Author: kannadanewsnow09

ಬೆಂಗಳೂರು: ನಗರದಲ್ಲಿ ಮತ್ತೊಂದು ಬಿಎಂಟಿಸಿ ಬಸ್ ಹೊತ್ತಿ ಉರಿದಿದೆ. ಏಕಾಏಕಿ ಕಾಣಿಸಿಕೊಂಡ ಬೆಂಕಿಯ ನಂತ್ರ ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಸೇಫ್ ಆಗಿದ್ದಾರೆ. ಬೆಂಗಳೂರಿನ ಬೊಮ್ಮನಹಳ್ಳಿ-ಹೊಸೂರು ಮುಖ್ಯ ರಸ್ತೆಯಲ್ಲಿ ಇಂದು ಈ ಅಗ್ನಿ ಅವಘಡ ಸಂಭವಿಸಿದೆ. ಬಿಎಂಟಿಸಿ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೇ, ಚಾಲಕ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದಾರೆ. ಪ್ರಯಾಣಿಕರು ಬಸ್ ಇಳಿದು ಓಡಿ ಹೋಗುತ್ತಿದ್ದಂತೆ ನಡು ರಸ್ತೆಯಲ್ಲೇ ಬಿಎಂಟಿಸಿ ಬಸ್ ಹೊತ್ತಿ ಉರಿದಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಬೊಮ್ಮನಹಳ್ಳಿ – ಹೊಸೂರು ಹೆದ್ದಾರಿಯಲ್ಲೇ ಬಿಎಂಟಿಸಿ ಬಸ್ ಹೊತ್ತಿ ಉರಿದಿದ್ದರಿಂದ ಟ್ರಾಫಿಕ್ ಜಾಮ್ ಆಗಿದೆ. ಕಿಲೋಮೀಟರ್ ಗಟ್ಟಲೇ ವಾಹನಗಳು ಟಾರ್ಫಿಕ್ ಜಾಮ್ ನಲ್ಲಿ ಸಿಲುಕಿದ್ದಾರೆ. https://kannadanewsnow.com/kannada/good-news-for-police-aspirants-state-govt-gives-green-signal-for-4115-recruitment/ https://kannadanewsnow.com/kannada/71388-applications-received-for-registration-of-births-and-deaths-at-bapuji-seva-kendras/

Read More

ಬೆಂಗಳೂರು: ದೀಪಾವಳಿ ಮತ್ತು ಛತ್ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ-ಮುಜಾಫರ್ಪುರ ಮತ್ತು ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ದಾನಾಪುರ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲಿದೆ. ವಿವರಗಳು ಈ ಕೆಳಗಿನಂತಿವೆ: 1. ರೈಲು ಸಂಖ್ಯೆ 07373/07374 ಎಸ್ಎಸ್ಎಸ್ ಹುಬ್ಬಳ್ಳಿ-ಮುಜಾಫರಪುರ್-ಎಸ್ಎಸ್ಎಸ್ ಹುಬ್ಬಳ್ಳಿ ವಿಶೇಷ ಎಕ್ಸ್ ಪ್ರೆಸ್ ರೈಲು (ಒಂದು ಟ್ರಿಪ್) ಅಕ್ಟೋಬರ್ 27 ರಂದು ರೈಲು ಸಂಖ್ಯೆ 07373 ಹುಬ್ಬಳ್ಳಿಯಿಂದ ಸಂಜೆ 5:20 ಗಂಟೆಗೆ ಹೊರಟು, ಮುಜಫರ್‌ಪುರ ನಿಲ್ದಾಣವನ್ನು ಅಕ್ಟೋಬರ್ 29 ರಂದು ಸಂಜೆ 4 ಗಂಟೆಗೆ ತಲುಪಲಿದೆ. ಹಿಂದಿರುಗುವ ದಿಕ್ಕಿನಲ್ಲಿ, ಅಕ್ಟೋಬರ್ 30 ರಂದು ರೈಲು ಸಂಖ್ಯೆ 07374 ಮುಜಫರ್‌ಪುರದಿಂದ ಮಧ್ಯಾಹ್ನ 1:15 ಗಂಟೆಗೆ ಹೊರಟು, ಹುಬ್ಬಳ್ಳಿ ನಿಲ್ದಾಣಕ್ಕೆ ನವೆಂಬರ್ 1 ರಂದು ಬೆಳಿಗ್ಗೆ 10:30 ಗಂಟೆಗೆ ಆಗಮಿಸಲಿದೆ. ಈ ರೈಲು ಎರಡೂ ದಿಕ್ಕುಗಳಲ್ಲಿ ಧಾರವಾಡ, ಬೆಳಗಾವಿ, ಘಟಪ್ರಭಾ, ಮೀರಜ್, ಸಾಂಗ್ಲಿ, ಕರಾಡ್, ಸತಾರಾ ಪುಣೆ,…

Read More

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಪ್ರತಿಷ್ಠಿತ ಮಾಲ್‍ಗಳಲ್ಲಿ ‘ಆಹಾರ ಪದಾರ್ಥಗಳ ಕಲಬೆರಕೆ’ ಪತ್ತೆಗೆ ಪರೀಕ್ಷಾ ಕೇಂದ್ರ ಸ್ಥಾಪನೆ ಮಾಡಲಾಗಿದೆ. ತರಕಾರಿ, ಆಹಾರ ಧಾನ್ಯಗಳಿರುವ ಸೂಪರ್ ಮಾರ್ಕೇಟ್ ಗಳಲ್ಲೂ ಗುಣಮಟ್ಟ ಪರೀಕ್ಷೆಗೆ ರ‌್ಯಾಪಿಡ್ ಟೆಸ್ಟಿಂಗ್ ಕಿಟ್ ಅಳವಡಿಕೆ ಮಾಡಲಾಗಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ವಿಚಾರದಲ್ಲಿ ಇನ್ಮುಂದೆ ಸಾರ್ವಜನಿಕರೇ ಫುಡ್ ಕೋರ್ಟ್ ಗಳಲ್ಲಿ ಆಹಾರ ತಪಾಸಣೆ ನಡೆಸಿಕೊಳ್ಳಬಹುದು. ಬೆಂಗಳೂರಿನ ಮಾಲ್ ಆಫ್ ಏಷ್ಯಾದಲ್ಲಿ ಇಂದು ಆಹಾರ ತಪಾಸಣಾ ರ‌್ಯಾಪಿಟ್ ಟೆಸ್ಟಿಂಗ್ ಕಿಟ್ಸ್ ಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು. ಪರೀಕ್ಷಾ ವಿಧಾನವನ್ನ ಪರಿಶೀಲಿಸಿದ ಸಚಿವರು, ಆಹಾರ ಪದಾರ್ಥಗಳ ಟೆಸ್ಟಿಂಗ್ ಗೆ ಮುಂದಾಗುವ ಸಾರ್ವಜನಿಕರಿಗೆ ಅಗತ್ಯ ಮಾಹಿತಿ ಒದಗಿಸುವ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಳಿಕ ಮಾಧ್ಯಮಗಳಿಗೆ ಮಾತನಾಡಿದ ಸಚಿವರು, ಸಾರ್ವಜನಿಕರು ತ್ವರಿತಗತಿಯಲ್ಲಿ ಆಹಾರ ಪದಾರ್ಥಗಳ ಗುಣಮಟ್ಟವನ್ನ ಪರೀಕ್ಷಿಸಿಕೊಳ್ಳಬಹುದಾಗಿದೆ. ಆರಂಭಿಕ ಹಂತದಲ್ಲಿ ಬೆಂಗಳೂರಿನ 10 ಮಾಲ್ ಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ಆಹಾರ ಪದಾರ್ಥಗಳ ಕಲಬೆರಕೆ ಪತ್ತೆ…

Read More

ಬೆಂಗಳೂರು: ನಗರದಲ್ಲಿ ಭಾರೀ ಮಳೆ ಬಂದಾಗ ಆಗುವ ಆನಾಹುತಗಳನ್ನು ನೋಡಿದ ಒಬ್ಬ ಸಾಮಾಜಿಕ ಬಳಕೆದಾರರು‌ ಮಾಡಿರುವ ಟ್ಟೀಟ್ ಈಗ ಎಲ್ಲರ ಗಮನ ಸೆಳೆದಿದೆ. ಕೋರಮಂಗಲ ಹೇಗೆ ಮಳೆಯ ಅನಾಹುತದಿಂದ ಪರಿಹಾರ ಕಂಡುಕೊಂಡಿದೆ ಎಂಬುದಾಗಿ ಟ್ವಿಟ್ ಪೋಸ್ಟ್ ನಲ್ಲಿ ವ್ಯಕ್ತಿಯೊಬ್ಬರು ಸವಿವರವಾಗಿ ವಿವರಿಸಿದ್ದಾರೆ. ಆ ಬಗ್ಗೆ ಮುಂದೆ ಓದಿ. ಕೋರಮಂಗಲ, ST BED, ಈಜಿಪುರ, ರಾಜೇಂದ್ರ ನಗರ, National Games Village ಮತ್ತು ವೆಂಕಟೇಶ್ವರ ಬಡಾವಣೆ ಮಡಿವಾಳ, ಪ್ರದೇಶಗಳಲ್ಲಿ ಮಳೆ ಬಂತೆಂದರೆ ಅಕ್ಷರಶಃ ನರಕ ಸದೃಶ ದೃಶ್ಯ ಕಾಣಸಿಗುತ್ತಿತ್ತು. ಕಳೆದ 20 ವರ್ಷಗಳ ಹಿಂದೆಯೇ ಸಮಸ್ಯೆಗೆ ಪರಿಹಾರ ಕಂಡುಕೊಂಡ ರೀತಿ ಇತರರಿಗೆ ಮಾದರಿಯಾಗಿದೆ. ಒಬ್ಬ ಜನಪ್ರತಿನಿಧಿ ಯಾವ ರೀತಿ ತನ್ನ ಕ್ಷೇತ್ರವನ್ನು ಅಭಿವೃದ್ಧಿ ಮಾಡಬಹುದು ಎಂಬುದಕ್ಕೆ ಜಲ್ವಂತ ಉದಾಹರಣೆ ರಾಮಲಿಂಗಾ ರೆಡ್ಡಿ ಅವರ ವಿಧಾನಸಭಾ ಕ್ಷೇತ್ರ. ಜನರಿಗೆ ಬಹುಮುಖ್ಯವಾಗಿ ಬೇಕಾಗಿರುವುದು ವಸತಿ ಸೌಲಭ್ಯ, ಸುಸಜ್ಜಿತ ರಸ್ತೆ, ಗುಣಮಟ್ಟದ ಶಿಕ್ಷಣ ಇವೆಲ್ಲವುಗಳು ಒಂದೇ ಕ್ಷೇತ್ರದಲ್ಲಿ ವ್ಯವಸ್ಥಿತವಾಗಿ ಜನರಿಗೆ ಸಿಗುವಂತೆ ಮಾಡಿರುವ ಹೆಗ್ಗಳಿಕೆ ರಾಮಲಿಂಗಾರೆಡ್ಡಿ ಅವರದ್ದು.…

Read More

ಬೆಂಗಳೂರು: ಉದ್ಯೋಗಾವಕಾಶ ಮತ್ತು ವೇತನ ವೃದ್ಧಿಯಲ್ಲಿ ದೇಶದಲ್ಲೇ ಬೆಂಗಳೂರು ನಂಬರ್ 1 ಆಗಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಕರ್ನಾಟಕ ಅಭಿವೃದ್ಧಿ ಮಾದರಿ ಆಡಳಿತದ ಇನ್ನೊಂದು ಮೈಲುಗಲ್ಲು. ರಾಜ್ಯವನ್ನು ಬಂಡವಾಳ ಹೂಡಿಕೆಯ ಪ್ರಶಸ್ತ ತಾಣವಾಗಿಸಿದ ನಮ್ಮ ಸರ್ಕಾರದ ಪ್ರಯತ್ನಗಳು ಹಾಗೂ ಯುವ ಜನರಿಗೆ ಕೈಗಾರಿಕೆಗಳು ಮತ್ತು ಉದ್ದಿಮೆಗಳಲ್ಲಿ ಬೇಡಿಕೆಯಿರುವ ಕೌಶಲ್ಯಾಧಾರಿತ ತರಬೇತಿ ನೀಡುತ್ತಿರುವುದರ ಪರಿಣಾಮ ಉದ್ಯೋಗಾವಕಾಶ ಮತ್ತು ವೇತನ ವೃದ್ಧಿಯಲ್ಲಿ ಬೆಂಗಳೂರು ದೇಶದಲ್ಲೇ ನಂಬರ್‌ 01 ಸ್ಥಾನಕ್ಕೇರಿದೆ ಎಂದಿದ್ದಾರೆ. ಟೀಮ್‌ ಲೀಸ್‌ ಸರ್ವೀಸಸ್‌ನ ಉದ್ಯೋಗ ಮತ್ತು ವೇತನ ವರದಿಯಲ್ಲಿ ಬೆಂಗಳೂರಿನ ಸರಾಸರಿ ವೇತನ ಹೆಚ್ಚಳ 9.3% ಹಾಗೂ ಸರಾಸರಿ ಏಕೀಕೃತ ಮಾಸಿಕ ಸಂಬಳ ರೂ.29,500 ಇದ್ದು, ಇದು ಇತರೆ ಎಲ್ಲಾ ನಗರಗಳಿಗಿಂತ ಗರಿಷ್ಠ ಮಟ್ಟದಲ್ಲಿದೆ ಎಂದು ತಿಳಿಸಿದ್ದಾರೆ. https://twitter.com/KarnatakaVarthe/status/1849785583117517180 https://kannadanewsnow.com/kannada/bengaluru-rains-this-post-by-x-caught-everyones-attention/ https://kannadanewsnow.com/kannada/karnataka-governor-thaawar-chand-gehlot-hospitalised-after-health-deteriorates/

Read More

ಬೆಂಗಳೂರು: ನಗರದಲ್ಲಿ ಭಾರೀ ಮಳೆ ಬಂದಾಗ ಆಗುವ ಆನಾಹುತಗಳನ್ನು ನೋಡಿದ ಒಬ್ಬ ಸಾಮಾಜಿಕ ಬಳಕೆದಾರರು‌ ಮಾಡಿರುವ ಟ್ಟೀಟ್ ಈಗ ಎಲ್ಲರ ಗಮನ ಸೆಳೆದಿದೆ. ಕೋರಮಂಗಲ ಹೇಗೆ ಮಳೆಯ ಅನಾಹುತದಿಂದ ಪರಿಹಾರ ಕಂಡುಕೊಂಡಿದೆ ಎಂಬುದಾಗಿ ಟ್ವಿಟ್ ಪೋಸ್ಟ್ ನಲ್ಲಿ ವ್ಯಕ್ತಿಯೊಬ್ಬರು ಸವಿವರವಾಗಿ ವಿವರಿಸಿದ್ದಾರೆ. ಆ ಬಗ್ಗೆ ಮುಂದೆ ಓದಿ. ಕೋರಮಂಗಲ, ST BED, ಈಜಿಪುರ, ರಾಜೇಂದ್ರ ನಗರ, National Games Village ಮತ್ತು ವೆಂಕಟೇಶ್ವರ ಬಡಾವಣೆ ಮಡಿವಾಳ, ಪ್ರದೇಶಗಳಲ್ಲಿ ಮಳೆ ಬಂತೆಂದರೆ ಅಕ್ಷರಶಃ ನರಕ ಸದೃಶ ದೃಶ್ಯ ಕಾಣಸಿಗುತ್ತಿತ್ತು. ಕಳೆದ 20 ವರ್ಷಗಳ ಹಿಂದೆಯೇ ಸಮಸ್ಯೆಗೆ ಪರಿಹಾರ ಕಂಡುಕೊಂಡ ರೀತಿ ಇತರರಿಗೆ ಮಾದರಿಯಾಗಿದೆ. ಒಬ್ಬ ಜನಪ್ರತಿನಿಧಿ ಯಾವ ರೀತಿ ತನ್ನ ಕ್ಷೇತ್ರವನ್ನು ಅಭಿವೃದ್ಧಿ ಮಾಡಬಹುದು ಎಂಬುದಕ್ಕೆ ಜಲ್ವಂತ ಉದಾಹರಣೆ ರಾಮಲಿಂಗಾ ರೆಡ್ಡಿ ಅವರ ವಿಧಾನಸಭಾ ಕ್ಷೇತ್ರ. ಜನರಿಗೆ ಬಹುಮುಖ್ಯವಾಗಿ ಬೇಕಾಗಿರುವುದು ವಸತಿ ಸೌಲಭ್ಯ, ಸುಸಜ್ಜಿತ ರಸ್ತೆ, ಗುಣಮಟ್ಟದ ಶಿಕ್ಷಣ ಇವೆಲ್ಲವುಗಳು ಒಂದೇ ಕ್ಷೇತ್ರದಲ್ಲಿ ವ್ಯವಸ್ಥಿತವಾಗಿ ಜನರಿಗೆ ಸಿಗುವಂತೆ ಮಾಡಿರುವ ಹೆಗ್ಗಳಿಕೆ ರಾಮಲಿಂಗಾರೆಡ್ಡಿ ಅವರದ್ದು.…

Read More

ಬೆಂಗಳೂರು: ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿರುವುದಾಗಿ ತಿಳಿದು ಬಂದಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತೀವ್ರ ತರದ ವೈರಲ್ ಫೀವರ್ ನಿಂದ ಬಳಲುತ್ತಿರುವುದಾಗಿ ತಿಳಿದು ಬಂದಿದೆ. ಈ ಹಿನ್ನಲೆಯಲ್ಲೇ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಥಾವರ್ ಚಂದ್ ಗೆಹ್ಲೋಟ್ ಅವರನ್ನು ಪರೀಕ್ಷೆಗೆ ಒಳಪಡಿಸಿದಂತ ವೈದ್ಯರು, ಚಿಕಿತ್ಸೆ ನೀಡುತ್ತಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂಬುದಾಗಿ ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/veerashaiva-lingayat-mahasabha-decides-not-to-accept-caste-census-report-rajkumar-patil-telkur/ https://kannadanewsnow.com/kannada/good-news-for-police-aspirants-state-govt-gives-green-signal-for-4115-recruitment/

Read More

ಕಲಬುರಗಿ :ಕಾಂತರಾಜು ಅವರ ನೇತೃತ್ವದ ಸಮಿತಿ ನಡೆಸಿರುವ ಜಾತಿ ಜನಗಣತಿಯನ್ನು ರಾಜ್ಯಕಾಂಗ್ರೆಸ್ ಸರ್ಕಾರ ಜಾರಿಗೆ ತರಲು ಮುಂದಾಗಿದ್ದು, ಈ ಬಗ್ಗೆ ವೀರಶೈವ-ಲಿಂಗಾಯತ ಮಹಾಸಭಾ ಆಕ್ಷೇಪ ವ್ಯಕ್ತಪಡಿಸಿದೆ. ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ, ಶಾಸಕ ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಜಾತಿ ಗಣತಿ ಕುರಿತಾಗಿ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದ್ದು, ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಲಾಗಿದೆ ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಬೆಂಗಳೂರಿನಲ್ಲಿ ನಡೆದ ಸಭೆಯ ಪ್ರಮುಖ ನಿರ್ಣಯಗಳಾದ ಅಖಿಲ ಭಾರತ ವೀರಶೈವ/ಲಿಂಗಾಯತ ಯ/ಲಿಂಗಾಯತ ಮಹಾಸಭೆಯು ಬಸವಾದಿ ತತ್ವಗಳನ್ನು ಪ್ರತಿಪಾದಿಸುತ್ತಿದ್ದು, ಸರ್ವರಿಗೂ ಲೇಸನ್ನೆ ಬಯಸುವ ಸಮಸಮಾಜವನ್ನು ನಿರ್ಮಾಣ ಮಾಡಬೇಕೆಂಬ ಶರಣರ ತತ್ವದ ಆಧಾರದ ಮೇಲೆ ನಡೆಯುತ್ತಿರುವ ಸಂಸ್ಥೆಯಾಗಿದೆ. ನಾವು ಜಾತಿಗಣತಿಯ ವಿರೋಧಿಗಳಲ್ಲ ಎಂಬುದನ್ನು ಈ ಸಂದರ್ಭದಲ್ಲಿ ಸ್ಪಷ್ಟಪಡಿಸಲು ಇಚ್ಛಿಸುತ್ತೇವೆ. ಕಳೆದ 10 ವರ್ಷಗಳ ಹಿಂದೆ ನಡೆಸಲಾದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯು ಹಲವು ವೈರುದ್ಧ ಮತ್ತು ಲೋಪಗಳಿಂದ ಕೂಡಿದ್ದು,…

Read More

ಬೆಂಗಳೂರು : ಎಚ್ಎಂಟಿ ವಶದಲ್ಲಿರುವ ಪೀಣ್ಯ ಪ್ಲಾಂಟೇಷನ್ ನ 599 ಎಕರೆ ಅರಣ್ಯದ ಪೈಕಿ ಅರಣ್ಯ ಸ್ವರೂಪದ ಮತ್ತು 5 ಎಕರೆ ಖಾಲಿ ಜಮೀನು ವಶಕ್ಕೆ ಪಡೆದು ಬೃಹತ್ ಉದ್ಯಾನ ನಿರ್ಮಿಸುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರ ಆಶಯಕ್ಕೆ ಅಧಿಕಾರಿಗಳು ಇಂದು ಬಲ ನೀಡಿದ್ದಾರೆ. ಎಚ್ಎಂಟಿ ವಶದಲ್ಲಿದ್ದ ಪೀಣ್ಯ- ಜಾಲಹಳ್ಳಿ ಸರ್ವೆ ನಂ. 1ರಲ್ಲಿ ಇಂದು ಜೆಸಿಬಿಯೊಂದಿಗೆ ಕಾರ್ಯಾಚರಣೆಗೆ ಇಳಿದ ಅರಣ್ಯ ಇಲಾಖೆ ಬೆಂಗಳೂರು ನಗರ ವಲಯದ ಅಧಿಕಾರಿಗಳು 5 ಎಕರೆ ಖಾಲಿ ಜಮೀನನ್ನು ಮರುವಶಕ್ಕೆ ಪಡೆದಿದ್ದು ಅಲ್ಲಿ ಕರ್ನಾಟಕ ಅರಣ್ಯ ಇಲಾಖೆ ಫಲಕವನ್ನು ನೆಟ್ಟು ತಮ್ಮ ಹಕ್ಕು ಪ್ರತಿಪಾದಿಸಿದ್ದಾರೆ. 1896 ಮೇ 29ರ ಸರ್ಕಾರದ ಅಧಿಸೂಚನೆ ಸಂಖ್ಯೆ 10407, ಎಫ್.ಟಿ.ಎಫ್. 153-95 ಮತ್ತು 1901ರ ಜನವರಿ 7ರ ಅಧಿಸೂಚನೆ ಸಂಖ್ಯೆ 422-ಎಫ್.ಟಿ.ಎಫ್.-15-1900ರ ರೀತ್ಯ ಪೀಣ್ಯ, ಜಾಲಹಳ್ಳಿ ಪ್ಲಾಂಟೇಷನ್ ನಲ್ಲಿರುವ 599 ಎಕರೆ ಜಮೀನು ಅರಣ್ಯವಾಗಿರುತ್ತದೆ. ಅರಣ್ಯೇತರ ಉದ್ದೇಶಕ್ಕೆ ಭೂಪರಿವರ್ತನೆ ಆಗದ ಈ ಜಮೀನು once…

Read More

ಬೆಂಗಳೂರು: ನಗರದಲ್ಲಿ ಡ್ರೋನ್ ಮೂಲಕ ನಿರ್ಮಾಣ ಹಂತದ ಕಟ್ಟಡಗಳನ್ನು ಸಮೀಕ್ಷೆ ಮಾಡಲಾಗುತ್ತದೆ. ಒಂದು ವೇಳೆ ನಿಯಮ ಮೀರಿ ಕಟ್ಟಡ ಕಟ್ಟುತ್ತಿರುವುದು ಗಮನಕ್ಕೆ ಬಂದ್ರೇ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಎಚ್ಚರಿಸಿದ್ದಾರೆ. ಬೆಂಗಳೂರು ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡಗಳ ಬಗ್ಗೆ ಖಾಸಗಿ ಹಾಗೂ ಬಿಬಿಎಂಪಿಯಿಂದ ಸಮೀಕ್ಷೆ ನಡೆಸಲಾಗುವುದು. ಕಾನೂನುಬಾಹಿರ ನಿರ್ಮಾಣಗಳನ್ನು ಪತ್ತೆ ಹಚ್ಚಿ, ಪ್ರತಿ ಕಟ್ಟಡದ ಚಿತ್ರ ಹಾಗೂ ವಿಡಿಯೋಗಳನ್ನು ಸಂಗ್ರಹಿಸಲಾಗುವುದು. ಜಂಟಿ ಆಯುಕ್ತರ ನೇತೃತ್ವದಲ್ಲಿ ಡ್ರೋನ್‌ ಕ್ಯಾಮೆರಾಗಳಿಂದ ಮೇಲ್ವಿಚಾರಣೆ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ. https://twitter.com/KarnatakaVarthe/status/1849787874587312278 ನಿರ್ಮಾಣ ಹಂತದಲ್ಲಿರುವ ಕಟ್ಟಡಗಳ ಬಗ್ಗೆ ಸೋಮವಾರದಿಂದ ಸಮೀಕ್ಷೆ ನಡೆಸಲಾಗುವುದು. ಖಾಸಗಿ ಹಾಗೂ ಪಾಲಿಕೆಯಿಂದ ಈ ಸಮೀಕ್ಷೆ ನಡೆಸಲಾಗುವುದು. ಯಾವುದಾದರೂ ಕಟ್ಟಡ ಕಾನೂನುಬಾಹಿರವಾಗಿ ನಿರ್ಮಾಣವಾಗುತ್ತಿದೆಯೇ ಎಂದು ಪತ್ತೆಹಚ್ಚಲಾಗುವುದು. ಅಕ್ರಮ ಕಟ್ಟಡ ನಿರ್ಮಾಣ ತಡೆಯಲಾಗುವುದು. ಪ್ರತಿ ಕಟ್ಟಡದ ಫೋಟೋ ಹಾಗೂ ವಿಡಿಯೋಗಳನ್ನು ಸಂಗ್ರಹಿಸಲಾಗುವುದು. ಜಂಟಿ ಆಯುಕ್ತರ ನೇತೃತ್ವದಲ್ಲಿ ಡ್ರೋನ್ ಮೂಲಕ ಇದರ ಮೇಲ್ವಿಚಾರಣೆ ಮಾಡಲಾಗುವುದು. ಬಿಎಂಆರ್ ಡಿಎ ಹಾಗೂ…

Read More