Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದಂತ ಚನ್ನಪಟ್ಟಣ ಉಪ ಚುನಾವಣೆ ಕ್ಷೇತ್ರದ ಅಭ್ಯರ್ಥಿಯ ಹೆಸರು ಕೊನೆಗೂ ಘೋಷಣೆಯಾಗಿದೆ. ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಜೆಡಿಎಸ್ ಹಾಗೂ ಬಿಜೆಪಿಯ ಎನ್ ಡಿ ಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರು ಸ್ಪರ್ಧಿಸಲಿದ್ದಾರೆ ಎಂಬುದಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಹೆಸರನ್ನು ಘೋಷಿಸಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವಂತ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿವಾಸದಲ್ಲಿ ಜೆಡಿಎಸ್ ಹಾಗೂ ಬಿಜೆಪಿಯ ನಾಯಕರು ಸೇರಿ ಈ ಸಂಬಂಧ ಅಂತಿಮ ಚರ್ಚೆಯನ್ನು ನಡೆಸಿದರು. ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಎನ್ ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನು ಇವತ್ತು ನಮ್ಮ ಅಭ್ಯರ್ಥಿ ಅಂತ ಘೋಷಣೆ ಮಾಡಿದ್ದೇವೆ. ಪ್ರಧಾನಿ ಮೋದಿ ಅವರ ಆಶೀರ್ವಾದವಿದೆ. ಮೋದಿ ಅವರ ಬೆಂಬಲದಿಂದ ಕುಮಾರಸ್ವಾಮಿ, ಅಶೋಕ್ ಎಲ್ಲರೂ ಒಟ್ಟಾಗಿ ಸೇರಿದ್ದೇವೆ. ನೂರಕ್ಕೆ ನೂರು ಚುನಾವಣೆಯಲ್ಲಿ ನಿಂತು ಗೆಲುವು ಸಾಧಿಸಲಿದ್ದಾರೆ ಎಂದರು. ನಂತ್ರ ಮಾತನಾಡಿದಂತ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ…
ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದಂತ ಚನ್ನಪಟ್ಟಣ ಉಪ ಚುನಾವಣೆ ಕ್ಷೇತ್ರದ ಅಭ್ಯರ್ಥಿಯ ಹೆಸರು ಕೊನೆಗೂ ಘೋಷಣೆಯಾಗಿದೆ. ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಜೆಡಿಎಸ್ ಹಾಗೂ ಬಿಜೆಪಿಯ ಎನ್ ಡಿ ಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರು ಸ್ಪರ್ಧಿಸಲಿದ್ದಾರೆ ಎಂಬುದಾಗಿ ಉಭಯ ನಾಯಕರು ಹೆಸರನ್ನು ಘೋಷಿಸಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವಂತ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿವಾಸದಲ್ಲಿ ಜೆಡಿಎಸ್ ಹಾಗೂ ಬಿಜೆಪಿಯ ನಾಯಕರು ಸೇರಿ ಈ ಸಂಬಂಧ ಅಂತಿಮ ಚರ್ಚೆಯನ್ನು ನಡೆಸಿದರು. ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಎನ್ ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನು ಇವತ್ತು ನಮ್ಮ ಅಭ್ಯರ್ಥಿ ಅಂತ ಘೋಷಣೆ ಮಾಡಿದ್ದೇವೆ. ಪ್ರಧಾನಿ ಮೋದಿ ಅವರ ಆಶೀರ್ವಾದವಿದೆ. ಮೋದಿ ಅವರ ಬೆಂಬಲದಿಂದ ಕುಮಾರಸ್ವಾಮಿ, ಅಶೋಕ್ ಎಲ್ಲರೂ ಒಟ್ಟಾಗಿ ಸೇರಿದ್ದೇವೆ. ನೂರಕ್ಕೆ ನೂರು ಚುನಾವಣೆಯಲ್ಲಿ ನಿಂತು ಗೆಲುವು ಸಾಧಿಸಲಿದ್ದಾರೆ ಎಂದರು.
ಬಳ್ಳಾರಿ : ಜಿಲ್ಲೆಯ ಪಡಿತರ ಚೀಟಿದಾರರು ತಮ್ಮ ಗುರುತು ನೋಂದಣಿ ಅಥವಾ ಮರುನೋಂದಣಿ ಮಾಡಿಸದೇ ಇರುವ ಎಲ್ಲಾ ಸದಸ್ಯರು ನವೆಂಬರ್ 30 ರೊಳಗೆ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಬೆರಳಚ್ಚು ನೀಡಿ ಭಯೋಸಂಗ್ರಹಣೆ (ಇ-ಕೆವೈಸಿ) ಸಂಗ್ರಹಣೆ ಕಾರ್ಯ ಮಾಡಿಸಿಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಸಕೀನಾ ಅವರು ತಿಳಿಸಿದ್ದಾರೆ. ಇದಕ್ಕೆ ಯಾವುದೇ ಹಣ ನೀಡುವಂತಿಲ್ಲ. ಆಧಾರ್ ದೃಢೀಕರಣ(ಇ-ಕೆವೈಸಿ) ಮಾಡಿಸದೇ ಇರುವ ಫಲಾನುಭವಿಗಳಿಗೆ ಡಿಸೆಂಬರ್ ಮಾಹೆಯಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು. ಹಾಗಾಗಿ ಇ-ಕೆವೈಸಿ ಮಾಡಿಸಿಕೊಳ್ಳದೇ ಇರುವ ಪಡಿತರ ಚೀಟಿಯಲ್ಲಿರುವ ಪ್ರತಿಯೊಬ್ಬ ಸದಸ್ಯರೂ ಸಹ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಹೆಬ್ಬೆರಳು ನೀಡಿ ಹೆಸರು ಮರು ನೋಂದಾವಣೆ (ಇ-ಕೆವೈಸಿ) ಮಾಡಿಸಿಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/the-education-department-has-ordered-not-to-declare-the-results-of-class-8-9-and-10-mid-year-examinations-in-the-state/ https://kannadanewsnow.com/kannada/breaking-bjp-candidate-bharath-bommai-files-nomination-for-shiggavi-assembly-by-election/
ಬೆಂಗಳೂರು: ರಾಜ್ಯದ 8, 9 ಮತ್ತು 10ನೇ ತರಗತಿ ಮಧ್ಯ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡದಂತೆ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಮೂಲಕ ಮಧ್ಯ ವಾರ್ಷಿಕ ಪರೀಕ್ಷೆ ಫಲಿತಾಂಶಕ್ಕೆ ತಡೆ ನೀಡಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ರಾಜ್ಯ ಎಲ್ಲಾ ಜಿಲ್ಲಾ ಉಪ ನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲಾ ಮುಖ್ಯಸ್ಥರಿಗೆ ಪತ್ರಬರೆದು ಸೂಚಿಸಿದ್ದಾರೆ. ಶಾಲಾ ಶಿಕ್ಷಣ ಇಲಾಖೆಯ ಆದೇಶದಲ್ಲಿ ಏನಿದೆ.? ಘನ ಸರ್ವೋಚ್ಚ ನ್ಯಾಯಾಲಯವು ಮುಂದಿನ ಆದೇಶದವರೆಗೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ 8, 9 ಮತ್ತು 10ನೇ ತರಗತಿಯ ಮಧ್ಯವಾರ್ಷಿಕ ಪರೀಕ್ಷೆಯ (SA-1) ಫಲಿತಾಂಶವನ್ನು ಪ್ರಕಟಿಸದಿರಲು ಹಾಗೂ ಯಾವುದೇ ಶಾಲೆಯು ಈವರೆವಿಗೂ ಮಧ್ಯವಾರ್ಷಿಕ ಪರೀಕ್ಷೆ (SA-1) ಅನ್ನು ನಡೆಸಿಲ್ಲದಿದ್ದಲ್ಲಿ ಅಂತಹ ಶಾಲೆಯು ಪರೀಕ್ಷೆಯನ್ನು ನಡೆಸದಿರಲು ಆದೇಶಿಸಿರುತ್ತದೆ. ಅದರಂತೆ ರಾಜ್ಯದ ಎಲ್ಲಾ ಶಾಲೆಗಳಲ್ಲಿ ನಡೆಸಲಾಗಿರುವ 8, 9 ಮತ್ತು 10ನೇ ತರಗತಿಯ ಮಧ್ಯವಾರ್ಷಿಕ ಪರೀಕ್ಷೆಗಳ (SA-1) ಫಲಿತಾಂಶವನ್ನು ಮುಂದಿನ ಆದೇಶದವರೆಗೂ ಪುಕಟಿಸದಂತೆ…
ನವದೆಹಲಿ: ನಿರ್ಣಾಯಕ ಮಹಾರಾಷ್ಟ್ರ ವಿಧಾನಸಭೆಗೆ ಮುಂಚಿತವಾಗಿ “ಗಡಿಯಾರ” ಚಿಹ್ನೆಯನ್ನು ಉಳಿಸಿಕೊಳ್ಳಲು ಎನ್ಸಿಪಿಯ ಅಜಿತ್ ಪವಾರ್ ನೇತೃತ್ವದ ಬಣಕ್ಕೆ ಸುಪ್ರೀಂ ಕೋರ್ಟ್ ಗುರುವಾರ ಅನುಮತಿ ನೀಡಿದೆ. ಆದಾಗ್ಯೂ, ಚಿಹ್ನೆಯನ್ನು ಹಕ್ಕು ನಿರಾಕರಣೆಯೊಂದಿಗೆ ಬಳಸುವಂತೆ ಮತ್ತು ನವೆಂಬರ್ 6 ರೊಳಗೆ ತನ್ನ ನಿರ್ದೇಶನಗಳನ್ನು ಉಲ್ಲಂಘಿಸುವುದಿಲ್ಲ ಎಂದು ಹೊಸ ಮುಚ್ಚಳಿಕೆಯನ್ನು ಸಲ್ಲಿಸುವಂತೆ ಉನ್ನತ ನ್ಯಾಯಾಲಯವು ಅಜಿತ್ ಪವಾರ್ ಬಣಕ್ಕೆ ಸೂಚಿಸಿತು. “ಚುನಾವಣೆ ಮುಗಿಯುವವರೆಗೂ ನೀವು (ಅಜಿತ್ ಪವಾರ್ ಬಣ) ನಮ್ಮ ನಿರ್ದೇಶನಗಳನ್ನು ಉಲ್ಲಂಘಿಸುವುದಿಲ್ಲ ಎಂದು ದಯವಿಟ್ಟು ಹೊಸ ಮುಚ್ಚಳಿಕೆಯನ್ನು ಸಲ್ಲಿಸಿ. ನಿಮಗಾಗಿ ಮುಜುಗರದ ಪರಿಸ್ಥಿತಿಯನ್ನು ಸೃಷ್ಟಿಸಬೇಡಿ. ನಮ್ಮ ಆದೇಶವನ್ನು ಉಲ್ಲಂಘಿಸಲು ಉದ್ದೇಶಪೂರ್ವಕ ಪ್ರಯತ್ನ ನಡೆಯುತ್ತಿದೆ ಎಂದು ನಾವು ಕಂಡುಕೊಂಡರೆ, ನಾವು ಸ್ವಯಂಪ್ರೇರಿತ ನ್ಯಾಯಾಂಗ ನಿಂದನೆಯನ್ನು ಪ್ರಾರಂಭಿಸಬಹುದು” ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ವರ್ಷದ ಆರಂಭದಲ್ಲಿ, ಚುನಾವಣಾ ಆಯೋಗವು ಎನ್ಸಿಪಿಯ “ಗಡಿಯಾರ” ಚಿಹ್ನೆಯನ್ನು ಅಜಿತ್ ಪವಾರ್ ನೇತೃತ್ವದ ಗುಂಪಿಗೆ ಹಂಚಿಕೆ ಮಾಡಿತು. 2023 ರಲ್ಲಿ, ಅಜಿತ್ ಪವಾರ್ ತಮ್ಮ ಚಿಕ್ಕಪ್ಪನ ವಿರುದ್ಧ ದಂಗೆಯೆದ್ದು ಆಡಳಿತಾರೂಢ ಮಹಾಯುತಿ…
ನವದೆಹಲಿ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಇನ್-ಸ್ಪಾಸ್ ಆಶ್ರಯದಲ್ಲಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮೀಸಲಾಗಿರುವ 1000 ಕೋಟಿ ರೂ.ಗಳ ಸಾಹಸೋದ್ಯಮ ಬಂಡವಾಳ ನಿಧಿ ಸ್ಥಾಪನೆಗೆ ತನ್ನ ಅನುಮೋದನೆ ನೀಡಿದೆ. ಆರ್ಥಿಕ ಪರಿಣಾಮಗಳು: ಉದ್ದೇಶಿತ 1,000 ಕೋಟಿ ರೂ.ಗಳ ವಿಸಿ ನಿಧಿಯ ನಿಯೋಜನೆ ಅವಧಿಯನ್ನು ನಿಧಿ ಕಾರ್ಯಾಚರಣೆಗಳ ಪ್ರಾರಂಭದ ನಿಜವಾದ ದಿನಾಂಕದಿಂದ ಐದು ವರ್ಷಗಳವರೆಗೆ ಯೋಜಿಸಲಾಗಿದೆ. ಹೂಡಿಕೆಯ ಅವಕಾಶಗಳು ಮತ್ತು ನಿಧಿಯ ಅವಶ್ಯಕತೆಗಳನ್ನು ಅವಲಂಬಿಸಿ ಸರಾಸರಿ ನಿಯೋಜನೆ ಮೊತ್ತವು ವರ್ಷಕ್ಕೆ 150-250 ಕೋಟಿ ರೂ.ಗಳಾಗಿರಬಹುದು. ಕಂಪನಿಯ ಹಂತ, ಅದರ ಬೆಳವಣಿಗೆಯ ಪಥ ಮತ್ತು ರಾಷ್ಟ್ರೀಯ ಬಾಹ್ಯಾಕಾಶ ಸಾಮರ್ಥ್ಯಗಳ ಮೇಲೆ ಅದರ ಸಂಭಾವ್ಯ ಪರಿಣಾಮವನ್ನು ಅವಲಂಬಿಸಿ ಹೂಡಿಕೆಯ ಸೂಚಕ ಶ್ರೇಣಿಯನ್ನು 10-60 ಕೋಟಿ ರೂ.ಗಳಿಗೆ ಪ್ರಸ್ತಾಪಿಸಲಾಗಿದೆ. ಸೂಚಕ ಈಕ್ವಿಟಿ ಹೂಡಿಕೆ ಶ್ರೇಣಿಯು ಹೀಗಿರಬಹುದು: • ಬೆಳವಣಿಗೆಯ ಹಂತ: 10 ಕೋಟಿ ರೂ.- 30 ಕೋಟಿ ರೂ. • ವಿಳಂಬ ಬೆಳವಣಿಗೆಯ ಹಂತ: 30 ಕೋಟಿ ರೂ.-…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬೆಂಗಳೂರನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ಸರ್ಕಾರ ನಮಗೆ ಬ್ರ್ಯಾಂಡ್ ಬೆಂಗಳೂರು ನೀಡುವುದು ಬೇಡ, ಸುರಕ್ಷಿತವಾದ ರೆಗ್ಯುಲರ್ ಬೆಂಗಳೂರು ನೀಡಿದರೆ ಸಾಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಬಾಬುಸಾಪಾಳ್ಯದಲ್ಲಿ ಕಟ್ಟಡ ಕುಸಿದ ಸ್ಥಳಕ್ಕೆ ಭೇಟಿ ನೀಡಿದ ಅವರು, ಸಂತ್ರಸ್ತರು ಹಾಗೂ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಬಂದ ನಂತರ ಬ್ರ್ಯಾಂಡ್ ಬೆಂಗಳೂರು ಎಂಬ ಹೆಸರು ಹುಟ್ಟುಹಾಕಿದ್ದಾರೆ. ಆದರೆ ನಗರದಲ್ಲಿ ದಿನಕ್ಕೊಂದು ಅವಘಡ ಸಂಭವಿಸುತ್ತಿದೆ. ಬಾಬುಸಾಪಾಳ್ಯದಲ್ಲಿ ಕಟ್ಟಡ ಕುಸಿತವಾಗಿದ್ದು, ಎಂಟು ಅಮಾಯಕರು ಮೃತರಾಗಿದ್ದಾರೆ. ಇಲ್ಲಿನ 20 ಅಡಿ ರಸ್ತೆಗೆ ಹೆಚ್ಚೆಂದರೆ 3 ಮಹಡಿ ನಿರ್ಮಿಸಬಹುದು. ಆದರೆ 7 ಮಹಡಿ ನಿರ್ಮಿಸಲು ಹೊರಟಿದ್ದರಿಂದ ಅವಘಡ ನಡೆದಿದೆ. ಬಿಬಿಎಂಪಿ ಅಧಿಕಾರಿಗಳು ಇದನ್ನು ಸರಿಯಾಗಿ ನಿರ್ವಹಣೆ ಮಾಡಿದ್ದರೆ ಎಲ್ಲವೂ ಸರಿ ಇರುತ್ತಿತ್ತು ಎಂದರು. ಕಾಂಗ್ರೆಸ್ ಸರ್ಕಾರ ಇಂತಹ ಯಾವುದೇ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಕೆಲ ತಿಂಗಳ ಹಿಂದೆ ವಿದ್ಯುತ್ ತಂತಿ ತಗುಲಿ ತಾಯಿ ಮತ್ತು ಮಗು ಮೃತಪಟ್ಟಾಗ ಅದಕ್ಕೆ…
ನವದೆಹಲಿ: 2,245 ಕೋಟಿ ರೂ.ಗಳ ವೆಚ್ಚದಲ್ಲಿ ಅಮರಾವತಿ ರೈಲ್ವೆ ಮಾರ್ಗವನ್ನು ಕೇಂದ್ರವು ಅನುಮೋದಿಸಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಇದು ಕೃಷ್ಣಾ ನದಿಗೆ ಅಡ್ಡಲಾಗಿ 3 ಕಿ.ಮೀ ಸೇತುವೆಯನ್ನು ಹೊಂದಿರುತ್ತದೆ. ಇದು ಹೈದರಾಬಾದ್, ಚೆನ್ನೈ ಮತ್ತು ಕೋಲ್ಕತ್ತಾದೊಂದಿಗೆ ಅಮರಾವತಿಯಿಂದ ನೇರ ರೈಲು ಸಂಪರ್ಕವನ್ನು ಹೊಂದಿರುತ್ತದೆ. ಇದು ಮಧ್ಯ ಮತ್ತು ಉತ್ತರ ಭಾರತದ ದಕ್ಷಿಣ ಭಾರತದ ಸಂಪರ್ಕವನ್ನು ಸುಧಾರಿಸುತ್ತದೆ ಎಂದು ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಇದು 19 ಲಕ್ಷ ಮಾನವ ದಿನಗಳ ಉದ್ಯೋಗವನ್ನು ಸೃಷ್ಟಿಸುತ್ತದೆ. ಇದು 6 ಕೋಟಿ ಕೆಜಿ ಇಂಗಾಲದ ಹೊರಸೂಸುವಿಕೆಯನ್ನು ಉಳಿಸುತ್ತದೆ ಎಂದಿದ್ದಾರೆ. https://kannadanewsnow.com/kannada/i-have-put-nikhil-kumaraswamy-in-your-lap-it-is-your-responsibility-to-win-hdk/ https://kannadanewsnow.com/kannada/by-election-schedule-for-gram-panchayat-seats-announced/
ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಇದನ್ನು ಹೆಚ್.ಡಿ ಕುಮಾರಸ್ವಾಮಿ ಕೂಡ ಗುಟ್ಟು ಬಿಚ್ಚಿಟ್ಟಿದ್ದಾರೆ. ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವಂತ ಜೆಡಿಎಸ್ ಕಚೇರಿಯಲ್ಲಿ ನಡೆದಂತ ಚನ್ನಪಟ್ಟಣ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದಂತ ಅವರು, ನಿಖಿಲ್ ಕುಮಾರಸ್ವಾಮಿ ನಿಮ್ಮ ಮಗ. ನಿಮ್ಮ ಮಡಿಲಿಗೆ ಹಾಕಿದ್ದೇನೆ. ಗೆಲ್ಲಿಸುವ ಜವಾಬ್ದಾರಿ ನಿಮ್ಮ ಮೇಲಿದೆ ಎಂಬುದಾಗಿ ಭಾವನಾತ್ಮಕವಾಗಿ ಹೇಳಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಅಂದಹಾಗೇ ಇಂದಿನ ಚನ್ನಪಟ್ಟಣ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಚನ್ನಪಟ್ಟಣ ಉಪ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಹೆಸರು ಫೈನಲ್ ಮಾಡಲಾಗಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಹೆಚ್.ಡಿ ಕುಮಾರಸ್ವಾಮಿ ಹಾಗೂ ಬಿಎಸ್ ಯಡಿಯೂರಪ್ಪ ಜಂಟಿ ಸುದ್ದಿಗೋಷ್ಠಿಯಲ್ಲಿ ಹೆಸರನ್ನು ಘೋಷಣೆ ಮಾಡಲಿದ್ದಾರೆ. https://kannadanewsnow.com/kannada/bomb-threat-to-85-more-aircraft/ https://kannadanewsnow.com/kannada/by-election-schedule-for-gram-panchayat-seats-announced/
ನವದೆಹಲಿ: ಕಳೆದ ಕೆಲ ದಿನಗಳಿಂದ ಹಲವು ವಿಮಾನಗಳಿಗೆ ಬಾಂಬ್ ಬೆದರಿಕೆಯನ್ನು ಇಮೇಲ್, ಎಕ್ಸ್ ಮೂಲಕ ಹಾಕಲಾಗಿತ್ತು. ಇಂದು ಮತ್ತೆ ಸರಣಿ ಮುಂದುವರೆದಿದ್ದು ಹೊಸದಾಗಿ 85 ವಿಮಾನಗಳಿಗೆ ಬಾಂಬ್ ಬೆದರಿಕೆಯನ್ನು ಹಾಕಲಾಗಿದೆ. ಇಂದು ಇಂಡಿಗೊ, ಏರ್ ಇಂಡಿಯಾ, ವಿಸ್ತಾರಾ ಮತ್ತು ಅಕಾಸಾ ಏರ್ ಸೇರಿದಂತೆ 85 ವಿಮಾನಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಹೀಗಾಗಿ ಕೆಲ ವಿಮಾನಗಳ ಸಂಚಾರದಲ್ಲೂ ವ್ಯತ್ಯಯ ಉಂಟಾಗಿದೆ. ಬಾಂಬ್ ಬೆದರಿಕೆಯಿಂದಾಗಿ ವಿಮಾನಗಳನ್ನು ಬಾಂಬ್ ನಿಷ್ಕ್ರೀಯ ದಳದವರು ತಪಾಸಣೆಗೆ ಒಳಪಡಿಸುತ್ತಿದ್ದಾರೆ. https://kannadanewsnow.com/kannada/bidar-labourer-dies-after-falling-from-3rd-floor-of-building/ https://kannadanewsnow.com/kannada/by-election-schedule-for-gram-panchayat-seats-announced/