Author: kannadanewsnow09

ಬೀದರ್: ಜಿಲ್ಲೆಯ ಕಟ್ಟಡವೊಂದರ ಮೂರನೇ ಮಹಡಿಯಿಂದ ಕೆಳಗೆ ಬಿದ್ದು ಕಾರ್ಮಿಕನೋರ್ವ ಸಾವನ್ನಪ್ಪಿರುವಂತ ಘೋರ ಘಟನೆ ನಡೆದಿದೆ. ಈ ಘಟನೆಗೆ ಮಾಲೀಕರು, ಗುತ್ತಿಗೆದಾರರೇ ಕಾರಣ ಎಂಬುದಾಗಿ ಪೋಷಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಬೀದರ್ ಜಿಲ್ಲೆಯ ವಿದ್ಯಾನಗರದಲ್ಲಿ ಮೂರು ದಿನಗಳ ಹಿಂದೆ ನಡೆದಿದ್ದಂತ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇಲ್ಲಿನ ಮೂರನೇ ಮಹಡಿಯ ಕಟ್ಟಡವೊಂದರಿಂದ ಕಾರ್ಮಿಕ ಇಮ್ಯಾನುಯೆಲ್ (23) ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ. ಕಾರ್ಮಿಕ ಇಮ್ಯಾನುಯೆಲ್ ಕಟ್ಟಡದ ಮೂರನೇ ಮಹಡಿಯಿಂದ ಕೆಳಗೆ ಬೀಳುತ್ತಿರುವಂತ ದೃಶ್ಯ ಸಮೀಪದ ಸಿಸಿಟಿವಿಯೊಂದರಲ್ಲಿ ಸೆರೆಯಾಗಿದೆ. ಈ ದುರಂತಕ್ಕೆ ಗುತ್ತಿಗೆದಾರರು, ಮನೆಯ ಮಾಲೀಕರು, ಇಂಜಿನಿಯರ್ ಕಾರಣ. ಮನೆ ಕೆಲಸಕ್ಕೆ ಮಗನನ್ನು ಕರೆದುಕೊಂಡು ಹೋಗಿ ಕೊಲೆ ಮಾಡಿರುವುದಾಗಿ ಪೋಷಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಅಲ್ಲದೇ ಸೂಕ್ತ ಕಾನೂನು ಕ್ರಮಕ್ಕೂ ಆಗ್ರಹಿಸಿದ್ದಾರೆ. https://kannadanewsnow.com/kannada/sandur-assembly-bypoll-8-cases-registered-for-violation-of-model-code-of-conduct/ https://kannadanewsnow.com/kannada/by-election-schedule-for-gram-panchayat-seats-announced/

Read More

ಬಳ್ಳಾರಿ : ಜಿಲ್ಲೆಯ ವಿವಿಧ ತಾಲ್ಲೂಕುಗಳ ಗ್ರಾಮ ಪಂಚಾಯಿತಿಯಲ್ಲಿ ವಿವಿಧ ಕಾರಣಗಳಿಂದ ತೆರವಾದ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ಚುನಾವಣಾ ವೇಳಾಪಟ್ಟಿ ಪ್ರಕಟಿಸಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ. ನಾಮಪತ್ರಗಳನ್ನು ಸಲ್ಲಿಸಲು ನ.12 ರಂದು ಕೊನೆಯ ದಿನವಾಗಿರುತ್ತದೆ. ನ.13 ರಂದು ನಾಮ ಪತ್ರಗಳನ್ನು ಪರಿಶೀಲಿಸುವ ದಿನವಾಗಿರುತ್ತದೆ. ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ನ.15 ಕೊನೆಯ ದಿನವಾಗಿರುತ್ತದೆ. ಮತದಾನವು ನ.23 ರಂದು ನಡೆಯಲಿದೆ. ಮಾದರಿ ನೀತಿ ಸಂಹಿತೆಯು ನ.06 ರಿಂದ ನ.26 ರ ವರೆಗೆ ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ವ್ಯಾಪ್ತಿ ಪ್ರದೇಶಕ್ಕೆ ಮಾತ್ರ ಜಾರಿ ಇರುತ್ತದೆ. ಚುನಾವಣೆಯನ್ನು ಶಾಂತಿಯುತವಾಗಿ ಹಾಗೂ ಮುಕ್ತವಾಗಿ ನಡೆಸುವ ಹಿನ್ನಲೆಯಲ್ಲಿ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಆಯಾ ತಾಲ್ಲೂಕು ತಹಶೀಲ್ದಾರರ ಉಸ್ತುವಾರಿಯಲ್ಲಿ ತಾಲ್ಲೂಕು ಮಟ್ಟದ ಎಂಸಿಸಿ ತಂಡಗಳನ್ನು ರಚಿಸಿ ಜಿಲ್ಲಾಧಿಕಾರಿಯವರು ಆದೇಶಿಸಿದ್ದಾರೆ. ಖಾಲಿ ಇರುವ ಗ್ರಾಪಂ ವಿವರ ಮತ್ತು ಸ್ಥಾನ: ಬಳ್ಳಾರಿ ತಾಲ್ಲೂಕಿನ ಕಪ್ಪಗಲ್ಲು-1, ರ‍್ರಗುಡಿ-1, ಬಿ.ಬೆಳಗಲ್ಲು-1, ಕುರುಗೋಡು ತಾಲ್ಲೂಕಿನ ಕಲ್ಲುಕಂಭ-2, ದಮ್ಮೂರು-1, ಸಿರುಗುಪ್ಪ ತಾಲ್ಲೂಕಿನ…

Read More

ಬಳ್ಳಾರಿ : ಸಂಡೂರು ವಿಧಾನಸಭೆ ಉಪಚುನಾವಣೆ ಅಂಗವಾಗಿ ಮಾದರಿ ನೀತಿ ಸಂಹಿತೆಯು ಕಟ್ಟುನಿಟ್ಟಾಗಿ ಜಾರಿಯಲ್ಲಿದ್ದು, ಬುಧವಾರ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಅನಧೀಕೃತವಾಗಿ ಸಾಗಿಸುತ್ತಿದ್ದ 2616.93 ಲೀಟರ್ (ರೂ.7,76,648 ಮೌಲ್ಯ) ಮದ್ಯ ವಶಪಡಿಸಿಕೊಂಡು 8 ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. ಅಬಕಾರಿ ಪೊಲೀಸ್ ಅಧಿಕಾರಿಗಳಿಂದ 2615.49 ಲೀಟರ್ (ರೂ.776008 ಮೌಲ್ಯ) ಮದ್ಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳಿಂದ 1.41 ಲೀಟರ್ (ರೂ.640 ಮೌಲ್ಯ) ಮದ್ಯ ವಶಪಡಿಸಿಕೊಳ್ಳಲಾಗಿದೆ. ಸಂಡೂರು ವಿಧಾನಸಭೆ ಉಪಚುನಾವಣೆಯ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಈಗಾಗಲೇ ವಿವಿಧ ತಂಡಗಳನ್ನು ರಚಿಸಲಾಗಿದ್ದು, ಅವುಗಳು ಕಾರ್ಯಪ್ರವೃತ್ತವಾಗಿದೆ. 9 ಫ್ಲೆಯಿಂಗ್ ಸ್ಕ್ವಾಡ್ 1 ಎಸ್‌ಎಸ್‌ಟಿ ತಂಡ ಮತ್ತು 4 ಅಬಕಾರಿ ತಂಡ ಕಾರ್ಯ ನಿರ್ವಹಿಸುತ್ತಿವೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. https://kannadanewsnow.com/kannada/ct-ravis-cooperation-is-in-favour-of-yogeshwar-dk-suresh/ https://kannadanewsnow.com/kannada/ct-ravis-cooperation-is-in-favour-of-yogeshwar-dk-suresh/

Read More

ಚನ್ನಪಟ್ಟಣ: ಸಿಪಿ ಯೋಗೇಶ್ವರ್ ಜನಪ್ರಿಯ ನಾಯಕರಾಗಿದ್ದಾರೆ. ಅವರು ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಗೆಲ್ಲೋದರಲ್ಲಿ ಡೌಟೇ ಇಲ್ಲ ಎಂಬುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. ಇಂದು ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಸಿ.ಪಿ ಯೋಗೇಶ್ವರ್ ನಾಮಪತ್ರ ಸಲ್ಲಿಕೆಗೆ ಮುನ್ನಾ ನಡೆದಂತ ರೋಡ್ ಶೋನಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ಎರಡು ಬಾರಿ ಸಿಎಂ ಆಗಿದ್ದಾಗ ಚನ್ನಪಟ್ಟಣ ಕ್ಷೇತ್ರದ ಅಭಿವೃದ್ದಿಗೆ ತಮ್ಮ ಕೊಡುಗೆ ಏನು ಎನ್ನುವ ಪಟ್ಟಿಯನ್ನು ಕುಮಾರಸ್ವಾಮಿ ಅವರು ಬಿಡುಗಡೆ ಮಾಡಲಿ. ಕ್ಷೇತ್ರದ ಅಭಿವೃದ್ದಿಗೆ ಅವರ ಸಾಕ್ಷಿ ಗುಡ್ಡೆಯನ್ನು ಜನರ ಮುಂದಿಡಲಿ. ಶುಭ ಘಳಿಗೆಯಲ್ಲಿ ಯೋಗೇಶ್ವರ್ ಪಕ್ಷ ಸೇರಿದ್ದಾರೆ. ಇವರ ಕೈ ಬಲಪಡಿಸುವುದರ ಮೂಲಕ ದೇಶಕ್ಕೆ ಬಲವಾದ ಸಂದೇಶ ನೀಡಬೇಕು. ಅತಿ ಹೆಚ್ಚು ಮತಗಳ ಅಂತರದಿಂದ ಇವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡುತ್ತೇನೆ ಎಂದರು. ಮುಂದಿನ ದಿನಗಳಲ್ಲಿ ಮಿಕ್ಕ ವಿಚಾರಗಳನ್ನು ನಾನು ಮಾತನಾಡುತ್ತೇನೆ. ಮುಂದಿನ ದಿನಗಳಲ್ಲಿ ಸಾಕಷ್ಟು ಸಿನಿಮಾಗಳನ್ನು ನಾವು ನೋಡಬೇಕಿದೆ. ಚುನಾವಣೆ ಗೆಲ್ಲುವುದೊಂದೇ ನಮ್ಮ ಗುರಿ. ಲೋಕಸಭಾ ಚುನಾವಣೆ ಯಲ್ಲಿ…

Read More

ಬೆಂಗಳೂರು: ಇಂದು ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಸಂಬಂಧ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಈ ಸಭೆಯಲ್ಲಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಹೆಸರು ಘೋಷಿಸಲಾಗಿದೆ. ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಯಾರನ್ನು ನಿಲ್ಲಿಸಲಾಗುತ್ತದೆ ಎಂಬುದು ತೀವ್ರ ಕುತೂಹಲ ಮೂಡಿಸಿತ್ತು. ಅದು ಕೊನೆಗೂ ಬಹಿರಂಗವಾಗಿದೆ. ಜೆಡಿಎಸ್ ಪಕ್ಷದ ಶಾಸಕಾಂಗ ಸಭೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನು ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರ ಸಮ್ಮುಖದಲ್ಲಿ ಶೇಷಾದ್ರಿಪುರಂನಲ್ಲಿನ ಜೆಡಿಎಸ್ ಕಚೇರಿಯಲ್ಲಿ ನಡೆದಂತ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಈ ಸಭೆಯಲ್ಲಿ ಮಾತನಾಡಿರುವಂತ ನಿಖಿಲ್ ಕುಮಾರಸ್ವಾಮಿ ನಿಮ್ಮೆಲ್ಲರ ಒತ್ತಡಕ್ಕೆ ಮಣಿದು ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಹೀಗಾಗಿ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ನಿಲ್ಲುವುದು ಫೈನಲ್ ಆಗಿದೆ. https://kannadanewsnow.com/kannada/ct-ravis-cooperation-is-in-favour-of-yogeshwar-dk-suresh/ https://kannadanewsnow.com/kannada/breaking-bjp-candidate-bharath-bommai-files-nomination-for-shiggavi-assembly-by-election/

Read More

ಬೆಂಗಳೂರು : “ಸಿ.ಟಿ.ರವಿ ಅವರ ಸಹಕಾರ ಯೋಗೇಶ್ವರ್ ಅವರ ಪರವಾಗಿದೆ. ಮಿಕ್ಕ ವಿಶ್ಲೇಷಣೆ ನೀವು (ಮಾಧ್ಯಮದವರು) ಮಾಡಿಕೊಳ್ಳಿ” ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಹೇಳಿದರು. ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯಿಸಿದರು. ಸಿ.ಪಿ.ಯೋಗೇಶ್ವರ್ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡು ಕಾಂಗ್ರೆಸ್ ದುರ್ಬಲವೆಂದು ತೋರಿಸಿಕೊಂಡಿದೆ ಎನ್ನುವ ಸಿ.ಟಿ.ರವಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಬಿಜೆಪಿಯವರ ಹಾಗೂ ಬಿಜೆಪಿಯ ಬಗ್ಗೆ ನಾನು ವಿಶ್ಲೇಷಣೆ ಮಾಡಲು ಹೋಗುವುದಿಲ್ಲ. ವಿಶ್ಲೇಷಣೆಯನ್ನು ತೀವ್ರವಾಗಿ ಮಾಡಬಹುದು ಆದರೆ ಮಾಡುವುದಿಲ್ಲ.” ಎಂದರು. ಬಿಜೆಪಿಯ ಕೆಲ ನಾಯಕರಿಂದಾಗಿ ಯೋಗೇಶ್ವರ್ ಕಾಂಗ್ರೆಸ್ ಸೇರಿದ್ದಾರೆ ಎಂಬ ಕುಮಾರಸ್ವಾಮಿ ಹಾಗೂ ನಿಖಿಲ್ ಅವರ ಹೇಳಿಕೆ ಬಗ್ಗೆ ಕೇಳಿದಾಗ “ನಾನು ಸಿ.ಟಿ.ರವಿಯವರ ಹೇಳಿಕೆಗೆ ಮಾತ್ರ ಉತ್ತರ ನೀಡುತ್ತಿದ್ದು, ಮಿಕ್ಕ ಚರ್ಚೆ, ವಿಶ್ಲೇಷಣೆಯನ್ನು ನೀವು ಮಾಡಿ. ಮಾಧ್ಯಮದವರು ಹೆಚ್ಚು ವ್ಯಾಖ್ಯಾನ ಮಾಡುವುದರಿಂದ ಇದರ ಸಾಧಕ- ಬಾಧಕಗಳು ಹಾಗೂ ಕಳೆದ ಒಂದು ವಾರಗಳಿಂದ ನಡೆದ ವಿದ್ಯಮಾನಗಳನ್ನು ರಾಜ್ಯದ ಜನರಿಗೆ ನೀವು ತಿಳಿಸಬೇಕು” ಎಂದರು. ನಿಖಿಲ್ ಅಥವಾ ಅನಸೂಯಾ ಮಂಜುನಾಥ್…

Read More

ಬೆಂಗಳೂರು: ರಾಜ್ಯದ ಎರಡು ವಿಧಾನಸಭಾ ಉಪ ಚುನಾವಣೆಯ ಕ್ಷೇತ್ರಗಳಿಗೆ ಬಿಜೆಪಿಯಿಂದ ಟಿಕೆಟ್ ಘೋಷಣೆ ಮಾಡಲಾಗಿತ್ತು. ಆದರೇ ಚನ್ನಪಟ್ಟಣಕ್ಕೆ ಘೋಷಣೆ ಮಾಡಿರಲಿಲ್ಲ. ಇಂದು ಮಧ್ಯಾಹ್ನ 3.30ಕ್ಕೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಜಂಟಿ ಸುದ್ದಿಗೋಷ್ಠಿಯಲ್ಲಿ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಅಭ್ಯರ್ಥಿಯನ್ನು ಘೋಷಣೆ ಮಾಡಲಿದ್ದಾರೆ. ಈ ಕುರಿತಂತೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಕಚೇರಿಯಿಂದ ಮಾಹಿತಿ ನೀಡಲಾಗಿದ್ದು, NDA ವರಿಷ್ಠ ನಾಯಕರಾದ ಕೇಂದ್ರ ಸಚಿವರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ H.D.ಕುಮಾರಸ್ವಾಮಿ ಅವರು ಹಾಗೂ ಮಾಜಿ ಮುಖ್ಯಮಂತ್ರಿಗಳು, ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾದ BS ಯಡಿಯೂರಪ್ಪ ಅವರು ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯ ಮೈತ್ರಿ ಅಭ್ಯರ್ಥಿ ಹೆಸರನ್ನು ಘೋಷಣೆ ಮಾಡಲಿದ್ದಾರೆ ಎಂದಿದೆ. ಇಂದು ಮಧ್ಯಾಹ್ನ 3.30ಕ್ಕೆ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವಂತ ಬಿಎಸ್ ಯಡಿಯೂರಪ್ಪ ಅವರ ನಿವಾಸದಲ್ಲಿ ಜಂಟಿ ಸುದ್ದಿಗೋಷ್ಠಿಯನ್ನು ನಡೆಸಲಿದ್ದಾರೆ. ಉಭಯ ವರಿಷ್ಠ ನಾಯಕರು ಅಲ್ಲಿಯೇ ಚನ್ನಪಟ್ಟಣ ಉಪ ಚುನಾವಣೆ ಬಗ್ಗೆ ಮಾತನಾಡಿ, ಅಭ್ಯರ್ಥಿಯನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ…

Read More

ಬೆಂಗಳೂರು : ಬೆಂಗಳೂರಿನ ಬಾಬು ಸಾಬ್ ಪಾಳ್ಯದಲ್ಲಿ ಕಟ್ಟಡ ಕುಸಿತ ಪ್ರಕರಣದಲ್ಲಿ 8 ಜನರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನವೇ ಇದೀಗ ಬೆಂಗಳೂರಿನ ಹೊರಮಾವುನಲ್ಲಿ ಕಟ್ಟಡವೊಂದು ವಾಲಿದ ಘಟನೆ ನಡೆದಿದೆ. ಹೀಗಾಗಿ ಈ ಕಟ್ಟಡವನ್ನು ತೆರವುಗೊಳಿಸುವಂತೆ ಬಿಬಿಎಂಪಿ ಸೂಚಿಸಿದೆ. ಹೌದು ಬೆಂಗಳೂರಿನಲ್ಲಿ ಮತ್ತೊಂದು ಕಟ್ಟಡ ವಾಲಿದೆ. ನಿರ್ಮಾಣ ಹಂತದಲ್ಲಿರುವಂತಹ ಕಟ್ಟಡ ವಾಲಿದೆ. ಹೊರಮಾವು ನಂಜಪ್ಪ ಗಾರ್ಡನ್ನಲ್ಲಿರುವಂತಹ ಕಟ್ಟಡ ವಾಲಿದ್ದು, ನಿರ್ಮಾಣ ಹಂತದಲ್ಲಿರುವ 6 ಅಂತಸ್ತಿನ ಕಟ್ಟಡ ವಾಲಿದೆ. ಕಟ್ಟಡದ ತೆರವಿಗೆ ಬಿಬಿಎಂಪಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಈ ಸೂಚನೆಯ ಬೆನ್ನಲ್ಲೇ ವಾಲಿ, ಕುಸಿತದ ಹಂತಕ್ಕೆ ತಲುಪಿದ್ದಂತ ಕಟ್ಟಡವನ್ನು ತೆರವುಗೊಳಿಸೋದಕ್ಕೆ ಕಟ್ಟಡದ ಮಾಲೀಕರು ಮುಂದಾಗಿದ್ದಾರೆ. ಬಾಬು ಸಾಬ್ ಪಾಳ್ಯದಲ್ಲಿ ಕಟ್ಟಡ ಕುಸಿತ ಪ್ರಕರಣದಲ್ಲಿ ಇದುವರೆಗೂ 8 ಜನರು ಕಾರ್ಮಿಕರು ಸಾವನಪ್ಪಿದ್ದಾರೆ. ಇನ್ನು ಕೂಡ ಈ ಒಂದು ಕಟ್ಟಡ ತೆರವು ಕಾರ್ಯಾಚರಣೆ ನಡೆದಿದ್ದು. ಮೃತ ಕಾರ್ಮಿಕರ ಕುಟುಂಬಗಳಿಗೆ ಸಿಎಂ ಸಿದ್ದರಾಮಯ್ಯ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಆದರೆ ಇದೀಗ ಹೊರಮಾವು ನಂಜಪ್ಪ…

Read More

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ನ್ಯಾಯಾಲಯದ ಸಾಕ್ಷ್ಯ ಕೊಠಡಿಯಲ್ಲಿ ಗುರುವಾರ ಗ್ರೆನೇಡ್ ಸ್ಫೋಟದಿಂದ ಪೊಲೀಸ್ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ. ಹಿಂದಿನ ಪ್ರಕರಣದಲ್ಲಿ ಸಾಕ್ಷ್ಯವಾಗಿ ಸಂಗ್ರಹಿಸಿದ ಗ್ರೆನೇಡ್, ವಾಡಿಕೆಯ ನಿರ್ವಹಣೆಯ ಸಮಯದಲ್ಲಿ ‘ಮಲ್ಖಾನಾ’ (ಸಾಕ್ಷ್ಯ ಕೊಠಡಿ) ಒಳಗೆ ಸ್ಫೋಟಗೊಂಡಿದೆ.

Read More

ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಟ್ರಾಲ್ ಪ್ರದೇಶದಲ್ಲಿ ಗುರುವಾರ ಸ್ಥಳೀಯರಲ್ಲದ ಕಾರ್ಮಿಕನ ಮೇಲೆ ಗುಂಡು ಹಾರಿಸಿ ಗಾಯಗೊಳಿಸಲಾಗಿದೆ. ಶಂಕಿತ ಉಗ್ರರ ದಾಳಿಯಲ್ಲಿ ಉತ್ತರ ಪ್ರದೇಶದ ಪ್ರೀತಮ್ ಸಿಂಗ್ ಎಂಬ ಕಾರ್ಮಿಕ ಗಾಯಗೊಂಡಿದ್ದಾನೆ ಎಂದು ವರದಿಗಳು ತಿಳಿಸಿವೆ. ಅವರ ಬಲಬೆರಳಿಗೆ ಗಾಯವಾಗಿದೆ. ಅವರು ಹೇಗೆ ಗಾಯಗೊಂಡಿದ್ದಾರೆ ಎಂಬುದನ್ನು ಅವರು ಖಚಿತಪಡಿಸಿಕೊಳ್ಳುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆಯ ನಂತರ, ಪೊಲೀಸರು ಮತ್ತು ಭದ್ರತಾ ಪಡೆಗಳ ಜಂಟಿ ತಂಡವು ಸ್ಥಳಕ್ಕೆ ತಲುಪಿತು ಮತ್ತು ದಾಳಿಕೋರರನ್ನು ಬಂಧಿಸಲು ಶೋಧ ಪ್ರಾರಂಭವಾಗಿದೆ. ಮಧ್ಯ ಕಾಶ್ಮೀರದ ಗಂಡರ್ಬಾಲ್ ಜಿಲ್ಲೆಯ ಗಗಂಗೀರ್ ಪ್ರದೇಶದ ನಿರ್ಮಾಣ ಸ್ಥಳದಲ್ಲಿ ಭಯೋತ್ಪಾದಕ ದಾಳಿಯಲ್ಲಿ ಸ್ಥಳೀಯ ವೈದ್ಯರು ಮತ್ತು ವಲಸೆ ಕಾರ್ಮಿಕರು ಸೇರಿದಂತೆ ಏಳು ಜನರು ಸಾವನ್ನಪ್ಪಿದ ನಾಲ್ಕು ದಿನಗಳ ನಂತರ ಈ ಘಟನೆ ನಡೆದಿದೆ. https://kannadanewsnow.com/kannada/a-rare-drum-artist-in-the-state-you-will-be-shocked-to-hear-about-his-achievements/ https://kannadanewsnow.com/kannada/good-news-tourism-department-plans-to-sell-liquor-on-goa-style-beaches/

Read More