Author: kannadanewsnow09

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ವೀಡಿಯೋ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್ಐಟಿ ಪೊಲೀಸರ ತನಿಖೆಗೆ ವಹಿಸಿತ್ತು. ಈ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ಎಸ್ಐಟಿ ಪರವಾಗಿ ವಾದಿಸೋದಕ್ಕೆ ಹೆಚ್ಚುವರಿ ಎಸ್ ಪಿಪಿಯಾಗಿ ಜಾಯ್ನಾ ಕೊಥಾರಿ ಅವರನ್ನು ನೇಮಿಸಲಾಗಿತ್ತು. ಇಂತಹ ಹುದ್ದೆಗೆ ಅವರು ರಾಜೀನಾಮೆ ನೀಡಿದ್ದಾರೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ, ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ವಿರುದ್ಧದ ಮಹಿಳೆ ಕಿಡ್ನ್ಯಾಪ್ ಪ್ರಕರಣ, ಭವಾನಿ ರೇವಣ್ಣ ವಿರುದ್ಧದ ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್ಐಟಿ ಪೊಲೀಸರ ಮೂಲಕ ತನಿಖೆ ನಡೆಸುತ್ತಿದೆ. ಈಗಾಗಲೇ ಹಲವರನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿದೆ. ಆರೋಪಿಗಳಿಗೆ ಸಂಬಂಧಿಸಿದಂತ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ಹೆಚ್ಚುವರಿ ಎಸ್ ಪಿಪಿಯಾಗಿ ಜಾಯ್ನಾ ಕೊಥಾರಿ ಸಮರ್ಥವಾಗೇ ವಾದಿಸಿದ್ದರು. ಪ್ರಜ್ವಲ್, ರೇವಣ್ಣ, ಭವಾನಿ ಅವರು ಪ್ರಕರಣದಲ್ಲಿ ಮಧ್ಯಂತರ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಂತ ವೇಳೆಯಲ್ಲಿ ಎಸ್ಐಟಿ ಪರವಾಗಿ ಹೆಚ್ಚುವರಿ ಎಸ್ ಪಿಪಿಯಾಗಿ ವಾದಿಸಿದ್ದಂತ ಜಾಯ್ನಾ ಕೊಥಾರಿ ಅವರು, ಜಾಮೀನು ನೀಡದಂತೆ ನ್ಯಾಯಪೀಠಕ್ಕೆ ಮನವಿ…

Read More

ಬೆಂಗಳೂರು : ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಧಾನ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುತ್ತಿದ್ದ ಅಶ್ವತ್ಥಾಮ (38) ಆನೆಯ ನಿಧನಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಂತಾಪ ಸೂಚಿಸಿದ್ದಾರೆ. ದಸರಾ ಮಹೋತ್ಸವದಲ್ಲಿ 2 ಬಾರಿ ಭಾಗಿಯಾಗಿದ್ದ ನಾಗರಹೊಳೆ ಅರಣ್ಯ ವ್ಯಾಪ್ತಿಯ ಭೀಮನಕಟ್ಟೆ ಶಿಬಿರದಲ್ಲಿದ್ದ ಅಶ್ವತ್ಥಾಮ ಸೌರ ವಿದ್ಯುತ್ ಬೇಲಿಯ ಮೇಲೆ ಬಿದ್ದು ಸಾವಿಗೀಡಾಗಿರುವುದಾಗಿ ವರದಿಯಾಗಿದ್ದು, ಈ ಆಕಸ್ಮಿಕ ಸಾವಿನ ಬಗ್ಗೆ ಬಗ್ಗೆ ಸೂಕ್ತ ತನಿಖೆ ನಡೆಸಿ ವರದಿ ನೀಡಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. https://kannadanewsnow.com/kannada/malawi-vice-president-9-others-killed-in-plane-crash-says-president/ https://kannadanewsnow.com/kannada/police-under-pressure-not-to-arrest-darshan-pressure-from-politicians-sandalwood-seniors/

Read More

ಬೆಂಗಳೂರು: ಸೋಮಣ್ಣ ಅವರು ಜಲಶಕ್ತಿ ಸಚಿವರಾಗಿರುವುದರಿಂದ ತಾರತಮ್ಯವಾಗಲಿದೆ ಎಂಬ ತಮಿಳುನಾಡು ಕಾಂಗ್ರೆಸ್ ಪ್ರಧಾನಿಗೆ ಬರೆದಿರುವ ಪತ್ರದ ಬಗ್ಗೆ ಕೇಳಿದಾಗ, “ಒಮ್ಮೆ ಸಚಿವರಾದರೆ ಅವರು, ಇಡೀ ದೇಶಕ್ಕೆ ಸಚಿವರಾಗುತ್ತಾರೆಯೇ ಹೊರತು ಅವರು ಪ್ರತಿನಿಧಿಸುವ ರಾಜ್ಯಕ್ಕೆ ಸಚಿವರಾಗುವುದಿಲ್ಲ. ಯಾವುದೇ ರಾಜಕಾರಣಿಯಾದರೂ ತಮ್ಮ ರಾಜ್ಯ ಹಾಗೂ ಊರಿಗೆ ಹೆಚ್ಚಿನ ಅನುಕೂಲ ಮಾಡಿಕೊಡುವುದು ಸಹಜ. ನಾನು ಸಚಿವನಾಗಿದ್ದಾಗ ಪೈಲೆಟ್ ಯೋಜನೆಗಳನ್ನು ನನ್ನ ಕ್ಷೇತ್ರಕ್ಕೆ ತೆಗೆದುಕೊಂಡು ಹೋಗಿದ್ದೆ. ಖರ್ಗೆ ಅವರು ಕಾರ್ಮಿಕ ಸಚಿವರಾಗಿದ್ದಾಗ ಕಲುಬುರ್ಗಿಯಲ್ಲಿ ಇಎಸ್ಐ ಆಸ್ಪತ್ರೆ ಕಟ್ಟಿಸಿದರು. ಇದು ಸಹಜ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಸೋಮಣ್ಣ ಅವರು ಈಗಷ್ಟೇ ಸಚಿವರಾಗಿ ಕಣ್ಣು ಬಿಡುತ್ತಿದ್ದಾರೆ. ನಮ್ಮ ರಾಜ್ಯದಿಂದ ಮಂತ್ರಿಯಾದವರು ರಾಜ್ಯಕ್ಕೆ ಶಕ್ತಿ ತುಂಬಲಿ. ನಿರ್ಮಲಾ ಸೀತರಾಮನ್ ಅವರು ಹಣಕಾಸು ಸಚಿವೆಯಾಗಿ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಘೋಷಣೆ ಮಾಡಿದರು. ಆದರೆ ಹಣ ಬರಲಿಲ್ಲ. ಏನು ಮಾಡಲು ಸಾಧ್ಯ? ಯಾವುದೇ ಕೆಲಸವಾದರೂ ಕಾನೂನು ಬದ್ಧವಾಗಿ ಅವಕಾಶ ಇದ್ದರೆ ಅದನ್ನು…

Read More

ಬೆಂಗಳೂರು: ನಮ್ಮ ನಗರವನ್ನು ಹಸಿರಾಗಿಡಲು ಬ್ಲೂ ಗ್ರೀನ್ ಊರು ಎಂಬ ಅಭಿಯಾನ ಆರಂಭಿಸಿದ್ದು, ಹೆಚ್ಚಿನ ಮರಗಳನ್ನು ನೆಡಲು ಸಿದ್ಧತೆ ಮಾಡಲಾಗಿದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು. ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಇದರ ಜತೆಗೆ ಕ್ಲೈಮೆಟ್ ಆಕ್ಷನ್ ಸೆಲ್ ಕೂಡ ರಚಿಸಲಾಗಿದ್ದು, ಇದರಲ್ಲಿ ಬಿಡಬ್ಲ್ಯೂಎಸ್ಎಸ್ ಬಿ, ಬೆಸ್ಕಾಂ, ಬಿಎಂಟಿಸಿ, ಬಿಟಿಪಿ, ಬಿಎಂಆರ್ ಸಿಎಲ್, ಡೆಲ್ಟ್, ಘನತ್ಯಾಜ್ಯ ನಿರ್ವಹಣೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅರಣ್ಯ, ಕೈಗಾರಿಕೆ, ಗಣಿಗಾರಿಗೆ ಸೇರಿದಂತೆ ಎಲ್ಲಾ ಇಲಾಖೆಗಳನ್ನು ಒಳಗೊಳ್ಳಲಾಗಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಬಿಬಿಎಂಪಿ ಜಾಲತಾಣದಲ್ಲಿ ಲಭ್ಯವಿದೆ ಎಂದರು. ಹಸಿರು ರಕ್ಷಕ ಮೂಲಕ 2 ಲಕ್ಷ ಗಿಡ ನೆಡುವ ಗುರಿ: ಇನ್ನು ಕಳೆದ ವರ್ಷ ಹಸಿರು ರಕ್ಷಕ ಕಾರ್ಯಕ್ರಮ ಅನಾವರಣ ಮಾಡಿದ್ದೆವು. ಶಾಲಾ ಮಕ್ಕಳು ತಮ್ಮ ಪ್ರದೇಶದಲ್ಲಿ ಗಿಡ ನೆಟ್ಟು ಅವುಗಳನ್ನು ಅವರೇ ಬೆಳೆಸುವ ಕಾರ್ಯಕ್ರಮ ಇದಾಗಿತ್ತು. ಈಗಾಗಲೇ 250 ಶಾಲೆಗಳ lಸಹಯೋಗದಲ್ಲಿ 52 ಸಾವಿರ ಗಿಡಗಳನ್ನು ನೆಡಲಾಗಿದೆ. ಈ ಪೈಕಿ ಶೇ. 80…

Read More

ನವದೆಹಲಿ: ಮಾರಣಾಂತಿಕ ವಿಮಾನ ಅಪಘಾತದಲ್ಲಿ ಮಲವಿ ಉಪಾಧ್ಯಕ್ಷ ಸೌಲೋಸ್ ಚಿಲಿಮಾ ಮತ್ತು ಇತರ ಒಂಬತ್ತು ಮಂದಿಯನ್ನು ಕಳೆದುಕೊಂಡಿರುವುದಕ್ಕೆ ಮಲವಿ ಶೋಕ ವ್ಯಕ್ತಪಡಿಸಿದೆ ಎಂದು ಅಧ್ಯಕ್ಷ ಲಾಜರಸ್ ಚಕ್ವೆರಾ ಮಂಗಳವಾರ ದೃಢಪಡಿಸಿದ್ದಾರೆ. ಉಪರಾಷ್ಟ್ರಪತಿ ಚಿಲಿಮಾ ಅವರನ್ನು ಸಾಗಿಸುತ್ತಿದ್ದ ಮಿಲಿಟರಿ ವಿಮಾನದ ಅವಶೇಷಗಳು ದೇಶದ ಉತ್ತರ ಪ್ರದೇಶದ ಒರಟಾದ ಪರ್ವತ ಪ್ರದೇಶದಲ್ಲಿ ಒಂದು ದಿನಕ್ಕೂ ಹೆಚ್ಚು ಕಾಲ ವ್ಯಾಪಕ ಶೋಧದ ನಂತರ ಪತ್ತೆಯಾಗಿವೆ. ದುರದೃಷ್ಟವಶಾತ್, ಯಾರೂ ಬದುಕುಳಿದಿಲ್ಲ ಎಂದು ಅಧ್ಯಕ್ಷ ಚಕ್ವೆರಾ ರಾಜ್ಯ ದೂರದರ್ಶನದಲ್ಲಿ ಪ್ರಸಾರವಾದ ನೇರ ಭಾಷಣದಲ್ಲಿ ಘೋಷಿಸಿದರು. ಉಪಾಧ್ಯಕ್ಷ ಚಿಲಿಮಾ ಮತ್ತು ಮಾಜಿ ಪ್ರಥಮ ಮಹಿಳೆ ಶಾನಿಲ್ ಡಿಜಿಂಬಿರಿ ಮತ್ತು ಇತರರನ್ನು ಹೊತ್ತ ವಿಮಾನವು ರಾಜಧಾನಿ ಲಿಲೊಂಗ್ವೆಯಿಂದ ಉತ್ತರದ ಮುಜುಜುಗೆ ನಿಗದಿತ 45 ನಿಮಿಷಗಳ ಹಾರಾಟದ ಸಮಯದಲ್ಲಿ ರಾಡಾರ್ನಿಂದ ಕಣ್ಮರೆಯಾದಾಗ ಈ ದುರಂತ ಘಟನೆ ಬೆಳಕಿಗೆ ಬಂದಿದೆ. ಪ್ರತಿಕೂಲ ಹವಾಮಾನ ಪರಿಸ್ಥಿತಿಗಳು ಮತ್ತು ಕಳಪೆ ಗೋಚರತೆಯಿಂದಾಗಿ ಏರ್ ಟ್ರಾಫಿಕ್ ಕಂಟ್ರೋಲರ್ಗಳು ವಿಮಾನವನ್ನು ಮುಜುಜು ವಿಮಾನ ನಿಲ್ದಾಣದಿಂದ ದೂರಕ್ಕೆ ತಿರುಗಿಸಿದರು, ಲಿಲೊಂಗ್ವೆಗೆ ಮರಳಲು…

Read More

ಬೆಂಗಳೂರು: ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಕೊಲೆಗೂ ನನಗೂ ಸಂಬಂಧವಿಲ್ಲ ಎಂಬುದಾಗಿ ತನ್ನನ್ನು ಭೇಟಿಯಾದಂತ ವಕೀಲರ ಮುಂದೆ ನಟ ದರ್ಶನ್ ಅಳಲು ತೋಡಿಕೊಂಡಿರೋದಾಗಿ ತಿಳಿದು ಬಂದಿದೆ. ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಕಾರಣಕ್ಕೆ ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 13 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ಠಾಣೆಯಲ್ಲಿ ನಟ ದರ್ಶನ್ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಇಲ್ಲಿಗೆ ಅವರ ಪರ ವಕೀಲ ಅನಿಲ್ ತೆರಳಿ, ಅವರೊಂದಿಗೆ ಚರ್ಚಿಸಿದರು. ತನ್ನ ಪರ ವಕೀಲ ಅನಿಲ್ ಮುಂದೆ ನಟ ದರ್ಶನ್ ತನಗೂ ಇದ್ದಕೂ ಯಾವುದೇ ಸಂಬಂಧವಿಲ್ಲ. ಹೀಗಿದ್ದರೂ ನನ್ನನ್ನು ಬಂಧಿಸಲಾಗಿದೆ ಎಂಬುದಾಗಿ ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ. ಇದೇ ವೇಳೆಯಲ್ಲಿ ದರ್ಶನ್ ನೋಡಲು ಠಾಣೆಗೆ ತೆರಳಿದ್ದಂತ ಸಂಬಂಧಿ ಶುಶಾಂತ್ ಗೆ ಅವಕಾಶ ಮಾಡಿಕೊಡಲಾಗಿದೆ. ಅಲ್ಲದೇ ಅವರ ಪತ್ನಿ ವಿಜಯಲಕ್ಷ್ಮೀ, ಪುತ್ರ ವಿನಿಶ್ ಜೊತೆಗೆ ಮೊಬೈಲ್ ಪೋನ್ ನಲ್ಲಿ ಮಾತನಾಡೋದಕ್ಕೆ ಪೊಲೀಸರು ಅವಕಾಶ ಮಾಡಿಕೊಟ್ಟಿರುವುದಾಗಿ ತಿಳಿದು ಬಂದಿದೆ. https://kannadanewsnow.com/kannada/police-under-pressure-not-to-arrest-darshan-pressure-from-politicians-sandalwood-seniors/ https://kannadanewsnow.com/kannada/mysuru-dasara-elephant-ashwathama-passes-away/

Read More

ಬೆಂಗಳೂರು: ನಟ ದರ್ಶನ್ ಅವರನ್ನು ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಸಲಾಗಿದೆ. ಪೊಲೀಸರು ಅವರನ್ನು ಅನ್ನಪೂರ್ಣೇಶ್ವರಿ ನಗರ ಠಾಣೆಗೆ ವಿಚಾರಣೆ ನಡೆಸುತ್ತಿದ್ದರು. ಈ ವೇಳೆಯಲ್ಲೇ ಪೊಲೀಸ್ ಠಾಣೆಯ ಮುಂದೆಯೇ ಡಿ ಬಾಸ್ ಗೆ ಜೈ ಎಂಬುದಾಗಿ ಅವರ ಅಭಿಮಾನಿಗಳು ಘೋಷಣೆ ಕೂಗಿದ ಘಟನೆ ನಡೆದಿದೆ. ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಎಂಬಾತ ನಟ ದರ್ಶನ್ ಸ್ನೇಹಿತೆ ಪವಿತ್ರಾ ಗೌಡಗೆ ಅಶ್ಲೀಸ ಸಂದೇಶ ಕಳುಹಿಸುತ್ತಿದ್ದನಂತೆ. ಅಲ್ಲದೇ ನಟ ದರ್ಶನ್ ಬಗ್ಗೆಯೂ ಬಗ್ಗೆಯೂ ಕೆಟ್ಟದಾಗಿ ಸೋಷಿಯಲ್ ಮೀಡಿಯಾದಲ್ಲಿ ಕಾಮೆಂಟ್ ಕೂಡ ಹಾಕುತ್ತಿದ್ದನಂತೆ. ಇದೇ ಕಾರಣಕ್ಕೆ ಅನೇಕ ಬಾರಿ ನಟ ದರ್ಶನ್ ಸೇರಿದಂತೆ ಅವರ ಅಭಿಮಾನಿಗಳು ರೇಣುಕಾಸ್ವಾಮಿಗೆ ಎಚ್ಚರಿಸಿದ್ದರು. ಆದ್ರೇ ರೇಣುಕಾಸ್ವಾಮಿ ಮಾತ್ರ ತನ್ನ ಚಾಳಿಯನ್ನು ಮುಂದುವರೆಸಿದ್ದನು ಎನ್ನಲಾಗಿದೆ. ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದಂತ ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಕಿಡ್ನ್ಯಾಪ್ ಮಾಡಿಕೊಂಡು ಬಂದು, ಬೆಂಗಳೂರಿನ ಶೆಡ್ ಒಂದರಲ್ಲಿ ಕೂಡಿ ಹಾಕಿ. ಆತನ ಮೇಲೆ ಹಲ್ಲೆ ಮಾಡಲಾಗಿದೆ ಎಂಬುದಾಗಿ ತಿಳಿದು ಬಂದಿದೆ. ರಾಡ್ ನಿಂದ ಬಲವಾಗಿ ತಲೆಗೆ…

Read More

ಬೆಂಗಳೂರು: “ಆಸ್ತಿ ತೆರಿಗೆ ಪಾವತಿ ಮಾಡದವರಿಗೆ ಬೆಂಗಳೂರು ಮಹಾನಗರ ಪಾಲಿಕೆಯಿಂದ ನೀಡಲಾಗಿರುವ ಒನ್ ಟೈಮ್ ಸೆಟ್ಲಮೆಂಟ್ (ಓಟಿಎಸ್) ಅವಕಾಶ ಜುಲೈ 31ರವರೆಗೆ ಮಾತ್ರ ಇರಲಿದೆ. ಹೀಗಾಗಿ ತೆರಿಗೆ ಬಾಕಿ ಉಳಿಸಿಕೊಂಡಿರುವವರು ಕೊನೆಯ ದಿನಾಂಕದ ಒಳಗಾಗಿ ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಶಿವಕುಮಾರ್ ಅವರು ಹೇಳಿದ್ದಿಷ್ಟು: “ಚುನಾವಣೆಗಳು ನಡೆಯುತ್ತಿದ್ದ ಕಾರಣ ತೆರಿಗೆ ಪಾವತಿ ವಿಚಾರದಲ್ಲಿ ಪಾಲಿಕೆ ಒತ್ತಡ ಹಾಕಿರಲಿಲ್ಲ. ಆಸ್ತಿ ತೆರಿಗೆ ಕಟ್ಟದವರಿಗೆ ತೆರಿಗೆ ವ್ಯಾಪ್ತಿಯಲ್ಲಿ ಬರಲು ಪಾಲಿಕೆ ವತಿಯಿಂದ ನೀಡಿರುವ ಒನ್ ಟೈಮ್ ಸೆಟ್ಲಮೆಂಟ್ ಅವಕಾಶವನ್ನು ಜುಲೈ 31ಕ್ಕೆ ಅಂತಿಮಗೊಳಿಸಲಾಗುವುದು. ಈ ಅವಕಾಶವನ್ನು ಯಾವುದೇ ಕಾರಣಕ್ಕೂ ವಿಸ್ತರಣೆ ಮಾಡುವುದಿಲ್ಲ. ಈ ಅವಕಾಶದಲ್ಲಿ ದಂಡದ ಮೇಲೆ ಶೇ.50 ರಷ್ಟು ವಿನಾಯಿತಿ ನೀಡಿದ್ದು, 100%ರಷ್ಟು ಬಡ್ಡಿ ಮನ್ನಾ ಕೂಡ ಮಾಡಲಾಗಿದೆ. ಬಿಜೆಪಿ ಸರ್ಕಾರ ತರಾತುರಿಯಲ್ಲಿ ಜಾರಿಗೆ ತಂದ ಕಾಯ್ದೆ. ನಮ್ಮ ಸರ್ಕಾರ ಇದನ್ನು ಸರಿಪಡಿಸಲು ಮುಂದಾಗಿದೆ.…

Read More

ಬೆಂಗಳೂರು: ನಗರದ ಜನತೆ ಬೆಳಿಗ್ಗೆ ವಾಕ್ ಮಾಡೋದಕ್ಕಾಗಿ, ಸಂಜೆ ವಾಕಿಂಗ್ ಮಾಡೋದಕ್ಕಾಗಿ ಉಪಯೋಗವಾಗೋ ನಿಟ್ಟಿನಲ್ಲಿ, ಇನ್ಮುಂದೆ ಬೆಂಗಳೂರಿನ ಪಾರ್ಕ್ ಗಳು ಬೆಳಿಗ್ಗೆ 5 ರಿಂದ ರಾತ್ರಿ 10ರವರೆಗೆ ಓಪನ್ ಮಾಡೋದಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಸೂಚಿಸಿದ್ದಾರೆ.  ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಂತ ಅವರು, ಇನ್ನು ನಗರದಲ್ಲಿನ ಪಾಲಿಕೆ ವ್ಯಾಪ್ತಿಯ ಉದ್ಯಾನವನಗಳನ್ನು ನಿರ್ದಿಷ್ಟ ಸಮಯದಲ್ಲಿ ಮಾತ್ರ ತೆರೆಯಲಾಗುತ್ತಿದೆ. ಸಾರ್ವಜನಿಕರು ಮಧ್ಯಾಹ್ನದ ವೇಳೆಯೂ ಉದ್ಯಾನಗಳನ್ನು ತೆರೆಯ ಬೇಕು ಎಂದು ಮನವಿ ನೀಡಿದ್ದು, ಹೀಗಾಗಿ ನಗರದ ಎಲ್ಲಾ ಉದ್ಯಾನಗಳನ್ನು ಬೆಳಗ್ಗೆ 5 ಗಂಟೆಯಿಂದ ರಾತ್ರಿ 10 ರವರೆಗೆ ತೆರೆಯಲು ನಿರ್ಧರಿಸಲಾಗಿದೆ ಎಂದರು. ಕಬ್ಬನ್ ಪಾರ್ಕ್ ತೋಟಗಾರಿಕಾ ಇಲಾಖೆ ವ್ಯಾಪ್ತಿಯಲ್ಲಿದ್ದು ಈ ಸಮಯ ಇಲ್ಲಿಗೆ ಅನ್ವಯವಾಗುವುದಿಲ್ಲ. ಉದ್ಯಾನವನಗಳಲ್ಲಿ ಕಾನೂನುಬಾಹಿರ ಚಟುವಟಿಕೆ ನಿಯಂತ್ರಿಸಲು ಪೊಲೀಸರ ಗಸ್ತು, ಮಾರ್ಷಲ್ ಗಳನ್ನು ನಿಯೋಜಿಸಲಾಗುವುದು. ಇದರ ಜತೆಗೆ 22660000, 22221188 ಪಾಲಿಕೆಯ ದೂರವಾಣಿ ಸಂಖ್ಯೆಗೆ ಕರೆ ಮಾಡಿ ದೂರು ನೀಡಬಹುದು. 9480685700 ಗೆ ವಾಟ್ಸಪ್ ಮೂಲಕ ಮಾಹಿತಿ ನೀಡಬಹುದು ಎಂದು ತಿಳಿಸಿದರು. ಅನಧಿಕೃತ ಫ್ಲೆಕ್ಸ್;…

Read More

ಬೆಂಗಳೂರು: ಯಾವುದೇ ಕಾರಣಕ್ಕೂ ಬೆಂಗಳೂರಲ್ಲಿ ಆಸ್ತಿ ತೆರಿಗೆ ಪಾವತಿಗೆ ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡುವುದಿಲ್ಲ. ಜುಲೈ.31 ಕೊನೆಯ ದಿನವಾಗಿದೆ. ಅದರೊಳೆಗೆ ಆಸ್ತಿ ತೆರಿಗೆ ಪಾವತಿ ಮಾಡುವಂತೆ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಬೆಂಗಳೂರಿನ ಜನರ ಸೇವೆಗೆ ಸಂಪೂರ್ಣವಾಗಿ ಸಮರ್ಪಿಸಿಕೊಂಡಿದೆ. ನಗರ ಪಾಲಿಕೆಯು ರಸ್ತೆಗಳು, ಉದ್ಯಾನವನಗಳು ಮತ್ತು ಇತರ ಸಾರ್ವಜನಿಕ ಉಪಯುಕ್ತತೆಗಳ ನಿರ್ವಹಣೆ, ಆಸ್ತಿ ಮತ್ತು ಖಾತಾ ಸಂಬಂಧಿತ ಸೇವೆಗಳು, ಘನತ್ಯಾಜ್ಯ ನಿರ್ವಹಣೆ ಮುಂತಾದ ಸೇವೆಗಳ ಸಮರ್ಥ ವಿತರಣೆಯು ಬೆಂಗಳೂರಿಗರಿಗೆ ಪರಿಣಾಮಕಾರಿಯಾಗಿ ಸೇವೆ ಸಲ್ಲಿಸಲು ನಿರ್ಣಾಯಕವಾಗಿದೆ ಎಂದು ಅರ್ಥಮಾಡಿ ಕೊಂಡಿದೆ ಎಂದಿದ್ದಾರೆ. ಆಸ್ತಿ ತೆರಿಗೆಯು ಬಿಬಿಎಂಪಿಯ ಆದಾಯದ ಪ್ರಾಥಮಿಕ ಮೂಲವಾಗಿದೆ. ಇದು ನಮ್ಮ ನಗರದ ಕಾರ್ಯಾಚರಣೆಯನ್ನು ನೇರವಾಗಿ ಸಮರ್ಥಿಸುತ್ತದೆ. ಸುಮಾರು 4 ಲಕ್ಷ ನಾಗರಿಕರಿಂದ ಸುಮಾರು ರೂ. 1000 ಕೋಟಿಗಳಷ್ಟು ತಮ್ಮ ಆಸ್ತಿತೆರಿಗೆಯನ್ನು ಪಾವತಿಸಿರುವುದಿಲ್ಲ ಎಂದು ತಿಳಿಸಿದ್ದಾರೆ. ಕರ್ನಾಟಕ ಸರ್ಕಾರದ ಐತಿಹಾಸಿಕ ನಿರ್ಣಯದಿಂದ, ಒಂದು ಭಾರಿ…

Read More