ಕಂಡು ಬಂದಿರುತ್ತದೆ. ಅಂಗಡಿಯ ಒಳಗೆ ಹೋಗಿ ನೋಡಲಾಗಿ, ವ್ಯಾಪಾರ ಮಾಡಿ ಡ್ರಾಯರ್‌ನಲ್ಲಿಟ್ಟಿದ್ದ 7000/-ನಗದನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ಎಸ್.ಜೆ.ಪಾರ್ಕ್ ಪೊಲೀಸ್…
ಉತ್ತರ ಕನ್ನಡ: ಜಿಲ್ಲೆಯಲ ಮನೆಯೊಂದರಲ್ಲಿ 500 ರೂಪಾಯಿ ಮುಖಬೆಲೆಯ ಬರೋಬ್ಬರಿ 14 ಕೋಟಿ ನಕಲಿ ನೋಟು ಪತ್ತೆಯಾಗಿದೆ. ಈ ನಕಲಿ ನೋಟುಗಳನ್ನು ಕಂಡಂತ ಪೊಲೀಸರೇ ಶಾಕ್ ಆಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಗಾಂಧಿ ನಗರದ ಅರ್ಷದ್ ಖಾನ್ ಎಂಬುವರ ಮನೆಯಲ್ಲಿ 500 ರೂ ಮೌಲ್ಯದ 14 ಕೋಟಿ ನಕಲಿ ನೋಟುಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಗಾಂಧಿ ನಗರದ ಅರ್ಷದ್ ಖಾನ್ ಎಂಬುವರ ಮನೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆಯಲ್ಲಿ 14 ಕೋಟಿ ಮೌಲ್ಯದ ನಕಲಿ ನೋಟು ಪತ್ತೆಯಾಗಿದ್ದಾವೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವಂತ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ. https://kannadanewsnow.com/kannada/woman-arrested-for-stealing-diamonds-jewellery-diamonds-worth-rs-10-lakh/ https://kannadanewsnow.com/kannada/the-health-department-has-released-shocking-information-about-the-quality-of-medicines-being-sold-in-the-state/ https://kannadanewsnow.com/kannada/2nd-puc-exam-2-schedule-announced-heres-what-you-need-to-know/
ಬೆಂಗಳೂರು: ಮನೆಗೆಲಸ ಮಾಡುತ್ತಿದ್ದಂತ ಮನೆಯಲ್ಲಿ ವಜ್ರ, ಚಿನ್ನಾಭರಣ ಕಳವು ಮಾಡಿದಂತ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯಿಂದ 10 ಲಕ್ಷ ಮೌಲ್ಯದ 128 ಗ್ರಾಂ ಚಿನ್ನಾಭರಣ, ವಜ್ರವನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ನಗರ ಪೊಲೀಸರು ಮಾಹಿತಿ ನೀಡಿದ್ದು, ಸುದ್ದಗುಂಟೆ ಪಾಳ್ಯ ಪೊಲೀಸ್ ಠಾಣಾ ಸರಹದ್ದಿನ ವೆಂಕಟೇಶ್ವರ ಲೇಔಟ್‌ನಲ್ಲಿ ವಾಸವಿರುವ ಪಿರಾದುದಾರರು ದಿನಾಂಕ:25/03/2025 ರಂದು ಸುದ್ದಗುಂಟೆ ಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು ದಿನಾಂಕ:13/03/2025 ರಂದು ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಓರ್ವ ಮಹಿಳೆಯನ್ನು ಮನೆಕೆಲಸಕ್ಕೆಂದು ನೇಮಕ ಮಾಡಿಕೊಂಡಿದ್ದು, ಮನೆ ಕೆಲಸದಾಕೆಯು ದಿನಾಂಕ:15/03/2025 ರಂದು ಪಿರಾದುದಾರರ ಮನೆಯ ಬೀರುವಿನಲ್ಲಿಟ್ಟಿದ್ದ 128 ಗ್ರಾಂ ಚಿನ್ನಾಭರಣಗಳು ಮತ್ತು ವಜ್ರದ ಆಭರಣಗಳನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ತಿಳಿಸಿರುತ್ತಾರೆ. ಈ ಕುರಿತು ಸುದ್ದಗುಂಟೆ ಪಾಳ್ಯ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿರುತ್ತದೆ ಎಂದಿದೆ. ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ದಿನಾಂಕ:25/03/2025 ರಂದು ತಮಿಳುನಾಡಿನ ಧರ್ಮಪುರಿ ಜಿಲ್ಲೆಯಲ್ಲಿ ಮನೆಕೆಲಸದಾಕೆಯು ವಾಸವಿರುವ ಮನೆಯಲ್ಲಿ ನೋಟೀಸ್…
ಅಯೋಧ್ಯೆ: ಮಂಗಳವಾರ ಮಧ್ಯಾಹ್ನ ರೈಲ್ವೆ ಇಲಾಖೆಗೆ ಬಾಂಬ್ ಬೆದರಿಕೆ ಬಂದ ನಂತರ ಜೌನ್‌ಪುರದಿಂದ ಅಯೋಧ್ಯೆಗೆ ತೆರಳುತ್ತಿದ್ದ ರೈಲಿನಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಯಿತು. ಜೌನ್‌ಪುರ-ಅಯೋಧ್ಯಾ ಕ್ಯಾಂಟ್ ಸೂಪರ್‌ಫಾಸ್ಟ್ ರೈಲಿಗೆ ಬಾಂಬ್ ಬೆದರಿಕೆ ಬಂದಿದ್ದು, ಇದರಿಂದಾಗಿ ರೈಲು ಜಂಗ್‌ಘೈ ನಿಲ್ದಾಣದಲ್ಲಿ ಸ್ಥಗಿತಗೊಂಡಿತು. ವರದಿಗಳ ಪ್ರಕಾರ, ಅಪರಿಚಿತ ವ್ಯಕ್ತಿ ಕರೆ ಮಾಡಿ, ರೈಲಿನಲ್ಲಿದ್ದ ಮಹಿಳೆಯೊಬ್ಬರ ಬ್ಯಾಗ್‌ನಲ್ಲಿ ಬಾಂಬ್ ಇದೆ ಎಂದು ತಿಳಿಸಿದ್ದನು. ಹೀಗಾಗಿ ಕೆಲ ಕಾಲ ಆತಂಕಕ್ಕೂ ಕಾರಣವಾಗಿತ್ತು. ರೈಲ್ವೆ ಅಧಿಕಾರಿಗಳು ಮತ್ತು ಬಾಂಬ್ ಸ್ಕ್ವಾಡ್ ತನಿಖೆಗಾಗಿ ಸ್ಥಳಕ್ಕೆ ಧಾವಿಸಿದರು. ರೈಲು ಈಗಾಗಲೇ ಜೌನ್‌ಪುರ ನಿಲ್ದಾಣದಿಂದ ಹೊರಟಿದ್ದರಿಂದ, ಅಧಿಕಾರಿಗಳು ತ್ವರಿತವಾಗಿ ಜಂಗ್‌ಘೈ ನಿಲ್ದಾಣಕ್ಕೆ ಮಾಹಿತಿಯನ್ನು ರವಾನಿಸಿದರು. ಅಲ್ಲಿ ರೈಲು ನಿಲ್ಲಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 10ನೇ ಕೋಚ್ ಅನ್ನು ಸ್ಥಳಾಂತರಿಸಲಾಯಿತು ಮತ್ತು ಪ್ರಯಾಗ್‌ರಾಜ್‌ನಿಂದ ಬಾಂಬ್ ಸ್ಕ್ವಾಡ್‌ಗೆ ಎಚ್ಚರಿಕೆ ನೀಡಲಾಯಿತು. ತಂಡವು ಸುಮಾರು ನಾಲ್ಕು ಗಂಟೆಗಳ ಕಾಲ ರೈಲಿನ ಸಂಪೂರ್ಣ ಶೋಧ ನಡೆಸಿತು. ಅಧಿಕಾರಿಗಳ ಪ್ರಕಾರ, ಹುಡುಕಾಟದಲ್ಲಿ ಯಾವುದೇ ಅನುಮಾನಾಸ್ಪದ ವಸ್ತು ಸಿಗಲಿಲ್ಲ ಮತ್ತು ಅಂತಿಮವಾಗಿ ರೈಲನ್ನು…