Author: kannadanewsnow09

ಮೈಸೂರು: ಮುಡಾ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಸಂಬಂಧ ಮುಡಾ ಕಚೇರಿಯ ಮೇಲೆ ದಾಳಿ ನಡೆಸಿರುವಂತ ಇಡಿ ಅಧಿಕಾರಿಗಳು, ದಾಖಲೆಗಳನ್ನು ಜಾಲಾಡುತ್ತಿದ್ದಾರೆ. ಈ ಬೆನ್ನಲ್ಲೇ ಮುಡಾ ಕಮೀಷನರ್ ಅವರಿಗೆ 41 ಪ್ರಶ್ನೆಗಳನ್ನು ಇಡಿ ಕೇಳಿದ್ದು, ಅದರ ಮಾಹಿತಿ ನೀಡುವಂತೆ ಸೂಚಿಸಿದೆ ಎನ್ನಲಾಗಿದೆ. ಈ ಸಂಬಂಧ ಮುಡಾ ಕಮೀಷನರ್ ಗೆ 41 ಪ್ರಶ್ನೆಗಳಿರುವಂತ ನೋಟಿಸ್ ನೀಡಿರುವಂತ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಅದರಲ್ಲಿ ಸರ್ವೆ ನಂಬರ್ 464ಕ್ಕೆ ಸಂಬಂಧಿಸಿದಂತೆ ನೋಟಿಫಿಕೇಷನ್ ನಕಲು ಪ್ರತಿ ನೀಡುವಂತೆ ಕೋರಿದೆ. ಇನ್ನೂ ಡಿನೋಟಿಫಿಕೇಷನ್ ಮಾಡುವಾಗ ಯಾವೆಲ್ಲ ನೀತಿ ನಿಯಮವನ್ನು ಪಾಲಿಸಲಾಗಿದೆ.? ದೇವರಾಜು ಅವರ ಮನವಿಯ ಮೇರೆಗೆ ಏನಾದ್ರೂ ಪ್ರಕ್ರಿಯೆ ಆಗಿದ್ಯಾ ಎಂಬ ಮಾಹಿತಿ ಒದಗಿಸುವಂತೆಯೂ ಕೋರಿದೆ. ಭೂಸ್ವಾದೀನಕ್ಕೆ ಸಂಬಂಧಿಸಿದಂತ ಮಾಹಿತಿ ನೀಡುವಂತೆ ನೋಟಿಫಿಕೇಷನ್ ದಾಖಲೆಗಳ ನಕಲು ಪ್ರತಿ ನೀಡುವಂತೆ, ನೋಟಿಫಿಕೇಷನ್ ಭೂಮಿ ಮಾರಾಟಕ್ಕೆ, ವರ್ಗಾವಣೆಗೆ ಅವಕಾಶವಿದ್ಯಾ ಎನ್ನುವಂತೆ ಮಾಹಿತಿಯನ್ನು ಕೇಳಿದೆ. ಈ ಪ್ರಶ್ನೆಗಳಲ್ಲದೇ ಬರೋಬ್ಬರಿ 41 ಪ್ರಶ್ನೆಗಳನ್ನು ಮುಡಾ ಕಮೀಷನರ್ ಮುಂದೆ ಇಡಿ ಅಧಿಕಾರಿಗಳು ಇಟ್ಟಿದ್ದಾರೆ. ಆ ಎಲ್ಲಾ…

Read More

ಬೆಂಗಳೂರು: ಅಸ್ಥಿಮಜ್ಜೆಯು ರಕ್ತಕಣಗಳನ್ನು ಉತ್ಪಾದಿಸುವಲ್ಲಿ ವಿಫಲವಾಗಿದ್ದ ಕಾರಣ ಅತಿ ವಿರಳ ಕಾಯಿಲೆಯಾದ “ಅಪ್ಲ್ಯಾಸ್ಟಿಕ್ ರಕ್ತ ಹೀನತೆಯಿಂದ ಬಳಲುತ್ತಿದ್ದ 16 ವರ್ಷದ ಬಾಲಕನಿಗೆ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ ನೀಡಲಾಗಿದೆ. ಫೋರ್ಟಿಸ್ ಆಸ್ಪತ್ರೆಯ ಮೆಡಿಕಲ್‌ ಮತ್ತು ಹೆಮಟೋ ಆಂಕೊಲಾಜಿಯ ಹಿರಿಯ ನಿರ್ದೇಶಕಿ ಡಾ. ನೀತಿ ರೈಜಾದಾ, ಹೆಮಟೋ ಆಂಕೊಲಾಜಿ ಸಮಾಲೋಚಕ ಡಾ ನಿಶಿತ್ ಓಜ್ಹಾ, ಪೀಡಿಯಾಟ್ರಿಕ್ ಹೆಮಟೋ ಆಂಕೊಲಾಜಿಯ ಸಲಹೆಗಾರರಾದ ಡಾ ತನುಶ್ರೀ ಪಾಲ್ ಅವರ ವೈದ್ಯ ತಂಡ ಈ ಬಾಲಕನಿಗೆ ಸಮಯೋಚಿತವಾಗಿ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಬಾಲಕನ ಜೀವ ಉಳಿಸಲಾಗಿದೆ. ಈ ಕುರಿತು ಮಾತನಾಡಿದ ಡಾ. ನೀತಿ ರೈಜಾದಾ, ಆಫ್ರೀಕಾ ಮೂಲಕ 16 ವರ್ಷದ ಮೈಕೆಲ್ ಎಂಬ ಬಾಲಕನು ಕಳೆದ ಎರಡು ತಿಂಗಳಿನಿಂದ ತೀವ್ರವಾದ ಜ್ವರ, ಆಯಾಸ, ದೌರ್ಬಲ್ಯಗಳಿಂದ ಬಳಲುತ್ತಿದ್ದರು, ಅಷ್ಟೇ ಅಲ್ಲದೆ, ಆತನ ಬಲ ಕಿವಿಯಿಂದ ರಕ್ತಸ್ತ್ರಾವವಾಗಲು ಪ್ರಾರಂಭಗೊಂಡಿತ್ತು. ಇದರಿಂದ ಭಯಭೀತಗೊಂಡ ಅವರ ಕುಟುಂಬ ಆಫ್ರಿಕಾದಲ್ಲಿರುವ ಎಲ್ಲಾ ಆಸ್ಪತ್ರೆಗಳಿಗೆ ತೋರಿಸಿದರೂ ಬಾಲಕನ ಆರೋಗ್ಯ ಸಮಸ್ಯೆ ಏನೆಂದು ತಿಳಿಯಲಿಲ್ಲ. ಹೀಗಾಗಿ ಅವರು…

Read More

ಬೆಂಗಳೂರು: ನಗರದ ಜನತೆಯ ಅನುಕೂಲಕ್ಕಾಗಿ ಹೊಸ ಮಾರ್ಗದಲ್ಲಿ ಬಿಎಂಟಿಸಿಯಿಂದ ಬಸ್ ಸಂಚಾರವನ್ನು ಆರಂಭಿಸಲಾಗುತ್ತಿದೆ. ಈ ಮೂಲಕ ಆ ಭಾಗದ ಜನರಿಗೆ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡಲಾಗುತ್ತಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ. ಬೆಂ.ಮ.ಸಾ.ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ನೂತನ ಮಾರ್ಗವನ್ನು ದಿನಾಂಕ:  17.10.2024 ರಿಂದ ಪರಿಚಯಿಸುತ್ತಿದ್ದು ವಿವರ ಕೆಳಕಂಡಂತಿದೆ : ಮಾರ್ಗ ಸಂಖ್ಯೆ ಎಲ್ಲಿಂದ ಎಲ್ಲಿಗೆ ಮಾರ್ಗ ಬಸ್ಸುಗಳ ಸಂಖ್ಯೆ 289-ಎಸ್‌ ಕೆಂಪೇಗೌಡ ಬಸ್‌ ನಿಲ್ದಾಣ ಬಾಗಲೂರು ಹೆಬ್ಬಾಳ, ಯಲಹಂಕ, ವೆಂಕಟಾಲ, ಸಾತನೂರು 2 ಸದರಿ ಮಾರ್ಗದ ವೇಳಾಪಟ್ಟಿ ಕೆಳಕಂಡಂತಿದೆ. ಬಿಡುವ ವೇಳೆ ಕೆಂಪೇಗೌಡ ಬಸ್‌ ನಿಲ್ದಾಣ ಬಾಗಲೂರು 0635, 0700, 1000, 1030, 1630, 1700, 2030, 2100 0515, 0535, 0800, 0830, 1455, 1525, 1830, 1900 https://kannadanewsnow.com/kannada/education-co-pilot-scheme-to-be-implemented-to-improve-learning-outcomes-in-govt-schools-madhu-bangarappa/ https://kannadanewsnow.com/kannada/law-on-prevention-of-child-marriages-cant-be-stunted-by-personal-laws-sc/

Read More

ನವದೆಹಲಿ: ಭೂಗತ ಪಾತಕಿ ಅಬು ಸಲೇಂಗೆ ಬಿಡುಗಡೆಯ ದಿನಾಂಕವನ್ನು ನೀಡಲು ಸಾಧ್ಯವಿಲ್ಲ ಮತ್ತು ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ 25 ವರ್ಷಗಳ ಜೈಲು ಶಿಕ್ಷೆಯನ್ನು ಪೂರ್ಣಗೊಳಿಸುವ ಒಂದು ತಿಂಗಳ ಮೊದಲು ಮಾತ್ರ ಅವನ ಬಿಡುಗಡೆಗೆ ಅಗತ್ಯವಾದ ದಾಖಲೆಗಳನ್ನು ಕಳುಹಿಸಲಾಗುವುದು ಎಂದು ಸಿಬಿಐ ಗುರುವಾರ ಹೇಳಿದೆ. ಸಲೇಂ ತನ್ನ ವಕೀಲ ಫರ್ಹಾನಾ ಶಾ ಮೂಲಕ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಬಿಡುಗಡೆಯ ತಾತ್ಕಾಲಿಕ ದಿನಾಂಕವನ್ನು ನೀಡುವಂತೆ ಮಹಾರಾಷ್ಟ್ರ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿದ್ದರು. ಎರಡು ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಸಲೇಂ 23 ವರ್ಷ 8 ತಿಂಗಳು ಜೈಲಿನಲ್ಲಿ ಕಳೆದಿದ್ದಾನೆ. 2005ರಲ್ಲಿ ಸಲೇಂನನ್ನು ಗಡೀಪಾರು ಮಾಡಿದಾಗ ಪೋರ್ಚುಗಲ್ಗೆ ನೀಡಿದ ಸಾರ್ವಭೌಮ ಬದ್ಧತೆಯ ಪ್ರಕಾರ, ಅವರನ್ನು 25 ವರ್ಷಗಳಿಗಿಂತ ಹೆಚ್ಚು ಕಾಲ ಜೈಲಿನಲ್ಲಿಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ 2022 ರಲ್ಲಿ ಹೇಳಿತ್ತು. ವಿಶೇಷ ನ್ಯಾಯಾಲಯಕ್ಕೆ ನೀಡಿದ ಉತ್ತರದಲ್ಲಿ, 2022 ರಲ್ಲಿ ಸುಪ್ರೀಂ ಕೋರ್ಟ್ ಸಲೇಂನನ್ನು ಭಾರತದಲ್ಲಿ ಬಂಧಿಸಿದಾಗ ಅಕ್ಟೋಬರ್ 12, 2005 ರಿಂದ…

Read More

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು, ಶಿಕ್ಷಣ ಫೌಂಡೇಶನ್ ಮತ್ತು ಮೈಕ್ರೋಸಾಫ್ಟ್ ರಿಸರ್ಚ್ ಇಂಡಿಯಾದ ಸಹಯೋಗದೊಂದಿಗೆ ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಫಲಿತಾಂಶಗಳನ್ನು ಸುಧಾರಿಸುವ ಗುರಿಯೊಂದಿಗೆ ʼಶಿಕ್ಷಣ ಕೋಪೈಲಟ್ʼ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ತಿಳಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮೈಕ್ರೋಸಾಫ್ಟ್ ಮತ್ತು ಶಿಕ್ಷಣ ಫೌಂಡೇಶನ್ ಸಹಯೋಗದೊಂದಿಗೆ ಆಯೋಜಿಸಿದ್ದ “ಶಿಕ್ಷಣ ಕೋಪೈಲೆಟ್” ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಆವಿಷ್ಕಾರಗಳನ್ನೂ ತರುವ ನಿಟ್ಟಿನಲ್ಲಿ “ಶಿಕ್ಷಣ ಕೋಪೈಲಟ್” ಆರ್ಟಿಫಿಷಿಯಲ್ ಇಂಟಲಿಜೆನ್ಸ್ (AI) ಚಾಲಿತ ಡಿಜಿಟಲ್ ಸಂಶೋಧನಾ ಯೋಜನೆ ಜಾರಿಮಾಡಲಾಗಿದೆ. ಶಿಕ್ಷಕರನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ “ಶಿಕ್ಷಣ ಫೌಂಡೇಶನ್” ಮತ್ತು “ಮೈಕ್ರೋಸಾಫ್ಟ್ ರಿಸರ್ಚ್ ಇಂಡಿಯಾ” ನಡುವಿನ ಸಹಯೋಗದೊಂದಿಗೆ ಈ ಕಾರ್ಯಕ್ರಮ ತರಲಾಗಿದೆ. ಶಿಕ್ಷಕರು ಮಕ್ಕಳ ಶಕ್ತಿ ಮತ್ತು ದೌರ್ಬಲ್ಯವನ್ನು ಗುರುತಿಸಿ, ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಆವಿಷ್ಕಾರಗಳನ್ನೂ ತರುವ ಚಿಂತನೆಯ ಕಾರ್ಯಕ್ರಮ ಇದಾಗಿದೆ. ಕಲಿಕೆಯ ಫಲಿತಾಂಶಗಳನ್ನು…

Read More

ಬೆಂಗಳೂರು: ಮೈಸೂರು ಮುಡಾ ನಿವೇಶನ ಹಂಚಿಕೆ ಹಗರಣವನ್ನು ಸಿಬಿಐಗೇ ಕೊಡಬೇಕು. ಹಾಗಿದ್ದರೆ ಮಾತ್ರ ಸತ್ಯಾಂಶ ಹೊರಬರಲು ಸಾಧ್ಯ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರತಿಪಾದಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ತನಿಖೆಯನ್ನು ಸಿಬಿಐಗೆ ಕೊಡದೆ ಇದ್ದಲ್ಲಿ ಕೇಸನ್ನು ಸಂಪೂರ್ಣವಾಗಿ ಮುಚ್ಚಿ ಹಾಕುವ ವ್ಯವಸ್ಥೆ ನಡೆಯುತ್ತಿದೆ ಎಂಬ ಅನುಮಾನವಿದೆ ಎಂದು ತಿಳಿಸಿದರು. ಕಾಂಗ್ರೆಸ್ಸಿನವÀರಿಗೆ ಮಾನವೀಯತೆ ಇದ್ದರೆ ವಾಲ್ಮೀಕಿ ಜಯಂತಿಯನ್ನು ಪಶ್ಚಾತ್ತಾಪ ದಿನ ಎಂದು ಆಚರಣೆ ಮಾಡಬೇಕಿತ್ತು ಎಂದ ಅವರು, ಮುಖ್ಯಮಂತ್ರಿಗಳು ತಕ್ಷಣ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು. ಎಲ್ಲ ಕಡತಗಳನ್ನು ಹೆಲಿಕಾಪ್ಟರ್‍ನಲ್ಲಿ ತುಂಬಿಕೊಂಡು ಬಂದವರನ್ನೂ ತನಿಖೆಗೆ ಒಳಪಡಿಸಿ ಎಂದು ಒತ್ತಾಯಿಸಿದರು. ಮುಖ್ಯಮಂತ್ರಿಗಳು ತಕ್ಷಣ ರಾಜೀನಾಮೆ ಕೊಡಬೇಕು; ಮಾನ್ಯ ಸುರೇಶ್ ಅವರೂ ರಾಜೀನಾಮೆ ನೀಡಬೇಕು ಎಂದು ಆಗ್ರಹವನ್ನು ಮುಂದಿಟ್ಟರು. ಇಲ್ಲವಾದರೆ ಇ.ಡಿ. ಅಧಿಕಾರಿಗಳು ಮಾನ್ಯ ಮುಖ್ಯಮಂತ್ರಿಗಳನ್ನು ಬಂಧಿಸಲಿ ಎಂದು ಮನವಿ ಮಾಡಿದರು. ವಾಲ್ಮೀಕಿ ನಿಗಮವನ್ನು ತಿಂದು ತೇಗಿದವರು.. ಭ್ರಷ್ಟಾಚಾರ ಅಪರಾಧವಲ್ಲ…

Read More

ಬೆಂಗಳೂರು: “ಯಾವುದೇ ಸಮುದಾಯಕ್ಕೆ ಅನ್ಯಾಯವಾಗಬಾರದು ಎಂಬುದು ನಮ್ಮ ಸರ್ಕಾರದ ಉದ್ದೇಶ. ಮೀಸಲಾತಿ ವಿಚಾರ ನ್ಯಾಯಾಲಯದಲ್ಲಿದ್ದು ನಾವು ಹಸ್ತಕ್ಷೇಪ ಮಾಡಲು ಆಗುವುದಿಲ್ಲ. ಮುಂದಿನ ದಿನಗಳಲ್ಲಿ ಪಂಚಮಸಾಲಿ ಸಮುದಾಯದ ಜತೆ ಮತ್ತೆ ಚರ್ಚೆ ಮಾಡುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಪಂಚಮಸಾಲಿ ಲಿಂಗಾಯತರ ಮೀಸಲಾತಿ ವಿಚಾರವಾಗಿ ಸಮುದಾಯದ ನಾಯಕರುಗಳ ಜತೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಸಭೆ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಶುಕ್ರವಾರ ಮಾಹಿತಿ ನೀಡಿದರು. “ಕಾಲಮಿತಿಯಲ್ಲಿ ಮೀಸಲಾತಿ ನೀಡಬೇಕು ಎಂದರೆ ಅದು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟವಾಗಿ ಹೇಳಿದ್ದಾರೆ. ಹಿಂದೆ ಬಿಜೆಪಿ ಸರ್ಕಾರ ತರಾತುರಿಯಲ್ಲಿ ಬೇರೆ ಸಮಾಜಗಳಿಗೆ ನೋವಾಗುವಂತೆ ತೀರ್ಮಾನ ಮಾಡಿತ್ತು. ನಂತರ ಆ ಸರ್ಕಾರವೇ ನಾವು ಯಾವುದೇ ಮೀಸಲಾತಿ ಜಾರಿ ಮಾಡುವುದಿಲ್ಲ ಎಂದು ನ್ಯಾಯಾಲಯದಲ್ಲಿ ಅಫಿಡವಿಟ್ ಸಲ್ಲಿಸಿದೆ. ಈ ವಿಚಾರ ನ್ಯಾಯಾಲಯದಲ್ಲಿ ಇರುವಾಗ ನಾವು ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ” ಎಂದು ತಿಳಿಸಿದರು. “ಈಗ ಚುನಾವಣಾ ನೀತಿ ಸಂಹಿತೆ ಇದೆ. ಇದಾದ ನಂತರ ಸಭೆ ಕರೆದು ಮಾತನಾಡುತ್ತೇವೆ ಎಂದು ಸಮುದಾಯದ ಮುಖಂಡರುಗಳಿಗೆ…

Read More

ಬೆಂಗಳೂರು : ಬೆಂಗಳೂರಿಗೆ ಬಂದಾಗಲೆಲ್ಲಾ ಎಚ್.ಎಂ.ಟಿ., ಕೆ.ಐ.ಓ.ಸಿ.ಎಲ್. ಬಗ್ಗೆ ಮಾತನಾಡುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, 10 ವರ್ಷವಾದರೂ ಆರಂಭವೇ ಆಗದ ಎನ್.ಎಂ.ಡಿ.ಸಿ. ಉಕ್ಕು ಕಾರ್ಖಾನೆ, ಪುನಶ್ಚೇತನ ಆಗದ ವಿಐಎಸ್ಎಲ್ ಬಗ್ಗೆ ಏಕೆ ಮಾತನಾಡುವುದಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿರುಗೇಟು ನೀಡಿದ್ದಾರೆ. ಹಿಂದೂಸ್ತಾನ್ ಮಷೀನ್ ಅಂಡ್ ಟೂಲ್ಸ್ (ಹೆಚ್ಎಂಟಿ) ಹಾಗೂ ಕುದುರೆಮುಖ ಕಬ್ಬಿಣ ಮತ್ತು ಅದಿರು ಸಂಸ್ಥೆ (ಕೆಐಒಸಿಎಲ್) ವಿಷಯದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಹಸಿ ಸುಳ್ಳು ಹೇಳುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಎಚ್.ಎಂ.ಟಿ. ಭೂಮಿ ಡಿನೋಟಿಫಿಕೇಷನ್ ಆಗಿಲ್ಲ ಎಂಬುದು ಸುಳ್ಳೆ? ಅರಣ್ಯೇತರ ಉದ್ದೇಶಕ್ಕೆ ಪರಿವರ್ತನೆ ಆಗದ ಭೂಮಿ ಅರಣ್ಯವಾಗೇ ಉಳಿಯುತ್ತದೆ ಎಂಬುದು ಸುಳ್ಳೇ? ಎಚ್.ಎಂ.ಟಿ. 300 ಕೋಟಿ ರೂ.ಗೆ 165 ಎಕರೆ ಅರಣ್ಯ ಭೂಮಿ ಮಾರಾಟ ಮಾಡಿರುವುದು ಸುಳ್ಳೇ? ಕೆ.ಐ.ಓ.ಸಿ.ಎಲ್. ಗಣಿಗಾರಿಕೆ ಮಾಡುವಾಗ ಲಕ್ಯಾಂಡ್ಯಾಂ, ಅರಣ್ಯ, ಪರಿಸರಕ್ಕೆ ಹಾನಿ ಮಾಡಿರುವುದು ಸುಳ್ಳೇ? ಅರಣ್ಯ ಇಲಾಖೆಗೆ ಕೆಐಓಸಿಎಲ್…

Read More

ಬೆಂಗಳೂರು: ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ. 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾದ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಮಾಡಿದೆ. ಸಿಎಂ ಸಿದ್ದರಾಮಯ್ಯ ಅವರದ್ದೂ ಸೇರಿದಂತೆ ಸುಮಾರು 1,200 ಕ್ಕೂ ಅಧಿಕ ನಿವೇಶನಗಳ ಹಗರಣ ನಡೆದಿದೆ ಎಂಬ ದೂರು ಬಂದಿದ್ದು, ಅದಕ್ಕಾಗಿ ದಾಳಿ ಮಾಡಲಾಗಿದೆ. 3-4 ಸಾವಿರ ಕೋಟಿ ರೂ. ಹಗರಣ ನಡೆದಿದೆ ಎಂದು ಮುಡಾ ಅಧ್ಯಕ್ಷರಾಗಿದ್ದ, ಕಾಂಗ್ರೆಸ್‌ನವರೇ ಆದ ಮರಿಗೌಡ ಪತ್ರದಲ್ಲಿ ತಿಳಿಸಿದ್ದರು. ಅದಾದ ಬಳಿಕ ಸ್ನೇಹಮಯಿ ಕೃಷ್ಣ ಇಡಿಗೆ ದೂರು ನೀಡಿದ್ದಾರೆ. ಇದರಲ್ಲಿ ರಾಜಕೀಯದ ಪ್ರಶ್ನೆ ಉದ್ಭವವೇ ಆಗುವುದಿಲ್ಲ. ಇದರಲ್ಲಿ ಬಿಜೆಪಿ ಅಥವಾ ಕೇಂದ್ರ ಸರ್ಕಾರದ ಪಾತ್ರವೇ ಇಲ್ಲ ಎಂದರು. ಇದನ್ನು ರಾಜಕೀಯವಾಗಿ ನೋಡಬಾರದು. ನಿವೇಶನಗಳು ವಾಪಸ್‌ ಸಿಕ್ಕರೆ ಹಾಗೂ ಹಣ ಸಿಕ್ಕರೆ ರಾಜ್ಯ ಸರ್ಕಾರಕ್ಕೆ ಲಾಭವಾಗುತ್ತದೆ. ಸರ್ಕಾರದಲ್ಲಿ ಖಜಾನೆ ಖಾಲಿಯಾಗಿ ಸಂಬಳ ಕೊಡಲಾಗದ ಪರಿಸ್ಥಿತಿ ಇದೆ. ಇಂತಹ ಸ್ಥಿತಿಯಲ್ಲಿ…

Read More

ಮಂಗಳೂರು; ಬಿಲ್ಲವ ಸಮುದಾಯದ ಒಂದು ಲಕ್ಷ ಹೆಣ್ಮಕ್ಕಳು ವೇಶ್ಯಯರಿದ್ದಾರೆ ಎಂಬುದಾಗಿ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಅವರು ನೀಡಿದ್ದಂತ ಹೇಳಿಕೆ ವೈರಲ್ ಆಗಿತ್ತು. ಅಲ್ಲದೇ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆಯೂ ಒತ್ತಾಯಿಸಲಾಗಿತ್ತು. ಈ ಬೆನ್ನಲ್ಲೇ ಅವರನ್ನು ಸುಳ್ಯದ ಬೆಳ್ಳಾರೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಹಿಂದೂ ಧರ್ಮದ ಬಿಲ್ಲವ ಸಮುದಾಯದಲ್ಲಿ 1 ಲಕ್ಷಕ್ಕೂ ಹೆಚ್ಚು ಜನ ಹೆಣ್ಣು ಮಕ್ಕಳು ವೇಶ್ಯೆಯರಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಪಂಜ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.ಈ ಹಿನ್ನೆಲೆಯಲ್ಲಿ ಬೆಳ್ಳಾರೆ ಪೊಲೀಸರು ಸಂಜೀವ ಪೂಜಾರಿ ಕಾಣಿಯೂರು ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಹಿಂದೂ ಸಂಘಟನೆಯ ಕಾರ್ಯಕರ್ತ ಸುರೇಶ್ ಎಂಬುವರ ಜೊತೆ ಪಂಜ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ದೂರವಾಣಿ ಮುಖಾಂತರ ಮಾತನಾಡುವಾಗ ಈ ಒಂದು ಹೇಳಿಕೆ ನೀಡಿದ್ದು ಅಧಿಕಾರಿಯ ಈ ಹೇಳಿಕೆಗೆ ಹಿಂದೂಪರ ಸಂಘಟನೆಗಳು ತೀವ್ರ ಆಕ್ರೋಶ ಹೊರಹಾಕಿದ್ದರು. ದೂರವಾಣಿಯಲ್ಲಿ ಮಾತನಾಡುವಾಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಸಮಾಜಕ್ಕೆ ಸೇರಿದ ಒಂದು ಲಕ್ಷ…

Read More