Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಗರದ ಬಾಬು ಸಾಬ್ ಪಾಳ್ಯದಲ್ಲಿನ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಕಾರ್ಮಿಕನ ಶವ ಪತ್ತೆಯಾಗಿದೆ. ಈ ಮೂಲಕ ಕಟ್ಟಡ ಕುಸಿತ ದುರಂತದಲ್ಲಿ ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಬೆಂಗಳೂರಿನ ಬಾಬು ಸಾಬ್ ಪಾಳ್ಯದಲ್ಲಿ ನಿನ್ನೆ 6 ಹಂತಸ್ತಿನ ಕಟ್ಟಡವೊಂದು ಕುಸಿತಗೊಂಡಿತ್ತು. ಈ ಕಟ್ಟಡ ಅವಶೇಷಗಳ ಅಡಿಯಲ್ಲಿ 16ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿರುವಂತ ಶಂಕೆ ವ್ಯಕ್ತವಾಗಿತ್ತು. ಆರಂಭದಲ್ಲಿ ಮೂವರು ಸಾವನ್ನಪ್ಪಿದ್ದಾಗಿ ವರದಿಯಾಗಿತ್ತು. ಆ ಬಳಿಕ ರಕ್ಷಣಾ ಕಾರ್ಯಾಚರಣೆಯ ನಂತ್ರ 7ಕ್ಕೆ ಸಾವಿನ ಸಂಖ್ಯೆ ಏರಿಕೆಯಾಗಿತ್ತು. ಈಗ ಮತ್ತೋರ್ವ ಕಾರ್ಮಿಕನ ಶವ ಪತ್ತೆಯಾಗಿದ್ದು, ಮೃತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಬಿಹಾರ್ ಮೂಲದ ಟೈಲ್ಸ್ ಕಾರ್ಮಿಕ ಎಂದು ಹೇಳಲಾಗುತ್ತಿದ್ದು, ತಿರುಪಾಲಿ, ಅರ್ಮಾನ್ ಸೇರಿದಂತೆ ಇದುವರೆಗೂ ಆರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಇದುವರೆಗೂ 13 ಜನ ಕಾರ್ಮಿಕರನ್ನು ರಕ್ಷಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮಾಲೀಕ ಭುವನ್ ರೆಡ್ಡಿ, ಮುನಿರಾಜ ರೆಡ್ಡಿ ಗುತ್ತಿಗೆದಾರ ಮುನಿಯಪ್ಪ ಇಬ್ಬರನ್ನು ಕೂಡ ಹೆಣ್ಣೂರು ಪೊಲೀಸ್ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಟ್ಟಡದ ಮಾಲೀಕ…
ಚಿತ್ರದುರ್ಗ: ಜಿಲ್ಲೆಯಲ್ಲಿ ಆಸ್ಪತ್ರೆಯ ಎರಡನೇ ಮಹಡಿಯಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಂತ ನರ್ಸ್ ಒಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಚಿತ್ರದುರ್ಗ ನಗರದ ಪಿವಿಎಸ್ ಖಾಸಗಿ ಆಸ್ಪತ್ರೆಯ 2ನೇ ಮಹಡಿಯಿಂದ ನರ್ಸ್ ಇಂದ್ರಮ್ಮ(36) ಕೆಳಗೆ ಬಿದ್ದಾಗ ತಲೆಗೆ ಬಲವಾದ ಪೆಟ್ಟು ಬಿದ್ದು, ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಬಸವೇಶ್ವರ ಮೆಡಿಕಲ್ ಆಸ್ಪತ್ರೆ ಮತ್ತು ಕಾಲೇಜಿಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ನರ್ಸ್ ಇಂದ್ರಮ್ಮ ಅವರು 2ನೇ ಮಹಡಿಯಲ್ಲಿ ವಿದ್ಯುತ್ ಸ್ಪರ್ಶದಿಂದ ಆಘಾತಗೊಂಡು ಕೆಳಗೆ ಬಿದ್ದು, ತಲೆಗೆ ಬಲವಾದ ಪೆಟ್ಟು ಬಿದ್ದಿದೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. https://kannadanewsnow.com/kannada/cp-yogeshwar-has-ruined-his-political-future-by-joining-congress-r-ashoka/ https://kannadanewsnow.com/kannada/cyclone-dana-over-350-trains-cancelled-tomorrow-heres-the-list/
ಬೆಂಗಳೂರು: ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರುವ ಮೂಲಕ ತಮ್ಮ ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡಿದ್ದಾರೆ. ಕಾಂಗ್ರೆಸ್ನಿಂದ ಚನ್ನಪಟ್ಟಣದಲ್ಲಿ ಸ್ಪರ್ಧಿಸಿದರೆ ಅವರಿಗೆ ಲೀಡ್ ದೊರೆಯುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ನಾಯಕರು ಕಾರ್ಯಕರ್ತರನ್ನು ಒಪ್ಪಿಸಿ ಸಿ.ಪಿ.ಯೋಗೇಶ್ವರ್ ಅವರಿಗೆ ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ನೀಡಲು ತಯಾರಾಗಿದ್ದರು. ನಾನು ಸೇರಿದಂತೆ ಎಲ್ಲ ಬಿಜೆಪಿ ನಾಯಕರು ಅವರಿಗೆ ಬೆಂಬಲ ನೀಡಿದ್ದೆವು. ಅವರಿಗೆ ಟಿಕೆಟ್ ಸಿಗಲು ಎಲ್ಲ ಪ್ರಯತ್ನ ಮಾಡಿದ್ದೆವು. ಅವರು ಪಕ್ಷ ತೊರೆಯುವ ಮೂಲಕ ಪಕ್ಷಕ್ಕೆ ದ್ರೋಹ ಮಾಡಿದ್ದಾರೆ. ಈಗ ಬಿಜೆಪಿ-ಜೆಡಿಎಸ್ ಮೈತ್ರಿ ಇದೆ. ಕೋಲಾರದಲ್ಲಿ ಈ ಹಿಂದೆ ಬಿಜೆಪಿ ಗೆದ್ದಿತ್ತು. ಈ ಲೋಕಸಭಾ ಚುನಾವಣೆಯಲ್ಲಿ ಅಲ್ಲಿ ಜೆಡಿಎಸ್ಗೆ ಅವಕಾಶ ನೀಡಲಾಗಿದೆ. ಮಂಡ್ಯದಲ್ಲಿ ಈ ಹಿಂದೆ ಸುಮಲತಾ ಸ್ಪರ್ಧಿಸಿದ್ದರು. ಬಳಿಕ ಎಚ್.ಡಿ.ಕುಮಾರಸ್ವಾಮಿ ಅಲ್ಲಿ ಗೆದ್ದರು. ಇಲ್ಲಿ ಬಿಜೆಪಿ, ಜೆಡಿಎಸ್ ಎಂಬುದಕ್ಕಿಂತ ಎನ್ಡಿಎ ಗೆಲ್ಲಬೇಕು ಎಂಬ ಉದ್ದೇಶ ಇತ್ತು ಎಂದರು. ಆದರೆ ಇವೆಲ್ಲ ಮೈತ್ರಿ, ಒಗ್ಗಟ್ಟನ್ನು ಬದಿಗೆ ಸರಿಸಿ ಕಾಂಗ್ರೆಸ್ಗೆ ಸೇರಿರುವುದರಿಂದ ಅವರ ರಾಜಕೀಯ…
ನವದೆಹಲಿ: ಅಕ್ಟೋಬರ್ 25 ರಂದು ಪಶ್ಚಿಮ ಬಂಗಾಳ ಮತ್ತು ಒಡಿಶಾದ ಕರಾವಳಿ ಪ್ರದೇಶಗಳಿಗೆ ಅಪ್ಪಳಿಸುವ ‘ದಾನಾ’ ಚಂಡಮಾರುತದ ದೃಷ್ಟಿಯಿಂದ, ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಭಾರತೀಯ ರೈಲ್ವೆ ಸುಮಾರು 350 ರೈಲುಗಳನ್ನು ರದ್ದುಗೊಳಿಸಿದೆ. ಆ ಪಟ್ಟಿ ಮುಂದಿದೆ ಓದಿ. ಬಂಗಾಳಕೊಲ್ಲಿಯಲ್ಲಿ ಉತ್ತಮವಾಗಿ ಗುರುತಿಸಲಾದ ಕಡಿಮೆ ಒತ್ತಡದ ಪ್ರದೇಶವು ಮಂಗಳವಾರ ವಾಯುಭಾರ ಕುಸಿತವಾಗಿ ತೀವ್ರಗೊಂಡಿದೆ. ಇದು ಪೂರ್ವ ಕರಾವಳಿಯತ್ತ ತಿರುಗಿದ್ದು, ತೀವ್ರ ಚಂಡಮಾರುತವಾಗಿ ಬದಲಾಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (India Meteorological Department -IMD) ತಿಳಿಸಿದೆ. ವಾಯುಭಾರ ಕುಸಿತವು ಅಕ್ಟೋಬರ್ 23 ರ ವೇಳೆಗೆ ಚಂಡಮಾರುತವಾಗಿ ಮತ್ತು ಅಕ್ಟೋಬರ್ 25 ರ ವೇಳೆಗೆ ತೀವ್ರವಾದ ಚಂಡಮಾರುತವಾಗಿ ( Cyclone Dana ) ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ. ಒಡಿಶಾ ಆರೋಗ್ಯ ನಿರ್ದೇಶಕ ಬಿಜಯ್ ಮೊಹಾಪಾತ್ರ ಅವರು ಮಂಗಳವಾರ ರಾಜ್ಯದ ಎಲ್ಲಾ ವೈದ್ಯರ ರಜೆಗಳನ್ನು ಅಕ್ಟೋಬರ್ 23 ರಿಂದ 25 ರವರೆಗೆ ರದ್ದುಗೊಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಆರೋಗ್ಯ ನಿರ್ದೇಶಕ ಬಿಜಯ್…
ಬೆಂಗಳೂರು: ನಗರದ ಬಾಬು ಸಾಬ್ ಪಾಳ್ಯದಲ್ಲಿನ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಕಾರ್ಮಿಕನ ಶವ ಪತ್ತೆಯಾಗಿದೆ. ಈ ಮೂಲಕ ಕಟ್ಟಡ ಕುಸಿತ ದುರಂತದಲ್ಲಿ ಸಾವಿನ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಬೆಂಗಳೂರಿನ ಬಾಬು ಸಾಬ್ ಪಾಳ್ಯದಲ್ಲಿ ನಿನ್ನೆ 6 ಹಂತಸ್ತಿನ ಕಟ್ಟಡವೊಂದು ಕುಸಿತಗೊಂಡಿತ್ತು. ಈ ಕಟ್ಟಡ ಅವಶೇಷಗಳ ಅಡಿಯಲ್ಲಿ 16ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿರುವಂತ ಶಂಕೆ ವ್ಯಕ್ತವಾಗಿತ್ತು. ಆರಂಭದಲ್ಲಿ ಮೂವರು ಸಾವನ್ನಪ್ಪಿದ್ದಾಗಿ ವರದಿಯಾಗಿತ್ತು. ಆ ಬಳಿಕ ರಕ್ಷಣಾ ಕಾರ್ಯಾಚರಣೆಯ ನಂತ್ರ 6ಕ್ಕೆ ಸಾವಿನ ಸಂಖ್ಯೆ ಏರಿಕೆಯಾಗಿತ್ತು. ಈಗ ಮತ್ತೋರ್ವ ಕಾರ್ಮಿಕನ ಶವ ಪತ್ತೆಯಾಗಿದ್ದು, ಮೃತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಬಿಹಾರ್ ಮೂಲದ ಟೈಲ್ಸ್ ಕಾರ್ಮಿಕ ಎಂದು ಹೇಳಲಾಗುತ್ತಿದ್ದು, ತಿರುಪಾಲಿ, ಅರ್ಮಾನ್ ಸೇರಿದಂತೆ ಇದುವರೆಗೂ ಆರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಇದುವರೆಗೂ 13 ಜನ ಕಾರ್ಮಿಕರನ್ನು ರಕ್ಷಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮಾಲೀಕ ಭುವನ್ ರೆಡ್ಡಿ, ಮುನಿರಾಜ ರೆಡ್ಡಿ ಗುತ್ತಿಗೆದಾರ ಮುನಿಯಪ್ಪ ಇಬ್ಬರನ್ನು ಕೂಡ ಹೆಣ್ಣೂರು ಪೊಲೀಸ್ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಟ್ಟಡದ ಮಾಲೀಕ…
ಬೆಂಗಳೂರು: ಇಂದು ಬಿಜೆಪಿಗೆ ಗುಡ್ ಬೈ ಹೇಳಿ, ಕಾಂಗ್ರೆಸ್ ಪಕ್ಷಕ್ಕೆ ಸಿ.ಪಿ ಯೋಗೇಶ್ವರ್ ಅವರ ಸೇರ್ಪಡೆಯಾದರು. ಈ ಬಳಿಕ ಸುದ್ದಿಗೋಷ್ಠಿಯಲ್ಲಿ ಏನು ಮಾತಾಡಿದ್ರು ಅಂತ ಮುಂದೆ ಓದಿ. ನನ್ನ ರಾಜಕೀಯ ಜೀವನವನ್ನು ನಾವು ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಆರಂಭಿಸಿದ್ದೆ. ಕಾಂಗ್ರೆಸ್ ಪಕ್ಷ ಬಿಟ್ಟಿದ್ದೆ. ಈಗ ಮತ್ತೆ ಬಂದಿದ್ದೇನೆ. ನನ್ನ ಮುಂದಿನ ರಾಜಕೀಯ ಭಾಗ ಕಾಂಗ್ರೆಸ್ ನಲ್ಲಿ ಮುಂದುವರಿಯಲಿದೆ. ಕಳೆದ ಮೂರ್ನಾಲ್ಕು ತಿಂಗಳಲ್ಲಿ ನಡೆದಿರುವ ರಾಜಕೀಯ ಬೆಳವಣಿಗೆಯಲ್ಲಿ ಬೇಸರವಾಗಿದೆ. ಕೆಲವೊಮ್ಮೆ ನಮಗಾಗಿ ನಾವು ಕಟ್ಟಿದ ಮನೆಯಲ್ಲಿ ನಾವು ವಾಸ ಮಾಡಲು ಆಗುವುದಿಲ್ಲ. ಅದೇ ಸಂದರ್ಭ ನನಗೆ ಬಂದಿದೆ. ನಾನಿದ್ದ ಬಿಜೆಪಿ ಜತೆಗೆ ಜೆಡಿಎಸ್ ಪಕ್ಷ ಸೇರಿಕೊಂಡ ನಂತರ ಎನ್ಡಿಎ ಮೈತ್ರಿಕೂಟದಲ್ಲಿ ಇದ್ದ ವಾತಾವರಣ ನನ್ನ ರಾಜಕೀಯ ಬೆಳವಣಿಗೆಗೆ ಪೂರಕವಾಗಿರಲಿಲ್ಲ ಎಂದು ಮನಗಂಡು ಸ್ವಯಂಪ್ರೇರಿತವಾಗಿ ಬೇಷರತ್ತಾಗಿ ಕಾಂಗ್ರೆಸ್ ಪಕ್ಷ ಸೇರುತ್ತಿದ್ದೇನೆ. ಮಾಧ್ಯಮಗಳಲ್ಲಿ ರಾತ್ರಿ 12 ಗಂಟೆಗೆ ಭೇಟಿ ಮಾಡಿದ್ದಾರೆ ಎಂದು ವರದಿಯಾಗಿರುವುದನ್ನು ನೋಡಿದೆ. ನನಗೆ ಅಂತಹ ಅವಶ್ಯಕತೆ ಇಲ್ಲ. ನಾನು…
ಕಲಬುರ್ಗಿ: ನಗರದಲ್ಲಿ ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದಂತ ಮೊಬೈಲ್ ಕಳವು ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬರೋಬ್ಬರಿ 200 ಮೊಬೈಲ್ ಗಳನ್ನು ಪತ್ತೆ ಹಚ್ಚಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡಂತ ಕಲಬುರ್ಗಿ ನಗರ ಪೊಲೀಸ್ ಆಯುಕ್ತ ಡಾ.ಎಸ್ ಡಿ ಶರಣಪ್ಪ ಅವರು ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಸಿಇಐಆರ್ ಪೋರ್ಟಲ್ ಮೂಲಕ 9 ತಿಂಗಳಲ್ಲಿ 672 ಮೊಬೈಲ್ ಕಳವು ಪ್ರಕರಣಗಳು ದಾಖಲಾಗಿದ್ದವು. ಈ ಸಂಬಂಧ ಪೊಲೀಸರು ಕಾರ್ಯಾಚರಣೆ ನಡೆಸಿ 200 ಮೊಬೈಲ್ ಗಳನ್ನು ಪತ್ತೆ ಹಚ್ಚಿದ್ದಾರೆ ಎಂದರು. ಪತ್ತೆಯಾದಂತ 200 ಮೊಬೈಲ್ ಗಳನ್ನು ಸಂಬಂಧಿಸಿದಂತ ಮಾಲೀಕರಿಗೆ ತಲುಪಿಸಲಾಗುತ್ತದೆ. ಇವುಗಳಲ್ಲಿ ಕಳ್ಳತನವಾಗಿದ್ದ ಹಾಗೂ ಕಳೆದು ಹೋಗಿದ್ದಂತ ಮೊಬೈಲ್ ಕೂಡ ಇದ್ದಾವೆ ಎಂದು ತಿಳಿಸಿದರು. ಮೊಬೈಲ್ ಕಳೆದುಕೊಂಡವರು, ಕಳುವಾದವರು ತಪ್ಪದೇ ಸಿಇಐಆರ್ ಪೋರ್ಟಲ್ ಮೂಲಕ ನೋಂದಾಯಿಸಿಕೊಳ್ಳಿ. ಆಗ ಆ ಮೊಬೈಲ್ ಮಾರಾಟವಾಗಿ, ಬಳಕೆಯಾದಾಗ ಪೊಲೀಸರಿಗೆ ಮಾಹಿತಿ ಸಿಗಲಿದೆ. ಆನಂತ್ರ ಅಂತಹ ಮೊಬೈಲ್ ಗಳನ್ನು ಜಪ್ತಿ ಮಾಡಿ, ಮಾಲೀಕರಿಗೆ ಹಿಂದಿರುಗಿಸುವಂತ ಕೆಲಸ ಮಾಡಲಾಗುತ್ತದೆ ಎಂಬುದಾಗಿ ಮನವಿ ಮಾಡಿದರು. https://kannadanewsnow.com/kannada/karunadus-good-fortune-to-have-a-brave-woman-like-chennamma-minister-shivaraj-thangadagi/…
ಬೆಂಗಳೂರು: ಹೆಣ್ಣೆಂದರೆ ಶಕ್ತಿದೇವತೆ. ಹೆಣ್ಣೊಬ್ಬಳು ಮನಸ್ಸು ಮಾಡಿದರೆ ಏನನ್ನಾದರೂ ಸಾಧಿಸಬಹುದು ಎಂಬ ಪರಮಸತ್ಯವನ್ನು ಜಗತ್ತಿಗೆ ಸಾರಿದ ನಮ್ಮ ಕನ್ನಡ ಮಣ್ಣಿನ ಹೆಣ್ಣುಮಗಳು ಚೆನ್ನಮ್ಮನವರು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಿಗಿಯವರು ಅಭಿಪ್ರಾಯಪಟ್ಟರು. ಕಿತ್ತೂರು ರಾಣಿಚೆನ್ನಮ್ಮ ಜಯಂತಿ ಅಂಗವಾಗಿ ಕನ್ನಡ ಭವನದ ಆವರಣದಲ್ಲಿ ಬೇಲಿ ಮಠದ ಶಿವರುದ್ರ ಮಹಾಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಚೆನ್ನಮ್ಮ ಅಸೀಮ ಶೌರ್ಯ, ಧೈರ್ಯ, ತ್ಯಾಗ, ರಾಜನೀತಿ, ಮಾತೃವಾತ್ಸಲ್ಯ ಮುಂತಾದ ಸದ್ಗುಣಗಳ ಖನಿ. ಎಂದೆಂದಿಗೂ ಕನ್ನಡದ ಹೆಣ್ಣುಮಕ್ಕಳ ಪ್ರತಿನಿಧಿ ಆಗಿದ್ದರು. ಇಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ ಮಾಡಲಾಗುತ್ತಿದ್ದರೂ, ವಾಸ್ತವವಾಗಿ ಇದು ಕಿತ್ತೂರು ಸಂಸ್ಥಾನ ಬ್ರಿಟೀಷರ ವಿರುದ್ಧ ವಿಜಯೋತ್ಸವ ಸಾಧಿಸಿದ ದಿನವಾಗಿದೆ. ಬ್ರಿಟೀಷ್ ಕಲೆಕ್ಟರ್ ಥ್ಯಾಕರೆ ವಿರುದ್ಧ ಕಿತ್ತೂರು ರಾಣಿ ಚೆನ್ನಮ್ಮ ಜಯ ಸಾಧಿಸಿದ ದಿನ ಅಕ್ಟೋಬರ್ 23. ಇದೇ ದಿನ ಥ್ಯಾಕರೆಯ ಮರಣವೂ ಆಯಿತು. ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟೀಷರ…
ಹಾವೇರಿ: ಶಿಗ್ಗಾವಿ ಕ್ಷೇತ್ರದಲ್ಲಿ ಬಿಜೆಪಿಗೆ ಯಾವುದೇ ರೀತಿಯ ಬಂಡಾಯ ಇಲ್ಲ. ಚುನಾವಣೆ ಸಂದರ್ಭದಲ್ಲಿ ಈ ರೀತಿಯ ಬೆಳವಣಿಗೆಗಳು ನಡೆಯುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಶಿಗ್ಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿಗ್ಗಾವಿ ಕ್ಷೇತ್ರದಲ್ಲಿ ಬಿಜೆಪಿಗೆ ಬಂಡಾಯ ಎದುರಾಗಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಗೆ ಯಾವುದೇ ರೀತಿಯ ಬಂಡಾಯ ಇಲ್ಲ. ಚುನಾವಣೆಯ ಸಂದರ್ಭದಲ್ಲಿ ಈ ರೀತಿಯ ಬೆಳವಣಿಗೆಗಳು ನಡೆಯುತ್ತವೆ. ಕಾಂಗ್ರೆಸ್ ಅಭ್ಯರ್ಥಿ ಯಾರೇ ನಿಂತರೂ ಕೂಡ ನಾವು ಚುನಾವಣೆಯನ್ನು ಅತ್ಯಂತ ಸ್ಪರ್ಧಾತ್ಮಕವಾಗಿ ಮಾಡುತ್ತೇವೆ. ಮತ್ತು ಸೌಹಾರ್ದಯುತವಾಗಿ ಚುನಾವಣೆ ಮಾಡುತ್ತೇವೆ ಎಂದು ಹೇಳಿದರು. ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ನಾಮಪತ್ರ ಸಲ್ಲಿಕೆಯ ದಿನ ಬಿಜೆಪಿ ರಾಜ್ಯ ನಾಯಕರಾದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಿರಿಯ ನಾಯಕರು ಆಗಮಿಸಲಿದ್ದಾರೆ ಎಂದು ಹೇಳಿದರು. ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಿ.ಪಿ ಯೋಗೇಶ್ವರ್ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ಬಹಳ ಪ್ರಯತ್ನ ಮಾಡಿದ್ದೇವೆ. ಅವರು…
BIGG NEWS: ರಾಜ್ಯದಲ್ಲಿ ಮತ್ತೊಂದು ಹಗರಣ ಬಯಲಿಗೆ: ಬಿಬಿಎಂಪಿ ಅಧಿಕಾರಿಗಳಿಂದ 2,067 ಕೋಟಿ ಅನುದಾನ ಗುಳುಂ, EDಗೆ ದೂರು
ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಹಗರಣ ಬಯಲಿಗೆ ಬಂದಿದೆ. “ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಸಮಸ್ಯೆಗಳ ಪರಿಹಾರಕ್ಕೆಂದು ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ 14 ಮತ್ತು 15ನೇ ಹಣಕಾಸು ಆಯೋಗದ ₹ 2,067 ಕೋಟಿ ಅನುದಾನವನ್ನು ಹೇಳ ಹೆಸರಿಲ್ಲದಂತೆ ತಿಂದು ಬಿಬಿಎಂಪಿಯ ಅಧಿಕಾರಿಗಳ ತೇರಿದ್ದಾರೆ. ಈ ಮೂಲಕ ಬಿಬಿಎಂಪಿಯಲ್ಲಿ ಬೃಹತ್ ಹಗರಣ ನಡೆದಿದೆ ಎಂಬುದಾಗಿ ಭ್ರಷ್ಟಾಚಾರ ವಿರೋಧಿ ವೇದಿಕೆಯ ಅಧ್ಯಕ್ಷರು, ಬಿಬಿಎಂಪಿಯ ಮಾಜಿ ಆಡಳಿತ ಪಕ್ಷದ ನಾಯಕರಾದಂತ ಎನ್ ಆರ್ ರಮೇಶ್ ಇಡಿ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಕೇಂದ್ರ ಸರ್ಕಾರವು ಕರ್ನಾಟಕ ರಾಜ್ಯಕ್ಕೆ 2017-18 ರಿಂದ 2023-24 ರವರೆಗಿನ ಅವಧಿಯಲ್ಲಿ 14 ಮತ್ತು 15ನೇ ಹಣಕಾಸು ಆಯೋಗದ ಒಟ್ಟು ₹ 2,09,690,29,00,000/- (ಎರಡು ಲಕ್ಷ ಒಂಬತ್ತು ಸಾವಿರ ಆರು ನೂರಾ ತೊಂಬತ್ತು ಕೋಟಿ ಇಪ್ಪತ್ತೊಂಬತ್ತು ಲಕ್ಷ) ಗಳನ್ನು ಬಿಡುಗಡೆ ಮಾಡಿರುತ್ತದೆ. ಅದೇ ರೀತಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ತ್ಯಾಜ್ಯ ವಿಲೇವಾರಿ ಕಾರ್ಯದ ಸಮಸ್ಯೆಗಳ ಪರಿಹಾರ ಕಾರ್ಯಗಳಿಗೆಂದು 2013-14…