Author: kannadanewsnow09

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯದ ಎಲ್ಲಾ ಸಾರ್ವಜನಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಲಾಗುತ್ತಿದ್ದು, ರಾಜ್ಯದಲ್ಲಿ ಎಸ್ಕಾಂ ಇಲಾಖೆಯಿಂದ ಪ್ರತಿ ಮನೆಗೂ ಯು.ಹೆಚ್.ಐ.ಡಿ (UHID) ನಂಬರ್ ಜನರೇಟ್ ಮಾಡಿ, ಸ್ಟಿಕ್ಕರ್ ಅಂಟಿಸುವ ಕಾರ್ಯ ನಡೆಯುತ್ತಿದೆ. ಸೆಪ್ಟೆಂಬರ್.22ರಿಂದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಆರಂಭಗೊಳ್ಳಲಿದ್ದು, ನೀವು ಈ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳುವಂತೆ ಸರ್ಕಾರ ಸೂಚಿಸಿದೆ. ಈಗಾಗಲೇ ಪ್ರತಿ ಮನೆಗೂ ಸರ್ಕಾರದಿಂದ ನಿಯೋಜಿತವಾಗುವ ಗಣತಿದಾರರು ಮುಂದಿನ ದಿನಗಳಲ್ಲಿ ಮೊಬೈಲ್ ಆಪ್ ಮುಖೇನ ಸಮೀಕ್ಷೆ ಕೈಗೊಳ್ಳಲಿದ್ದು, ಆ ಸಮಯದಲ್ಲಿ ಸಾರ್ವಜನಿಕರು ಸೂಕ್ತ ಮಾಹಿತಿ ಒದಗಿಸಿ ಸಮೀಕ್ಷೆಯನ್ನು ಯಶಸ್ವಿಗೊಳಿಸಲು ಹಾಗೂ ಆ ಮೂಲಕ ರಾಜ್ಯದ ಅಭಿವೃದ್ಧಿಗೆ ಹಾಗೂ ವಿವಿಧ ಕಲ್ಯಾಣ ಕಾರ್ಯಕ್ರಮಗಳಿಗೆ ಬುನಾದಿ ಹಾಕಲು ಮುಕ್ತ ಮನಸ್ಸಿನಿಂದ ಸಹಕಾರ ನೀಡುವಂತೆ ಸರ್ಕಾರ ಕೋರಿದೆ. ಈ ಸಮೀಕ್ಷೆಯು ರಾಜ್ಯದ ಎಲ್ಲಾ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ನೀತಿ ನಿರೂಪಣೆಗೆ ಆಧಾರವಾಗಿರುತ್ತದೆ. ಹೀಗಾಗಿ ಸಮೀಕ್ಷೆಯನ್ನು ಸಂಪೂರ್ಣ ಯಶಸ್ವಿಗೊಳಿಸುವುದು ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ ಎಂದು ಹೇಳಿದೆ.…

Read More

ಬೆಂಗಳೂರು: ನಡು ರಸ್ತೆಯಲ್ಲೇ ಲಾಂಗ್ ಹಿಡಿದು ಪಂಡಾಟ ಮೆರೆದಿದ್ದಂತ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿರುವಂತ ಘಟನೆ ಬೆಂಗಳೂರಲ್ಲಿ ನಡೆದಿದೆ. ಬೆಂಗಳೂರಿನ ಪುಲಕೇಶಿನಗರ ಠಾಣೆಯ ವ್ಯಾಪ್ತಿಯಲ್ಲಿ ಗೂಡ್ಸ್ ವಾಹನ ಚಾಲಕನ ಮೇಲೆ ಲಾಂಗ್ ಬೀಸಿ ಗಾಜನ್ನು ಒಡದಿದ್ದಂತ ಘಟನೆ ನಡೆದಿತ್ತು. ಆಗಸ್ಟ್.29ರಂದು ಲಿಂಗರಾಜಪುರ ಪ್ಲೈಓವರ್ ಕೆಳಗೆ ಈ ಘಟನೆ ನಡೆದಿತ್ತು. ಸೈಡ್ ಬಿಡಲಿಲ್ಲ ಎಂಬ ಆರೋಪದಿಂದ ಬೈಕ್ ಸವಾರ ಶರತ್ ನಿಂದ ಕಿರಿಕ್ ತೆಗೆದು ಈ ಕೃತ್ಯ ಎಸಗಲಾಗಿತ್ತು. ಈ ವೇಳೆ ಗಲಾಟೆ ಬಿಡಿಸಲು ಹೋದವರ ಜೊತೆಯೂ ಕಿರಿಕ್ ಮಾಡಿದ್ದನು. ಅಲ್ಲದೇ ಕೈಯಲ್ಲಿ ಲಾಂಗ್ ಬೀಸುತ್ತಾ ಸಾರ್ವಜನಿಕ ಸ್ಥಳದಲ್ಲಿ ಭಯ ಹುಟ್ಟಿಸಿದ್ದನು. ಎಪಿ 03, ಸಿಎ 3739 ಸಂಖ್ಯೆಯ ಬೈಕ್ ನ ಹಿಂಬದಿ ಸವಾರ ಶರತ್ ನಿಂದ ಈ ಕೃತ್ಯ ಎಸಗಲಾಗಿತ್ತು. ಈ ಹಿನ್ನಲೆಯಲ್ಲಿ ನಡು ರಸ್ತೆಯಲ್ಲೇ ಲಾಂಗ್ ಹಿಡಿದು ಹುಚ್ಚಾಟ ಮೆರೆದಂತ ಶರತ್(33)  ಎಂಬಾತನನ್ನು ಪುಲಕೇಶಿನಗರ ಠಾಣೆಯ ಪೊಲೀಸರು ಕೊನೆಗೂ ಬಂದಿಸಿದ್ದಾರೆ. https://kannadanewsnow.com/kannada/from-now-on-if-medical-institutions-and-doctors-in-the-state-do-this-a-fine-of-up-to-1-lakh-will-be-fixed/ https://kannadanewsnow.com/kannada/letter-from-mla-gopalakrishna-belur-to-cm-siddaramaiah-to-make-sagara-taluk-a-new-district/

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಮಹತ್ವದ ಹೆಜ್ಜೆ ಎನ್ನುವಂತೆ ಇನ್ಮುಂದೆ ರಸ್ತೆ ಅಪಘಾತ ಸೇರಿದಂತೆ ಇತರೆ ಸಂದರ್ಭಗಳಲ್ಲಿ ವೈದ್ಯಕೀಯ ಸಂಸ್ಥೆ, ವೈದ್ಯರು ಮುಂಗಡ ಹಣ ಪಾವತಿ ಬೇಡಿಕೆ ನೀಡದೇ ಸಂತ್ರಸ್ತರಿಗೆ ತುರ್ತು ಚಿಕಿತ್ಸೆ ನೀಡುವಂತೆ ರಾಜ್ಯ ಸರ್ಕಾರ ಸೂಚಿಸಿದೆ. ಒಂದು ವೇಳೆ ಹಣಕ್ಕೆ ಬೇಡಿಕೆ ಇಟ್ಟರೇ 1 ಲಕ್ಷದವರೆಗೆ ದಂಡವನ್ನು ವಿಧಿಸುವುದಾಗಿ ಎಚ್ಚರಿಸಿದೆ. ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು. ಸುಟ್ಟ ಗಾಯ, ವಿಷಪ್ರಾಶನ, ಹಲ್ಲೆಯಿಂದಾದ ಗಾಯ ಸೇರಿ ಇತರೆ ತುರ್ತು ಸಂದರ್ಭದಲ್ಲಿಯೂ ವೈದ್ಯಕೀಯ ಸಂಸ್ಥೆ ಅಥವಾ ವೈದ್ಯರು ಮುಂಗಡ ಹಣ ಪಾವತಿಗೆ ಬೇಡಿಕೆ ಇಡದೆ, ಸಂತ್ರಸ್ತರಿಗೆ ತುರ್ತು ಚಿಕಿತ್ಸೆ ನೀಡಬೇಕು. ಇದನ್ನು ಉಲ್ಲಂಘಿಸಿದಲ್ಲಿ ₹1 ಲಕ್ಷದವರೆಗೆ ದಂಡ ವಿಧಿಸಲಾಗುವುದು ಎಂದು ಆರೋಗ್ಯ ಇಲಾಖೆ ಪ್ರಕಟಣೆ ಹೊರಡಿಸಿದೆ. https://twitter.com/KarnatakaVarthe/status/1964261713345466789 ಗಾಯಗೊಂಡ ವ್ಯಕ್ತಿಯ ಆರೋಗ್ಯ ಸ್ಥಿತಿ ಸುಧಾರಿಸಲು ಪ್ರತಿಯೊಂದು ಆಸ್ಪತ್ರೆಯೂ ತಕ್ಷಣದ ವೈದ್ಯಕೀಯ ತಪಾಸಣೆ ಸೇವೆ ಮತ್ತು ಪ್ರಾಥಮಿಕ ಚಿಕಿತ್ಸೆಯನ್ನು ಉಚಿತವಾಗಿ ಹಾಗೂ ಅಗತ್ಯವೆಂದು ಪರಿಗಣಿಸಿ…

Read More

ಬೆಂಗಳೂರು: ಸ್ಟಾಫ್ ನರ್ಸ್ ಒಬ್ಬರ ಗುತ್ತಿಗೆ ನವೀಕರಣಕ್ಕೆ ಲಂಚಕ್ಕೆ ಬೇಡಿಕೆಯನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವಗೊಂಡನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ.ಎಂ.ಜೆ ಕೃಷ್ಣ ಇಟ್ಟಿದ್ದರು. ಈ ಲಂಚಕ್ಕೆ ಬೇಡಿಕೆಯಿಟ್ಟಿದ್ದಂತ ಆಡಿಯೋ ಕೂಡ ವೈರಲ್ ಆಗಿತ್ತು. ಈ ಹಿನ್ನಲೆಯಲ್ಲಿ ವೈದ್ಯ ಡಾ.ಎಂ.ಜೆ ಕೃಷ್ಣ ಅವರನ್ನು ಅಮಾನತುಗೊಳಿಸಿ ಆರೋಗ್ಯ ಇಲಾಖೆ ಆದೇಶಿಸಿದೆ. ಇಂದು ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆಯ ಶಿಸ್ತು ಪ್ರಾಧಿಕಾರ ಹಾಗೂ ಆಯುಕ್ತರಾದಂತ ಶಿವಕುಮಾರ್ ಕೆ.ಬಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ಡಾ|| ಎಂ.ಜೆ. ಶ್ರೀ ಕೃಷ್ಣ ಇವರು ಈ ಹಿಂದೆ ಪ್ರಾ.ಆ.ಕೇಂದ್ರ, ಜೂಲಪಾಳ್ಯ, ಬಾಗೇಪಲ್ಲಿ ತಾಲ್ಲೂಕು, ಚಿಕ್ಕಬಳ್ಳಾಪುರ ಜಿಲ್ಲೆ ಇಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಎಸಗಿದ ಕರ್ತವ್ಯ ಲೋಪ ಮತ್ತು ದುರ್ನಡತೆ ಆರೋಪಕ್ಕೆ ಸಂಬಂಧಿಸಿದ ದೂರಿನ ಮೇರೆಗೆ ಇಲಾಖಾ ವಿಚಾರಣೆ ಬಾಕಿ ಇರಿಸಿ ಪ್ರಾ.ಆ.ಕೇಂದ್ರ, ಜವನಗೊಂಡನಹಳ್ಳಿ, ಹಿರಿಯೂರು ತಾ|| ಚಿತ್ರದುರ್ಗ ಜಿಲ್ಲೆ ಇಲ್ಲಿಗೆ ಸ್ಥಳ ನಿಯುಕ್ತಿಗೊಳಿಸಿ ಆಯುಕ್ತಾಲಯದಿಂದ ಆದೇಶಿಸಲಾಗಿರುತ್ತದೆ. ವೈದ್ಯರು ದಿನಾಂಕ: 21-09-2022 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ, ಜವನಗೊಂಡನಹಳ್ಳಿ,…

Read More

ಬೆಂಗಳೂರು : ರಾಜ್ಯಕ್ಕೆ ಹೆಚ್ಚುವರಿ ವೈದ್ಯಕೀಯ ಸೀಟುಗಳು ಬೇಕು ಎಂಬ ಬೇಡಿಕೆ ಹಲವು ವರ್ಷಗಳಿಂದಲೂ ಇತ್ತು. ಅದೀಗ ಸಾಕಾರಗೊಂಡಿದೆ. 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಿ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‍ಎಂಸಿ) ಆದೇಶ ನೀಡಿದೆ. ಇದರ ಜೊತೆಗೆ ಇದೇ ಮೊದಲ ಬಾರಿಗೆ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಅನಿವಾಸಿ ಭಾರತೀಯರಿಗೆ 15% ಕೋಟಾವನ್ನು ನೀಡಲು ನಿರ್ಧರಿಸಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ ಪ್ರಕಾಶ್ ಆರ್‌. ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರಿನ ವಿಕಾಸಸೌಧದಲ್ಲಿ ಶನಿವಾರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಸಚಿವರು ಈ ಮಾಹಿತಿ ಹಂಚಿಕೊಂಡರು. ಹೊಸ 400 ಸೀಟುಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 15% ಎನ್‌ಆರ್‌ಐ ಕೋಟಾ ನಿಗದಿಪಡಿಸಲಾಗಿದ್ದ, ಇದಕ್ಕೆ 25 ಲಕ್ಷ ರೂಪಾಯಿ ಶುಲ್ಕ ನಿಗದಿಪಡಿಸಲಾಗಿದೆ. ಇದರಿಂದ ಸರ್ಕಾರಿ ವೈದ್ಯಕೀಯ ಕಾಲೇಜು ಸಂಸ್ಥೆಗಳು ಸರ್ಕಾರದ ಅನುದಾನದ ಮೇಲೆ ಹೆಚ್ಚು ಅವಲಂಬಿತವಾಗದೇ ಸ್ವಾವಲಂಬಿಯಾಗಿರಲು ನೆರವಾಗಲಿದೆ ಎಂದು ಸಚಿವರು…

Read More

ಹೈದರಾಬಾದ್: ಕೇಂದ್ರೀಯ ತನಿಖಾ ದಳ (CBI) ನಿರ್ದೇಶಕ ಪ್ರವೀಣ್ ಸೂದ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೇ ಅವರನ್ನು ಹೈದರಾಬಾದ್ ನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಸಿಬಿಐ ನಿರ್ದೇಶಕರಾಗಿರುವಂತ ಪ್ರವೀಣ್ ಸೂದ್ ಅವರು ಆಂಧ್ರಪ್ರದೇಶದ ದೇವಸ್ಥಾನ ನಗರಿಯಾದ ಶ್ರೀಕಾಕುಳಂಗೆ ಭೇಟಿ ನೀಡಿದ್ದರು. ಆ ಬಳಿಕ ಹೈದರಾಬಾದ್ ಗೆ ವಾಪಾಸ್ ಆಗುತ್ತಿದ್ದರು. ಈ ಸಂದರ್ಭದಲ್ಲಿ ಪ್ರವೀಣ್ ಸೂದ್ ಇಂದು ಮಧ್ಯಾಹ್ನ ಮಾರ್ಗಮಧ್ಯದಲ್ಲಿ ಅಸ್ವಸ್ಥತೆಗೊಂಡಿದ್ದಾರೆ. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರವೀಣ್ ಸೂದ್ ಅವರಿಗೆ ಹೈದರಾಬಾದಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರಿಗೆ ತೀವ್ರ ನಿಗಾ ಘಟದಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂಬುದಾಗಿ ತಿಳಿದು ಬಂದಿದೆ. https://kannadanewsnow.com/kannada/these-trains-are-partially-canceled-due-to-traffic-control-and-rescheduling/ https://kannadanewsnow.com/kannada/letter-from-mla-gopalakrishna-belur-to-cm-siddaramaiah-to-make-sagara-taluk-a-new-district/

Read More

ಬೆಳಗಾವಿ: ಬೆಳಗಾವಿ ರೈಲು ನಿಲ್ದಾಣದಲ್ಲಿ ನಡೆಯುತ್ತಿರುವ ಯಾರ್ಡ್ ಮಾರ್ಪಾಡು ಕಾಮಗಾರಿ ಹಿನ್ನಲೆಯಲ್ಲಿ, ಈ ಕೆಳಗಿನ ರೈಲುಗಳ ಸಂಚಾರದಲ್ಲಿ ಭಾಗಶಃ ರದ್ದು, ನಿಯಂತ್ರಣ ಹಾಗೂ ತಡವಾಗಿ ಸಂಚರಿಸಲಿದೆ. ಭಾಗಶಃ ರದ್ದು: 1. ರೈಲು ಸಂಖ್ಯೆ 07302 ಮೀರಜ್– ಬೆಳಗಾವಿ ವಿಶೇಷ ರೈಲು ಸೆ. 7ರಿಂದ 10ರವರೆಗೆ ಘಟಪ್ರಭಾದಲ್ಲಿ ತನ್ನ ಪ್ರಯಾಣ ಕೊನೆಗೊಳಿಸಲಿದೆ. ಈ ರೈಲಿನ ಸಂಚಾರ ಘಟಪ್ರಭಾ ಮತ್ತು ಬೆಳಗಾವಿ ನಡುವೆ ರದ್ದುಗೊಳಿಸಲಾಗಿದೆ. 2. ರೈಲು ಸಂಖ್ಯೆ 07303 ಬೆಳಗಾವಿ – ಮೀರಜ್ ವಿಶೇಷ ರೈಲು ಸೆ. 7ರಿಂದ 10ರವರೆಗೆ ಬೆಳಗಾವಿಯಿಂದ ಹೊರಡುವ ಬದಲು ಘಟಪ್ರಭಾದಿಂದ ಹೊರಡಲಿದೆ. ಈ ರೈಲಿನ ಸಂಚಾರ ಬೆಳಗಾವಿ ಮತ್ತು ಘಟಪ್ರಭಾ ನಡುವೆ ರದ್ದಾಗಿದೆ. ನಿಯಂತ್ರಣ ಮತ್ತು ಮರುನಿಗದಿ: 1. ಸೆ. 7ರಂದು ಹೊರಡುವ ರೈಲು ಸಂಖ್ಯೆ 16534 ಕೆಎಸ್ಆರ್ ಬೆಂಗಳೂರು – ಭಗತ್ ಕಿ ಕೋಠಿ ಎಕ್ಸ್‌ಪ್ರೆಸ್‌ ರೈಲು ಮಾರ್ಗದಲ್ಲಿ 30 ನಿಮಿಷಗಳ ಕಾಲ ನಿಯಂತ್ರಿಸಲ್ಪಡಲಿದೆ. 2. ಸೆ. 8ರಂದು ಹೊರಡುವ ಮೂರು ರೈಲುಗಳಾದ ಸಂಖ್ಯೆ 06529…

Read More

ಹಾವೇರಿ: ಜಿಲ್ಲೆಯ ಕಳ್ಳಿಹಾಳದ ಎಸ್ಸಿ, ಎಸ್ಟಿ ವಸತಿಯುತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ಸಹ ಪ್ರಾಧ್ಯಾಪಕ ಡಾ.ಆನಂದ ಭೈರಾಪುರ ಅವರಿಗೆ ಪ್ರಾಧ್ಯಾಪಕರ ಹುದ್ದೆಗೆ ಪದೋನ್ನತಿ ನೀಡಿ ಸರ್ಕಾರ ಆದೇಶಿಸಿದೆ. ಹಾವೇರಿ ಜಿಲ್ಲೆಯ ಕಳ್ಳಿಹಾಳದ SC/ST ವಸತಿಯುತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತಿಹಾಸ ವಿಷಯದ ಸಹ ಪ್ರಾದ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಡಾ.ಆನಂದ ಭೈರಾಪುರ ಅವರಿಗೆ ಸಹ ಪ್ರಾದ್ಯಾಪಕ ಹುದ್ದೆಯಿಂದ ಪ್ರಾದ್ಯಾಪಕ (Associate Professor to Professor) ಹುದ್ದೆಗೆ ಪದೋನ್ನತಿ (Promotion) ನೀಡಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಮೂಲತಃ ಇವರು ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಅರಸನಾಳು ಗ್ರಾಮದ ದಿ.ಭೈರಾಪುರದ ಬಸಪ್ಪ ದಿ.ಸೋಮಮ್ಮ- ಪಕ್ಕಿರಮ್ಮ ಇವರ ಪುತ್ರರಾಗಿದ್ದು, ಪ್ರಾಥಮಿಕ ಶಿಕ್ಷಣವನ್ನು ಸ್ವಗ್ರಾಮದಲ್ಲಿ, High School, PUC ಶಿಕ್ಷಣವನ್ನು ಧಾರವಾಡದಲ್ಲಿ BA, MA, M.Phill, ಹಾಗೂ Ph.D ಪದವಿಯನ್ನು ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದಲ್ಲಿ, B.Ed ಪದವಿಯನ್ನು ಚಿತ್ರದುರ್ಗದಲ್ಲಿ ಹಾಗೂ M.Ed ಪದವಿಯನ್ನು ಮೈಸೂರಿನಲ್ಲಿ ಪೂರೈಸಿದ್ದಾರೆ. ಡಾ.ವಾರಿಜಾ ಆರ್ ಬೋಳಾರ್ ಇವರ ಮಾರ್ಗದರ್ಶನದಲ್ಲಿ…

Read More

ಬೆಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದೆ. ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಬುರುಡೆಯನ್ನು ತಂದುಕೊಟ್ಟಿದ್ದೇ ಸೌಜನ್ಯ ಮಾವ ಎಂಬುದಾಗಿ ತಿಳಿದು ಬಂದಿದೆ. ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಬುರುಡೆ ತಂದು ಕೊಟ್ಟಿದ್ದೇ ಸೌಜನ್ಯ ಮಾವ ವಿಠಲ್ ಗೌಡ ಎಂಬುದಾಗಿ ಎಸ್ಐಟಿ ವಿಚಾರಣೆ ವೇಳೆಯಲ್ಲಿ ತಿಳಿದು ಬಂದಿದೆ. ಹೀಗಾಗಿ ಯಾವುದೇ ಕ್ಷಣದಲ್ಲಿ ಎಸ್ಐಟಿಯಿಂದ ವಿಠಲ್ ಗೌಡ ಅರೆಸ್ಟ್ ಆಗುವ ಸಾಧ್ಯತೆ ಇದೆ. ಅಂದಹಾಗೇ ಚಿನ್ನಯ್ಯ ಹಾಗೂ ವಿಠಲ್ ಗೌಡ ಜೊತೆಗೆ ಹಳೆಯ ಸ್ನೇಹ ಸಂಬಂಧವಿತ್ತಂತೆ. ನೇತ್ರಾವತಿ ನದಿ ತೀರದಲ್ಲಿ ಚಿಕ್ಕ ಹೋಟೆಲ್ ಅನ್ನು ವಿಠಲ್ ಗೌಡ ನಡೆಸುತ್ತಿದ್ದಾರೆ. ಇಂತಹ ವಿಠಲ್ ಗೌಡ ಅವರ ಅಂಗಡಿಯಲ್ಲೇ ಚಿನ್ನಯ್ಯ ತಂಗುತ್ತಿದ್ದರಂತೆ. https://kannadanewsnow.com/kannada/truck-car-and-two-wheeler-chain-accident-one-dead-three-in-serious-condition/ https://kannadanewsnow.com/kannada/eat-badami-every-day-enjoy-these-health-benefits/

Read More

ಪ್ರತಿದಿನ ಬಾದಾಮಿಯನ್ನು ನಿಮ್ಮ ಆಹಾರದ ಜೊತೆಗೆ ತಿನ್ನೋದಕ್ಕೆ ಶುರು ಮಾಡಿದ್ರೇ, ಅನೇಕ ಆರೋಗ್ಯ ಪ್ರಯೋಜನಗಳಿದ್ದಾವೆ. ಅವುಗಳ ಬಗ್ಗೆ ಮುಂದೆ ಓದಿ. ಮೆದುಳಿಗೆ ಒಳ್ಳೆಯದು ಬಾದಾಮಿಯಲ್ಲಿ ವಿಟಮಿನ್ ಇ ಮತ್ತು ಆರೋಗ್ಯಕರ ಕೊಬ್ಬುಗಳು ಇರುತ್ತವೆ. ಇದು ಸ್ಮರಣಶಕ್ತಿ ಮತ್ತು ಗಮನವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಪ್ರತಿದಿನ ಕೆಲವು ಬಾದಾಮಿಗಳನ್ನು ತಿನ್ನುವುದು ಮೆದುಳಿನ ಕಾರ್ಯವನ್ನು ಉತ್ತಮಗೊಳಿಸಲು ಸಹಾಯ ಮಾಡುತ್ತದೆ, ವಿಶೇಷವಾಗಿ ನೀವು ವಯಸ್ಸಾದಂತೆ. ಹೃದಯದ ಆರೋಗ್ಯವನ್ನು ಬೆಂಬಲಿಸುತ್ತದೆ ಬಾದಾಮಿಯಲ್ಲಿ ಆರೋಗ್ಯಕರ ಕೊಬ್ಬುಗಳು ಮತ್ತು ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ. ಇದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ನಿಯಮಿತ ಸೇವನೆಯು ಹೃದಯ ಕಾಯಿಲೆಯ ಅಪಾಯವನ್ನು ಕಡಿಮೆ ಮಾಡುತ್ತದೆ ಮತ್ತು ನಿಮ್ಮ ಹೃದಯವನ್ನು ಬಲಪಡಿಸುತ್ತದೆ. ತೂಕ ನಿರ್ವಹಣೆಯಲ್ಲಿ ಸಹಾಯ ಮಾಡುತ್ತದೆ ಬಾದಾಮಿ ಫೈಬರ್ ಮತ್ತು ಪ್ರೋಟೀನ್‌ನಿಂದ ತುಂಬಿರುತ್ತದೆ, ಇದು ನಿಮಗೆ ಹೆಚ್ಚು ಸಮಯದವರೆಗೆ ಹೊಟ್ಟೆ ತುಂಬಿದ ಅನುಭವವನ್ನು ನೀಡುತ್ತದೆ. ಅವುಗಳನ್ನು ತಿಂಡಿಯಾಗಿ ತಿನ್ನುವುದು ಹಸಿವನ್ನು ನಿಯಂತ್ರಿಸಲು ಮತ್ತು ಅತಿಯಾಗಿ ತಿನ್ನುವುದನ್ನು ತಡೆಯಲು ಸಹಾಯ ಮಾಡುತ್ತದೆ.…

Read More