Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನ ಅಡವಿಟ್ಟು ಅಕ್ರಮ ನಡೆಸಿದ ಪ್ರಕರಣ ಸಂಬಂಧ ಬ್ಯಾಂಕ್ ನ ಅಧ್ಯಕ್ಷ ಆರ್.ಎಂ ಮಂಜುನಆಥ ಗೌಡ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರಿನ ಅಪೆಕ್ಸ್ ಬ್ಯಾಂಕ್ ನ ಅತಿಥಿ ಗೃಹದಲ್ಲಿದ್ದಂತ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ ಮಂಜುನಾಥ ಗೌಡ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ. ಇನ್ನೂ ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನ ಅಡವಿಟ್ಟ ಪ್ರಕರಣ ಸಂಬಂಧ ಮತ್ತೊಬ್ಬ ಸಿಬ್ಬಂದಿಯನ್ನೂ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿರುವುದಾಗಿ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ. ಅಂದಹಾಗೇ 2014 ರಿಂದ 15ರಲ್ಲಿ ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ಬರೋಬ್ಬರಿ 62.77 ಕೋಟಿ ಸಾಲ ಪಡೆಯಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಬೆಂಗಳೂರು, ಶಿವಮೊಗ್ಗ ಸೇರಿದಂತೆ ಐದು ಕಡೆಯಲ್ಲಿ ದಾಳಿ ನಡೆಸಿದ್ದಾರೆ. ಈ ಪ್ರಕಣದಲ್ಲಿ ಅಕ್ರಮ ನಡೆದಾಗ ಬ್ಯಾಂಕ್ ನ…
ಬೆಂಗಳೂರು: ಇಂದು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ಈ ಬೆನ್ನಲ್ಲೇ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ಕ್ಕೆ ಪುನರಾವರ್ತಿತ ಮತ್ತು ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳಿಗೆ ಅವಕಾಶವನ್ನು ನೀಡಲಾಗಿದೆ. ಆ ಬಗ್ಗೆ ಮಾಹಿತಿ ಮುಂದಿದೆ ಓದಿ. ಈ ಬಗ್ಗೆ ಶಾಲಾ ಪರೀಕ್ಷೆ ಮತ್ತು ಮೌಲ್ಯ ಮಾಪನ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು ಪರೀಕ್ಷೆ-2ಕ್ಕೆ ಪರೀಕ್ಷಾ ಶುಲ್ಕ ಪಾವತಿಸಲು ಹಾಗೂ ಪುನರಾವರ್ತಿತ ಅಪೂರ್ಣ ಹಾಗೂ ಫಲಿತಾಂಶ ಉತ್ತಮ ಪಡಿಸಿಕೊಳ್ಳುವ ವಿದ್ಯಾರ್ಥಿಗಳು ಮಾಹಿತಿಯನ್ನು ಪ್ರಾಂಶುಪಾಲರು ಪರೀಕ್ಷಾ ತಂತ್ರಾಂಶದಲ್ಲಿ ಇಂದೀಕರಿಸಲು ದಂಡ ರಹಿತ ಕೊನೆಯ ದಿನಾಂಕ 08-04-2025ರಿಂದ 15-04-2025 ಆಗಿರುತ್ತದೆ. ದಂಡ ಸಹಿತ ಕೊನೆಯ ದಿನಾಂಕ 16-04-2025 ರಿಂದ 17-04-2025 ಆಗಿದೆ. ಪ್ರಾಂಶುಪಾಲರು ಪರೀಕ್ಷಾ ಶುಲ್ಕವನ್ನು ಒಂದೇ ಕಂತಿನಲ್ಲಿ ಸಂದಾಯ ಮಾಡಬೇಕಾದ ಕೊನೆಯ ದಿನಾಂಕ ದಂಡ ರಹಿತ 16-04-2025 ಆಗಿದ್ದರೇ, ದಂಡ ಸಹಿತ 19-04-2025 ಆಗಿದೆ. ಪ್ರಾಂಶುಪಾಲರು ಪರೀಕ್ಷಾ ಅರ್ಜಿಗಳನ್ನು ಮೂಲ ಚಲನ್ ಸಹಿತ ಜಿಲ್ಲಾ ಉಪ ನಿರ್ದೇಶಕರ ಕಚೇರಿಗೆ ಕಡ್ಡಾಯವಾಗಿ ಸಲ್ಲಿಸಲು ದಿನಾಂಕ 16-04-2025ರಿಂದ 19-04-2025…
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ಶೇ.93.90ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಉಡುಪಿ ಪ್ರಥಮ ಸ್ಥಾನ ಗಳಿಸಿದರೇ, ಶೇ.73.45ರಷ್ಟು ಫಲಿತಾಂಶ ಪಡೆಯುವ ಮೂಲಕ ಯಾದಗಿರಿ ಕೊನೆಯ ಸ್ಥಾನವನ್ನು ಪಡೆದುಕೊಂಡಿದೆ. ಇದೀಗ ವಿದ್ಯಾರ್ಥಿಗಳು ಉತ್ತರ ಪತ್ರಿಕೆ ಸ್ಕ್ಟಾನ್ಡ್ ಪ್ರತಿ, ಮರು ಮೌಲ್ಯ ಮಾಪನದ ಕುರಿತು ಮಾಹಿತಿ ಬಿಡುಗಡೆ ಮಾಡಿದ್ದು, ಆ ಮಾಹಿತಿ ಮುಂದಿದೆ ಓದಿ. 2025ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ವಿದ್ಯಾರ್ಥಿಗಳ ಫಲಿತಾಂಶದ ಪಟ್ಟಿ KSEABಯ ಪಿಯು ಪರೀಕ್ಷಾ ಪೋರ್ಟಲ್ ಲಾಗಿನ್ ಮೂಲಕ ಆಯಾ ಕಾಲೇಜುಗಳಿಗೆ ಕಳುಹಿಸಲಾಗಿರುತ್ತದೆ. ಉತ್ತರ ಪತ್ರಿಕೆಯ ಸ್ಕ್ಯಾನಿಂಗ್ ಪ್ರತಿ ಹಾಗೂ ಮರು ಮೌಲ್ಯ ಮಾಪನ ಶುಲ್ಕವನ್ನು ಪಾವತಿಸಲು ಆನ್ ಲೈನ್ ಮತ್ತು ಆಫ್ ಲೈನ್ ನಲ್ಲಿ ಚಲನ್ ಮುಖಾಂತರ ಪಾವತಿಸಲು ಅವಕಾಶವಿರುತ್ತದೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯ ಮಾಪನ ಇಲಾಖೆ ತಿಳಿಸಿದೆ. ಉತ್ತರ ಪತ್ರಿಕೆಯ ಸ್ಕ್ಯಾನ್ಡ್ ಪ್ರತಿಗಾಗಿ ಅರ್ಜಿ ಸಲ್ಲಿಸಲು ದಿನಾಂಕ 08-04-2025ರಿಂದ 13-04-2025ರವರೆಗೆ ಅವಕಾಶ ನೀಡಿದೆ. ಉತ್ತರ ಪತ್ರಿಕೆಯ ಸ್ಕ್ಯಾನ್ಡ್ ಪ್ರತಿ ಡೌನ್…
ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಉಡುಪಿ ಜಿಲ್ಲೆಗೆ ಪ್ರಥಮವನ್ನು ಪಡೆದುಕೊಂಡಿದ್ದರೇ, ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಪಡೆದುಕೊಂಡಿದೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದಂತ ಶಾಲಾ ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ ಅವರು, ವಾಣಿಜ್ಯ ವಿಭಾಿ ಶೇ.76.07ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಲಾ ವಿಭಾಗದಲ್ಲಿ ಸಂಜನಾ ಬಾಯಿ ಮೊದಲ ರ್ಯಾಂಕ್ ಪಡೆದಿದ್ದಾರೆ. ಬಳ್ಳಾರಿ ಜಿಲ್ಲೆ ಪಿಯು ಕಾಲೇಜಿನ ವಿದ್ಯಾರ್ಥಿನಿ ಆಗಿದ್ದಾರೆ ಎಂದರು. ರಾಮನಗ 69.71, ಕೊಪ್ಪಳ 67.20, ಬಳ್ಳಾರಿ 64.41, ಚಿತ್ರದುರ್ಗ 59.87, ಕೋಲಾರ 72.45, ಬೀದರ್ 67.31, ಬೆಳಗಾವಿ 65.37ರಷ್ಟು ಫಲಿತಾಂಶ ಬಂದಿದೆ ಎಂದರು. ಕರ್ನಾಟಕ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್ಇಎಬಿ) ಮಂಗಳವಾರ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ. ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳು ತಮ್ಮ ಕರ್ನಾಟಕ ದ್ವಿತೀಯ ಪಿಯುಸಿ ಸ್ಕೋರ್ ಕಾರ್ಡ್ ಗಳನ್ನು ಕೆಎಸ್ ಇಎಬಿಯ ಅಧಿಕೃತ ವೆಬ್ ಸೈಟ್ ನಲ್ಲಿ karresults.nic.in ಮತ್ತು kseab.karnataka.gov.in ಪರಿಶೀಲಿಸಬಹುದು. ಮಾರ್ಚ್ 1…
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಕೆಲ ಪ್ರದೇಶಗಳಲ್ಲಿ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ, ನಾಳೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಬಗ್ಗೆ ಶಿವಮೊಗ್ಗ ಜಿಲ್ಲೆಯ ಸಾಗರದ ಮೆಸ್ಕಾಂ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 08-04-2025ರಂದು ಸಾಗರ ನಗರ ಉಪ ವಿಭಾಗದ ಘಟಕ-1ರಲ್ಲಿ ತುರ್ತು ವಿದ್ಯುತ್ ನಿರ್ವಹಣಾ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಈ ಕೆಳಗಿನ ಸಾಗರ ತಾಲ್ಲೂಕಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದಿದೆ. ನಾಳೆ ಸಾಗರ ತಾಲ್ಲೂಕಿನ ಈ ಏರಿಯಾಗಳಲ್ಲಿ ಕರೆಂಟ್ ಇರಲ್ಲ ನಾಳೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಬಸವನಹೊಳೆ, ಜಂಬಗಾರು, ಶಿವಮೊಗ್ಗ ರಸ್ತೆ, ಹೆಚ್.ಕೆ ಹೆಚ್ ಲೇಔಟ್, ತ್ಯಾಗರ್ತಿ ಕ್ರಾಸ್ ನಲ್ಲಿ ಪವರ್ ಕಟ್ ಆಗಲಿದೆ. ಇದಲ್ಲದೇ ಜಂಬಗಾರು ಮಹಿಳಾ ಹಾಸ್ಟೆಲ್ ಬಳಿ ಮತ್ತು ಜಂಬಗಾರು ಆಶ್ರಯ ಲೇಔಟ್ ಹತ್ತಿರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಮನವಿ ಮಾಡಿದೆ. ವರದಿ: ವಸಂತ ಬಿ ಈಶ್ವರಗೆರೆ https://kannadanewsnow.com/kannada/overseas-job-fair-to-be-held-soon-minister-dr-sharanprakash-patil/…
ಬೆಂಗಳೂರು: ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲು ಸರ್ಕಾರದ ವತಿಯಿಂದ ರಾಜ್ಯದ ವಿವಿಧೆಡೆ ಉದ್ಯೋಗ ಮೇಳಗಳನ್ನು ಆಯೋಜಿಸುವುದರ ಜತೆಗೆ ಆರೋಗ್ಯ ವೃತ್ತಿಪರರಿಗಾಗಿ ಸಾಗರೋತ್ತರ ಉದ್ಯೋಗ ಮೇಳ ಆಯೋಜಿಸಲು ನಿರ್ಧರಿಸಲಾಗಿದೆ. “ಜರ್ಮನಿ, ಜಪಾನ್, ಇಟಲಿ ಮತ್ತಿತರ ರಾಷ್ಟ್ರಗಳಿಂದ ನರ್ಸ್, ಅರೆ ವೈದ್ಯಕೀಯ ಮುಂತಾದ ಆರೋಗ್ಯ ವೃತ್ತಿಪರರಿಗೆ ಸಾಕಷ್ಟು ಬೇಡಿಕೆ ಇದೆ. ಹೀಗಾಗಿ ಮುಂದಿನ ಮೂರು ತಿಂಗಳಲ್ಲಿ ಈ ಆರೋಗ್ಯ ವೃತ್ತಿಪರರಿಗಾಗಿಯೇ ಸಾಗರೋತ್ತರ ಉದ್ಯೋಗ ಮೇಳವನ್ನು ಕೌಶಲ್ಯಾಭಿವೃದ್ಧಿ ಇಲಾಖೆಯಿಂದ ಆಯೋಜಿಸಲಾಗುವುದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಎಂದಿದ್ದಾರೆ. “ರಾಜ್ಯದ ಆರೋಗ್ಯ ವೃತ್ತಿಪರರಿಗೆ ವಿದೇಶಗಳಲ್ಲಿ ಸಾಕಷ್ಟು ಬೇಡಿಕೆ ಇದ್ದರೂ ಭಾಷೆ ಎಂಬುದು ಅವರಿಗೆ ಅಡ್ಡಿಯಾಗುತ್ತಿದೆ. ಹೀಗಾಗಿ ರಾಜ್ಯದ ನರ್ಸಿಂಗ್ ಕಾಲೇಜುಗಳಲ್ಲಿ ಜರ್ಮನ್ ಮತ್ತು ಜಾಪಾನೀಸ್ ಭಾಷೆಯನ್ನು ಪರಿಚಯಿಸಲು ಕೂಡ ನಿರ್ಧರಿಸಲಾಗಿದೆ. ಆ ಮೂಲಕ ಭಾಷಾ ಸಮಸ್ಯೆಯನ್ನು ಬಗೆಹರಿಸಲಾಗುವುದು” ಎಂದು ತಿಳಿಸಿದ್ದಾರೆ. ಕೌಶಲ್ಯಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ರಾಜ್ಯ ಸರ್ಕಾರದ ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ…
ಬೆಂಗಳೂರು: ದೇಶದಲ್ಲೇ ಸಕ್ಕರೆ ಉತ್ಪಾನೆಯಲ್ಲಿ ಕರ್ನಾಟಕವು ಮೂರನೇ ಸ್ಥಾವನ್ನು ಪಡೆದಿರುವುದಾಗಿ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ. ರಾಜ್ಯವು ಈ ಬಾರಿ ಸಕ್ಕರೆ ಉತ್ಪಾದನೆಯಲ್ಲಿ ದೇಶದಲ್ಲೇ ಮೂರನೇ ಸ್ಥಾನದಲ್ಲಿದೆ. ಮಳೆ ಕೊರತೆಯಿದ್ದರೂ ಉತ್ಪಾದನೆ ಹೆಚ್ಚಾಗಿದ್ದು ವಿಶೇಷ. ಮುಂಬರುವ ಹಂಗಾಮಿನಲ್ಲಿ 6 ಲಕ್ಷ ಮೆಟ್ರಿಕ್ ಟನ್ ಸಕ್ಕರೆ ಉತ್ಪಾದಿಸುವ ಗುರಿಯಿದ್ದು, ಹೊಸ ಆವಿಷ್ಕಾರಗಳ ಕುರಿತು ತಜ್ಞರು ತಾಂತ್ರಿಕ ಸಮಾವೇಶ ನಡೆಸಿ ಮಾರ್ಗದರ್ಶನ ಮಾಡಿದ್ದಾರೆ ಎಂದು ಸಕ್ಕರೆ ಸಚಿವರಾದ ಶಿವಾನಂದ ಪಾಟೀಲ್ ತಿಳಿಸಿದ್ದಾರೆ. https://twitter.com/KarnatakaVarthe/status/1909235235600089321 https://kannadanewsnow.com/kannada/state-govt-issues-guidelines-for-regularisation-of-illegal-buildings-heres-the-complete-information/ https://kannadanewsnow.com/kannada/big-news-state-government-issues-important-announcement-on-grihalakshmi-scheme/
ಬೆಂಗಳೂರು: ರಾಜ್ಯ ಸರ್ಕಾರದಿಂದ ಅಕ್ರಮ ಕಟ್ಟಡಗಳನ್ನು ಸಕ್ರಮ ಮಾಡುವ ನಿಟ್ಟಿನಲ್ಲಿ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಈ ಮೂಲಕ ಅಕ್ರಮ ಕಟ್ಟಡ ಮಾಲೀಕರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಸಂಬಂಧ ಗೆಜೆಟ್ ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ)ಅಧಿನಿಯಮ, 2025 (2025ರ ಏಪ್ರಿಲ್ ತಿಂಗಳ 05ನೇ ದಿನಾಂಕದಂದು ರಾಜ್ಯಪಾಲರಿಂದ ಅನುಮೋದನೆಯನ್ನು ಪಡೆಯಲಾಗಿದೆ) ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ನ್ನು ಮತ್ತಷ್ಟ ತಿದ್ದುಪಡಿ ಮಾಡಲು ಒಂದು ಅಧಿನಿಯಮ. ಇಲ್ಲಿ ಇನ್ನುಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ನ್ನು (1993ರ ಕರ್ನಾಟಕ ಅಧಿನಿಯಮ ಸಂಖ್ಯೆ 14) ಮತ್ತಷ್ಟು ತಿದ್ದುಪಡಿ ಮಾಡುವುದು ಯುಕ್ತವಾಗಿರುವುದರಿಂದ; ಇದು ಭಾರತ ಗಣರಾಜ್ಯದ ಎಪ್ಪತ್ತಾರನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನ ಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ,- 1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ.- (1) ಈ ಅಧಿನಿಯಮವನ್ನು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್…
ಮಂಡ್ಯ: ಜಿಲ್ಲೆಯ ವಿಸಿ ನಾಲೆಗೆ ಕಾರು ಬಿದ್ದು ಕೆಲ ದಿನಗಳ ಹಿಂದಷ್ಟೇ ಪ್ರಾಣಹಾನಿ ಉಂಟಾಗಿತ್ತು. ಇಂದು ವಿಸಿ ನಾಲೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ದುರ್ಮರಣ ಹೊಂದಿರುವಂತ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ವಿಸಿ ನಾಲೆಯಲ್ಲಿ ಮುಳುಗಿ ಮೈಸೂರಿನ ಗೌಸಿಯಾ ನಗರದ ನಿವಾಸಿಗಳಾದಂತ 17 ವರ್ಷದ ಸೋನು, 16 ವರ್ಷದ ಸಿಮ್ರಾನ್ ಹಾಗೂ 9 ವರ್ಷದ ಸಿದ್ದೇಶ್ ಎಂಬುವರು ಧಾರುಣವಾಗಿ ಸಾವನ್ನಪ್ಪಿದ್ದಾರೆ. ಚಿಕ್ಕಾಯರಹಳ್ಳಿ ಜಾತ್ರೆಗೆ ಮೈಸೂರಿನ ಗೌಸಿಯಾ ನಗರದಿಂದ ಆಗಮಿಸಿದ್ದರು. ಸಮೀಪದ ವಿಸಿ ಕಾಲುವೆಗೆ ಇಳಿದಂತ ವೇಳೆಯಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದವರನ್ನು ರಕ್ಷಿಸಲು ಹೋಗಿ ಮೂವರು ವಿಸಿ ನಾಲೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. https://kannadanewsnow.com/kannada/big-news-state-government-issues-important-announcement-on-grihalakshmi-scheme/ https://kannadanewsnow.com/kannada/breaking-central-government-hikes-excise-duty-on-petrol-diesel-by-rs-2-each/
ಬೆಂಗಳೂರು: ಬೆಂಗಳೂರಿನ ರಸ್ತೆಗಳ ಗುಣಮಟ್ಟ ಹೆಚ್ಚಿಸಲು ನಗರದ 1600 ಕಿ.ಮೀ ನಷ್ಟು ಬ್ಲಾಕ್ ಮತ್ತು ವೈಟ್ ಟಾಪಿಂಗ್ ಮಾಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ನಗರದ 10 ವಿಧಾನಸಭಾ ಕ್ಷೇತ್ರಗಳಲ್ಲಿ ಬೆಂಗಲೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಅವರು ರಸ್ತೆಗಳ ಡಾಂಬರೀಕರಣ ಕಾಮಗಾರಿಗಳ ಭೂಮಿ ಪೂಜೆಯನ್ನು ಸೋಮವಾರ ನೆರವೇರಿಸಿದರು. ಈ ವೇಳೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, “ಬೆಂಗಳೂರು ನಗರದ ವಿವಿಧೆಡೆ ಶಂಕುಸ್ಥಾಪನೆ ನೆರವೇರಿಸಿದ್ದೇನೆ. ಸೋಮವಾರ ಒಂದೇ ದಿನ 10 ಕಡೆಗಳಲ್ಲಿ ಬ್ಲಾಕ್ ಟಾಪಿಂಗ್ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಬೆಂಗಳೂರು ನಗರದೊಳಗೆ ಒಟ್ಟು 1600 ಕಿ.ಮೀ ರಸ್ತೆಗೆ ವೈಟ್ ಟಾಪಿಂಗ್ ಹಾಗೂ ಬ್ಲಾಕ್ ಟಾಪಿಂಗ್ ಕಾರ್ಯಕ್ರಮ ರೂಪಿಸಿದ್ದೇವೆ. ಈ ಹಿಂದೆ 196 ಕಿ.ಮೀ ಉದ್ದದ ರಸ್ತೆ ಕಾಮಗಾರಿ ಕೈಗೊತ್ತಿಕೊಂಡಿದ್ದೆವು. ಇಂದು ಸುಮಾರು 450 ಕಿ.ಮೀ ಉದ್ದದ ರಸ್ತೆಗೆ ಕಾಮಗಾರಿ ಮಾಡಲಾಗುತ್ತಿದೆ. ಇನ್ನು 350 ಕಿ.ಮೀ ಉದ್ದದ ಕಾಮಗಾರಿ ಡಿಫೆಕ್ಟ್ ಲಾಯಬಲಿಟಿ ಪಿರಿಯಡ್ (ಡಿಎಲ್ ಪಿ)ಯಾಗಿ ಬಾಕಿ ಉಳಿದಿದ್ದು,…