Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಪ್ರಸಕ್ತ ಸಾಲಿನ ಬೇಸಿಗೆಯಲ್ಲಿ ವಾಡಿಕೆಗಿಂತ ಹೆಚ್ಚು ತಾಪಮಾನ ಏರಿಕೆಯಾಗಿದ್ದು, ಹೆಚ್ಚಿನ ಬಿಸಿಲು ಇರುವ ಕಾರಣ, ಗ್ರಾಮೀಣ ಭಾಗದ ಜೀವನೋಪಾಯದ ಪ್ರಮುಖ ಭಾಗವಾದ ನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡುವ ಬೆಳಗಾವಿ ಮತ್ತು ಕಲಬುರಗಿ ಕಂದಾಯ ವಿಭಾಗದ ಕಾರ್ಮಿಕರಿಗೆ ಎಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಶೇ.30 ರಷ್ಟು ಕೆಲಸದ ಪ್ರಮಾಣದಲ್ಲಿ ರಿಯಾಯಿತಿ ಘೋಷಿಸಿರುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. https://twitter.com/KarnatakaVarthe/status/1908488820259213730 ಬೇಸಿಗೆ ದಿನಗಳಲ್ಲಿ ಕೂಲಿ ಕಾರ್ಮಿಕರು ಶಾಖಾಘಾತದಿಂದ, ತಮ್ಮ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳನ್ನು ತಪ್ಪಿಸಲು ಬಿಳಿಯ ಬಣ್ಣದ ಸಡಿಲವಾದ ಖಾದಿ ಬಟ್ಟೆಗಳನ್ನು ಹಾಗೂ ತಲೆಯ ಮೇಲೆ ಬಿಳಿ ಬಣ್ಣದ ರುಮಾಲು ಧರಿಸಿ ಕೆಲಸ ಮಾಡಬೇಕು, ಚಹಾ, ಕಾಫಿ , ತಂಪಾದ ಪಾನೀಯಗಳು, ಮಸಾಲೆ ಮತ್ತು ಎಣ್ಣೆಭರಿತ ಆಹಾರದ ಬದಲಾಗಿ ಹೆಚ್ಚು ತೇವಾಂಶವುಳ್ಳ ತರಕಾರಿ, ಅಂಬಲಿ, ಮಜ್ಜಿಗೆ, ಎಳೆನೀರು ಸೇವನೆ ಮಾಡಬೇಕು ಹಾಗೂ ನೀರನ್ನು ಯಥೇಚ್ಛವಾಗಿ ಕುಡಿಯಬೇಕು ಎಂದು ಸಚಿವರು ಸಲಹೆ ಮಾಡಿದ್ದಾರೆ.…
ಬೆಂಗಳೂರು: ಸಂವಿಧಾನ ಶಿಲ್ಪಿ ಡಾ.ಬಿಆರ್ ಅಂಬೇಡ್ಕರ್ ಅವರ ಜಯಂತಿಯನ್ನು ರಾಜ್ಯದಲ್ಲಿ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಏಪ್ರಿಲ್.14, 2025ರಂದು ಕಡ್ಡಾಯವಾಗಿ ಆಚರಿಸುವಂತೆ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ 2024-25ನೇ ಶೈಕ್ಷಣಿಕ ವರ್ಷ ದಿನಾಂಕ: 10.04.2025ರಂದು ಮುಕ್ತಾಯವಾಗುತ್ತದೆ ದಿನಾಂಕ :14.04.2025 ರಂದು ಸಂವಿಧಾನ ಶಿಲ್ಪಿ ಡಾ|| ಬಿ. ಆರ್. ಅಂಬೇಡ್ಕರ್‌ರವರ ಜಯಂತಿಯನ್ನು ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಆಚರಿಸಲು ಕ್ರಮವಹಿಸುವಂತೆ ಉಲ್ಲೇಖಿತ ಸುತ್ತೋಲೆಯಲ್ಲಿ ಈಗಾಗಲೇ ಸೂಚಿಸಲಾಗಿದೆ.ದ ಮುಂದುವರೆದು, ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಸಿಬ್ಬಂದಿಗಳು, ಎಸ್.ಡಿ.ಎಂ.ಸಿ ಅಧ್ಯಕ್ಷರು, ಮತ್ತು ಸದಸ್ಯರು ಹಾಗೂ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ DOT: 14.04.20250 ಸೋಮವಾರದಂದು ಸಂವಿಧಾನ ಶಿಲ್ಪಿ ಡಾ|| ಬಿ. ಆರ್. ಅಂಬೇಡ್ಕರ್‌ವರ ಜಯಂತಿಯನ್ನು ಪ್ರತಿ ವರ್ಷದಂತೆ ಕಡ್ಡಾಯವಾಗಿ ಆಚರಿಸಲು ನಿಯಮಾನುಸಾರ ಅಗತ್ಯ ಕ್ರಮಗಳನ್ನು ವಹಿಸುವಂತೆ ರಾಜ್ಯದ ಎಲ್ಲಾ ಉಪನಿರ್ದೇಶಕರು (ಆಡಳಿತ) ಹಾಗೂ…
ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಶೌಚಾಲಯ ಸ್ವಚ್ಛತೆಯನ್ನು ನಿರ್ವಹಿಸಲು ವಿದ್ಯಾರ್ಥಿಗಳನ್ನು ಬಳಸುವಂತಿಲ್ಲ. ಒಂದು ವೇಳೆ ಇಂತಹ ಘಟನೆಗಳು ನಡೆದರೇ ಅಂತಹ ಶಿಕ್ಷಕರ ವಿರುದ್ಧ ಎಫ್ಐಆರ್ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳೋದಾಗಿ ರಾಜ್ಯ ಸರ್ಕಾರ ಖಡಕ್ ಆದೇಶ ಮಾಡಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯಗಳ ಸ್ವಚ್ಛತೆಯನ್ನು ಕಡ್ಡಾಯವಾಗಿ ಮಾಡಿಸಬಾರದೆಂದು ಸಂಬಂಧಿಸಿದ ಶಾಲಾ ಶಿಕ್ಷಣ ಇಲಾಖಾಧಿಕಾರಿಗಳು ಮತ್ತು ಸರ್ಕಾರಿ ಪ್ರಾಥಮಿಕ/ಪ್ರೌಢಶಾಲಾ ಮುಖ್ಯ ಶಿಕ್ಷಕರುಗಳಿಗೆ ಈಗಾಗಲೇ ಉಲ್ಲೇಖಿತ ಸುತ್ತೋಲೆಯ ಮೂಲಕ ತಿಳಿಸಲಾಗಿದ್ದರೂ ಸಹ ವಿದ್ಯಾರ್ಥಿಗಳಿಂದ ಶೌಚಾಲಯಗಳ ಸ್ವಚ್ಛತೆಯಲ್ಲಿ ತೊಡಗಿಸಿಕೊಳ್ಳುತ್ತಿರುವ ಬಗ್ಗೆ ಇತ್ತೀಚೆಗೆ ಕೆಲವು ಪ್ರಕರಣಗಳು ಬೆಳಕಿಗೆ ಬಂದಿರುವುದನ್ನು ಇಲಾಖೆಯು ಗಮನಿಸಿದೆ ಎಂದಿದೆ. ಸರ್ಕಾರದಿಂದ ಮತ್ತು ಇಲಾಖೆಯಿಂದ ಕಾಲ-ಕಾಲಕ್ಕೆ ಹೊರಡಿಸಲಾಗುವ ಸೂಚನೆಗಳನ್ನು ಮತ್ತು ನಿರ್ದೇಶನಗಳನ್ನು ಚಾಚೂ ತಪ್ಪದೆ ಪಾಲಿಸುವಂತೆ ಸೂಚನೆಗಳನ್ನು ನೀಡಲಾಗುತ್ತಿದ್ದರೂ ಸಹ ಇಂತಹ ಸೂಚನೆಗಳನ್ನು ಉಲ್ಲಂಘಿಸುತ್ತಿರುವುದು ಗಂಭೀರವಾಗಿ ಪರಿಗಣಿಸಿ, ಆಕ್ಷೇಪಿಸಿದೆ ಎಂಬುದಾಗಿ ತಿಳಿಸಿದೆ. ಈ ಹಿನ್ನೆಲೆಯಲ್ಲಿ…
ಬೆಂಗಳೂರು: ರಾಜಧಾನಿ ಬೆಂಗಳೂರು ಮಹಾ ನಗರದಲ್ಲಿ ಜೆಡಿಎಸ್ ಪಕ್ಷವನ್ನು ಬಲಗೊಳಿಸುವುದು ಸೇರಿದಂತೆ, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗೆ ತಯಾರಿ, ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ನಿರಂತರ ಜನಾಂದೋಲನ ರೂಪಿಸುವ ಬಗ್ಗೆ ಕೇಂದ್ರ ಸಚಿವರು, ಪಕ್ಷದ ರಾಜ್ಯಾಧ್ಯಕ್ಷರೂ ಆಗಿರುವ ಹೆಚ್.ಡಿ. ಕುಮಾರಸ್ವಾಮಿ ಅವರು ಮುಖಂಡರ ಜತೆ ಮಹತ್ವದ ಮಾತುಕತೆ ನಡೆಸಿದರು. ನಗರದ ತಮ್ಮ ನಿವಾಸದಲ್ಲಿ ಆಹ್ವಾನಿತ ಮುಖಂಡರ ಜತೆ ಸಭೆ ನಡೆಸಿದ ಸಚಿವರು; ಕ್ರಿಯಾಶೀಲವಲ್ಲದ ಜಿಲ್ಲಾಧ್ಯಕ್ಷರ ಬದಲಾವಣೆ, ಖಾಲಿ ಇರುವ ಜಿಲ್ಲಾಧ್ಯಕ್ಷರ ಸ್ಥಾನಗಳ ಭರ್ತಿ, ಸದಸ್ಯತ್ವ ನೋಂದಣಿಯ ಪ್ರಗತಿ ಬಗ್ಗೆಯೂ ಮುಖಂಡರ ಜತೆ ಮಹತ್ವದ ಚರ್ಚೆ ನಡೆಸಿದರು. ಅಲ್ಲದೆ, ರಾಜ್ಯ ಕಾಂಗ್ರೆಸ್ ಸರಕಾರದ ದುರಾಡಳಿತದ ಬಗ್ಗೆ ರಾಜ್ಯವ್ಯಾಪಿ ಹೋರಾಟಗಳನ್ನು ಹಮ್ಮಿಕೊಳ್ಳುವಂತೆ ಸಚಿವರು ಮುಖಂಡರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ವಿದ್ಯುತ್, ನೀರು, ಬಸ್ ಪ್ರಯಾಣ ದರ, ಹಾಲು, ಮೊಸರು, ಡೀಸೆಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಜನರ ಪರವಾಗಿ ಪಕ್ಷ ಹೋರಾಟಗಳನ್ನು ನಡೆಸಬೇಕು. ಜನರ ಕಷ್ಟಕ್ಕೆ ಸ್ಪಂದಿಸುವುದು ನಮ್ಮ ಆದ್ಯ ಕರ್ತವ್ಯ ಇದನ್ನು ಯಾರೂ…
ಮೈಸೂರು: ಬೇಸಿಗೆಯಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆ ಮೈಸೂರು – ದರ್ಬಂಗಾ ನಡುವೆ 10 ಟ್ರಿಪ್‌ಗಳಿಗೆ ಬೇಸಿಗೆ ವಿಶೇಷ ರೈಲುಗಳನ್ನು ಓಡಿಸಲಿದೆ. ರೈಲು ಸೇವೆಗಳ ವಿವರಗಳು ಹೀಗಿವೆ: ರೈಲು ಸಂಖ್ಯೆ 06211/06212 ಮೈಸೂರು – ದರ್ಬಂಗಾ – ಮೈಸೂರು ಎಕ್ಸ್‌ಪ್ರೆಸ್ ವಿಶೇಷ (ಪ್ರತಿ ದಿಕ್ಕಿನಲ್ಲಿ 10 ಟ್ರಿಪ್‌ಗಳು): ರೈಲು ಸಂಖ್ಯೆ 06211 ಏಪ್ರಿಲ್ 8 ರಿಂದ ಜೂನ್ 10, 2025 ರವರೆಗೆ ಪ್ರತಿ ಮಂಗಳವಾರ ಮೈಸೂರಿನಿಂದ ರಾತ್ರಿ 20:30 ಕ್ಕೆ ಹೊರಟು ಶುಕ್ರವಾರ ರಾತ್ರಿ 10:00 ಗಂಟೆಗೆ ಧರ್ಬಂಗಾ ತಲುಪಲಿದೆ. ತಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ 06212 ಏಪ್ರಿಲ್ 12 ರಿಂದ ಜೂನ್ 14, 2025 ರವರೆಗೆ ಪ್ರತಿ ಶನಿವಾರ ಮಧ್ಯಾಹ್ನ 15:45 ಕ್ಕೆ ಧರ್ಬಂಗಾದಿಂದ ಹೊರಟು ಮಂಗಳವಾರ ಮಧ್ಯಾಹ್ನ 3:00 ಕ್ಕೆ ಮೈಸೂರಿಗೆ ಆಗಮಿಸಲಿದೆ. ಮಾರ್ಗದಲ್ಲಿ ರೈಲು ಮಂಡ್ಯ, ಕೆಎಸ್‌ಆರ್ ಬೆಂಗಳೂರು, ಯಶವಂತಪುರ, ತುಮಕೂರು, ಅರಸೀಕೆರೆ, ಚಿಕ್ಕಜಾಜೂರು, ದಾವಣಗೆರೆ, ಎಸ್‌ಎಂಎಂ ಹಾವೇರಿ, ಎಸ್‌ಎಸ್‌ಎಸ್ ಹುಬ್ಬಳ್ಳಿ, ಧಾರವಾಡ, ಲೋಂಡಾ, ಬೆಳಗಾವಿ, ಗೋಕಾಕ್…
ನವದೆಹಲಿ: ಲಾಜಿಸ್ಟಿಕ್ಸ್ ಸೇವೆಗಳ ಪೂರೈಕೆದಾರ ಡೆಲ್ಲಿವರಿ ಲಿಮಿಟೆಡ್ ಶನಿವಾರ (ಏಪ್ರಿಲ್ 5) ತನ್ನ ವ್ಯವಹಾರವನ್ನು ವಿಸ್ತರಿಸಲು ಇಕಾಮ್ ಎಕ್ಸ್‌ಪ್ರೆಸ್ ಲಿಮಿಟೆಡ್ ಅನ್ನು ಸುಮಾರು 1,400 ಕೋಟಿ ರೂ. ನಗದು ಪರಿಗಣನೆಗೆ ಸ್ವಾಧೀನಪಡಿಸಿಕೊಳ್ಳುವುದಾಗಿ ಘೋಷಿಸಿದೆ. ನಿಯಂತ್ರಕ ಫೈಲಿಂಗ್‌ನಲ್ಲಿ, ಕಂಪನಿಯು ತನ್ನ ಷೇರುದಾರರಿಂದ ಸುಮಾರು 1,400 ಕೋಟಿ ರೂ. ನಗದು ಪರಿಗಣನೆಗೆ ಇಕಾಮ್ ಎಕ್ಸ್‌ಪ್ರೆಸ್ ಲಿಮಿಟೆಡ್‌ನಲ್ಲಿ ನಿಯಂತ್ರಣ ಪಾಲನ್ನು ಸ್ವಾಧೀನಪಡಿಸಿಕೊಳ್ಳಲು ನಿರ್ಣಾಯಕ ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ಹೇಳಿದೆ. ಕಂಪನಿಯ ಮಂಡಳಿಯು “ಇಕಾಮ್ ಎಕ್ಸ್‌ಪ್ರೆಸ್ ಲಿಮಿಟೆಡ್‌ನ ನೀಡಲಾದ ಮತ್ತು ಪಾವತಿಸಿದ ಷೇರು ಬಂಡವಾಳದ ಕನಿಷ್ಠ 99.4 ಪ್ರತಿಶತಕ್ಕೆ ಸಮಾನವಾದ ಷೇರುಗಳನ್ನು ಸಂಪೂರ್ಣವಾಗಿ ದುರ್ಬಲಗೊಳಿಸಿದ ಆಧಾರದ ಮೇಲೆ, 1,407 ಕೋಟಿ ರೂ. ಮೀರದ ಖರೀದಿ ಪರಿಗಣನೆಗೆ ಸ್ವಾಧೀನಪಡಿಸಿಕೊಳ್ಳಲು” ಅನುಮೋದಿಸಿದೆ. ಕಂಪನಿ, ಇಕಾಮ್ ಎಕ್ಸ್‌ಪ್ರೆಸ್ ಮತ್ತು ಅವರ ಷೇರುದಾರರ ನಡುವೆ ಷೇರು ಖರೀದಿ ಒಪ್ಪಂದವನ್ನು ಕಾರ್ಯಗತಗೊಳಿಸಲು ಮತ್ತು ಇತರ ಅಗತ್ಯ ದಾಖಲೆಗಳನ್ನು ಕಾರ್ಯಗತಗೊಳಿಸಲು ಮಂಡಳಿಯು ಅನುಮೋದನೆ ನೀಡಿದೆ. ಮುಂದಿನ ಆರು ತಿಂಗಳೊಳಗೆ ಒಪ್ಪಂದ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಗುರುಗ್ರಾಮ್…
ಬೆಂಗಳೂರು: ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಿಗೆ ನೀಡುವ ಗೌರವ ಧನವನ್ನು ಪದ್ಮನಾಭ ನಗರ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪ್ರಮೋದ್ ಶ್ರೀನಿವಾಸ್ ಸರಕಾರಕ್ಕೆ ವಾಪಸ್ ನೀಡಲು ಮುಂದಾಗಿದ್ದಾರೆ. ಈ ಕುರಿತು ಗ್ಯಾರಂಟಿ ಅನುಷ್ಠಾನ ರಾಜ್ಯ ಸಮಿತಿ ಉಪಾಧ್ಯಕ್ಷರು ಹಾಗೂ ಬಿಬಿಎಂಪಿ ಅಧ್ಯಕ್ಷರಿಗೆ ಪತ್ರದ ಮುಖೇನ ತಿಳಿಸಿರುವ ಪ್ರಮೋದ್ ಶ್ರೀನಿವಾಸ್, ತಮಗೆ ಸರಕಾರ ನೀಡಲು ತೀರ್ಮಾನಿಸಿದ್ದ ಮಾಸಿಕ 25,000 ಸಾವಿರ ರೂಗಳನ್ನು ಸರಕಾರಕ್ಕೆ ವಾಪಸ್ ನೀಡುವುದಾಗಿ ತಿಳಿಸಿದ್ದಾರೆ. ಸರಕಾರ ನಮಗೆ ಕೊಟ್ಟಿರುವ ಜವಾಬ್ದಾರಿ ಮಹತ್ವದ್ದಾಗಿದ್ದು, ಈ ಹೊಣೆಗಾರಿಕೆ ಬಡ, ಮಧ್ಯಮ ವರ್ಗದ ಜನರಿಗೆ ಸರಕಾರದ ಯೋಜನೆಯನ್ನು ತಲುಪಿಸುವುದಾಗಿದೆ. ಈ ಹಿನ್ನೆಲೆಯಲ್ಲಿ ಸರಕಾರದಿಂದ ಸಂಬಳ ಪಡೆದು ಕೆಲಸ ಮಾಡುವುದಕ್ಕಿಂತ ಜನರ ಸೇವೆ ಮಾಡುವುದು ನನ್ನ ಗುರಿ ಎಂದು ತಿಳಿಸಿದ್ದಾರೆ. ಸರಕಾರ ಗೌರವಧನ ಎಂದು ಕೇವಲ ಒಂದು ರುಪಾಯಿ ಮಾತ್ರವೇ ನೀಡಲಿ, ನಾನು ಅದನ್ನು ಗೌರವದಿಂದ ಸ್ವೀಕಾರ ಮಾಡುತ್ತೇನೆ. 25 ಸಾವಿರ ರೂಪಾಯಿ ಮಾಸಿಕ ವೇತನವನ್ನು ಸರಕಾರ ಬೇರೆ ಯಾವುದಾದರೂ ಉದ್ದೇಶಕ್ಕೆ ಬಳಕೆ ಮಾಡಿಕೊಳ್ಳಲಿ ಎಂಬುದು…
ಚಿಕ್ಕಮಗಳೂರು : ಕೊಡಗು ಜಿಲ್ಲೆಯ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಒಂದು ದುರಂತ. ಈ ಬಗ್ಗೆ ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಆದರೆ, ಹೆಣದ ಮೇಲೆ ರಾಜಕೀಯ ಮಾಡುವುದು ಸರಿಯಲ್ಲ ಎಂದು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿಯೂ ಆಗಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ವಿನಯ್ ಸೋಮಯ್ಯ ಆತ್ಮಹತ್ಯೆ ಮಾಡಿಕೊಳ್ಳಬಾರದಿತ್ತು. ಈ ಪ್ರಕರಣದಲ್ಲಿ ಈಗಾಗಲೇ ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಯಾರದ್ದೇ ತಪ್ಪಿದ್ದರೂ ಅವರಿಗೆ ತಕ್ಕ ಶಿಕ್ಷೆ ಆಗಬೇಕು. ಅವರ ಸಾವಿನಲ್ಲಿ ರಾಜಕೀಯ ಮಾಡುವುದು ಸರಿಯಲ್ಲ”, ಎಂದರು. “ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕರಾದ ಎ.ಎಸ್.ಪೊನ್ನಣ್ಣ ಮತ್ತು ಮಂಥರ್ ಗೌಡ ಅವರ ಮೇಲೆ ಪ್ರಕರಣ ದಾಖಲಿಸಬೇಕು ಎಂದು ಬಿಜೆಪಿ ನಾಯಕರ ಒತ್ತಾಯ ರಾಜಕೀಯವಲ್ಲವೇ? ಯಾರ ಮೇಲೆ ತನಿಖೆ ಮಾಡಬೇಕು ಎಂಬುದು ಪೊಲೀಸರಿಗೆ ಗೊತ್ತು. ಅವರು ತನಿಖೆ ಮಾಡುತ್ತಾರೆ. ಅದಕ್ಕೆ ಸಹಕರಿಸಬೇಕು” ಎಂದರು. ಶಾಸಕರಾದ ಎ.ಎಸ್.ಪೊನ್ನಣ್ಣ ಮತ್ತು ಮಂಥರ್ ಗೌಡ ಅವರೊಂದಿಗೆ ವಿನಯ್ ಸೋಮಯ್ಯ ಸಂಪರ್ಕದಲ್ಲಿದ್ದರೇ ಎಂದು…
ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನೇರ ಶಾಮೀಲಾಗಿದ್ದಾರೆ ಎಂದು ಪುನರುಚ್ಚರಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು; ಸಿಎಂ ಭಾವಮೈದ ಹದಿನೈದು ನಿವೇಶನಗಳ ಡಿನೋಟಿಫೈ ಮಾಡಲು ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯಲ್ಲಿ ಸಹಿಯನ್ನು ಪೋರ್ಜರಿ ಮಾಡಲಾಗಿತ್ತು ಎಂದು ಆರೋಪಿಸಿದರು. ನಾನು ಸತ್ಯವಂತ, ಸತ್ಯ ಹರಿಶ್ಚಂದ್ರ, ಸತ್ಯಮೆಯ ಜಯತೇ ಎಂದು ಹೇಳುವ ಆಸಾಮಿಯ ಚರಿತ್ರೆ ಲೋಕಾಯುಕ್ತ ವರದಿಯಲ್ಲಿ ಉಲ್ಲೇಖ ಆಗಿದೆ. ಆಸಕ್ತರು ಈ ಮಹಾನ್ ಗ್ರಂಥವನ್ನು ಓದಿ ಸತ್ಯವನ್ನು ತಿಳಿದುಕೊಳ್ಳಬಹುದು ಎಂದು ಕೇಂದ್ರ ಸಚಿವರು ತಿರುಗೇಟು ಕೊಟ್ಟರು. ಆಗ ಸಿದ್ಧರಾಮಯ್ಯ ಉಪ ಮುಖ್ಯಮಂತ್ರಿ ಆಗಿದ್ದರು. ಬಚ್ಚೇಗೌಡರು ನಗರಾಭಿವೃದ್ಧಿ ಸಚಿವರಾಗಿದ್ದರು. ಹದಿನೈದು ನಿವೇಶನ ಡಿನೋಟಿಫೈ ಮಾಡಿ ಎಂದು ಅವರ ಭಾವಮೈದ ಬಚ್ಚೇಗೌಡರಿಗೆ ಅರ್ಜಿ ಸಲ್ಲಿಸಿದರು. ಆ ಭಾವಮೈದ ಎನ್ನುವ ಆಸಾಮಿ ಸಹಿಯನ್ನೇ ನಕಲಿ ಮಾಡಿದ್ದಾನೆ ಎಂದು ವರದಿಯಲ್ಲಿ ಇದೆ. ಅಲ್ಲದೆ ಅರ್ಜಿಯ ಮೇಲೆ ಇಂಗ್ಲಿಷ್ ನಲ್ಲಿ DCM ಎಂದು ಬರೆಯಲಾಗಿದೆ. ಆ ಬಗ್ಗೆ ಬಂದಿರುವ fsil ವರದಿಯನ್ನು ಲೋಕಾಯುಕ್ತ ವರದಿಯಲ್ಲಿ ಅಡಕವಾಗಿದೆ ಎಂದು…
ಬೆಂಗಳೂರು: ಉತ್ತರ ಕರ್ನಾಟಕದ ಪ್ರಮುಖ ಶ್ರದ್ಧಾಕೇಂದ್ರ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ಭಕ್ತರ ಅನುಕೂಲಕ್ಕಾಗಿ ಮೂಲಸೌಕರ್ಯ ಕಲ್ಪಿಸುವ ಸಮಗ್ರ ಯೋಜನೆ ಸಿದ್ಧಗೊಂಡಿದ್ದು, ಕಾಲಮಿತಿಯಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ ಇಂದಿಲ್ಲಿ ತಿಳಿಸಿದರು. ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ರಾಜ್ಯಮಟ್ಟದ ಸಮಿತಿಯ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಪ್ರಸ್ತುತ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಸವದತ್ತಿಯಲ್ಲಮ್ಮನ ಗುಡ್ಡದಲ್ಲಿ ಸಮಗ್ರ ಅಭಿವೃದ್ಧಿಯ ಬದ್ಧತೆಯನ್ನು ಪ್ರಕಟಿಸಲಾಗಿತ್ತು. ಭಾರತ ಹುಣ್ಣಿಮೆಯ ಸಂದರ್ಭದಲ್ಲಿ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ಬದಲಾವಣೆ ಕಾಣುತ್ತೆವೆ ಎಂಬುದು ಭಕ್ತರಿಗೆ ವಿಧಿತವಾಯಿತು ಎಂದು ಸಚಿವರು ಬೆಳಗಾವಿ ಜಿಲ್ಲಾ ಆಡಳಿತಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಳೆದ ಭಾರತ ಹುಣ್ಣಿಮೆ ಸಂದರ್ಭದಲ್ಲಿ 3 ಲಕ್ಷ ಭಕ್ತರಿಗೆ ಮಜ್ಜಿಗೆ ದಾಸೋಹ ಕೈಗೊಂಡಿದ್ದು, ಭಕ್ತರನ್ನು ಸರ್ಕಾರ ಕಾಳಜಿ ಮಾಡುತ್ತಿದೆ ಎಂಬ ಭಾವನೆ ಮೂಡಿತು ಎಂದು ಸಚಿವರು ಹೇಳಿದರು. ಈ ಸಲ ಭಾರತ ಹುಣ್ಣಿಮೆಯ ಸಂದರ್ಭದಲ್ಲಿ ಎಲ್.ಇ.ಡಿ ಸ್ಕ್ರೀನ್ಗಳನ್ನು…