Author: kannadanewsnow09

ಶಿವಮೊಗ್ಗ: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಪಿ.ಚಂದ್ರಶೇಖರನ್‌ ಅವರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬಿಜೆಪಿಯಿಂದ ಎಲ್ಲ ಪ್ರಯತ್ನ ಮಾಡಲಾಗುತ್ತಿದೆ. ಸಚಿವರು ರಾಜೀನಾಮೆ ನೀಡಿ ನ್ಯಾಯ ಸಿಗುವವರೆಗೂ ಹೋರಾಟ ಮಾಡಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ತಿಳಿಸಿದರು. ಮೃತ ಪಿ.ಚಂದ್ರಶೇಖರನ್‌ ಅವರ ಕುಟುಂಬದವರನ್ನು ಆರ್‌.ಅಶೋಕ ಭೇಟಿಯಾಗಿ ಸಾಂತ್ವನ ಹೇಳಿದ ಅವರು, ಸರಕಾರದ ಮೊದಲ ವಿಕೆಟ್ ಪತನ ಖಚಿತ ಎಂದು ಭವಿಷ್ಯ ನುಡಿದರು. ಕಾಂಗ್ರೆಸ್‌ ಸರ್ಕಾರದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಉಳಿಗಾಲವಿಲ್ಲ. ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರನ್‌ ಅವರ ಕುಟುಂಬ ಬೀದಿಗೆ ಬಂದಿದೆ. ಇಲ್ಲಿಗೆ ಬಂದ ಸಚಿವರು ಯಾವುದೇ ವ್ಯವಸ್ಥೆ ಮಾಡಿಲ್ಲ. ಯಾವುದೇ ಹಿರಿಯ ಅಧಿಕಾರಿಗಳು, ಗೃಹ ಸಚಿವರು ನೆರವು ನೀಡಿಲ್ಲ. 1 ಕೋಟಿ ರೂ. ಗೂ ಅಧಿಕ ಅಕ್ರಮ ನಡೆದಾಗ ಅದು ಸಿಬಿಐ ತನಿಖೆಗೆ ಒಳಪಡುತ್ತದೆ. ಬ್ಯಾಂಕ್‌ನವರು ಸಿಬಿಐಗೆ ವಹಿಸಿ ಎಂದು ಮನವಿ ಮಾಡಿದ್ದಾರೆ. ಇದು ಸಿಬಿಐಗೆ ಹೋಗುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಭಯದಿಂದಾಗಿ ನಿರಂತರ ಸಭೆಗಳನ್ನು ನಡೆಸುತ್ತಿದ್ದಾರೆ.…

Read More

ನವದೆಹಲಿ: ಮಾರ್ಚ್ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕತೆಯು ಶೇಕಡಾ 7.8 ರಷ್ಟು ಏರಿಕೆಯಾಗಿದ್ದು, ವಾರ್ಷಿಕ ಬೆಳವಣಿಗೆಯ ದರವನ್ನು ಶೇಕಡಾ 8.2 ಕ್ಕೆ ಏರಿಸಿದೆ ಎಂದು ಇಂದು ಬಿಡುಗಡೆಯಾದ ಅಧಿಕೃತ ಅಂಕಿ ಅಂಶಗಳು ತಿಳಿಸಿವೆ. ಜನವರಿ-ಮಾರ್ಚ್ ಅವಧಿಯಲ್ಲಿನ ಬೆಳವಣಿಗೆಯು ಡಿಸೆಂಬರ್ ತ್ರೈಮಾಸಿಕದಲ್ಲಿ ಶೇಕಡಾ 8.6 ರ ವಿಸ್ತರಣೆಗಿಂತ ಕಡಿಮೆಯಾಗಿದೆ. 2022-23ರ ಹಣಕಾಸು ವರ್ಷದ ಜನವರಿ-ಮಾರ್ಚ್ ಅವಧಿಯಲ್ಲಿ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ) ಶೇಕಡಾ 6.2 ರಷ್ಟು ವಿಸ್ತರಿಸಿದೆ ಎಂದು ರಾಷ್ಟ್ರೀಯ ಅಂಕಿಅಂಶ ಕಚೇರಿ (ಎನ್ಎಸ್ಒ) ಬಿಡುಗಡೆ ಮಾಡಿದ ಅಂಕಿ ಅಂಶಗಳು ತಿಳಿಸಿವೆ. ಅಂಕಿಅಂಶಗಳ ಪ್ರಕಾರ, ಆರ್ಥಿಕತೆಯು 2022-23ರಲ್ಲಿ ಶೇಕಡಾ 7 ರಷ್ಟು ಬೆಳವಣಿಗೆಗೆ ಹೋಲಿಸಿದರೆ 2023-24 ರಲ್ಲಿ ಶೇಕಡಾ 8.2 ರಷ್ಟು ವಿಸ್ತರಿಸಿದೆ. ಎನ್ಎಸ್ಒ ತನ್ನ ರಾಷ್ಟ್ರೀಯ ಖಾತೆಗಳ ಎರಡನೇ ಮುಂಗಡ ಅಂದಾಜಿನಲ್ಲಿ 2023-24ರಲ್ಲಿ ದೇಶದ ಬೆಳವಣಿಗೆಯನ್ನು ಶೇಕಡಾ 7.7 ಕ್ಕೆ ನಿಗದಿಪಡಿಸಿತ್ತು. 2024 ರ ಮೊದಲ ಮೂರು ತಿಂಗಳಲ್ಲಿ ಚೀನಾ ಶೇಕಡಾ 5.3 ರಷ್ಟು ಆರ್ಥಿಕ ಬೆಳವಣಿಗೆಯನ್ನು ದಾಖಲಿಸಿದೆ. https://kannadanewsnow.com/kannada/google-news-google-discover-down-for-millions-of-users-in-india-world/ https://kannadanewsnow.com/kannada/breaking-court-orders-sit-custody-of-mp-prajwal-revanna-2/

Read More

ನವದೆಹಲಿ: ಭಾರತ ಸೇರಿದಂತೆ ವಿಶ್ವದಾಧ್ಯಂತ ಗೂಗಲ್ ನ ಗೂಗಲ್ ನ್ಯೂಸ್, ಗೂಗಲ್ ಡಿಸ್ಕವರ್ ಸೇವೆ ಡೌನ್ ಆಗಿದೆ ಎಂಬುದಾಗಿ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ಬಳಕೆದಾರರು ಪರದಾಡುವಂತಾಗಿದೆ. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಗೂಗಲ್ ನ್ಯೂಸ್ ಸೇವೆ ಸ್ಥಗಿತಗೊಂಡಿದೆ. ಭಾರತದಲ್ಲಿ ಅನೇಕ ಬಳಕೆದಾರರು ಗೂಗಲ್ ಡಿಸ್ಕವರ್ ಮತ್ತು ಗೂಗಲ್ ನ್ಯೂಸ್ ಬಳಸಲು ತೊಂದರೆ ಅನುಭವಿಸುತ್ತಿದ್ದಾರೆ. ಗೂಗಲ್ ನ್ಯೂಸ್ ಚಾಲನೆಯಲ್ಲಿಲ್ಲದಿದ್ದಾಗ, ಬಳಕೆದಾರರು ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಟ್ವಿಟರ್ಗೆ ತಿರುಗುವಾಗ ತಮ್ಮ ದೂರುಗಳನ್ನು ಉಲ್ಲೇಖಿಸಿದ್ದಾರೆ. ಗೂಗಲ್ ನ್ಯೂಸ್ ಟ್ಯಾಬ್, ಗೂಗಲ್ ಡಿಸ್ಕವರ್ ಹೋಮ್ ಪೇಜ್ ಫೀಡ್ ಮತ್ತು ಗೂಗಲ್ ಟ್ರೆಂಡ್ಸ್ ನಂತಹ ಸೇವೆಗಳನ್ನು ಪ್ರವೇಶಿಸುವಲ್ಲಿ ಬಳಕೆದಾರರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂಬುದಾಗಿ ಸೋಷಿಯಲ್ ಮೀಡಿಯಾ ಫ್ಲಾಟ್ ಫಾರ್ಮ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಒಟ್ಟಾರೆಯಾಗಿ ಗೂಗಲ್ ನ್ಯೂಸ್, ಜಿಮೇಲ್ ಮತ್ತು ನಕ್ಷೆಗಳು ಸೇರಿದಂತೆ ಗೂಗಲ್ ಸೇವೆಗಳನ್ನು ಪ್ರವೇಶಿಸುವಾಗ ಭಾರತ ಸೇರಿದಂತೆ ವಿಶ್ವದಾದ್ಯಂತ ಹಲವಾರು ಬಳಕೆದಾರರು ಶುಕ್ರವಾರ ಸಮಸ್ಯೆಗಳನ್ನು ಎದುರಿಸಿದರು. https://kannadanewsnow.com/kannada/breaking-court-orders-sit-custody-of-mp-prajwal-revanna-2/ https://kannadanewsnow.com/kannada/steps-to-be-taken-to-fill-up-vacant-posts-in-transport-department-soon-cm-siddaramaiah/

Read More

ಬೆಂಗಳೂರು: ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಜಾಮೀನು ಪಡೆದು ಹೊರಗಿರುವಂತ ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಮತ್ತೆ ಸಂಕಷ್ಟ ಶುರುವಾಗಿದೆ. ರಾಜ್ಯ ಸರ್ಕಾರದಿಂದ ಜಾಮೀನು ಆದೇಶ ಪ್ರಶ್ನಿಸಿ ಹೈಕೋರ್ಟ್ ಗೆ ಸಲ್ಲಿಸಿದ್ದಂತ ಅರ್ಜಿ ಸಂಬಂಧ, ಹೆಚ್.ಡಿ ರೇವಣ್ಣಗೆ ನೋಟಿಸ್ ಜಾರಿಗೊಳಿಸಲಾಗಿದೆ. ಲೈಂಗಿಕ ಕಿರುಕುಳಕ್ಕೆ ಒಳಗಾದ ಸಂತ್ರಸ್ತೆ ಮಹಿಳೆಯನ್ನು ಅಪಹರಣ ಮಾಡಿದ‌‌ ಪ್ರಕರಣದಲ್ಲಿ ಆರೋಪಿಯಾದ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಅಧೀನ ನ್ಯಾಯಾಲಯ ನೀಡಿದ್ದ ಜಾಮೀನು ರದ್ದುಪಡಿಸಲು ಕೋರಿ ಪ್ರಶ್ನಿಸಿ ರಾಜ್ಯ ಸರ್ಕಾರ (ಎಸ್ ಐ ಟಿ) ಸಲ್ಲಿಸಿದ್ದ ಅರ್ಜಿ ಸಂಬಂಧ ರೇವಣ್ಣಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಲೈಂಗಿಕ ದೌರ್ಜನ್ಯ ಹಾಗೂ ಮಹಿಳೆಯ ಅಪಹರಣ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎರಡು ಪ್ರತ್ಯೇಕ ಎಫ್ ಐ ಆರ್ ರದ್ದುಪಡಿಸುವಂತೆ ಕೋರಿ ಎಚ್.ಡಿ.ರೇವಣ್ಣ ಸಲ್ಲಿಸಿರುವ ಅರ್ಜಿಯ ಸಂಬಂಧ ಸರ್ಕಾರಕ್ಕೆ ( ಎಸ್ ಐ ಟಿ )ಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಮತ್ತೊಂದೆಡೆ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ…

Read More

ಕೆಲವರಿಗೆ ಮನೆಯಲ್ಲಿ ನೆಮ್ಮದಿ ಇರುವುದಿಲ್ಲ. ಕುಟುಂಬ ಸದಸ್ಯರ ನಡುವಿನ ಜಗಳವೇ ಕಾರಣ. ತಾಯಿ ತಂದೆಯೊಂದಿಗೆ ಜಗಳವಾಡುತ್ತಾರೆ, ತಾಯಿ ಮಗಳೊಂದಿಗೆ ಜಗಳವಾಡುತ್ತಾರೆ, ತಂದೆ ಮಗನೊಂದಿಗೆ ಜಗಳವಾಡುತ್ತಾರೆ, ಅತ್ತೆ ಮತ್ತು ಸೊಸೆ ತಮ್ಮ ತಮ್ಮ ಬಂಧಗಳಿಂದ ಜಗಳವಾಡುತ್ತಾರೆ, ಮತ್ತು ಕುಟುಂಬದಲ್ಲಿ ಶಾಂತಿಯು ಸ್ವಲ್ಪಮಟ್ಟಿಗೆ ಕಡಿಮೆಯಾಗುತ್ತದೆ. ಕೆಲವು ಮನೆಗಳಲ್ಲಿ ತಂದೆಗೆ ಮಗುವನ್ನು ಕಂಡರೆ ಇಷ್ಟವಿಲ್ಲ, ಗಂಡನಿಗೆ ಹೆಂಡತಿಯನ್ನು ಕಂಡರೆ ಇಷ್ಟವಿಲ್ಲ ಎಂದು ಪರಸ್ಪರ ದ್ವೇಷ ಸಾಧಿಸುತ್ತಲೇ ಇರುತ್ತಾರೆ. ಇಂತಹ ಸಮಸ್ಯೆಗಳಿದ್ದರೆ ಕೆಲವರಿಗೆ ಮಾನಸಿಕ ತೊಂದರೆ ಕೊಡುತ್ತದೆ. ಇದು ಮನೆಯ ಜೀವನದಲ್ಲಿ ಬಿರುಕನ್ನು ನೀಡುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ…

Read More

ನವದೆಹಲಿ: ಮಾರ್ಚ್ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕತೆಯು ಶೇಕಡಾ 7.8 ರಷ್ಟು ಏರಿಕೆಯಾಗಿದ್ದು, ವಾರ್ಷಿಕ ಬೆಳವಣಿಗೆಯ ದರವನ್ನು ಶೇಕಡಾ 8.2 ಕ್ಕೆ ಏರಿಸಿದೆ ಎಂದು ಇಂದು ಬಿಡುಗಡೆಯಾದ ಅಧಿಕೃತ ಅಂಕಿ ಅಂಶಗಳು ತಿಳಿಸಿವೆ. ಜನವರಿ-ಮಾರ್ಚ್ ಅವಧಿಯಲ್ಲಿನ ಬೆಳವಣಿಗೆಯು ಡಿಸೆಂಬರ್ ತ್ರೈಮಾಸಿಕದಲ್ಲಿ ಶೇಕಡಾ 8.6 ರ ವಿಸ್ತರಣೆಗಿಂತ ಕಡಿಮೆಯಾಗಿದೆ. 2022-23ರ ಹಣಕಾಸು ವರ್ಷದ ಜನವರಿ-ಮಾರ್ಚ್ ಅವಧಿಯಲ್ಲಿ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ) ಶೇಕಡಾ 6.2 ರಷ್ಟು ವಿಸ್ತರಿಸಿದೆ ಎಂದು ರಾಷ್ಟ್ರೀಯ ಅಂಕಿಅಂಶ ಕಚೇರಿ (ಎನ್ಎಸ್ಒ) ಬಿಡುಗಡೆ ಮಾಡಿದ ಅಂಕಿ ಅಂಶಗಳು ತಿಳಿಸಿವೆ. ಆದಾಗ್ಯೂ, ಎಲ್ಲಾ ತ್ರೈಮಾಸಿಕಗಳಲ್ಲಿ ಸ್ಥಿರವಾದ ಬಲವಾದ ಬೆಳವಣಿಗೆ, ನಾಲ್ಕು ತ್ರೈಮಾಸಿಕಗಳಲ್ಲಿ ಮೂರು 8% ಕ್ಕಿಂತ ಹೆಚ್ಚಿನ ಬೆಳವಣಿಗೆಯ ದರವನ್ನು ಸಾಧಿಸುವುದರೊಂದಿಗೆ, 2024 ರ ಹಣಕಾಸು ವರ್ಷದಲ್ಲಿ ಬೆಳವಣಿಗೆಯನ್ನು 7.9% ಕ್ಕೆ ಏರಿಸುವ ನಿರೀಕ್ಷೆಯಿದೆ, ಇದು ಹಿಂದಿನ ವರ್ಷದ 7.0% ರಿಂದ ಹೆಚ್ಚಾಗಿದೆ ಎಂದು 19 ಅರ್ಥಶಾಸ್ತ್ರಜ್ಞರ ಅಂದಾಜಿಸಲಾಗಿದೆ. ಆರ್ಥಿಕತೆಯಲ್ಲಿ ಉತ್ಪಾದಿಸಲಾದ ಸರಕು ಮತ್ತು ಸೇವೆಗಳ ಮೌಲ್ಯವನ್ನು ಅಳೆಯುವ ಒಟ್ಟು ಮೌಲ್ಯವರ್ಧಿತ (ಜಿವಿಎ) 2024…

Read More

ಬೆಂಗಳೂರು: ಇಂದಿನಿಂದ ಶಾಲಾ-ಕಾಲೇಜುಗಳು ಅಧಿಕೃತವಾಗಿ ಆರಂಭಗೊಂಡಿದ್ದಾವೆ. ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ವಿದ್ಯಾರ್ಥಿ ಬಸ್ ಪಾಸ್ ಒದಗಿಸೋ ಸಂಬಂಧ ಕೆ ಎಸ್ ಆರ್ ಟಿಸಿಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, 2024-25ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳುಪ್ರಾರಂಭವಾಗಿರುತ್ತವೆ. ಪ್ರಸಕ್ತ ಸಾಲಿನಲ್ಲಿ ಕರಾರಸಾ ನಿಗಮದ ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕಿರುತ್ತದೆ. ಪ್ರಸಕ್ತ ವರ್ಷದಲ್ಲಿ ಸರ್ಕಾರದ ಆದೇಶದಂತೆ ಸಂಪೂರ್ಣ ಗಣಕೀಕೃತವಾಗಿ ವಿದ್ಯಾರ್ಥಿ ಬಸ್ ಪಾಸ್‌ಗಳನ್ನು ವಿತರಿಸಲಾಗುವುದು ಎಂದಿದೆ. ವಿದ್ಯಾರ್ಥಿ ಬಸ್ ಪಾಸ್ ಗೆ ಅರ್ಜಿ ಸಲ್ಲಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಿ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮುಖೇನ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಸೇವಾಸಿಂಧು ಪೋರ್ಟಲ್ ಐಡಿ URL-https://sevasindhuservices.karnataka.gov.in/buspassservices/ ವಿದ್ಯಾರ್ಥಿಗಳು ದಿನಾಂಕ:31.05.2024 ರಿಂದ ಸೇವಾಸಿಂಧು ಪೋರ್ಟಲ್‌ನಲ್ಲಿ ಬಸ್ ಪಾಸ್‌ಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆನ್ ಲೈನ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಯಾವುಧೇ…

Read More

ಬೆಂಗಳೂರು: ಮೈಸೂರಿನ ಕೆ ಆರ್ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಮಹಿಳೆ ಅಪಹರಣ ಪ್ರಕರಣ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಭವಾನಿ ರೇವಣ್ಣ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು. ಈ ಪ್ರಕರಣ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಭವಾನಿ ರೇವಣ್ಣ ಅವರು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಗಜಾನನ ಭಟ್ ಅವರು, ಭವಾನಿ ರೇವಣ್ಣ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದರು. ಹೀಗಾಗಿ ಭವಾನಿ ರೇವಣ್ಣಗೆ ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧನದ ಭೀತಿ ಎದುರಾದಂತೆ ಆಗಿದೆ. https://kannadanewsnow.com/kannada/breaking-court-orders-sit-custody-of-mp-prajwal-revanna-2/

Read More

ಬೆಂಗಳೂರು: ಸಂತೇಬೆನ್ನೂರಿನ ಗುತ್ತಿಗೆದಾರ ಪಿಎಸ್ ಗೌಡರ್ ಆತ್ಮಹತ್ಯೆ ಪ್ರಕರಣವನ್ನು ಇಲಾಖಾ ತನಿಖೆಗೆ ವಹಿಸಿ ಸಚಿವ ಪ್ರಿಯಾಂಕ್ ಖರ್ಗೆ ಆದೇಶಿಸಿದ್ದಾರೆ. ಈ ಮೂಲಕ ಪ್ರಕರಣಕ್ಕೆ ಬಿಗ್ ಟ್ಟಿಸ್ಟ್ ಸಿಕ್ಕಂತೆ ಆಗಿದೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ಕೆಆರ್ ಐಡಿಎಲ್ ಕುರಿತ ಈ ಆರೋಪಗಳ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸಲು ಹಿರಿಯ ಅಧಿಕಾರಿಗಳ ಸಮಿತಿ ರಚಿಸುವಂತೆ ಎಸಿಎಸ್ ಆರ್ ಡಿಪಿಆರ್ ಗೆ ಸೂಚಿಸಿದ್ದೇನೆ ಎಂದಿದ್ದಾರೆ. ಇನ್ನೂ ಸಂತೇಬೆನ್ನೂರಿನ ಗುತ್ತಿಗೆದಾರ ಪಿ.ಎಸ್ ಗೌಡರ್ ಆತ್ಮಹತ್ಯೆ ಪ್ರಕರಣದ ಸಂಬಂಧ ಕೆಆರ್ ಐಡಿಎಲ್ ಎಂಜಿನಿಯರಿಂಗ್ ನಿಗಮವಾಗಿದ್ದು, ಉಪ ಗುತ್ತಿಗೆಯನ್ನು ಪ್ರೋತ್ಸಾಹಿಸುವುದಿಲ್ಲ ಎಂಬುದಾಗಿ ತಿಳಿಸಿದ್ದಾರೆ. https://twitter.com/PriyankKharge/status/1796457994311680430

Read More

ಬೆಂಗಳೂರು: ನಿನ್ನೆ ಎಸ್ ಐಟಿ ಬಂಧಿಸಿದ್ದಂತ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಇಂದು ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಅವರ ತೀರ್ಪು 4.15ಕ್ಕೆ ಕಾಯ್ದಿರಿಸಿದೆ. ಈ ನಡುವೆ ತನಿಖೆಗೆ ಸಹಕರಿಸಲು ಪ್ರಜ್ವಲ್ ಸಿದ್ಧರಿದ್ದಾರೆ ಅಂತ ನ್ಯಾಯಾಲಯಕ್ಕೆ ಪ್ರಜ್ವಲ್ ಪರ ವಕೀಲ ಅರುಣ್ ಮಾಹಿತಿ ನೀಡಿದ್ದಾರೆ. ಇಂದು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ನಲ್ಲಿ ಪ್ರಜ್ವಲ್ ರೇವಣ್ಣ ಕುರಿತಾದಂತ ಪ್ರಕರಣದ ವಿಚಾರಣೆ ನಡೆಸಿತು. ಕೋರ್ಟ್ ಮುಂದೆ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ಹಾಜರುಪಡಿಸಿದರು. ಪ್ರಜ್ವಲ್ನ್ನ ಬಂಧಿಸಿ 24 ಗಂಟೆಯೊಳಗೆ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು. ಪ್ರಜ್ವಲ್ ರೇವಣ್ಣ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ ನಂತ್ರ, ಕಸ್ಟಡಿಗೆ ನೀಡುವಂತೆ ನ್ಯಾಯಾಧೀಶರ ಮುಂದೆ ಎಸ್ಐಟಿ ಪರ ವಕೀಲರು ವಾದ ಮಂಡಿಸಿದರು. ನ್ಯಾಯಾಧೀಶರ ಮುಂದೆ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಬಗ್ಗೆ ವಾದ ಮಂಡನೆ ಮಾಡಿದಂತ ಎಸ್ಐಟಿ ಪರ ವಕೀಲರು, ಇವನು ಒಬ್ಬ ವಿಕೃತ ಕಾಮಿ ಎನ್ನಿಸುತ್ತಿದೆ. ಇವರು ತುಂಬಾ ಡೇಂಜರ್ ಇದ್ದಾನೆ. ಸಂತ್ರಸ್ತ ಮಹಿಳೆ ಹೇಳಿಕೆ ಪ್ರಕಾರ ಅತ್ಯಾಚಾರ…

Read More