Author: kannadanewsnow09

ಹುಟ್ಟಿನಿಂದ ಸಾಯುವವರೆಗೂ ನಾವೆಲ್ಲರೂ ದಿನವೂ ಹೊಸದನ್ನು ಕಲಿಯಲೇಬೇಕಾದ ಪರಿಸ್ಥಿತಿಯಲ್ಲಿದ್ದೇವೆ. ಆದರೆ, “ಕಲಿಯುವುದು ಕೈಯಷ್ಟು ದೊಡ್ಡದು, ಆದರೆ ಕಲ್ಲಿನಷ್ಟು ದೊಡ್ಡದು” ಎಂಬ ಅವೈ ಪಟ್ಟಿಯ ಮಾತಿನಂತೆ, ನಾವು ಎಷ್ಟೇ ಅಧ್ಯಯನ ಮಾಡಿದರೂ, ಈ ಜಗತ್ತಿನಲ್ಲಿ ನಾವು ತಿಳಿದುಕೊಳ್ಳಬೇಕಾದ ಹಲವಾರು ವಿಷಯಗಳಿವೆ. ಈ ಮಂತ್ರದ ಬಗ್ಗೆ ನಾವು ಈ ಪೋಸ್ಟ್‌ನಲ್ಲಿ ನೋಡಲಿದ್ದೇವೆ ನಾವು ತಿಳಿದುಕೊಳ್ಳಲು ಬಯಸುವ ಜ್ಞಾನ ಮತ್ತು ಅದನ್ನು ಮನಸ್ಸಿನಲ್ಲಿಟ್ಟುಕೊಳ್ಳಲು ಮತ್ತು ಜ್ಞಾಪಕ ಶಕ್ತಿಯನ್ನು ಹೆಚ್ಚಿಸಲು ಯಾವ ಮಂತ್ರವನ್ನು ಬಳಸಬೇಕು ಎಂಬುದನ್ನು ನಾವು ನೋಡಲಿದ್ದೇವೆ . ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ…

Read More

ನವದೆಹಲಿ: ಲೋಕಸಭಾ ಚುನಾವಣೆ ಏಳು ಹಂತಗಳಲ್ಲಿ ನಡೆಯಿತು. ಮತದಾರರು ತಮ್ಮ ಮತದಾನದ ಹಕ್ಕನ್ನು ಚಲಾಯಿಸುವ ಮೂಲಕ ತಮ್ಮ ತೀರ್ಪನ್ನು ನೀಡಿದರು. ಈಗ ಜೂನ್ 4ರಂದು ಚುನಾವಣಾ ಆಯೋಗ ಅಂತಿಮ ಫಲಿತಾಂಶ ಪ್ರಕಟಿಸಲಿದೆ. ಈ ನಡುವೆ ಲೋಕಸಭಾ ಚುನಾವಣೆಯ ಮತಗಟ್ಟೆ ಸಮೀಕ್ಷೆಯಲ್ಲಿ ಯಾವ ಪಕ್ಷಕ್ಕೆ ಎಷ್ಟು ಸ್ಥಾನ ಎನ್ನುವ ಎಕ್ಸಿಟ್ ಪೋಲ್ ವರದಿಯನ್ನು ಮುಂದೆ ಓದಿ. ಕರ್ನಾಟಕದಲ್ಲಿ ಏಪ್ರಿಲ್ 26 ಮತ್ತು ಮೇ 7 ರಂದು 28 ಲೋಕಸಭಾ ಸ್ಥಾನಗಳಿಗೆ ಎರಡು ಹಂತಗಳಲ್ಲಿ ಮತದಾನ ನಡೆಯಿತು. ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿತ್ತು. ಕಳೆದ ಲೋಕಸಭಾ ಚುನಾವಣೆಯಲ್ಲಿನ ಟ್ರ್ಯಾಕ್ ರೆಕಾರ್ಡ್ ಬಿಜೆಪಿಯನ್ನು ಬೆಂಬಲಿಸುತ್ತದೆ. ಆದರೆ, ರಾಜ್ಯದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿದ ಕಾಂಗ್ರೆಸ್ ಬದಲಾವಣೆಯ ಭರವಸೆಯಲ್ಲಿದೆ. ಮತಗಟ್ಟೆ ಸಮೀಕ್ಷೆಯಲ್ಲಿ ಯಾವ ಪಕ್ಷಕ್ಕೆ ಎಷ್ಟು ಸ್ಥಾನ ಗೆಲುವು? ಇಲ್ಲಿದೆ ಎಕ್ಸಿಟ್ ಪೋಲ್ ವರದಿ ಇಂಡಿಯಾ ಟುಡೇ-ಆಕ್ಸಿಸ್ ಪ್ರಕಾರ, ತಮಿಳುನಾಡಿನಲ್ಲಿ ಐಎನ್ಡಿಐಎ 33 ರಿಂದ 37 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದ್ದರೆ, ಎನ್ಡಿಎ…

Read More

ಬೆಂಗಳೂರು: ಎರಡು ಹಂತಗಳಲ್ಲಿ ಕರ್ನಾಟಕದಲ್ಲಿ ನಡೆದಿದ್ದಂತ ಲೋಕಸಭಾ ಚುನಾವಣೆಯ ಚುನಾವಣೋತ್ತರ ಸಮೀಕ್ಷೆ ವರದಿ ಬಹಿರಂಗಗೊಂಡಿದೆ. ಎನ್ ಡಿಎ 20 ಸ್ಥಾನಗಳನ್ನು ಗೆದ್ದು ಕೊಂಡರೇ, ಇಂಡಿಯಾ ಮೈತ್ರಿಕೂಟ 08 ಸ್ಥಾನ ಗೆಲ್ಲಲಿದೆ ಎಂಬುದಾಗಿ ಟಿವಿ9 ಪೋಲ್​ಸ್ಟ್ರಾಟ್ ಮತಗಟ್ಟೆ ಸಮೀಕ್ಷೆ ತಿಳಿಸಿದೆ. ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿರುವಂತ ಟಿವಿ9, ಪೋಲ್ ಸ್ಟ್ರಾಟ್ ಮತಗಟ್ಟೆ ಸಮೀಕ್ಷೆಯ ಪ್ರಕಾರ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿಯಿಂದ 18 ಸ್ಥಾನ ಹಾಗೂ ಜೆಡಿಎಸ್ ಪಕ್ಷದಿಂದ 2 ಸ್ಥಾನಗಳಿಗೆ ಸ್ಪರ್ಧೆ ನಡೆಸಲಾಗಿತ್ತು. ಕಾಂಗ್ರೆಸ್ ಪಕ್ಷದಿಂದ 28 ಸ್ಥಾನಗಳಲ್ಲಿ ಅಭ್ಯರ್ಥಿಗಳು ಸ್ಪರ್ಧಿಸಿದ್ದರು ಎಂದಿದೆ. ಕರ್ನಾಟಕ ಲೋಕಸಭಾ ಚುನಾವಣೆ ಎಕ್ಸಿಟ್ ಪೋಲ್ ನ ಪೋಲ್ ಸ್ಟ್ರಾಟ್ ಮತಗಟ್ಟೆ ಸಮೀಕ್ಷೆಯ ಪ್ರಕಾರ ಎನ್ ಡಿಎ ಮೈತ್ರಿ ಕೂಟವು 20 ಸ್ಥಾನಗಳನ್ನು ಗೆಲ್ಲಲಿದೆ. ಇಂಡಿಯಾ ಮೈತ್ರಿಕೂಟವಾದಂತ ಕಾಂಗ್ರೆಸ್ 08 ಸ್ಥಾನಗಳಿಗೆ ತೃಪ್ತಿಗೊಳ್ಳಬೇಕಾಗಿದೆ ಎಂಬುದಾಗಿ ತಿಳಿಸಿದೆ. ಇಂಡಿಯಾ ಟಿವಿ-ಸಿಎನ್ಎಕ್ಸ್ ಚುನಾವಣೋತ್ತರ ಸಮೀಕ್ಷೆಯ ಪ್ರಕಾರ ಬಿಜೆಪಿ 18-22, ಕಾಂಗ್ರೆಸ್ 4-8 ಮತ್ತು ಜೆಡಿಎಸ್ 1-3 ಸ್ಥಾನಗಳನ್ನು ಗೆಲ್ಲಲಿದೆ. https://twitter.com/tv9kannada/status/1796891708090687909…

Read More

ನವದೆಹಲಿ: ಮೇ.16ರಂದು ದೇಶದ ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಾಗಿತ್ತು. 7 ಹಂತಗಳಲ್ಲಿ ಮತದಾನ ನಡೆಯಲಿದ್ದು, ಜೂ.4, 2024 ಫಲಿತಾಂಶ ಘೋಷಣೆ ಮಾಡುವುದಾಗಿ ಚುನಾವಣಾ ಆಯೋಗ ಪ್ರಕಟಿಸಿತ್ತು. ಅದರಂತೆ 7 ಹಂತದ ಲೋಕಸಭಾ ಚುನಾವಣೆ ಇಂದು ಮುಕ್ತಾಯಗೊಂಡಿದೆ. 2024 ರ ಲೋಕಸಭಾ ಚುನಾವಣೆ, ನಾಲ್ಕು ರಾಜ್ಯ ವಿಧಾನಸಭೆಗಳು ಮತ್ತು 26 ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆಯ ಸಂಪೂರ್ಣ ವೇಳಾಪಟ್ಟಿಯನ್ನು ಚುನಾವಣಾ ಆಯೋಗ (ಇಸಿ) ಮೇ.16, 2024ರಂದು ಪ್ರಕಟಿಸಿತ್ತು. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಪ್ರಕ್ರಿಯೆ ಎಂದು ಕರೆಯಲ್ಪಡುವ ಚುನಾವಣೆಯ ಫಲಿತಾಂಶಗಳನ್ನು ಜೂನ್ 4 ರಂದು ಪ್ರಕಟಿಸಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ರಾಜೀವ್ ಕುಮಾರ್ ಹೇಳಿದ್ದರು. ಲೋಕಸಭಾ ಚುನಾವಣೆ 2024: 7 ಹಂತಗಳಲ್ಲಿ ಮತದಾನ ಏಪ್ರಿಲ್ 19 ರಿಂದ ಜೂನ್ 16 ರವರೆಗೆ ಏಳು ಹಂತಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ ಎಂದು ಸಿಇಸಿ ರಾಜೀವ್ ಕುಮಾರ್ ಘೋಷಿಸಿದ್ದರು. ಹೀಗೆ ನಡೆಯಿತು 7 ಹಂತದ ಲೋಕಸಭಾ ಚುನಾವಣೆಗೆ ಮತದಾನ 2024 ರ ಲೋಕಸಭಾ ಚುನಾವಣೆಯ…

Read More

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಂತರ ರೂಪಾಯಿ ಹಗರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದಂತ ಇಬ್ಬರು ಅಧಿಕಾರಿಗಳನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದರು. ಅವರನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಇದೀಗ ಕೋರ್ಟ್ ಇಬ್ಬರು ಅಧಿಕಾರಿಗಳನ್ನು 6 ದಿನ ಎಸ್ಐಟಿ ಕಸ್ಟಡಿಗೆ ನೀಡಿ ಆದೇಶಿಸಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದ್ದಂತ ವಂಚನೆ, ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ನಿಗಮದ ಈ ಹಿಂದಿನ ಎಂ.ಡಿ ಜೆ.ಜೆ ಪದ್ಮನಾಭ್ ಹಾಗೂ ಲೆಕ್ಕಾಧಿಕಾರಿ ಪರುಶುರಾಮ್ ಅವರನ್ನು ಬಂಧಿಸಿದೆ. ಎಸ್ಐಟಿ ಅಧಿಕಾರಿಗಳು ಬಂಧಿಸಿರುವಂತ ಪದ್ಮನಾಭ್ ಹಾಗೂ ಪರುಶುರಾಮ್ ಅವರನ್ನು ಬೆಂಗಳೂರಿನ 3ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ 3ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹೆಚ್ಚಿನ ವಿಚಾರಣೆ ನಡೆಸೋದಕ್ಕೆ ತಮ್ಮ ವಶಕ್ಕೆ ನೀಡುವಂತೆ ಎಸ್ಐಟಿ ಅಧಿಕಾರಿಗಳು ಮನವಿ ಮಾಡಿದ್ದರು. ಈ ಹಿನ್ನಲೆಯಲ್ಲಿ 6 ದಿನ ಎಸ್ಐಟಿ ಕಸ್ಟಡಿಗೆ ನೀಡಿ, ಕೋರ್ಟ್ ಆದೇಶಿಸಿದೆ. ಅಂದಹಾಗೇ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಬೆಳಕಿಗೆ ಬರುತ್ತಿದ್ದಂತೆ…

Read More

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿ ಕೂಟವು ಕನಿಷ್ಠ 295 ಸ್ಥಾನಗಳನ್ನು ಗೆಲುವು ಸಾಧಿಸಲಿದೆ ಅಂತ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. ಇಂದು ಎನ್ಡಿಎ ನಾಯಕರ ಸಭೆಯ ನಂತರ ಮಾತನಾಡಿದ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “… ಎನ್ಡಿಎ ಕನಿಷ್ಠ 295 ಸ್ಥಾನಗಳನ್ನು ಗೆಲ್ಲಲಿದೆ ಎಂಬುದಾಗಿ ತಿಳಿಸಿದರು. ಇಂದಿನ ಸಭೆಯಲ್ಲಿ ಲೋಕಸಭಾ ಚುನಾವಣೆಯ ಫಲಿತಾಂಶದ ಬಗ್ಗೆ ಚರ್ಚಿಸಲಾಯಿತು. ವಿವಿಧ ವಿಚಾರಗಳನ್ನು ಎನ್ ಡಿಎ ಮೈತ್ರಿಕೂಟದ ನಾಯಕರು ಚರ್ಚಿಸಿದರು. ಲೋಕಸಭಾ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟಕ್ಕೆ ಉತ್ತಮ ಫಲಿತಾಂಶ ಬರುವ ನಿರೀಕ್ಷೆಯಿದೆ ಎಂದರು. ಜೂನ್ 1ರ ಇಂದು ಪ್ರಾರಂಭವಾಗುವ ಎಕ್ಸಿಟ್ ಪೋಲ್ ಚರ್ಚೆಗಳಲ್ಲಿ ಕಾಂಗ್ರೆಸ್ ಭಾಗವಹಿಸಲಿದೆ ಎಂದು ಕಾಂಗ್ರೆಸ್ ವಕ್ತಾರ ಪವನ್ ಖೇರಾ ಶನಿವಾರ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷವು ಯಾವುದೇ ಎಕ್ಸಿಟ್ ಪೋಲ್ ಚರ್ಚೆಯಲ್ಲಿ ಭಾಗವಹಿಸುವುದಿಲ್ಲ ಎಂದು ಘೋಷಿಸಿದ ಒಂದು ದಿನದ ನಂತರ ಇತ್ತೀಚಿನ ಬೆಳವಣಿಗೆ ಬಂದಿದೆ. ಕಾಂಗ್ರೆಸ್ “ಊಹಾಪೋಹಗಳು ಮತ್ತು ಟಿಆರ್ಪಿ ಚಾಲಿತ ಸ್ಲಗ್ಫೆಸ್ಟ್ಗಳಲ್ಲಿ ತೊಡಗಲು…

Read More

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಭಾರಿ ಹಗರಣ ಸಂಬಂಧ ನಾಗೇಂದ್ರ ಅವರ ರಾಜೀನಾಮೆ ಪಡೆದರೆ ಸಾಲದು; ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕು ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸರಕಾರದ ಬೊಕ್ಕಸದ ಹಣವನ್ನು ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳು ಚುನಾವಣೆಗೆ ಬಳಸಿಕೊಂಡಿರುವುದು ಸ್ಪಷ್ಟಗೊಂಡಿದೆ. ಆದ್ದರಿಂದ ಅವರು ರಾಜೀನಾಮೆ ಕೊಡಬೇಕು; ಅಲ್ಲದೆ, ಇನ್ನೆಷ್ಟು ಇಲಾಖೆಗಳಲ್ಲಿ ಇಂಥ ಹಗರಣ ನಡೆದಿದೆ ಎಂದು ತನಿಖೆ ಮಾಡಬೇಕು ಎಂದು ಒತ್ತಾಯಿಸಿದರು. ಕಾಂಗ್ರೆಸ್ ಸರಕಾರ ಬಂದರೆ ಎಐಸಿಸಿಗೆ ಹಣ ಹೋಗಲಿದೆ ಎಂದು ಮೊದಲಿನಿಂದಲೂ ಹೇಳಿದ್ದೆವು. ಇಲ್ಲಿಂದ ಎಟಿಎಂ ಮಾಡಿಕೊಳ್ತಾರೆ ಎಂದಿದ್ದೆವು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧಿತ 11 ಖಾತೆಗಳನ್ನು ನಿಷ್ಕ್ರಿಯಗೊಳಿಸಲು ಸರಕಾರಿ ಉನ್ನತಾಧಿಕಾರಿ ಮಂಜುನಾಥ ಪ್ರಸಾದ್ ಪತ್ರ ಬರೆದಿದ್ದಾರೆ. ಈ ಮೂಲಕ ಇದು ಹಗಲುದರೋಡೆ ಸರಕಾರ ಎಂದು ಸಾಬೀತಾಗಿರುವುದಾಗಿ ವಿವರಿಸಿದರು. ಡಿಸಿಎಂ ಮತ್ತು…

Read More

ಬೆಂಗಳೂರು: ಕೆಇಎ ಸಿಇಟಿ ಪರೀಕ್ಷೆಯನ್ನು ಏಪ್ರಿಲ್.18 ಮತ್ತು 18, 2024ರಂದು ನಡೆಸಲಾಗಿತ್ತು. ಈ ಪರೀಕ್ಷೆಯ ಫಲಿತಾಂಶವನ್ನು ಇಂದು ಕೆಇಎ ಪ್ರಕಟಿಸಿದೆ. ರಿಸಲ್ಟ್ ಹೇಗೆ ಚೆಕ್ ಮಾಡಬೇಕು ಅಂತ ಮುಂದೆ ಓದಿ. ಈ ಸಂಬಂಧ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, ಏಪ್ರಿಲ್ ನಲ್ಲಿ ನಡೆದಿದ್ದಂತ ಕೆ-ಸಿಇಟಿ ಪರೀಕ್ಷೆಯ ಫಲಿತಾಂಶವನ್ನು ಇದು ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ https://kea.kar.nic.in ನಲ್ಲಿ ಪ್ರಕಟಿಸಲಾಗಿದೆ ಅಂತ ತಿಳಿಸಿದೆ. ಕೆ-ಸಿಇಟಿ ಪರೀಕ್ಷೆ ಬರೆದಿದ್ದಂತ ವಿದ್ಯಾರ್ಥಿಗಳು ಫಲಿತಾಂಶವನ್ನು https://kea.kar.nic.in ಜಾಲತಾಣಕ್ಕೆ ಭೇಟಿ ನೀಡಿ ವೀಕ್ಷಿಸಬಹುದಾಗಿದೆ ಎಂದಿದೆ. ಅಂದಹಾಗೇ 2024ರ ಕೆ-ಸಿಇಟಿ ಪರೀಕ್ಷೆಗೆ 3.27 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಈಗ ದ್ವಿತೀಯ ಪಿಯುಸಿ ಹಾಗೂ ಕೃಷಿ ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶದ ನಂತ್ರ, ಕೆಇಎಯಿಂದ ಇಂದು ಕೆ-ಸಿಇಟಿ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಕೆಇಎ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2024ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (CET-2024)ಯ ಫಲಿತಾಂಶವನ್ನು ಪ್ರಕಟಿಸಿದೆ. ಫಲಿತಾಂಶವು ಪ್ರಾಧಿಕಾರದ ವೆಬ್‌ಸೈಟ್‌ http://karresults.nic.in…

Read More

ಬೆಂಗಳೂರು: ಮತ ಎಣಿಕೆ ಕೇಂದ್ರಗಳ ಬಳಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಲೋಕಸಭಾ ಚುನಾವಣೆಯ ಮತ ಎಣಿಕೆ ಸಂಬಂಧಿಸಿದಂತೆ ಪಾಲಿಕೆ ಕೇಂದ್ರ ಕಛೇರಿ ಮುಖ್ಯ ಆಯುಕ್ತರ ಕಛೇರಿಯಲ್ಲಿ ಇಂದು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯ ಮತ ಎಣಿಕೆಯು 4ನೇ ಜೂನ್ 2024 ರಂದು ನಡೆಯಲಿದ್ದು, ಈ ಸಂಬಂಧ ಮತ ಎಣಿಕೆ ದಿನದಂದು ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲು ಸೂಚಿಸಲಾಯಿತು. ನಗರದಲ್ಲಿ ಮೂರು ಮತ ಎಣಿಕೆ ಕೇಂದ್ರಗಳು ಬರಲಿದ್ದು, ಚುನಾವಣಾ ಆಯೋಗದ ಮಾರ್ಗಸೂಚಿ ಅನ್ವಯ ಮತ ಎಣಿಕೆ ಕೇಂದ್ರಗಳ ಬಳಿ ಸಿಸಿ ಟಿವಿ ಹಾಗೂ ವೀಡಿಯೋಗ್ರಾಫಿ ವ್ಯವ್ಯಸ್ಥೆ ಮಾಡಿಕೊಳ್ಳಲು ಚುನಾವಣಾಧಿಕಾರಿಗಳಿಗೆ ಸೂಚನೆ ನೀಡಿದರು. ಮತ ಎಣಿಕೆ ಕೇಂದ್ರಗಳ ಬಳಿ ಸ್ಥಾಪಿಸುವ ಮಾಧ್ಯಮ ಕೇಂದ್ರಗಳಲ್ಲಿ ಎಲ್ಲಾ ರೀತಿಯ ವ್ಯವಸ್ಥೆಯನ್ನು ಸರಿಯಾಗಿ ಮಾಡಿರಬೇಕು. ಮಾಧ್ಯಮ ಪ್ರತಿನಿಧಿಗಳಿಗೆ ಕುಡಿಯುವ ನೀರು, ಶೌಚಾಲಯದ…

Read More

ಶಿವಮೊಗ್ಗ : ಬಾಲ ಕಾರ್ಮಿಕರ ನೇಮಕ ನಿರ್ಮೂಲನೆ ಕಾರ್ಯಾಚರಣೆ ಮಾಡಬೇಕು. ಈ ಕಾರ್ಯಾಚರಣೆ ನಗರ ಪ್ರದೇಶಗಳಿಗೆ ಮಾತ್ರ ಸಿಮೀತವಾಗದೆ, ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಪ್ರಕರಣ ದಾಖಲಿಸಿ, ಮಕ್ಕಳ ಸಂರಕ್ಷಣಾ ಕಾರ್ಯ ನಡೆಯಬೇಕೆಂದು ಜಿಲ್ಲಾಧಿಕಾರಿ ಗುತುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜೂ 1 ರಂದು ಏರ್ಪಡಿಸಲಾಗಿದ್ದ ಜಿಲ್ಲಾ ಕಾರ್ಯನಿರ್ವಾಹಕ ಸಮಿತಿ, ಜಿಲ್ಲಾ ಮಟ್ಟದ ಸಲಹಾ ಸಮಿತಿ ಹಾಗೂ ಜಿಲ್ಲಾ ಮಟ್ಟದ ಟಾಸ್ಕ್‍ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಾಲ ಕಾರ್ಮಿಕರು ಯಾವ ಯಾವ ಕೇತ್ರದಲ್ಲಿ ಹೆಚ್ಚು ಕಂಡು ಬರುತ್ತಿದ್ದಾರೆ ಎಂದು ಪತ್ತೆ ಹಚ್ಚಬೇಕು. ಸಂಬಂಧಿಸಿದ ಅಧಿಕಾರಿಗಳು ಮಕ್ಕಳನ್ನು ರಕ್ಷಿಸುವ ಕೆಲಸ ಜವಾಬ್ಧಾರಿಯುತವಾಗಿ ನಿರ್ವಹಿಸಬೇಕು ಹಾಗೂ ಬಾಲ ಕಾರ್ಮಿಕರನ್ನು ಹೊಂದಿದ ಮಾಲಿಕರ ವಿರುಧ್ದ ಸೂಕ್ತ ಕ್ರಮ ಕೈಗೊಳಬೇಕು. ಶಾಲೆ ಬಿಟ್ಟ ಮಕ್ಕಳ ಮೇಲೆ ನಿಗಾ ವಹಿಸಬೇಕು. ಪ್ರತಿ ತಿಂಗಳು ಕಡ್ಡಾಯವಾಗಿ ಮಕ್ಕಳ ಹಾಜರಾತಿಯನ್ನು ಪರಿಶೀಲನೆ ಮಾಡಬೇಕು ಹಾಗೂ ಬಾಲ ಕಾರ್ಮಿಕ ಮಕ್ಕಳ ದಾಖಲಾತಿಗೆ ಮೊದಲ ಆದ್ಯತೆ ನೀಡಬೇಕು.…

Read More