Author: kannadanewsnow09

ಬೆಂಗಳೂರು: ರಾಜ್ಯ ಚುನಾವಣಾ ಆಯೋಗವು ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ | ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸಲು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 308ಎಎ ಮತ್ತು 308ಎಬಿ ರನ್ವಯ ಚುನಾವಣಾ ವೇಳಾಪಟ್ಟಿಯನ್ನು ಈ ಕೆಳಕಂಡಂತೆ ಘೋಷಿಸಿದೆ. ವಿವಿಧ ಕಾರಣಗಳಿಂದ ಖಾಲಿ ಇರುವ / ತೆರವಾಗಿರುವ ಉಪ ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿಗಳ ಸದಸ್ಯ ಸ್ಥಾನಗಳ ಸಂಖ್ಯಾ ವಿವರಗಳನ್ನು ಲಗತ್ತಿಸಿರುವ ಅನುಬಂಧ ದಲ್ಲಿ ತೋರಿಸಲಾಗಿದೆ. ದಿನಾಂಕ 06-11-2024ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದಾರೆ. ದಿನಾಂಕ 12-11-2024 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ. ದಿನಾಂಕ 13-11-2024ರಂದು ನಾಮಪತ್ರಗಳನ್ನು ಪರಿಶೀಲನೆ ನಡೆಸಲಾಗುತ್ತದೆ. ದಿನಾಂಕ 15-11-2024ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ದಿನಾಂಕ 23-11-2024ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಮರು ಮತದಾನ ಅವಶ್ಯಕತೆ ಇದ್ದರೇ ದಿನಾಂಕ 25-11-2024ರಂದು ನಡೆಸಲು ನಿಗದಿ ಪಡಿಸಲಾಗಿದೆ. ದಿನಾಂಕ 26-11-2024ರಂದು ಬೆಳಿಗ್ಗೆ 8ರಿಂದ…

Read More

ಬೆಂಗಳೂರು: ರಾಜ್ಯ ಚುನಾವಣಾ ಆಯೋಗದಿಂದ ಗ್ರಾಮ ಪಂಚಾಯ್ತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ, ತೆರವಾಗಿರುವ 641 ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸಲು ದಿನಾಂಕ ಘೋಷಿಸಲಾಗಿದೆ. ನವೆಂಬರ್.23ಕ್ಕೆ ಮತದಾನ ನಿಗದಿ ಪಡಿಸಿದ್ದರೇ, ನವೆಂಬರ್.25ರಂದು ಮತಏಣಿಕೆ ನಡೆದು ಫಲಿತಾಂಶ ಪ್ರಕಟಿಸಲಾಗುತ್ತದೆ. ಈ ಕುರಿತಂತೆ ಇಂದು ರಾಜ್ಯ ಚುನಾವಣಾ ಆಯೋಗದಿಂದ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದ್ದು, ಗ್ರಾಮ ಪಂಚಾಯ್ತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ, ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ವೇಳಾಪಟ್ಟಿಯನ್ನು ಪ್ರಕಟಿಸಿದೆ ಎಂದಿದೆ. ದಿನಾಂಕ 06-11-2024ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದಾರೆ. ದಿನಾಂಕ 12-11-2024 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ. ದಿನಾಂಕ 13-11-2024ರಂದು ನಾಮಪತ್ರಗಳನ್ನು ಪರಿಶೀಲನೆ ನಡೆಸಲಾಗುತ್ತದೆ. ದಿನಾಂಕ 15-11-2024ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ದಿನಾಂಕ 23-11-2024ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಮರು ಮತದಾನ ಅವಶ್ಯಕತೆ ಇದ್ದರೇ ದಿನಾಂಕ 25-11-2024ರಂದು ನಡೆಸಲು ನಿಗದಿ ಪಡಿಸಲಾಗಿದೆ. ದಿನಾಂಕ 26-11-2024ರಂದು ಬೆಳಿಗ್ಗೆ 8ರಿಂದ ಮತಏಣಿಕೆ ನಡೆಸಿ,…

Read More

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ಮಹಾನಗರದ ಸಾರ್ವಜನಿಕರು ಮತ್ತು ಉದ್ಯಮಗಳಿಗೆ ಇನ್ನೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅತ್ಯಗತ್ಯವಾಗಿದೆ. ಇದಕ್ಕಾಗಿ ಸರಕಾರವು ಐದು ಸ್ಥಳಗಳನ್ನು ಗುರುತಿಸಿದೆ. ಆದರೆ ಇವುಗಳ ಪೈಕಿ ಯಾವುದನ್ನೂ ಆಖೈರು ಮಾಡಿಲ್ಲ. ಈ ಸಂಬಂಧ ಇನ್ನೊಂದು ವಾರದಲ್ಲಿ ಸಭೆ ಸೇರಿ, ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ. ಶುಕ್ರವಾರ ಅವರು ತಮ್ಮ ಕಚೇರಿಯಲ್ಲಿ ಕರೆದಿದ್ದ ಮಹತ್ತ್ವದ ಸಭೆಯ ನಂತರ ಈ ವಿಚಾರ ಹೇಳಿದ್ದಾರೆ. ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಭಾಗವಹಿಸಿದ್ದರು. ಸಭೆಯ ಬಳಿಕ ಮಾತನಾಡಿದ ಪಾಟೀಲ ಅವರು, `ಎರಡನೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸ್ಥಳವನ್ನು ಈಗಾಗಲೇ ತೀರ್ಮಾನಿಸಲಾಗಿದೆ ಎನ್ನುವ ವರದಿಗಳಿಗೆ ಆಧಾರವಿಲ್ಲ. ಡಾಬಸಪೇಟೆ, ನೆಲಮಂಗಲ, ಬಿಡದಿ, ಹಾರೋಹಳ್ಳಿ ಸೇರಿದಂತೆ ಒಟ್ಟು ಐದು ಸ್ಥಳಗಳನ್ನು ನಾವು ಮುಕ್ತವಾಗಿ ಇಟ್ಟುಕೊಂಡಿದ್ದೇವೆ. ಇವತ್ತು ಇನ್ನೂ ಒಂದು ಸ್ಥಳದ ಬಗ್ಗೆ ಯೂ ಚರ್ಚೆ ಆಗಿದೆ. ಇವುಗಳ…

Read More

ಬೆಂಗಳೂರು; ಮಾರ್ಚ್ 2025ರಲ್ಲಿ ನಡೆಯಲಿರುವ ಎಸ್ ಎಸ್ ಎಲ್ ಸಿ ಪರೀಕ್ಷೆ-1ಕ್ಕೆ ವಿದ್ಯಾರ್ಥಿಗಳ ನೋಂದಣಿ ಮಾಹಿತಿಗಳನ್ನು ಮಂಡಳಿಯ ಜಾಲತಾಣದ ಶಾಲಾ ಲಾಗಿನ್ ನಲ್ಲಿ ಅಪ್ ಲೋಡ್ ಮಾಡುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿಯನ್ನು ಬಿಡುಗಡೆ ಮಾಡಲಾಗಿದೆ. ಈ ಸಂಬಂಧ ಸುತ್ತೋಲೆ ಹೊರಡಿಸಲಾಗಿದ್ದು,  ದಿನಾಂಕ: 21-09-2023 ರನ್ವಯ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ವತಿಯಿಂದ 2023-24ನೇ ಸಾಲಿನಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಗಳನ್ನು ಪರೀಕ್ಷೆ-1, ಪರೀಕ್ಷೆ-2 ಮತ್ತು ಪರೀಕ್ಷೆ -3 ಎಂಬ ಹೆಸರಿನಲ್ಲಿ ನಡೆಸಲಾಗುತ್ತಿದೆ. ಮಾರ್ಚ್-2025 ರಲ್ಲಿ ನಡೆಯುವ ಎಸ್.ಎಸ್.ಎಲ್.ಸಿ. ಪರೀಕ್ಷೆ – 1 ಕ್ಕೆ ಅರ್ಹ ಅಭ್ಯರ್ಥಿಗಳ ನೋಂದಣಿ ಮಾಹಿತಿಗಳನ್ನು ಮಂಡಲಿಯ ಜಾಲತಾಣದ (https://kseab.karnataka.gov.in)) ಶಾಲಾ ಲಾಗಿನ್‌ನಲ್ಲಿ ಪಡೆಯಲು ಯೋಜಿಸಲಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಮಾನ್ಯತೆ ಪಡೆದಿರುವ ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ ಮುಖ್ಯಸ್ಥರು ತಮ್ಮ ಶಾಲೆಯ (ಶಾಲಾ ಅಭ್ಯರ್ಥಿ, ಖಾಸಗಿ ಅಭ್ಯರ್ಥಿ ಪುನರಾವರ್ತಿತ ಶಾಲಾ ಹಾಗೂ ಖಾಸಗಿ ಅಭ್ಯರ್ಥಿಗಳು) ಮಾರ್ಚ್-2025 ರ ಎಸ್.ಎಸ್.ಎಲ್.ಸಿ. ಪರೀಕ್ಷೆ -…

Read More

ಬೆಂಗಳೂರು: 2024-25ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ ಪ್ರಕ್ರಿಯೆ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಮಾರ್ಗಸೂಚಿ ಪ್ರಕಟಿಸಲಾಗಿದೆ. ಇಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದ್ದು,  ದಿನಾಂಕ:21.09.2023ರನ್ವಯ 2023-24ನೇ ಸಾಲಿನಿಂದ ಜಾರಿಗೆ ಬರುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ವತಿಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಪರೀಕ್ಷೆ-1, ಪರೀಕ್ಷೆ-2 ಮತ್ತು ಪರೀಕ್ಷೆ-3 ಎಂದು ಹೆಸರಿಸಿ. ಹಂತ ಹಂತವಾಗಿ ಪರೀಕ್ಷೆಯನ್ನು ನಡೆಸಲಾಗುತ್ತಿದೆ ಎಂದಿದೆ. 2025ರ ಮಾರ್ಚ್/ಏಪ್ರಿಲ್ ಮಾಹೆಯಲ್ಲಿ ನಡೆಯಲಿರುವ ಎಸ್‌.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ, ಅನುದಾನರಹಿತ ಪ್ರೌಢ ಶಾಲಾ/ ಕಾಲೇಜುಗಳಿಂದ (ಪ್ರೌಢ ಶಾಲಾ ವಿಭಾಗ) ಹಾಜರಾಗುವ ಅರ್ಹ ವಿದ್ಯಾರ್ಥಿಗಳನ್ನು ನೋಂದಾಯಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹಾಗೆಯೇ ಖಾಸಗಿ ಅಭ್ಯರ್ಥಿಗಳು ಮತ್ತು ಪುನರಾವರ್ತಿತ ಅಭ್ಯರ್ಥಿಗಳು ಸಹ ಈ ಪರೀಕ್ಷೆಗೆ ನೋಂದಾಯಿಸಲು ಅರ್ಜಿಗಳನ್ನು ಶಾಲೆಗಳ ಮುಖಾಂತರ ಸಲ್ಲಿಸಬಹುದಾಗಿದೆ. ಸದರಿ ಶಾಲೆಗಳ ಮುಖ್ಯ ಶಿಕ್ಷಕರು ತಮ್ಮ…

Read More

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟಪಡಿಸಿದ್ದಾರೆ. ನವದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ, ಬೆಂಗಳೂರಿನಲ್ಲಿ ದಾಖಲಾಗಿರುವ ಬಿಜೆಪಿ ಟಿಕೆಟ್ ವಂಚನೆ ಪ್ರಕರಣದ ಬಗ್ಗೆ ಅವರು ಸ್ಪಷ್ಟನೆ ನೀಡಿದರು. ಮೊದಲನೆಯದಾಗಿ ನನಗೆ ಯಾರೂ ಸಹೋದರಿ ಇಲ್ಲ. ಇನ್ನು, ನನ್ನ ತಾಯಿಗೆ ಗೋಪಾಲ್ ಜೋಶಿ ಸೇರಿ ನಾಲ್ವರು ಮಕ್ಕಳು. ಆದರೆ, ಗೋಪಾಲ್ ಜೋಶಿ ಅವರೊಂದಿಗೆ ಕಳೆದ 32 ವರ್ಷಗಳಿಂದ ತಮ್ಮ ಸಂಪರ್ಕ, ಸಂಬಂಧವಿಲ್ಲ ಎಂದು ಆರೋಪವನ್ನು ತಳ್ಳಿ ಹಾಕಿದರು. ಗೋಪಾಲ್ ಜೋಶಿ ಮಾತ್ರವಲ್ಲ ಯಾರೇ ತಮ್ಮ ಕೆಲಸ ಕಾರ್ಯಗಳಿಗೆ ನನ್ನ ಹೆಸರು ದುರುಪಯೋಗ ಪಡಿಸಿಕೊಳ್ಳುತ್ತಿದ್ದರೆ ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಪ್ರಲ್ಹಾದ ಜೋಶಿ ಪುನರುಚ್ಚರಿಸಿದರು. ಯಾರೊಂದಿಗೂ ನನ್ನ ಹೆಸರು ಉಲ್ಲೇಖಿಸದಂತೆ 2013ರಲ್ಲೇ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್‌ ತಡೆಯಾಜ್ಞೆ ನೀಡಿದೆ. ನ್ಯಾಯಾಲದ ಅಫಿಡವಿಟ್ ನಲ್ಲಿ ಅದರ ವಿವರವಿದೆ ಎಂದು ದಾಖಲೆ ಸಮೇತ ಸ್ಪಷ್ಟನೆ ನೀಡಿದರು ಪ್ರಲ್ಹಾದ…

Read More

ಕರ್ಪೂರವನ್ನು ಉರಿಸುವುದರಿಂದ ಬೂದಿ ಉಳಿಯುವುದಿಲ್ಲ. ಹೇಗೆ ಕರ್ಪೂರ ಉರಿದು ಗಾಳಿಯಲ್ಲಿ ಕರಗುತ್ತದೆಯೋ ಹಾಗೆಯೇ ನಿಮ್ಮ ಜೀವನದಲ್ಲಿ ಒಂದು ರೂಪಾಯಿ ಸಾಲವೂ ಉಳಿಯುವುದಿಲ್ಲ. ನಿಮ್ಮ ಎಲ್ಲಾ ಸಾಲಗಳು ಶೀಘ್ರದಲ್ಲೇ ಗಾಳಿಯಲ್ಲಿ ಮಾಯವಾಗುತ್ತವೆ. ಶುಕ್ರವಾರ ರಾತ್ರಿ ನಿಮ್ಮ ಮನೆಯಲ್ಲಿ ಭೈರವನ ಸ್ಮರಿಸಿ ಈ ಪೂಜೆ ಮಾಡಿದರೆ. ಎಂತಹ ಅದ್ಭುತ ಪರಿಹಾರ. ಇದು ತುಂಬಾ ಖರ್ಚಾಗುತ್ತದೆಯೇ, ಯಾವುದೇ ಪ್ರಮುಖ ಕೆಲಸ ಇರುತ್ತದೆಯೇ, ಏನೂ ಇಲ್ಲ. ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ 9686268564 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇ‍ಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಎಷ್ಟೇ ಪ್ರಯತ್ನ ಜೀವನದಲ್ಲಿ ಏಳಿಗೆ ಅಭಿವೃದ್ಧಿ ಆಗದೆ ನೋಂದಿದ್ದರೆ ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ…

Read More

ಬೆಂಗಳೂರು: ಮಾರ್ಚ್-2025ರಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ-1 ನಡೆಯಲಿದೆ. ಅಲ್ಲದೇ ಅದೇ ತಿಂಗಳಲ್ಲೇ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೂ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಗೆ ವಿದ್ಯಾರ್ಥಿಗಳು ನೋಂದಾಯಿಸಿಕೊಳ್ಳುವ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯಿಂದ ಮಹತ್ವದ ಮಾಹಿತಿ ನೀಡಲಾಗಿದೆ. ಈ ಸಂಬಂಧ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಶಾಲಾ ಶಿಕ್ಷಣ ಇಲಾಖೆಯು,  2025ರ ಮಾರ್ಚ್/ಏಪ್ರಿಲ್ ಮಾಹೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ, ಅನುದಾನರಹಿತ ಪ್ರೌಢ ಶಾಲಾ/ ಕಾಲೇಜುಗಳಿಂದ (ಪ್ರೌಢ ಶಾಲಾ ವಿಭಾಗ) ಹಾಜರಾಗುವ ಅರ್ಹ ಶಾಲಾ ವಿದ್ಯಾರ್ಥಿಗಳ (CCERF), ಖಾಸಗಿ ಅಭ್ಯರ್ಥಿಗಳ (CCEPF) ಮತ್ತು ಪುನರಾವರ್ತಿತ ಅಭ್ಯರ್ಥಿಗಳ (CCERR, CCEPR) ನೋಂದಣಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಶಾಲಾ ಮುಖ್ಯ ಶಿಕ್ಷಕರು ತಮ್ಮ ಶಾಲೆಯಿಂದ ವಿದ್ಯಾರ್ಥಿಗಳ ವಿವರಗಳನ್ನು ಮಂಡಳಿಯ https://kseab.karnataka.gov.in ಜಾಲತಾಣದ ಶಾಲಾ ಲಾಗಿನ್ ಮೂಲಕ ಅಪ್‌ಲೋಡ್ ಮಾಡುವುದು ಎಂದಿದೆ. ಹಾಗೆಯೇ ಮಾರ್ಚ್ 2025ರ ಮಾಹೆಯಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ಖಾಸಗಿ…

Read More

ಬೆಂಗಳೂರು: ಇಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಬೆಂಗಳೂರಲ್ಲಿ ಮತ್ತೊಂದು ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆ ಮಹತ್ವದ ಸಭೆಯನ್ನು ಉನ್ನತ ಮಟ್ಟದ ಅಧಿಕಾರಿಗಳ ಜೊತೆಗೆ ನಡೆಸಲಾಯಿತು. ಬೆಂಗಳೂರು ಹೊರವಲಯದಲ್ಲಿ 2ನೇ ವಿಮಾನ ನಿಲ್ದಾಣ ಪ್ರಕ್ರಿಯೆ ಚುರುಕು ಗೊಳಿಸುವ ಸಂಬಂಧ ಇಂದು ಡಿಸಿಎಂ ಡಿಸಿಎಂ ಡಿಕೆ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ KIADB, BMRCL, BMRDA, BDA ಸಂಬಂಧಿಸಿದ ಇನ್ನಿತರೆ ಇಲಾಖೆಗಳ ಉನ್ನತ ಅಧಿಕಾರಿಗಳೊಂದಿಗೆ ಮತ್ತೊಂದು ಸುತ್ತಿನ ಚರ್ಚೆ ನಡೆಸಲಾಯಿತು. ಈ ಯೋಜನೆಗೆ ಸಂಬಂಧಿಸಿದಂತೆ ವೈಜ್ಞಾನಿಕ ಅಧ್ಯಯನವನ್ನು ಈಗಾಗಲೇ ಕೈಗೊಳ್ಳಲಾಗಿದ್ದು, ಅದರಂತೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ (ಎಎಐ) ಪ್ರಸ್ತಾವನೆ ಸಲ್ಲಿಸಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಬೆಂಗಳೂರಿನಲ್ಲಿ ಫಾರ್ಚೂನ್ 500 ಕಂಪೆನಿಗಳು ಸೇರಿದಂತೆ ಹಲವು ಕಂಪೆನಿಗಳು ಸ್ಥಾಪನೆಗೊಂಡಿವೆ. ಜಾಗತಿಕ ಮಟ್ಟದ ಜ್ಞಾನ, ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಗಳು, ಶಿಕ್ಷಣ, ಆರೋಗ್ಯ ಮತ್ತು ವಿಜ್ಞಾನ ವಲಯದ ಶ್ರೇಷ್ಠ ಸಂಸ್ಥೆಗಳುಳ್ಳ ಕ್ವಿನ್ ಸಿಟಿ ಅಸ್ತಿತ್ವಕ್ಕೆ ಬರುತ್ತಿದೆ. ಈ ಕಾರಣದಿಂದ ಈಗಿನ ವಿಮಾನ ನಿಲ್ದಾಣದ ಮೇಲಿನ ಒತ್ತಡ…

Read More

ಬೆಂಗಳೂರು: ಪ್ರಲ್ಹಾದ್ ಜೋಶಿಯವರ ಸಹೋದರ ಗೋಪಾಲ್ ಜೋಶಿಯರ ಮೇಲೆ ಟಿಕೆಟ್ ವಂಚನೆ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಸಚಿವ ಪ್ರಲ್ಹಾದ್ ಜೋಶಿಯವರ ರಾಜೀನಾಮೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳಿಗೆ ಈ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಗೋಪಾಲ್ ಜೋಶಿಯವರು ಪ್ರಲ್ಹಾದ್ ಜೋಶಿಯವರ ಜೊತೆಗೆ ಇದ್ದಾರೆ ಎಂಬುದು ಹುಬ್ಬಳ್ಳಿ ಭಾಗದ ಜನರಿಗೆ ಗೊತ್ತಿರುವ ಸಂಗತಿ. ಸಹೋದರ ಗೋಪಾಲ್ ಜೋಶಿಯವರ ಮೇಲೆ ಬಂದಿರುವ ಆರೋಪ, ನನಗೆ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನುಣಿಚಿಕೊಳ್ಳುವುದು ಸರಿಯಲ್ಲ. ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದರು. ಮಾಜಿ ಶಾಸಕ ದೇವಾನಂದ ಚೌಹಾಣ್ ಗೌರವಯುತವಾದ ವ್ಯಕ್ತಿ. ಚೌಹಾಣ್ ಅವರಿಗೆ ಲೋಕಸಭೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಜೋಶಿಯವರ ಸಹೋದರ ಗೋಪಾಲ್ ಜೋಶಿ 2 ಕೋಟಿ ಹಣ ಪಡೆದು ವಂಚಿಸಿದ್ದಾರೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೇನಾನಂದ ಚೌಹಾಣ್ ಅವರು ದಾಖಲೆ ಕೊಟ್ಟಿದ್ದಾರೆ. ಅಮಿತ್ ಶಾ ಅವರ ಹೆಸರನ್ನ ಬಳಸಿಕೊಳ್ಳಾಗಿದೆ.…

Read More