Author: kannadanewsnow09

ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಇಂದು ದಿನಾಂಕ 23.10.2024 ರಂದು ಮುಂಜಾಗೃತ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗೀ / ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಿ ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ ಜಿ ರವರು ಆದೇಶಿಸಿದ್ದಾರೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ , ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಕೆಲವೊಂದು ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದ್ದು, ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂದರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸುವುದು. ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ…

Read More

ಬೆಂಗಳೂರು: ನಗರದಲ್ಲಿ ಬೆಸ್ಕಾಂನಿಂದ ( BESCOM ) ತುರ್ತು ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ, ದಿನಾಂಕ 23-10-2024ರ ಇಂದು, ಹಾಗೂ ದಿನಾಂಕ 24-10-2024ರ ಗುರುವಾರದ ನಾಳೆ ನಗರದ ಕೆಲ ಪ್ರದೇಶಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಬೆಸ್ಕಾಂ ಮಾಹಿತಿ ನೀಡಿದ್ದು, ಬೆಂಗಳೂರು: 66/11 ಕೆವಿ. ಆಲೂರು ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಇರುವುದರಿಂದ ವಿದ್ಯುತ್ ಸರಬರಾಜಾಗುತ್ತಿರುವ ನೆಲಮಂಗಲ ತಾಲ್ಲೂಕಿನ ಈ ಕೆಳಕಂಡ ಗ್ರಾಮಗಳಲ್ಲಿ ದಿನಾಂಕ: 23.10.2024 ರಂದು ಬುಧವಾರ ಬೆಳಗ್ಗೆ 10.00 ಗಂಟೆಯಿಂದ ಸಂಜೆ 05.00 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸಬೇಕಾಗಿ ಕೋರಲಾಗಿದೆ. ಇಂದು ಈ ಪ್ರದೇಶಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಕರೆಂಟ್ ಇರಲ್ಲ ವಿದ್ಯುತ್ ಅಡಚಣೆಯುಂಟಾಗುವ ಪ್ರದೇಶಗಳು: ನೆಲಮಂಗಲ ತಾಲ್ಲೂಕಿನ ಮಾಕಳಿ, ಮಂತ್ರಿ ಬಡಾವಣೆ, ನರಸೀಪುರ ಬಿಡಿಎ ಪ್ಲಾಟ್ಸ್, ಅಡಕಮಾರನಹಳ್ಳಿ, ದೊಂಬರಹಳ್ಳಿ, ರಾಜೇಶ್ವರಿ ನಗರ,…

Read More

ಬೆಂಗಳೂರು: ನಗರದಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವಂತ ಮಳೆಯಿಂದಾಗಿ 600 ಕುಟುಂಬಗಳ 2500 ಜನರು ಸಂತ್ರಸ್ತರಾಗಿದ್ದಾರೆ. ಅವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದ್ದು, ಕಾಳಜಿ ಕೇಂದ್ರಗಳಲ್ಲಿ ಇರಿಸಿ, ತಾತ್ಕಾಲಿಕ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಮಾಡಿದೆ. ಇಂದು ಮುಖ್ಯಮಂತ್ರಿ ಕಚೇರಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದ್ದು, ನಗರದ ಯಲಹಂಕ, ಮಹದೇವಪುರ, ದಾಸರಹಳ್ಳಿ ವಲಯದಲ್ಲಿ ಕಳೆದ 72 ಗಂಟೆಗಳಲ್ಲಿ ಭಾರೀ ಮಳೆಯಾಗಿದೆ. ಇದರಿಂದ ಕೆರೆಗಳೆಲ್ಲಾ ತುಂಬಿ ಕೋಡಿಯಲ್ಲಿ ಹೆಚ್ಚು ನೀರು ಹರಿದು ರಾಜಕಾಲುವೆಗಳಿಗೆ ಬರುತ್ತಿರುವ ಕಾರಣ, ವಿವಿಧ ಪ್ರದೇಶಗಳು ಜಲಾವೃತವಾಗಿರುತ್ತದೆ. ಚೌಡೇಶ್ವರಿ ನಗರದಲ್ಲಿ 160 ಮಿ.ಮೀ ಮಳೆಯಾಗಿದ್ದು, ಇದು ಇತಿಹಾಸದಲ್ಲಿಯೇ ಅತಿಹೆಚ್ಚು ಮಳಎಯಾಗಿರುತ್ತದೆ ಎಂದಿದೆ. ಬೆಂಗಳೂರಲ್ಲಿ ಅಕ್ಟೋಬರ್ ತಿಂಗಳಲ್ಲಿ 245 ಮಿ.ಮೀ ಮಳೆಯಾಗಿದ್ದು, ಇದು ಅತಿ ಹೆಚ್ಚು ಮಳೆಯಾಗಿರುವ ಪೈಕಿ ನಾಲ್ಕನೇ ಮಳೆಯಾಗಿದೆ. ಪ್ರವಾಹ ಪೀಡಿತ ಪ್ರದೇಶಗಳನ್ನು ಮೇಲ್ವಿಚಾರಣೆ ಮಾಡಲು, ನಿರ್ವಹಿಸಲು ಮತ್ತು ಯಾವುದೇ ತುರ್ತು ಪರಿಸ್ಥಿತಿಗಳಿಗೆ ತ್ವರಿತವಾಗಿ ಪ್ರತಿಕ್ರಿಯಿಸಲು ಪಾಲಿಕೆ, ಎನ್ ಡಿ ಆರ್ ಎಫ್, ಎಸ್ ಡಿ ಆರ್ ಎಫ್, ಅಗ್ನಿಶಾಮಕ ದಳದ ತಂಡಗಳು…

Read More

ಬೆಂಗಳೂರು: ವಿಧಾನ ಪರಿಷತ್ತಿನ ಸ್ಥಾನಕ್ಕೆ ರಾಜೀನಾಮೆ ನೀಡಿರುವಂತ ಸಿ.ಪಿ ಯೋಗೇಶ್ವರ್, ಬಿಜೆಪಿ ಪಕ್ಷದ ವಿರುದ್ಧ ಸಿಡಿದೆದ್ದಿದ್ದಾರೆ. ಇದೀಗ ಚನ್ನಪಟ್ಟಣ ಉಪ ಚುನಾವಣೆಗೆ ಸಮಾಜವಾದಿ ಪಕ್ಷದಿಂದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಸಮಾಜವಾದಿ ಪಕ್ಷದ ನಾಯಕರಿದಂ ಬಿ-ಫಾರಂ ಪಡೆದಂತ ಪೋಟೋಗಳು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿವೆ. ಬಿಜೆಪಿಯಿಂದ ಚನ್ನಪಟ್ಟಣ ವಿಧಾನ ಸಭಾ ಉಪ ಚುನಾವಣೆಗೆ ಸಿ.ಪಿ ಯೋಗೇಶ್ವರ್ ಟಿಕೆಟ್ ನಿರೀಕ್ಷೆಯಲ್ಲಿದ್ದರು. ಆದರೇ ಚನ್ನಪಟ್ಟಣದಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗೆ ಟಿಕೆಟ್ ನೀಡುವುದಕ್ಕೆ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿತ್ತು. ಈ ವಿಷಯದಿಂದ ಸಿಟ್ಟಾಗಿರುವಂತ ಸಿ.ಪಿ ಯೋಗೇಶ್ವರ್ ಬಿಜೆಪಿಯಿಂದ ವಿಧಾನ ಪರಿಷತ್ ಚುನಾವಣೆಗೆ ನಾಮನಿರ್ದೇಶನಗೊಂಡಿದ್ದಂತ ಸ್ಥಾನಕ್ಕೆ ರಾಜೀನಾಮೆ ನೀಡಿ, ಹೊರ ನಡೆದಿದ್ದರು. ನಿನ್ನೆ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಂತ ಅವರು, ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂಬುದಾಗಿ ಸುದ್ದಿಗಳು ವೈರಲ್ ಆಗಿತ್ತು. ಆದರೇ ಇಂದು ಸಮಾಜವಾದಿ ಪಕ್ಷದಿಂದ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ ಸಮಾಜವಾದಿ…

Read More

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲಿನಲ್ಲಿರುವಂತ ನಟ ದರ್ಶನ್ ಗೆ ಬೆನ್ನುನೋವು ಕಾಣಿಸಿಕೊಂಡಿತ್ತು. ಈ ಹಿನ್ನಲೆಯಲ್ಲಿ ಸಮಸ್ಯೆ ಪತ್ತೆ ಹಚ್ಚಿ ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಜೈಲು ಅಧಿಕಾರಿಗಳು ಕರೆತಂದಿದ್ದಾರೆ. ಬಳ್ಳಾರಿಯ ಕೇಂದ್ರ ಕಾರಾಗೃಹದಿಂತ ವಾಹನದಲ್ಲಿ ವಿಮ್ಸ್ ಆಸ್ಪತ್ರೆಗೆ ಜೈಲು ಅಧಿಕಾರಿಗಳು ನಟ ದರ್ಶನ್ ಅವರನ್ನು ಕರೆತಂದಿದ್ದಾರೆ. ವಿಮ್ಸ್ ಆಸ್ಪತ್ರೆಯ ನ್ಯೂರೋ ವಿಭಾಗದಲ್ಲಿ ನಟ ದರ್ಶನ್ ಅವರಿಗೆ ಎಂಆರ್ ಐ ಸ್ಕ್ಯಾನಿಂಗ್ ನಡೆಸಲಿದ್ದಾರೆ. ಬೆನ್ನು ನೋವಿಗೆ ಕಾರಣವೇನು. ಅದಕ್ಕೆ ಚಿಕಿತ್ಸೆ ಯಾವ ರೀತಿಯಲ್ಲಿ ನೀಡಬೇಕು ಸೇರಿದಂತೆ ವಿವಿಧ ಪರೀಕ್ಷೆಯನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಯ ನ್ಯೂರೋ ವಿಭಾಗದ ವೈದ್ಯರು ನಡಸಲಿದ್ದಾರೆ. ಈ ಬಳಿಕ ಮತ್ತಷ್ಟು ಮಾಹಿತಿ ಲಭ್ಯವಾಗಲಿದೆ. https://kannadanewsnow.com/kannada/7-public-schools-to-be-opened-for-the-children-of-police-personnel-in-the-state-siddaramaiah/ https://kannadanewsnow.com/kannada/legal-action-will-be-taken-against-those-selling-banned-firecrackers-minister-ishwar-khandre/

Read More

ಬೆಂಗಳೂರು: ಪೊಲೀಸರ ಮಕ್ಕಳಿಗಾಗಿ ರಾಜ್ಯದ ಏಳು ಪ್ರಮುಖ ಸ್ಥಳಗಳಲ್ಲಿ 7 ಪಬ್ಲಿಕ್‌ ಶಾಲೆಗಳನ್ನು ತೆರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ. https://twitter.com/KarnatakaVarthe/status/1848720767711908290 ಪೊಲೀಸರು ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ನಮ್ಮ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಜನರ ಪ್ರಾಣ, ಆಸ್ತಿ ರಕ್ಷಿಸುವ ಪೊಲೀಸ್ ಸಿಬ್ಬಂದಿಯ ಹಿತ ರಕ್ಷಿಸಲು ಸರ್ಕಾರ ಬದ್ದವಾಗಿದೆ. ಇದಕ್ಕಾಗಿ 2025 ರಲ್ಲಿ 10 ಸಾವಿರ ಪೊಲೀಸ್ ವಸತಿ ಮನೆಗಳ ನಿರ್ಮಾಣಕ್ಕೆ 2000 ಕೋಟಿ ನೀಡಿದ್ದೇವೆ. 200 ಕೋಟಿ ವೆಚ್ಚದಲ್ಲಿ 100 ಹೊಸ ಠಾಣೆಗಳ ನಿರ್ಮಾಣ ಆಗುತ್ತಿವೆ. ಪೊಲೀಸ್ ಮಕ್ಕಳಿಗಾಗಿ 7 ಪ್ರಮುಖ ಸ್ಥಳಗಳಲ್ಲಿ 7 ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುತ್ತದೆ ಎಂದು ಘೋಷಿಸಿದರು. ಕಳೆದ ಒಂದು ವರ್ಷದಲ್ಲಿ ದೇಶದಲ್ಲಿ 216 ಮಂದಿ, ರಾಜ್ಯದಲ್ಲಿ 12 ಮಂದಿ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳು ಕರ್ತವ್ಯದ ಮೇಲಿದ್ದಾಗಲೇ ಹುತಾತ್ಮರಾಗಿದ್ದಾರೆ. ಇವರ ಆತ್ಮಕ್ಕೆ ನಾನು ಶಾಂತಿ ಕೋರುತ್ತಲೇ ಕುಟುಂಬದವರ ದುಃಖದಲ್ಲಿ ಭಾಗಿ ಆಗುತ್ತೇನೆ. ದೇಶದಲ್ಲಿ, ರಾಜ್ಯದಲ್ಲಿ…

Read More

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 100 ಪೊಲೀಸ್ ಠಾಣೆಗಳನ್ನು ನಿರ್ಮಿಸಲಾಗುತ್ತದೆ. ಅಲ್ಲದೇ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗಾಗಿ 10,000 ವಸತಿ ಗೃಹ ನಿರ್ಮಾಣ ಮಾಡಲಾಗುವುದು ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಜನರ ಪ್ರಾಣ, ಆಸ್ತಿ ರಕ್ಷಿಸುವ ಪೊಲೀಸ್ ಸಿಬ್ಬಂದಿಯ ಹಿತ ರಕ್ಷಿಸಲು ಸರ್ಕಾರ ಬದ್ದವಾಗಿದೆ. ಇದಕ್ಕಾಗಿ 2025 ರಲ್ಲಿ 10 ಸಾವಿರ ಪೊಲೀಸ್ ವಸತಿ ಮನೆಗಳ ನಿರ್ಮಾಣಕ್ಕೆ 2000 ಕೋಟಿ ನೀಡಿದ್ದೇವೆ. 200 ಕೋಟಿ ವೆಚ್ಚದಲ್ಲಿ 100 ಹೊಸ ಠಾಣೆಗಳ ನಿರ್ಮಾಣ ಆಗುತ್ತಿವೆ. ಪೊಲೀಸ್ ಮಕ್ಕಳಿಗಾಗಿ 7 ಪ್ರಮುಖ ಸ್ಥಳಗಳಲ್ಲಿ 7 ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುತ್ತದೆ ಎಂದು ಘೋಷಿಸಿದರು. ಕಳೆದ ಒಂದು ವರ್ಷದಲ್ಲಿ ದೇಶದಲ್ಲಿ 216 ಮಂದಿ, ರಾಜ್ಯದಲ್ಲಿ 12 ಮಂದಿ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳು ಕರ್ತವ್ಯದ ಮೇಲಿದ್ದಾಗಲೇ ಹುತಾತ್ಮರಾಗಿದ್ದಾರೆ. ಇವರ ಆತ್ಮಕ್ಕೆ ನಾನು ಶಾಂತಿ ಕೋರುತ್ತಲೇ ಕುಟುಂಬದವರ ದುಃಖದಲ್ಲಿ ಭಾಗಿ ಆಗುತ್ತೇನೆ. ದೇಶದಲ್ಲಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಾಗ, ಜನರ ಪ್ರಾಣ, ಮಾನ ಕಾಪಾಡುವ ಹೊತ್ತಲ್ಲಿ ಇವರೆಲ್ಲಾ ಹುತಾತ್ಮರಾಗಿದ್ದಾರೆ ಎಂದರು. ದೇಶದಲ್ಲಿ…

Read More

ಬೆಂಗಳೂರು : ಉಪ ಚುನಾವಣೆ ಹಿನ್ನೆಲೆ ಯಲ್ಲಿ ಬೆಂಗಳೂರಿಗೆ ಆಗಮಿಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆ ವಾಲಾ ಅವರನ್ನು ಭೇಟಿ ಮಾಡಿದ್ದ ಸಚಿವ ಜಮೀರ್ ಅಹಮದ್ ಖಾನ್, ಶಿಗ್ಗಾವ್ ಕ್ಷೇತ್ರಕ್ಕೆ ಮುಸ್ಲಿಂ ಅಭ್ಯರ್ಥಿ ಗೆ ಟಿಕೆಟ್ ನೀಡಲು ಒತ್ತಾಯಿಸಿದರು. ಕಳೆದ ವಿಧಾನ ಸಭೆ ಹಾಗೂ ಲೋಕಸಭೆ ಚುನಾವಣೆ ಯಲ್ಲಿ ಮುಸ್ಲಿಂ ಸಮುದಾಯ ಕಾಂಗ್ರೆಸ್ ಪರ ನಿಂತಿದ್ದು ಶಿಗ್ಗಾವ್ ಟಿಕೆಟ್ ಮುಸ್ಲಿಂ ಸಮುದಾಯಕ್ಕೆ ಬೇಕೇ ಬೇಕು ಎಂದು ಪಟ್ಟು ಹಿಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೂ ಈ ಬಗ್ಗೆ ಜಮೀರ್ ಅಹಮದ್ ಖಾನ್ ನೇತೃತ್ವದಲ್ಲಿ ಮುಸ್ಲಿಂ ಜನಪ್ರತಿನಿಧಿಗಳ ನಿಯೋಗ ಬೇಡಿಕೆ ಇಟ್ಟಿತ್ತು. https://kannadanewsnow.com/kannada/legal-action-will-be-taken-against-those-selling-banned-firecrackers-minister-ishwar-khandre/ https://kannadanewsnow.com/kannada/shocking-young-man-died-tragically-after-falling-from-the-3rd-floor-to-escape-from-the-dog-video-viral/

Read More

ಬೆಂಗಳೂರು: ನಿಷೇಧಿತ ಪಟಾಕಿ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಹಸಿರು ಪಟಾಕಿಯನ್ನೇ ಬಳಸಿ ಎಂಬುದಾಗಿ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ದೀಪದಿಂದ ದೀಪ ಹಚ್ಚಿ ದೀಪಾವಳಿ ಹಬ್ಬವನ್ನು ಆಚರಿಸಿ. ಹೆಚ್ಚು ಶಬ್ದ ಮಾಡುವ ಹಾಗೂ ಹೊಗೆ ಹೊರಹೊಮ್ಮುವ ರಾಸಾಯನಿಕ ಪಟಾಕಿಗಳನ್ನು ಸಿಡಿಸಬೇಡಿ. ಹಸಿರು ಪಟಾಕಿಗಳನ್ನು ಮಾತ್ರವೇ ಬಳಸಿ. ನಿಷೇಧಿತ ಪಟಾಕಿ ಮಾರಾಟ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪರಿಸರ ಸಚಿವರಾದ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ. https://twitter.com/KarnatakaVarthe/status/1848723798008471957 https://kannadanewsnow.com/kannada/13-swr-employees-honoured-with-safety-person-of-the-month-award/ https://kannadanewsnow.com/kannada/schools-anganwadi-centres-in-bengaluru-to-remain-closed-tomorrow-dc/

Read More

ಹುಬ್ಬಳ್ಳಿ: ನೈರುತ್ಯ ರೈಲ್ವೆಯ 13 ಸಿಬ್ಬಂದಿಗಳಿಗೆ ಜನರಲ್ ಮ್ಯಾನೇಜರ್ ಅವರು ತಿಂಗಳ ಸುರಕ್ಷತಾ ವ್ಯಕ್ತಿ ಪ್ರಶಸ್ತಿಯನ್ನು ನೀಡಿ, ಅವರ ಕರ್ತವ್ಯವನ್ನು ಶ್ಲಾಘಿಸಿ, ಗೌರವಿಸಿದರು. ಹುಬ್ಬಳ್ಳಿಯ ಗದಗ ರಸ್ತೆಯಲ್ಲಿರುವ ರೈಲ್ ಸೌಧ ಸಭಾಭವನದಲ್ಲಿ ನೈಋತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕರಾದ ಅರವಿಂದ್ ಶ್ರೀವಾಸ್ತವ ಅವರು ಮಂಗಳವಾರ ವಿವಿಧ ಇಲಾಖೆಗಳ ಪ್ರಧಾನ ಮುಖ್ಯಸ್ಥರೊಂದಿಗೆ ಸುರಕ್ಷತಾ ಸಭೆ ನಡೆಸಿದರು. ರೈಲ್ವೆ ಸುರಕ್ಷತೆಯನ್ನು ಖಾತ್ರಿಪಡಿಸುವ ಈ ನಿರ್ಣಾಯಕ ಚರ್ಚೆಯ ನಂತರ, ನೈಋತ್ಯ ರೈಲ್ವೆ ವ್ಯಾಪ್ತಿಯಲ್ಲಿ ಸಂಭವಿಸಬಹುದಾಗಿದ್ದ ಅನಾಹುತಗಳನ್ನು ತಪ್ಪಿಸಿದ, ಜಾಗರೂಕತೆ ವಹಿಸಿದ ಹಾಗೂ ಕರ್ತವ್ಯದಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡ, ಅನುಕರಣೀಯ ಸುರಕ್ಷತಾ ಪ್ರಜ್ಞೆ ತೋರಿದ ವಲಯದ ಹುಬ್ಬಳ್ಳಿ, ಮೈಸೂರು ಮತ್ತು ಬೆಂಗಳೂರು ವಿಭಾಗಳ ನೌಕರರಿಗೆ ಪ್ರಧಾನ ವ್ಯವಸ್ಥಾಪಕ ಅರವಿಂದ್ ಶ್ರೀವಾಸ್ತವ್ ಅವರು ಉದ್ಯೋಗಿಗಳಿಗೆ “ತಿಂಗಳ ಸುರಕ್ಷತಾ ವ್ಯಕ್ತಿ” ಪ್ರಶಸ್ತಿ ನೀಡಿ ಗೌರವಿಸಿದರು. ಅಪಾಯಕಾರಿ ಸಂದರ್ಭಗಳು ಗಂಭೀರ ಅಪಘಾತಗಳಾಗಿ ಬದಲಾಗುವ ಮೊದಲು ಅದನ್ನು ನಿಲ್ಲಿಸಲು ನೌಕರರು ತ್ವರಿತವಾಗಿ ಮತ್ತು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿದವರು, ಪ್ರಶಸ್ತಿ ಪುರಸ್ಕೃತರ ಪಟ್ಟಿ ಆಯಾ ವಿಭಾಗವಾರು ಈ…

Read More