Author: kannadanewsnow09

ಬೆಂಗಳೂರು: ನಿನ್ನೆ ಗಣೇಶೋತ್ಸವ ವಿಸರ್ಜನಾ ಮೆರವಣಿಗೆ ವೇಳೆ ಪಟಾಕಿ ಸ್ಪೋಟಗೊಂಡು ಓರ್ವ ಬಾಲಕ ಸಾವನ್ನಪ್ಪಿದಂತ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಮತ್ತೂರಿನಲ್ಲಿ ನಡೆದಿತ್ತು. ಈ ಹಿನ್ನಲೆಯಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯಾಧ್ಯಂತ ಪಟಾಕಿ, ಸಿಡಿಮದ್ದು ಇನ್ನಿತರ ಸ್ಪೋಟಕ ವಸ್ತು ಸಿಡಿಸುವುದು ನಿಷೇಧಿಸಿ ಡಿಸಿ ಆದೇಶಿಸಿದ್ದಾರೆ. ಈ ಕುರಿತಂತೆ ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿ ಯಶವಂತ್ ವಿ ಗುರುಕಾರ್ ಅವರು ಆದೇಶಸಿದ್ದು, ಗಣೇಶ ಹಬ್ಬದ ಆಚರಣೆಯ ವೇಳೆಯಲ್ಲಿ ಪಟಾಕಿ, ಸಿಡಿಮದ್ದು ಇನ್ನಿತರ ಸ್ಪೋಟಕ ವಸ್ತು ಸಿಡಿಸುವುದನ್ನು ನಿಷೇಧಿಸಲಾಗಿದೆ ಎಂದಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮತ್ತೂರಿನಲ್ಲಿ ನಿನ್ನೆ ಪಟಾಕಿ ಸ್ಪೋಟಗೊಂಡು ಓರ್ವ ಬಾಲಕ ಸಾವನ್ನಪ್ಪಿದ್ದನು. ಅಲ್ಲದೇ ಆರು ಮಂದಿ ಗಾಯಗೊಂಡಿದ್ದರು. ಹೀಗಾಗಿ ಸಾರ್ವಜನಿಕರ ಹಿತದೃಷ್ಟಿ ಹಾಗೂ ಮುಂಜಾಗ್ರತಾ ಕ್ರಮವಾಗಿ ಪಟಾಕಿ ನಿಷೇಧಿಸಿ ಆದೇಶಿಸಿದ್ದಾರೆ. https://kannadanewsnow.com/kannada/bjp-leaders-are-directly-responsible-for-the-defection-maddur-mla-k-m-uday/ https://kannadanewsnow.com/kannada/courts-cant-stand-in-way-of-new-online-gaming-act-centre-tells-karnataka-hc/

Read More

ಮಂಡ್ಯ : ದೇಶದಲ್ಲಿ ಮತಾಂತರಕ್ಕೆ ಬಿಜೆಪಿ ನಾಯಕರೇ ನೇರ ಕಾರಣರಾಗುತ್ತಿದ್ದಾರೆ ಎಂದು ಶಾಸಕ ಕೆ.ಎಂ.ಉದಯ್ ಕಿಡಿಕಾರಿದರು. ಮದ್ದೂರು ತಾಲೂಕಿನ ನೀಲಕಂಠನಹಳ್ಳಿ, ಕೆ.ಹಾಗಲಹಳ್ಳಿ ಹಾಗೂ ಭೀಮನಕೆರೆ ಗ್ರಾಮಗಳಲ್ಲಿ ಶನಿವಾರ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಈ ಹಿಂದೆ ಗ್ರಾಮಗಳಲ್ಲಿ ಸರ್ವ ಧರ್ಮದವರೆಲ್ಲ ಸೇರಿ ಅನ್ಯೋನ್ಯತೆ ಹಾಗೂ ಸಹಬಾಳ್ವೆಯಿಂದ ಜೀವನ ನಡೆಸುತ್ತಿದ್ದರು. ಆದರೆ ಈಗ ಜಾತಿಗಳನ್ನು ಗುರುತಿಸುವ ಮೂಲಕ ಇವರು ಇಂತಹ ಜಾತಿ, ಇಂತಹ ಪಂಗಡದವರು ಸೀಮಿತವಾಗಿದ್ದಾರೆ ಎಂದು ದೇಶದಲ್ಲಿ ಬಿಜೆಪಿಯವರು ವಿಷ ಬೀಜ ಬಿತ್ತುವ ಮೂಲಕ ಅನಗತ್ಯವಾಗಿ ಜಾತೀಯತೆ ಸೃಷ್ಟಿಸುತ್ತಿರುವ ಪರಿಣಾಮವೇ ದೇಶದಲ್ಲಿ ಮತಾಂತರಕ್ಕೆ ಬಿಜೆಪಿ ನಾಯಕರೇ ನೇರ ಕಾರಣರಾಗುತ್ತಿದ್ದಾರೆ ಎಂದು ಶಾಸಕ ಉದಯ್ ಕಿಡಿಕಾರಿದರು. ಇನ್ನು ದಸರಾ ಉದ್ಘಾಟನೆಯ ಅಪಸ್ವರದ ಬಗ್ಗೆ ಮಾತನಾಡಿ, ಭಾನು ಮುಷ್ತಾಕ್ ಅವರು ಭಾರತದ ಪ್ರಜೆ, ಸಣ್ಣ ಸಣ್ಣ ವಿಚಾರಗಳಿಗೂ ಜಾತಿ, ಧರ್ಮ ತರುವುದು ಸರಿಯಲ್ಲ. ದೇವಾಲಯಗಳಿಗೆ ಯಾರು ಬೇಕಾದರೂ ಹೋಗಬಹುದು. ನಮ್ಮನ್ನು ಕೂಡ ಪ್ರೀತಿಯಿಂದ ಹಬ್ಬ ಹಾಗೂ ಸಮಾರಂಭಗಳಿಗೆ ಬಾಂಧವರು ಚರ್ಚ್, ಮಸೀದಿಗೆ…

Read More

ನೋಯ್ಡಾ: ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಅಶ್ವಿನಿ ವೈಷ್ಣವ್ ಅವರು ಇಂದು ನೋಯ್ಡಾದಲ್ಲಿ ಮೊಬೈಲ್ ಸಾಧನಗಳಿಗಾಗಿ ಭಾರತದ ಮೊದಲ ಟೆಂಪರ್ಡ್ ಗ್ಲಾಸ್ ಉತ್ಪಾದನಾ ಘಟಕವನ್ನು ಉದ್ಘಾಟಿಸಿದರು. ಅಮೆರಿಕದ ʻಕಾರ್ನಿಂಗ್ ಇನ್ಕಾರ್ಪೊರೇಟೆಡ್ʼ ಸಹಯೋಗದೊಂದಿಗೆ ʻಆಪ್ಟಿಮಸ್ ಎಲೆಕ್ಟ್ರಾನಿಕ್ಸ್ʼ ಸಂಸ್ಥೆಯು ಈ ಘಟಕವನ್ನು ಸ್ಥಾಪಿಸಿದೆ ಮತ್ತು ಜಾಗತಿಕವಾಗಿ ಗುರುತಿಸಲ್ಪಟ್ಟ ಬ್ರಾಂಡ್ “ಇಂಜಿನೀಯರ್ಡ್ ಬೈ ಕಾರ್ನಿಂಗ್” ಅಡಿಯಲ್ಲಿ ಉತ್ತಮ ಗುಣಮಟ್ಟದ ಟೆಂಪರ್ಡ್ ಗ್ಲಾಸ್ ಅನ್ನು ಉತ್ಪಾದಿಸುತ್ತದೆ. ಉತ್ಪನ್ನಗಳನ್ನು ದೇಶೀಯ ಮತ್ತು ಅಂತರರಾಷ್ಟ್ರೀಯ ಮಾರುಕಟ್ಟೆಗಳಿಗೆ ಪೂರೈಸಲಾಗುವುದು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಟೆಂಪರ್ಡ್ ಗ್ಲಾಸ್,  ಮೊಬೈಲ್ ಫೋನ್ ಗಳಿಗೆ ಪ್ರಮುಖ ಪರಿಕರವಾಗಿದ್ದು, ಅದರ ದೇಶೀಯ ಉತ್ಪಾದನೆಯು ʻಮೇಕ್ ಇನ್ ಇಂಡಿಯಾʼ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ದೂರದೃಷ್ಟಿಯ ಯಶಸ್ಸಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ ಎಂದರು. ಹಂತ ಹಂತವಾಗಿ, ಚಿಪ್ಸ್, ಕವರ್ ಗ್ಲಾಸ್ ಗಳು, ಲ್ಯಾಪ್ ಟಾಪ್ ಮತ್ತು ಸರ್ವರ್ ಘಟಕಗಳು ಸೇರಿದಂತೆ ಮೊಬೈಲ್ ಫೋನ್ ಗಳಲ್ಲಿ ಬಳಸುವ ಪ್ರತಿಯೊಂದು ಬಿಡಿಭಾಗವನ್ನೂ ಭಾರತ ತಯಾರಿಸುತ್ತದೆ, ಆ ಮೂಲಕ ಎಲೆಕ್ಟ್ರಾನಿಕ್ಸ್…

Read More

ಬೆಳಗಾವಿ: ಸುಮಾರು 145 ಕೋಟಿ ರೂ. ಮೌಲ್ಯದ ನಕಲಿ ಇನ್ ವಾಯ್ಸ್ ಗಳನ್ನು ಸೃಷ್ಟಿಸಿ ಅಂದಾಜು 45 ಕೋಟಿ ರೂಪಾಯಿ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಜಿ.ಎಸ್.ಟಿ. ಗುಪ್ತಚರ ನಿರ್ದೇಶನಾಲಯದ (ಡಿಜಿಜಿಐ), ಬೆಳಗಾವಿ ವಲಯ ಘಟಕದ ಅಧಿಕಾರಿಗಳು ಬಂಧಿಸಿದ್ದಾರೆ. ಪ್ರಾಥಮಿಕ ಶೋಧಗಳ ಪ್ರಕಾರ , ನಕಲಿ ದಾಖಲೆಗಳನ್ನು ಬಳಸಿಕೊಂಡು ಸುಸಜ್ಜಿತ ಗುಂಪೊಂದು ನಕಲಿ ಜಿ ಎಸ್ ಟಿ ನೋಂದಣಿಗಳನ್ನು ಸೃಷ್ಟಿಸಿ ನಕಲಿ ಐಟಿಸಿಯನ್ನು ಪಡೆದುಕೊಂಡು ರವಾನಿಸುವ ಚಟುವಟಿಕೆಯಲ್ಲಿ ನಿರತವಾಗಿತ್ತು. ಶೋಧದ ಸಮಯದಲ್ಲಿ ಆರೋಪಿ ಯಿಂದ ಅಧಿಕಾರಿಗಳು ಮೊಬೈಲ್ ಫೋನ್, ನಕಲಿ ದಾಖಲೆಗಳು, ನಕಲಿ ಆಧಾರ್ ಕಾರ್ಡುಗಳು ಮತ್ತು ನಕಲಿ ಸಂಸ್ಥೆಗಳ ಸೈನ್ ಬೋರ್ಡ್ ನ ಛಾಯಾಚಿತ್ರಗಳು ಸೇರಿದಂತೆ ಹಲವಾರು ದಾಖಲೆಗಳು ಮತ್ತು  ಸಾಕ್ಷ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ನಕಲಿ ಇನ್ವಾಯ್ಸ್ ಗಳು ಮತ್ತು ಇ-ವೇ ಬಿಲ್ ಗಳನ್ನು ರಚಿಸಲು ನೈಜ ವ್ಯಾಪಾರ ಕಾರ್ಯಾಚರಣೆಗಳಿಲ್ಲದ ಶೆಲ್ ಕಂಪನಿಗಳನ್ನು ಬಳಕೆ ಮಾಡಿಕೊಂಡಿರುವುದು ಈ ವೇಳೆ ಬೆಳಕಿಗೆ ಬಂದಿದೆ. ಹಾಗೇಯೇ ಆರೋಪಿಯ 26 ನಕಲಿ ಜಿ.ಎಸ್.ಟಿ.…

Read More

ಬೆಂಗಳೂರು: ಸ್ವಾತಂತ್ರ್ಯ ಭಾರತವನ್ನು ಹೇಗೆ ಇಟ್ಟುಕೊಳ್ಳಬೇಕು. ಗಳಿಸಿದ ಸ್ವಾತಂತ್ರ್ಯವನ್ನು ಹೇಗೆ ಕಾಪಾಡಿಕೊಳ್ಳಬೇಕು ಎಂಬುದರ ಬಗ್ಗೆ ಇಂದಿನ ಯುವಜನತೆ ಯೋಚನೆ ಮಾಡುವುದಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ನೇತಾಜಿ ಸುಭಾಶ್‌ಚಂದ್ರ ಬೋಸ್ ಟ್ರಸ್ಟ್, ಸನ್‌ಸ್ಟಾರ್ ಪಬ್ಲಿಷರ್ಸ್ ವತಿಯಿಂದ ನಗರದ ಟೌನ್‌ಹಾಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರೊ. ಕೆ.ಈ.ರಾಧಾಕೃಷ್ಣ ಅವರು ಅನುವಾದಿಸಿರುವ ನೇತಾಜಿ ಸುಭಾಶ್‌ಚಂದ್ರ ಬೋಸ್‌ ರವರ ‘ಒಂದು ಅಪೂರ್ಣ ಆತ್ಮಕಥೆ’, ‘ಭಾರತೀಯ ಹೋರಾಟ’, ‘ಅಸಾಮಾನ್ಯ ದಿನಚರಿ’ ಮೂರು ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ಮಹಾತ್ಮ ಗಾಂಧೀಜಿ, ನೇತಾಜಿ ಸುಭಾಶ್‌ಚಂದ್ರ ಬೋಸ್ ಸೇರಿದಂತೆ ಹಲವರು ಸ್ವಾತಂತ್ರ್ಯ ತಂದುಕೊಟ್ಟಿರುವ ಬಗ್ಗೆ ಮುಂದಿನ ಪೀಳಿಗೆ ಹೇಗೆ ಯೋಚಿಸುತ್ತಿದೆ ಎಂಬುದು ಮುಖ್ಯವಾಗಿದೆ. ಇಲ್ಲವಾದರೆ ದೇಶಕ್ಕೆ ಸ್ವಾತಂತ್ರ್ಯ ಹಾಗೆಯೇ ಬಂದಿದೆ ಎಂಬ ಭಾವನೆ ಅವರಲ್ಲಿ ಬರುತ್ತದೆ ಎಂದರು. ದೇಶಕ್ಕೆ ಸ್ವಾತಂತ್ರ್ಯ ಗಳಿಸಲು ಏನು ಬೇಕಾದರು ತ್ಯಾಗ ಮಾಡುತ್ತೇನೆ. ಬ್ರಿಟೀಷರನ್ನು ದೇಶದಿಂದ ತೊಲಗಿಸಿ, ದೇಶಕ್ಕೆ ಎಷ್ಟು ಬೇಗ ಸ್ವಾತಂತ್ರ್ಯವನ್ನು ತಂದುಕೊಡಬೇಕು ಎಂಬ ಉದ್ದೇಶದ ಇಚ್ಛಾಶಕ್ತಿಯನ್ನು ನೇತಾಜಿ ಅವರು ಹೊಂದಿದ್ದರು.…

Read More

ಬೆಂಗಳೂರು: ನಗರದಲ್ಲಿ ನಾಳೆ 4ನೇ ದಿನದ ಗಣೇಶ ಮೂರ್ತಿ ವಿಸರ್ಜನೆ ಮಾಡಲಾಗುತ್ತಿದೆ. ಪ್ರಮುಖ ಕೆರೆ, ಕಲ್ಯಾಣಿಗಳನಲ್ಲಿ ಗಣೇಶ ಮೂರ್ತಿಯನ್ನು ಬಿಡಲಾಗುತ್ತಿದೆ. ಈ ಹಿನ್ನಲೆಯಲ್ಲಿ ನಾಳೆ ಬೆಂಗಳೂರು ಜಿಲ್ಲೆಯಾಧ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಈ ಕುರಿತಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್.ಜಿ ಅವರು ಆದೇಶ ಹೊರಡಿಸಿದ್ದು, ಪೊಲೀಸ್ ಅಧೀಕ್ಷಕರು, ಬೆಂಗಳೂರು ಜಿಲ್ಲೆ ರವರು ಉಲ್ಲೇಖ (1) ರಂತೆ ಪತ್ರ ಸಲ್ಲಿಸಿ, ದಿನಾಂಕ 31-08-2025 ರಂದು ಆನೇಕಲ್ ತಾಲ್ಲೂಕು ವ್ಯಾಪ್ತಿಯಲ್ಲಿ ಹೆಚ್ಚಿನ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ಕಾರ್ಯಕ್ರಮಗಳು ನಡೆಯಲಿರುವುದರಿಂದ ಹಾಗೂ ದಿನಾಂಕ 31-08-2025 ರಂದು ಭಾನುವಾರ ರಜಾ ದಿನ ಆಗಿರುವುದರಿಂದ ಗಣೇಶ ಮೂರ್ತಿಗಳ ವಿಸರ್ಜನ ಮೆರವಣಿಗೆ ಕಾರ್ಯಕ್ರಮದಲ್ಲಿ ಹೆಚ್ಚಿನ ಜನರು ಭಾಗವಹಿಸುವ ಸಾಧ್ಯತೆ ಇರುವುದರಿಂದ ಕೆಲವರು ಮದ್ಯಪಾನ ಮಾಡಿ ಅನುಚಿತ ವರ್ತನೆ ಮಾಡುವ ಸಾಧ್ಯತೆ ಇರುತ್ತದೆಂದು ಮುಂಜಾಗ್ರತಾ ಕ್ರಮವಾಗಿ ಆನೇಕಲ್ ತಾಲ್ಲೂಕಿನಲ್ಲಿರುವ ಎಲ್ಲಾ ಬಾರ್ ಗಳನ್ನು ದಿನಾಂಕ 31-08-2025 ರಂದು ಮುಚ್ಚಿಸಬೇಕೆಂದು ಕೋರಿರುತ್ತಾರೆ. ಅದರಂತೆ ಅಬಕಾರಿ ಉಪ ಆಯುಕ್ತರು (ಬಿಯುಡಿ-8)…

Read More

ಚಿತ್ರದುರ್ಗ: ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ. ಬಾನು ಮುಷ್ತಾಕ್ ಅವರಿಂದಲೇ ದಸರಾ ಉದ್ಘಾಟನೆಗೆ ಸಿಎಂ ಮತ್ತು ಡಿಸಿಎಂ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿಯವರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಹ್ವಾನಕ್ಕೆ ಅಪಪ್ರಚಾರ ಮಾಡುತ್ತಿದ್ದಾರೆ. ಚಾಮುಂಡೇಶ್ವರಿ ದೇವಾಲಯ ಮುಜರಾಯಿ ಇಲಾಖೆಗೆ ಸೇರಿದೆ. ಹಿಂದೂಗಳಿಗೆ ಸೇರಿದೆ ಎಂಬುವುದರಲ್ಲಿ ಎರಡು ಮಾತಿಲ್ಲ. ಆದರೆ ಬಿಜೆಪಿಯವರಿಗೆ ಚೇಷ್ಟೆ ಮಾಡದಿದ್ದರೆ ಅವರಿಗೆ ನಿದ್ದೆ ಬರಲ್ಲ ಎಂದು ಕಿಡಿಕಾರಿದರು. ಚಾಮುಂಡೇಶ್ವರಿ ಪ್ರಾಧಿಕಾರ ಅಧಿಕೃತ ಹೌದೋ ಅಲ್ಲವೋ ಎಂಬುದನ್ನು ಕೋರ್ಟ್ ತಿರ್ಮಾನಿಸುತ್ತದೆ. ದಸರಾ ನಾಡಹಬ್ಬ ಏಳು ಕೋಟಿ ಜನರಿಗೆ ಸೇರಿರುವ ಹಬ್ಬವಾಗಿದೆ. ಮಾಜಿ ಸಿಎಂ ಯಡಿಯೂರಪ್ಪ ಕಾಲದಲ್ಲಿ ಅಬ್ದುಲ್ ಕಲಾಂ ಅವರನ್ನು ಆಹ್ವಾನಿಸಿದ್ದರು. ಈ ಹಿಂದೆ ಕವಿ ನಿಸಾರ್ ಅಹ್ಮದ್ ಅವರು ದಸರಾ ಉದ್ಘಾಟಿಸಿದ್ದರು. ಆಗ ಬಿಜೆಪಿಯವರು ಕುಂಕುಮ ಹಚ್ಚಿಕೊಂಡು ಬನ್ನಿ ಎಂದಿದ್ರಾ ಎಂದು ಪ್ರಶ್ನಿಸಿದರು. ಅವರವರ ಧರ್ಮ ಅವರಿಗೆ ಶ್ರೇಷ್ಠ, ಯಾವುದೇ…

Read More

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದಲ್ಲಿ ನಿರ್ಮಿಸಿರುವಂತ ನೂತನ ಕೆ ಎಸ್ ಆರ್ ಟಿ ಸಿ ಘಟಕವನ್ನು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಉದ್ಘಾಟಿಸಿದರು. ಈ ಮೂಲಕ ಸಚಿವ ಡಿ.ಸುಧಾಕರ್ ಮತ್ತು ಸಾರ್ವಜನಿಕ ಪ್ರಯಾಣಿಕರ ಬಹುದಿನಗಳ‌ ಬೇಡಿಕೆಯಾದ ಹಿರಿಯೂರು ಘಟಕವನ್ನು ಲೋಕಾರ್ಪಣೆಗೊಳಿಸಿದರು. ಇಂದು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಹುಳಿಯಾರು ರಸ್ತೆಯಲ್ಲಿರುವ ರೂ. 06 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ನೂತನ ಹಿರಿಯೂರು ಬಸ್ ಘಟಕ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ಕಳೆದ 2017 ರಲ್ಲಿ ಸಾರಿಗೆ ಸಚಿವನಾಗಿದ್ದಾಗ ದಾವಣಗೆರೆ ಹಾಗೂ ತುಮಕೂರು ವಿಭಾಗದಲ್ಲಿದ್ದ ಚಿತ್ರದುರ್ಗವನ್ನು ಪ್ರತ್ಯೇಕ ವಿಭಾಗವನ್ನಾಗಿ ಪ್ರಾರಂಭಿಸಲು ಅನುಮತಿ ನೀಡಿದ್ದೆ. ಅದರಂತೆ ಚಿತ್ರದುರ್ಗ ವಿಭಾಗವು 2018 ರಿಂದ ಕಾರ್ಯನಿರ್ವಹಿಸುತ್ತಿದೆ. ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಬಸ್ ಘಟಕಗಳನ್ನು ನಿರ್ಮಿಸಲಾಗುತ್ತಿದೆ. ಮೊಳಕಾಲ್ಮೂರು ಹಾಗೂ ಹೊಳಲ್ಕೆರೆ ನೂತನ ಬಸ್ ಘಟಕಗಳ ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿದೆ. ಈ ಘಟಕಗಳಲ್ಲಿ ಡೀಸೆಲ್ ಪಂಪ್ ನಿರ್ಮಿಸಲು ಜಿಲ್ಲಾಧಿಕಾರಿಗಳು ಅನುಮತಿ ನೀಡಿದ್ದಾರೆ. ಇನ್ನೂ ಎರಡು ತಿಂಗಳಲ್ಲಿ ಬಸ್…

Read More

ಯೆಮೆನ್: ಶನಿವಾರ ಇಸ್ರೇಲ್ ನಡೆಸಿದ ದಾಳಿಯಲ್ಲಿ ರಾಜಧಾನಿ ಸನಾದಲ್ಲಿ ಬಂಡುಕೋರರ ನಿಯಂತ್ರಣದಲ್ಲಿರುವ ಯೆಮೆನ್ ಸರ್ಕಾರದ ಪ್ರಧಾನಿ ಸಾವನ್ನಪ್ಪಿದ್ದಾರೆ ಎಂದು ಹೌತಿಗಳು ತಿಳಿಸಿದ್ದಾರೆ. ಗುರುವಾರ ಸನಾದಲ್ಲಿ ಇಸ್ರೇಲ್ ನಡೆಸಿದ ದಾಳಿಯಲ್ಲಿ ಅಹ್ಮದ್ ಅಲ್-ರಹಾವಿ ಮತ್ತು ಹಲವಾರು ಸಚಿವರು ಸಾವನ್ನಪ್ಪಿದ್ದಾರೆ ಎಂದು ಬಂಡುಕೋರರು ಹೇಳಿಕೆಯಲ್ಲಿ ತಿಳಿಸಿದ್ದಾರೆ. “ಯೆಮೆನ್‌ನ ಸನಾ ಪ್ರದೇಶದಲ್ಲಿ ಹೌತಿ ಭಯೋತ್ಪಾದಕ ಆಡಳಿತದ ಮಿಲಿಟರಿ ಗುರಿಯ ಮೇಲೆ ನಿಖರವಾಗಿ ದಾಳಿ ನಡೆಸಲಾಗಿದೆ” ಎಂದು ಇಸ್ರೇಲ್ ಸೇನೆ ಹೇಳಿದೆ. ಇದು ಒಂದು ಬ್ರೇಕಿಂಗ್ ಸ್ಟೋರಿ. ಪರಿಶೀಲಿಸಿದ ವಿವರಗಳು ಹೊರಬರುತ್ತಿದ್ದಂತೆ ನಾವು ಈ ವರದಿಯನ್ನು ನವೀಕರಿಸುತ್ತೇವೆ.

Read More

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ಆಗಸ್ಟ್, 31 ರಿಂದ ಜಾರಿಗೊಳಿಸುತ್ತಿರುವ ಸ್ಥಿರಾಸ್ತಿ ಮೇಲಿನ ವ್ಯವಹಾರಗಳ ದಸ್ತಾವೇಜುಗಳಿಗೆ ವಿಧಿಸುತ್ತಿರುವ ನೋಂದಣಿ ಮತ್ತು ಮುದ್ರಾಂಕ ಶುಲ್ಕವು ನೆರೆಹೊರೆಯ ರಾಜ್ಯಗಳಲ್ಲಿರುವ ದರಗಳಿಗಿಂತ ಪ್ರಸ್ತುತ ಕಡಿಮೆ ಶುಲ್ಕ ಇದ್ದು, ಅದನ್ನು ಇತರೆ ರಾಜ್ಯಗಳ ಶುಲ್ಕಗಳೊಂದಿಗೆ ಸಮೀಕರಣ ಮಾಡಿ ಪರಿಷ್ಕರಿಸಲಾಗುತ್ತಿದೆ ಎಂದು ನೋಂದಣಿ ಮತ್ತು ಮುದ್ರಾಂಕ ಶುಲ್ಕ ಆಯುಕ್ತ ಮುಲೈ ಮುಗಿಲನ್ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಮುದ್ರಾಂಕ ,ನೋಂದಣಿ ಹಾಗೂ ಇತರೆ ಸೆಸ್ ಸೇರಿ ಕರ್ನಾಟಕ ರಾಜ್ಯವು ಶೇ.6.6 ರಷ್ಟು ವಿಧಿಸುತ್ತಿತ್ತು. ಇದೇ ಅವಧಿಯಲ್ಲಿ ಈ ಶುಲ್ಕವು ತಮಿಳುನಾಡು ರಾಜ್ಯದಲ್ಲಿ ಶೇ.9, ಕೇರಳ ಶೇ.10, ಆಂಧ್ರಪ್ರದೇಶ ಶೇ. 7.5,ತೆಲಂಗಾಣ ರಾಜ್ಯಗಳು ಶೇ.7.5 ರಷ್ಟು ಶುಲ್ಕ ಆಕರಿಸುತ್ತಿವೆ. ದಸ್ತಾವೇಜುಗಳ ಮೇಲಿನ ಮುದ್ರಾಂಕ ಶುಲ್ಕ ಮತ್ತು ನೋಂದಣಿ ಶುಲ್ಕಗಳನ್ನು ಇತರೆ ರಾಜ್ಯಗಳೊಂದಿಗೆ ಸಮೀಕರಿಸಿಗೊಳ್ಳಲು (Rationalisation) ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಬಲಪಡಿಸಲು ಮತ್ತು ನಾಗರಿಕರಿಗೆ ಉತ್ತಮ ಹಾಗೂ ಪರಿಣಾಮಕಾರಿ ಸೇವೆಯನ್ನು ನೀಡಲು. ರಾಜ್ಯ ಸರ್ಕಾರವು ದಿನಾಂಕ: 31-08-2025 ರಿಂದ ಜಾರಿಗೆ ಬರುವಂತೆ ನೋಂದಣಿ…

Read More