Author: kannadanewsnow09

ಮಂಡ್ಯ: ಚನ್ನಪಟ್ಟಣ ಉಪ ಚುನಾವಣೆಯ ಎನ್‌ಡಿಎ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿ ಇಂದು ಸಂಜೆ ಬೆಂಗಳೂರಿನಲ್ಲಿ ಸಭೆ ಇದ್ದು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಬಿಜೆಪಿ ಪಕ್ಷದ ನಾಯಕರ ಜತೆ ಸಮಾಲೋಚನೆ ನಡೆಸುವುದಾಗಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದರು. ಎಲ್ಲ ನಾಯಕರು ಕೂತು ಚರ್ಚೆ ಮಾಡುತ್ತಿದ್ದೇವೆ. ಅಭ್ಯರ್ಥಿಯ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದು ಅವರು ಹೇಳಿದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ ಈ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಹೇಗಿದೆ ನೋಡ್ತಿದ್ದೇನೆ. ಆಡಳಿತ ನಡಿತಿದ್ಯಾ? ಸರ್ಕಾರ ಇದ್ಯಾ? ಕಳೆದ ಒಂದು ವಾರದಿಂದ ಮಳೆ ಸುರಿಯುತ್ತಿದೆ. ಬಾಗಲಕೋಟೆ, ಹಾವೇರಿ, ಚಿತ್ರದುರ್ಗದಲ್ಲಿ ಏನಾಗಿದೆ‌? ಈರುಳ್ಳಿ, ದ್ರಾಕ್ಷಿ, ಜೋಳ ಬೆಳೆಯುವವರ ಸ್ಥಿತಿ ಏನಾಗಿದೆ? ಅದರ ಬಗ್ಗೆ ಕೇಳುವವರು ದಿಕ್ಕಿಲ್ಲದಂತಾಗಿದೆ. ಬೆಂಗಳೂರು ನಗರ ಜಲಾವೃತವಾಗಿದೆ. ಯಾರಾದ್ರು ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರಾ? ಅದರ ಬಗ್ಗೆ ಯಾರಿಗಾದ್ರು ಚಿಂತನೆ ಇಲ್ಲ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವರು ಕಿಡಿಕಾರಿದರು. https://kannadanewsnow.com/kannada/hd-kumaraswamy-dismisses-yatnals-claim-of-reviving-jds/ https://kannadanewsnow.com/kannada/bomb-attack-on-japans-ruling-party-headquarters-suspect-arrested-on-the-spot/

Read More

ಮಂಡ್ಯ: ಜೆಡಿಎಸ್ ಗೆ ಮರುಜನ್ಮ ಕೊಟ್ಟಿದ್ದೇವೆ ಎಂಬ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೆ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಯಾರಿಗೆ ಯಾರು ಮರುಜನ್ಮ ಕೊಟ್ಟಿದ್ದಾರೆ ಎಂದು ಬೀದಿಯಲ್ಲಿ ಚರ್ಚೆ ಮಾಡೋಕೆ ಆಗಲ್ಲ ಅವರು ಹೇಳಿದ್ದಾರೆ. ಮಂಡ್ಯದಲ್ಲಿ ಇಂದು ಬೆಳಗ್ಗೆ ರೈತ ಸಭಾಂಗಣ ನವೀಕರಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ನಂತರ ಅವರು ಮಾಧ್ಯಮಗಳ ಜತೆ ಅವರು ಮಾತನಾಡಿದರು. ಯಾವ ರೀತಿ ನನ್ನ ಪಕ್ಷಕ್ಕೆ ಶಕ್ತಿ ತುಂಬಿದ್ದೇನೆ ಎಂಬ ಚರ್ಚೆ ಈಗ ಅನಗತ್ಯ. ದೆಹಲಿ ನಾಯಕರಿಗೆ ಅದರ ಬಗ್ಗೆ ಸಂಪೂರ್ಣ ಮಾಹಿತಿ ಇದೆ. ಅದನ್ನೆಲ್ಲ ನಾನು ಬೀದಿಯಲ್ಲಿ ನಿಂತು ಚರ್ಚೆ ಮಾಡಲೇ? ಅದರ ಅವಶ್ಯಕತೆ ಇಲ್ಲ. ನಾನು ಈ ಕ್ಷಣದವರೆಗೂ ಜೆಡಿಎಸ್ – ಬಿಜೆಪಿ ಎಂದು ಬೇರ್ಪಡಿಸಿ ಮಾತನಾಡಿಲ್ಲ ಎಂದು ಅವರು ಹೇಳಿದರು. ನಾನು ಚನ್ನಪಟ್ಟಣ ಸೇರಿದಂತೆ ಮೂರು ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಯೇ ನಿಲ್ಲುತ್ತಾರೆ ಎಂದು ಹೇಳಿದೇನೆಯೇ ಹೊರತು, ಜೆಡಿಎಸ್ ಅಭ್ಯರ್ಥಿಯನ್ನು ಹಾಕುತ್ತೇನೆ ಎಂದು ಹೇಳಿಲ್ಲ. ತ್ಯಾಗದ…

Read More

ಶಿವಮೊಗ್ಗ : ಕೃಷಿ ಕ್ಷೇತ್ರನ್ನು ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಬೇಕು ಹಾಗೂ ಕೈಗಾರಿಕೆಯಂತೆ ಕಾಣಬೇಕಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ತಿಳಿಸಿದರು. ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಿಗಳ ವಿಶ್ವವಿದ್ಯಾಲಯ ಶಿವಮೊಗ್ಗ ಹಾಗೂ ಕೃಷಿ ಮತ್ತು ಕೃಷಿ ಸಂಬಂಧಿತ ಅಭಿವೃದ್ದಿ ಇಲಾಖೆಗಳ ಸಹಯೋಗದೊಂದಿಗೆ ಶುಕ್ರವಾರ ನವುಲೆ ಕೃಷಿ ಕಾಲೇಜು ಆವರಣದಲ್ಲಿ ಪೌಷ್ಟಿಕ ಆಹಾರಕ್ಕಾಗಿ ವಿಕಸಿತ ಕೃಷಿ ಧ್ಯೇಯ ವಾಕ್ಯದೊಂದಿಗೆ ಆಯೋಜಿಸಲಾಗಿದ್ದ ಕೃಷಿ-ತೋಟಗಾರಿಕ ಮೇಳದಲ್ಲಿ ಪಾಲ್ಗೊಂಡು ಮಾತನಾಡಿದರು. ಇಂದಿನ ಕೃಷಿ ಮೇಳದಲ್ಲಿ ಹಲವಾರು ಜಿಲ್ಲೆಗಳ ರೈತರು ಆಸಕ್ತಿ ಯಿಂದ ಪಾಲ್ಗೊಂಡಿದ್ದಾರೆ. ಕೃಷಿಯನ್ನು ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಬೇಕು. ಇನ್ನಷ್ಟು ಸಂಶೋಧನೆ ಆಗಬೇಕು. ಪ್ರಸ್ತುತ ಹಗಲು ರಾತ್ರಿ ಸಂಶೋಧನೆ ಮೂಲಕ ರೈತರಿಗೆ ಸಹಕರಿಸುತ್ತಿರುವ ಸಂಶೋಧಕರು, ವಿಜ್ಞಾನಿಗಳಿಗೆ, ತಜ್ಞರಿಗೆ ಕೃತಜ್ಞತೆಗಳು. ರೈತರ ಹಿತದೃಷ್ಟಿಯಿಂದ ವಿವಿ ಸ್ಥಾಪನೆಯಾಗಿದ್ದು, ವಿಶ್ವವಿದ್ಯಾಲಯ ಸ್ಥಾಪನೆಗೆ ಕಾರಣರಾದ ಮಾಜಿ‌ಮುಖ್ಯಮಂತ್ರಿಗಳಾದ ಬಂಗಾರಪ್ಪ, ಕಾಗೋಡು ತಿಮ್ಮಪ್ಪನವರು ಹಾಗೂ ಶ್ರಮಿಸಿದ ಎಲ್ಲರಿಗೆ ಧನ್ಯವಾದಗಳು ಎಂದರು. ರೈತರಿಗೆ ವೈಜ್ಞಾನಿಕ ಕೃಷಿ ಬಗ್ಗೆ…

Read More

ಬೆಂಗಳೂರು: ವಾಯು ಮಾಲಿನ್ಯ, ಶಬ್ದ ಮಾಲಿನ್ಯ ತಡೆಯಲು, ಹಿರಿಯ ನಾಗರಿಕರು ಮತ್ತು ಪುಟ್ಟ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಪಟಾಕಿ ತ್ಯಜಿಸಲು ಇಲ್ಲವೇ ಹಸಿರು ಪಟಾಕಿಗಳನ್ನು ಮಾತ್ರ ಬಳಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮನವಿ ಮಾಡಿದ್ದಾರೆ. ಕತ್ತಲೆಂಬ ಅಜ್ಞಾನವನ್ನು ಕಳೆದು ಸುಜ್ಞಾನವೆಂಬ ದೀಪ ಹಚ್ಚುವ ಬೆಳಕಿನ ಹಬ್ಬಕ್ಕೂ ಪಟಾಕಿಗೂ ಅವಿನಾಭಾವ ಬಾಂಧವ್ಯ ಬೆಸೆದಿದೆ. ಆದರೆ ಈ ಪಟಾಕಿಗಳು ಪರಿಸರಕ್ಕೆ ತೀವ್ರ ಹಾನಿ ಉಂಟು ಮಾಡುತ್ತವೆ ಈ ನಿಟ್ಟಿನಲ್ಲಿ ಪ್ರಜ್ಞಾವಂತ ನಾಗರಿಕರು ಪರಿಸರಕ್ಕೆ ದಟ್ಟ ಹೊಗೆ ಸೇರಿಸುವ, ರಾಸಾಯನಿಕ, ಭಾರ ಲೋಹಯುಕ್ತ ಪಟಾಕಿ ಬಳಸದಂತೆ ಮನವಿ ಮಾಡಿದ್ದಾರೆ. ಹಸಿರು ಪಟಾಕಿ ಮಾತ್ರವೇ ಬಳಸಿ: ಹಲವು ಮಕ್ಕಳು ಪಟಾಕಿ ಸಿಡಿಸುವಾಗ ಕಣ್ಣಿಗೆ ಪೆಟ್ಟು ಮಾಡಿಕೊಂಡಿದ್ದನ್ನು ನೋಡುತ್ತೇವೆ, ಹಲವರು ಗಾಯಗೊಳ್ಳುತ್ತಾರೆ. ಹೀಗಾಗಿ ಸಾಧ್ಯವಾದಷ್ಟು ಪಟಾಕಿ ಹಚ್ಚದಿರುವುದೇ ಉತ್ತಮ. ಪಟಾಕಿ ಸಿಡಿಸಲೇಬೇಕು ಎಂದಾದರೆ ಪರಿಸರಕ್ಕೆ ಹಾನಿ ಉಂಟು ಮಾಡದ ಹಸಿರು ಪಟಾಕಿ ಮಾತ್ರವೇ ಸಿಡಿಸಿ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. 125 ಡೆಸಿಬಲ್ ಗಿಂತ…

Read More

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ 5 ಕೋಟಿ ಹಣಕ್ಕೆ ಬೇಡಿಕೆ ಇಟ್ಟು 2 ಕೋಟಿ ಪಡೆದು, ವಂಚಿಸಿದಂತ ಆರೋಪದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಸಹೋದರ ಗೋಪಾಲ್ ಜೋಶಿ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಸಹೋದರ ಗೋಪಾಲ್ ಜೋಶಿಯವನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಬಸವೇಶ್ವನಗರದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಸಹೋದರ ಗೋಪಾಲ್ ಜೋಶಿಯವರನ್ನು ಬಂಧಿಸಿರುವುದಾಗಿ ತಿಳಿದು ಬಂದಿದೆ. ಪ್ರಕರಣದ ಹಿನ್ನಲೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂ. ಪಡೆದು ವಂಚಿಸಿದ ಆರೋಪದಡಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಸಹೋದರಿ ವಿಜಯ ಲಕ್ಷ್ಮೀ ಜೋಶಿ ಸಹಿತ ಮೂವರ ವಿರುದ್ಧ ಬೆಂಗಳೂರಿನ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಸುನೀತಾ ಚವ್ಹಾಣ್ ಎಂಬುವರು ನೀಡಿದ ದೂರಿನನ್ವಯ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ, ವಿಜಯ್ ಲಕ್ಷ್ಮೀ ಜೋಶಿ, ಅಜಯ್ ಜೋಶಿ ಎಂಬುವರ ವಿರುದ್ಧ…

Read More

ಕೆಎನ್ಎನ್‍ಡಿಜಿಟಲ್ ಡೆಸ್ಕ್ : ಆಲ್ಕೋಹಾಲ್ ಪ್ರಿಯರಿಗೆ ಬಿಯರ್ ಅತ್ಯಂತ ಪ್ರಿಯವಾದ ಪಾನೀಯಗಳಲ್ಲಿ ಒಂದಾಗಿದೆ. ಆಲ್ಕೋಹಾಲ್’ನಲ್ಲಿ ಅನೇಕ ವಿಧಗಳಿವೆ. ಆದಾಗ್ಯೂ, ಅವುಗಳಲ್ಲಿ ಆಲ್ಕೋಹಾಲ್ ಶೇಕಡಾವಾರು ಹೆಚ್ಚಾಗಿದೆ. ಬಿಯರ್’ನಲ್ಲಿ ಕಡಿಮೆ. ಇದಲ್ಲದೆ, ಬಿಯರ್ ಕುಡಿಯುವುದರಿಂದ ಹೆಚ್ಚು ಹ್ಯಾಂಗೋವರ್ ಉಂಟಾಗುವುದಿಲ್ಲ. ಇದನ್ನು ಸುಲಭವಾಗಿ ಕುಡಿಯಬಹುದು. ಆದ್ದರಿಂದ ಬಿಯರ್ ಹೆಚ್ಚಾಗಿ ಮದ್ಯ ಪ್ರಿಯರು ಸೇವಿಸುತ್ತಾರೆ. ಆದಾಗ್ಯೂ, ಬಿಯರ್ ಕುಡಿಯುವುದರಿಂದ ಪ್ರಯೋಜನಗಳಿವೆ ಎಂದು ಹೇಳಲಾಗುತ್ತದೆ. ಬಿಯರ್ ಕುಡಿಯುವುದರಿಂದ ಅನೇಕ ಪ್ರಯೋಜನಗಳಿವೆ ಎಂದು ವಿಜ್ಞಾನಿಗಳು ಹೇಳುತ್ತಾರೆ. ಈಗ ಬಿಯರ್ ಕುಡಿಯುವುದರಿಂದ ಆಗುವ ಪ್ರಯೋಜನಗಳು ಯಾವುವು ಎಂಬುದನ್ನು ತಿಳಿದುಕೊಳ್ಳೋಣ. ನೀರು ಮತ್ತು ಚಹಾದ ನಂತರ ಬಿಯರ್ ವಿಶ್ವದ ಮೂರನೇ ಅತಿ ಹೆಚ್ಚು ಸೇವಿಸುವ ಪಾನೀಯವಾಗಿದೆ. ಈ ಕ್ರಮದಲ್ಲಿ, ಬಿಯರ್ ಅನೇಕ ಆಲ್ಕೋಹಾಲ್ ಪ್ರಿಯರಿಗೆ ನೆಚ್ಚಿನ ಪಾನೀಯವಾಗಿದೆ. ಬಿಯರ್’ನಲ್ಲಿ ವಿವಿಧ ರೀತಿಯ ಬಿ ಜೀವಸತ್ವಗಳಿವೆ. ಆದ್ದರಿಂದ ನಾವು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು. ಬಿಯರ್ ಕುಡಿಯುವುದರಿಂದ ವಿಟಮಿನ್ ಇ ಬಲಗೊಳ್ಳುತ್ತದೆ. ಇದು ಚರ್ಮವನ್ನ ಯೌವನದಿಂದ ಇರಿಸುತ್ತದೆ. ಆದ್ದರಿಂದ, ನೀವು ವಯಸ್ಸಾದರೂ, ವೃದ್ಧಾಪ್ಯದ ಛಾಯೆಗಳು ಬರುವುದಿಲ್ಲ.…

Read More

ಬೆಂಗಳೂರು: ಬಿಬಿಎಂಪಿ ಸೇರಿದಂತೆ ರಾಜ್ಯಾಧ್ಯಂತ ಇ-ಖಾತಾ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಈ ಮೂಲಕ ಅಕ್ರಮಕ್ಕೆ ಬ್ರೇಕ್ ಹಾಕಲಾಗಿದೆ. ಇದೀಗ ಬಿಬಿಎಂಪಿ ವ್ಯಾಪ್ತಿಯ ಆಸ್ತಿ ಮಾಲೀಕರು ಅಂತಿಮ ಇ-ಖಾತಾವನ್ನು ಈ ಕೆಳಗಿನ ಹಂತಗಳನ್ನು ಅನುಸರಿಸಿ ಡೌನ್ ಮಾಡಿಕೊಳ್ಳಿ ಅಂತ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾಹಿತಿ ನೀಡಿದ್ದಾರೆ. ಬಿಬಿಎಂಪಿ‌ ವ್ಯಾಪ್ತಿಯಲ್ಲಿ 2024ರ ಅಕ್ಟೋಬರ್ ತಿಂಗಳ ಒಳಗೆ ಉಪ-ನೋಂದಣಾಧಿಕಾರಿ ಕಛೇರಿಯಲ್ಲಿ ನೀವು ತುರ್ತು ಆಸ್ತಿ ನೋಂದಣಿಯನ್ನು ಹೊಂದಿದ್ದೀರಾ ? ಹಾಗಿದ್ರೆ ಬಿಬಿಎಂಪಿ ಅಂತಿಮ ಇ-ಖಾತಾವನ್ನು ಪಡೆಯಲು ದಯವಿಟ್ಟು ಕೆಳಗಿನ ವಿಧಾನವನ್ನು ಅನುಸರಿಸಿ. 1. ಆನ್‌ಲೈನ್‌ https://BBMPeAasthi.karnataka.gov.in ನಲ್ಲಿ ವಾರ್ಡ್‌ವಾರು ಇ-ಖಾತಾ ಪಟ್ಟಿಯಿಂದ ನಿಮ್ಮ ಕರಡು ಇ-ಖಾತಾ ಅನ್ನು ಡೌನ್‌ಲೋಡ್ ಮಾಡಿ. 2. ತಮ್ಮ ಸ್ವತ್ತಿನ ಆಸ್ತಿ ತೆರಿಗೆ ರಶೀದಿಯಿಂದ ನಿಮ್ಮ ವಾರ್ಡ್ ಹೆಸರು ಮತ್ತು ಸಂಖ್ಯೆಯನ್ನು ತಿಳಿದುಕೊಳ್ಳಬಹುದು. 3. ಅಂತಿಮ ಇ-ಖಾತಾ ಪಡೆಯಲು ಕೆಳಗಿನ ಮಾಹಿತಿಯನ್ನು ಆನ್‌ಲೈನ್‌ನಲ್ಲಿ ನಮೂದಿಸಿ/ಅಪ್‌ಲೋಡ್ ಮಾಡಿ: (i) ತಮ್ಮ ಸ್ವತ್ತಿನ ಆಸ್ತಿತೆರಿಗೆ ಅರ್ಜಿ ಸಂಖ್ಯೆಯ 10-ಅಂಕಿಗಳು. (ii) ಮಾಲೀಕರ ಆಧಾರ್ ಆಧಾರಿತ…

Read More

ಬೆಂಗಳೂರು: ರಾಜ್ಯ ಚುನಾವಣಾ ಆಯೋಗವು ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ | ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸಲು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 308ಎಎ ಮತ್ತು 308ಎಬಿ ರನ್ವಯ ಚುನಾವಣಾ ವೇಳಾಪಟ್ಟಿಯನ್ನು ಈ ಕೆಳಕಂಡಂತೆ ಘೋಷಿಸಿದೆ. ವಿವಿಧ ಕಾರಣಗಳಿಂದ ಖಾಲಿ ಇರುವ / ತೆರವಾಗಿರುವ ಉಪ ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿಗಳ ಸದಸ್ಯ ಸ್ಥಾನಗಳ ಸಂಖ್ಯಾ ವಿವರಗಳನ್ನು ಲಗತ್ತಿಸಿರುವ ಅನುಬಂಧ ದಲ್ಲಿ ತೋರಿಸಲಾಗಿದೆ. ದಿನಾಂಕ 06-11-2024ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದಾರೆ. ದಿನಾಂಕ 12-11-2024 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ. ದಿನಾಂಕ 13-11-2024ರಂದು ನಾಮಪತ್ರಗಳನ್ನು ಪರಿಶೀಲನೆ ನಡೆಸಲಾಗುತ್ತದೆ. ದಿನಾಂಕ 15-11-2024ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ದಿನಾಂಕ 23-11-2024ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಮರು ಮತದಾನ ಅವಶ್ಯಕತೆ ಇದ್ದರೇ ದಿನಾಂಕ 25-11-2024ರಂದು ನಡೆಸಲು ನಿಗದಿ ಪಡಿಸಲಾಗಿದೆ. ದಿನಾಂಕ 26-11-2024ರಂದು ಬೆಳಿಗ್ಗೆ 8ರಿಂದ…

Read More

ಬೆಂಗಳೂರು: ರಾಜ್ಯ ಚುನಾವಣಾ ಆಯೋಗದಿಂದ ಗ್ರಾಮ ಪಂಚಾಯ್ತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ, ತೆರವಾಗಿರುವ 641 ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸಲು ದಿನಾಂಕ ಘೋಷಿಸಲಾಗಿದೆ. ನವೆಂಬರ್.23ಕ್ಕೆ ಮತದಾನ ನಿಗದಿ ಪಡಿಸಿದ್ದರೇ, ನವೆಂಬರ್.25ರಂದು ಮತಏಣಿಕೆ ನಡೆದು ಫಲಿತಾಂಶ ಪ್ರಕಟಿಸಲಾಗುತ್ತದೆ. ಈ ಕುರಿತಂತೆ ಇಂದು ರಾಜ್ಯ ಚುನಾವಣಾ ಆಯೋಗದಿಂದ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದ್ದು, ಗ್ರಾಮ ಪಂಚಾಯ್ತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ, ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ವೇಳಾಪಟ್ಟಿಯನ್ನು ಪ್ರಕಟಿಸಿದೆ ಎಂದಿದೆ. ದಿನಾಂಕ 06-11-2024ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದಾರೆ. ದಿನಾಂಕ 12-11-2024 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ. ದಿನಾಂಕ 13-11-2024ರಂದು ನಾಮಪತ್ರಗಳನ್ನು ಪರಿಶೀಲನೆ ನಡೆಸಲಾಗುತ್ತದೆ. ದಿನಾಂಕ 15-11-2024ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ದಿನಾಂಕ 23-11-2024ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಮರು ಮತದಾನ ಅವಶ್ಯಕತೆ ಇದ್ದರೇ ದಿನಾಂಕ 25-11-2024ರಂದು ನಡೆಸಲು ನಿಗದಿ ಪಡಿಸಲಾಗಿದೆ. ದಿನಾಂಕ 26-11-2024ರಂದು ಬೆಳಿಗ್ಗೆ 8ರಿಂದ ಮತಏಣಿಕೆ ನಡೆಸಿ,…

Read More

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ಮಹಾನಗರದ ಸಾರ್ವಜನಿಕರು ಮತ್ತು ಉದ್ಯಮಗಳಿಗೆ ಇನ್ನೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅತ್ಯಗತ್ಯವಾಗಿದೆ. ಇದಕ್ಕಾಗಿ ಸರಕಾರವು ಐದು ಸ್ಥಳಗಳನ್ನು ಗುರುತಿಸಿದೆ. ಆದರೆ ಇವುಗಳ ಪೈಕಿ ಯಾವುದನ್ನೂ ಆಖೈರು ಮಾಡಿಲ್ಲ. ಈ ಸಂಬಂಧ ಇನ್ನೊಂದು ವಾರದಲ್ಲಿ ಸಭೆ ಸೇರಿ, ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ. ಶುಕ್ರವಾರ ಅವರು ತಮ್ಮ ಕಚೇರಿಯಲ್ಲಿ ಕರೆದಿದ್ದ ಮಹತ್ತ್ವದ ಸಭೆಯ ನಂತರ ಈ ವಿಚಾರ ಹೇಳಿದ್ದಾರೆ. ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಭಾಗವಹಿಸಿದ್ದರು. ಸಭೆಯ ಬಳಿಕ ಮಾತನಾಡಿದ ಪಾಟೀಲ ಅವರು, `ಎರಡನೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸ್ಥಳವನ್ನು ಈಗಾಗಲೇ ತೀರ್ಮಾನಿಸಲಾಗಿದೆ ಎನ್ನುವ ವರದಿಗಳಿಗೆ ಆಧಾರವಿಲ್ಲ. ಡಾಬಸಪೇಟೆ, ನೆಲಮಂಗಲ, ಬಿಡದಿ, ಹಾರೋಹಳ್ಳಿ ಸೇರಿದಂತೆ ಒಟ್ಟು ಐದು ಸ್ಥಳಗಳನ್ನು ನಾವು ಮುಕ್ತವಾಗಿ ಇಟ್ಟುಕೊಂಡಿದ್ದೇವೆ. ಇವತ್ತು ಇನ್ನೂ ಒಂದು ಸ್ಥಳದ ಬಗ್ಗೆ ಯೂ ಚರ್ಚೆ ಆಗಿದೆ. ಇವುಗಳ…

Read More