Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿದ್ದಾಗಿ ಹೇಳಿದ್ದ ಚಿನ್ನಯ್ಯ ಬಂಧನದ ವಿಚಾರವಾಗಿ ಎಸ್ಐಟಿ ತನಿಖೆ ಚುರುಕುಗೊಳಿಸಿದೆ. ದೂರುದಾರ ಜಯಂತ್ ಮನೆ ಮೇಲೆ ದಾಳಿ ನಡೆಸಿದರುವಂತ ವೇಳೆಯಲ್ಲಿ ಬೆಂಗಳೂರಿನ ನನ್ನ ಮನೆಯಲ್ಲಿ ಮೂರು ದಿನ ಚಿನ್ನಯ್ಯ ಇದ್ದಿದ್ದು ನಿಜ ಎಂಬುದಾಗಿ ಹೇಳಿದ್ದಾರೆ. ಈ ಕುರಿತಂತೆ ಪ್ರತಿಕ್ರಿಯಿಸಿರುವಂತ ದೂರುದಾರ ಜಯಂತ್ ಬೆಂಗಳೂರಿನ ನನ್ನ ಮನೆಯಲ್ಲಿ ಮೂರು ದಿನ ಚಿನ್ನಯ್ಯ ಇದ್ದಿದ್ದು ನಿಜ. ಪ್ರಕರಣ ಇಲ್ಲಿಯವರೆಗೆ ಬರುತ್ತೆ ಎಂದು ನನಗೆ ಗೊತ್ತಿರಲಿಲ್ಲ. ದೆಹಲಿಗೆ ಬುರುಡೆ ತೆಗೆದುಕೊಂಡು ಹೋಗಿದ್ದು ನಿಜ. ನಾವು ನಾಲ್ಕು ಜನರು ಕಾರಿನಲ್ಲಿ ದೆಹಲಿಗೆ ಹೋಗಿದ್ದೆವು. ನಾನು, ಚಿನ್ನಯ್ಯ, ಸುಜಾತಾ, ಮಟ್ಟಣ್ಣನವರ್ ದೆಹಲಿಗೆ ಹೋಗಿದ್ದೆವು ಎಂಬುದಾಗಿ ತಿಳಿಸಿದ್ದಾರೆ. ಬೆಂಗಳೂರಿನಿಂದ ದೆಹಲಿಗೆ ಬುರುಡೆ ತೆಗೆದುಕೊಂಡು ಹೋಗಿದ್ದೆವು. ದೆಹಲಿಯಿಂದ ಮಂಗಳೂರಿಗೆ ಬುರುಡೆ ತಂದಿದ್ದೇವೆ. ಒಂದು ವರ್ಷದ ಹಿಂದೆ ಓರ್ವ ಸ್ವಾಮೀಜಿಯನ್ನು ಭೇಟಿ ಆಗಿದ್ದಾರೆ. ಚಿನ್ನಯ್ಯ ಜೊತೆಗೆ ಇದ್ದವರೆಲ್ಲ ಸ್ವಾಮೀಜಿ ಭೇಟಿಯಾಗಿದ್ದಾರೆ. ಯಾವ ಮಠ, ಯಾವ ಸ್ವಾಮೀಜಿ ಎಂದು ಚಿನ್ನಯ್ಯ ಜೊತೆಗಿದ್ದವರೇ ಹೇಳಲಿ ಎಂದರು. ಈ ಪ್ರಕರಣದಲ್ಲಿ ನಾನು ಯಾವುದೇ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಅಮಾನತ್ತಿಗೆ ಸಂಬಂಧಿಸಿದಂತೆ ಕೋರ್ಟ್ ತಡೆಯಾಜ್ಞೆ ನೀಡಿದ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ನೌಕರನನ್ನು ಅಮಾನತ್ತಿನಲ್ಲಿಟ್ಟು ಸಕ್ಷಮ ಪ್ರಾಧಿಕಾರವು ಹೊರಡಿಸಿದ ಆದೇಶಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಮಧ್ಯಂತರ ತಡೆಯಾಜ್ಞೆ ನೀಡಿದ ಸಂದರ್ಭದಲ್ಲಿ ಅವನಿಗೆ ಸ್ಥಳನಿಯುಕ್ತಿ ಬಗ್ಗೆ ಆದೇಶ ಹೊರಡಿಸಲಾಗಿದೆ. 1. ಸರ್ಕಾರಿ ನೌಕರನನ್ನು ಅಮಾನತ್ತಿನಲ್ಲಿರಿಸಿ ಸಕ್ಷಮ ಪ್ರಾಧಿಕಾರವು ಹೊರಡಿಸಿದ ಆದೇಶಕ್ಕೆ ಸಂಬಂಧಿಸಿದಂತೆ ಮಾನ್ಯ ನ್ಯಾಯಾಲಯವು ಮಧ್ಯಂತರ ತಡೆಯಾಜ್ಞೆ ನೀಡಿದ ಸಂದರ್ಭದಲ್ಲಿ ಸಕ್ಷಮ ಪ್ರಾಧಿಕಾರದಿಂದ ಸ್ಥಳನಿಯುಕ್ತಿ ಆದೇಶ (Order of Posting) ಪಡೆಯದೆ, ಅಮಾನತ್ತಿನಲ್ಲಿರಿಸುವ ಪೂರ್ವದಲ್ಲಿ ಅವನು ಹೊಂದಿದ್ದ ಹುದ್ದೆಯ ಪ್ರಭಾರವನ್ನು ತಾನಾಗಿಯೇ ವಹಿಸಿಕೊಂಡಿರುವ/ವಹಿಸಿಕೊಳ್ಳುತ್ತಿರುವ ಪ್ರಕರಣಗಳು ಸರ್ಕಾರದ ಗಮನಕ್ಕೆ ಬಂದಿರುತ್ತವೆ. ಈ ಹಿನ್ನೆಲೆಯಲ್ಲಿ, ಸೃಷ್ಟಿಕರಣ ನೀಡುವುದು ಅಗತ್ಯವೆಂದು ಭಾವಿಸಿದೆ. 2. ಸರ್ಕಾರಿ ನೌಕರನನ್ನು ಅಮಾನತ್ತಿನಲ್ಲಿರಿಸಿ ಹೊರಡಿಸಲಾದ ಆದೇಶವನ್ನು ಮಾನ್ಯ ನ್ಯಾಯಾಲವು ರದ್ದುಪಡಿಸಿದ ಸಂದರ್ಭದಲ್ಲಿ ಅವನಿಗೆ ಸ್ಥಳನಿಯುಕ್ತಿ ಆದೇಶ (Order of Posting) ನೀಡುವುದಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ದಿನಾಂಕ:11.10.1989 ರ ಅಧಿಕೃತ ಜ್ಞಾಪನದಲ್ಲಿ ವಿವರವಾದ ಸೂಚನೆಗಳನ್ನು…
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಿನಾಂಕ: 29-08-2025 ರಂದು ಸಂಚಾರಿ/ಮೊಬೈಲ್ ಟ್ಯಾಂಕರ್ ಹಾಗೂ ಕೆರೆ ಅಂಗಳದ ಶಾಶ್ವಾತ/ತಾತ್ಕಾಲಿಕ ಕಲ್ಯಾಣಿಗಳಲ್ಲಿ ಒಟ್ಟು 1.14 ಲಕ್ಷ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿರುತ್ತದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ವಲಯವಾರು ಗಣೇಶ ಮೂರ್ತಿಗಳ ವಿಸರ್ಜನೆ ಮಾಡಿರುವ ವಿವರ: ಪೂರ್ವ ವಲಯ: 36,725 ಪಶ್ಚಿಮ ವಲಯ: 12,874 ದಕ್ಷಿಣ ವಲಯ: 52,181 ಬೊಮ್ಮನಹಳ್ಳಿ ವಲಯ: 1,330 ದಾಸರಹಳ್ಳಿ ವಲಯ: 503 ಮಹದೇವಪುರ ವಲಯ: 3,299 ಆರ್.ಆರ್.ನಗರ ವಲಯ: 4,105 ಯಲಹಂಕ ವಲಯ: 3,385 ಒಟ್ಟು: 1,14,402 https://kannadanewsnow.com/kannada/due-to-the-violation-of-the-conditions-of-abhiman-studio-the-land-has-been-re-acquired-minister-eshwar-khandre/ https://kannadanewsnow.com/kannada/courts-cant-stand-in-way-of-new-online-gaming-act-centre-tells-karnataka-hc/
ಬೆಂಗಳೂರು: ಅಭಿಮಾನ್ ಸ್ಟುಡಿಯೋ ಷರತ್ತು ಉಲ್ಲಂಘನೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಭೂಮಿ ಮರು ವಶಕ್ಕೆ ಸೂಚನೆ ನೀಡಲಾಗಿದೆ ಎಂಬುದಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಅಭಿಮಾನ್ ಸ್ಟುಡಿಯೋಗೆ ಕೆಂಗೇರಿ ಹೋಬಳಿ ಸರ್ವೆ ನಂ.26ರಲ್ಲಿ 20 ಎಕರೆ ಜಮೀನು ಮಾರಾಟವಾಗಿದೆ. 1970ರಲ್ಲಿ 6 ಸಾವಿರಕ್ಕೆ 20 ಎಕರೆ ಜಮೀನು ಮಾರಾಟ ಆಗಿದೆ. ಕೆಲವು ಷರತ್ತುಗಳನ್ನ ಹಾಕಿ ಜಮೀನು ನೀಡಲಾಗಿದೆ ಎಂದರು. ಅಭಿಮಾನ್ ಸ್ಟುಡಿಯೋ ಕೆಲಸಕ್ಕಾಗಿ ಬಳಕೆ ಮಾಡಬೇಕೆಂಬ ಷರತ್ತು ವಿಧಿಸಲಾಗಿತ್ತು. ಆರ್ಥಿಕ ಸಮಸ್ಯೆ ಕಾರಣ ನೀಡಿ ಮಾರಾಟಕ್ಕೆ ಅವಕಾಶ ಕೇಳಿದ್ದರು. 10 ಎಕರೆ ಜಮೀನು ಮಾರಾಟಕ್ಕೆ ಅವಕಾಶ ಕೇಳಿದ್ದರು. ಆದರೇ ಎಲ್ಲಾ ಷರತ್ತುಗಳನ್ನು ಉಲ್ಲಂಘನೆ ಮಾಡಿದ್ದಾರೆ. 14.37 ಕೋಟಿಗೆ 1 ಎಕರೆ ಜಮೀನು ಮಾರಾಟಕ್ಕೆ ಮುಂದಾಗಿದ್ದಾರೆ. ಷರತ್ತು ಉಲ್ಲಂಘನೆ ಆಗಿದ್ದರಿಂದ ಭೂಮಿ ಮರು ವಶಕ್ಕೆ ಸೂಚನೆ ನೀಡಲಾಗಿದೆ ಎಂದರು. ಕೋರ್ಟ್ ನಲ್ಲಿ ಕೂಡ ಅಭಿಮಾನ್ ಸ್ಟುಡಿಯೋ ಜಾಗದ ವಿಚಾರವಿದೆ. ವಿಷ್ಣು ಸೇನಾ ಸಮಿತಿ ಅಧ್ಯಕ್ಷರು ಸ್ಮಾರಕ…
ಬೆಂಗಳೂರು: ರಾಜ್ಯದಲ್ಲಿ ಜಾತಿವ್ಯವಸ್ಥೆಯಿದ್ದು, ಅನೇಕ ದುರ್ಬಲವರ್ಗದವರು ಜಾತಿ ತಾರತಮ್ಯವನ್ನು ಅನುಭವಿಸುತ್ತಿದ್ದಾರೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ದೌರ್ಜನ್ಯಗಳನ್ನು ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರಾಜಭವನದ್ಲಿ ನಡೆದ , ರಾಜ್ಯ ಗೃಹ ಇಲಾಖೆಯಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಸರ್ಕಾರವು ಪ್ರತಿ ಜಿಲ್ಲೆಯಲ್ಲಿ ಡಿಸಿಆರ್ ಇ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗಿದೆ. ನಾನು ಇತ್ತೀಚೆಗೆ ನಡೆಸಿದ ಪರಿಶೀಲನಾ ಸಭೆಯಲ್ಲಿ ಡಿಸಿಆರ್ ಇ ಪೊಲೀಸ್ ಠಾಣೆಗಳ ಕಾರ್ಯ ಮತ್ತು ಪ್ರಗತಿ ತೃಪ್ತಿದಾಯಕವಿಲ್ಲ ಎಂಬುದನ್ನು ಗಮನಿಸಿದ್ದೇನೆ. ಇದನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ದುರ್ಬಲವರ್ಗದವರಿಗೆ ಸುರಕ್ಷತೆ ಒದಗಿಸುವ ಸರ್ಕಾರದ ಉದ್ದೇಶ ಸಫಲವಾಗಬೇಕು. ಇತರೆ ರಾಜ್ಯಗಳಿಗೆ ಹೋಲಿಸಿದರೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಠ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ವಿರುದ್ಧ ಶಿಕ್ಷೆಯ ಪ್ರಮಾಣ ಬಹಳ ಕಡಿಮೆಯಿದೆ. ಈ ಬಗ್ಗೆ ಪೊಲೀಸರು ಗಮನಹರಿಸಬೇಕು ಎಂದರು. ಮುಂಜಾಗ್ರತಾ ಕ್ರಮಗಳಿಂದ ಅಪರಾಧ ತಡೆಗಟ್ಟಬಹುದು ಇಂದು ವಿಶಿಷ್ಠ ಸೇವೆ ಸಲ್ಲಿಸಿರುವ ಪೊಲೀಸರಿಗೆ ಕೊಡಮಾಡಲಾದ…
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (Indian Oil Corporation -IOCL) ದಕ್ಷಿಣ ಪ್ರದೇಶದಲ್ಲಿ 2025 ರಲ್ಲಿ ಟ್ರೇಡ್, ಟೆಕ್ನಿಷಿಯನ್ ಮತ್ತು ಗ್ರಾಜುಯೇಟ್ ವಿಭಾಗಗಳಲ್ಲಿ 475 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಐಟಿಐ, ಡಿಪ್ಲೊಮಾ ಅಥವಾ ಪದವಿ ಅರ್ಹತೆ ಹೊಂದಿರುವ 18–24 ವರ್ಷ ವಯಸ್ಸಿನ ಅರ್ಹ ಅಭ್ಯರ್ಥಿಗಳು ಆಗಸ್ಟ್ 08 ರಿಂದ ಸೆಪ್ಟೆಂಬರ್ 05, 2025 ರವರೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. IOCL ನಲ್ಲಿ ಕೈಗಾರಿಕಾ ಅನುಭವಕ್ಕಾಗಿ ವಿವರವಾದ ಅರ್ಹತೆ, ಖಾಲಿ ಹುದ್ದೆಯ ವಿವರಗಳು, ತರಬೇತಿ ಪ್ರಯೋಜನಗಳು ಮತ್ತು ಅರ್ಜಿ ವಿಧಾನವನ್ನು ಪರಿಶೀಲಿಸಿ. ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOCL) ನೇಮಕಾತಿ 2025 ರಲ್ಲಿ 475 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಾಗುತ್ತಿದೆ. ಡಿಪ್ಲೊಮಾ, ಐಟಿಐ ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಆನ್ಲೈನ್ ಅರ್ಜಿಯು 08-08-2025 ರಂದು ಪ್ರಾರಂಭವಾಗುತ್ತದೆ ಮತ್ತು 05-09-2025 ರಂದು ಮುಕ್ತಾಯಗೊಳ್ಳುತ್ತದೆ. ಅಭ್ಯರ್ಥಿಯು IOCL ವೆಬ್ಸೈಟ್, iocl.com ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು. IOCL ಅಪ್ರೆಂಟಿಸ್ ನೇಮಕಾತಿ 2025 ಅಧಿಸೂಚನೆಯ PDF ಅನ್ನು…
ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ವಿದ್ಯಾಮಾನಗಳ ನಡುವೆ, ಇಂದು ಎಸ್ಐಟಿಗೆ ಬರೋಬ್ಬರಿ 500 ಪುಟಗಳ ದಾಖಲೆಯನ್ನು ಸೌಜನ್ಯ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ನೀಡಿದ್ದಾರೆ. ಎಸ್ಐಟಿ ಕಚೇರಿಗೆ ತೆರಳಿದಂತ ಗಿರೀಶ್ ಮಟ್ಟಣ್ಣನವರ್ ಅವರು, ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಅಸಹಜ ಸಾವುಗಳ ಕುರಿತು ಸರಿಯಾದ ತನಿಖೆ ನಡೆದಿಲ್ಲ. ಆ ಸಾವುಗಳ ಕುರಿತಂತೆ ತನಿಖೆ ನಡೆಸುವಂತೆ ಗಿರೀಶ್ ಮಟ್ಟಣ್ಣನವರ್ ಎಸ್ಐಟಿಗೆ ದಾಖಲೆಗಳ ಮೂಲಕ ಮನವಿ ಮಾಡಿದ್ದಾರೆ. ಧರ್ಮಸ್ಥಳ ಪೊಲೀಸರು ಅಸಹಜ ಸಾವಿನ ಕುರಿತಂತೆ ತನಿಖೆ ನಡೆಸಲು ವಿಫಲವಾಗಿದದಾರೆ. ಸರಿಯಾಗಿ ತನಿಖೆ ನಡೆಸಿಲ್ಲ. ನನಗೆ ತನಿಖೆ ನಡೆಯದೇ ಇರುವುದಕ್ಕೆ ಕಾರಣ ಏನು? ಆ ಬಗ್ಗೆ ನಮಗೆ ಅನುಮಾನವಿದೆ ಎಂಬುದಾಗಿ ದಾಖಲೆ ಸಲ್ಲಿಸುವ ಮೂಲಕ ಒತ್ತಾಯಿಸಿದ್ದಾರೆ. ಮತ್ತೊಂದೆಡೆ ಗಿರೀಶ್ ಮಟ್ಟಣವರು ಧರ್ಮಸ್ಥಳ ಕೇಸ್ ಗೆ ಸಂಬಂಧಿಸಿದಂತೆ ದಾಖಲೆ ಸಲ್ಲಿಸುತ್ತಿದ್ದಾಂತೆ, ಧರ್ಮಸ್ಥಳ ಪಂಚಾಯ್ತಿ ದಾಖಲೆ ಪೋರ್ಜರಿ ಬಗ್ಗೆಯೂ ಎಸ್ಐಟಿ ತನಿಖೆ ಚುರುಕುಗೊಳಿಸಿದೆ. ಅಲ್ಲದೇ ಎಸ್ಐಟಿಯಿಂದ ಧರ್ಮಸ್ಥಳ ಪಂಚಾಯ್ತಿ ಅಧಿಕಾರಿಗಳಿಗೆ ಬುಲಾವ್ ನೀಡಲಾಗಿದೆ. ಹೀಗಾಗಿ ಎಸ್ಐಟಿ ಕಚೇರಿಗೆ ಧರ್ಮಸ್ಥಳ…
ಬೆಂಗಳೂರು: ಈ ಜನವಿರೋಧಿ ಕಾಂಗ್ರೆಸ್ ಸರ್ಕಾರ ತೊಲಗುವವರೆಗೂ ಕನ್ನಡಿಗರಿಗೆ ನೆಮ್ಮದಿ ಇಲ್ಲ, ಕರ್ನಾಟಕ್ಕೆ ಉಳಿಗಾಲವಿಲ್ಲ. ಆಸ್ತಿ ನೋಂದಣಿ ಶುಲ್ಕವನ್ನು ಏಕಾಏಕಿ ಶೇ.100 ರಷ್ಟು ಏರಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ತನ್ನ ಜನವಿರೋಧಿ ನೀತಿಯನ್ನು ನಿರ್ಲಜ್ಜವಾಗಿ ಪ್ರದರ್ಶಿಸಿದೆ ಎಂಬುದಾಗಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಆಡು ಮುಟ್ಟದ ಸೊಪ್ಪಿಲ್ಲ. ಕಾಂಗ್ರೆಸ್ ಸರ್ಕಾರ ಜನರ ಜೇಬಿಗೆ ಕನ್ನ ಹಾಕದ ದಿನವಿಲ್ಲ. ನೀರು, ಹಾಲು, ಪೆಟ್ರೋಲ್, ಡಿಸೇಲ್, ಕರೆಂಟು, ಬಸ್ಸು, ಮೆಟ್ರೋ, ಆಸ್ತಿ ತೆರಿಗೆ, ಜನನ ಮರಣ ಪ್ರಮಾಣ ಪತ್ರದ ಶುಲ್ಕ ಸೇರಿ ಎಲ್ಲಾ ವಸ್ತು/ಸೇವೆಗಳ ಬೆಲೆಯನ್ನು ಈಗಾಗಲೇ ಮನಬಂದಂತೆ ಏರಿಸಿರುವ ಕಾಂಗ್ರೆಸ್ ಸರ್ಕಾರದ ವಕ್ರ ದೃಷ್ಟಿ ಈಗ ಆಸ್ತಿ ನೋಂದಣಿ ಶುಲ್ಕದ ಮೇಲೆ ಬಿದ್ದಿದೆ ಎಂದಿದ್ದಾರೆ. ಆಸ್ತಿ ನೋಂದಣಿ ಶುಲ್ಕವನ್ನು ಏಕಾಏಕಿ ಶೇ.100 ರಷ್ಟು ಏರಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ತನ್ನ ಜನವಿರೋಧಿ ನೀತಿಯನ್ನು ನಿರ್ಲಜ್ಜವಾಗಿ ಪ್ರದರ್ಶಿಸಿದೆ ಎಂದು ವಾಗ್ಧಾಳಿ ನಡೆಸಿದ್ದಾರೆ.…
ಚಿತ್ರದುರ್ಗ : ಜಾತಿ ಶ್ರೇಷ್ಠತೆಯ ವ್ಯಸನದ ಮನುಸ್ಮೃತಿಯ ಘರ್ ವಾಪ್ಸಿಗೆ ನಿರಂತರ ಷಡ್ಯಂತ್ರ ನಡೆಯುತ್ತಿದ್ದು ಇದು ಸಾಧ್ಯವಾಗದಂತೆ ತಡೆದು ನಿಲ್ಲಿಸಿರುವುದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನ. ಈ ಕಾರಣಕ್ಕೇ ಸಂವಿಧಾನದ ಕುತ್ತಿಗಿಗೇ ಕೈ ಹಾಕಲಾಗುತ್ತಿದೆ. ಇದಕ್ಕೆ ಸುದ್ದಿ ಮಾಧ್ಯಮ ಮೂಕಸಾಕ್ಷಿಯಾಗಿರುವುದು ಅಪಾಯಕಾರಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಪ್ರಚಾರ ಇಲಾಖೆ, SC/ST ಸಂಪಾದಕರ ಸಂಘದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ “ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್ ದೃಷ್ಟಿಕೋನ” ವಿಚಾರಗೋಷ್ಠಿಯನ್ನು ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ಹೊತ್ತಿನ ಬಹಳ ಪತ್ರಕರ್ತರ ಕೈಯಲ್ಲಿ ವಿಚಾರ, ವಿಮರ್ಷೆಗಿಂತ ಹೆಚ್ಚಾಗಿ ಪೆಟ್ರೋಲ್, ಬೆಂಕಿಪೊಟ್ಟಣವೇ ಹೆಚ್ಚಾಗಿದೆ. ಕಡ್ಡಿಗೀರುವ ಅವಕಾಶಕ್ಕಾಗಿ ಕಾಯುತ್ತಿರುವಂತೆ ಕಾಣುತ್ತಾರೆ. ಪ್ರಜಾಪ್ರಭುತ್ವದ ಪ್ರಾಣ ಪಕ್ಷಿ ಸುದ್ದಿ ಸಂಸ್ಥೆಗಳ ಕೈಯಲ್ಲಿದೆ. ಪ್ರಾಣ ಉಳಿಸುವುದು, ಬಿಡುವುದು ಇವರಿಗೇ ಬಿಟ್ಟಿದೆ ಎಂದು ವಿವರಿಸಿದರು. ಸುದ್ದಿ ಮಾಧ್ಯಮದ ಆತ್ಮ ಆಗಿರುವ “ವಾಕ್ ಸ್ವಾತಂತ್ರ್ಯ ಮತ್ತು ಜಾತ್ಯತೀತತೆ ಹಾಗೂ ಸಾಮಾಜಿಕ ನ್ಯಾಯ”ವೇ ಅಂಬೇಡ್ಕರ್ ದೃಷ್ಟಿಕೋನದ ಆತ್ಮವೂ ಆಗಿದೆ. ಅಂಬೇಡ್ಕರ್ ಕೊಟ್ಟ ಸಂವಿಧಾನದ…
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಂಬನ್ ಜಿಲ್ಲೆಯಲ್ಲಿ ಭಾರೀ ಮಳೆಯಿಂದ ಉಂಟಾದ ಮೇಘಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಒಬ್ಬರು ಕಾಣೆಯಾಗಿದ್ದಾರೆ. ಪ್ರತ್ಯೇಕ ಘಟನೆಯಲ್ಲಿ, ನೆರೆಯ ರಿಯಾಸಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಭೂಕುಸಿತ ಸಂಭವಿಸಿ ಒಂದೇ ಕುಟುಂಬದ ಏಳು ಸದಸ್ಯರು ಸಾವನ್ನಪ್ಪಿದ್ದಾರೆ. ರಂಬನ್ ಜಿಲ್ಲೆಯ ರಾಜ್ಗಢ ತಹಸಿಲ್ನಲ್ಲಿ ಇಂದು ಮುಂಜಾನೆ ಮೇಘಸ್ಫೋಟ ಸಂಭವಿಸಿದೆ. ಇದರಿಂದಾಗಿ ಪ್ರದೇಶದಲ್ಲಿ ಭೂಕುಸಿತ ಮತ್ತು ಹಠಾತ್ ಪ್ರವಾಹ ಉಂಟಾಗಿದೆ. ಹಲವಾರು ಮನೆಗಳಿಗೆ ಹಾನಿಯಾಗಿದೆ. ಅಧಿಕಾರಿಗಳು ಈ ಪ್ರದೇಶದಲ್ಲಿ ರಕ್ಷಣಾ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ. ಎಸ್ಡಿಆರ್ಎಫ್, ಪೊಲೀಸ್, ಸ್ಥಳೀಯ ನಾಗರಿಕ ಸರ್ಕಾರಿ ಸಂಸ್ಥೆಗಳು ಮತ್ತು ನಿವಾಸಿಗಳು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ವ್ಯಕ್ತಿಯನ್ನು ರಕ್ಷಿಸಲು ಪ್ರಯತ್ನಗಳನ್ನು ನಡೆಸಿದ್ದಾರೆ. ರಂಬನ್ ಜಿಲ್ಲೆ ಸೇರಿದಂತೆ ಜಮ್ಮು ಪ್ರದೇಶದಲ್ಲಿ ಭಾರೀ ಮಳೆ, ಮೇಘಸ್ಫೋಟ, ಭೂಕುಸಿತ ಮತ್ತು ಹಠಾತ್ ಪ್ರವಾಹದ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿತ್ತು. ರಂಬನ್ ಮತ್ತು ಪ್ರದೇಶದ ಇತರ ಭಾಗಗಳಲ್ಲಿ ರಾತ್ರಿಯಿಡೀ ಭಾರೀ ಮಳೆಯಾಗಿದೆ. ಏತನ್ಮಧ್ಯೆ, ರಂಬನ್ ಜಿಲ್ಲೆಯ ಮಹೋರ್ ಪ್ರದೇಶದ ಬದರ್ ಗ್ರಾಮದಲ್ಲಿ ಭಾರಿ…







