Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಹಾಸನ ಜಿಲ್ಲೆ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಅತ್ಯಾಚಾರ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದಂತ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ನೀಡಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಮೂರು ಅತ್ಯಾಚಾರ ಮತ್ತು ಒಂದು ಲೈಂಗಿಕ ದೌರ್ಜನ್ಯ, ಮಹಿಳೆಯ ಘನತೆಗೆ ಧಕ್ಕೆ ಉಂಟು ಮಾಡಿದಂತ ಆರೋಪದಲ್ಲಿ ಹೈಕೋರ್ಟ್ ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ನಡೆಸಿ, ತೀರ್ಪು ಕಾಯ್ದಿರಿಸಿದ್ದರು. ಇಂದು ಹಾಸನ ಜಿಲ್ಲೆಯ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಮನೆ ಕೆಲಸದಾಕೆ ನೀಡಿರುವ ದೂರಿನ ಅನ್ವಯ ದಾಖಲಾಗಿದ್ದಂತ ಅತ್ಯಾಚಾರ ಕೇಸ್, ಸೇರಿದಂತೆ ಮೂರು ಅತ್ಯಾಚಾರ ಮತ್ತು ಒಂದು ಲೈಂಗಿಕ ದೌರ್ಜನ್ಯ ಪ್ರಕರಣದ ಜಾಮೀನು ಅರ್ಜಿಯನ್ನು ವಜಾಗೊಳಿಸಿದರು. ಇನ್ನೂ ಹಾಸನ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದಂತ…
ಬೆಂಗಳೂರು: ಕರ್ನಾಟಕ ಪವರ್ ಟ್ರಾನ್ಸ್ ಮಿಷನ್ ಕಾರ್ಪೊರೇಷನ್ ಲಿಮಿಟೆಡ್ ಅಂದರೆ ಕೆಪಿಟಿಸಿಎಲ್ ನಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಹತೆ ಮೇಲೆ ಉದ್ಯೋಗಕ್ಕೆ ಅರ್ಜಿ ಕರೆಯಲಾಗಿದೆ. ಬರೋಬ್ಬರಿ 2975 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಇಂದಿನಿಂದ ಆರಂಭಗೊಳ್ಳಲಿದ್ದು, ನೀವು ಎಸ್ ಎಸ್ ಎಲ್ ಸಿ ಪಾಸ್ ಆಗಿದ್ದರೇ ತಪ್ಪದೇ ಅರ್ಜಿ ಸಲ್ಲಿಸಿ. ಈ ಕುರಿತಂತೆ ಕೆಪಿಟಿಸಿಎಲ್ ನಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 411 ಕಿರಿಯ ಸ್ಟೇಷನ್ ಪರಿಚಾರಕ ಮತ್ತು 81 ಕಿರಿಯ ಪವರ್ ಮ್ಯಾನ್ ಹುದ್ದೆಗಳಿಗೆ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ 2268 ಕಿರಿಯ ಪವರ್ ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಇಂದ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿರುವುದಾಗಿ ತಿಳಿಸಿದೆ. ವಿದ್ಯಾರ್ಹತೆ – ಎಸ್ಎಸ್ ಎಲ್ ಸಿ ಅಥವಾ 10ನೇ ತರಗತಿಯ ಸಿಬಿಎಸ್ಇ, ಐಸಿಎಸ್ಇ ಪರೀಕ್ಷೆಯನ್ನು ಕರ್ನಾಟಕ ರಾಜ್ಯದ ವಿದ್ಯಾಸಂಸ್ಥೆಗಳಿಂದ ತೇರ್ಗಡೆ ಹೊಂದಿರುವಂತ ಅಭ್ಯರ್ಥಿಗಳು ಮಾತ್ರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು. ಆಯ್ಕೆಯ ವಿಧಾನ- ಸಹನ ಶಕ್ತಿ ಪರೀಕ್ಷೆಯ…
ಬೆಂಗಳೂರು: ಕರ್ನಾಟಕ ರಾಜ್ಯದ ಕಾಂಗ್ರೆಸ್ ಸರಕಾರದ ಸಚಿವ ಬೈರತಿ ಸುರೇಶ್ ಅವರು ಮಹಿಳೆಯರ ಮಾನಹಾನಿ ಮಾಡುವಂಥ ಹೇಳಿಕೆ ನೀಡಿದ್ದನ್ನು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಅವರು ತೀವ್ರವಾಗಿ ಖಂಡಿಸಿದ್ದಾರೆ. ಸುರೇಶ್ ಅವರ ಹೇಳಿಕೆ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಲು ಸಿದ್ಧ ಎಂದು ಅವರು ಎಚ್ಚರಿಸಿದ್ದಾರೆ. ಸಚಿವ ಸ್ಥಾನದಲ್ಲಿರುವ ಬೈರತಿ ಸುರೇಶ್ ಅವರು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ ಯಡಿಯೂರಪ್ಪನವರು ನಮ್ಮ ಸಂಬಂಧ 35 ವರ್ಷಗಳಿಂದ ನೋಡಿಕೊಂಡು ಬರುತ್ತಿದ್ದೇನೆ ಅವಾಗ ನೀವು ಇನ್ನು ರಾಜಕೀಯದಲ್ಲಿ ಬಚ್ಚ ತಾವು ಸಚಿವರಾಗಿ ಇಂಥ ಕೇಳು ಮಟ್ಟ ಹೇಳಿಕೆಗಳನ್ನು ಕೊಡಬಾರದು. ಯಡಿಯೂರಪ್ಪಜೀ ಮೈತ್ರಾದೇವಿ, ಶೋಭಾ ಕರಂದ್ಲಾಜೆ ಅವರ ಬಗ್ಗೆ ಈ ರೀತಿ ಬೇಜವಾಬ್ದಾರಿ ಹೇಳಿಕೆ ನೀಡಿದ್ದನ್ನು ಖಂಡಿಸುತ್ತೇನೆ. ಮಾನನಷ್ಟ ಮೊಕದ್ದಮೆ ಹಾಕುತ್ತೇವೆ ಎಂದು ತಿಳಿಸಿದ್ದಾರೆ. ಬೇರೆಯವರ ವೈಯಕ್ತಿಕ ಬದುಕಿನ ಬಗ್ಗೆ ಕೆಟ್ಟದಾಗಿ ಮಾತನಾಡುವುದು ಸರಿಯಲ್ಲ. ಮಹಿಳೆಯರ ತೇಜೋವಧೆ ಮಾಡುವುದನ್ನು ನಿಲ್ಲಿಸಿ ಎಂದು ಅವರು ಆಗ್ರಹಿಸಿದ್ದಾರೆ. ತಮ್ಮ ಮೇಲೆ ಅಪವಾದ ಬಂದ ತಕ್ಷಣ ಮಹಿಳೆಯರ ಗುಣನಡತೆ ಕುರಿತು ಆರೋಪ ಮಾಡುವುದು…
ಬೆಂಗಳೂರು: ಕೇವಲ ಮೂಡ ಹಗರಣದ ಕಡತಗಳು ಸಚಿವ ಬೈರತಿ ಸುರೇಶ್ ಅವರು ಹೆಲಿಕಾಪ್ಟರ್ ನಲ್ಲಿ ಹೊತ್ತು ತಂದಿದ್ದಾರೆಂಬ ಸರ್ವರೂ ಮಾತನಾಡುವ ವಿಷಯವನ್ನು ಕೇಂದ್ರ ಸಚಿವರಾದ ಕು. ಶೋಭಾ ಕರಂದ್ಲಾಜೆ ಯವರು ಹೇಳಿದ ಮಾತ್ರಕ್ಕೆ, ಮಾಜಿ ಮುಖ್ಯಮಂತ್ರಿ ಮಾನ್ಯ ಯಡಿಯೂರಪ್ಪ ನವರ ಶ್ರೀಮತಿಯವರಾದ ದಿ. ಮೈತ್ರಾದೇವಿ ಯವರ ನಿಧನದಲ್ಲಿ ಶೋಭಾ ಕರಂದ್ಲಾಜೆ ಯವರ ಕೈವಾಡ ಇದೆ ಎಂಬ ಅವಹೇಳನ ಮತ್ತು ಮಾನಹಾನಿ ಹೇಳಿಕೆ ನೀಡಿರುವ ಬೈರತಿ ಸುರೇಶ್ ರವರು ಸ್ತ್ರೀ ನಿಂದಕ ಹಾಗೂ ಹೊಲಸು ಅಭಿವೃಚಿಯ ನೀಚ ರಾಜಕಾರಣಿಯಾಗಿ ದ್ದಾರೆ. ಒಂದು ಹೇಳಿಕೆ ನೀಡಿದ ಕಾರಣ ಮಹಿಳೆಯರ ಮಾನಹಾನಿ ಮಾಡುವಂಥ ಇಂತಹ ಹೇಳಿಕೆ ನೀಡಿದ್ದನ್ನು ವಿಧಾನಪರಿಷತ್ ವಿರೋಧ ಪಕ್ಷದ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ. ಸುರೇಶ್ ಅವರ ಹೇಳಿಕೆ ಮಾನಹಾನಿಕರವಾಗಿದ್ದು ಇಂತಹ ವ್ಯಕ್ತಿಗಳು ಸಚಿವ ಸ್ಥಾನದಲ್ಲಿ ಮುಂದುವರಿಯಲು ಯೋಗ್ಯರಲ್ಲ ಎಂಬುದನ್ನು ಬೈರತಿ ಸುರೇಶ್ ಅವರು ಸಾಭೀತು ಪಡಿಸಿದ್ದಾರೆ. ಇಂತಹ ಬೇಜವಾಬ್ದಾರಿ ಹೇಳಿಕೆ ಕಾಂಗ್ರೆಸ್ ಪಕ್ಷದ ಸಂಸ್ಕೃತಿಯನ್ನು ಸಹ ಎತ್ತಿಹಿಡಿದಿದೆ. ಈ…
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರದ ಸಚಿವ ಬೈರತಿ ಸುರೇಶ್ ಅವರು ಮಹಿಳೆಯರ ಮಾನಹಾನಿ ಮಾಡುವಂಥ ಹೇಳಿಕೆ ನೀಡಿದ್ದನ್ನು ವಿಧಾನಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಅವರು ತೀವ್ರವಾಗಿ ಖಂಡಿಸಿದ್ದಾರೆ. ಸುರೇಶ್ ಅವರ ಹೇಳಿಕೆ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಲು ಸಿದ್ಧ ಎಂದು ಅವರು ಎಚ್ಚರಿಸಿದ್ದಾರೆ. ಸಚಿವ ಸ್ಥಾನದಲ್ಲಿರುವ ಬೈರತಿ ಸುರೇಶ್ ಅವರು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ನಾನು ಶಿವಮೊಗ್ಗ ಜಿಲ್ಲೆಯವಳು; ಯಡಿಯೂರಪ್ಪಜೀ, ಮೈತ್ರಾದೇವಿ, ಶೋಭಾ ಕರಂದ್ಲಾಜೆ ಅವರನ್ನು ಹತ್ತಿರದಿಂದ ಬಲ್ಲವಳು. ಈ ರೀತಿ ಬೇಜವಾಬ್ದಾರಿ ಹೇಳಿಕೆ ನೀಡಿದ್ದನ್ನು ಖಂಡಿಸುತ್ತೇನೆ. ಮಾನನಷ್ಟ ಮೊಕದ್ದಮೆ ಹಾಕುತ್ತೇವೆ ಎಂದು ತಿಳಿಸಿದ್ದಾರೆ. ಒಬ್ಬ ಸಚಿವನಾಗಿ ಸಾಮಾಜಿಕ ಮತ್ತು ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದನ್ನು ಬಿಟ್ಟು ಬೇರೆಯವರ ವೈಯಕ್ತಿಕ ಬದುಕಿನ ಬಗ್ಗೆ ಕೆಟ್ಟದಾಗಿ ಮಾತನಾಡುವುದು ಸರಿಯಲ್ಲ. ಮಹಿಳೆಯರ ತೇಜೋವಧೆ ಮಾಡುವುದನ್ನು ನಿಲ್ಲಿಸಿ ಎಂದು ಅವರು ಆಗ್ರಹಿಸಿದ್ದಾರೆ. ತಮ್ಮ ಮೇಲೆ ಅಪವಾದ ಬಂದ ತಕ್ಷಣ ಮಹಿಳೆಯರ ಗುಣನಡತೆ ಕುರಿತು ಆರೋಪ ಮಾಡುವುದು ಇವರಿಗೆ ಅಭ್ಯಾಸವಾಗಿದೆ. ಸಾರ್ವಜನಿಕ ಜೀವನದಲ್ಲಿ ಕೆಲಸ ಮಾಡುವವರ ಗುಣನಡತೆ ಬಗ್ಗೆ…
ಬೆಂಗಳೂರು: ಬಿಜೆಪಿಯಲ್ಲಿ ಇರುವಂತಹ ಕೆಲವೇ ಕೆಲವರು ಕುಮಾರಸ್ವಾಮಿಗೆ ದೆಹಲಿ ಮಟ್ಟದಲ್ಲಿ ಉತ್ತಮ ಬಾಂಧವ್ಯ ಇದೆ. ಹೀಗಾಗಿ ಅವರಿಗೆ ಏನಾದರೂ ಸಮಸ್ಯೆ ಉದ್ಭವ ಮಾಡಬೇಕು ಎನ್ನುವ ಕಾರಣಕ್ಕೆ ಇಂತಹ ಪ್ರಕರಣಗಳನ್ನು ದುರ್ಬಳಕೆ ಮಾಡಿಕೊಳ್ಳಲು ಪ್ರಯತ್ನ ಮಾಡುತ್ತಿದ್ದಾರೆ ಅಂತ ಕೆಲವರು ಮಾತಾಡಿಕೊಳ್ಳುತ್ತಿದ್ದಾರೆ. ಅದು ನನ್ನ ಕಿವಿಗೂ ಬಿದ್ದಿದೆ. ಬಿಜೆಪಿ – ಜೆಡಿಎಸ್ ಮೈತ್ರಿಗೆ ಹುಳಿ ಹಿಂಡುವವರು ಬಹಳಷ್ಟು ಜನ ಇದ್ದಾರೆ. ಒಟ್ಟಾರೆ ಕುಮಾರಸ್ವಾಮಿಯನ್ನು ಹಾಳು ಮಾಡಲು ಹೊರಟಿದ್ದಾರೆ. ಅವರ ಪ್ರಯತ್ನ ಫಲ ಕೊಡುವುದಿಲ್ಲ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು. ಹುಳಿ ಹಿಂಡುವವರು ನಮ್ಮ ಪಕ್ಷದಲ್ಲಿ ಇಲ್ಲ. ಆದರೆ ಅಲ್ಲಿನ ಹುಳಿ ಹಿಂಡುವವರು ಕಾಂಗ್ರೆಸ್ ನಾಯಕರ ಜತೆ ಸೇರಿಕೊಂಡಿದ್ದಾರೆ. ಅದು ನನಗೆ ಗೊತ್ತಿದೆ. ಪ್ರಧಾನ ಮಂತ್ರಿ ಅವರನ್ನು ಅಸ್ಥಿರಗೊಳಿಸಲು ಅವರು ಕಾಂಗ್ರೆಸ್ ನಾಯಕರ ಜತೆ ಸೇರಿಕೊಂಡು ಮಸಲತ್ತು ಮಾಡುತ್ತಿರಬಹುದು. ನರೇಂದ್ರ ಮೋದಿ ಅವರ ವರ್ಚಸ್ಸಿಗೆ ಧಕ್ಕೆ ಆಗಬಾರದು. ಇದೆಲ್ಲವನ್ನು ಗಮನಿಸುತ್ತಿದ್ದೇನೆ. ಇದಕ್ಕೆ ನಾನು ಅವಕಾಶ ಕೊಡಬೇಕಾ? ಎಂದು ಅವರು ಪ್ರಶ್ನಿಸಿದರು. ಇಂತ ಕುತಂತ್ರಕ್ಕೆ ನಾನು ಯಾಕೆ ಬಲಿಯಾಗಬೇಕು?…
ಬೆಂಗಳೂರು: ಸಿ.ಪಿ.ಯೋಗೇಶ್ವರ್ ಅವರು ಮೇಲೆ ಇದ್ದಾರೆ. ಅವರ ಬಗ್ಗೆ ನಾನೇನು ಚರ್ಚೆ ಮಾಡಲಿ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಬೇಸರ ವ್ಯಕ್ತಪಡಿಸಿದರು. ಚನ್ನಪಟ್ಟಣ ಉಪ ಚುನಾವಣೆ ಅಭ್ಯರ್ಥಿಯಾಗಿ ಯೋಗೇಶ್ವರ್ ಅವರಿಗೆ ಜೆಡಿಎಸ್ ಚಿಹ್ನೆ ಅಡಿ ನಿಲ್ಲಿಸಲಾಗುತ್ತದೆಯೇ ಎನ್ನುವ ಪ್ರಶ್ನೆಗೆ ಸಚಿವರು ಮೇಲಿನಂತೆ ಉತ್ತರಿಸಿದರು. ಸಚಿವರು ಭಾನುವಾರ ಸಂಜೆ ಮಂಡ್ಯ ಜಿಲ್ಲೆಯಿಂದ ಮರಳಿದ ನಂತರ ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು. ಅವರು ಮೇಲಿದ್ದಾರೆ, ದೊಡ್ಡವರು. ಅವರ ಬಗ್ಗೆ ನಾನೇನು ಚರ್ಚೆ ಮಾಡಲಿ? ಅವರು ಏನು ಮಾಡುತ್ತಾರೆ ಎನ್ನುವುದು ನನಗೆ ಗೊತ್ತಿಲ್ಲ. ಎಲ್ಲವನ್ನೂ ಮಾಧ್ಯಮಗಳಲ್ಲಿ ಗಮನಿಸುತ್ತಿದ್ದೇನೆ. ಅವರು ಕಾಂಗ್ರೆಸ್ ನಾಯಕರ ಜತೆಯೂ ಸಂಪರ್ಕದಲ್ಲಿದ್ದಾರೆ. ಬೇರೆ ಬೇರೆ ಪಕ್ಷಗಳ ಮುಖಂಡರ ಜತೆಯು ಸಂಪರ್ಕದಲ್ಲಿದ್ದಾರೆ ಎಂದು ಹೊರಗಡೆ ಚರ್ಚೆ ನಡೆಯುತ್ತಿದೆ. ಪಕ್ಕದ ಮದ್ದೂರು ಕ್ಷೇತ್ರದ ಶಾಸಕರ ಜೊತೆ ಸಂಪರ್ಕದಲ್ಲಿದ್ದಾರೆ ಅಂತ ಚರ್ಚೆ ನಡೆಯುತ್ತಿದೆ. ಎಲ್ಲವನ್ನೂ ಬಿಜೆಪಿ ವರಿಷ್ಠ ನಾಯಕರು ಗಮನಿಸುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಹೇಳಿದರು. ಇನ್ನೂ…
ಶಿವಮೊಗ್ಗ: ಕಾಗೋಡು ತಿಮ್ಮಪ್ಪನವರಿಗೆ ಈಗಾಗಲೇ ದೇವರಾಜ ಅರಸು ಪ್ರಶಸ್ತಿಯನ್ನು ಸರ್ಕಾರ ನೀಡಿ ಗೌರವಿಸಿದೆ. ಆ ಬಳಿಕ ಅವರಿಗೆ ಪ್ರಶಸ್ತಿಗಳ ಸುರಿಮಳೆಯೇ ಬಂದಿದೆ. ಇಂದು ನಾಗರೀಕ ಸನ್ಮಾನ ಅತ್ಯಂತ ಮಹತ್ವದ್ದು. ಅದು ಈ ಭೂಮಿ ಕೊಟ್ಟಂತ ನಾಯಕನಿಗೆ ಸಲ್ಲಬೇಕಾಗದ್ದು. ಆದರೂ ಅವರಿಗೆ ಡಾಕ್ಟರೇಟ್ ನೀಡಬೇಕು. ಡಾ.ಕಾಗೋಡು ತಿಮ್ಮಪ್ಪ ಆಗಬೇಕು. ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ವಿವಿಯಿಂದ ಗೌರವ ಡಾಕ್ಟರೇಟ್ ಕೊಡಲೇಬೇಕು ಎಂಬುದಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ಆಗ್ರಹಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ತಾಳಗುಪ್ಪದಲ್ಲಿ ಮಾಜಿ ಸ್ಪೀಕರ್, ಹಿರಿಯ ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪ ಅವರಿಗೆ ನಾಗರೀಕ ಸನ್ಮಾನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ಭೂಮಿಯನ್ನು ಕೊಡುವಂತ ನಿರ್ಧಾರ ಯಾರು ಮಾಡಲಿಲ್ಲ. ಕರ್ನಾಟಕದಲ್ಲಿ ರೈತರ ಪರವಾಗಿ ಧ್ವನಿ ಎತ್ತಿದವರು ಇಬ್ಬರು ಮಾತ್ರ. ಒಬ್ಬರು ದಿವಂಗತ ಎಸ್ ಬಂಗಾರಪ್ಪನವರು, ಮತ್ತೊಬ್ಬರು ನಮ್ಮ ನಾಯಕರಾದಂತ ಕಾಗೋಡು ತಿಮ್ಮಪ್ಪನವರು. ಈ ಮಲೆನಾಡು ಭಾಗದ ಜನರಿಗೆ ಭೂಮಿಯನ್ನು ಕೊಟ್ಟಂತ ಮಹಾನ್ ನಾಯಕರು ಇವರು ಎಂದರು. ರೈತರು…
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂಡರ್ಬಾಲ್ ಜಿಲ್ಲೆಯಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯ ಗುಂಡ್ ಪ್ರದೇಶದಲ್ಲಿ ಸುರಂಗ ನಿರ್ಮಾಣದಲ್ಲಿ ಕೆಲಸ ಮಾಡುತ್ತಿದ್ದ ಖಾಸಗಿ ಕಂಪನಿಯ ಕಾರ್ಮಿಕರನ್ನು ಹೊಂದಿರುವ ಶಿಬಿರದ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದರು ಎಂದು ಅವರು ಹೇಳಿದರು. ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಇನ್ನಿಬ್ಬರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. https://kannadanewsnow.com/kannada/rain-alert-yellow-alert-sounded-in-13-districts-of-the-state-for-the-next-two-days/ https://kannadanewsnow.com/kannada/breaking-bomb-threat-call-to-kempegowda-international-airport-security-forces-take-precautionary-measures/
ಬೆಂಗಳೂರು: ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದ ಸಭೆಯಲ್ಲಿ ಜಾತಿ ಸಮೀಕ್ಷೆ, ಒಳಮೀಸಲಾತಿ, ಪಂಚಮಸಾಲಿ ಬೇಡಿಕೆ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಅದೇನು ಅಂತ ಮುಂದೆ ಓದಿ. ಇಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಚಿವರುಗಳ ಸಭೆ ನಡೆಯಿತು. ಈ ಸಭೆಯಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚೆ ಮಾಡಲಾಯಿತು. ಕೆಲ ವಿಚಾರಗಳ ಬಗ್ಗೆ ತೀರ್ಮಾನಗಳನ್ನು ತೆಗೆದುಕೊಳ್ಳಲಾಯಿತು. ಆ ಪ್ರಮುಖ ಹೈಲೈಟ್ಸ್ ಈ ಕೆಳಗಿನಂತಿದೆ. *ಮೂರೂ ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲ್ಲುವ ಸಾಧ್ಯತೆಗಳು ಹೆಚ್ಚಾಗಿವೆ. ಆದ್ದರಿಂದ ಸಂಪೂರ್ಣ ಶ್ರಮ ಹಾಕಿ ಚುನಾವಣೆ ನಿರ್ವಹಿಸಬೇಕು. *ಪ್ರತೀ ಚುನಾವಣೆ ಸಂದರ್ಭದಲ್ಲೂ ಬಿಜೆಪಿಯ ಪ್ರತಿಯೊಬ್ಬರೂ ಚಾಲೆಂಜಿಗೆ ಬಿದ್ದವರಂತೆ ಸುಳ್ಳುಗಳನ್ನು ಹೇಳುತ್ತಾರೆ. ಅವರ ಸುಳ್ಳುಗಳನ್ನು ಜನರೆದುರು ಬಯಲುಗೊಳಿಸಬೇಕು. *ಲೋಕಸಭೆ ಚುನಾವಣೆ ಮುಗಿದ ಮರುದಿನವೇ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುತ್ತವೆ ಎಂದು ಮೋದಿಯವರಿಂದ ಹಿಡಿದು ಸಿ.ಟಿ.ರವಿವರೆಗೂ ಪ್ರತಿಯೊಬ್ಬರೂ ರಾಶಿ ರಾಶಿ ಸುಳ್ಳು ಹೇಳಿದ್ದರು. ಈ ಚುನವಣೆಯಲ್ಲೂ ಹೊಸ ಹೊಸ ಸುಳ್ಳುಗಳನ್ನು ಬೆಳಗ್ಗೆ, ಮಧ್ಯಾಹ್ನ, ಸಂಜೆ, ರಾತ್ರಿ ಹೇಳುತ್ತಲೇ ಇರುತ್ತಾರೆ. ಇವುಗಳನ್ನು ಸರಿಯಾಗಿ ಕೌಂಟರ್…