Author: kannadanewsnow09

ನವದೆಹಲಿ: ಜಿಎಸ್‌ಟಿ ಕಡಿತ ಜಾರಿಗೆ ಬಂದ ನಂತರವೂ ಕೆಲವು ವಸ್ತುಗಳ ಬೆಲೆಗಳನ್ನು ಹೆಚ್ಚಿಸಿದ್ದಕ್ಕಾಗಿ ಸರ್ಕಾರವು ಕೆಲವು ದೊಡ್ಡ ಇ-ಕಾಮರ್ಸ್ ಕಂಪನಿಗಳನ್ನು ತರಾಟೆಗೆ ತೆಗೆದುಕೊಂಡಿದೆ ಎಂದು ಮೂಲಗಳಿಂದ ತಿಳಿಸಿವೆ. ಸೆಪ್ಟೆಂಬರ್ 22 ರಂದು ಪ್ರಾರಂಭವಾದ ಹೊಸ ಸರಕು ಮತ್ತು ಸೇವಾ ತೆರಿಗೆ ಪದ್ಧತಿಯು ಹಿಂದಿನ ಬಹು-ಶ್ರೇಣಿಯ ರಚನೆಯನ್ನು 5 ಪ್ರತಿಶತ ಮತ್ತು 18 ಪ್ರತಿಶತದ ಎರಡು ಮುಖ್ಯ ಸ್ಲ್ಯಾಬ್‌ಗಳೊಂದಿಗೆ ಬದಲಾಯಿಸುತ್ತದೆ. ಪರೋಕ್ಷ ತೆರಿಗೆಯ ಅತಿದೊಡ್ಡ ಪರಿಷ್ಕರಣೆಯು ಬೆಲೆಗಳನ್ನು ಕಡಿಮೆ ಮಾಡುವುದು ಮತ್ತು ತೆರಿಗೆ ಹೊರೆಯನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದೆ. “ಜಿಎಸ್‌ಟಿ ದರ ಕಡಿತದ ನಂತರ ಇ-ಕಾಮರ್ಸ್ ಪ್ರಮುಖ ಸಂಸ್ಥೆಯು ಹೆಚ್ಚಿನ ಬೆಲೆಗಳನ್ನು ಜಾಹೀರಾತು ಮಾಡಿದೆ… ತಾಂತ್ರಿಕ ದೋಷವನ್ನು ಉಲ್ಲೇಖಿಸಿ ಆದರೆ ಬೆಲೆಗಳನ್ನು ನಂತರ ಸರಿಪಡಿಸಲಾಗಿದೆ” ಎಂದು ಮೂಲಗಳು ತಿಳಿಸಿವೆ. ಸೆಪ್ಟೆಂಬರ್ 26 ರಂದು ಮನಿ ಕಂಟ್ರೋಲ್ ವರದಿ ಮಾಡಿದ್ದು, 50 ಕ್ಕೂ ಹೆಚ್ಚು ಉತ್ಪನ್ನಗಳ ಬೆಲೆಗಳನ್ನು ಸರ್ಕಾರ ಪರಿಶೀಲಿಸುತ್ತಿದೆ. “ಭಾರತದಾದ್ಯಂತ ಕ್ಷೇತ್ರ ರಚನೆಗಳು ಮೇಲ್ವಿಚಾರಣೆ ಮಾಡುತ್ತಿರುವ 50 ಕ್ಕೂ ಹೆಚ್ಚು ವಸ್ತುಗಳ…

Read More

ಚೆನ್ನೈ: ಆ ಘಟನೆ ನೋವು ತಂದಿದೆ. ಕಾಲ್ತುಳಿತ ಸಂಭವಿಸಬಾರದಾಗಿತ್ತು ಎಂಬುದಾಗಿ ಕರೂರು ಕಾಲ್ತುಳಿತ ಘಟನೆ ಬಗ್ಗೆ ನಟ ವಿಜಯ್ ಮನ ಮಿಡಿದಿದ್ದಾರೆ. ಅಲ್ಲೇ ಸಂತ್ರಸ್ತರ ಕುಟುಂಬಸ್ಥರನ್ನು ಭೇಟಿಯಾಗುವುದಾಗಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ಕರೂರು ಕಾಲ್ತುಳಿತ ಘಟನೆ ಸಂಬಂಧ ವೀಡಿಯೋ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಅದು ನೋವಿನ ಪರಿಸ್ಥಿತಿಯಾಗಿದೆ ಎಂಬುದಾಗಿ ಕರೂರ್ ಕಾಲ್ತುಳಿತದ ಬಗ್ಗೆ ಮೌನ ಮುರಿದ ವಿಜಯ್ ಹೇಳಿದ್ದಾರೆ. ಸಂತ್ರಸ್ತರ ಸಂಬಂಧಿಕರನ್ನು ಭೇಟಿ ಮಾಡುವುದಾಗಿ ಹೇಳಿದ್ದಾರೆ. ಕಾಲ್ತುಳಿತ ಸಂಭವಿಸಬಾರದಿತ್ತು. ಆ ಘಟನೆಯಿಂದ ತುಂಬಾ ನೋವಾಗಿದೆ. ಶೀಘ್ರವೇ ಗಾಯಾಳುಗಳನ್ನು ಭೇಟಿಯಾಗಿ ಸಾಂತ್ವಾನ ಹೇಳುತ್ತೇನೆ ಎಂದಿದ್ದಾರೆ. https://twitter.com/Actor_Vijay/status/1972968536919437404 https://kannadanewsnow.com/kannada/green-signal-for-temporary-selection-of-guest-lecturers-from-the-state-government-these-conditions-apply/

Read More

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮೊದಲು ಪರಿಹಾರ ಘೋಷಣೆ ಮಾಡಿ ನಂತರ ವೈಮಾನಿಕ ಸಮೀಕ್ಷೆ ಮಾಡಬೇಕಿತ್ತು. ಪರಿಹಾರವನ್ನೇ ತಿಳಿಸದೆ ಕೇವಲ ಸಮೀಕ್ಷೆ ಮಾಡಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ದೂರಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಆಗಿರುವ ಪ್ರವಾಹದ ಸ್ಥಿತಿ ವೀಕ್ಷಿಸಲು ಸಿಎಂ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ ಮಾಡುತ್ತಿದ್ದಾರೆ. ಎಲ್ಲ ರಸ್ತೆಗಳಲ್ಲಿ ಗುಂಡಿ ಇರುವುದರಿಂದ ಹಾಗೂ ರಸ್ತೆ ತಡೆದು ಜನರು ಪ್ರತಿಭಟಿಸುವುದರಿಂದ ಭಯಗೊಂಡ ಮುಖ್ಯಮಂತ್ರಿ ಹೆಲಿಕಾಪ್ಟರ್‌ನಲ್ಲಿ ವೀಕ್ಷಣೆ ಮಾಡುತ್ತಿದ್ದಾರೆ. ಜೋಳ ತೊಗರಿ ಸೇರಿದಂತೆ ಪ್ರತಿ ಬೆಳೆಗಳ ಹಾನಿ, ಮನೆ ಹಾನಿ, ಶಾಲೆ ಹಾನಿಗೆ ಎಷ್ಟು ಪರಿಹಾರ ನೀಡಲಾಗುತ್ತದೆ ಎಂದು ಸರ್ಕಾರ ಘೋಷಣೆ ಮಾಡಬೇಕಿತ್ತು. ಆದರೆ ಈವರೆಗೆ ಸರ್ಕಾರ ಆದೇಶ ಮಾಡಿಲ್ಲ. ಒಂದು ಕಡೆ ಖಜಾನೆ ಖಾಲಿಯಾಗಿದೆ. ಮತ್ತೊಂದು ಕಡೆ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಲು ಸಿದ್ಧತೆ ನಡೆದಿದೆ ಎಂದು ದೂರಿದರು. ಮುಖ್ಯಮಂತ್ರಿಗಳು ಸಚಿವರ ತಂಡ ರಚಿಸಬೇಕಿತ್ತು. ಅಧಿಕಾರಿಗಳ ಸಭೆ ಕರೆದು ನೋಡಲ್‌ ಅಧಿಕಾರಿಗಳನ್ನು ನಿಯೋಜಿಸಬೇಕಿತ್ತು. ಪುನರ್ವಸತಿ ಕೇಂದ್ರಗಳಲ್ಲಿ ಸರಿಯಾಗಿ ಆಹಾರ…

Read More

ಬೆಂಗಳೂರು: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಸುವಿಧಾ ಯೋಜನೆಯಡಿ ಆಧಾರ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಪ್ರತಿಭಾವಂತ ಅಂಗವಿಕಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ನಿರುದ್ಯೋಗ ಭತ್ಯೆ, ಶಿಶುಪಾಲನ ಭತ್ಯೆ, ಮರಣ ಪರಿಹಾರ ನಿಧಿ, ಪ್ರತಿಭೆ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್, ದೃಷ್ಟಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೈಲ್ ಕಿಟ್ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿಕ ದ್ವಿಚಕ್ರವಾಹನ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ಸಾಧನ ಸಲಕರಣೆಗಳ ಯೋಜನೆ ಹಾಗೂ ವಿಕಲಚೇತನ ವ್ಯಕ್ತಿಗಳಿಗೆ ಬ್ಯಾಟರಿಚಾಲಿತ ವ್ಹೀಲ್‌ಚೇರ್ ಯೋಜನೆಗಳನ್ನು ಡಿ.ಬಿ.ಟಿ ತಂತ್ರಾಂಶದ ಮೂಲಕ ಪಡೆಯಲು ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಆಸಕ್ತ ಅರ್ಹ ವಿಕಲಚೇತನರು ಆನ್‌ಲೈನ್ ಮೂಲಕ ಗ್ರಾಮಾ ಒನ್, ಕರ್ನಾಟಕ ಒನ್, ಸೇವಾಸಿಂಧು ಪೋರ್ಟಲ್‌ನಲ್ಲಿ ಅ.15ರೊಳಗಾಗಿ ಅರ್ಜಿ ಸಲ್ಲಿಸಿ ಎಲ್ಲಾ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ದ್ವಿಪ್ರತಿಗಳಲ್ಲಿ ಆಯಾ ತಾಲೂಕು ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು (ಎಂಆರ್. ಡಬ್ಲ್ಯೂ)ಗಳಿಗೆ, ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನಗರ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಮಾಜಿ ಸಚಿವ ಎಂ.ಎಸ್ ಆತ್ಮಾನಂದ ಅವರನ್ನು ನೇಮಕ ಮಾಡಿ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಎಂ.ಎಸ್.ಆತ್ಮಾನಂದ, ಮಾಜಿ ಸಚಿವರು, ನಂ.2074, ಶಿವಲೀಲಾ, 1ನೇ ಅಡ್ಡರಸ್ತೆ, ಸುಭಾಷ್‌ ನಗರ, ಮಂಡ್ಯ ಇವರನ್ನು The Companies Act, 2013 Schedule-I ರಡಿ ರಚಿಸಿರುವ ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ಧಿ ನಿಗಮ ನಿಯಮಿತದ Articles of Associationರ ಕಂಡಿಕ-28(i) ರನ್ಮಯ ತಕ್ಷಣದಿಂದ ಜಾರಿಗೆ ಬರುವಂತೆ ಎರಡು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶಿಸಿದೆ ಎಂದು ತಿಳಿಸಿದೆ. https://kannadanewsnow.com/kannada/green-signal-for-temporary-selection-of-guest-lecturers-from-the-state-government-these-conditions-apply/

Read More

ಬೆಂಗಳೂರು: 2025-26ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಕಾಲೇಜುಗಳಲ್ಲಿನ ಹೆಚ್ಚುವರಿ ಬೋಧನಾ ಕಾರ್ಯಭಾರಕ್ಕೆ ಅತಿಥಿ ಉಪನ್ಯಾಸಕರನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಿಕೊಳ್ಳಲು ಅನುಮತಿಸಿ ಆದೇಶಿಸಿದೆ. ಅಲ್ಲದೇ ಅತಿಥಿ ಉಪನ್ಯಾಸಕರ ನೇಮಕಾತಿಗೆ ಕೆಲ ಷರತ್ತುಗಳನ್ನು ವಿಧಿಸಿ ಆದೇಶಿಸಿದೆ. ಈ ಕುರಿತು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, 2025-26ನೇ ಶೈಕ್ಷಣಿಕ ಸಾಲಿನಲ್ಲಿ ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಸರ್ಕಾರಿ ಸಂಸ್ಕೃತ ಹಾಗೂ ಚಿತ್ರಕಲಾ ಕಾಲೇಜುಗಳೂ ಒಳಗೊಂಡಂತೆ) ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಕೆಯಾಗುವ ಬೋಧನಾ ಕಾರ್ಯಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರನ್ನು (ಅತಿಥಿ ಗ್ರಂಥಪಾಲಕರು ಹಾಗೂ ಅತಿಥಿ ದೈಹಿಕ ಶಿಕ್ಷಣ ಅತಿಥಿ ಉಪನ್ಯಾಸಕರು ಸೇರಿದಂತೆ) ಆನ್‌ಲೈನ್ ಕೌನ್ಸಿಲಿಂಗ್ ಮೂಲಕ ಆಯ್ಕೆ ಮಾಡಿಕೊಳ್ಳಲು ಉಲ್ಲೇಖ-(1) ರಲ್ಲಿ ಸರ್ಕಾರವು ಅನುಮತಿ ನೀಡಿರುತ್ತದೆ ಎಂದಿದ್ದಾರೆ. 2025-26ನೇ ಸಾಲಿಗೆ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳುವ ಸಂಬಂಧ ಮಾನ್ಯ ರಾಜ್ಯ ಉಚ್ಚ ನ್ಯಾಯಾಲಯದ ವಿಭಾಗೀಯ ಪೀಠಗಳಲ್ಲಿ ದಾಖಲಾಗಿದ್ದ ವಿವಿಧ ರಿಟ್ ಅರ್ಜಿಗಳಲ್ಲಿ ಮಾನ್ಯ ನ್ಯಾಯಾಲಯದ ವಿವಿಧ…

Read More

ಬೆಂಗಳೂರು: ಉತ್ತರ ಕರ್ನಾಟಕ ಭಾಗದ ಭೀಮಾ ತೀರದಲ್ಲಿ ಭಾರೀ ಮಳೆಯ ಕಾರಣ ಪ್ರವಾಹ ಉಂಟಾಗಿದೆ. ಈ ಭೀಮಾ ತೀರದ ಜಿಲ್ಲೆಗಳಲ್ಲಿ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವೈಮಾನಿಕ ಸಮೀಕ್ಷೆ ನಡೆಸಿ, ಪ್ರವಾಹ ಪರಿಸ್ಥಿತಿಯನ್ನು ವೀಕ್ಷಿಸಿದರು. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ  ಅವರು ಪ್ರವಾಹದಿಂದಾಗಿ ಭೀಮಾ ತೀರದ ಪ್ರದೇಶಗಳಲ್ಲಿ ಉಂಟಾಗಿರುವ ಹಾನಿಯ ಬಗ್ಗೆ ಕಲಬುರ್ಗಿ ವಿಮಾನ‌ ನಿಲ್ದಾಣದಲ್ಲಿಯೇ ಕಲಬುರಗಿ, ಬೀದರ್, ಯಾದಗಿರಿ ಹಾಗು ವಿಜಯಪುರ ಜಿಲ್ಲಾ ಅಧಿಕಾರಿಗಳು ಮತ್ತು ಉಸ್ತುವಾರಿ ಕಾರ್ಯದರ್ಶಿಗಳ ಜೊತೆ ಪ್ರಾಥಮಿಕ ಸಭೆ ನಡೆಸಿ, ವಿವರವಾದ ಮಾಹಿತಿ ಪಡೆದರು. https://twitter.com/CMofKarnataka/status/1972935321676566784 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲ್ಬುರ್ಗಿ ವಿಮಾನ‌ ನಿಲ್ದಾಣಕ್ಕೆ ಆಗಮಿಸಿ, ಪ್ರವಾಹದಿಂದಾಗಿ ಭೀಮಾ ತೀರದ ಪ್ರದೇಶಗಳಲ್ಲಿ ಉಂಟಾಗಿರುವ ಹಾನಿ ಬಗ್ಗೆ ವಿಮಾನ‌ನಿಲ್ದಾಣದಲ್ಲೇ ಪ್ರಾಥಮಿಕ ಸಭೆ ನಡೆಸಿ ವಿವರವಾದ ಮಾಹಿತಿ ಪಡೆದರು. ಕಲಬುರಗಿ, ಬೀದರ್, ಯಾದಗಿರಿ ಹಾಗು ವಿಜಯಪುರ ಜಿಲ್ಲಾ ಅಧಿಕಾರಿಗಳು ಮತ್ತು ಉಸ್ತುವಾರಿ ಕಾರ್ಯದರ್ಶಿಗಳು ಸಭೆಯಲ್ಲಿದ್ದು ವಿವರಗಳನ್ನು ನೀಡಿದರು. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರಾದ ಎಂ.ಬಿ‌.ಪಾಟೀಲ್, ಕೃಷ್ಣ ಬೈರೇಗೌಡ ಮತ್ತು ಪ್ರಿಯಾಂಕ್…

Read More

ಹುಬ್ಬಳ್ಳಿ: ಸಮಾಜಗಳಲ್ಲಿ‌ ಸಂಘರ್ಷ ಸೃಷ್ಟಿಸಿ ಅದರ ದುರ್ಲಾಭ ಪಡೆಯಲು‌ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ, ಅದರ ಫಲವೇ ರಾಜ್ಯದಲ್ಲಿನ‌ ಸಮಾಜಿಕ, ಶೈಕ್ಷಣಿಕ ಸಮೀಕ್ಷೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಮೀಕ್ಷೆ ನೆಪದಲ್ಲಿ ಹೊಸ ಜಾತಿ, ಉಪಜಾತಿಗಳ‌ ಸೇರ್ಪಡೆ ಅಧಿಕಾರ ಹಿಂದುಳಿದ ವರ್ಗಗಳ‌ ಆಯೋಗಕ್ಕೆ ಇದೆಯೇ ಅಧ್ಯಯನ ಇಲ್ಲದೆಯೇ ಹೇಗೆ ಹೊಸ ಜಾತಿ‌ ಸೇರ್ಪಡೆ ಮಾಡುತ್ತಾರೆ. ಧರ್ಮದ ಆಧಾರದಲ್ಲಿ ಮೀಸಲಾತಿ‌ ನೀಡಲಾಗದು. ಮೀಸಲಾತಿ‌ ನೀಡುವ ಅಧಿಕಾರ ಸಿಎಂ ಸಿದ್ದರಾಮಯ್ಯ ಹೊಂದಿದ್ದಾರೆಯೇ. ಸಮೀಕ್ಷೆಯಲ್ಲಿ ಗೊಂದಲ‌ ಸೃಷ್ಟಿಸಿದ್ದೇ ಸಿದ್ದರಾಮಯ್ಯ ಸರ್ಕಾರ. ಇದಕ್ಕಾಗಿಯೇ ಹೈಕೋರ್ಟ್ ಸಹ ಸಮೀಕ್ಷೆಯನ್ನು ಅಸಂವಿಧಾನಿಕ ಎಂಬರ್ಥದಲ್ಲಿ ಸಮೀಕ್ಷೆಯಲ್ಲಿ‌ ಮಾಹಿತಿಗೆ ಯಾರಿಗೂ ಒತ್ತಡ ಮಾಡುವಂತಿಲ್ಲ‌ ಎಂಬುದನ್ನು ಸೂಚ್ಯವಾಗಿ ಹೇಳಿದೆ ಎಂದರು. ಸಮಾಜವಾದದ ಹಿನ್ನೆಲೆಯ, ಜಾತ್ಯತೀತ ಎಂದು ಬಿಂಬಿಸಿಕೊಳ್ಳುವ ಸಿಎಂರಿಂದಲೇ ಜಾತಿ ಪದ್ದತಿ ಸಂಕೀರ್ಣಗೊಳಿಸು‌ ಅತ್ಯಂತ ಕೆಟ್ಟ ಪದ್ದತಿ ನಡೆಯುತ್ತಿದೆ. ವೀರಶೈವ ಲಿಂಗಾಯತ ಸಮಾಜವನ್ನು ಒಡೆದಾಳಬೇಕೆಂಬ ಬಯಕೆ ಸಿಎಂ ಅವರದ್ದಾಗಿದೆ. 2013 ರಲ್ಲಿ ಅಧಿಕಾರಕ್ಕೆ ಬಂದಿದ್ದ…

Read More

ರಾಯಚೂರು: ರಾಜ್ಯಾಧ್ಯಂತ ಜಾತಿಗಣತಿ ಸಮೀಕ್ಷೆ ನಡೆಯುತ್ತಿದೆ. ಶಿಕ್ಷಕರಿಗೆ ಇಂತಿಷ್ಟು ಮನೆಗಳೆಂದು ಸಮೀಕ್ಷೆ ನಡೆಸಲು ನಿಗದಿ ಪಡಿಸಲಾಗಿದೆ. ಹೀಗೆ ನಿಗದಿ ಪಡಿಸಿದ್ದಂತ ಮನೆಗಳ ಸಮೀಕ್ಷೆಯನ್ನು ಮೂರೇ ದಿನಗಳಲ್ಲಿ ಶಿಕ್ಷಕರೊಬ್ಬರು ರಾಯಚೂರಲ್ಲಿ ಮುಕ್ತಾಯಗೊಳಿಸಿದ್ದಾರೆ. ಇಂತಹ ಶಿಕ್ಷಕನಿಗೆ ರಾಯಚೂರು ಜಿಲ್ಲಾ, ತಾಲ್ಲೂಕು ಆಡಳಿತ ಅಭಿನಂದಿಸಿ ಗೌರವಿಸಿದೆ. ರಾಜ್ಯದಲ್ಲಿ ನಡೆಯುತ್ತಿರುವಂತ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಗೆ ಸರ್ವಸ್ ಸಮಸ್ಯೆ ಎದುರಾಗಿತ್ತು. ಇದರ ನಡುವೆಯೂ ರಾಯಚೂರು ಜಿಲ್ಲೆಯ ಕಟ್ಟಾಟಕೂರು ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಕೃಷ್ಣಮೂರ್ತಿ ಮೂರೇ ದಿನಗಳಲ್ಲಿ ಸಮೀಕ್ಷೆ ಮುಗಿಸಿದ್ದಾರೆ. ಹೀಗೆ ಮೂರು ದಿನಗಳಲ್ಲಿ ಸಮೀಕ್ಷೆ ಮುಗಿಸಿದಂತ ಶಿಕ್ಷಕ ಕೃಷ್ಣಮೂರ್ತಿಯನ್ನು ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತ ಸನ್ಮಾನಿಸಿ ಅಭಿನಂದನಾ ಪತ್ರ ನೀಡಿ ಗೌರವಿಸಿದೆ. ಅಂದಹಾಗೇ ಶಿಕ್ಷಕ ಕೃಷ್ಣಮೂರ್ತಿಗೆ 86 ಮನೆಗಳ ಸಮೀಕ್ಷೆಯನ್ನು ಮುಗಿಸಲು ನೀಡಲಾಗಿತ್ತು. ಸರ್ವರ್ ಸಮಸ್ಯೆಯ ನಡುವೆಯೂ ಶಿಕ್ಷಕ ಕೃಷ್ಣಮೂರ್ತಿ ಮೂರು ದಿನಗಳಲ್ಲಿ ಸಮೀಕ್ಷೆ ಮುಗಿಸಿದ್ದಾರೆ. ಅಲ್ಲದೇ ಮನೆಯಲ್ಲಿ ಇಲ್ಲದವರನ್ನು ಸಂಪರ್ಕಿಸಿ ಸಮೀಕ್ಷೆ ಮುಕ್ತಾಯಗೊಳಿಸಿದ್ದಾರೆ.

Read More

ಬೆಂಗಳೂರು: ರಾಜ್ಯಾಧ್ಯಂತ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ನಡೆಯುತ್ತಿದೆ. ಮನೆ ಮನೆಗೆ ತೆರಳಿ ಗಣತಿದಾರರು ಜಾತಿಗಣತಿ ಸಮೀಕ್ಷೆ ನಡೆಸುತ್ತಿದ್ದಾರೆ. ಸಾರ್ವಜನಿಕರಾದಂತ ನೀವು ಗಣತಿದಾರರು ಬರುವವರೆಗೂ ಕಾಯುವ ಅಗತ್ಯವಿಲ್ಲ. ಆನ್ ಲೈನ್ ನಲ್ಲಿಯೇ ಅರ್ಜಿ ತುಂಬಿ, ನಿಮ್ಮ ಮಾಹಿತಿಯನ್ನು ದಾಖಲಿಸಬಹುದಾಗಿದೆ. ಆ ಬಗ್ಗೆ ವೀಡಿಯೋ ಮುಂದಿದೆ ನೋಡಿ.. ಹೌದು ನೀವು ಗಣತಿದಾರರನ್ನು ಕಾಯಬೇಕಾಗಿಲ್ಲ. ಆನ್ ಲೈನ್ ನ ಸಿಂಪಲ್ ಪ್ರೊಸಿಜರ್ ಮೂಲಕ ಸ್ವತಹ ನೀವೇ ಅಪ್ಲಿಕೇಷನ್ ಫಿಲ್ ಮಾಡಿ, ಸಬ್ ಮಿಟ್ ಮಾಡಬಹುದಾಗಿದೆ. ಅದಕ್ಕಾಗಿ ನೀವು ಮಾಡಬೇಕಾಗಿರುವುದು ಇಷ್ಟೇ.. ಈ ಕಳಗಿನ ಹಂತ ಅನುಸರಿಸಿ, ಆನ್ ಲೈನ್ ನಲ್ಲೇ ಜಾತಿಗಣತಿ ಸಮೀಕ್ಷೆಯ ಎಲ್ಲಾ ಮಾಹಿತಿ ದಾಖಲಿಸಿ. ಈ ವೀಡಿಯೋ ನೋಡಿ, ಕೆಳಗಿನ ಹಂತಗಳನ್ನು ಅನುಸರಿಸಿ ಅರ್ಜಿ ಭರ್ತಿ ಮಾಡಿ ಆನ್ ಲೈನ್ ನಲ್ಲಿ ಜಾತಿ ಗಣತಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳಿ, ನಿಮ್ಮ ಮಾಹಿತಿಯನ್ನು ಹೀಗೆ ದಾಖಲಿಸಿ ಮೊದಲನೆಯದಾಗಿ ನೀವು https://kscbcelfdeclaration.karnataka.gov.in ಜಾಲತಾಣಕ್ಕೆ ಭೇಟಿ ನೀಡಬೇಕು. ಅಲ್ಲದೇ ನಿಮ್ಮ ಬಾಗಿಲ ಮೇಲೆ ವಿದ್ಯುತ್ ಬಿಲ್…

Read More