Author: kannadanewsnow09

ಮಂಡ್ಯ : ಬಡವರು ಮತ್ತು ಮಧ್ಯಮ ವರ್ಗದ ಕುಟುಂಬಗಳು ವೃತ್ತಿಪರ ಶಿಕ್ಷಣಕ್ಕೆ ತಗಲುವ ವೆಚ್ಚವನ್ನು ಭರಿಸುವಲ್ಲಿ ಬಹಳಷ್ಟು ಆರ್ಥಿಕವಾಗಿ ಸಮಸ್ಯೆಯನ್ನು ಎದುರಿಸುತ್ತಿದ್ದು, ಹೀಗಾಗಿ ಸಂಘದ ಸದಸ್ಯರ ಮಕ್ಕಳಿಗೆ ಸುಜ್ಞಾನ ನಿಧಿ ಶಿಷ್ಯವೇತನ ನೀಡಲಾಗುತ್ತಿದೆ ಎಂದು ಜಿಲ್ಲಾ ನಿರ್ದೆಶಕಿ ಎಂ.ಚೇತನಾ ತಿಳಿಸಿದರು. ಮದ್ದೂರು ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ಕಾಶಿ ವಿಶ್ವೇಶ್ವರ ಸ್ವಾಮಿ ದೇಗುಲದ ಆವರಣದಲ್ಲಿರುವ ವ್ಯಾಖ್ಯಾನ ಮಂಟಪದಲ್ಲಿ ಶುಕ್ರವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಾಲೂಕಿನ ಸಂಘದ ಸದಸ್ಯರ ಮಕ್ಕಳಿಗೆ ಸುಜ್ಞಾನನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣೆ ಮಾಡಿ ಮಾತನಾಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಹಲವಾರು ಕಾರ್ಯಕ್ರಮಗಳ ಮೂಲಕ ಸಮಾಜದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇದರಲ್ಲಿ ಸುಜ್ಞಾನ ನಿಧಿ ಶಿಷ್ಯವೇತನ ಕಾರ್ಯಕ್ರಮವು ಸಹ ಬಹಳ ಉತ್ತಮವಾದ ಕಾರ್ಯಕ್ರಮವಾಗಿದೆ ಎಂದರು. ರಾಜ್ಯದಲ್ಲಿ ಇಲ್ಲಿವರೆಗೂ 1,25,000 ವಿದ್ಯಾರ್ಥಿಗಳಿಗೆ 152.75 ಕೋಟಿ ಶಿಷ್ಯವೇತನ ವಿತರಣೆ ಮಾಡಲಾಗಿದೆ. ಮದ್ದೂರು ತಾಲೂಕಿನಲ್ಲಿ ಇಲ್ಲಿಯವರೆಗೂ 981 ವಿದ್ಯಾರ್ಥಿಗಳಿಗೆ 1 ಕೋಟಿ 25 ಸಾವಿರ ಮೊತ್ತ…

Read More

ಮಂಡ್ಯ: ರಾಜ್ಯದಲ್ಲಿ ಅಮಾನುಷ ಘಟನೆ ಎನ್ನುವಂತೆ ನಾಟಿ ಮಾಡಿದ ಭತ್ತದ ಪೈರಿಗೆ ಕಳೆನಾಶಕವನ್ನು ಕಿಡಿಗೇಡಿಗಳು ಸಿಂಪಡಿಸಿರುವಂತ ಕೃತ್ಯ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಬಿಂಡೇನಹಳ್ಳಿ‌ ಗ್ರಾಮದಲ್ಲಿ ನಾಟಿ ಮಾಡಿದಂತ ಭತ್ತದ ಪೈರಿಗೆ ಕಿಡಿಗೇಡುಗಳ ಕಳೆನಾಶಕ ಸಿಂಪಡಿಸಿ ವಿಕೃತಿ ಮೆರೆದಿದ್ದಾರೆ. ಕಿಡಿಗೇಡಿಗಳ ಈ ಕೃತ್ಯದಿಂದಾಗಿ ಗದ್ದೆಯಲ್ಲಿ ನಾಟಿ ಮಾಡಿದ ಭತ್ತದ ಪೈರು ಸಂಪೂರ್ಣ ನಾಶವಾಗಿದೆ. ಹೀಗಾಗಿ ಭತ್ತದ ಬೆಳೆ ಕಳೆದುಕೊಂಡು ರೈತನ ಗೋಳಾಟ ನಡೆಸಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಬಿಂಡೇನಹಳ್ಳಿ ಗ್ರಾಮದಲ್ಲಿ ಜಮೀನೊಂದರಲ್ಲಿ ಘಟನೆ ನಡೆದಿದೆ. ಗ್ರಾಮದ ಕುಳ್ಳೇಗೌಡ ಎಂಬುವವರಿಗೆ ಸೇರಿದ ಜಮೀನು ಇದಾಗಿದೆ. ಕಳೆದ 15 ದಿನಗಳ ಹಿಂದೆ ಗದ್ದೆಯಲ್ಲಿ ನಾಟಿಯನ್ನು ರೈತ ಕುಳ್ಳೇಗೌಡ ಮಾಡಿದ್ದರು. ಈ ಭತ್ತದ ಪೈರಿಗೆ ಕಳೆನಾಶಕ ಸಿಂಪಡಿಸಿರುವ ಹಿನ್ನಲೆ ಸಂಪೂರ್ಣವಾಗಿ ನಾಶವಾಗಿದೆ. ಭತ್ತ ಕಳೆದು ಕೊಂಡ ರೈತ ಕಂಗಾಲಾಗಿದ್ದಾರೆ. ಹಳೆ ದ್ವೇಷಕ್ಕೆ ಅದೇ ಗ್ರಾಮದ ಕಿಡಿಗೇಡಿಗಳಿಂದ ಕೃತ್ಯ ನಡೆಸಿರುವುದಾಗಿ ರೈತ ಆರೋಪಿಸಿದ್ದಾರೆ. ಕಿಡಿಕೇಡಿಗಳ ವಿರುದ್ದ ಕ್ರಮಕ್ಕೆ ಆಗ್ರಹಿಸಿದ್ದಾರೆ. ಪರಿಹಾರಕ್ಕಾಗಿ ನೊಂದ ರೈತ ಕುಟುಂಬ…

Read More

ಬೆಂಗಳೂರು: “ಬೂತ್ ಮಟ್ಟದಲ್ಲಿ ನಾಯಕರಾಗಿ ಬೆಳೆದು ನಿಮ್ಮ ಸಾಮರ್ಥ್ಯ ‌ಪ್ರದರ್ಶಿಸಿದರೆ ಮಾತ್ರ ರಾಜಕೀಯದಲ್ಲಿ ಎತ್ತರಕ್ಕೆ ಬೆಳೆಯಲು ಸಾಧ್ಯ. ಅಲ್ಲಿ ನಿಮ್ಮ ಶಕ್ತಿ ಸಾಬೀತು ಮಾಡಿದರೆ ದೊಡ್ಡ ಮಟ್ಟದ ನಾಯಕರಾಗಿ ಬೆಳೆಯಬಹುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ನಡೆದ ಯುವ ಕಾಂಗ್ರೆಸ್ ರಾಜ್ಯ ಕಾರ್ಯಕಾರಿಣಿ ಸಭೆ ಉದ್ದೇಶಿಸಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ರಾಮಕೃಷ್ಣ ಹೆಗಡೆಯವರು ಮುಖ್ಯಮಂತ್ರಿಗಳಾಗಿದ್ದವರು, ಅವರ ವಿರುದ್ಧ ಹೋರಾಟ ಮಾಡಿದ್ದಕ್ಕೆ ನನಗೆ ಸಾತನೂರು ಕ್ಷೇತ್ರದಿಂದ ಟಿಕೆಟ್ ನೀಡಿದರು. ಏಕೆಂದರೆ ನನ್ನ ಸಂಘಟನೆಯ ಸಾಮರ್ಥ್ಯ ಅಷ್ಟು ಚೆನ್ನಾಗಿತ್ತು. ಯುವ ನಾಯಕನಾಗಿ ನಾನು ಪಕ್ಷವನ್ನು ತಳಮಟ್ಟದಿಂದ ಕಟ್ಟಿದ್ದೆ. ಈ ರೀತಿ ನಾಯಕನಾಗಿ ಬೆಳೆದೆ” ಎಂದು ಹೇಳಿದರು. “ಚುನಾವಣೆಗೆ ಹಣ ಮುಖ್ಯವಲ್ಲ, ನಿಮ್ಮ ಸಂಘಟನಾ ಸಾಮರ್ಥ್ಯ ಮುಖ್ಯ. ರತನ್ ಟಾಟಾ ಅವರು ಒಂದು ಮಾತು ಹೇಳುತ್ತಿದ್ದರು, ‘ವೇಗವಾಗಿ ಹೋಗಬೇಕು ಎಂದರೆ ಒಬ್ಬನೇ ಹೋಗು. ದೂರ ಕ್ರಮಿಸಬೇಕು ಎಂದರೆ ಜನರೊಟ್ಟಿಗೆ ಹೆಜ್ಜೆ ಹಾಕು’ ಎಂದು. ನೀವು…

Read More

ಬೆಂಗಳೂರು: ರಾಜ್ಯದಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಮೂಲಕ ವಿವಾಹ ನೋಂದಣಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸೋ ಪ್ರಕ್ರಿಯೆ ಜಾಲ್ತಿಯಲ್ಲಿದೆ. ಇದು ಕೆಲವರಿಗೆ ತಿಳಿದಿದ್ದರೇ, ಮತ್ತೆ ಕೆಲವರಿಗೆ ತಿಳಿದಿಲ್ಲ. ನೀವು ಮ್ಯಾರೇಜ್ ಸರ್ಟಿಫಿಕೇಟ್ ಗೆ ಅರ್ಜಿ ಸಲ್ಲಿಸಬೇಕು ಅನ್ನೋ ಯೋಚನೆಯಲ್ಲಿದ್ದರೇ, ಜಸ್ಟ್ ಮನೆಯಲ್ಲೇ ಕುಳಿತು, ಆನ್ ಲೈನ್ ಮೂಲಕ ನಾವು ಹೇಳುವಂತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ. ರಾಜ್ಯ ಸರ್ಕಾರದಿಂದ ವಿವಾಹ ನೋಂದಣಿಯ ಆನ್ ಲೈನ್ ಪ್ರಕ್ರಿಯೆಯನ್ನು ಜಾರಿಗೊಳಿಸಲಾಗಿದೆ. ಆಪ್ ಲೈನ್ ಜೊತೆಗೆ, ನೀವು ರಾಜ್ಯದ ಯಾವುದೇ ಮೂಲೆಯಲ್ಲಿದ್ದರೂ, ಎಲ್ಲೇ ಮದುವೆಯಾಗಿದ್ದರೂ ಮ್ಯಾರೇಜ್ ಸರ್ಟಿಫಿಕೇಟ್ ಪಡೆಯಲು ಆನ್ ಲೈನ್ ಮೂಲಕ ಅರ್ಜಿಯನ್ನು ಕುಳಿತಲ್ಲಿಯೇ ಸಲ್ಲಿಸಬಹುದಾಗಿದೆ. ಆದರೇ ಇದಕ್ಕಾಗಿ ಕೆಲ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ. ಮ್ಯಾರೇಜ್ ಸರ್ಟಿಫಿಕೇಟ್ ಪಡೆಯಲು ಈ ದಾಖಲೆಗಳು ಕಡ್ಡಾಯ ಮದುವೆ ಲಗ್ನ ಪತ್ರಿಕೆ ದಂಪತಿಗಳ ಒಂದು ಪೋಟೋ ಪತಿಯ ಆಧಾರ್ ಕಾರ್ಡ್ ಪತ್ನಿಯ ಆಧಾರ್ ಕಾರ್ಡ್ ಮೂವರು ಸಾಕ್ಷಿದಾರರ ಆಧಾರ್ ಕಾರ್ಡ್ ಈ ಮೇಲ್ಕಂಡ ದಾಖಲೆಗಳನ್ನು ಪಿಡಿಎಫ್ ಮಾಡಿ,…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಅವರನ್ನು ವಿಧಾನ ಪರಿಷತ್ ಸದಸ್ಯರಾಗಿ ನಾಮ ನಿರ್ದೇಶನ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದ್ದು, ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ಡಾ.ಆರಥಿ ಕೃಷ್ಣ, ಎಫ್ ಹೆಚ್ ಜಕ್ಕಪ್ಪನವರ್, ಶಿವಕುಮಾರ್ ಕೆ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಿ ಅಧಿಕೃತ ಆದೇಶ ಮಾಡಿದೆ. ಈ ಹಿಂದೆ ರಮೇಶ್ ಬಾಬು ಅವರು ಆಗ್ನೇಯ ಶಿಕ್ಷಕ್ಷರ ಕ್ಷೇತ್ರದಿಂದ ಆಯ್ಕೆಯಾಗಿ ವಿಧಾನ ಪರಿಷತ್ ಸದಸ್ಯರಾಗಿದ್ದರು. ಕಳೆದ ಕೆಲ ವರ್ಷಗಳಿಂದ ರಮೇಶ್ ಬಾಬು ಅವರು ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದರು. ರಾಜಕೀಯ ಕ್ಷೇತ್ರದಲ್ಲಿ ಅನುಭವ ಹೊಂದಿರುವಂತ ರಮೇಶ್ ಬಾಬು ಅವರನ್ನು ವಿಧಾನ ಪರಿಷತ್ ಸದಸ್ಯರಾಗಿ ನಾಮ ನಿರ್ದೇಶನಕ್ಕೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಲಾಗಿತ್ತು. ಸಿಎಂ ಸಿದ್ಧರಾಮಯ್ಯ ಅವರ ಆಪ್ತರೂ ಆಗಿರುವಂತ ರಮೇಶ್ ಬಾಬು ಅವರಿಗೆ, ಸಿಎಂ ಕೋಟಾದಡಿಯಲ್ಲಿ…

Read More

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯದ ಎಲ್ಲಾ ಸಾರ್ವಜನಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಲಾಗುತ್ತಿದ್ದು, ರಾಜ್ಯದಲ್ಲಿ ಎಸ್ಕಾಂ ಇಲಾಖೆಯಿಂದ ಪ್ರತಿ ಮನೆಗೂ ಯು.ಹೆಚ್.ಐ.ಡಿ (UHID) ನಂಬರ್ ಜನರೇಟ್ ಮಾಡಿ, ಸ್ಟಿಕ್ಕರ್ ಅಂಟಿಸುವ ಕಾರ್ಯ ನಡೆಯುತ್ತಿದೆ. ಸೆಪ್ಟೆಂಬರ್.22ರಿಂದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಆರಂಭಗೊಳ್ಳಲಿದ್ದು, ನೀವು ಈ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳುವಂತೆ ಸರ್ಕಾರ ಸೂಚಿಸಿದೆ. ಈಗಾಗಲೇ ಪ್ರತಿ ಮನೆಗೂ ಸರ್ಕಾರದಿಂದ ನಿಯೋಜಿತವಾಗುವ ಗಣತಿದಾರರು ಮುಂದಿನ ದಿನಗಳಲ್ಲಿ ಮೊಬೈಲ್ ಆಪ್ ಮುಖೇನ ಸಮೀಕ್ಷೆ ಕೈಗೊಳ್ಳಲಿದ್ದು, ಆ ಸಮಯದಲ್ಲಿ ಸಾರ್ವಜನಿಕರು ಸೂಕ್ತ ಮಾಹಿತಿ ಒದಗಿಸಿ ಸಮೀಕ್ಷೆಯನ್ನು ಯಶಸ್ವಿಗೊಳಿಸಲು ಹಾಗೂ ಆ ಮೂಲಕ ರಾಜ್ಯದ ಅಭಿವೃದ್ಧಿಗೆ ಹಾಗೂ ವಿವಿಧ ಕಲ್ಯಾಣ ಕಾರ್ಯಕ್ರಮಗಳಿಗೆ ಬುನಾದಿ ಹಾಕಲು ಮುಕ್ತ ಮನಸ್ಸಿನಿಂದ ಸಹಕಾರ ನೀಡುವಂತೆ ಸರ್ಕಾರ ಕೋರಿದೆ. ಈ ಸಮೀಕ್ಷೆಯು ರಾಜ್ಯದ ಎಲ್ಲಾ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ನೀತಿ ನಿರೂಪಣೆಗೆ ಆಧಾರವಾಗಿರುತ್ತದೆ. ಹೀಗಾಗಿ ಸಮೀಕ್ಷೆಯನ್ನು ಸಂಪೂರ್ಣ ಯಶಸ್ವಿಗೊಳಿಸುವುದು ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ ಎಂದು ಹೇಳಿದೆ.…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಸೇರಿದಂತೆ ನಾಲ್ವರನ್ನು ಎಂಎಲ್ಸಿಯಾಗಿ ನಾಮ ನಿರ್ದೇಶನ ಮಾಡಿ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದ್ದು, ಡಾ.ಆರಥಿ ಕೃಷ್ಣ, ಎಫ್ ಹೆಚ್ ಜಕ್ಕಪ್ಪನವರ್, ಶಿವಕುಮಾರ್ ಕೆ ಹಾಗೂ ರಮೇಶ್ ಬಾಬು ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಿ ಆದೇಶಿಸಿದೆ. ಕಾಂಗ್ರೆಸ್ ನಿಂದ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಕ್ಷೇತ್ರದ ಆರತಿ ಕೃಷ್ಣರನ್ನು ವಿಧಾನ ಪರಿಷತ್ ಗೆ ನಾಮ ನಿರ್ದೇಶನ ಮಾಡಲಾಗಿದೆ. ಜೊತೆಗೆ ಕಾಂಗ್ರೆಸ್ ಮಾಧ್ಯಮ ವಕ್ತಾರ ರಮೇಶ್ ಬಾಬುಗೆ ಕಾಂಗ್ರೆಸ್ ಪಕ್ಷದಿಂದ ವಿಧಾನ ಪರಿಷತ್ ನಾಮನಿರ್ದೇಶನ ಮಾಡಲಾಗಿದೆ. ಮೈಸೂರಿನ ಪತ್ರಕರ್ತ ಶಿವಕುಮಾರ್ ರನ್ನು ವಿಧಾನ ಪರಿಷತ್ ಗೆ  ನಾಮ ನಿರ್ದೇಶನ ಮಾಡಲಾಗಿದೆ. ಈ ಹಿಂದೆ  ಜಕ್ಕಪ್ಪ, ಆರತಿ ಕೃಷ್ಣ, ರಮೇಶ್ ಬಾಬು ಹಾಗೂ ಪತ್ರಕರ್ತ ಶಿವಕುಮಾರ್ ರನ್ನು ವಿಧಾನ ಪರಿಷತ್ ಗೆ ನಾಮ ನಿರ್ದೇಶನ ಮಾಡುವುದಕ್ಕೆ ಕಾಂಗ್ರೆಸ್ ಹೈಕಮ್ಯಾಂಡ್ ಒಪ್ಪಿಗೆ ನೀಡಿತ್ತು. ಜಕ್ಕಪ್ಪ ಮತ್ತು…

Read More

ಬೆಂಗಳೂರು : ರಾಜ್ಯಾದ್ಯಂತ ಬರುವ 22ರಿಂದ ಆರಂಭವಾಗಲಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಧರ್ಮದ ಕಾಲಂನಲ್ಲಿರುವ ಇತರೆ ಕಾಲಂನಲ್ಲಿ ವೀರಶೈವ-ಲಿಂಗಾಯತ ಎಂದು ಬರೆಸುವಂತೆ, ಸಮಾಜದ ಬಾಂಧವರಿಗೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮನವಿ ಮಾಡಿದೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಭಾದ ರಾಷ್ಟ್ರೀಯ ಹಿರಿಯ ಉಪಾಧ್ಯಕ್ಷ ಹಾಗೂ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ, ಹಿಂದಿನಿಂದಲೂ ಮಹಾಸಭಾ ವೀರಶೈವ ಲಿಂಗಾಯತ ಧರ್ಮದ ಪ್ರತಿಪಾದನೆ ಮಾಡುತ್ತಾ ಬಂದಿದೆ. ಹೀಗಾಗಿ ಧರ್ಮದ ಕಾಲಂನ ಇತರೆ ಕಾಲಂನಲ್ಲಿ ವೀರಶೈವ ಲಿಂಗಾಯತ ಎಂದು ಬರೆಸಬೇಕು ಎಂಬುದು ಸಾರ್ವತ್ರಿಕ ಅಭಿಪ್ರಾಯವಾಗಿದೆ ಎಂದರು. ಉಳಿದಂತೆ ಜಾತಿಯ ಕಾಲಂನಲ್ಲಿ ವೀರಶೈವ ಅಥವಾ ಲಿಂಗಾಯತ ಎಂದು ಬರೆಸುವಂತೆ ಹಾಗೂ ಉಪ ಜಾತಿಯ ಕಾಲಂನಲ್ಲಿರುವ ತಮ್ಮ ತಮ್ಮ ಉಪಜಾತಿ ಹೆಸರು ಬರೆಸುವಂತೆ ಮನವಿ ಮಾಡಿದರು. ಸರ್ಕಾರಕ್ಕೆ ನಾಡಿನ ಜನರ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಯ ನಿಖರ ಮಾಹಿತಿ ದೊರೆತರೆ, ನಾಡಿನ ಜನರೆಲ್ಲರ ಕಲ್ಯಾಣಕ್ಕೆ ಕಾರ್ಯಕ್ರಮ ರೂಪಿಸಲು ಅನುವಾಗುತ್ತದೆ. ಹೀಗಾಗಿ ಪ್ರತಿಯೊಬ್ಬರೂ ಈ ಸಮೀಕ್ಷೆಯಲ್ಲಿ…

Read More

ಬೆಂಗಳೂರು : ತಾವು ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಕೆಲವರು ಬಾನು ಮುಸ್ತಾಕ್ ಅವರಿಂದ ದಸರಾ ಉದ್ಘಾಟನೆ ವಿರೋಧಿಸಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು. ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವುದನ್ನು ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಹೈ ಕೋರ್ಟ್ ಮೆಟ್ಟಿಲೇರಿರುವ ಬಗ್ಗೆ ಕೇಳಿದಾಗ, “ಈ ಬಗ್ಗೆ ಸಿಎಂ ಈಗಾಗಲೇ ಉತ್ತರ ನೀಡಿದ್ದಾರೆ. ಅವರ ಪಕ್ಷ ಅವರನ್ನು (ಪ್ರತಾಪ್ ಸಿಂಹ) ಕಡೆಗಣಿಸಿದೆ. ಪಾಪ ಆತನಿಗೂ ರಾಜಕೀಯ ಮಾಡಬೇಕಿದೆ. ಹೀಗಾಗಿ ತನ್ನ ಅಸ್ತಿತ್ವ ತೋರಿಸಿಕೊಳ್ಳಲು ಹೀಗೆಲ್ಲಾ ಮಾಡುತ್ತಿದ್ದಾರೆ. ಈ ಬಗ್ಗೆ ಕೋರ್ಟ್ ವಿಚಾರಣೆ ಮಾಡಿ, ತೀರ್ಮಾನ ಮಾಡಲಿದೆ” ಎಂದರು. ನಾಡ ಹಬ್ಬ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಇದರ ಹೊರತಾಗಿ ರಾಜಕೀಯ ಮಾಡಲು ಅವರಿಗೆ ಬೇರೆ ವಿಚಾರ ಇಲ್ಲ. ಅವರಿಗೆ ರಾಜ್ಯದ ಬಗ್ಗೆ ಕಾಳಜಿ…

Read More

ಬೆಂಗಳೂರು: ವಾಹನಗಳ ನಂಬರ್ ಪ್ಲೇಟ್ ಮೇಲೆ ಹೆಸರು, ಲೋಗೋ, ಲಾಂಛನ ಹಾಕುವುದನ್ನು ನಿಷೇಧಿಸಲಾಗಿದೆ. ಒಂದು ವೇಳೆ ಹಾಕಿದ್ರೆ ಸಾರಿಗೆ ಇಲಾಖೆಯ ಈ ವಾಟ್ಸ್ ಆಪ್ ನಂಬರ್ ಗೆ ಪೋಟೋ ಕಳುಹಿಸಿದ್ರೆ ಸಾಕು, ಅಂತಹ ವಾಹನದ ವಿರುದ್ಧ ಕಾನೂನು ಕ್ರಮ ಖಂಡಿತ, ಜೊತೆಗೆ ದಂಡ ಕಟ್ಟಿಟ್ಟ ಬುತ್ತಿಯಾಗಿದೆ. ಕರ್ನಾಟಕದಲ್ಲಿ 2019 ರಿಂದ ವಾಹನಗಳ ಮೇಲೆ ಸರ್ಕಾರಿ ಲಾಂಛನಗಳು, ಹೆಸರುಗಳು ಮತ್ತು ಲೋಗೋಗಳನ್ನು ಅನಧಿಕೃತವಾಗಿ ಬಳಸಿದ್ದಕ್ಕಾಗಿ ಇಲಾಖೆಯು ಸುಮಾರು 15,000 ವಾಹನ ಚಾಲಕರಿಗೆ ದಂಡ ವಿಧಿಸಿದೆ. ಲಭ್ಯವಾದ ಅಧಿಕೃತ ಮಾಹಿತಿಯ ಪ್ರಕಾರ, ಡಿಸೆಂಬರ್ 28, 2019 ರಿಂದ ಜುಲೈ 31, 2025 ರವರೆಗೆ ಒಟ್ಟು 14,982 ವಾಹನಗಳು ಆಕ್ರಮಿತವಾಗಿದ್ದು, ರೂ.1,20,61,097 ದಂಡವನ್ನು ಸಂಗ್ರಹಿಸಲಾಗಿದೆ. ಆದರೆ, ಬೆಂಗಳೂರಿನ ರಸ್ತೆಗಳಲ್ಲಿ ಇಂತಹ ಉಲ್ಲಂಘನೆಗಳು ಸಾಮಾನ್ಯವಾಗಿ ಕಂಡುಬರುತ್ತಿರುವುದರಿಂದ, ಈ ಕ್ರಮ ಪರಿಣಾಮಕಾರಿಯಾಗಿಲ್ಲ ಎಂದು ನಾಗರಿಕರು ಒತ್ತಾಯಿಸುತ್ತಿದ್ದಾರೆ. ವಾಹನ ಚಾಲಕರು ತಮ್ಮ ನೋಂದಣಿ ಫಲಕಗಳನ್ನು ಸರ್ಕಾರಿ ಇಲಾಖೆಗಳು, ಮಂಡಳಿಗಳು ಮತ್ತು ಸಂಘಗಳ ಲಾಂಛನಗಳನ್ನು ಅನುಮತಿಯಿಲ್ಲದೆ ಪ್ರದರ್ಶಿಸುವ ಮೂಲಕ ದುರುಪಯೋಗಪಡಿಸಿಕೊಳ್ಳುತ್ತಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.…

Read More