Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ : ಕೆಳದಿ ರಾಣಿ ಚೆನ್ನಮ್ಮಾಜಿ ಕನ್ನಡ ನಾಡು ಕಂಡ ಅತ್ಯಂತ ಶ್ರೇಷ್ಟ ರಾಣಿ. ರಾಣಿ ಚೆನ್ನಮ್ಮಾಜಿ ವೃತ್ತದಲ್ಲಿ ಸುಮಾರು 15 ಲಕ್ಷ ರೂ. ವೆಚ್ಚದಲ್ಲಿ ರಾಣಿ ಚೆನ್ನಮ್ಮಾಜಿ ಕಂಚಿನ ಪುತ್ಥಳಿ ಸ್ಥಾಪಿಸಲಾಗುತ್ತಿದೆ ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ರಾಣಿ ಚೆನ್ನಮ್ಮಾಜಿ ವೃತ್ತದಲ್ಲಿ ಶನಿವಾರ ನಗರಸಭೆ ವತಿಯಿಂದ ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ಬಸ್ ನಿಲ್ದಾಣ ಸೇರಿ ವಿವಿಧ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದಂತ ಅವರು, ರಾಣಿ ಚೆನ್ನಮ್ಮಾಜಿ ವೃತ್ತದಲ್ಲಿ ಪುತ್ಥಳಿ ನಿರ್ಮಿಸಬೇಕು ಎಂದು ಈ ಭಾಗದ ಜನರ ಬಹುಕಾಲದ ಬೇಡಿಕೆಯಾಗಿದ್ದು, ಅದನ್ನು ನೆರವೇರಿಸಲಾಗುತ್ತಿದ್ದು, ಶಾಸಕರ ಅನುದಾನದಲ್ಲಿ ಪುತ್ಥಳಿಗೆ 10 ಲಕ್ಷ ರೂ. ಮೀಸಲಿಡಲಾಗಿದೆ. ಇದರ ಜೊತೆಗೆ ಬಸ್ ನಿಲ್ದಾಣ ಮತ್ತು ವೃತ್ತ ನಿರ್ಮಾಣಕ್ಕೆ 40 ಲಕ್ಷ ರೂ. ಶಾಸಕರ ವಿವೇಚನಾ ನಿಧಿಯಿಂಡ ಮೀಸಲಿಡಲಾಗಿದೆ. ಅತಿ ಶೀಘ್ರದಲ್ಲಿ ಕಾಮಗಾರಿ ಪ್ರಾರಂಭಿಸಲು ಸೂಚಿಸಲಾಗಿದೆ ಎಂದು…
ಬೆಂಗಳೂರು: ನಗರದಲ್ಲಿ ಬಹುದೊಡ್ಡ ಹಗರಣ ಎನ್ನುವಂತೆ ಇಪಿಎಫ್ಓ ಸ್ಟಾಫ್ ಕ್ರೆಡಿಟ್ ಕೋ-ಆಪರೇಟೀವ್ ಸೊಸೈಟಿಯಲ್ಲಿ ವಂಚನೆ ಪ್ರಕರಣ ಬೆಳಕಿಗೆ ಬಂದಿತ್ತು. ಈ ಪ್ರಕರಣ ಸಂಬಂಧ ಸಿಇಓ ಗೋಪಿ, ಅಕೌಟೆಂಟ್ ಜಗದೀಶ್ ಎಂಬುವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇಪಿಎಫ್ ಸ್ಟಾಫ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಮುರಳಿ ಎಂಬುವರು ದೂರು ನೀಡಿದ್ದಾರೆ. ಈ ದೂರು ಆಧರಿಸಿ ಸಿಇಒ ಗೋಪಿ ಮತ್ತು ಅಕೌಂಟೆಂಟ್ ಜಗದೀಶ್ ಎಂಬುವರ ವಿರುದ್ಧ ಕೇಸ್ ದಾಖಲಾಗಿದೆ. ಎಫ್ಐಆರ್ ದಾಖಲಾದ ಹಿನ್ನಲೆಯಲ್ಲಿ ಆರೋಪಿಗಳನ್ನು ಬಂಧಿಸಿ, ಹೆಚ್ಚಿನ ವಿಚಾರಣೆ ನಡೆಸಲು ಪೊಲೀಸರು ಸಿದ್ಧತೆ ಕೈಗೊಂಡಿದ್ದಾರೆ. ಮುರುಳಿ ಎಂಬುವರು ನೀಡಿರುವಂತ ದೂರಿನಲ್ಲಿ ಇಪಿಎಫ್ ಸ್ಟಾಫ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಸುಮಾರು 70 ಕೋಟಿ ಅವ್ಯವಹಾರ ಆಗಿದೆ ಎಂಬುದಾಗಿ ಉಲ್ಲೇಖಿಸಿದ್ದಾರೆ. https://kannadanewsnow.com/kannada/withdrawal-of-cases-against-kannada-activists-cm-siddaramaiah-announces/ https://kannadanewsnow.com/kannada/big-news-priority-given-to-teaching-kannada-in-karnatakas-madrasas-cms-announcement/
ಶಿವಮೊಗ್ಗ : ಕನ್ನಡ ನಾಡುನುಡಿ ವಿಷಯ ಬಂದಾಗ ನಾವೆಲ್ಲಾ ಒಗ್ಗಟ್ಟಿನ ಧ್ವನಿ ಮೊಳಗಿಸಬೇಕು. ಕನ್ನಡ ನಾಡಿನ ಒಂದಿಂಚು ಭೂಮಿ ಅನ್ಯರಾಜ್ಯಗಳಿಗೆ ಬಿಟ್ಟುಕೊಡುವ ಪ್ರಶ್ನೆಯೆ ಇಲ್ಲ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಕೆಳದಿ ರಾಣಿ ಚೆನ್ನಮ್ಮಾಜಿ ವೃತ್ತದಲ್ಲಿ ಶನಿವಾರ ನಗರಸಭೆ ಹಾಗೂ ವಿದ್ಯಾರಣ್ಯ ಯುವಕ ಸಂಘದ ವತಿಯಿಂದ ಕೆಳದಿಯಿಂದ ಬಂದ ವಿದ್ಯಾರಣ್ಯ ಜ್ಯೋತಿಯನ್ನು ಸ್ವಾಗತಿಸಿ, ಕನ್ನಡ ಧ್ವಜಾರೋಹಣ ನೆರವೇರಿಸಿ ಮಾತನಾಡಿದಂತ ಅವರು, ಕೇರಳದ ಕಾಸರಗೋಡು, ಬೆಂಗಳೂರಿನ ಹೊಸೂರು, ಬೆಳಗಾವಿ ಭಾಗದಲ್ಲಿ ಕರ್ನಾಟಕ ಗಡಿಯಲ್ಲಿ ಸದಾ ತಕರಾರು ತೆಗೆದು ಕನ್ನಡಿಗರ ತಾಳ್ಮೆ ಪರೀಕ್ಷೆ ಮಾಡುವ ಕೆಲಸ ನಿರಂತರ ನಡೆಯುತ್ತಿದೆ. ಕನ್ನಡಪರ ಸಂಘಟನೆಗಳು ಕಟ್ಟೆಚ್ಚರದಿಂದ ಇದ್ದು ಇಂತಹ ಘಟನೆಗಳ ವಿರುದ್ದ ಹೋರಾಟ ನಡೆಸುತ್ತಿರುವುದು ಅಭಿನಂದಾರ್ಹ ಸಂಗತಿ. ಕನ್ನಡದ ವಿಷಯ ಬಂದಾಗ ನಾವೆಲ್ಲರೂ ಕಟ್ಟೆಚ್ಚರದಿಂದ ಇರೋಣ. ನಾವು ಎಲ್ಲೆ ಇದ್ದರೂ ಕನ್ನಡಿಗರಾಗಿರೋಣ. ವಿದೇಶದಲ್ಲಿದ್ದರೂ ನಮ್ಮ ಕನ್ನಡ ಪ್ರೇಮ ಸದಾ ಹಸಿರಾಗಿರಲಿ…
ಬೆಂಗಳೂರು ನ1: ವಾಟಾಳ್ ಕನ್ನಡದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದ ಹೋರಾಟಗಾರರು. ದೇವರಾಜ ಅರಸು ಅವರು ಮಂತ್ರಿ ಸ್ಥಾನ ಕೊಡ್ತೀನಿ ಎಂದು ಕರೆದರೂ ಕನ್ನಡ ಪಕ್ಷ ಮತ್ತು ಕನ್ನಡ ಹೋರಾಟ ಬಿಡಲು ವಾಟಾಳ್ ಅವರು ಒಪ್ಪಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ವುಗೆ ವ್ಯಕ್ತಪಡಿಸಿದರು. ಮೈಸೂರು ಬ್ಯಾಂಕ್ ವೃತ್ತದ ನೃಪತುಂಗ ಮಂಟಪದಲ್ಲಿ ಭುವನೇಶ್ವರಿ ಹಾಗೂ ಅಣ್ಣಮ್ಮ ದೇವತೆಯ ವೈಭವದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು. ನಾವೆಲ್ಲರೂ ಕನ್ನಡ ನೆಲ, ಜಲ, ಭಾಷೆ, ಸಂಸ್ಕೃತಿ ಬಗ್ಗೆ ಅಭಿಮಾನ, ಪ್ರೀತಿ ಬೆಳೆಸಿಕೊಳ್ಳಬೇಕು. ನಮ್ಮ ನೆಲದಲ್ಲಿ ಕನ್ನಡದ ವಾತಾವರಣ ಬೆಳೆಸಬೇಕು. ಇದಕ್ಕಾಗಿ ಯಾರು ಯಾವುದೇ ಭಾಷೆಯಲ್ಲಿ ಮಾತನಾಡಿದರೂ ನೀವು ಕನ್ನಡದಲ್ಲೇ ಉತ್ತರ ಕೊಡಬೇಕು ಎಂದು ಕರೆ ನೀಡಿದರು. ಕನ್ನಡ ನೆಲದಲ್ಲಿ ಬದುಕು ಕಟ್ಟಿಕೊಂಡ ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಗೌರವಿಸುತ್ತಾರೆ. ಕನ್ನಡ ನೆಲದಲ್ಲಿ ನಾವು ಕನ್ನಡದಲ್ಲೇ ಮಾತಾಡುತ್ತೇವೆ ಎನ್ನುವ ಶಪಥ ಮಾಡೋಣ ಎಂದು ಕರೆ ನೀಡಿದರು. ನಮ್ಮ ಭೂಮಿ, ನಮ್ಮ ನೆಲ, ನಮ್ಮ ಜಲ, ನಮ್ಮ ಭಾಷೆ ಎನ್ನುವ…
ಬೆಂಗಳೂರು: ನಗರದಲ್ಲಿ ಗುಂಡಿ ಮುಚ್ಚಲು ವಿಧಿಸಿರುವ ಡೆಡ್ ಲೈನ್ ಮುಗಿದಿದ್ದರೂ ಇನ್ನು ಗುಂಡಿಗಳು ಹಾಗೆಯೇ ಇವೆ. ಆ ಬಗ್ಗೆ ಮಾಧ್ಯಮಗಳು ಕೇಳಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಕೇಳಿ ಎಂದಿರುವುದು ಬೇಜವಾಬ್ದಾರಿಯ ಪರಮಾವಧಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು. ಸಪ್ನ ಪುಸ್ತಕ ಮಳಿಗೆ ಪುಸ್ತಕ ಜಾತ್ರೆಯಲ್ಲಿ ಪಾಲ್ಗೊಂಡ ನಂತರ ಸಚಿವರು ಮಾಧ್ಯಮಗಳ ಜತೆ ಮಾತನಾಡಿದರು. ಶುಕ್ರವಾರದ ದಿನ ಮುಖ್ಯಮಂತ್ರಿಗಳ ಹೇಳಿಕೆ ಗಮನಿಸಿದ್ದೇನೆ. ಅವರ ಹೇಳಿಕೆ ಬೇಜವಾಬ್ದಾರಿತನದ್ದು ಎಂಬುದು ನನ್ನ ಅಭಿಪ್ರಾಯ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಾ? ಅಥವಾ ಡಿ.ಕೆ. ಶಿವಕುಮಾರ್ ಅವರಾ? ಎನ್ನುವ ಪ್ರಶ್ನೆ ಬರುತ್ತೆ. ಮುಖ್ಯಮಂತ್ರಿಗಳೇ ಸಭೆ ಮಾಡಿ ಗುಂಡಿ ಮುಚ್ಚಲು ಡೆಡ್ ಲೈನ್ ಕೊಟ್ಟಿದ್ದರು. ಆದರೆ ರಸ್ತೆಗಳಲ್ಲಿ ಗುಂಡಿಗಳು ಹಾಗೆಯೇ ಇವೆ. ಮುಖ್ಯಮಂತ್ರಿಗಳ ಮಾತಿಗೂ ಸಹ ಎಷ್ಟು ಬೆಲೆ ಅಧಿಕಾರಿಗಳು ಕೊಡುತ್ತಿದ್ದಾರೆ ಎನ್ನುವುದು ಇದರಿಂದ ಗೊತ್ತಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು. ಮುಖ್ಯಮಂತ್ರಿಗಳ ಹೇಳಿಕೆ ನೋಡಿದಾಗ ಅವರು ಈ ರಾಜ್ಯದ ಸಿಎಂ ಆಗಿ…
ಕೇರಳ: ಕೇರಳದಲ್ಲಿ ಮಂಗಳೂರಿನ ಕುಖ್ಯಾತ ರೌಡಿಶೀಟರ್ ಬರ್ಬರ ಹತ್ಯೆ ಮಾಡಲಾಗಿದೆ. ನಟೋರಿಯಸ್ ರೌಡಿಶೀಟರ್ ಟೋಪಿ ನೌಫಾಲ್ ಎಂಬಾತನನ್ನು ಬರ್ಬರ ಹತ್ಯೆ ಮಾಡಲಾಗಿದೆ. ಕೇರಳದ ಕಾಸರಗೋಡು ಜಿಲ್ಲೆಯ ಉಪ್ಪಳದ ರೈಲ್ವೆ ಗೇಟ್ ಬಳಿಯಲ್ಲಿ ಕೊಟ್ಟಿ ನೌಫಾಲ್ ಕೊಲೆ ಮಾಡಲಾಗಿದೆ. ನೌಫಾಲ್, ಫರಂಗಿಪೇಟೆ ಜೋಡಿ ಕೊಲೆ ಕೇಸ್ ನಲ್ಲಿ ಪ್ರಮುಖ ಆರೋಪಿಯಾಗಿದ್ದನು. ಮಾರಕಾಸ್ತ್ರಗಳಿಂದ ಕೊಚ್ಚಿ ನೌಫಾಲ್ ಅನ್ನು ದುಷ್ಕರ್ಮಿಗಳು ಕೊಂದಿದ್ದಾರೆ. ಮಂಗಳಿನ ಫೈಸಲ್ ನಗರದ ನಿವಾಸಿ ಟೋಪಿ ನೌಫಾಲ್ ಆಗಿದ್ದನು. ಉಪ್ಪಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/big-news-priority-given-to-teaching-kannada-in-karnatakas-madrasas-cms-announcement/ https://kannadanewsnow.com/kannada/kannada-nadu-is-the-birthplace-of-literature-and-culture-kannadigas-have-made-unique-achievements-in-all-fields-sagar-ac/
ಕೇರಳ: ಕೇರಳವು ತನ್ನ ಕಿರೀಟಕ್ಕೆ ಮತ್ತೊಂದು ಗರಿ ಸೇರಿಸುತ್ತಾ, ತೀವ್ರ ಬಡತನವನ್ನು ನಿರ್ಮೂಲನೆ ಮಾಡಿದ ಭಾರತದ ಮೊದಲ ರಾಜ್ಯವಾಯಿತು. ಇದನ್ನು ಶನಿವಾರ ರಾಜ್ಯ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಘೋಷಿಸಿದರು. ಕೇರಳ ‘ಪಿರವಿ’ ಅಥವಾ ರಚನೆಯ ದಿನದಂದು ಕರೆಯಲಾದ ಸದನದ ವಿಶೇಷ ಅಧಿವೇಶನದಲ್ಲಿ ವಿಜಯನ್ ಈ ಘೋಷಣೆ ಮಾಡಿದರು. ಇಂದಿನ ಕೇರಳ ಪಿರವಿ ಇತಿಹಾಸದಲ್ಲಿ ಒಂದು ಸ್ಥಾನವನ್ನು ಗುರುತಿಸುತ್ತದೆ ಏಕೆಂದರೆ ನಾವು ಕೇರಳವನ್ನು ತೀವ್ರ ಬಡತನವಿಲ್ಲದ ಮೊದಲ ಭಾರತೀಯ ರಾಜ್ಯವನ್ನಾಗಿ ಮಾಡುವಲ್ಲಿ ಯಶಸ್ವಿಯಾಗಿದ್ದೇವೆ. ಈ ವಿಧಾನಸಭೆಯು ಅನೇಕ ಐತಿಹಾಸಿಕ ಕಾನೂನುಗಳು ಮತ್ತು ನೀತಿ ಘೋಷಣೆಗಳಿಗೆ ಸಾಕ್ಷಿಯಾಗಿದೆ. ನವ ಕೇರಳದ ಸೃಷ್ಟಿಯಲ್ಲಿ ಮತ್ತೊಂದು ಮೈಲಿಗಲ್ಲನ್ನು ಗುರುತಿಸುವ ಕ್ಷಣದಲ್ಲಿ ವಿಧಾನಸಭೆ ಈಗ ಸಭೆ ಸೇರುತ್ತದೆ” ಎಂದು ಅವರು ಹೇಳಿದರು. 2021 ರಲ್ಲಿ ಹೊಸ ಸಚಿವಾಲಯ ಪ್ರಮಾಣವಚನ ಸ್ವೀಕರಿಸಿದ ನಂತರ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ತೀವ್ರ ಬಡತನ ನಿರ್ಮೂಲನೆಯು ಒಂದು ಪ್ರಮುಖ ನಿರ್ಧಾರವಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು. ಇದು ವಿಧಾನಸಭೆ ಚುನಾವಣೆಯ ಸಮಯದಲ್ಲಿ…
ಶಿವಮೊಗ್ಗ : ಕನ್ನಡ ನಾಡು ಸಾಹಿತ್ಯ, ಸಾಂಸ್ಕೃತಿಕ ಹಾಗೂ ಸೌಜನ್ಯತೆಯ ನೆಲವೀಡಾಗಿದ್ದು, ಕನ್ನಡಿಗರು ಎಲ್ಲಾ ಕ್ಷೇತ್ರಗಳಲ್ಲೂ ಅದ್ವಿತೀಯ ಸಾಧನೆ ಮಾಡುತ್ತಿದ್ದಾರೆ ಎಂದು ಸಾಗರ ಉಪವಿಭಾಗಾಧಿಕಾರಿ ವಿರೇಶ್ ಕುಮಾರ್ ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರೂ ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದಂತ ಅವರು, ದೇವರಾಜ ಅರಸು ಅವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ 1973ನೇ ನವೆಂಬರ್ 1ರಂದು ಕರ್ನಾಟಕ ಎಂದು ನಾಮಕರಣಗೊಂಡ ನಮ್ಮ ಕನ್ನಡ ನಾಡು ವಿಶ್ವದಾದ್ಯಂತ ತನ್ನ ಶ್ರೇಷ್ಟತೆಯ ಮೂಲಕ ಜನಮಾನಸದಲ್ಲಿ ನೆಲೆಯೂರಿದೆ. ಕನ್ನಡಿಗರು ಎಂಬ ಹೆಮ್ಮೆ ಸದಾ ನಮ್ಮಲ್ಲಿ ಇರಬೇಕು. ನಾಡುನುಡಿ ಅಸ್ತಿತ್ವವನ್ನು ಉಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ಕನ್ನಡಿಗ ಕಟಿಬದ್ದರಾಗಿರಬೇಕು. ರಾಜ್ಯ ಸರ್ಕಾರ ಕನ್ನಡ ಭಾಷೆ ಬೆಳವಣಿಗೆಗೆ ವಿಶೇಷ ಆದ್ಯತೆ ನೀಡುತ್ತಿದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು,…
ನವದೆಹಲಿ: ಇತ್ತೀಚಿನ ಅಧಿಕೃತ ಅಂಕಿಅಂಶಗಳ ಪ್ರಕಾರ, ಅಕ್ಟೋಬರ್ 2025 ರಲ್ಲಿ ಭಾರತದ ಸರಕು ಮತ್ತು ಸೇವಾ ತೆರಿಗೆ (GST) ಸಂಗ್ರಹವು ಶೇ. 4.6 ರಷ್ಟು ಹೆಚ್ಚಾಗಿ ರೂ. 1,95,936 ಕೋಟಿಗಳಿಗೆ ತಲುಪಿದೆ, ಇದು ಸೆಪ್ಟೆಂಬರ್‌ನಲ್ಲಿ ರೂ. 1,87,346 ಕೋಟಿಗಳಷ್ಟಿತ್ತು. https://kannadanewsnow.com/kannada/no-one-elses-words-are-worth-anything-except-mine-and-the-chief-ministers-dcm-d-k-shivakumar/ https://kannadanewsnow.com/kannada/big-news-priority-given-to-teaching-kannada-in-karnatakas-madrasas-cms-announcement/
ಬೆಂಗಳೂರು: “ಟನಲ್ ರಸ್ತೆ ವಿಚಾರವಾಗಿ ವಿಪಕ್ಷ ಪಕ್ಷದ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿಯೇ ಸಮಿತಿ ರಚನೆ ಮಾಡಲು ನಾನು ತಯಾರಿದ್ದೇನೆ. ಅವರು ಸೂಚಿಸಿದ ಕಡೆಯೇ ಲಾಲ್ ಬಾಗ್ ಬಳಿ ಪ್ರವೇಶ- ನಿರ್ಗಮನ ತಾಣ ರೂಪಿಸಲಾಗುವುದು.” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. ನಗರದ ಕಂಠೀರವ ಕ್ರೀಡಾಂಗಣದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು. “ಅಶೋಕ್ ಅವರು ಧರಣಿ ಕೂರುವ ಅವಶ್ಯಕತೆಯಿಲ್ಲ. ಏಕೆಂದರೆ ಅವರು ಬೆಂಗಳೂರಿನವರು. ಇಲ್ಲಿಂದ ಏಳೆಂಟು ಬಾರಿ ಗೆದ್ದಿದ್ದಾರೆ. ಅವರಿಗೂ ಜವಾಬ್ದಾರಿಯಿದೆ. ಅವರ ನೇತೃತ್ವದಲ್ಲಿ ರಚಿಸಿದ ಸಮಿತಿಯೇ ಸರ್ಕಾರಕ್ಕೆ ಸಲಹೆ, ನಿರ್ದೇಶನ ನೀಡಲಿ. ಟನಲ್ ಯೋಜನೆಯನ್ನು ಅವರೂ ಗಮನಿಸಲಿ. ಅಶ್ವಥ ನಾರಾಯಣ್ ಸೇರಿ ಬೇರೆ ಯಾರ ಹೆಸರನ್ನು ಸೂಚಿಸಿದರು ಅವರನ್ನು ಈ ಸಮಿತಿಗೆ ಸೇರ್ಪಡೆ ಮಾಡಲಾಗುವುದು. ನಾವೆಲ್ಲರೂ ಒಟ್ಟಿಗೆ ಸೇರಿ ಕೆಲಸ ಮಾಡಬೇಕು, ಮಾಡೋಣ” ಎಂದರು. “ನಾನು ಶುಕ್ರವಾರ ರಾತ್ರಿ ಲಾಲ್ ಬಾಗ್ ಬಳಿ ತೆರಳಿ ಎಲ್ಲೆಲ್ಲಿ ಟನಲ್ ರಸ್ತೆಗೆ ಪ್ರವೇಶ ಕಲ್ಪಿಸಬಹುದು ಎಂದು ಪರಿಶೀಲನೆ ಮಾಡಿದ್ದೇನೆ. ಪರ್ಯಾಯ…














