Author: kannadanewsnow09

ಬೆಂಗಳೂರು : ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ ಘೋಷಿಸಲಾಗಿದ್ದು, ಕರ್ನಾಟಕದ ಕ್ರೀಡಾಪಟುಗಳು ಚಿನ್ನದ ಪದಕ ಗೆಲ್ಲುವರೆಂಬ ವಿಶ್ವಾಸವಿದೆ ಎಂದು ತಿಳಿಸಿದರು. ಅವರು ಇಂದು ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ಬೆಂಗಳೂರು ಇವರ ವತಿಯಿಂದ ಕರ್ನಾಟಕ ಒಲಂಪಿಕ್ 2025 ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ವತಿಯಿಂದ ನೀಡಲಾಗುತ್ತಿರುವ ಕರ್ನಾಟಕ ಒಲಂಪಿಕ್ 2025 ಪ್ರಶಸ್ತಿಗೆ ಭಾಜನರಾಗಿರುವ ಕ್ರೀಡಾ ಸಾಧಕರಿಗೆ ಅಭಿನಂದಿಸಿದ ಮುಖ್ಯಮಂತ್ರಿಗಳು, 1958 ರಲ್ಲಿ ಪ್ರಾರಂಭವಾದ ಒಲಂಪಿಕ್ಸ್ ಸಂಸ್ಥೆ ಇಲ್ಲಿಯವರೆಗೆ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಕೊಡುಗೆ ನೀಡುತ್ತಾ ಬಂದಿದೆ. ವಿಧಾನ ಪರಿಷತ್ ಸದಸ್ಯರಾದ ಗೋವಿಂದರಾಜ್ ಅವರು ಸಂಸ್ಥೆಯ ಅಧ್ಯಕ್ಷತೆ ವಹಿಸಿಕೊಂಡ ನಂತರ ಸಂಸ್ಥೆಯು ಹೆಚ್ಚು ಕ್ರಿಯಾಶೀಲವಾಗಿದೆ. ನನ್ನ ಅವಧಿಯಲ್ಲಿಯೇ ಕರ್ನಾಟಕ ಒಲಂಪಿಕ್ಸ್ ಸಂಸ್ಥೆಯ ಕಟ್ಟಡಕ್ಕೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನೂ ನಾನೇ ನೆರವೇರಿಸಿದ್ದೇನೆ. ಇಡೀ ದೇಶದಲ್ಲಿಯೇ ಆಂಧ್ರ ಮತ್ತು ಕೇರಳ ರಾಜ್ಯದಂತೆ ಕರ್ನಾಟಕದಲ್ಲಿಯೂ ಸಂಸ್ಥೆಯು ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಕರ್ನಾಟಕ ಒಲಂಪಿಕ್ಸ್ ಸಂಸ್ಥೆಯು ಎಲ್ಲಾ…

Read More

ಬೆಳಗಾವಿ: ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ ನಿರ್ವಹಣೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಭೂಮಿ ಜೀವದ ತೊಟ್ಟಿಲು, ಇಂತಹ ಜೀವದ ತೊಟ್ಟಿಲನ್ನು ಬಂಜೆ ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು. ಬೆಳಗಾವಿ ತಾಲೂಕಿನ ಹುದಲಿ ಗ್ರಾಮದಲ್ಲಿನ ಬೆಳಗಾಂ ಶುಗರ್ಸ ಹತ್ತಿರ ಖಾಸಗಿ ಜಮೀನಿನಲ್ಲಿ ಜಿಲ್ಲಾಡಳಿತ, ಜಿಲ್ಲಾ‌ಪಂಚಾಯತ್ ಬೆಳಗಾವಿ, ಕೃಷಿ ಇಲಾಖೆ ಹಾಗೂ ಸಕ್ಕರೆ ಕಾರ್ಖಾನೆಗಳ ಸಂಯುಕ್ತ ಆಶ್ರಯದಲ್ಲಿ ಶನಿವಾರ ಜರುಗಿದ ಬೆಳಗಾವಿ, ಬಾಗಲಕೋಟ, ವಿಜಯಪುರ, ಕಲಬುರಗಿ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ ನಿರ್ವಹಣೆ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು. ರೈತರು ರಸಗೊಬ್ಬರ ಬಳಕೆಯನ್ನು ಕಡಿಮೆ ಮಾಡಬೇಕಾಗಿದೆ‌. ರಸಗೊಬ್ಬರ ಬಳಕೆಯಿಂದ ಹೆಚ್ವಿನ ಇಳುವರಿ ಬರುತ್ತದೆ ಎಂಬ ತಪ್ಪು ಕಲ್ಪನೆಯಿಂದ ಹೊರಬರಬೇಕಾಗಿದೆ‌. ಭಾರತ ಕೃಷಿ ಪ್ರಧಾನ ರಾಷ್ಟ್ರವಾಗಿದ್ದು ಪ್ರತಿಶತ 90 ಕೃಷಿ ಮೇಲೆಯೇ ಅವಲಂಬಿತವಾಗಿದೆ. ರೈತರಿಗೆ ಬೇಕಾದ ಸಹಾಯ ಮಾಡುವುದು ಸರಕಾರಗಳ…

Read More

ಕಾಶಿಗೆ ಹೋದರೇ , ತರಕಾರಿ ಅಥವಾ ಹಣ್ಣನ್ನು ತ್ಯಾಗ ಮಾಡಬೇಕು ಎಂದು ಅನಾದಿ ಕಾಲದಿಂದಲೂ ಹೇಳುತ್ತಾ ಬಂದಿದ್ದಾರೆ. ಅದರ ನಿಜಾರ್ಥವು ಇಂತಿದೆ: ಕಾಶಿಗೆ ಹೋದಾಗ,ಕಾಯನ್ನೋ,ಫಲವನ್ನೋ ಬಿಡಬೇಕು ಎಂದು ನಮ್ಮ ಹಿರಿಯರು ಏಕೆ ಹೇಳುತ್ತಾರೆ? ಅದರ ಮರ್ಮವೇನು,ಅಂದರೆ,ರಹಸ್ಯವೇನು? ಹಾಗೆ,ಅಧ್ಯಯನ ಮಾಡಿದರೆ, ನಮ್ಮ ಶಾಸ್ತ್ರಗಳಲ್ಲಿ,ಅಂದರೆ,ವೇದ,ಉಪನಿಷತ್ತು,ಪುರಾಣ,ಸ್ಮೃತಿಗಳಲ್ಲಿ ಎಲ್ಲೂ ಈ ಸಂಗತಿ(ಅಂದರೆ,ಒಂದು ಕಾಯನ್ನು ಮತ್ತು ಒಂದು ಹಣ್ಣನ್ನು ಬಿಡಬೇಕು,ಎಂಬುದನ್ನು) ಹೇಳಿಲ್ಲವಲ್ಲ ಎಂಬುದನ್ನು ಕಂಡುಕೊಂಡೆವು ನಾವು. ಶಾಸ್ತ್ರವು ಹೇಳಿದ ವಿಷಯವನ್ನು,ಆಡುಭಾಷೆಯಲ್ಲಿ,ತಿರುಚಿ ಆದ ಪ್ರಮಾದ ನೋಡಿ ಹೀಗಿದೆ: ಕಾಶೀ ಕ್ಷೇತ್ರದ ವಿಷಯದಲ್ಲಿ ಶಾಸ್ತ್ರಗಳು ಹೇಳುತ್ತಿರುವುದು – ಕಾಶೀ ಕ್ಷೇತ್ರಕ್ಕೆ ಹೋಗಿ,ಗಂಗಾ ಸ್ನಾನ ಮಾಡಿ,ಅಲ್ಲಿ,ಅಂದರೆ,ಆ ಗಂಗೆಯಲ್ಲಿ,ಕಾಯಾಪೇಕ್ಷೆ ಮತ್ತು ಫಲಾಪೇಕ್ಷೆಯನ್ನು ತ್ಯಾಗ ಮಾಡಿ,ಅಂದರೆ,ತೊರೆದು,ನಂತರ,ಭಕ್ತಿಯಿಂದ ವಿಶ್ವನಾಥನ ದರುಶನ ಮಾಡಬೇಕು ಎಂದು. ಇಲ್ಲಿ ಕಾಯಾಪೇಕ್ಷೆ ಅಂತರ ತನ್ನ ಅಥವ ಇತರರ ದೇಹದ ಮೇಲಿನ ಅಪೇಕ್ಷೆ ಹಾಗು ಫಲಾಪೇಕ್ಷೆ ಅಂದರೆ,ಮಾಡಿದ ಕರ್ಮಂಗಳಿಂದ ಉಂಟಾಗುವ ಫಲಗಳ ಅಪೇಕ್ಷೆ ಬಿಡಬೇಕು ಎಂಬುದು ಶಾಸ್ತ್ರವಚನಾರ್ಥವು. ಇವೆರಡನ್ನೂ ಮಾಡಿದ ಕ್ಷಣವೇ,ಜೀವನ್ಮುಕ್ತಿಯು ದೊರೆಯುವುದು ನಿಶ್ಚಿತವಾಗುವುದು,ಆಗ ಕಾಶಿಯ ವಿಶ್ವನಾಥನ ದರುಶನದಿಂದ, ನಿಜಫಲವು (ಅಂದರೆ,ಮುಕ್ತಿಯೇ) ಸಿಗುವುದು ಎಂದರ್ಥವು.…

Read More

ರವಿ ದೇವರನ್ನು ಗ್ರಹಗಳ ರಾಜ ಎಂದು ಕರೆಯಲಾಗುತ್ತದೆ. ವಾಸ್ತವವಾಗಿ, ಸೂರ್ಯ ದೇವರನ್ನು ಬೆಂಕಿಯ ಸಾಕಾರವೆಂದು ಪರಿಗಣಿಸಲಾಗುತ್ತದೆ. ಆದ್ದರಿಂದ, ವಾಸ್ತು ಶಾಸ್ತ್ರದಲ್ಲಿ ಸೂರ್ಯ ದೇವರಿಗೆ ವಿಶೇಷ ಪ್ರಾಮುಖ್ಯತೆ ಇದೆ. ಅದರ ಹೊರತಾಗಿ, ಸೂರ್ಯನ ಕಿರಣಗಳು ಆರೋಗ್ಯಕ್ಕೆ ಒಳ್ಳೆಯದು ಎಂದು ಪರಿಗಣಿಸಲಾಗುತ್ತದೆ. ಆದ್ದರಿಂದ, ವಾಸ್ತು ಶಾಸ್ತ್ರದ ಪ್ರಕಾರ, ಮನೆ ಅಥವಾ ಕಚೇರಿಯಲ್ಲಿ ತಾಮ್ರದ ಸೂರ್ಯ ಫಲಕ ಇಡುವುದರಿಂದ ಖ್ಯಾತಿ ಮತ್ತು ಪ್ರತಿಷ್ಠೆ ಹೆಚ್ಚಾಗುತ್ತದೆ ಎಂದು ನಂಬಲಾಗಿದೆ. ಈ ತಾಮ್ರದ ಸೂರ್ಯನಿಗೆ ಬಲವಾದ ಗುರುತ್ವಾಕರ್ಷಣ ಶಕ್ತಿಯೂ ಇದೆ ಎಂಬ ನಂಬಿಕೆಯಿದೆ. ಆದಾಗ್ಯೂ ವಾಸ್ತು ತಜ್ಞರು ಈ ಸೂರ್ಯ ಫಲಕವನ್ನು ಪೂರ್ವ ದಿಕ್ಕಿನಲ್ಲಿ ನೇತು ಹಾಕಬೇಕೆಂದು ಹೇಳುತ್ತಾರೆ. ಏಕೆಂದರೆ ಸೂರ್ಯ ಪ್ರತಿದಿನ ಪೂರ್ವ ದಿಕ್ಕಿನಲ್ಲಿ ಉದಯಿಸುತ್ತಾನೆ. ಇದಲ್ಲದೆ, ಪ್ರತಿದಿನ ಸೂರ್ಯ ದೇವರನ್ನು ಪ್ರಾರ್ಥಿಸುವುದರಿಂದ ಉತ್ತಮ ಆರೋಗ್ಯ, ಮಾನಸಿಕ ಆರೋಗ್ಯ ಮತ್ತು ವೃತ್ತಿ ಮತ್ತು ವ್ಯವಹಾರದಲ್ಲಿ ಯಶಸ್ಸು ಸಿಗುತ್ತದೆ ಎಂದು ನಂಬಲಾಗಿದೆ. ಸೂರ್ಯನ ಕಿರಣಗಳನ್ನು ನೇರವಾಗಿ ಪಡೆಯಲು ಸಾಧ್ಯವಾಗದವರು ಈ ತಾಮ್ರದ ಸೂರ್ಯನ ಮೂಲಕ ಆ ಶಕ್ತಿಯನ್ನು ಪಡೆಯಬಹುದು…

Read More

ಮಡಿಕೇರಿ: ಮಾಹಿತಿ ಹಕ್ಕು ಅರ್ಜಿಗಳನ್ನು ಸಲ್ಲಿಸಿದಂತ 30 ದಿನಗಳ ಒಳಗಾಗಿ ಮಾಹಿತಿಯನ್ನು ಒದಗಿಸುವಂತೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ರಾಜ್ಯ ಮಾಹಿತಿ ಆಯುಕ್ತರಾದಂತ ಬದ್ರುದ್ದೀನ್.ಕೆ ಖಡಕ್ ಸೂಚನೆ ನೀಡಿದ್ದಾರೆ. ಶನಿವಾರದಂದು ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಮಾಹಿತಿ ಹಕ್ಕು ಕಾಯ್ದೆ ಕುರಿತು ಜಾಗೃತಿ ಕಾರ್ಯಾಗಾರ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಸುಮಾರು ಎರಡುವರೆ ಗಂಟೆಗಳ ಕಾಲ ಮಾಹಿತಿ ಆಯುಕ್ತರು ಅಧಿಕಾರಿಗಳಿಗೆ ತರಬೇತಿ ನೀಡಿದರು. ಮಾಹಿತಿ ಆಯುಕ್ತರಾದ ಬದ್ರುದ್ದೀನ್ ಕೆ ಅವರು ಮಾತನಾಡಿ ಮಾಹಿತಿ ಹಕ್ಕು ಕಾಯ್ದೆಯು ಸರಳವಾಗಿದ್ದರೂ ಸಹ ಗಂಭೀರವಾಗಿದೆ. ಅದನ್ನು ಅರ್ಥಮಾಡಿಕೊಂಡು ಕಚೇರಿಗೆ ಸಲ್ಲಿಕೆಯಾದ ಅರ್ಜಿಗೆ ನಿಯಮಾನುಸಾರ 30 ದಿನದೊಳಗೆ ಮಾಹಿತಿ ಒದಗಿಸಬೇಕು ಎಂದು ಸಲಹೆ ಮಾಡಿದರು. ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರಿ ನೌಕರರು ಉತ್ತರದಾಯಿತ್ವ ಹೊಂದಿರಬೇಕು. ಜೊತೆಗೆ ಪಾರದರ್ಶಕತೆ ಇದ್ದಲ್ಲಿ ವಿಚಲಿರಾಗುವ ಅಗತ್ಯವಿಲ್ಲ. ಆ ದಿಸೆಯಲ್ಲಿ ಪ್ರಾಮಾಣಿಕತೆ ಇರಬೇಕು ಎಂದು ಬದ್ರುದ್ದೀನ್ ಅವರು ಒತ್ತಿ ಹೇಳಿದರು.’ಎಲ್ಲರೂ ಸಹ ಮನುಷ್ಯರೇ ಆಗಿದ್ದು, ತಪ್ಪುಗಳು ಆಗುತ್ತವೆ. ಅದನ್ನು ತಿದ್ದಿ ನಡೆಯುವುದು ಅತ್ಯಗತ್ಯ. ಅದನ್ನು…

Read More

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA)ವು ಡಿಸೆಂಬರ್ 21 ರಿಂದ ಡಿಸೆಂಬರ್ 24, 2025ರ ವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ – 2025ನ್ನು ಆರಂಭಿಸುತ್ತಿದೆ. ಆರೋಗ್ಯವೇ ಭಾಗ್ಯ; ಆರೋಗ್ಯವಂತ ಮಕ್ಕಳು ರಾಷ್ಟ್ರದ ಆಸ್ತಿಯಾಗಿದೆ. ಪೋಲಿಯೋ ರೋಗವು ಸಾಮಾನ್ಯವಾಗಿ ಐದು ವರ್ಷದೊಳಗಿನ ಮಕ್ಕಳನ್ನು ಹೆಚ್ಚಾಗಿ ಪರಿಣಾಮಗೊಳಿಸುತ್ತದೆ. ಭಾರತದಲ್ಲಿ 2011 ರಿಂದ ಯಾವುದೇ ಪೋಲಿಯೋ ಪ್ರಕರಣಗಳು ವರದಿಯಾಗಿಲ್ಲ. 2014ರಲ್ಲಿ ವಿಶ್ವ ಆರೋಗ್ಯ ಸಂಸ್ಥೆ (WHO) ಭಾರತವನ್ನು ಪೋಲಿಯೋ ಮುಕ್ತ ರಾಷ್ಟ್ರವೆಂದು ಘೋಷಿಸಿದೆ. ಆದರೆ ಪಕ್ಕದ ದೇಶಗಳಾದ ಪಾಕಿಸ್ತಾನ ಮತ್ತು ಅಫಘಾನಿಸ್ತಾನಗಳಲ್ಲಿ ಇನ್ನೂ ಪೋಲಿಯೋ ಪ್ರಕರಣಗಳು ಕಂಡುಬರುತ್ತಿರುವುದರಿಂದ, ನಮ್ಮ ಮಕ್ಕಳನ್ನು ಪಲ್ಸ್ ಪೋಲಿಯೋ ಲಸಿಕೆ ಹನಿಗಳ ಮೂಲಕ ರಕ್ಷಿಸುವುದು ನಮ್ಮ ಪ್ರಮುಖ ಜವಾಬ್ದಾರಿಯಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಸಾರ್ವಜನಿಕ ಆರೋಗ್ಯ ಇಲಾಖೆಯ ಮೂಲಕ, ಎಲ್ಲಾ ವಾರ್ಡ್‌ಗಳಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ – 2025ನ್ನು ಯಶಸ್ವಿಯಾಗಿ ನಡೆಸಲು ಅಗತ್ಯವಾದ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ನವೀನ ಚಿಂತನೆಯ ಭಾಗವಾಗಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಸಮೀಪದ ಪಲ್ಸ್…

Read More

ಬೆಳಗಾವಿ ಸುವರ್ಣ ವಿಧಾನಸೌಧ: ಡಿಸೆಂಬರ್.21ರ ಇಂದು ಪಲ್ಸ್ ಪೋಲಿಯೋ ದಿನವನ್ನಾಗಿ ಆಚರಿಸಲಾಗುತ್ತಿದೆ. ಇಂದು ತಪ್ಪದೇ ಪಲ್ಸ್ ಪೊಲಿಯೋ ಹನಿಯನ್ನು ಐದು ವರ್ಷದ ಒಳಗಿನ ಮಕ್ಕಳಿಗೆ ಹಾಕಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದ್ದಾರೆ. ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಡಿಸೆಂಬರ್ 21ರ ಇಂದು ಪೋಲಿಯೋ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಂದು ಅಂದಾಜು 62 ಲಕ್ಷ ಮಕ್ಕಳಿಗೆ ಪೋಲಿಯೋ ಹನಿ ಹಾಕಲಾಗುವುದು. ರಾಜ್ಯದ ಎಲ್ಲ ಆಸ್ಪತ್ರೆ, ಅಂಗನವಾಡಿ, ಗುಡ್ಡಗಾಡು ಪ್ರದೇಶ, ಇಟ್ಟಿಗೆ ಭಟ್ಟಿ, ಕೊಳಚೆ ಪ್ರದೇಶ, ರೈಲ್ವೆ ಸ್ಟೇಷನ್ ಮುಂತಾದ ಕಡೆಗಳಲ್ಲಿ ಆದ್ಯತೆ ಮೆರೆಗೆ ಲಸಿಕೆ ಹಾಕಲಾಗುವುದು ಎಂದರು. ಎಲ್ಲ ಸರಕಾರಿ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಕಾರ್ಯಕ್ರಮ ನಡೆಸಲಾಗುವುದು. 0-5 ವರ್ಷದ ಮಕ್ಕಳಿಗೆ ಕಡ್ಡಾಯ ಲಸಿಕೆ ಹಾಕಿಸಲೇ ಬೇಕು. ಮೊದಲು ಹಾಕಿಸಿದ್ದರೂ ಈ ಬಾರಿಯೂ ಎರಡು ಹನಿ ಲಸಿಕೆ ಹಾಕಿಸಲೇಬೇಕು. ಪೋಲಿಯೋ ಮುಕ್ತ ದೇಶವಾಗಿರುವ ಭಾರತ ಇದನ್ನು ಮುಂದುವರೆಸಲು ಸಾರ್ವಜನಿಕರ ಸಹಕಾರ ಅಗತ್ಯ. ಡಿಸೆಂಬರ್ 21 ರಂದು ಬೂತ್ಗಳಲ್ಲಿ ನಂತರ 2-3…

Read More

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶ ಸಂಬಂಧ ಎರಡನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಡಿ.23ರ ಬದಲಿಗೆ ಡಿ.22ರಂದೇ ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಕೆಲ ಅಭ್ಯರ್ಥಿಗಳಿಗೆ ಅಖಿಲ ಭಾರತ ಮಟ್ಟದ, ಎಂಸಿಸಿ ಎರಡನೇ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿದ್ದು, ಅಂತಹವರು ಒಂದು ವೇಳೆ ಅಲ್ಲಿಯೇ ಹೋಗಿ ಪ್ರವೇಶ ಪಡೆಯುವುದಿದ್ದರೆ ಅವರಿಗೆ ಅನುಕೂಲ ಆಗಲಿ ಎಂದು ಈ ತೀರ್ಮಾನ ಮಾಡಲಾಗಿದೆ. ಅಂದು ಸಂಜೆ 6 ಗಂಟೆ ನಂತರ ತಾತ್ಕಾಲಿಕ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಎಂಸಿಸಿ ಸೀಟಿಗೇ ಪ್ರವೇಶ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು ತಮ್ಮ ಮೂಲ ದಾಖಲೆಗಳನ್ನು ಡಿ.23ರಂದು ಸಂಜೆ 4 ಗಂಟೆಯೊಳಗೆ ಕೆಇಎ ಕಚೇರಿಗೆ ಬಂದು ಪಡೆಯಬಹುದು. ಈ ಸುತ್ತಿನಲ್ಲಿ ಭಾಗವಹಿಸಲು ಕಟ್ಟಿರುವ ಶುಲ್ಕದಲ್ಲಿ 25 ಸಾವಿರ ರೂಪಾಯಿ ಕಡಿತ ಮಾಡಿಕೊಂಡು ಉಳಿದ ಹಣವನ್ನು ಒಂದೇ ದಿನದಲ್ಲಿ ಹಿಂದಿರುಗಿಸಲಾಗುತ್ತದೆ ಎಂದು ಅವರು ವಿವರಿಸಿದರು. ಎಂಸಿಸಿ ಸೀಟಿಗೆ ಪ್ರವೇಶ ಪಡೆಯುವ ಕಾರಣದಿಂದ…

Read More

ಬೆಂಗಳೂರು: 2025-26ನೇ ಸಾಲಿಗೆ ಶುಚಿ ಕಾರ್ಯಕ್ರಮದ ಅಡಿಯಲ್ಲಿ ಸ್ಯಾನಿಟರಿ ನ್ಯಾಪ್ಕಿನ್ ಪ್ಯಾಡ್ ಗಳನ್ನು ಜಿಲ್ಲಾ ಹಂತದಲ್ಲಿಯೇ ಖರೀದಿಸಲು ಮತ್ತು ವಿತರಣೆ ಮಾಡಲು ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 2025-26 ನೇ ಸಾಲಿನಲ್ಲಿ ಶುಚಿ ಕಾರ್ಯಕ್ರಮದಡಿಯಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಸರ್ಕಾರಿ, ಸರ್ಕಾರಿ ಅನುದಾನಿತ ಶಾಲೆಗಳು, ಕಾಲೇಜುಗಳು ಮತ್ತು ಸರ್ಕಾರಿ ಹಾಸ್ಟೆಲ್‌ಗಳಲ್ಲಿ ನೋಂದಾಯಿಸಲಾದ ಎಲ್ಲಾ ಹದಿಹರೆಯದ ಹೆಣ್ಣು ಮಕ್ಕಳಿಗೆ ವಿತರಿಸಲು 2,35,74,084 ಯೂನಿಟ್ ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು (ಒಂದು ಯೂನಿಟ್ = 10 ಪ್ಯಾಡ್‌ಗಳು) ಪ್ರತಿ ಯುನಿಟ್‌ಗೆ ಅಂದಾಜು ರೂ.30.47/- ರಂತೆ ಒಟ್ಟು ರೂ.71.83 (ಎಪ್ಪತ್ತೊಂದು ಕೋಟಿ ಎಂಭತ್ತ ಮೂರು ಲಕ್ಷ ರೂಪಾಯಿಗಳು ಮಾತ್ರ) ಕೋಟಿ ಮೊತ್ತದಲ್ಲಿ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತದ (ಕೆಎಸ್‌ಎಂಎಸ್‌ಸಿಎಲ್‌) ಮೂಲಕ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳ ಪಾರದರ್ಶಕತೆ ಅಧಿನಿಯಮ ಹಾಗೂ ನಿಯಮಾವಳಿಗಳನ್ವಯ ಖರೀದಿಸಿ ವಿತರಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿರುತ್ತದೆ…

Read More

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಮೊಬೈಲ್ ಆಧಾರಿತ ಹಾಜರಾತಿ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಲಾಗಿದ್ದು, ಪ್ರತಿ ದಿನ ಶಾಲಾ ಶಿಕ್ಷಕರು, ಸಿಬ್ಬಂದಿಗಳು ತಪ್ಪದೇ ಹಾಜರಾತಿಯನ್ನು ನಮೂದಿಸುವಂತೆ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಆಯಾ ವಿಭಾಗದ ಉಪ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಈಗಾಗಲೇ ಜಿಲ್ಲೆಯ ಎಲ್ಲಾ ಶಾಲೆಗಳ ಅಕ್ಷಾಂಶ ಹಾಗೂ ರೇಖಾಂಶಗಳು ನಮೂದಾಗಿರುವುದರಿಂದ ಜಿಲ್ಲೆಯ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಮೊಬೈಲ್ ಆಧಾರಿತ ಹಾಜರಾತಿ ವ್ಯವಸ್ಥೆಯನ್ನು (KAAMS) ಅನುಷ್ಠಾನಗೊಳಿಸುವಂತೆ ತಿಳಿಸಲಾಗಿರುತ್ತದೆ ಎಂದಿದ್ದಾರೆ. ಈ ಹಿನ್ನೆಲೆಯಲ್ಲಿ ನಿಮ್ಮ ತಾಲ್ಲೂಕಿನ ಎಲ್ಲಾ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು ಹಾಗೂ ಸಹಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಕಡ್ಡಾಯವಾಗಿ ಮೊಬೈಲ್ ಆಧಾರಿತ ಹಾಜರಾತಿ ತಂತ್ರಾಂಶವನ್ನು ಮೊಬೈಲ್‌ನಲ್ಲಿ ಡೌನ್‌ಲೋಡ್ ಮಾಡಿಕೊಂಡು, ಸದರಿ ತಂತ್ರಾಂಶದಲ್ಲಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರತಿ ಸರ್ಕಾರಿ ನೌಕರರು ತಮ್ಮ ಹೆಸರನ್ನು ನೋಂದಾಯಿಸಿಕೊಂಡು ಪ್ರತಿದಿನದ ಹಾಜರಾತಿಯನ್ನು ಸದರಿ ತಂತ್ರಾಂಶದಲ್ಲಿಯೇ ಲಾಗಿನ್ ಹಾಗೂ ಲಾಗ್‌ ಔಟ್ ಆಗುವುದರ ಮೂಲಕ ಹಾಜರಾತಿಯನ್ನು ದಿನಾಂಕ…

Read More