Author: kannadanewsnow09

ಹುಬ್ಬಳ್ಳಿ: ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂಬುದಾಗಿ ಸಿ.ಪಿ ಯೋಗೇಶ್ವರ್ ಅವರು ಘೋಷಣೆ ಮಾಡಿದ್ದಾರೆ. ಇಂದು ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ನಿವಾಸಕ್ಕೆ ಭೇಟಿ ನೀಡಿದಂತ ಅವರು, ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ಈ ಮೂಲಕ ಬಿಜೆಪಿಯಿಂದ ವಿಧಾನಪರಿಷತ್ತಿಗೆ ನಾಮನಿರ್ದೇಶನಗೊಂಡಿದ್ದಂತ ಸಿ.ಪಿ ಯೋಗೇಶ್ವರ್ ಅವರು, ತಮ್ಮ ಎಂಎಲ್ಸಿ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದರು. ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ವಿಧಾನ ಪರಿಷತ್ ಸದಸ್ಯ ಸ್ಥಆನಕ್ಕೆ ರಾಜೀನಾಮೆ ನೀಡಿದ್ದೇನೆ. ಈಗ ನಾನು ಚನ್ನಪಟ್ಟಣ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ ಎಂಬುದಾಗಿ ತಿಳಿಸಿದರು. https://kannadanewsnow.com/kannada/rajyotsava-award-for-the-year-2024-will-be-conferred-on-this-famous-dollu-artiste/ https://kannadanewsnow.com/kannada/cp-yogeshwar-meets-speaker-horatti-and-formally-resigns-from-mlc-post/

Read More

ಹುಬ್ಬಳ್ಳಿ: ಚನ್ನಪಟ್ಟಣ ಉಪ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ನಿರೀಕ್ಷೆ ಮಾಡಿದ್ದರು. ಆದರೇ ಅವರಿಗೆ ಬಿಜೆಪಿ ನೀಡುವುದಿಲ್ಲ. ಜೆಡಿಎಸ್ ಅಭ್ಯರ್ಥಿಗಳೇ ಆ ಕ್ಷೇತ್ರದಲ್ಲಿ ನಿಲ್ಲುವುದು ಖಚಿತವಾಗಿತ್ತು. ಈ ಸುಳಿವು ಅರಿತಂತ ಸಿಪಿ ಯೋಗೇಶ್ವರ್ ಅವರು, ಇಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ಎಂಎಲ್ಸಿ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಇಂದು ಹುಬ್ಬಳ್ಳಿಯ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ನಿವಾಸಕ್ಕೆ ಭೇಟಿ ನೀಡಿದಂತ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ ಅವರು, ತಮ್ಮ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ಈ ಮೂಲಕ ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯರಾಗಿದ್ದಂತ ಅವರು, ತಮ್ಮ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆಯನ್ನು ಅಧಿಕೃತವಾಗಿ ನೀಡಿದ್ದಾರೆ. https://kannadanewsnow.com/kannada/rajyotsava-award-for-the-year-2024-will-be-conferred-on-this-famous-dollu-artiste/ https://kannadanewsnow.com/kannada/breaking-upsc-engineering-exam-2025-mains-exam-postponed-upsc-exam/

Read More

ಬೆಂಗಳೂರು: ರಾಜ್ಯದಲ್ಲಿ ಪ್ರವಾಹದಿಂದ ಅಪಾರ ಹಾನಿ ಉಂಟಾಗಿದ್ದು, ರಾಜ್ಯ ಸರ್ಕಾರ ಕೂಡಲೇ ಸಭೆ ಕರೆದು 5,000 ಕೋಟಿ ರೂ. ಬಿಡುಗಡೆ ಮಾಡಲಿ. ಜೊತೆಗೆ ಬೆಂಗಳೂರಿನಲ್ಲಿ ಪರಿಹಾರ ಕಾರ್ಯಾಚರಣೆಗೆ 1,000 ಕೋಟಿ ರೂ. ಬಿಡುಗಡೆ ಮಾಡಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಸಿಲ್ಕ್‌ ಬೋರ್ಡ್‌ ವೃತ್ತದ ಬಳಿ ಮಳೆ ಹಾನಿ ಪರಿಶೀಲನೆ ನಡೆಸಿದ ಅವರು, ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯ ಸರ್ಕಾರದಲ್ಲಿ ಹಣದ ಕೊರತೆ ಇದೆ. ಮಲೆನಾಡಿನಲ್ಲಿ ಕಾಫಿ ಉದುರುತ್ತಿದೆ, ಭತ್ತದ ಬೆಳೆ ನೀರಿನಲ್ಲಿ ಮುಳುಗಿದೆ, ಈರುಳ್ಳಿ ಕೊಳೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕುಂಭಕರ್ಣನಂತೆ ನಿದ್ದೆ ಮಾಡುವುದನ್ನು ಬಿಟ್ಟು ಎಲ್ಲ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಯಾವ ರೀತಿ ಅನಾಹುತವಾಗಿದೆ ಎಂದು ಪರಿಶೀಲಿಸಬೇಕು. ಕಳೆದೊಂದು ತಿಂಗಳಿಂದ ಪ್ರವಾಹ ಸಂಬಂಧದ ಸಭೆಯೇ ನಡೆದಿಲ್ಲ. ಸರ್ಕಾರ ಕೂಡಲೇ ಸಭೆ ಕರೆದು ಕನಿಷ್ಠ 5,000 ಕೋಟಿ ರೂ. ಬಿಡುಗಡೆ ಮಾಡಬೇಕು. ಬೆಂಗಳೂರಿಗೆ ವಿಶೇಷವಾಗಿ 1,000 ಕೋಟಿ ರೂ. ಬಿಡುಗಡೆ ಮಾಡಲಿ ಎಂದು ಆಗ್ರಹಿಸಿದರು. 16 ತಿಂಗಳ ಕಾಂಗ್ರೆಸ್‌ ಸರ್ಕಾರದ…

Read More

ಶಿವಮೊಗ್ಗ: ರಾಜ್ಯ, ಹೊರ ರಾಜ್ಯ, ದೇಶ-ವಿದೇಶಗಳಲ್ಲಿ ಡೊಳ್ಳು ಕುಳಿತದ ಮೂಲಕ ಕರುನಾಡಿನ ವಿಶಿಷ್ಠ ಕಲೆಯನ್ನು ಪ್ರದರ್ಶಿಸಿದಂತ ಕಲಾವಿದನಿಗೆ, ನಾಲ್ಕೈದು ಬಾರಿ ಅರ್ಜಿ ಸಲ್ಲಿಸಿದರು ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡದೇ ಇರುವುದು ವಿಪರ್ಯಾಸವೇ ಸರಿ. ರಾಜ್ಯೋತ್ಸವ ಪ್ರಶಸ್ತಿಗೂ ರೆಕಮೆಂಡೇಷನ್, ರಾಜಕೀಯ ನಾಯಕರ ಪ್ರಭಾವ ಬಳಸಿ ಈ ಕಲಾವಿದ ಪಡೆಯ ಬೇಕೋ ಅಥವಾ ಕುರುನಾಡಿನ ಕೀರ್ತಿ ದೇಶ-ವಿದೇಶಗಳಲ್ಲಿ ಸಾರಿದಂತ ನಿಜ ಕಲಾವಿದನ ಕಲಾ ಸೇವೆ ಗುರ್ತಿಸಿ ಈ ಬಾರಿ 2024ನೇ ಸಾಲಿನಲ್ಲಿ ರಾಜ್ಯೋತ್ಸವ ಪ್ರಶಸ್ತಿ ನೀಡುತ್ತಾರೆ ಸಚಿವ ಶಿವರಾಜ ತಂಡರಿಗೆ ಎಂಬ ನಿರೀಕ್ಷೆಯಲ್ಲಿ ಡೊಳ್ಳು ಕಲಾವಿದ ಜಿ.ಸಿ ಮಂಜಪ್ಪ ಇದ್ದಾರೆ. ಹಾಗಾದ್ರೇ ಅವರ ಸಾಧನೆಯ ಏನು.? ರಾಜ್ಯೋತ್ಸವ ಪ್ರಶಸ್ತಿ ನೀಡುವ ಮಟ್ಟದ ಕಲಾಸಿರಿವಂತಿಕೆ ಮೆರೆದು, ಜನಜನಿತರೇ ಎನ್ನುವ ಬಗ್ಗೆ ಅವರ ಸಾಧನೆ ಮುಂದಿದೆ ಓದಿ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಕಣ್ಣೂರು ಗ್ರಾಮದ ಜಿ.ಸಿ ಮಂಜಪ್ಪ ಅವರು ಅಂತರಾಷ್ಟ್ರೀಯ ಡೊಳ್ಳಿನ ತಂಡದ ಮುಖ್ಯ ಕಲಾವಿದ ಎಂಬುದಾಗಿಯೇ ಪ್ರಸಿದ್ಧಿ. 2019ನೇ ಸಾಲಿನ ಜಾನಪದ ಆಕಾಡೆಮಿ ವಾರ್ಷಿಕ ಪ್ರಶಸ್ತಿ,…

Read More

ಶ್ರೀನಗರ: ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಸೋಮವಾರ ಗಂಡರ್ಬಾಲ್ ವಿಧಾನಸಭಾ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಬುಡ್ಗಾಮ್ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ವಿಧಾನಸಭೆಯಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಸ್ಪೀಕರ್ ಹಂಗಾಮಿ ಮುಬಾರಕ್ ಗುಲ್ ಈ ಘೋಷಣೆ ಮಾಡಿದ್ದಾರೆ. ವಿಶೇಷವೆಂದರೆ, ಇತ್ತೀಚೆಗೆ ನಡೆದ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಭಾರಿ ಗೆಲುವು ಸಾಧಿಸಿದ ನಂತರ ಅಬ್ದುಲ್ಲಾ ಬುಡ್ಗಾಮ್ನಿಂದ ಕೆಳಗಿಳಿಯುವ ನಿರ್ಧಾರ ಕೈಗೊಂಡಿದ್ದಾರೆ. ಶ್ರೀನಗರದ ಶೇರ್-ಇ-ಕಾಶ್ಮೀರ್ ಇಂಟರ್ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್ (ಎಸ್ಕೆಐಸಿಸಿ) ನಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ನ್ಯಾಷನಲ್ ಕಾನ್ಫರೆನ್ಸ್ ನಾಯಕನಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಜಮ್ಮುವಿನ ನೌಶೇರಾ ಶಾಸಕ ಸುರಿಂದರ್ ಕುಮಾರ್ ಅವರು ಇತರ ಸಚಿವರೊಂದಿಗೆ ಜಮ್ಮು ಮತ್ತು ಕಾಶ್ಮೀರದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣವಚನ ಸ್ವೀಕರಿಸಿದ ನಂತರ, ಒಮರ್ ಅಬ್ದುಲ್ಲಾ ಶ್ರೀನಗರದ ಸಿವಿಲ್ ಸೆಕ್ರೆಟರಿಯೇಟ್ನಲ್ಲಿ ಗೌರವ ರಕ್ಷೆ ಸ್ವೀಕರಿಸಿದರು ಮತ್ತು ವಿವಿಧ ಇಲಾಖೆಗಳ…

Read More

ನವದೆಹಲಿ: ಹಬ್ಬದ ಋತುವಿನಲ್ಲಿ ಭಾರತವು ಸದ್ದು ಮಾಡುತ್ತಿದ್ದಂತೆ, ಆನ್ಲೈನ್ ಶಾಪಿಂಗ್ ಪ್ಲಾಟ್ಫಾರ್ಮ್ಗಳು ಬ್ಯಾಕ್-ಟು-ಬ್ಯಾಕ್ ಮಾರಾಟವನ್ನು ಆಯೋಜಿಸುತ್ತಿವೆ. ಬಳಕೆದಾರರಿಗೆ ಹಲವಾರು ಉತ್ಪನ್ನಗಳ ಮೇಲೆ ಭಾರಿ ರಿಯಾಯಿತಿಗಳನ್ನು ನೀಡುತ್ತಿವೆ. ಉತ್ತಮ ಡೀಲ್ ಗಳನ್ನು ಪಡೆಯಲು ಶಾಪರ್ ಗಳು ಇ-ಕಾಮರ್ಸ್ ಸೈಟ್ ಗಳಿಗೆ ಧಾವಿಸುತ್ತಿದ್ದಾರೆ. ಇದನ್ನೇ ಬಂಡವಾಳವಾಗಿ ಮಾಡಿಕೊಂಡ ವಂಚಕರು, ಆನ್ ಲೈನ್ ವಂಚನೆಯಲ್ಲಿ ಗ್ರಾಹಕರನ್ನು ವಂಚಿಸೋದಕ್ಕೆ ಹಲವು ದಾರಿಯನ್ನು ಕಂಡುಕೊಂಡಿದ್ದಾರೆ. ಹೀಗಾಗಿ ನೀವು ಆನ್ ಲೈನ್ ನಲ್ಲಿ ವಸ್ತುಗಳನ್ನು ಖರೀದಿಸುತ್ತಿದ್ದರೇ, ಅದಕ್ಕೂ ಮುನ್ನ ಈ ಕೆಳಕಂಡ ಕೆಲ ಎಚ್ಚರಿಕೆಯನ್ನು ವಹಿಸೋದು ಮರೆಯಬೇಡಿ. ನಿಮ್ಮ ನೆಚ್ಚಿನ ಉತ್ಪನ್ನಗಳನ್ನು ಕಡಿಮೆ ಬೆಲೆಗೆ ಬೇರೆಡೆ ಸಿಗುತ್ತವೇ ಅಂದ್ರೆ ಯಾರು ತಾನೆ ಆಸೆ ಪಡೋದಿಲ್ಲ ಹೇಳಿ.? ಸೋ ಹಾಗಂತ ನೀವು ಈ ಹಬ್ಬದ ಹೊತ್ತಲ್ಲೇ ಅಧಿಕೃತ ವೆಬ್ ಸೈಟ್ ಹೊರತಾಗಿ, ಬೇರೆ ಆಮಿಷಗಳನ್ನು ಒಳಗೊಂಡ ವೆಬ್ ಸೈಟ್ ಗೆ ಭೇಟಿ ನೀಡಿ ಖರೀದಿಸಿದ್ದೇ ಆದ್ರೇ, ನೀವು ವಂಚನೆ ಒಳಗಾಗೋದು ಗ್ಯಾರಂಟಿ. ಮೋಸದ ಮೂಲಕ ನಿಮ್ಮ ಖಾತೆಯ ಹಣ ಸೈಬರ್ ವಂಚಕರ…

Read More

ಚಿತ್ರದುರ್ಗ: ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸವಿದ್ದು, ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಚಳ್ಳಕೆರೆ ನಗರದಲ್ಲಿ ಮಾಧ್ಯಮದವರೊಂದಿಗ ಮಾತನಾಡಿದ ಅವರು, ಬಿಜೆಪಿ ಶಾಸಕ ಯತ್ನಾಳ್ ಅವರು ಅಹಿಂದ ವರ್ಗದ ಹಣವನ್ನು ಕಾಂಗ್ರೆಸ್ ಲೂಟಿ ಮಾಡಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, 1000 ಕೋಟಿ ಬಳಸಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲಿದೆ ಎಂದು ಯತ್ನಾಳ್ ಅವರು ಹೇಳಿದ್ದರು. ಅವರು ಹೇಳುವ ಸಾವಿರ ಕೋಟಿ ಯಾರ ಹಣ, ಇದು ಕಪ್ಪು ಹಣ ಇರಬಹುದಲ್ಲವೇ. ಬಿಜೆಪಿಯವರು ಲಂಚದಿಂದ ಬರುವ ಈ ಕಪ್ಪು ಹಣ ಬಳಸಿ ಸರ್ಕಾರ ಉರುಳಿಸುತ್ತೇವೆ ಎಂದಿದ್ದಾರೆ ಎಂದು ತಿಳಿಸಿದರು. ಚನ್ನಪಟ್ಟಣ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷ ಸಿ.ಪಿ.ಯೋಗೇಶ್ವರ್ ಅವರನ್ನು ಸೆಳೆಯಲು ಪ್ರಯತ್ನಿಸುತ್ತಿದೆ ಎಂದು ಜೆಡಿಎಸ್ ಅವರು ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮೊದಲು ಚನ್ನಪಟ್ಟಣ ಕ್ಷೇತ್ರಕ್ಕೆ ಬಿಜೆಪಿ ಜೆಡಿಎಸ್ ನವರು ಅಭ್ಯರ್ಥಿಯನ್ನು ಆಯ್ಕೆ ಮಾಡಲಿ . ಚನ್ನಪಟ್ಟಣ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯನ್ನು ಸಧ್ಯದಲ್ಲಿಯೇ ಆಯ್ಕೆ ಅಂತಿಮ ಗೊಳಿಸಲಾಗುವುದು…

Read More

ಶಿವಮೊಗ್ಗ: ಎಸ್ ಬಂಗಾರಪ್ಪ ವಿಚಾರ ವೇದಿಕೆಯಿಂದ ಕೊಡಮಾಡುವಂತ ಬಂಗಾರ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಸಾಹಿತಿ ಕುಂ.ವೀರಭದ್ರಪ್ಪ ಸೇರಿದಂತೆ ಮೂವರು ಸಾಧಕರಿಗೆ ಈ ಪ್ರಶಸ್ತಿಯ ಗರಿಮೆ ಸಂದಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಎಸ್ ಬಂಗಾರಪ್ಪ ವಿಚಾರ ವೇದಿಕೆಯ ಪ್ರಧಾನ ಕಾರ್ಯದರ್ಶಿ ಕೆ.ವಿ ನಾಗರಾಜ ಮೂರ್ತಿ ಅವರು ಮಾಹಿತಿ ಹಂಚಿಕೊಂಡಿದ್ದು, ಬಂಗಾರಪ್ಪ ಅವರನ್ನು ಬಿಟ್ಟು ಕರ್ನಾಟಕ ರಾಜಕೀಯ ಚರಿತ್ರೆಯನ್ನು ಊಹಿಸಲು ಸಾಧ್ಯವಿಲ್ಲ, ಅಂತಹ ಚರಿತ್ರೆ ಕರ್ನಾಟಕ ರಾಜಕೀಯ ಚರಿತ್ರೆ ಆಗುವುದೂ ಇಲ್ಲ. ಈ ನಾಡಿನ ಶೋಷಿತ ಸಮುದಾಯಗಳ ಧ್ವನಿಯಾಗಿದ್ದ ಬಂಗಾರಪ್ಪನವರು ಕರ್ನಾಟಕ ಕಂಡ ಬಹುದೊಡ್ಡ ಸಮಾಜವಾದಿ ಚಿಂತಕರು ಮಾತ್ರವಲ್ಲ, ಸಾಂಸ್ಕೃತಿಕ ವಕ್ತಾರರು ಕೂಡ. ಮುಖ್ಯಮಂತ್ರಿಯಾಗಿ ಅವರು ರೂಪಿಸಿದ ನೂರಾರು ಯೋಜನೆಗಳು ಇಂದಿಗೂ ರಾಷ್ಟ್ರಕ್ಕೆ ಮಾದರಿಯಾಗಿವೆ. ಇಂದು ಬಂಗಾರಪ್ಪ ನಮ್ಮೊಂದಿಗೆ ದೈಹಿಕವಾಗಿ ಇಲ್ಲದಿದ್ದರೂ, ಅವರು ಬಿಟ್ಟು ಹೋದ ತತ್ವಾದರ್ಶಗಳು ಸದಾ ನಮ್ಮೊಂದಿಗಿವೆ ಎಂದಿದ್ದಾರೆ. ಪ್ರತಿವರ್ಷ ಬಂಗಾರಪ್ಪ ವಿಚಾರ ವೇದಿಕೆ ಮತ್ತು ಬಂಗಾರಪ್ಪ ಪ್ರತಿಷ್ಠಾನ ಸಂಯುಕ್ತವಾಗಿ ಅವರ ಜನ್ಮ ದಿನಾಚರಣೆಯನ್ನು ಆಯೋಜಿಸುತ್ತಿದೆ. ವಿಚಾರ ಸಂಕಿರಣ, ಬೃಹತ್‌…

Read More

ನವದೆಹಲಿ: ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ ( line of actual control -LAC) ಗಡಿ ಗಸ್ತು ಪುನರಾರಂಭಿಸಲು ಭಾರತ ಮತ್ತು ಚೀನಾ ಒಪ್ಪಿಕೊಂಡಿವೆ. ಇದು ಈ ಪ್ರದೇಶದಲ್ಲಿ ವರ್ಷಗಳಿಂದ ಇರುವ ಬಿಕ್ಕಟ್ಟಿನಲ್ಲಿ ಪ್ರಮುಖ ಪ್ರಗತಿಯನ್ನು ಸೂಚಿಸುತ್ತದೆ. ಎಲ್ಎಸಿ ಉದ್ದಕ್ಕೂ ಗಸ್ತು ತಿರುಗುವ ಬಗ್ಗೆ ಎರಡೂ ಕಡೆಯವರು ಒಪ್ಪಂದಕ್ಕೆ ಬಂದಿದ್ದಾರೆ, ಇದು ನಿಷ್ಕ್ರಿಯತೆಗೆ ಕಾರಣವಾಗಬಹುದು ಎಂದು ವಿದೇಶಾಂಗ ಸಚಿವಾಲಯ ಸೋಮವಾರ ತಿಳಿಸಿದೆ. “ಕಳೆದ ಹಲವಾರು ವಾರಗಳಿಂದ ಭಾರತ ಮತ್ತು ಚೀನಾದ ರಾಜತಾಂತ್ರಿಕ ಮತ್ತು ಮಿಲಿಟರಿ ಸಮಾಲೋಚಕರು ಪರಸ್ಪರ ನಿಕಟ ಸಂಪರ್ಕದಲ್ಲಿದ್ದಾರೆ ಎಂದು ನಾನು ನಿಮ್ಮೊಂದಿಗೆ ಹಂಚಿಕೊಳ್ಳಬಲ್ಲೆ. ಈ ಚರ್ಚೆಗಳ ಪರಿಣಾಮವಾಗಿ, ಗಡಿ ಪ್ರದೇಶಗಳಲ್ಲಿ ಎಲ್ಎಸಿ ಉದ್ದಕ್ಕೂ ಗಸ್ತು ವ್ಯವಸ್ಥೆಗಳ ಬಗ್ಗೆ ಒಪ್ಪಂದಕ್ಕೆ ಬರಲಾಗಿದೆ, ಇದು 2020 ರಲ್ಲಿ ಈ ಪ್ರದೇಶಗಳಲ್ಲಿ ಉದ್ಭವಿಸಿದ ಸಮಸ್ಯೆಗಳನ್ನು ನಿಷ್ಕ್ರಿಯಗೊಳಿಸಲು ಮತ್ತು ಪರಿಹರಿಸಲು ಕಾರಣವಾಗುತ್ತದೆ ” ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಸುದ್ದಿಗಾರರಿಗೆ ತಿಳಿಸಿದರು. 2020 ರ ಗಾಲ್ವಾನ್ ಕಣಿವೆ ಘರ್ಷಣೆಯ ನಂತರ ಪೂರ್ವ ಲಡಾಖ್ನಲ್ಲಿ ಭಾರತ…

Read More

ಬೆಂಗಳೂರು: ಬೆಸ್ಕಾಂನಿಂದ ( BESCOM ) ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ, ನಗರದ ಕೆಲ ಪ್ರದೇಶಗಳಲ್ಲಿ ಅಕ್ಟೋಬರ್.23ರಂದು ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ ಎಂಬುದಾಗಿ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರು 23: 66/11 kV ವಿಡಿಯಾ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಜಾಲಹಳ್ಳಿ ವಿಭಾಗದ ಎನ್-9 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 23.10.2024 ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದಿದೆ. ವಿನಾಯಕ ನಗರ, ವಿಕಾಸ್ ನಗರ, ಶೋಭಾ ಅಪಾರ್ಟ್‌ಮೆಂಟ್, 8 ನೇ ಮೈಲ್ ರಸ್ತೆ, ರಾಮಯ್ಯ ಲೇಔಟ್, ಹಾವನೂರು ಎಕ್ಸ್‌ಟೆನ್. ನಾರಾಯಣ ಲೇಔಟ್, ವಿಡಿಯಾ ಸ್ಕೂಲ್, ಕುವೆಂಪು ನಗರ, ವಿಡಿಯಾ ಬಸ್ ಸ್ಟಾಪ್, ರಿಲಯನ್ಸ್ ಫ್ರೆಶ್, ಮುನಿಕೊಂಡಪ್ಪ ಲೇಔಟ್, ಅಶೋಕ್ ನಗರ, ವಿದ್ಯಾ ನಗರ, ಡಿಫೆನ್ಸ್ ಕಾಲೋನಿ, ಹಾವನೂರು ಎಕ್ಸ್,. ಮಂಜುನಾಥ್ ನಗರ, ಮಹಾಲಕ್ಷ್ಮಿ…

Read More