Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಏಪ್ರಿಲ್.10, 2025ರಂದು ಮಹಾವೀರ ಜಯಂತಿಯ ಹಿನ್ನಲೆಯಲ್ಲಿ ಬೆಂಗಳೂರಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ನಿಷೇಧಿಸಿ ಬಿಬಿಎಂಪಿ ಆದೇಶಿಸಿದೆ. ಈ ಕುರಿತಂತೆ ಬಿಬಿಎಂಪಿಯ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದು, ದಿನಾಂಕ: 10-04-2025 ಗುರುವಾರದಂದು “ಮಹಾವೀರ ಜಯಂತಿ” ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ. https://kannadanewsnow.com/kannada/people-are-talking-about-slapping-cm-siddaramaiah-by-vijayendra/ https://kannadanewsnow.com/kannada/the-health-department-has-released-shocking-information-about-the-quality-of-medicines-being-sold-in-the-state/
ಮಂಡ್ಯ: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದು 20 ತಿಂಗಳಾಗಿದೆ. 50 ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಮಾಡಿರುವ ಸಿದ್ದರಾಮಯ್ಯನವರಿಗೆ ಕಪಾಳಮೋಕ್ಷ ಮಾಡಬೇಕೆಂದು ರಾಜ್ಯದ ಜನತೆ ಚರ್ಚೆ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಬಿಜೆಪಿ ಜನಾಕ್ರೋಶ ಯಾತ್ರೆಯ ಎರಡನೇ ದಿನವಾದ ಇಂದು ಇಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿದ ಕೇಂದ್ರ ಸರಕಾರಕ್ಕೆ ಕಪಾಳಮೋಕ್ಷ ಮಾಡಬೇಕೆಂದು ದುರಹಂಕಾರಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿಕೆ ಕೊಟ್ಟಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಜನವಿರೋಧಿ ಕಾಂಗ್ರೆಸ್ಸಿಗರು, ಸಿದ್ದರಾಮಯ್ಯನವರಿಗೆ ಕಪಾಳಮೋಕ್ಷ ಮಾಡಬೇಕೇ? ಕೇಂದ್ರದಲ್ಲಿ ಮೂರನೇ ಬಾರಿಗೆ ಸರಕಾರ ಬಂದು, ಬಡವರಿಗೆ ಉಜ್ವಲ ಸೇರಿ ಅನೇಕ ಜನಪರ ಯೋಜನೆಗಳನ್ನು ಕೊಟ್ಟಿರುವ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜೀ ಅವರ ಸರಕಾರಕ್ಕೆ ಕಪಾಳಮೋಕ್ಷ ಮಾಡಬೇಕೇ ಎಂದು ಅವರು ಪ್ರಶ್ನೆಯನ್ನು ಮುಂದಿಟ್ಟರು. ನಮ್ಮ ನೀರು ನಮ್ಮ ಹಕ್ಕು ಎಂದು ಮೊಸಳೆಕಣ್ಣೀರು ಸುರಿಸಿ ಪಾದಯಾತ್ರೆ ಮಾಡಿ ನಿಮ್ಮ ಮತ ಪಡೆದು ಅಧಿಕಾರಕ್ಕೆ ಬಂದ…
ಬೆಂಗಳೂರು: ರಾಜ್ಯದಲ್ಲಿ ಸಿಗುವಂತ ಕೆಲ ಅಂಗಡಿಗಳಲ್ಲಿನ ಕರಿದ ಹಸಿರು ಬಟಾಣಿ, ತುಪ್ಪ, ಖೋವಾ, ಪನ್ನೀರ್, ಸಿಹಿತಿಂಡಿ ಹಾಗೂ ಖಾರ ಮಿಕ್ಸರ್ ಗಳು ಅಸುರಕ್ಷಿತವಾಗಿದ್ದಾವೆ. ಅವು ತಿನ್ನೋದಕ್ಕೆ ಸುರಕ್ಷಿತವಲ್ಲ. ಆರೋಗ್ಯದ ಮೇಲೆ ಪರಿಣಾಮ ಬೀರುವಂತ ರಾಸಾಯನಿಕ ಅಂಶ ಪತ್ತೆಯಾಗಿದೆ ಎಂಬುದಾಗಿ ಆಹಾರ ಸುರಕ್ಷತೆ ಮತ್ತು ಔಷಧಿ ಆಡಳಿತ ಇಲಾಖೆಯು ಮಾಹಿತಿ ನೀಡಿದೆ. ಈ ಬಗ್ಗೆ ಮಾಹಿತಿ ನೀಡಿದ್ದು, ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗದ ವತಿಯಿಂದ ಫೆಬ್ರವರಿ ಮತ್ತು ಮಾರ್ಚ್ 2025ರ ಮಾಹೆಗಳಲ್ಲಿ ಈ ಕೆಳಕಂಡ ಕ್ರಮಗಳನ್ನು ವಹಿಸಲಾಗಿರುತ್ತದೆ ಎಂದಿದೆ. ಫೆಬ್ರವರಿ 2025ರ ಮಾಹೆಯಲ್ಲಿ ಒಟ್ಟಾರೆ 3698 ಆಹಾರ ಪದಾರ್ಥಗಳ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೆ ಒಳಪಡಿಸಲಾಗಿರುತ್ತದೆ. ವಿಶೇಷ ಅಭಿಯಾನದ ಮೂಲಕ ಕುಡಿಯುವ ನೀರಿನ ಬಾಟಲ್‌ಗಳಲ್ಲಿನ ನೀರಿನ 296 ಮಾದರಿಗಳನ್ನು ವಿಶ್ಲೇಷಣೆಗಾಗಿ ಸಂಗ್ರಹಿಸಿದ್ದು, ಅವುಗಳಲ್ಲಿ 255 ಮಾದರಿಗಳ ವಿಶ್ಲೇಷಣಾ ಕಾರ್ಯ ಪೂರ್ಣಗೊಂಡಿದ್ದು, 72 ಮಾದರಿಗಳು ಸುರಕ್ಷಿತ ಎಂದು, 95 ಮಾದರಿಗಳು ಅಸುರಕ್ಷಿತ ಎಂದು ಹಾಗೂ 88 ಮಾದರಿಗಳು ಕಳಪೆ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಶಾಕ್ ಎನ್ನುವಂತೆ ರಾಷ್ಟ್ರಪತಿ ಭವನ, ಸಂಸತ್ ಭವನದ ಮಾದರಿಯಲ್ಲೇ ವಿಧಾನಸೌಧಕ್ಕೂ ಭೇಟಿ ನೀಡಲು ಶುಲ್ಕವನ್ನು ನಿಗದಿಪಡಿಸಲಾಗುತ್ತಿದೆ. ವಿಧಾನಸೌಧ ಟೂರ್ ಗೈಟ್ ಜಾರಿಗೊಳಿಸಿದ್ದು, ಇದರಡಿ ವಿಧಾನಸೌಧ ವೀಕ್ಷಣೆಗೆ ಜನರು ಶುಲ್ಕವನ್ನು ಪಾವತಿಸಬೇಕಾಗುತ್ತದೆ. ನವದೆಹಲಿಯಲ್ಲಿನ ರಾಷ್ಟ್ರಪತಿ ಭವನ ಹಾಗೂ ಸಂಸತ್ ಭವನ ವೀಕ್ಷಣೆಗೆ ಶುಲ್ಕವಿದೆ. ಅದೇ ಮಾದರಿಯಲ್ಲಿ ವಿಧಾನಸೌಧ ವೀಕ್ಷಣೆಗೂ ಪ್ರವಾಸಿಗರಿಗೆ ಟೂರ್ ಗೈಟ್ ಅನ್ನು ಸರ್ಕಾರ ಏರ್ಪಡಿಸುತ್ತಿದೆ. ಸಾರ್ವಜನಿಕ ರಜಾ ದಿನಗಳಂದು ಮಾತ್ರವೇ ಈ ಟೂರ್ ಗೈಡ್ ವ್ಯವಸ್ಥೆ ಮಾಡಲಾಗುತ್ತಿದ್ದು, ಬೆಳಿಗ್ಗೆ 8 ರಿಂದ ಸಂಜೆ 6 ಗಂಟೆಯವರೆಗೆ ವಿಧಾನಸೌಧ ವೀಕ್ಷಣೆಗೆ ಪ್ರವಾಸಿಗರು ಶುಲ್ಕ ಪಾವತಿಸಿ, ವೀಕ್ಷಣೆ ಮಾಡಬಹುದಾಗಿದೆ. ಅಂದಹಾಗೇ ಸಾರ್ವಜನಿಕ ರಜಾ ದಿನಗಳಂದು ತಲಾ 30ರಂತೆ ತಂಡಗಳನ್ನು ವಿಭಜಿಸಿ, ವಿಧಾನಸೌಧ ವೀಕ್ಷಣೆಗೆ ಅವಕಾಶ ನೀಡಲಾಗುತ್ತದೆ. ಈ ಪ್ರತಿ ತಂಡದ ಮೇಲ್ವಿಚಾರಣೆಗೆ ಪ್ರವಾಸೋಧ್ಯಮ ಇಲಾಖೆಯ ಅಧಿಕಾರಿಯೊಬ್ಬರು ಇರುತ್ತಾರೆ. ಇದರ ಉಸ್ತುವಾರಿಯನ್ನಾಗಿ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರನ್ನು ನೇಮಕ ಮಾಡಲಾಗುತ್ತದೆ. ಪ್ರವಾಸಿಗರು ಅಧಿಕೃತ ಗುರುತಿನ ಚೀಟಿಯನ್ನು ಕಡ್ಡಾಯವಾಗಿ…
ಬೆಂಗಳೂರು: ಕರ್ನಾಟಕದಲ್ಲಿ ಬಳಕೆಯಾಗುತ್ತಿರುವಂತ ಬ್ರ್ಯಾಂಡೆಡ್ ಕಂಪನಿಯ ಕುಡಿಯೋ ನೀರಿನ ಬಾಟಲಿಯನಲ್ಲೂ ರಾಸಾಯನಿಕ ಪತ್ತೆಯಾಗಿದೆ. ಅಲ್ಲದೇ ನೀರು ಕುಡಿಯೋದಕ್ಕೆ ಯೋಗ್ಯವಲ್ಲ ಎಂಬುದಾಗಿ ಆರೋಗ್ಯ ಇಲಾಖೆಯ ವರದಿಯಿಂದ ಶಾಕಿಂಗ್ ಮಾಹಿತಿ ಬಹಿರಂಗಗೊಂಡಿದೆ. ಈ ಸಂಬಂಧ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯಿಂದ ಬಾಟಲಿಯ ನೀರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ ಆಘಾತಕಾರಿ ಮಾಹಿತಿ ಲ್ಯಾಬ್ ಪರೀಕ್ಷೆಯಲ್ಲಿ ಹೊರಬಿದ್ದಿದೆ. ವಿಶೇಷ ಅಭಿಯಾನದ ಮೂಲಕ ಕುಡಿಯುವ ನೀರಿನ ಬಾಟಲ್‌ಗಳಲ್ಲಿನ ನೀರಿನ 296 ಮಾದರಿಗಳನ್ನು ವಿಶ್ಲೇಷಣೆಗಾಗಿ ಸಂಗ್ರಹಿಸಿದ್ದು, ಅವುಗಳಲ್ಲಿ 255 ಮಾದರಿಗಳ ವಿಶ್ಲೇಷಣಾ ಕಾರ್ಯ ಪೂರ್ಣಗೊಂಡಿದ್ದು, 72 ಮಾದರಿಗಳು ಸುರಕ್ಷಿತ ಎಂದು, 95 ಮಾದರಿಗಳು ಅಸುರಕ್ಷಿತ ಎಂದು ಹಾಗೂ 88 ಮಾದರಿಗಳು ಕಳಪೆ ಗುಣಮಟ್ಟದ್ದು ಎಂದು ವರದಿಯಾಗಿರುತ್ತವೆ. ಉಳಿದ ಮಾದರಿಗಳ ವಿಶ್ಲೇಷಣಾ ಕಾರ್ಯವು ಪ್ರಗತಿಯಲ್ಲಿರುತ್ತದೆ ಎಂಬುದಾಗಿ ಆಹಾರ ಸುರಕ್ಷತಾ ಇಲಾಖೆ ತಿಳಿಸಿದೆ. ಯಾವೆಲ್ಲಾ ನೀರಿನ ಬಾಟಲಿಯಲ್ಲಿ ರಾಸಾಯನಿಕ ಪತ್ತೆ.? ಕಿಂಗ್ ಸಿಪ್ ಆಕ್ವಾ ಲಿಂಕ್ ಗೋಕುಲ್ ಜಲ್ ತೇಜೋ ಅಕ್ವಾ ನೈಸರ್ಗಿಕ ಕುಡಿಯುವ ನೀರು ಆಕ್ಸಿ ಗ್ರಾಂಡ್…
ಬೆಂಗಳೂರು:ಫೀಡಂಪಾರ್ಕ್ ನಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಪೆಟ್ರೋಲ್, ಡಿಸೇಲ್, ಎಲ್.ಪಿ.ಜಿ.ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಹೆಚ್.ಎಸ್.ಮಂಜುನಾಥ್ ಗೌಡರವರ ನೇತೃತ್ವದಲ್ಲಿ ವಿನೂತನವಾಗಿ ಎತ್ತಿನಗಾಡಿ ಮೂಲಕ ಬೃಹತ್ ಪ್ರತಿಭಟನೆ ಜರುಗಿತು. ಯುವ ಕಾಂಗ್ರೆಸ್ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ಹೆಚ್.ಎಸ್.ಮಂಜುನಾಥ್ ಗೌಡ ರವರು ಮಾತನಾಡಿ ಕೆಪಿಸಿಸಿ ಅಧ್ಯಕ್ಷರು, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರ ಆದೇಶ ಮೇರೆಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರ ಮಾರ್ಗದರ್ಶನದಲ್ಲಿ ಕೇಂದ್ರ ಬಿಜೆಪಿ ಸರ್ಕರದ ಬೃಹತ್ ಪ್ರತಿಭಟನೆ ಮಾಡಲಾಗುತ್ತಿದೆ. ಕೇಂದ್ರ ಬಿಜೆಪಿ ಸರ್ಕಾರ ದೇಶದ 140ಜನರ ಹೊಟ್ಟೆಯ ಮೇಲೆ ಬರೆ ಏಳೆದಿದ್ದಾರೆ, ಪೆಟ್ರೋಲ್, ಡಿಸೇಲ್ ಮತ್ತು ಎಲ್.ಪಿಜಿ.ಗ್ಯಾಸ್ ಬೆಲೆ ಏರಿಕೆಯಿಂದ ಬಡ ಮತ್ತು ಮಧ್ಯಮ ವರ್ಗದವರು ಜೀವನ ಸಂಕಷ್ಟಕ್ಕೆ ತಳ್ಳಿದ್ದಾರೆ. ಉದ್ಯೋಗವಿಲ್ಲ, ನಿರುದ್ಯೋಗ ಸಮಸ್ಯೆ ತಲೆದೋರಿದೆ, ಇದರ ಜೊತೆಯಲ್ಲಿ ಬೆಲೆ ಏರಿಕೆಯಿಂದ ಜನರ ಜೀವನ ನಡೆಸುವುದು ಹೇಗೆ…. ಪ್ರಧಾನಿ ನರೇಂದ್ರಮೋದಿರವರ 11ವರ್ಷಗಳ ದುರಾಡಳಿತದಿಂದ ದೇಶದ ಆರ್ಥಿಕ ಪರಿಸ್ಥಿತಿ ಕುಸಿದಿದೆ, ಅಚ್ಚೇದೀನ್ ಎಂದರೆ ಇದೇನಾ….? ಜನಸಾಮಾನ್ಯರ ನೋವಿಗೆ, ಸ್ಪಂದಿಸುವ ಕಾರ್ಯ ಯುವ ಕಾಂಗ್ರೆಸ್ ಮಾಡುತ್ತಿದೆ,…
ಮಂಡ್ಯ: ಸಚಿವ ಚೆಲುವರಾಯ ಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಆತ ನನ್ನನ್ನು ಸಿಎಂ ಮಾಡಿದ ಎನ್ನುವುದು ಬಹುದೊಡ್ಡ ಜೋಕ್. ಶಾಸಕರು ನನ್ನನ್ನು ಮುಖ್ಯಮಂತ್ರಿ ಮಾಡಿದ್ದು ಎಂಬುದನ್ನು ಆ ವ್ಯಕ್ತಿ ಮರೆಯಬಾರದು ಎಂದು ಕುಟುಕಿದರು. ಚೆಲುವರಾಯಸ್ವಾಮಿ ಹೇಳಿಕೆಯ ಬಗ್ಗೆ ಸುದ್ದಿಗಾರರು ಕೇಳಿದ ಪ್ರತಿಕ್ರಿಯೆಗೆ ಖಡಕ್ ಉತ್ತರ ಕೊಟ್ಟ ಕೇಂದ್ರ ಸಚಿವರು; ನನ್ನ ಜತೆ ಶಾಸಕರು ಇದ್ದರು ಎಂಬುದು ಆಗ ನನ್ನ ಜತೆಯಲ್ಲಿಯೇ ಇದ್ದ ಆ ವ್ಯಕ್ತಿಗೂ ಗೊತ್ತು. ಈತನ ಮುಖ ನೋಡಿಕೊಂಡು ಶಾಸಕರು ಬಂದರಾ? ನನ್ನ ನಂಬಿಕೆ, ವಿಶ್ವಾಸದಿಂದ ಬಂದರು. ಎಲ್ಲವೂ ಈತನಿಗೆ ಗೊತ್ತಿಲ್ಲವೇ? ಎಂದು ತಿರುಗೇಟು ಕೊಟ್ಟರು. ಆ ವ್ಯಕ್ತಿ ನೂರಕ್ಕೆ ನೂರರಷ್ಟು ಜೋಕರ್. ಜೋಕರ್ ಸಂಸ್ಕೃತಿ ಶುರುವಾಗಿದ್ದು ಕಾಂಗ್ರೆಸ್ ಪಕ್ಷದಿಂದ ಎನ್ನುವುದನ್ನು ಆ ವ್ಯಕ್ತಿ ಮರೆಯಬಾರದು. ಅವರು ಎಲ್ಲಿದ್ದರು? ಆಮೇಲೆ ಎಲ್ಲೆಲ್ಲಿ ಹೋದರು ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಹೀಗಾಗಿ ಆ ವ್ಯಕ್ತಿಗೆ ಉತ್ತರ ಕೊಡಬೇಕಿಲ್ಲ ಎಂದು ಸಚಿವರು ಹೆಸರು ಹೇಳದೆಯೇ ಟಾಂಗ್…
ಬೆಂಗಳೂರು: ಹಾವನೂರು ಆಯೋಗದ ಅಧ್ಯಕ್ಷರಾಗಿ, ಹಿಂದುಳಿದ ವರ್ಗಗಗಳ ಹರಿಹಾರ ಎಂಬುದಾಗಿಯೇ ಹೆಸರು ಗಳಿಸಿದ್ದಂತ ಹ ಎಲ್ ಜಿ ಹಾವನೂರು ಅವರ ಪತ್ನಿ ಸುಶೀಲಾ ಹಾವನೂರು ಇಂದು ನಿಧನರಾಗಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಸಂತಾಪ ಪೋಸ್ಟ್ ಮಾಡಿರುವಂತ ಸಿಎಂ ಸಿದ್ಧರಾಮಯ್ಯ ಅವರು, ಹಾವನೂರು ಆಯೋಗದ ಅಧ್ಯಕ್ಷರಾಗಿದ್ದ ಎಲ್.ಜಿ. ಹಾವನೂರು ಅವರ ಧರ್ಮಪತ್ನಿ ಸುಶೀಲಾ ಹಾವನೂರು ಅವರ ನಿಧನದ ವಾರ್ತೆ ನೋವುಂಟು ಮಾಡಿದೆ ಎಂದಿದ್ದಾರೆ. ತಮ್ಮ ಪತಿಯ ಸಾಮಾಜಿಕ ನ್ಯಾಯದ ಆಶಯಕ್ಕೆ ಒತ್ತಾಸೆಯಾಗಿದ್ದ ಸುಶೀಲಾ ಅವರು, ಎಂದಿಗೂ ಪ್ರಚಾರ ಬಯಸದೆ ಎಲೆಮರೆಯ ಕಾಯಂತೆ ಸಮಾಜಕ್ಕೆ ಕೈಲಾದ ಸೇವೆ ಸಲ್ಲಿಸಿದವರು ಎಂದು ಹೇಳಿದ್ದಾರೆ. ಮೃತ ಎಲ್ ಜಿ ಹಾವನೂರು ಅವರ ಪತ್ನಿ ಸುಶೀಲಾ ಹಾವನೂರು ಅವರ ಆತ್ಮಕ್ಕೆ ಶಾಂತಿ ದೊರಕಲೆಂದು ಪ್ರಾರ್ಥಿಸುತ್ತೇನೆ. ಸುಶೀಲಮ್ಮನವರ ದುಃಖತಪ್ತ ಕುಟುಂಬಕ್ಕೆ ನನ್ನ ಸಂತಾಪಗಳನ್ನು ತಿಳಿಸಿದ್ದಾರೆ. https://twitter.com/siddaramaiah/status/1909540750196666474 https://kannadanewsnow.com/kannada/rs-60000-70000-crore-has-been-imposed-on-people-to-arrange-money-for-guarantees-taxes-opposition-leader-r-ashoka/ https://kannadanewsnow.com/kannada/the-health-department-has-released-shocking-information-about-the-quality-of-medicines-being-sold-in-the-state/
ಬೆಂಗಳೂರು/ಮಂಡ್ಯ: ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳಿಗೆ ಹಣ ಹೊಂದಿಸಲು ಜನರ ಮೇಲೆ 60-70 ಸಾವಿರ ಕೋಟಿ ರೂ. ತೆರಿಗೆ ವಿಧಿಸಿದೆ. ಅಂದಮೇಲೆ ಜನರಿಗೆ ಇವರು ಕೊಟ್ಟಿದ್ದೇನು? ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಪ್ರಶ್ನೆ ಮಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಚುನಾವಣೆಗೆ ಮುನ್ನ ಗ್ಯಾರಂಟಿಗಳ ಹಣ ಬಿಡುಗಡೆ ಮಾಡಿ ಜನರಿಗೆ ಆಮಿಷ ಒಡ್ಡುತ್ತಿದೆ. ಹಾಲು, ಮದ್ಯ, ಆಸ್ಪತ್ರೆ ಶುಲ್ಕ, ಬಸ್ ಟಿಕೆಟ್ ದರ, ಮಾರ್ಗಸೂಚಿ ದರ ಎಲ್ಲ ಸೇರಿದರೆ ಜನರ ಮೇಲೆ 60-70 ಸಾವಿರ ಕೋಟಿ ರೂ. ತೆರಿಗೆಯನ್ನು ಹಾಕಲಾಗಿದೆ. ಗ್ಯಾರಂಟಿಗಳ 65 ಸಾವಿರ ಕೋಟಿ ರೂ. ಹೊಂದಿಸಲು ಹೀಗೆ ತೆರಿಗೆ ವಸೂಲಿ ಮಾಡಲಾಗುತ್ತಿದೆ. ಹಾಗಾದರೆ ಇವರು ಜನರಿಗೆ ಏನು ಕೊಟ್ಟಿದ್ದಾರೆ? ಎಂದು ಪ್ರಶ್ನೆ ಮಾಡಿದರು. ಅಡುಗೆ ಅನಿಲಕ್ಕೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅತಿ ಹೆಚ್ಚು ಸಹಾಯಧನ ನೀಡುತ್ತಿದೆ. ಅತಿ ಕನಿಷ್ಠ ಮಟ್ಟದಲ್ಲಿ ಕೇಂದ್ರ ಸರ್ಕಾರ ದರ ಏರಿಕೆ ಮಾಡಿದೆ. ಕಾಂಗ್ರೆಸ್‌ನವರು ಬೇಕಿದ್ದರೆ ದೆಹಲಿಯಲ್ಲಿ ಪ್ರತಿಭಟನೆ ಮಾಡಲಿ. ಇಡೀ ದೇಶದಲ್ಲಿ ಅಡುಗೆ…
ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿರುವುದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹರ್ಷ ವ್ಯಕ್ತಪಡಿಸಿದ್ದಾರೆ. ಉಡುಪಿ ಜಿಲ್ಲೆ ಶೈಕ್ಷಣಿಕವಾಗಿ ಸಾಕಷ್ಟು ಮುಂದಿದ್ದು, ಜಿಲ್ಲೆಯ ಮಕ್ಕಳ ಸಾಧನೆ ನಿಜಕ್ಕೂ ಮೆಚ್ಚುವಂಥದ್ದು. ಮಕ್ಕಳ ಭವಿಷ್ಯ ಉಜ್ವಲವಾಗಲಿ. ಪ್ರಥಮ ಸ್ಥಾನ ಪಡೆಯಲು ಶ್ರಮಿಸಿದ ಸಂಬಂಧಿಸಿದ ಅಧಿಕಾರಿಗಳು ಹಾಗೂ ಪೋಷಕರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಸಚಿವರು ತಿಳಿಸಿದ್ದಾರೆ. ದ್ವಿತೀಯ PUC ಪರೀಕ್ಷೆ ರಿಸಲ್ಟ್: ಪಾಸಾದವರಿಗೆ ವಿಶ್ ಮಾಡಿ, ಫೇಲಾದವರಿಗೆ ಧೈರ್ಯ ತುಂಬಿದ ಸಿಎಂ ಸಿದ್ಧರಾಮಯ್ಯ ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆಗಳು. ಪರಿಶ್ರಮ ಮತ್ತು ನಿರಂತರ ಅಭ್ಯಾಸ ನಿಮ್ಮನ್ನು ಯಶಸ್ಸಿನ ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿ ಎಂದು ಸಿಎಂ ಸಿದ್ಧರಾಮಯ್ಯ ಹಾರೈಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಮಕ್ಕಳು ನಿರಾಶೆ, ಆತಂಕಕ್ಕೆ ಒಳಗಾಗಿ ದುಡುಕಿನ ನಿರ್ಧಾರ…