Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾನುವಾರ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಮಸೂದೆಗೆ ತಮ್ಮ ಒಪ್ಪಿಗೆ ನೀಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವಾಲಯ ತಿಳಿಸಿದೆ. ವಿರೋಧ ಪಕ್ಷದ ಪ್ರತಿಭಟನೆಗಳ ನಡುವೆಯೂ ವಿಬಿ-ಜಿ ರಾಮ್ ಜಿ ಮಸೂದೆ, 2025 ಅನ್ನು ಸಂಸತ್ತು ಅಂಗೀಕರಿಸಿತು. ಇದು ಅಸ್ತಿತ್ವದಲ್ಲಿರುವ ಗ್ರಾಮೀಣ ಉದ್ಯೋಗ ಕಾನೂನು, ಎಂಜಿಎನ್‌ಆರ್‌ಇಜಿಎ ಅನ್ನು ಬದಲಿಸಲು ಪ್ರಯತ್ನಿಸುತ್ತದೆ ಮತ್ತು ಪ್ರತಿ ಹಣಕಾಸು ವರ್ಷಕ್ಕೆ ಗ್ರಾಮೀಣ ಕುಟುಂಬಕ್ಕೆ 125 ದಿನಗಳ ವೇತನ ಉದ್ಯೋಗವನ್ನು ಖಾತರಿಪಡಿಸುತ್ತದೆ. ಸರ್ಕಾರದ ಪ್ರಕಾರ, ಹೊಸ ಯೋಜನೆಯು ‘ವಿಕ್ಷಿತ್ ಭಾರತ್ 2047’ ರ ರಾಷ್ಟ್ರೀಯ ದೃಷ್ಟಿಕೋನಕ್ಕೆ ಅನುಗುಣವಾಗಿ ಗ್ರಾಮೀಣಾಭಿವೃದ್ಧಿ ಚೌಕಟ್ಟನ್ನು ಸ್ಥಾಪಿಸುವ ಗುರಿಯನ್ನು ಹೊಂದಿದೆ.
ನವದೆಹಲಿ: ಗ್ರಾಮೀಣ ಉದ್ಯೋಗ ನೀತಿಯಲ್ಲಿ ಮಹತ್ವದ ಮೈಲಿಗಲ್ಲು ತರುವ ಪರಿವರ್ತನಾತ್ಮಕ ವಿಕಸಿತ ಭಾರತ – ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಖಾತ್ರಿ (ವಿಬಿ – ಜಿ ರಾಮ್ ಜಿ) ಮಸೂದೆ 2025ಕ್ಕೆ ಭಾರತದ ರಾಷ್ಟ್ರಪತಿ ಅಂಕಿತ ಹಾಕಿದ್ದಾರೆ. ಈ ಕಾಯ್ದೆ ಗ್ರಾಮೀಣ ಕುಟುಂಬಗಳಿಗೆ ಪ್ರತಿ ಹಣಕಾಸು ವರ್ಷದಲ್ಲಿ 125 ದಿನಗಳ ವೇತನ ಸಹಿತ ಉದ್ಯೋಗಖಾತ್ರಿಯನ್ನು ಖಚಿತಪಡಿಸುತ್ತದೆ ಮತ್ತು ಸಬಲೀಕರಣವನ್ನು ಉತ್ತೇಜಿಸುತ್ತದೆ. ಎಲ್ಲರನ್ನೊಳಗೊಂಡ ಪ್ರಗತಿ, ಅಭಿವೃದ್ಧಿ ಉಪಕ್ರಮಗಳ ಸಮನ್ವಯತೆ ಮತ್ತು ಗರಿಷ್ಠ ಸರ್ಕಾರಿ ಪ್ರಯೋಜನಗಳ ವಿತರಣೆಯ ಮೂಲಕ ಸಮೃದ್ಧ, ಸ್ಥಿತಿಸ್ಥಾಪಕತ್ವ ಮತ್ತು ಸ್ವಾವಲಂಬಿ ಗ್ರಾಮೀಣ ಭಾರತ ನಿರ್ಮಾಣಕ್ಕೆ ಭದ್ರ ಬುನಾದಿಯನ್ನು ಬಲವರ್ಧನೆಗೊಳಿಸಲಿದೆ. ಈ ಮೊದಲು ಸಂಸತ್, ವಿಕಸಿತ ಭಾರತ – ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಖಾತ್ರಿ (ವಿಬಿ – ಜಿ ರಾಮ್ ಜಿ) ಮಸೂದೆ 2025ಗೆ ಅನುಮೋದನೆ ನೀಡಿತ್ತು. ಆ ಮೂಲಕ ಭಾರತದ ಗ್ರಾಮೀಣ ಉದ್ಯೋಗ ಮತ್ತು ಅಭಿವೃದ್ಧಿ ಚೌಕಟ್ಟಿನ ನಿರ್ಣಾಯಕ ಸುಧಾರಣೆಗೆ ಅನುವು ಮಾಡಿಕೊಟ್ಟಿತು. ಈ ಕಾಯ್ದೆ 2005ರ…
ಗದಗ: ರಾಜ್ಯ ಸರ್ಕಾರ ಎಲ್ಲ ರಂಗದಲ್ಲಿಯೂ ವಿಫಲವಾಗಿದ್ದು, ಎಲ್ಲ ಇಲಾಖೆಗಳಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು, ಅದರ ವಿರುದ್ಧ ಮಾತನಾಡದಂತೆ ವಿರೋಧ ಪಕ್ಷ, ರೈತರು, ಜನ ಸಾಮಾನ್ಯರನ್ನು ದಮನ ಮಾಡಲು ವ್ಯಕ್ತಿಯ ಸ್ವಾತಂತ್ರ್ಯ ಹರಣ ಮಾಡಲು ಸಂವಿಧಾನ ವಿರುದ್ಧ ದ್ವೇಷ ಭಾಷಣ ನಿಯಂತ್ರಣ ಕಾನೂನು ತಂದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಯಾವುದೇ ರೀತಿಯ ಅಭಿವೃದ್ಧಿ ಮಾಡಿಲ್ಲ. ಯಾವ ಇಲಾಖೆಯಲ್ಲಿಯೂ ಕೆಲಸ ಆಗುತ್ತಿಲ್ಲ. ಭ್ರಷ್ಟಾಚಾರ ಹೆಚ್ಚಾಗಿದೆ. ರಾಜ್ಯವನ್ನು ದಿವಾಳಿ ಮಾಡಿದ್ದಾರೆ. ಜನರು ಇದನ್ನು ವಿರೋಧ ಮಾಡಬಾರದು ಎಂದು ದ್ವೇಷ ಭಾಷಣದ ವಿರುದ್ಧ ಕಾನೂನು ಮಾಡಿದ್ದಾರೆ. ಕಾಂಗ್ರೆಸ್ ನವರೇ ಹೆಚ್ಚು ದ್ವೇಷ ಭಾಷಣ ಮಾಡಿದ್ದಾರೆ. ಈಗಾಗಲೇ ದ್ವೇಷ ಭಾಷಣ ಮಾಡುವುದನ್ನು ನಿಯಂತ್ರಿಸಲು ಬಿಎನ್‌ಎಸ್ ಕಾನೂನಿದೆ. ಇವರು ವಿರೋಧ ಪಕ್ಷ, ರೈತರನ್ನು, ಜನ ಸಾಮಾನ್ಯರನ್ನು ದಮನ ಮಾಡಲು ವ್ಯಕ್ತಿಯ ಸ್ವಾತಂತ್ರ್ಯ ಹರಣ ಮಾಡಲು ಸಂವಿಧಾನದ ವಿರುದ್ಧ ಈ ಕಾನೂನು ತಂದಿದ್ದಾರೆ ಎಂದು ಹೇಳಿದರು. ಜಿ. ರಾಮ್…
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಖೋಡೇಸ್ ಗ್ಲಾಸ್ ಪ್ಯಾಕ್ಟರಿ, ಇಸ್ಕಾನ್ ಮತ್ತು ಅರೆಹಳ್ಳಿ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 23.12.2025 (ಮಂಗಳವಾರ) ರಂದು ಬೆಳಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಕೋಣನಕುಂಟೆ, ತಲಘಟ್ಟಪುರ, ದೊಡ್ಡಕಲ್ಲಸಂದ್ರ, ಶ್ರೀನಿಧಿ ಲೇಔಟ್, ಆವಲಹಳ್ಳಿ, ಮಂತ್ರಿ ಅಪರ‍್ಟ್ಮೆಂಟ್, ತಲಘಟ್ಟಪುರ, ರಘುವನಹಳ್ಳಿ, ಗುಬ್ಬಲಾಳ, ಕುವೆಂಪುನಗರ, ವಿ.ವಿ.ನಗರ, ವಿ.ವಿ. ಲೇಔಟ್, ಬಾಲಾಜಿ ಲೇಔಟ್, ರಾಯಲ್ ಫಾರಂ ಮತ್ತು ಅರೇಹಳ್ಳಿ, ಇಟ್ಟಮಡು, ಏಜಿಎಸ್ ಲೇಔಟ್, ಚಿಕ್ಕಲಸಂದ್ರ, ಟಿ.ಜಿ. ಲೇಔಟ್, ಭುವನೇಶ್ವರಿನಗರ ಇಸ್ರೋ ಲೇಔಟ್, ಇಸ್ರೋ ಲೇಔಟ್ ಇಂಡಸ್ರ‍್ಟಿಯಲ್ ಏರಿಯಾ, ಕುಮಾರಸ್ವಾಮಿ ಬಡಾವಣೆ, ವಿಠ್ಠಲ ನಗರ, ವಿಕ್ರಮ್ ನಗರ, ಯೆಲಚೇನಹಳ್ಳಿ, ಸುತ್ತಮುತ್ತಲ ಪ್ರದೇಶ, ಚಿಕ್ಕಲಸಂದ್ರ ವಿಲೇಜ್, ಕದಿರೇನಹಳ್ಳಿ, ಅಬ್ಬಯ್ಯ ನಾಯ್ಡು ಸ್ಟುಡಿಯೋ, ನಾಯ್ಡು ಲೇಔಟ್, ಎಜಿಎಸ್ ಲೇಔಟ್ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ. ಬೆಳಿಗ್ಗೆ 11:00 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ ಫಿಡೆಲಿಟಿ, ಫಿಲಿಪ್ಸ್, ಇನ್ಕ್ಯುಬೇಟರ್,…
ಹುಬ್ಬಳ್ಳಿ: ಯಾರೇ ನಿಮ್ಮನ್ನು ಕೆಣಕಿದ್ರೂ ನೀವು ಅವರ ಭಾಷೆಯಲ್ಲೇ ಉತ್ತರ ಕೊಡಿ. ಇಷ್ಟು ದಿನ ತಾಳ್ಮೆಯಿಂದ ಇದ್ದಿದ್ದು ಸಾಕು ಎಂಬುದಾಗಿ ನಟ ಕಿಚ್ಚ ಸುದೀಪ್ ಅಬ್ಬರಿಸಿದ್ದಾರೆ. ಶನಿವಾರದಂದು ಹುಬ್ಬಳ್ಳಿಯಲ್ಲಿ ಮಾರ್ಕ್ ಚಿತ್ರದ ಪ್ರೀ-ರಿಲೀಸ್ ಇವೆಂಟ್ ನಲ್ಲಿ ಮಾತನಾಡಿರುವಂತ ಅವರು, ನಮ್ಮ ಅಭಿಮಾನಿಗಳು ನೀವು ಸುಮ್ಮನೇ ಇರಬೇಡಿ. ಈ ಕಾರ್ಯಕ್ರಮ ಯಾಕೆ ಹುಬ್ಬಳ್ಳಿಯಲ್ಲಿ ಮಾಡುತ್ತಿದ್ದೀವಿ ಅಂದ್ರೆ ಇಲ್ಲಿಂದ ಮಾತನಾಡಿದ್ರೆ ಕೆಲವೊಬ್ಬರಿಗೆ ತಟ್ಟುತ್ತೆ ಎಂದರು. ಒಂದು ಕಡೆ ಪೈರಸಿ ಸ್ಯಾಂಡಲ್ ವುಡ್ ಗೆ ಮಾರಕವಾಗಿ ಪರಿಣಿಸಿದ್ದರೇ, ಮತ್ತೊಂದು ಕಡೆ ತಮ್ಮ ಸಿನಿಮಾ ಬಗ್ಗೆ ನಕಾರಾತ್ಮಕವಾಗಿ ಮಾತನಾಡುವವರಿಗೆ ಖಡಕ್ ಸಂದೇಶವನ್ನು ನೀಡಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ನಟ ಸುದೀಪ್ ಮಾತನಾಡಿದಂತ ಮಾತುಗಳು ಭಾರೀ ಚರ್ಚೆಗೆ ಗ್ರಾಸವಾಗಿದೆ. https://kannadanewsnow.com/kannada/payment-of-the-24th-installment-of-the-griha-lakshmi-yojana-from-tomorrow-minister-lakshmi-hebbalkar/ https://kannadanewsnow.com/kannada/grant-for-construction-of-ksrtc-bus-stand-hospital-quatras-at-ulavi-in-sorabad-minister-madhu-bangarappa-promises/
ಬೆಳಗಾವಿ: ಸೋಮವಾರದಿಂದ ಶನಿವಾರದೊಳಗೆ (ಡಿಸೆಂಬರ್ 22 ರಿಂದ 27) ಗೃಹಲಕ್ಷ್ಮೀ ಯೋಜನೆಯ 24ನೇ ಕಂತಿನ ಹಣವನ್ನು ಫಲಾನುಭವಿಗಳ ಖಾತೆಗೆ ಸಂದಾಯ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಳಗಾವಿಯ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 24ನೇ ಕಂತಿನ ಹಣ ಬಿಡುಗಡೆಗೆ ಹಣಕಾಸು ಇಲಾಖೆಯವರು ಈಗಾಗಲೇ ಅನುಮತಿ ನೀಡಿದ್ದು, ಸೋಮವಾರದಿಂದ ಹಣ ಸಂದಾಯವಾಗಲಿದೆ ಎಂದರು. ಸತ್ತವರ ಅಕೌಂಟ್‌ಗೂ ಗೃಹಲಕ್ಷ್ಮೀ ಯೋಜನೆಯ ಹಣ ಸಂದಾಯ ಆಗುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈ ಸಂಬಂಧ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಈಗಾಗಲೇ ಎರಡು ಬಾರಿ ಸಭೆ ನಡೆಸಲಾಗಿದ್ದು, ಸತ್ತವರ ಅಕೌಂಟ್‌ಗೆ ಹಣ ಸಂದಾಯ ಆಗುವುದು ಗೊತ್ತಾಗುವುದಿಲ್ಲ. ಇದಕ್ಕಾಗಿ ಈಗ ಸಾಫ್ಟ್‌ವೇರ್ ಅಭಿವೃದ್ಧಿ ಮಾಡಿದ್ದು, ಅಂಗನವಾಡಿ ಕಾರ್ಯಕರ್ತರು ಪರಿಶೀಲನೆ ಮಾಡಲಿದ್ದಾರೆ. ಈ ಮೊತ್ತವನ್ನು ರಿಕವರಿ ಮಾಡುವ ಕುರಿತು ಬ್ಯಾಂಕ್‌ಗಳಿಗೆ ಸೂಚನೆ ಕೊಟ್ಟಿದ್ದೇವೆ ಎಂದು ಹೇಳಿದರು. ಎಲ್ಲವೂ ಹೈಕಮಾಂಡ್‌ಗೆ ಬಿಟ್ಟ ವಿಚಾರ ನಾಯಕತ್ವ ಬದಲಾವಣೆ ಆಗುತ್ತಾ ಅಥವಾ ಸಚಿವ ಸಂಪುಟದ ವಿಸ್ತರಣೆ…
ಬೆಂಗಳೂರು: ರಾಜಣ್ಣ ಅವರು ಜನತಾ ದಳದಲ್ಲಿದ್ದರು. ನಾನು ಕಾಂಗ್ರೆಸ್ ನವನು. ಅಂದು ಎಸ್.ಎಂ. ಕೃಷ್ಣ ಅವರ ಅವಧಿಯಲ್ಲಿ ರಾಜಣ್ಣ ಅವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷನನ್ನಾಗಿ ಮಾಡಿದ್ದು ನಾನು. ಹೋಗಿ ಬೇಕಾದರೆ ಅವರನ್ನೇ ಕೇಳಿ. ಸಿಎಂಗೂ ಇದಕ್ಕೂ ಸಂಬಂಧವೇ ಇಲ್ಲ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಇಂದು ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳ ಜೊತೆಗೆ ಮಾತನಾಡಿದಂತ ಅವರು, ರಾಜಕೀಯ ಬೆಂಬಲಕ್ಕೆ ಕೆ.ಎನ್. ರಾಜಣ್ಣ ಹಾಗೂ ನೀವು ಭೇಟಿ ಮಾಡಿದ್ದೀರಿ ಎಂದಾಗ, ನಾವು ಸಹೋದ್ಯೋಗಿಗಳು. ಅವರು ನಮ್ಮ ಜತೆ ಕೆಲಸ ಮಾಡಿರುವವರು. ನನಗೆ ಯಾರ ಜತೆಯೂ ಭಿನ್ನಾಭಿಪ್ರಾಯಗಳಿಲ್ಲ. ಕಳೆದ 16 ವರ್ಷಗಳಿಂದ, ಅವರು ನಮ್ಮ ಪಕ್ಷಕ್ಕೆ ಬಂದ ದಿನದಿಂದ ನನಗೂ ಮುಖ್ಯಮಂತ್ರಿಯವರಿಗೂ ಬಿನ್ನಾಭಿಪ್ರಾಯಗಳು ಏನಾದರೂ ಇದೆಯಾ? ಭಿನ್ನಾಭಿಪ್ರಾಯಗಳನ್ನು ಮಾಧ್ಯಮಗಳು, ವಿರೋಧ ಪಕ್ಷಗಳು ಸೃಷ್ಟಿ ಮಾಡುತ್ತಿವೆ. ತಮಗೆ ಬೇಕಾದ ಆಹಾರ ಸೃಷ್ಟಿಸುತ್ತಿದ್ದಾರೆ. ಕೆಲವು ಸಂದರ್ಭಗಳಲ್ಲಿ ರಾಜಕೀಯವಾಗಿ ಹೇಳಿಕೆ ಕೊಟ್ಟಿರುತ್ತಾರೆ. ಇದಕ್ಕೆ ಬೇಸರ ಮಾಡಿಕೊಳ್ಳಲು ಆಗುತ್ತದೆಯೇ? ಅಣ್ಣ ತಮ್ಮಂದಿರೇ ಜಗಳ ಮಾಡುತ್ತಾರಂತೆ, ಇನ್ನು ನಮ್ಮದು…
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಖೋಡೇಸ್ ಗ್ಲಾಸ್ ಪ್ಯಾಕ್ಟರಿ, ಇಸ್ಕಾನ್ ಮತ್ತು ಅರೆಹಳ್ಳಿ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 23.12.2025 (ಮಂಗಳವಾರ) ರಂದು ಬೆಳಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಕೋಣನಕುಂಟೆ, ತಲಘಟ್ಟಪುರ, ದೊಡ್ಡಕಲ್ಲಸಂದ್ರ, ಶ್ರೀನಿಧಿ ಲೇಔಟ್, ಆವಲಹಳ್ಳಿ, ಮಂತ್ರಿ ಅಪರ‍್ಟ್ಮೆಂಟ್, ತಲಘಟ್ಟಪುರ, ರಘುವನಹಳ್ಳಿ, ಗುಬ್ಬಲಾಳ, ಕುವೆಂಪುನಗರ, ವಿ.ವಿ.ನಗರ, ವಿ.ವಿ. ಲೇಔಟ್, ಬಾಲಾಜಿ ಲೇಔಟ್, ರಾಯಲ್ ಫಾರಂ ಮತ್ತು ಅರೇಹಳ್ಳಿ, ಇಟ್ಟಮಡು, ಏಜಿಎಸ್ ಲೇಔಟ್, ಚಿಕ್ಕಲಸಂದ್ರ, ಟಿ.ಜಿ. ಲೇಔಟ್ ವ್ಯಾಪ್ತಿಯಲ್ಲಿ ಕರೆಂಟ್ ಇರೋದಿಲ್ಲ. ಇನ್ನೂ ಭುವನೇಶ್ವರಿನಗರ ಇಸ್ರೋ ಲೇಔಟ್, ಇಸ್ರೋ ಲೇಔಟ್ ಇಂಡಸ್ರ‍್ಟಿಯಲ್ ಏರಿಯಾ, ಕುಮಾರಸ್ವಾಮಿ ಬಡಾವಣೆ, ವಿಠ್ಠಲ ನಗರ, ವಿಕ್ರಮ್ ನಗರ, ಯೆಲಚೇನಹಳ್ಳಿ, ಸುತ್ತಮುತ್ತಲ ಪ್ರದೇಶ, ಚಿಕ್ಕಲಸಂದ್ರ ವಿಲೇಜ್, ಕದಿರೇನಹಳ್ಳಿ, ಅಬ್ಬಯ್ಯ ನಾಯ್ಡು ಸ್ಟುಡಿಯೋ, ನಾಯ್ಡು ಲೇಔಟ್, ಎಜಿಎಸ್ ಲೇಔಟ್ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. https://kannadanewsnow.com/kannada/grant-for-construction-of-ksrtc-bus-stand-hospital-quatras-at-ulavi-in-sorabad-minister-madhu-bangarappa-promises/ https://kannadanewsnow.com/kannada/i-cm-siddaramaiah-work-like-brothers-dcm-d-k-shivakumar/
ಬೆಂಗಳೂರು : “ನನಗೆ ಕಾಂಗ್ರೆಸ್ನ ಯಾವುದೇ ನಾಯಕರ ಜತೆ ಭಿನ್ನಾಭಿಪ್ರಾಯಗಳಿಲ್ಲ. ನಾನು, ಸಿಎಂ ಒಟ್ಟಿಗೆ ಸಹೋದರರಂತೆ ಕೆಲಸ ಮಾಡುತ್ತಿಲ್ಲವೇ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು. ಮುಖ್ಯಮಂತ್ರಿಯವರ ಆಪ್ತ ಬಳಗದವರನ್ನು ಭೇಟಿ ಮಾಡಿದ್ದೀರಿ ಎಂದು ಕೇಳಿದಾಗ, “ಅವರಿಗೆ ಸಿಎಂ ಆಪ್ತರೇನು? ಅವರು ನನಗೂ ಆಪ್ತರೇ. ಅವರು ಯಾರಿಗೆ ಆಪ್ತರಿಲ್ಲ ಹೇಳಿ. ನಾನು ಸಿಎಂ ಆಪ್ತರಲ್ಲವೇ? ರಾಜಣ್ಣ ಅವರು ಜನತಾ ದಳದಲ್ಲಿದ್ದರು. ನಾನು ಕಾಂಗ್ರೆಸ್ ನವನು. ಅಂದು ಎಸ್.ಎಂ. ಕೃಷ್ಣ ಅವರ ಅವಧಿಯಲ್ಲಿ ರಾಜಣ್ಣ ಅವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷನನ್ನಾಗಿ ಮಾಡಿದ್ದು ನಾನು. ಹೋಗಿ ಬೇಕಾದರೆ ಅವರನ್ನೇ ಕೇಳಿ. ಸಿಎಂಗೂ ಇದಕ್ಕೂ ಸಂಬಂಧವೇ ಇಲ್ಲ” ಎಂದರು. ರಾಜಕೀಯ ಬೆಂಬಲಕ್ಕೆ ಕೆ.ಎನ್. ರಾಜಣ್ಣ ಹಾಗೂ ನೀವು ಭೇಟಿ ಮಾಡಿದ್ದೀರಿ ಎಂದಾಗ, “ನಾವು ಸಹೋದ್ಯೋಗಿಗಳು. ಅವರು ನಮ್ಮ ಜತೆ ಕೆಲಸ ಮಾಡಿರುವವರು. ನನಗೆ ಯಾರ ಜತೆಯೂ ಭಿನ್ನಾಭಿಪ್ರಾಯಗಳಿಲ್ಲ. ಕಳೆದ 16 ವರ್ಷಗಳಿಂದ, ಅವರು ನಮ್ಮ…
ಬೆಂಗಳೂರು: ಇಂದಿನಿಂದ ರಾಜ್ಯಾಧ್ಯಂತ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯುತ್ತಿದೆ. ಪೋಷಕರು ತಮ್ಮ 5 ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ತಪ್ಪದೇ ಪೊಲಿಯೋ ಹನಿ ಹಾಕಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದರು. ಇಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಜೊತೆ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಭಾರತಾದ್ಯಂತ ಪೋಲಿಯೋ ಲಸಿಕೆ ಹಾಕುವುದು ಮತ್ತು ಅದರ ಕುರಿತು ಅಭಿಯಾನ ನಡೆಯುತ್ತಿದೆ. ಸತತ ಜಾಗೃತಿಯಿಂದಾಗಿ ಪೋಲಿಯೋ ರೋಗವನ್ನು ನಿಯಂತ್ರಿಸಲಾಗಿದೆ. 1978 ರಿಂದ ಈ ಅಭಿಯಾನವನ್ನು ಪ್ರಾರಂಭಿಸಲಾಗಿದ್ದು ಕಳೆದ 14 ವರ್ಷಗಳಿಂದ ಪೋಲಿಯೋ ಮುಕ್ತ ರಾಷ್ಟ್ರವಾಗಿದೆ. ಆದರೂ ಕೂಡ ಜಾಗೃತಿಯಿಂದ ಇರಬೇಕಾಗುತ್ತದೆ. ಯಾಕೆಂದರೆ ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ, ಅಪಘಾನಿಸ್ತಾನದಲ್ಲಿ ಈಗಲೂ ಕೂಡ ಪೋಲಿಯೋ ಕಾಣಿಸಿಕೊಳ್ಳುತ್ತಿದೆ. ಈ ಎರಡು ಹನಿ ಬಹಳ ಮುಖ್ಯ. ತಪ್ಪದೇ ಎಲ್ಲ ಮಕ್ಕಳಿಗೂ ಹಾಕಿಸಬೇಕು ಎಂದರು. ನಾಳೆಯಿಂದ 2-3 ದಿನ ಮನೆಮನೆಗೆ ತೆರಳಿ 0-5 ವರ್ಷದ ಮಕ್ಕಳಿಗೆ ಲಸಿಕೆ ಹಾಕಲಾಗುವುದು. 62,40,114 ಮಕ್ಕಳ ಗುರಿ…













