Author: kannadanewsnow09

ಮಂಗಳೂರು: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಜೆಡಿಎಸ್ ನಿಂದ ಧರ್ಮ ಸತ್ಯ ಯಾತ್ರೆ ಕೈಗೊಳ್ಳಲಾಗಿದೆ. ಇಂತಹ ಧರ್ಮ ಸತ್ಯ ಯಾತ್ರೆ ಇದೀಗ ಶ್ರೀಕ್ಷೇತ್ರ ಧರ್ಮಸ್ಥಳವನ್ನು ತಲುಪಿದೆ. ಶ್ರೀಕ್ಷೇತ್ರ ಧರ್ಮಸ್ಥಳವನ್ನು ಜೆಡಿಎಸ್ ನ ಧರ್ಮ ಸತ್ಯ ಯಾತ್ರೆ ತಲುಪಿದೆ. ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಈ ಯಾತ್ರೆ ನಡೆಯುತ್ತಿದೆ. ಧರ್ಮಸ್ಥಳದ ಮುಖಮಂಟಪದಿಂದ ಜೆಡಿಎಸ್ ನಾಯಕರು ಪಾದಯಾತ್ರೆ ನಡೆಸುತ್ತಿದ್ದಾರೆ. ಶಾಸಕ ಎ ಮಂಜು, ಹೆಚ್.ಟಿ ಮಂಜು, ಸಿಎಸ್ ಬಾಲಕೃಷ್ಣ, ಸುರೇಶ್ ಗೌಡ, ಪರಿಷತ್ ಸದಸ್ಯ ಭೋಜೇಗೌಡ ಮತ್ತಿತರರು ಈ ಧರ್ಮ ಸತ್ಯ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. https://kannadanewsnow.com/kannada/the-schedule-for-the-air-show-during-the-world-famous-mysuru-dasara-has-been-fixed/ https://kannadanewsnow.com/kannada/mysore-dasara-is-a-religion-transcending-and-caste-transcending-festival-banu-mushtaq-inaugurated-it-cm-siddaramaiah/

Read More

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಸಂದರ್ಭದಲ್ಲಿ ಏರ್ ಶೋ ನಡೆಸಲು ಕೇಂದ್ರ ರಕ್ಷಣಾ ಇಲಾಖೆ ಅನುಮತಿ ನೀಡಿತ್ತು. ಈ ಬೆನ್ನಲ್ಲೇ ಯಾವ ದಿನದಂದು ಮೈಸೂರ ದಸರಾ ಸಂದರ್ಭದಲ್ಲಿ ಏರ್ ಶೋ ನಡೆಯಲಿದೆ ಎನ್ನುವ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾಹಿತಿ ಹಂಚಿಕೊಂಡಿದ್ದಾರೆ. ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ದಸರಾ ಉದ್ಘಾಟಕರ ಆಯ್ಕೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿಯಲ್ಲಿ ನನಗೆ ಅಧಿಕಾರ ನೀಡಲಾಗಿತ್ತು. ನಾನು ಬುಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರಿಗೆ ದಸರಾ ಉದ್ಘಾಟನೆಗೆ ಅವಕಾಶ ನೀಡಬೇಕೆಂದು ತೀರ್ಮಾನಿಸಲಾಯಿತು. ಹಿಂದೆಯೂ ಕವಿ ನಿಸಾರ್ ಅಹಮದ್ ಅವರು ದಸರಾ ಉದ್ಘಾಟಿಸಿದ್ದಾರೆ ಎಂದರು. ದಸರಾ ನಾಡ ಹಬ್ಬ, ಸಾಂಸ್ಕೃತಿಕ ಆಚರಣೆಯಾಗಿದೆ. ನಾಡ ಹಬ್ಬವನ್ನು ಇಂಥ ಧರ್ಮದವರೇ ಉದ್ಘಾಟಿಸಬೇಕೆಂದು ಇಲ್ಲ. ನಾಡ ಹಬ್ಬ ಎಲ್ಲರಿಗೂ ಹಬ್ಬವೇ. ಹಿಂದೂ, ಕ್ರಿಶ್ಚಿಯನ್, ಬೌದ್ಧ, ಜೈನರಿಗೆ ಹಬ್ಬ. ಮಹಾರಾಜರ ಆಡಳಿತ ಇಲ್ಲದಿರುವಾಗ ಹೈದರಾಲಿ, ಟಿಪ್ಪು ಸುಲ್ತಾನ್ ಕೂಡ ದಸರಾ ಆಚರಿಸುತ್ತಿದ್ದರು. ದಿವಾನರಾಗಿದ್ದ ಮಿರ್ಜಾ ಇಸ್ಮಾಯಿಲ್ ಅವರು ದಸರಾ…

Read More

ಮೈಸೂರು: ದಸರಾ ನಾಡ ಹಬ್ಬವನ್ನು ಎಲ್ಲರೂ ಆಚರಿಸುತ್ತಾರೆ. ಆದ್ದರಿಂದ ಇದನ್ನು ಸಾಹಿತಿ, ಹೋರಾಟಗಾರ್ತಿ ಬಾನು ಮುಷ್ತಾಕ್ ಉದ್ಘಾಟನೆ ಮಾಡುವುದು ಸೂಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಅವರು ಒಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೈಸೂರು ದಸರಾ ಉದ್ಘಾಟಕರ ಆಯ್ಕೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿಯಲ್ಲಿ ನನಗೆ ಅಧಿಕಾರ ನೀಡಲಾಗಿತ್ತು. ನಾನು ಬುಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರಿಗೆ ದಸರಾ ಉದ್ಘಾಟನೆಗೆ ಅವಕಾಶ ನೀಡಬೇಕೆಂದು ತೀರ್ಮಾನಿಸಲಾಯಿತು. ಹಿಂದೆಯೂ ಕವಿ ನಿಸಾರ್ ಅಹಮದ್ ಅವರು ದಸರಾ ಉದ್ಘಾಟಿಸಿದ್ದಾರೆ. ದಸರಾ ನಾಡ ಹಬ್ಬ, ಸಾಂಸ್ಕೃತಿಕ ಆಚರಣೆಯಾಗಿದೆ. ನಾಡ ಹಬ್ಬವನ್ನು ಇಂಥ ಧರ್ಮದವರೇ ಉದ್ಘಾಟಿಸಬೇಕೆಂದು ಇಲ್ಲ. ನಾಡ ಹಬ್ಬ ಎಲ್ಲರಿಗೂ ಹಬ್ಬವೇ. ಹಿಂದೂ, ಕ್ರಿಶ್ಚಿಯನ್, ಬೌದ್ಧ, ಜೈನರಿಗೆ ಹಬ್ಬ. ಮಹಾರಾಜರ ಆಡಳಿತ ಇಲ್ಲದಿರುವಾಗ ಹೈದರಾಲಿ, ಟಿಪ್ಪು ಸುಲ್ತಾನ್ ಕೂಡ ದಸರಾ ಆಚರಿಸುತ್ತಿದ್ದರು. ದಿವಾನರಾಗಿದ್ದ ಮಿರ್ಜಾ ಇಸ್ಮಾಯಿಲ್ ಅವರು ದಸರಾ ಆಚರಿಸಿದ್ದಾರೆ. ಇದೊಂದು ಧರ್ಮಾತೀತ, ಜಾತ್ಯಾತೀತ ಹಬ್ಬ. ಕರ್ನಾಟಕದಲ್ಲಿ ಬುಕರ್ ಪ್ರಶಸ್ತಿ ಪಡೆದ ಸಾಹಿತಿಗಳು…

Read More

ನವದೆಹಲಿ: ಒಡಿಶಾದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಪರಂಪರೆಯನ್ನು ಉತ್ತೇಜಿಸುವ ಮಹತ್ವದ ಕ್ರಮವಾಗಿ, ಭಗವಾನ್ ಜಗನ್ನಾಥನ ರಥಯಾತ್ರೆಯ ಮೂರು ಪವಿತ್ರ ಚಕ್ರಗಳನ್ನು ಸಂಸತ್ತಿನ ಸಂಕೀರ್ಣದಲ್ಲಿ ಅಳವಡಿಸಲಾಗುವುದು. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಪುರಿಯ ಶ್ರೀ ಜಗನ್ನಾಥ ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ, ಅಲ್ಲಿ ದೇವಾಲಯ ಆಡಳಿತವು ಪ್ರಸ್ತಾವನೆಯನ್ನು ಮಂಡಿಸಿತು. ಬಿರ್ಲಾ ಈ ಪ್ರಸ್ತಾವನೆಯನ್ನು ಒಪ್ಪಿಕೊಂಡರು, ಇದು ದೇವಾಲಯ ಮತ್ತು ರಾಷ್ಟ್ರ ಎರಡಕ್ಕೂ ಐತಿಹಾಸಿಕ ಕ್ಷಣವಾಗಿದೆ. ಲೋಕಸಭಾ ಸ್ಪೀಕರ್ ಪುರಿ ದೇವಸ್ಥಾನಕ್ಕೆ ಭೇಟಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಇತ್ತೀಚೆಗೆ ಪುರಿಯ ಶ್ರೀ ಜಗನ್ನಾಥ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಪುರಿ ಸಂಸದ ಸಂಬಿತ್ ಪಾತ್ರ ಅವರೊಂದಿಗೆ ಈ ಪ್ರಸ್ತಾವನೆಯನ್ನು ಚರ್ಚಿಸಲಾಯಿತು. ಭೇಟಿಯ ಸಮಯದಲ್ಲಿ, ಶ್ರೀ ಜಗನ್ನಾಥ ದೇವಸ್ಥಾನ ಆಡಳಿತ (SJTA) ಚಕ್ರಗಳನ್ನು ಅಳವಡಿಸುವ ಕಲ್ಪನೆಯನ್ನು ಮಂಡಿಸಿತು, ಅದನ್ನು ಬಿರ್ಲಾ ತಕ್ಷಣ ಒಪ್ಪಿಕೊಂಡರು. SJTA ಯ ಮುಖ್ಯ ಆಡಳಿತಾಧಿಕಾರಿ ಅರಬಿಂದ ಪಾಧೀ…

Read More

ಮೈಸೂರು: ಧರ್ಮ, ಪೂಜೆ ಹಾಗೂ ಭಕ್ತಿಗಳು ಪ್ರದರ್ಶನಕ್ಕೆ ಇರುವುದಲ್ಲ. ಇವುಗಳೆಲ್ಲ ಆತ್ಮವಿಶ್ವಾಸಕ್ಕೆ ಹುಟ್ಟಿದಂತ ದಾರಿಗಳು ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರು ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ನಡೆಯುತ್ತಿರುವಂತ ಅರಸು ಅಸೋಸಿಯೇಷನ್ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದರು. ದೇವರಾಜು ಅರಸು ಅವರಿಗೆ ಸಮಾಜ ಹಾಗೂ ಜಾತಿ ಇತ್ತಾ? ದೇವರಾಜು ಅರಸು ಅವರಿಗೆ ಇದ್ದದ್ದು ನಾಯಕತ್ವದ ಗುಣ ಮಾತ್ರ. ಅವರು ರಾಜ್ಯವನ್ನು ಆಳಿದಾಗ ನಾನು ಹಿಂದುಳಿದವನೆಂದು ಭಾವಿಸಿಲ್ಲ ಎಂದರು. https://kannadanewsnow.com/kannada/useful-information-for-the-farmers-of-the-state-these-are-the-various-loan-facilities-you-can-get-from-cooperative-societies/ https://kannadanewsnow.com/kannada/itr-filing-due-date-extended/

Read More

ಬಾಗಲಕೋಟೆ: ರಾಜ್ಯದಲ್ಲಿ ಮತ್ತೊಂದು ಕೀಚಕ ಕೃತ್ಯ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿಯ ಮೇಲೆ ಅಪ್ರಾಪ್ತ ಬಾಲಕನೇ ಅತ್ಯಾಚಾರ ಎಸಗಿದ್ದಾನೆ. ಈ ಪೈಶಾಚಿಕ ಕೃತ್ಯದಿಂದಾಗಿ ಅಪ್ರಾಪ್ತ ಬಾಲಕಿ 2 ತಿಂಗಳ ಗರ್ಭಿಣಿಯಾಗುವಂತೆ ಆಗಿದೆ. ಬಾಗಲಕೋಟೆ ಜಿಲ್ಲೆಯ ಇಳಕಲ್ ಗ್ರಾಮ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 7ನೇ ತರಗತಿ ಓದುತ್ತಿರುವ ಅಪ್ರಾಪ್ತೆಯ ಮೇಲೆ 8ನೇ ತರಗತಿ ಓದುತ್ತಿರುವಂತ ಅಪ್ರಾಪ್ತ ಅತ್ಯಾಚಾರ ಎಸಗಿರುವುದಾಗಿ ಆರೋಪಿಸಲಾಗಿದೆ. ಅಪ್ರಾಪ್ತ ಬಾಲಕಿ, ಅಪ್ರಾಪ್ತ ಬಾಲಕ ಇಬ್ಬರೂ ವಸತಿ ಶಾಲೆಯ ವಿದ್ಯಾರ್ಥಿಗಳಾಗಿದ್ದು, ಅಪ್ರಾಪ್ತೆಯ ತಂದೆ ಪೊಲೀಸರಿಗೆ ಅಪ್ರಾಪ್ತನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರು ಆಧರಿಸಿ ಇಳಕಲ್ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತನ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. https://kannadanewsnow.com/kannada/the-accused-of-sexual-assault-on-a-minor-girl-has-been-sentenced-to-20-years-in-prison-and-a-fine-of-75000/ https://kannadanewsnow.com/kannada/itr-filing-due-date-extended/

Read More

ಶಿವಮೊಗ್ಗ: ಜಿಲ್ಲೆಯಲ್ಲಿ 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದಂತ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ, 75000 ದಂಡವನ್ನು ಶಿವಮೊಗ್ಗ ನ್ಯಾಯಾಲಯದ ವಿಧಿಸಿ ಆದೇಶಿಸಿದೆ. 2022ರಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ವ್ಯಕ್ತಿಯೊಬ್ಬ 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯವನ್ನೆಸಗಿದ್ದಾನೆಂದು ನೊಂದ ಬಾಲಕಿ ಹೇಳಿದ ದೂರಿನ ಮೇರೆಗೆ ಮಾಳೂರು ಪೊಲೀಸ್ ಠಾಣೆಯಲ್ಲಿ ಕಲಂ 376(2)(ಎನ್),‌ 366, 363 ಐಪಿಸಿ ಕಾಯ್ದೆ ಹಾಗೂ ಕಲಂ 06 ಪೋಕ್ಸೋ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣದ ತನಿಖಾಧಿಕಾರಿ ಮಾಳೂರು ವೃತ್ತದ ಸಿಪಿಐ ಪ್ರವೀಣ್ ನೀಲಮ್ಮನವರ್ ಪ್ರಕರಣದ ತನಿಖೆ ಪೂರೈಸಿ, ಘನ ನ್ಯಾಯಾಲಯಕ್ಕೆ ಆರೋಪಿಯ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು. ಈ ಪ್ರಕರಣದ ಬಗ್ಗೆ ಘನ ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದಂತ ಶ್ರೀಧರ್ ಹೆಚ್. ಆರ್ ವಾದ ಮಂಡಿಸಿದ್ದು. ಶಿವಮೊಗ್ಗ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ FTSC-1  ಪ್ರಕರಣದ ವಿಚಾರಣೆ ನಡೆಸಿ, ಆರೋಪಿಯ ವಿರುದ್ಧ…

Read More

ಮೈಸೂರು: ಬೀರೂರು-ಶಿವಪುರ, ಬೀರೂರು-ತಾಳಗುಪ್ಪ ಹಾಗೂ ಬೀರೂರು-ನಾಗವಂಗಲ ಸ್ಟೇಷನ್‌ಗಳ ನಡುವೆ ಲೈನ್ ಮತ್ತು ವಿದ್ಯುತ್ ತಡೆ ಹಾಗೂ ಎನ್‌.ಎಚ್.-206 ರಲ್ಲಿ ಎನ್‌ಎಚ್‌ಎಐ ರಸ್ತೆ ಮೇಲ್ಸೇತುವೆಗೆ (ಆರ್.ಓ.ಬಿ) ಬೋಸ್ಟ್ರಿಂಗ್ ಗರ್ಡರ್ ಅಳವಡಿಸುವ ಕಾರ್ಯಕ್ಕಾಗಿ (ಎಲ್‌.ಸಿ ಸಂಖ್ಯೆ 128 ಮತ್ತು 2 ಬದಲಿಗೆ) ಕೆಳಕಂಡ ಕೆಲವು ರೈಲುಗಳು ರದ್ದುಗೊಳ್ಳುತ್ತವೆ, ನಿಯಂತ್ರಣಕ್ಕೊಳಪಡುತ್ತವೆ ಹಾಗೂ ಮರುನಿಗದಿಗೊಳ್ಳುತ್ತವೆ: ರದ್ದುಪಡಿಸಿದ ರೈಲುಗಳು ರೈಲು ಸಂಖ್ಯೆ. 16567 ತುಮಕೂರು – ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ 31 ಆಗಸ್ಟ್, 1, 8, 14 ಮತ್ತು 15 ಸೆಪ್ಟೆಂಬರ್ 2025 ರಂದು ರದ್ದು. ರೈಲು ಸಂಖ್ಯೆ. 16568 ಶಿವಮೊಗ್ಗ ಟೌನ್ – ತುಮಕೂರು ಎಕ್ಸ್‌ಪ್ರೆಸ್ 1, 2, 9, 15 ಮತ್ತು 16 ಸೆಪ್ಟೆಂಬರ್ 2025 ರಂದು ರದ್ದು. ರೈಲು ಸಂಖ್ಯೆ. 16214 ಎಸ್ಎಸ್ಎಸ್ ಹಬ್ಬಳ್ಳಿ – ಅರಸೀಕೆರೆ ಎಕ್ಸ್‌ಪ್ರೆಸ್ 8 ಸೆಪ್ಟೆಂಬರ್ 2025 ರಂದು ರದ್ದು. ರೈಲು ಸಂಖ್ಯೆ. 16213 ಅರಸೀಕೆರೆ – ಎಸ್ಎಸ್ಎಸ್ ಹಬ್ಬಳ್ಳಿ ಎಕ್ಸ್‌ಪ್ರೆಸ್ 9 ಸೆಪ್ಟೆಂಬರ್ 2025 ರಂದು ರದ್ದು. ರೈಲು…

Read More

ಬೆಂಗಳೂರು: ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದಿಂದ ತಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ, ಗುತ್ತಿಗೆ ವೈದ್ಯರಿಗೆ ನೇರ ನೇಮಕಾತಿ ವೇಳೆ ಕೃಪಾಂಕ ನೀಡುವಂತೆ, ವೈದ್ಯಾಧಿಕಾರಿಗಳಿಗೆ ಆಡಳಿತಾತ್ಮಕ ಹುದ್ದೆಗಳನ್ನು ನೀಡುವ ಸಂದರ್ಭದಲ್ಲಿ ಕೆಲ ಮಾನದಂಡಗಳನ್ನು ಅಳವಡಿಸುವಂತೆ ಪತ್ರದಲ್ಲಿ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಈ ಕುರಿತಂತೆ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಡಾ.ರವೀಂದ್ರನಾಥ್ ಎಂ ಮೇಟಿ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ವೈದ್ಯಾಧಿಕಾರಿಗಳಿಗೆ ಆಡಳಿತಾತ್ಮಕ ಹುದ್ದೆಗಳನ್ನು ನೀಡುವ ಸಂದರ್ಭದಲ್ಲಿ ಈ ಕೆಳಕಂಡ ಮಾನದಂಡಗಳನ್ನು ಅಳವಡಿಸುವಂತೆ ಮನವಿ 1. ಸ್ನಾತಕೋತ್ತರ ವ್ಯಾಸಂಗದ ಅವಧಿಯಲ್ಲಿ ನೀಡಿದ ಬಾಂಡ್ ಅವಧಿಯನ್ನು ಮುಂದಿನ ದಿನಗಳಲ್ಲಿ (Prospective) ಪರಿಗಣಿಸುವುದು. 2. ಯಾವುದೇ ಸೇವಾನಿರತ ಸ್ನಾತಕೋತ್ತರ ವ್ಯಾಸಂಗ ಮುಗಿಸಿ ಕನಿಷ್ಟ 10 ವರ್ಷ ಕಾರ್ಯನಿರ್ವಹಿಸಿದ ಹಾಗೂ ಜೇಷ್ಠತೆಯ ಆಧಾರದ ಮೇಲೆ ಜಿಲ್ಲಾ ಶಸ್ತ್ರಚಿಕಿತ್ಸಕರು/ಮೇಲ್ದರ್ಜೆಯ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರ ಹುದ್ದೆಗಳಿಗೆ ಪರಿಗಣಿಸುವುದು. 3. ಆಡಳಿತಾತ್ಮಕ ಹುದ್ದೆಗಳಿಗೆ ತಾವೇ ನಿಗಧಿಪಡಿಸಿದ ಮಾನದಂಡದಂತೆ 3 ವರ್ಷ/4 ವರ್ಷ…

Read More

ಬೆಂಗಳೂರು: ಧರ್ಮಸ್ಥಳದ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಅಹೋರಾತ್ರ ಆಲಿಯಾಸ್ ನಟೇಶ್ ಪೊಲಿಪಲ್ಲಿ ಎಂಬಾತನಿಗೆ 15 ದಿನಗಳ ಸಿವಿಲ್ ಸೆರೆವಾಸದ ಶಿಕ್ಷೆಯನ್ನು ವಿಧಿಸಿ ಕೋರ್ಟ್ ಆದೇಶಿಸಿದೆ. ಧರ್ಮಸ್ಥಳದ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆಯನ್ನು ಅಹೋರಾತ್ರಾ ಆಲಿಯಾಸ್ ನಟೇಶ್ ಪೊಲಿಪಲ್ಲಿ ಎಂಬುವರು ನೀಡಿದ್ದಾಗಿ ಬೆಂಗಳೂರಿನ 11ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಶೀನಪ್ಪ ಎಂಬುವರು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ಅದರಲ್ಲಿ ನಿರ್ಬಂಧಕಾಜ್ಞೆ ಉಲ್ಲಂಘಿಸಿ ಅವಹೇಳನಕಾರಿ ಹೇಳಿಕೆಯನ್ನು ನೀಡಿದ್ದಾರೆ ಎಂಬುದಾಗಿ ಉಲ್ಲೇಖಿಸಲಾಗಿತ್ತು. ಅವಹೇಳನಕಾರಿ ಹೇಳಇಕೆ ನೀಡದಂತೆ ಕೋರ್ಟ್ ನಿರ್ಬಂಧಿಸಿತ್ತು. ವೀಡಿಯೋ ಡಿಲೀಟ್ ಮಾಡುವಂತೆ ಆದೇಶಿಸಿದ್ದರೂ ಪಾಲಿಸಿರಲಿಲ್ಲ. ಕೋರ್ಟ್ ಆದೇಶ ಅವಗಣನೆ ಮಾಡಿದ ಹಿನ್ನಲೆಯಲ್ಲಿ ಶಿಕ್ಷೆ ವಿಧಿಸಿದೆ. 15 ದಿನಗಳ ಸೆರೆವಾಸದ ಶಿಕ್ಷೆಯನ್ನು ಕೋರ್ಟ್ ವಿಧಿಸಿದೆ. https://kannadanewsnow.com/kannada/ganesh-festival-celebration-background-dc-orders-a-ban-on-firecrackers-across-bengaluru-south-district/ https://kannadanewsnow.com/kannada/courts-cant-stand-in-way-of-new-online-gaming-act-centre-tells-karnataka-hc/

Read More