Author: kannadanewsnow09

ಮುಂಬೈ: ಮಹಾರಾಷ್ಟ್ರ ಕೇಡರ್ನ ಐಎಎಸ್ ಅಧಿಕಾರಿಗಳ ಪುತ್ರಿ 27 ವರ್ಷದ ಮಹಿಳೆ ಸೋಮವಾರ ಬೆಳಿಗ್ಗೆ ದಕ್ಷಿಣ ಮುಂಬೈನ ಮಂತ್ರಾಲಯ ಬಳಿಯ ಕಟ್ಟಡದ 10 ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾನೂನು ವಿದ್ಯಾರ್ಥಿನಿಯಾಗಿದ್ದ ಲಿಪಿ ಮುಂಜಾನೆ 4 ಗಂಟೆ ಸುಮಾರಿಗೆ ರಾಜ್ಯ ಸಚಿವಾಲಯದ ಬಳಿಯ ಕಟ್ಟಡದಿಂದ ಜಿಗಿದಿದ್ದಾರೆ. ಆಕೆಯನ್ನು ತಕ್ಷಣ ಜಿಟಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವಳು ಮೃತಪಟ್ಟಿದ್ದಾಳೆ ಎಂದು ಘೋಷಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರು ಹರಿಯಾಣದ ಸೋನಿಪತ್ನಲ್ಲಿ ಎಲ್ಎಲ್ಬಿ ಕೋರ್ಸ್ ಮಾಡುತ್ತಿದ್ದರು. ಶಿಕ್ಷಣದಲ್ಲಿ ಅವರ ಸಾಧನೆಯ ಬಗ್ಗೆ ಆತಂಕಕ್ಕೊಳಗಾಗಿದ್ದರು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. https://twitter.com/fpjindia/status/1797549657859797085 ಲಿಂಕ್ಡ್ಇನ್ನಲ್ಲಿ ಲಿಪಿ ಅವರ ಪ್ರೊಫೈಲ್ ಪ್ರಕಾರ, ಅವರು “ಭಾರತದಲ್ಲಿ ಲಕ್ಸ್ ಬ್ಯೂಟಿ ಬ್ರಾಂಡ್ಗಳನ್ನು ನಿರ್ವಹಿಸುವಲ್ಲಿ ಹಿನ್ನೆಲೆ ಹೊಂದಿರುವ ಮಾಜಿ ಮಾರ್ಕೆಟಿಂಗ್ ವೃತ್ತಿಪರರಾಗಿದ್ದರು ಮತ್ತು ಯೂನಿಲಿವರ್ ಮತ್ತು ನೈಕಾದೊಂದಿಗೆ ಕೆಲಸ ಮಾಡಿದ ಅನುಭವವನ್ನು ಹೊಂದಿದ್ದರು. “ತನ್ನ ವೃತ್ತಿಜೀವನವನ್ನು ಕಾನೂನು ವಿಭಾಗಕ್ಕೆ ತಿರುಗಿಸಲು ಲೆಕ್ಕಾಚಾರದ ನಿರ್ಧಾರವನ್ನು” ತೆಗೆದುಕೊಂಡಳು. ಕಾನೂನು ಅಧ್ಯಯನ…

Read More

ಬೆಂಗಳೂರು: ನಗರದಲ್ಲಿ ನಡೆದಿದ್ದಂತ ರೇವ್ ಪಾರ್ಟಿ ಪ್ರಕರಣ ಸಂಬಂಧ ಇಂದು ಸಿಸಿಬಿ ವಿಚಾರಣೆಗೆ ತೆಲುಗು ನಟಿ ಹೇಮಾ ಹಾಜರಾಗಿದ್ದರು. ಅವರನ್ನು ವಿಚಾರಣೆಗೆ ಒಳಪಡಿಸಿದ್ದಂತ ಸಿಸಿಬಿ ಪೊಲೀಸರು, ಬಂಧನ ಕೂಡ ಮಾಡಿದ್ದರು. ಈ ಬಳಿಕ ನ್ಯಾಯಾಧೀಶರ ಮುಂದೆ ಅವರನ್ನು ಹಾಜರುಪಡಿಸಲಾಗಿತ್ತು. ಅವರಿಗೆ ನ್ಯಾಯಾಧೀಶರು ಜೂನ್.14ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಬಳಿಯ ಫಾರ್ಮ್ ಹೌಸ್ ನಲ್ಲಿ ನಡೆಸಲಾಗಿದ್ದಂತ ರೇವ್ ಪಾರ್ಟಿ ಸಂಬಂಧ ತೆಲುಗು ನಟಿ ಹೇಮಾ ಅವರನ್ನು ಸಿಸಿಬಿ ಪೊಲೀಸರು ವಿಚಾರಣೆಯ ಬಳಿಕ ಬಂಧಿಸಿದ್ದರು. ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಂತ ಅವರನ್ನು ಬೆಂಗಳೂರು ನಗರದ ಆನೇಕಲ್ ನಲ್ಲಿರುವಂತ ಆನೇಕಲ್ ನ 4ನೇ ಸಿವಿಲ್, ಜೆಎಂಎಫ್ ಸಿ ನ್ಯಾಯಾಲಯದ ನ್ಯಾಯಧೀಶರ ಮುಂದೆ ಹಾಜರುಪಡಿಸಿದ್ದರು. ಬೆಂಗಳೂರಿನ ರೇವ್ ಪಾರ್ಟಿ ಪ್ರಕರಣ ಸಂಬಂಧ ಆನೇಕಲ್ ನ 4ನೇ ಸಿವಿಲ್, ಜೆಎಂಫ್ ಸಿ ನ್ಯಾಯಾಲಯದ ನ್ಯಾಯಮೂರ್ತಿ ಸಲ್ಮಾ ಎ ಎಸ್ ಅವರು ವಿಚಾರಣೆ ನಡೆಸಿ, ನಟಿ ಹೇಮಾ ಅವರಿಗೆ ಜೂನ್.14ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿದ್ದಾರೆ. https://kannadanewsnow.com/kannada/good-news-for-job-seekers-state-govt-orders-recruitment-of-33863-guest-teachers/…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದೇ 6ನೇ ತಾರೀಕಿನ ಒಳಗೆ ಸಚಿವ ನಾಗೇಂದ್ರರ ರಾಜೀನಾಮೆ ಪಡೆಯುವಲ್ಲಿ ವಿಳಂಬ ನೀತಿ ಅನುಸರಿಸಿದರೆ, 6ರಂದು ರಾಜ್ಯಾಧ್ಯಕ್ಷ ವಿಜಯೇಂದ್ರ, ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರ ನೇತೃತ್ವದಲ್ಲಿ ರಾಜಭವನಕ್ಕೆ ತೆರಳುತ್ತೇವೆ. ಅಲ್ಲದೆ, ರಾಜ್ಯ ಸರಕಾರವನ್ನು ವಜಾ ಮಾಡಲು ಒತ್ತಾಯಿಸುತ್ತೇವೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಮುಖ್ಯಮಂತ್ರಿಗಳನ್ನು ಎಚ್ಚರಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, 6ರಂದು ಬಿಜೆಪಿ ನಿಯೋಗವು ಈ ಸಂಬಂಧ ರಾಜ್ಯಪಾಲರನ್ನು ಒತ್ತಾಯಿಸಲಿದೆ ಎಂದು ತಿಳಿಸಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಪರಿಶಿಷ್ಟ ಪಂಗಡದ ಸಮಾಜದ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನು ಅಕ್ರಮವಾಗಿ ವರ್ಗಾಯಿಸಲಾಗಿದೆ. ಇದು ಮುಖ್ಯಮಂತ್ರಿಗಳ ಮೂಗಿನ ಅಡಿಯಲ್ಲಿ ನಡೆದ ಅಕ್ರಮವಾದ ವರ್ಗಾವಣೆ ಎಂದು ಆರೋಪಿಸಿದರು. ಆರ್ಥಿಕ ಇಲಾಖೆಯ ಸಹಮತ ಇಲ್ಲದೇ ಇಷ್ಟು ದೊಡ್ಡ ಮೊತ್ತ ವರ್ಗಾವಣೆ ಆಗಲು ಸಾಧ್ಯವಿಲ್ಲ. ಚುನಾವಣೆಗಾಗಿ ತೆಲಂಗಾಣಕ್ಕೆ ಕರ್ನಾಟಕದ ಪರಿಶಿಷ್ಟ ಪಂಗಡದವರ ಹಣ ವರ್ಗಾಯಿಸಿದ ಆರೋಪ ಇದೆ. ಕೂಡಲೇ…

Read More

ಬೆಂಗಳೂರು : ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎಲ್ಲಾ ಇಲಾಖೆಗಳು ಸರ್ವ ಸನ್ನದ್ದರಾಗಿ ಕೆಲಸ ಮಾಡಬೇಕು. ಯಾವುದೇ ಜೀವ, ಆಸ್ತಿ ಹಾನಿಯಾಗದಂತೆ ನೋಡಿಕೊಳ್ಳಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಮಳೆ ಹಾನಿ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಅಧಿಕಾರಿಗಳ ಸಭೆ ನಡೆಸಿದ ನಂತರ ಡಿಸಿಎಂ ಅವರು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಅವರು ಹೇಳಿದ್ದಿಷ್ಟು; 1533 ಗೆ ಸಾರ್ವಜನಿಕರು ಕರೆ ಮಾಡಿ ಮಳೆ ಹಾನಿ ಸಂಬಂಧಿಸಿದಂತೆ ತಕ್ಷಣ ದೂರು ನೀಡಬಹುದು. ಅಪಾಯಕಾರಿ ಮರ ತೆರವಿಗೆ ಅರಣ್ಯ ಇಲಾಖೆ ಮತ್ತು ಬಿಬಿಎಂಪಿ ಜಂಟಿಯಾಗಿ ಸಮೀಕ್ಷೆ ನಡೆಸಿ ಕಾರ್ಯ ನಿರ್ವಹಿಸಬೇಕು. ತಗ್ಗು ವಸತಿ ಪ್ರದೇಶಗಳಿಗೆ ನೀರು ನುಗ್ಗದಂತೆ ಉತ್ತಮ ಸಾಮರ್ಥ್ಯದ ಪಂಪ್ ಸೆಟ್, ಜನರೇಟರ್ ಗಳು ಹಾಗೂ ಹೆಚ್ಚು ನೀರು ಹರಿಯುವ ರಾಜಕಾಲುವೆ ಬಳಿ ಜೆಸಿಬಿ, ಟಿಪ್ಪರ್ ಗಳನ್ನು ಮುನ್ನೆಚರಿಕೆ ಕ್ರಮವಾಗಿ ಸಿದ್ದ ಮಾಡಿಕೊಂಡಿರಬೇಕು. ಎನ್ ಡಿಆರ್ ಎಫ್ ತಂಡದೊಟ್ಟಿಗೂ ಸಂಪರ್ಕದಲ್ಲಿ ಇರಬೇಕೆಂದು…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಆರೋಗ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳ ವರ್ಗಾವಣೆಗೆ ಅನುಮತಿ ನೀಡಲಾಗಿದೆ. ಈ ಮೂಲಕ ವರ್ಗಾವಣೆ ನಿರೀಕ್ಷೆಯಲ್ಲಿದ್ದಂತ ರಾಜ್ಯದ ಆರೋಗ್ಯ ಇಲಾಖೆಯ ನೌಕರರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ-1 ಅವರು ಆರೋಗ್ಯ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ 2024-25 ನೇ ಸಾಲಿನ ವರ್ಗಾವಣೆಯನ್ನು ‘ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ವೈದ್ಯಾಧಿಕಾರಿಗಳು ಮತ್ತು ಇತರೆ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ) ಕಾಯ್ಕೆ’ಯಂತೆ ಕೈಗೊಳ್ಳಲು ಅನುಮತಿ ನೀಡಲಾಗುತ್ತಿದೆ ಎಂದಿದ್ದಾರೆ. ಪುಸ್ತಾವನೆಯನ್ನು ಪರಿಶೀಲಿಸಿದ ಕರ್ನಾಟಕ ನಾಗರೀಕ ಸೇವಾ (ವೈದ್ಯಾಧಿಕಾರಿಗಳ ಹಾಗೂ ಇತರೆ ಸಿಬ್ಬಂದಿಗಳ ವರ್ಗಾವಣೆ) ಕಾಯ 2011 ಹಾಗೂ ಕಾಲಕಾಲಕ್ಕೆ ಹೊರಡಿಸಲಾದ ತಿದ್ದುಪಡಿ ಕಾಯ್ದೆಗಳಡಿ ಹಾಗೂ ಈ ಕಾಯ್ದೆಯಡಿ ರಚಿಸಲಾಗಿರುವ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೊಳಪಡಿಸಿ ಸರ್ಕಾರ ಸಹಮತಿ ನೀಡಿದೆ ಎಂದು ತಿಳಿಸಿದ್ದಾರೆ. ಮುಂದುವರೆದು, ಪುಸ್ತುತ ಜಾರಿಯಲ್ಲಿರುವ ಚುನಾವಣಾ ನೀತಿ ಸಂಹಿತೆಯು ತರವಾದ ನಂತರ, ಪುಸ್ತಾಪಿತ ವರ್ಗಾವಣಾ ಪ್ರಕ್ರಿಯೆಯನ್ನು ಕೈಗೊಂಡು, ಜುಲೈ…

Read More

ಬೆಂಗಳೂರು: ರಾಜ್ಯಾಧ್ಯಂತ ಶಾಲೆಗಳು ಆರಂಭಗೊಂಡಿವೆ. 2024-25ನೇ ಸಾಲಿನ ಶೈಕ್ಷಣಿಕ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಶಾಲೆಗಳಿಗೆ ವಿದ್ಯಾರ್ಥಿಗಳು ತೆರಳುತ್ತಿದ್ದು, ಶೈಕ್ಷಣಿಕ ವರ್ಷಾರಂಭದ ಮೊದಲೇ ಪಠ್ಯಪುಸ್ತಕ, ಸಮವಸ್ತ್ರವನ್ನು ವಿದ್ಯಾರ್ಥಿಗಳಿಗೆ ಲಭ್ಯವಾಗುವಂತೆ ಸರ್ಕಾರ ಮಾಡಿತ್ತು. ಈ ಬೆನ್ನಲ್ಲೇ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಕುಂಠಿತಗೊಳ್ಳಬಾರದು ಎನ್ನುವ ಕಾರಣಕ್ಕೆ ಬರೋಬ್ಬರಿ 33,863 ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಜ್ಞಾಪನ ಹೊರಡಿಸಿದ್ದು, 2024-25 ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಖಾಯಂ ಶಿಕ್ಷಕರ ನೇಮಕವಾಗುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಯಾವುದು ಮೊದಲೂ ಅಲ್ಲಿಯವರೆಗೆ ಶಿಕ್ಷಕರ ಕೊರತೆಯನ್ನು ನೀಗಿಸುವ ದೃಷ್ಟಿಯಿಂದ ಒಟ್ಟು 35000, ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಉಲ್ಲೇಖ-01ರ ಸರ್ಕಾರದ ಪತ್ರದಲ್ಲಿ ಅನುಮತಿ ನೀಡಲಾಗಿದೆ ಎಂದಿದ್ದಾರೆ. ಒಟ್ಟು-35000. ಹುದ್ದೆಗಳಿಗೆ ಅಥಿತಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಸರ್ಕಾರ ಸಹಮತಿಸಿದ್ದು ಪ್ರಸ್ತುತ ರಾಜ್ಯದ ಸರ್ಕಾರಿ…

Read More

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದ್ದಂತ ಕೋಟ್ಯಂತರ ಹಣ ಅವ್ಯವಹಾರ ಆರೋಪ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಇಂದು ಕಚೇರಿಯ ಮೇಲೆ ದಾಳಿ ನಡೆಸಿದ್ದಾರೆ. ಈ ಮೂಲಕ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಬೆಂಗಳೂರಿನ ವಸಂತನಗರದಲ್ಲಿರುವಂತ ವಾಲ್ಮೀಕಿ ಅಭಿವೃದ್ಧಿ ನಿಗಮದ ಕಚೇರಿಯ ಮೇಲೆ ಎಸ್ ಐ ಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ಇಬ್ಬರು ಆರೋಪಿಗಳ ಜೊತೆಗೆ ಸ್ಥಳ ಮಹಜರನ್ನು ಎಸ್ಐಟಿ ಅಧಿಕಾರಿಗಳು ನಡೆಸುತ್ತಿದ್ದಾರೆ. ಬೆಂಗಳೂರಿನ ವಸಂತನಗರದಲ್ಲಿರುವಂತ ವಾಲ್ಮೀಕಿ ಅಭಿವೃದ್ಧಿ ನಿಗಮದ ಕಚೇರಿಯ ಮೇಲೆ ದಾಳಿ ನಡೆಸಿರುವಂತ ಎಸ್ಐಟಿ ಅಧಿಕಾರಿಗಳು ಡಿಜಿಟಲ್ ಎವಿಡೆನ್ಸ್ ಗಾಗಿ ಕಚೇರಿಯಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಈಗಾಗಲೇ ರಾಜ್ಯ ಸರ್ಕಾರ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ತನಿಖೆಯನ್ನು ಚುರುಕುಗೊಳಿಸಿದ್ದಂತ ಎಸ್ಐಟಿ ಅಧಿಕಾರಿಗಳು ನಿಗಮದ ಇಬ್ಬರು ಅಧಿಕಾರಿಗಳನ್ನು ಬಂಧಿಸಿದ್ದರು. ಅಲ್ಲದೇ ಹೆಚ್ಚಿನ ವಿಚಾರಣೆಗಾಗಿ ಕೋರ್ಟ್ ಮೂಲಕ ತಮ್ಮ ವಶಕ್ಕೆ ಪಡೆದಿದ್ದಾರೆ. ಈಗ ನಿಗಮದ ಕಚೇರಿಯ ಮೇಲೆ ದಾಳಿ ನಡೆಸಿದ್ದಾರೆ. https://kannadanewsnow.com/kannada/wont-be-surprised-if-siddaramaiah-govt-brands-peddler-as-innocent-just-because-he-is-brother-bjp/ https://kannadanewsnow.com/kannada/case-registered-against-dr-sudhakar-for-misusing-state-governments-letterhead/

Read More

ನವದೆಹಲಿ: ವೆಸ್ಟ್ ಇಂಡೀಸ್ ಮತ್ತು ಯುಎಸ್ಎಯಲ್ಲಿ ಜೂನ್ 2 ರಿಂದ ಆಯೋಜಿಸಲಾಗುತ್ತಿರುವ ಟಿ 20 ವಿಶ್ವಕಪ್ ( T20 World Cup ) ಅನ್ನು ಡಿಡಿ ಫ್ರೀ ಡಿಶ್ ಪ್ಲಾಟ್ಫಾರ್ಮ್ನಲ್ಲಿ ಪ್ರಸಾರ ಮಾಡುವುದಾಗಿ ಪ್ರಸಾರ ಭಾರತಿ ಇಂದು ಪ್ರಕಟಿಸಿದೆ. ದೂರದರ್ಶನವು ಹಲವಾರು ಪ್ರಮುಖ ಜಾಗತಿಕ ಅಂತರರಾಷ್ಟ್ರೀಯ ಕ್ರೀಡಾಕೂಟಗಳ ಪ್ರಸಾರದೊಂದಿಗೆ ಟಿ 20 ವಿಶ್ವ ಕಪ್ ನ ಉನ್ನತ ಮಟ್ಟದ ಪ್ರಸಾರವನ್ನು ಅನುಸರಿಸುತ್ತದೆ. ಇದರಲ್ಲಿ ಪ್ಯಾರಿಸ್ ಒಲಿಂಪಿಕ್ಸ್ ಗೇಮ್ಸ್ 2024 (ಜುಲೈ 26-ಆಗಸ್ಟ್ 11, 2024), ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ಗೇಮ್ಸ್ (ಆಗಸ್ಟ್ 28 ರಿಂದ ಸೆಪ್ಟೆಂಬರ್ 8, 2024), ಭಾರತ ವಿರುದ್ಧ ಜಿಂಬಾಬ್ವೆ (ಜುಲೈ 6 ರಿಂದ ಜುಲೈ 1, 2024) ಮತ್ತು ಭಾರತ ವಿರುದ್ಧ ಶ್ರೀಲಂಕಾ (ಜುಲೈ 27 ರಿಂದ ಆಗಸ್ಟ್ 7, 2024) ಮತ್ತು ಫ್ರೆಂಚ್ ಓಪನ್ 2024 ರ ಮಹಿಳಾ ಮತ್ತು ಪುರುಷರ ಫೈನಲ್ಸ್ನ ನೇರ ಪ್ರಸಾರ ಮತ್ತು ಮುಖ್ಯಾಂಶಗಳು ಸೇರಿವೆ. ಪ್ರಸಾರ ಭಾರತಿ ಸಿಇಓ ಗೌರವ್ ದ್ವಿವೇದಿ…

Read More

ಬೆಂಗಳೂರು: ಕಳೆದ 24 ವರ್ಷದಿಂದ ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಅನುಕಂಪದ ಆಧಾರದ ನೌಕರಿಗೆ ಸೇರಿದ್ದಂತ ಅವರು ಸಹಾಯ ಆಡಳಿತಾಧಿಕಾರಿಯಾಗಿಯೂ ಕೆಲಸ ಮಾಡ್ತಿದ್ದರು. ಆದ್ರೇ 24 ವರ್ಷಗಳ ಬಳಿಕ ಸುಳ್ಳಿ ಆದಾಯ ಪ್ರಮಾಣ ಪತ್ರ ನೀಡಿದ ಕಾರಣಕ್ಕೆ ರಾಜ್ಯ ಸರ್ಕಾರ ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರಾದಂತ ಡಿ.ರಂದೀಪ್ ಅವರು ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಆರ್. ವಾಣಿ, ಸಹಾಯಕ ಆಡಳಿತಾಧಿಕಾರಿಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ, ಆರೋಗ್ಯ ಸೌಧ, ಬೆಂಗಳೂರು ಇವರು ಅಕ್ರಮವಾಗಿ ಅನುಕಂಪದ ಆಧಾರದ ಮೇಲೆ ಸರ್ಕಾರಿ ನೇಮಕಾತಿ ಪಡೆದಿರುತ್ತಾರೆಂಬ ಎಂದು ಸಿ. ಆರ್. ಮಂಜುನಾಥ ಹಾಸನ ಶಿವಣ್ಣ ಕೆ.ಹೆಚ್. ಮತ್ತು ಮಂಜುನಾಥ ನಿಲಸೋಗೆ ಬೆಂಗಳೂರು ಇವರುಗಳು ಮೇಲೆ ಓದಲಾದ (1) ಮತ್ತು (2)ರಲ್ಲಿ ದೂರು ಸಲ್ಲಿಸಿದ್ದು ಸದರಿ ದೂರಿಗೆ ಸಂಬಂಧಿಸಿದಂತೆ ಮುಖ್ಯ ಜಾಗೃತಾಧಿಕಾರಿಗಳು, ಜಾಗೃತಕೋಶ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, ಬೆಂಗಳೂರು ಇವರು…

Read More

ನವದೆಹಲಿ: ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (International Cricket Council -ICC) ಸೋಮವಾರ ಪುರುಷರ ಟಿ 20 ವಿಶ್ವಕಪ್ 2024 ಗಾಗಿ ( Men’s T20 World Cup 2024 ) 11.25 ಮಿಲಿಯನ್ ಡಾಲರ್ ಬಹುಮಾನದ ಮೊತ್ತವನ್ನು ಘೋಷಿಸಿದೆ. “ಐಸಿಸಿ ಪುರುಷರ ಟಿ 20 ವಿಶ್ವಕಪ್ 2024 ರ ವಿಜೇತರು ಕನಿಷ್ಠ 2.45 ಮಿಲಿಯನ್ ಡಾಲರ್ ಪಡೆಯಲಿದ್ದಾರೆ – ಇದು ಈವೆಂಟ್ ಇತಿಹಾಸದಲ್ಲಿ ಅತಿ ಹೆಚ್ಚು ಬಹುಮಾನದ ಮೊತ್ತವಾಗಿದೆ” ಎಂದು ಐಸಿಸಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ. ಪಂದ್ಯಾವಳಿಯ ಒಂಬತ್ತನೇ ಆವೃತ್ತಿಯು ವೆಸ್ಟ್ ಇಂಡೀಸ್ ಮತ್ತು ಯುಎಸ್ಎಯ ಒಂಬತ್ತು ಸ್ಥಳಗಳಲ್ಲಿ 28 ದಿನಗಳ ಅವಧಿಯಲ್ಲಿ 20 ತಂಡಗಳು ಭಾಗವಹಿಸಲಿದ್ದು, ಇದು ಈ ರೀತಿಯ ಅತಿದೊಡ್ಡ ಘಟನೆಯಾಗಿದೆ. ರನ್ನರ್ ಅಪ್ ಸ್ಥಾನ ಪಡೆಯುವವರು ಕನಿಷ್ಠ 1.28 ಮಿಲಿಯನ್ ಡಾಲರ್ ಪಡೆಯಲಿದ್ದು, ಸೆಮಿಫೈನಲ್ನಲ್ಲಿ ಸೋತ ತಂಡಗಳು ತಲಾ 787,500 ಡಾಲರ್ ಪಡೆಯಲಿದ್ದಾರೆ. ಎರಡನೇ ಸುತ್ತನ್ನು ದಾಟಲು ವಿಫಲವಾದ ತಂಡಗಳು ತಲಾ $ 382,500 ಮತ್ತು ಒಂಬತ್ತನೇ…

Read More