Author: kannadanewsnow09

ಬೆಂಗಳೂರು: ಸೆಪ್ಟೆಂಬರ್.22ರಿಂದ ರಾಜ್ಯಾಧ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭಗೊಳ್ಳಲಿದೆ. ಈ ಸಮೀಕ್ಷೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜನತೆಗೆ ಈ ಕೆಳಗಿನಂತೆ ಮನವಿ ಮಾಡಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕರ್ನಾಟಕ ರಾಜ್ಯ ಹಿಂದುಳಿದ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆಪ್ಟೆಂಬರ್‌ 22 ರಿಂದ ಅಕ್ಟೋಬರ್‌ 7ರ ವರೆಗೆ ಕೈಗೊಳ್ಳಲಿದೆ ಎಂದಿದ್ದಾರೆ. ರಾಜ್ಯದ ಪ್ರತಿ ಮನೆಗೆ ಆಯೋಗದ ಸಿಬ್ಬಂದಿಗಳು ಭೇಟಿ ನೀಡಿ ಸ್ಟಿಕ್ಕರ್ ಅಂಟಿಸಿದ ಬಳಿಕ ಶಿಕ್ಷಕರು ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ. ಈ ವೇಳೆ ಅವರಿಗೆ ಅಗತ್ಯ ದಾಖಲೆಗಳ ಜೊತೆಗೆ ಸೂಕ್ತ ಮಾಹಿತಿ ಒದಗಿಸಿ ಸಹಕರಿಸುವ ಮೂಲಕ ಈ ಸಮೀಕ್ಷೆಯನ್ನು ಯಶಸ್ವಿಗೊಳಿಸಿಕೊಡಬೇಕು ಎಂದು ಕೋರಿದ್ದಾರೆ. https://twitter.com/CMofKarnataka/status/1965410150032048578 https://kannadanewsnow.com/kannada/mla-satish-sail-arrested-by-ed-officials-in-bangalore/ https://kannadanewsnow.com/kannada/breaking-nepal-president-ramachandra-poudel-resigns-nepals-president-resigns/

Read More

ಬೆಂಗಳೂರು: ಇಡಿ ಅಧಿಕಾರಿಗಳು ಶಾಸಕ ಸತೀಶ್ ಸೈಲ್ ಅವರನ್ನು ಅಕ್ರಮ ಆಸ್ತಿ ಪತ್ರೆ ಪ್ರಕರಣದಲ್ಲಿ ಬಂಧಿಸಿದ್ದಾರೆ. ಇಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಂತ ಕಾರವಾರ ಶಾಸಕ ಸತೀಶ್ ಸೈಲ್ ಅವರನ್ನು ಬಂಧಿಸಲಾಗಿದೆ. ಆಗಸ್ಟ್.13, 14ರಂದು ಇಡಿ ಅಧಿಕಾರಿಗಳಿಂದ ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ನಿವಾಸದ ಮೇಲೆ ದಾಳಿ ನಡೆಸಿದ್ದರು. ಈ ದಾಳಿಯ ವೇಳೆಯಲ್ಲಿ ಅಕ್ರಮ ಆಸ್ತಿ ಪಾಸ್ತಿ ಪತ್ತೆಯಾಗಿತ್ತು. ಈ ಹಿನ್ನಲೆಯಲ್ಲಿ ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಈ ವೇಳೆಯಲ್ಲಿ ಅವರನ್ನು ಬಂಧಿಸಲಾಗಿದೆ.

Read More

ಬೆಂಗಳೂರು: ಮದ್ದೂರು ಗಲಭೆ ಘಟನೆಗೆ ಸಂಬಂಧಿಸಿ ಸತ್ಯ ಸಂಶೋಧನಾ ತಂಡವನ್ನು ನಾವು ಈಗಾಗಲೇ ಪ್ರಕಟಿಸಿದ್ದೇವೆ. ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರ ನೇತೃತ್ವದಲ್ಲಿ ತಂಡ ರಚಿಸಿದ್ದೇವೆ. ಮದ್ದೂರಿನಲ್ಲಿ ಪೊಲೀಸ್ ಇಲಾಖೆಯ ಸಂಪೂರ್ಣ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ಕೊಟ್ಟರು. ಸತ್ಯಾಸತ್ಯತೆ ಪರಿಶೀಲಿಸಿ ವರದಿ ಕೊಡಲು ತಿಳಿಸಿದ್ದೇವೆ ಎಂದು ಹೇಳಿದರು. ರಾಜ್ಯದಲ್ಲಿ ಒಂದು ರೀತಿ ತುಘಲಕ್ ದರ್ಬಾರ್ ಇದೆ. ಇವರು ನಿಜಾಮರ ಆಡಳಿತವನ್ನು ನೆನಪು ಮಾಡಿ ಕೊಡುತ್ತಿದ್ದಾರೆ ಎಂದರು. ಮುಖ್ಯಮಂತ್ರಿಗಳು, ಗೃಹ ಸಚಿವರು ತಮ್ಮ ಧೋರಣೆ ಸರಿಪಡಿಸಿಕೊಳ್ಳದಿದ್ದರೆ ಖಂಡಿತವಾಗಿ ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಹದಗೆಡಲಿದೆ. ಇದಕ್ಕೆ ರಾಜ್ಯ ಸರಕಾರವೇ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಸಿದರು. ಗಣಪತಿ ಮೆರವಣಿಗೆಯಲ್ಲಿ ಕೇಸರಿ ಶಾಲು ಹಾಕಿ ಡ್ಯಾನ್ಸ್ ಮಾಡಿದ ಪಿಎಸ್‍ಐ ಒಬ್ಬರನ್ನು ಅಮಾನತು ಮಾಡುವ ಮಾಹಿತಿ ನನಗೆ ಬಂದಿದೆ. ನಾವೇನು ಪಾಕಿಸ್ತಾನದಲ್ಲಿದ್ದೇವಾ?…

Read More

ನವದೆಹಲಿ: ಮಂಗಳವಾರ ನಡೆದ ಉಪಾಧ್ಯಕ್ಷ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ ಪಿ ರಾಧಾಕೃಷ್ಣನ್ ಅವರು ಗೆಲುವು ಸಾಧಿಸಿದ್ದು, ವಿರೋಧ ಪಕ್ಷದ ಬಿ ಸುದರ್ಶನ್ ರೆಡ್ಡಿ ಅವರನ್ನು ಸೋಲಿಸಿದ್ದಾರೆ. ಜಗದೀಪ್ ಧಂಖರ್ ಅವರ ಹಠಾತ್ ರಾಜೀನಾಮೆಯಿಂದಾಗಿ ಅನಿವಾರ್ಯವಾದ ಚುನಾವಣೆಯಲ್ಲಿ 427 ಶಾಸಕರು ರಾಧಾಕೃಷ್ಣನ್ ಅವರಿಗೆ ಮತ ಚಲಾಯಿಸಿದ್ದಾರೆ. ಈ ಮೂಲಕ ಭಾರತದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣ ಅವರು ಆಯ್ಕೆಯಾಗಿದ್ದಾರೆ. ಬಿಜು ಜನತಾದಳ (ಬಿಜೆಡಿ), ಭಾರತೀಯ ರಾಷ್ಟ್ರ ಸಮಿತಿ (ಬಿಆರ್‌ಎಸ್), ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಮತ್ತು ಸ್ವತಂತ್ರರು ಚುನಾವಣೆಯಿಂದ ದೂರ ಉಳಿದ 13 ಶಾಸಕರಲ್ಲಿ ಒಬ್ಬರು. ವಿರೋಧ ಪಕ್ಷದ ಎಲ್ಲಾ 315 ಸಂಸದರು ಮತದಾನಕ್ಕೆ ಹಾಜರಾಗಿದ್ದಾರೆ ಎಂದು ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಹೇಳಿದರು. https://twitter.com/ANI/status/1965414148030038218 “ವಿರೋಧ ಪಕ್ಷಗಳು ಒಗ್ಗಟ್ಟಾಗಿ ನಿಂತಿವೆ. ಅದರ 315 ಸಂಸದರಲ್ಲಿ ಎಲ್ಲರೂ ಮತದಾನಕ್ಕೆ ಹಾಜರಾಗಿದ್ದಾರೆ. ಇದು ಅಭೂತಪೂರ್ವ 100% ಮತದಾನವಾಗಿದೆ” ಎಂದು ಅವರು X ನಲ್ಲಿ ಬರೆದಿದ್ದಾರೆ. ತಮಿಳುನಾಡಿನ ಬಿಜೆಪಿಯ ಹಿರಿಯ ರಾಧಾಕೃಷ್ಣನ್ ಪ್ರಸ್ತುತ ಮಹಾರಾಷ್ಟ್ರದ…

Read More

ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರ ಮನೆಯ ಮೇಲೆ ಇಡಿ ಆನ್ ಲೈನ್, ಆಫ್ ಲೈನ್ ಬೆಟ್ಟಿಂಗ್ ಸಂಬಂಧ ದಾಳಿ ನಡೆಸಿತ್ತು. ಈ ಇಡಿ ದಾಳಿಯ ಸಂದರ್ಭದಲ್ಲಿ ಬರೋಬ್ಬರಿ 21.43 ಕೆಜಿ ಚಿನ್ನದ ಬಿಸ್ಕೆಟ್ ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಜಾರಿ ನಿರ್ದೇಶನಾಲಯವು, ಕೆ.ಸಿ. ವೀರೇಂದ್ರ ಮತ್ತು ಇತರರ ವಿರುದ್ಧ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ಸಾರ್ವಜನಿಕರನ್ನು ವಂಚಿಸಿದ ಪ್ರಕರಣದಲ್ಲಿ, 2002 ರ ಪಿಎಂಎಲ್‌ಎ ನಿಬಂಧನೆಗಳ ಅಡಿಯಲ್ಲಿ ಬೆಂಗಳೂರಿನ ಇಡಿ, ಚಳ್ಳೇಕೆರೆಯಲ್ಲಿ 06.09.2025 ರಂದು ದಾಳಿ ನಡೆಸಲಾಗಿತ್ತು ಎಂದಿದೆ. ಈ ದಾಳಿಯ ಸಮಯದಲ್ಲಿ, 21.43 ಕೆಜಿ ತೂಕದ 24 ಕ್ಯಾರೆಟ್ ಚಿನ್ನದ ಗಟ್ಟಿ, 10.985 ಕೆಜಿ ತೂಕದ 11 ಯೂನಿಟ್ ಚಿನ್ನದ ಲೇಪಿತ ಬೆಳ್ಳಿ ಗಟ್ಟಿಗಳು ಮತ್ತು ಸುಮಾರು 1 ಕೆಜಿ (ಅಂದಾಜು) ಚಿನ್ನದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ, ಇದರ ಮೌಲ್ಯ ಸುಮಾರು 24 ಕೋಟಿ ರೂ.ಗಳು. ಈ ವಶಪಡಿಸಿಕೊಳ್ಳುವಿಕೆಯನ್ನು ಪರಿಗಣಿಸಿದ…

Read More

ಬೀದರ್: ಜಿಲ್ಲೆಯಲ್ಲೊಂದು ಬೆಚ್ಚಿ ಬೀಳಿಸೋ ಘಟನೆ ನಡೆದಿದೆ. ಕಾಲುವೆಗೆ ಜಿಗಿದು ಒಂದೇ ಕುಟುಂಬದ ಆರು ಜನರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇವರಲ್ಲಿ ನಾಲ್ವರು ಸಾವನ್ನಪ್ಪಿದ್ದರೇ, ಮತ್ತಿಬ್ಬರು ಪ್ರಣಾಪಾಯದಿಂದ ಪಾರಾಗಿದ್ದಾರೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಮರೂರು ಬಳಿಯಲ್ಲಿ ಕಾಲುವೆಗೆ ಜಿಗಿದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಳ್ಳೋದಕ್ಕೆ ಕಾರಣ ಏನು ಎಂಬುದು ತಿಳಿದು ಬಂದಿದೆ. ಕಾಲುವೆಗೆ ಹಾರಿ ಒಂದೇ ಕುಟುಂಬದ ಆರು ಜನರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕಾರಂಜ ಡ್ಯಾಮ್ ನ ಕಾಲುವೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕಾಲುವೆಗೆ ಜಿಗಿದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದರೇ, ಆರು ಜನರ ಪೈಕಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Read More

ನಿಮ್ಮ ಕನಸುಗಳನ್ನು ನನಸಾಗಿಸಲು ನೀವು ಬಯಸಿದರೆ, ನಿಮಗೆ ಮೊದಲನೆಯದು ನಂಬಿಕೆ. ನಾವು ದೃಢಸಂಕಲ್ಪ ಮತ್ತು ಆತ್ಮವಿಶ್ವಾಸವನ್ನು ಹೊಂದಿದ್ದರೆ ಮಾತ್ರ ನಮ್ಮ ಆಸೆಗಳು ಈಡೇರುತ್ತವೆ. ಕನಸುಗಳು ನಿಜವಾಗುತ್ತವೆ. ಯಾವ ಮನುಷ್ಯನೂ ಆಸೆಯಿಲ್ಲದೆ ಬದುಕಲಾರ. ನಿಮ್ಮ ಮನಸ್ಸಿನಲ್ಲಿ ಖಂಡಿತವಾಗಿಯೂ ಅಪೂರ್ಣವಾದದ್ದು ಇದೆ. ಉದಾಹರಣೆಗೆ, ನಾವು ಒಳ್ಳೆಯ ಉದ್ಯೋಗ ಪಡೆಯಬೇಕು, ಕೈತುಂಬಾ ಹಣ ಸಂಪಾದಿಸಬೇಕು, ಸಮಾಜದಲ್ಲಿ ನಾಲ್ಕು ಜನ ಗೌರವಿಸುವ ಉನ್ನತ ಸ್ಥಾನದಲ್ಲಿ ಬದುಕಬೇಕು. ಆ ಆಸೆಯನ್ನು ಈಡೇರಿಸಿಕೊಳ್ಳಲು ಸತತ ಪ್ರಯತ್ನ ಮಾಡಬೇಕು. ನಾವು ನಮ್ಮ ಮನಸ್ಸನ್ನು ಕೇಂದ್ರೀಕರಿಸಬೇಕು ಮತ್ತು ಪ್ರಗತಿಯತ್ತ ಮಾತ್ರ ಗಮನಹರಿಸಬೇಕು. ಇತರ ಅನಗತ್ಯ ವಿಷಯಗಳತ್ತ ಗಮನ ಹರಿಸಬಾರದು. ಅದಕ್ಕೊಂದು ಪುಟ್ಟ ಕಸರತ್ತು ಈ ಶಕ್ತಿ ಸರ್ಕಾರ್ ಕಸರತ್ತು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ…

Read More

ಬೆಳಗಾವಿ: ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರ ನೇಮಕದಲ್ಲಿ ಒತ್ತಡ ಅಥವಾ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗಂಭೀರ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿ ಮಂಗಳವಾರ ಇಲಾಖೆಯ ವಿಭಾಗಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ಮೆರಿಟ್ ಆಧಾರದ ಮೇಲೆ ಅಂಗನವಾಡಿ ನೇಮಕ ನಡೆಯುತ್ತದೆ. ಇದರಲ್ಲಿ ನಾನು ಎಂದೂ ಹಸ್ತಕ್ಷೇಪ ಮಾಡುವುದಿಲ್ಲ. ಜೊತೆಗೆ ಯಾರ ಒತ್ತಡಕ್ಕೂ ಒಳಗಾಗುವುದು ಬೇಡ. ಅಲ್ಲದೆ ಒಂದು ರೂಪಾಯಿ ಕೂಡ ಭ್ರಷ್ಟಾಚಾರ ನಡೆಯುವುದನ್ನು ಸಹಿಸುವುದಿಲ್ಲ. ಹಾಗೇನಾದರೂ ಆದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸಂಪೂರ್ಣ ಪಾರದರ್ಶಕವಾಗಿ ನೇಮಕಾತಿ ನಡೆಸಿ ಎಂದು ಲಕ್ಷ್ಮೀ ಹೆಬ್ಬಾಳಕರ್ ಸೂಚಿಸಿದರು. ಅಂಗನವಾಡಿಗಳು ಆರಂಭವಾಗಿ 50 ವರ್ಷವಾಗಿದೆ. ಇಲಾಖೆಗೆ ಇತಿಹಾಸವಿದೆ. ಈ ವರ್ಷ ಸುವರ್ಣ ಮಹೋತ್ಸವ ಆಚರಿಸಲು ತಯಾರಿ ನಡೆಸುತ್ತಿದ್ದೇವೆ. ಶೇ.80ರಷ್ಟು ಅಂಗನವಾಡಿಗಳು ಖಾಸಗಿ ನರ್ಸರಿಗಳಿಗಿಂತ ಚೆನ್ನಾಗಿ ನಡೆಯುತ್ತಿದೆ. ಮಕ್ಕಳಿಗೆ ಎಲ್ಲ ಸೌಲಭ್ಯ ಕೊಡುತ್ತಿದ್ದೇವೆ. ಬೀದಿ ಬೀದಿಗಳಲ್ಲಿ ಹೋಗಿ. ಪ್ರಚಾರ ಮಾಡಿ. ಸಂಖ್ಯೆ ಕಡಿಮೆಯಾಗಲು ಬಿಡಬೇಡಿ. ಪಾಲಕರ ಮನವೊಲಿಸಿ. ಮಕ್ಕಳನ್ನು ಹೆಚ್ಚು…

Read More

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಹಿಮಾಚಲ ಪ್ರದೇಶಕ್ಕೆ 1,500 ಕೋಟಿ ರೂಪಾಯಿಗಳ ಆರ್ಥಿಕ ಸಹಾಯವನ್ನು ಘೋಷಿಸಿದರು. ಎಸ್‌ಡಿಆರ್‌ಎಫ್ ಮತ್ತು ಪಿಎಂ ಕಿಸಾನ್ ಸಮ್ಮಾನ್ ನಿಧಿಯ ಎರಡನೇ ಕಂತಿನ ಮುಂಗಡ ಬಿಡುಗಡೆ ಮಾಡಲಾಗುವುದು. ಇಡೀ ಪ್ರದೇಶ ಮತ್ತು ಜನರನ್ನು ಮತ್ತೆ ಮೊದಲಿನ ಸ್ಥಿತಿಗೆ ತರಲು ಬಹು ಆಯಾಮದ ದೃಷ್ಟಿಕೋನವನ್ನು ತೆಗೆದುಕೊಳ್ಳಬೇಕೆಂದು ಪ್ರಧಾನಿ ಮೋದಿ ಕೇಳಿದರು. ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮೂಲಕ ಮನೆಗಳ ಪುನರ್ನಿರ್ಮಾಣ, ರಾಷ್ಟ್ರೀಯ ಹೆದ್ದಾರಿಗಳ ಪುನಃಸ್ಥಾಪನೆ, ಶಾಲೆಗಳ ಪುನರ್ನಿರ್ಮಾಣ, ಪಿಎಂಎನ್‌ಆರ್‌ಎಫ್ ಅಡಿಯಲ್ಲಿ ಪರಿಹಾರ ಒದಗಿಸುವುದು ಮತ್ತು ಜಾನುವಾರುಗಳಿಗೆ ಮಿನಿ ಕಿಟ್‌ಗಳ ಬಿಡುಗಡೆಯಂತಹ ಬಹು ಆಯಾಮಗಳ ಮೂಲಕ ಇವುಗಳನ್ನು ಮಾಡಲಾಗುತ್ತದೆ. https://twitter.com/ANI/status/1965356528778588413 https://kannadanewsnow.com/kannada/fir-registered-against-organizers-for-bursting-colored-paper-firecrackers-during-ganesh-procession-in-chitradurga/ https://kannadanewsnow.com/kannada/good-news-for-metro-passengers-in-bangalore-the-4th-train-set-is-operational-here-is-the-schedule/

Read More

ಚಿತ್ರದುರ್ಗ: ಗಣೇಶ ಮೆರವಣಿಗೆ ಸಮಯದಲ್ಲಿ ಕಲರ್ ಪೇಪರ್ ಬ್ಲಾಸ್ಟಿಂಗ್ ಮತ್ತು ಪಟಾಕಿಗಳನ್ನು ಸಿಡಿಸಿದ್ದ ವಿರಾಟ್ ಹಿಂದೂ ಮಹಾಸಾಗರ ಗಣಪತಿಯ ಸಂಘಟಕರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಈ ಕುರಿತಂತೆ ಚಿತ್ರದುರ್ಗ ಜಿಲ್ಲಾ ಪೊಲೀಸ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಚಿತ್ರದುರ್ಗ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳ ಆದೇಶ ಸಂಖ್ಯೆ ನಂ.ಎಂ.ಎ.ಜಿ(3)ಸಿಆರ್/808641/205-26 ದಿನಾಂಕ.31.08.2025 ರಲ್ಲಿ ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ದಿನಾಂಕ.27.08.2025 ರಿಂದ ದಿನಾಂಕ.15.09.2025 ರವರೆಗೆ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆ ಸಮಯದಲ್ಲಿ ಯಾವುದೇ ರೀತಿಯ ಕಲರ್ ಬ್ಲಾಸ್ಟಿಂಗ್ ಹಾಗೂ ಪಟಾಕಿ/ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಿರುವ ಆದೇಶದ ಮಾಹಿತಿಯನ್ನು ದಿನಾಂಕ.08.09.2025 ರಂದು ವಿರಾಟ್ ಹಿಂದೂ ಮಹಾಸಾಗರ ಗಣಪತಿಯ ಅಧ್ಯಕ್ಷರು ಹಾಗೂ ಸಂಘಟಕರಿಗೆ ಮಾಹಿತಿಯನ್ನು ತಿಳಿಸಿ ನೊಟೀಸ್ ಜಾರಿ ಮಾಡಲಾಗಿತ್ತು ಎಂದಿದೆ. ಆದಾಗ್ಯೂ ಸಹಾ ದಿನಾಂಕ.08.09.2025 ರಂದು ವಿರಾಟ್ ಹಿಂದೂ ಮಹಾ ಸಾಗರ ಗಣಪತಿಯ ಮೆರವಣಿಗೆ ವೇಳೆಯಲ್ಲಿ ಮದ್ಯಾಹ್ನ 3.30 ಪಿ.ಎಂ ಸಮಯದಲ್ಲಿ ಹೊಸದುರ್ಗ ಪಟ್ಟಣದ ಜೂನಿಯರ್ ಕಾಲೇಜ್ ಮುಂಭಾಗದಲ್ಲಿ ಕಲರ್ ಪೇಪರ್ ಬ್ಲಾಸ್ಟಿಂಗ್ ಮಾಡಿದ್ದು…

Read More