Author: kannadanewsnow09

ಬೆಂಗಳೂರು: ನಗರದಲ್ಲಿ ತಾಯಿಗೆ ಬೈದಿದ್ದರಿಂದ ಸಿಟ್ಟುಗೊಂಡಂತ ಅಣ್ಣನನ್ನೇ ತಮ್ಮನೊಬ್ಬ ಕೊಲೆಗೈದ ಘಟನೆ ನಡೆದಿದೆ. ಬೆಂಗಳೂರಿನ ಯಾರಬ್ ನಗರದ ಮೊಹಮ್ಮದ್ ಮುಜಾಹಿದ್(35) ಎಂಬಾತನೇ ಕೊಲೆಯಾದ ಅಣ್ಣನಾಗಿದ್ದಾನೆ. ಮುಜಾಹಿದ್ ನ ತಮ್ಮ ಮೊಹಮ್ಮದ್ ಮುಸೇದ್ ನಿಂದ ಈ ಕೃತ್ಯವನ್ನು ಎಸಗಲಾಗಿದೆ. ತಾಯಿಗೆ ಬೈದ ವಿಚಾರಕ್ಕೆ ಅಣ್ಣ-ತಮ್ಮನ ನಡುವೆ ಹೊಡೆದಾಟ ಉಂಟಾಗಿತ್ತು. ಮನೆಯಲ್ಲಿದ್ದ ವಸ್ತುಗಳಿಂದ ಇದೇ ವಿಚಾರಕ್ಕೆ ಸಹೋದರರು ಹೊಡೆದಾಡಿಕೊಂಡಿದ್ದರು. ಹೊಡೆದಾಟದಲ್ಲಿ ಮುಜಾಹಿದ್ ನನ್ನು ಮುಸೇದ್ ತೀವ್ರವಾಗಿ ಹಲ್ಲೆ ಮಾಡಿದ್ದನು. ಹೊಡೆದಾಟದಲ್ಲಿ ಅಣ್ಣ ಮುಜಾಹಿದ್ ನನ್ನು ತಮ್ಮ ಮುಸೇದ್ ತೀವ್ರವಾಗಿ ಗಾಯಗೊಳಿಸಿದ್ದನು. ಗಾಯಗೊಂಡ ಮುಸೇದ್ ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದು, ಈ ಸಂಬಂಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/delhi-riots-accused-umar-khalid-granted-bail/ https://kannadanewsnow.com/kannada/why-heart-attacks-spike-in-winter-doctor-explains-risks-and-prevention-tips/

Read More

ನವದೆಹಲಿ: ದೆಹಲಿ ನ್ಯಾಯಾಲಯವು ಗುರುವಾರ ಮಾಜಿ ಜೆಎನ್‌ಯು ವಿದ್ವಾಂಸ ಮತ್ತು ದೆಹಲಿ ಗಲಭೆ ಸಂಚು ಆರೋಪಿ ಉಮರ್ ಖಾಲಿದ್‌ಗೆ ತನ್ನ ಸಹೋದರಿಯ ಮದುವೆಯಲ್ಲಿ ಭಾಗವಹಿಸಲು ಮಧ್ಯಂತರ ಜಾಮೀನು ನೀಡಿದೆ. ಖಾಲಿದ್ ಡಿಸೆಂಬರ್ 16 ರಿಂದ ಡಿಸೆಂಬರ್ 29 ರವರೆಗೆ ಜಾಮೀನಿನ ಮೇಲೆ ಇರುತ್ತಾರೆ ಎಂದು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ (ಎಎಸ್‌ಜೆ) ಸಮೀರ್ ಬಾಜ್‌ಪೈ ಹೇಳಿದ್ದಾರೆ. ಖಾಲಿದ್ ಸಾಮಾಜಿಕ ಮಾಧ್ಯಮವನ್ನು ಬಳಸಬಾರದು ಮತ್ತು ಅವರ ಕುಟುಂಬ ಸದಸ್ಯರು, ಸಂಬಂಧಿಕರು ಮತ್ತು ಸ್ನೇಹಿತರನ್ನು ಮಾತ್ರ ಭೇಟಿಯಾಗಬೇಕು ಎಂದು ಆದೇಶಿಸಲಾಗಿದೆ. “ಇದಲ್ಲದೆ, ಅವರು ತಮ್ಮ ಮನೆಯಲ್ಲಿ ಅಥವಾ ಅವರು ಹೇಳಿದಂತೆ ವಿವಾಹ ಸಮಾರಂಭಗಳು ನಡೆಯುವ ಸ್ಥಳಗಳಲ್ಲಿ ಉಳಿಯಬೇಕು” ಎಂದು ನ್ಯಾಯಾಲಯ ಹೇಳಿದೆ. ಖಾಲಿದ್ ಡಿಸೆಂಬರ್ 14 ರಿಂದ ಡಿಸೆಂಬರ್ 29 ರವರೆಗೆ ಜಾಮೀನು ಕೋರಿದ್ದರು. ಅವರ ಸಹೋದರಿಯ ಮದುವೆ ಡಿಸೆಂಬರ್ 27 ರಂದು ನಡೆಯಲಿದೆ ಎಂದು ಹೇಳಲಾಗಿದೆ. ಖಾಲಿದ್ ಅವರನ್ನು ಸೆಪ್ಟೆಂಬರ್ 2020 ರಲ್ಲಿ ಬಂಧಿಸಲಾಯಿತು ಮತ್ತು ಕ್ರಿಮಿನಲ್ ಪಿತೂರಿ, ಗಲಭೆ, ಕಾನೂನುಬಾಹಿರ ಸಭೆ, ಹಾಗೆಯೇ…

Read More

ಬೆಳಗಾವಿ ಸುವರ್ಣವಿಧಾನಸೌಧ : ದರೋಡೆ, ಕಳ್ಳತನ ಮತ್ತು ಸುಲಿಗೆ ಪ್ರಕರಣಗಳನ್ನು ಹತ್ತಿಕ್ಕಲು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗುವುದು ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಹೇಳಿದರು. ಪರಿಷತ್ತಿನಲ್ಲಿ ಡಿ.11ರಂದು ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರ್ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ವಾಹನ ಕಳವು ಪ್ರಕರಣಗಳನ್ನು ನಿಯಂತ್ರಿಸಲು ಹಾಗೂ ಬಾಕಿ ಇರುವ ಪ್ರಕರಣಗಳನ್ನು ಪತ್ತೆ ಹಚ್ಚಲು ನಾನಾ ಕ್ರಮ ತೆಗೆದುಕೊಳ್ಳಲಾಗಿದೆ. ವಾಹನ ಕಳವು ಪ್ರಕರಣಗಳನ್ನು ನಿಯಂತ್ರಿಸುವ ಉದ್ದೇಶದಿಂದ, ಸಂಘಟಿತ ವಾಹನ ಕಳವು ಅಪರಾಧಗಳಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಕಲಂ 111 ಅನ್ನು ಅಳವಡಿಸಿ ನಿಯಮಾನುಸಾರ ಅಗತ್ಯವಾದ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಕ್ರಮದ ಮೂಲಕ ಸಂಘಟಿತ ಅಪರಾಧ ಚಟುವಟಿಕೆಗಳಿಗೆ ಅಡ್ಡಿ ಉಂಟಾಗುವಂತೆ ಹಾಗೂ ವಾಹನ ಕಳವು ಪ್ರಕರಣಗಳ ಪತ್ತೆ ಮತ್ತು ತಡೆಗಟ್ಟುವಿಕೆಯಲ್ಲಿ ಪರಿಣಾಮಕಾರಿ ಕ್ರಮ ಜರುಗುವಂತೆ ನೋಡಿಕೊಳ್ಳಲಾಗಿದೆ. ಆರೋಪಿಗಳಿಗೆ ಸುಲಭವಾಗಿ ಜಾಮೀನು ದೊರೆಯದಂತೆ ಕಠಿಣ ಕಾನೂನು ಕ್ರಮ ಕೈಗೆತ್ತಿಕೊಳ್ಳಲಾಗಿದ್ದು, ಆರೋಪಿಗಳ ಮೇಲಿನ ನಿಗಾವನ್ನು…

Read More

ಬೆಳಗಾವಿ ಸುವರ್ಣ ವಿಧಾನಸೌಧ : ಸರ್ಕಾರಿ ಶಾಲೆಗಳಲ್ಲಿ ವಿದ್ಯುತ್ ಶೌಚಾಲಯ, ಕುಡಿಯುವ ನೀರು, ಬೇಲಿ ಮತ್ತು ಆಟದ ಮೈದಾನ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಹಾಗೂ ಸರ್ಕಾರಿ ಶಾಲೆಗಳ ಕಟ್ಟಡಗಳ ದುರಸ್ತಿ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಲು ಕ್ರಮ ವಹಿಸಲಾಗಿದೆ ಹಾಗೂ 2024-25ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಲ್ಲಾ ಸರ್ಕಾರಿ ಶಾಲೆಗಳ ಮಕ್ಕಳಿಗೆ ಶೂ-ಸಾಕ್ಸ್ ವಿತರಣೆಗೆ ಅನುದಾನ ಬಿಡುಗಡೆಯಾಗಿದ್ದು, ಎಲ್ಲಾ ಮಕ್ಕಳಿಗೂ ಶೂ-ಸಾಕ್ಸ್ ವಿತರಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವÀ ಎಸ್.ಮಧು ಬಂಗಾರಪ್ಪ ಅವರು ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಹುಬ್ಬಳ್ಳಿ-ಧಾರವಾಡ ಕೇಂದ್ರೀಯ ಕ್ಷೇತ್ರದ ಶಾಸಕ ಮಹೇಶ್ ಟೆಂಗಿನಕಾಯಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಹಾಗೂ ಸರ್ಕಾರಿ ಪ್ರೌಢ ಶಾಲಾ ಶಿಕ್ಷಕರ ವಿಷಯವಾರು ಹಾಗೂ ಭಾಷಾವಾರು ಖಾಲಿ ಹುದ್ದೆಗಳಿಗೆ ಅತಿಥಿ…

Read More

ಬೆಳಗಾವಿ ಸುವರ್ಣಸೌಧ : ಡ್ರಗ್ಸ್ ತಡೆಗೆ ಮತ್ತು ಅಂತಹ ದಂಧೆಗಳಿಗೆ ಸಂಪೂರ್ಣವಾಗಿ ಕಡಿವಾಣ ಹಾಕಲು ರಾಜ್ಯ ಸರ್ಕಾರವು ಕಠಿಣ ನಿರ್ಧಾರ ತೆಗೆದುಕೊಂಡಿದೆ. ಡ್ರಗ್ಸ್ ಕಂಟ್ರೋಲ್ ಆಗುವವರೆಗೆ ದಂಧೆಕೋರರ ವಿರುದ್ಧ ಸಮರ ನಡೆಯಲಿದೆ ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಹೇಳಿದರು. ವಿಧಾನ ಪರಿಷತ್ತಿನಲ್ಲಿ ಡಿ.11ರಂದು ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಕೆ ಅಬ್ದುಲ್ ಜಬ್ಬರ್ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಮಾದಕ ವಸ್ತುಗಳ ಉತ್ಪಾದನೆ, ಮಾರಾಟ ಮತ್ತು ಅವುಗಳ ಬಳಕೆ ಜಾಗತಿಕವಾಗಿ ದಿನೇ ದಿನೇ ಹೆಚ್ಚುತ್ತಿದೆ. ಮಾದಕ ವಸ್ತುಗಳ ಮಾರಾಟವು ಮಾರಾಟಗಾರರಿಗೆ ಅತೀ ಹೆಚ್ಚಿನ ಲಾಭಾಂಶ ತರುವ ಉದ್ಯಮವಾಗಿ ಪರಿವರ್ತನೆಯಾಗಿದೆ. ಅತೀ ಹೆಚ್ಚಿನ ಲಾಭಕ್ಕಾಗಿ ಅಂತರ್ ರಾಜ್ಯ/ ಅಂತರ್ ರಾಷ್ಟ್ರೀಯ ಜಾಲಗಳು ಕಾರ್ಯನಿರ್ವಹಿಸುತ್ತಿವೆ. ಈ ಜಾಲಗಳು ಜಗತ್ತಿನಾದ್ಯಾಂತ ಬಹುತೇಕ ಎಲ್ಲಾ ರಾಷ್ಟ್ರಗಳಲ್ಲಿ ಸಕ್ರೀಯವಾಗಿರುವುದರಿಂದ ಈ ಡಗ್ಸ್ ಸಮಸ್ಯೆಯು ಸಾರ್ವತ್ರಿಕವಾಗಿದೆ. ರಾಜ್ಯದಲ್ಲಿ ಮಾದಕ ವಸ್ತುಗಳ ಸೇವನೆ, ಮಾರಾಟ ತಡೆಗಟ್ಟಲು ರಾಜ್ಯ ಸರ್ಕಾರವು ನಾನಾ ಕ್ರಮ ತೆಗೆದುಕೊಂಡಿದೆ. ರಾಜ್ಯದಲ್ಲಿ ಮಾದಕ ದ್ರವ್ಯಗಳ ಹಾವಳಿಯನ್ನು ಎದುರಿಸಲು ಹಾಗೂ…

Read More

ಬೆಳಗಾವಿ ಸುವರ್ಣ ವಿಧಾನಸೌಧ : 2025ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ (ಎರಡನೇ ತಿದ್ದುಪಡಿ) ವಿಧೇಯಕ ಹಾಗೂ 2025ನೇ ಸಾಲಿನ ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕಗಳನ್ನು ಉಪಮುಖ್ಯಮಂತ್ರಿಗಳ ಪರವಾಗಿ ಸಮಾಜ ಕಲ್ಯಾಣ ಸಚಿವ ಡಾ: ಹೆಚ್.ಸಿ. ಮಹಾದೇವಪ್ಪ ಅವರು ವಿಧಾನಸಭೆಯಲ್ಲಿ ಮಂಡಿಸಿದರು. ವಿಧೇಯಕಗಳ ಪ್ರಸ್ತಾವವನ್ನು ಅಂಗೀಕರಿಸಲಾಯಿತು. ರಾಜ್ಯದ ಸಣ್ಣ ಸಣ್ಣ ಗ್ರಾಮಗಳ ಜನತೆಗೆ ಗುಡ್ ನ್ಯೂಸ್: ಇನ್ಮುಂದೆ ‘ಉಪ ಕೇಂದ್ರ’ ತೆರೆದು ಆಹಾರ ಧಾನ್ಯ ಹಂಚಿಕೆ ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ ನಿಯಂತ್ರಣ 2016 ಕಲಂ(6)ರಲ್ಲಿ ಹೊಸ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅವಕಾಶ ಕಲ್ಪಿಸಲಾಗಿದ್ದು ಅದರಂತೆ ಅಗತ್ಯಾನುಸಾರ ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಕ್ರಮ ವಹಿಸಲಾಗುತ್ತಿದೆ. ಸಣ್ಣ ಸಣ್ಣ ಗ್ರಾಮದ ಪಡಿತರ ಚೀಟಿದಾರರಿಗೆ ತೊಂದರೆಯಾಗದಂತೆ ನ್ಯಾಯಬೆಲೆ ಅಂಗಡಿ ವರ್ತಕರಿಗೆ ಗ್ರಾಮಗಳಲ್ಲಿ ಉಪ ಕೇಂದ್ರಗಳನ್ನು ತೆರೆದು ಆಹಾರ ಧಾನ್ಯ ಹಂಚಿಕೆ ಮಾಡಲು ಕ್ರಮ ವಹಿಸಲಾಗುವುದು. ಪಡಿತರ ಚೀಟಿಗಳ ಸಂಖ್ಯಾನುಸಾರ ಅಗತ್ಯವಿದ್ದಲ್ಲಿ ಹೊಸ ನ್ಯಾಯಬೆಲೆ…

Read More

ಬೆಳಗಾವಿ ಸುವರ್ಣ ವಿಧಾನಸೌಧ : ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ ನಿಯಂತ್ರಣ 2016 ಕಲಂ(6)ರಲ್ಲಿ ಹೊಸ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅವಕಾಶ ಕಲ್ಪಿಸಲಾಗಿದ್ದು ಅದರಂತೆ ಅಗತ್ಯಾನುಸಾರ ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಕ್ರಮ ವಹಿಸಲಾಗುತ್ತಿದೆ. ಸಣ್ಣ ಸಣ್ಣ ಗ್ರಾಮದ ಪಡಿತರ ಚೀಟಿದಾರರಿಗೆ ತೊಂದರೆಯಾಗದಂತೆ ನ್ಯಾಯಬೆಲೆ ಅಂಗಡಿ ವರ್ತಕರಿಗೆ ಗ್ರಾಮಗಳಲ್ಲಿ ಉಪ ಕೇಂದ್ರಗಳನ್ನು ತೆರೆದು ಆಹಾರ ಧಾನ್ಯ ಹಂಚಿಕೆ ಮಾಡಲು ಕ್ರಮ ವಹಿಸಲಾಗುವುದು. ಪಡಿತರ ಚೀಟಿಗಳ ಸಂಖ್ಯಾನುಸಾರ ಅಗತ್ಯವಿದ್ದಲ್ಲಿ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಕ್ರಮ ವಹಿಸಲಾಗುವುದು ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಾಶಾಸ್ತ್ರ ಸಚಿವÀ ಕೆ.ಹೆಚ್.ಮುನಿಯಪ್ಪ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಗುರುಮಿಠಕಲ್ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು. ಅಗತ್ಯಾನುಸಾರ ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಕ್ರಮ ವಹಿಸಲಾಗುತ್ತಿದೆ. ಪರಿಶಿಷ್ಟ…

Read More

ಬೆಳಗಾವಿ ಸುವರ್ಣ ವಿಧಾನಸೌಧ : ದೇವದುರ್ಗ ವಿಧಾನ ಸಭಾ ಕ್ಷೇತ್ರವ್ಯಾಪ್ತಿಯಲ್ಲಿನ ಅಮರಾಪುರ ಕ್ರಾಸ್ ಮತ್ತು ನವಿಲಗುಡ್ಡ ವ್ಯಾಪ್ತಿಯಲ್ಲಿ ಸರ್ಕಾರಿ ಪ್ರೌಢಶಾಲೆ ಅವಶ್ಯಕತೆ ಇರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಅಮರಾಪುರ ಕ್ರಾಸ್ ಅಥವಾ ನವಿಲಗುಡ್ಡ ಗ್ರಾಮಕ್ಕೆ ಪ್ರೌಢಶಾಲೆಯೊಂದನ್ನು ಮಂಜೂರು ಮಾಡುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕಿ ಕರೆಮ್ಮ ನಾಯಕ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಅವರ ಉತ್ತರಿಸಿದರು. ಅಮರಾಪುರ ಕ್ರಾಸ್ ಮತ್ತು ನವಿಲಗುಡ್ಡ ಶಾಲೆಗಳ 5 ಕಿ.ಮೀ. ವ್ಯಾಪ್ತಿಯಲ್ಲಿ ಯಾವುದೇ ಸರ್ಕಾರಿ ಅಥವಾ ಅನುದಾನಿತ ಪ್ರೌಢಶಾಲೆಗಳು ಇರುವುದಿಲ್ಲ. ಆದ್ದರಿಂತ ಈ ಎರಡು ಶಾಲೆಗಳ ಪೈಕಿ ಒಂದನ್ನು ಪ್ರೌಢಶಾಲೆಯಾಗಿ ಉನ್ನತಿಕರಿಸಲು ಸರ್ಕಾರ ಮಂಜೂರಾತಿ ನೀಡಲಿದೆ. ಇದರಿಂದ ನವಿಲಗುಡ್ಡ, ಬಾಗೂರು, ನೀಲವಂಜಿ, ಕರಡಿಗುಡ್ಡ, ಮಂಡಲಗುಡ್ಡ ಮತ್ತು ಹೇರುಂಡಿ ಶಾಲೆಗಳ ಮಕ್ಕಳಿಗೆ ಅನುಕೂಲವಾಗಲಿದೆ ಎಂದರು. ಮಲ್ಲೇಗೌಡರ ದೊಡ್ಡಿ ಗ್ರಾಮದಲ್ಲಿ ಕೆ.ಕೆ.ಆರ್.ಡಿ.ಬಿ ಅನುದಾನದಲ್ಲಿ ಶಾಲಾ…

Read More

ಬೆಳಗಾವಿ ಸುವರ್ಣ ವಿಧಾನಸೌಧ : ಸರ್ಕಾರ ರಾಜ್ಯದಲ್ಲಿ 2022ರಲ್ಲಿ ಒಟ್ಟು 3,30,000 ಹೆಕ್ಟೇರ್ ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶ ಇರುವುದಾಗಿ ಸರ್ವೋಚ್ಛ ನ್ಯಾಯಾಲಯಕ್ಕೆ ಮಾಹಿತಿ ನೀಡಿತ್ತು. ಇದರ ಪುನರ್ ಪರಿಶೀಲನೆ ನಡೆಸಿ ವಾಸ್ತವದಲ್ಲಿರವ ಪರಿಭಾವಿತ ಅರಣ್ಯ ಪ್ರದೇಶವನ್ನು ಗುರುತಿಸಲು ಸಮಿತಿ ರಚನೆ ಮಾಡಲಾಗಿದೆ ಎಂದು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಅವರ ಉತ್ತರಿಸಿದರು. ಅರಣ್ಯ ಇಲಾಖೆ ಜಾಗ ಗುರುತಿಸಲು ಅನುಕೂಲವಾಗುವಂತೆ ಅರಣ್ಯ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸರ್ವೇ ನಡೆಸಲು ಆದೇಶ ಮಾಡಲಾಗಿದೆ. ಪರಿಭಾವಿತ ಅರಣ್ಯ ಪ್ರದೇಶದ ವಿಸ್ತೀರ್ಣ ಪುನರ್ ಪರಿಶೀಲಿಸಲು ನೇಮಿಸಿರುವ ಸಮಿತಿ 6 ತಿಂಗಳಿನಲ್ಲಿ ತನ್ನ ವರದಿ ನೀಡಲಿದೆ. ಇದಕ್ಕೂ ಮುನ್ನ ಪ್ರತಿ ಜಿಲ್ಲೆಗೆ ಸಂಬಂಧಿಸಿದಂತೆ ಪರಿಭಾವಿತ ಅರಣ್ಯ ವಿಸ್ತೀರ್ಣ ಕುರಿತು ಜಿಲ್ಲಾ ಕೆ.ಡಿ.ಪಿ ಸಭೆಯಲ್ಲಿ…

Read More

ಬೆಳಗಾವಿ ಸುವರ್ಣ ವಿಧಾನಸೌಧ : ರಾಜ್ಯದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಪರಿಷ್ಕøತ ಪಠ್ಯಕ್ರಮದ ಅನುಸಾರ ಯಂತ್ರೋಪಕರಣಗಳನ್ನು ಖರೀದಿಸಿ ಒದಗಿಸಲು 50 ಕೋಟಿ ರೂ. ಅನುದಾನ ಒದಗಿಸಿದ್ದು, ಈಗಾಗಲೆ ಟೆಂಡರ್ ಪ್ರಕ್ರಿಯೆ ನಡೆದಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಗುರುವಾರ ಅವರು ಮಾತನಾಡಿದರು. ಸಿರಗುಪ್ಪ ಶಾಸಕ ನಾಗರಾಜ್ ಬಿ.ಎಂ. ಅವರ ಚುಕ್ಕೆ ಗುರುತಿನ ಪ್ರಶ್ನೆಯಲ್ಲಿ ಸಿರಗುಪ್ಪ ಕ್ಷೇತ್ರ ವ್ಯಾಪ್ತಿಯಲ್ಲಿ ಸರ್ಕಾರಿ ಐಟಿಐ ಅನ್ನು 2014-15 ರಲ್ಲಿ ಮಂಜೂರು ಮಾಡಿದ್ದು, ಈ ಸಂಸ್ಥೆಯಲ್ಲಿ ವಿದ್ಯಾರ್ಥಿಗಳ ಕಲಿಕೆಗೆ ಬೇಕಾಗಿರುವ ಉಪಕರಣಗಳು ಲಭ್ಯವಿಲ್ಲದೆ ತೊಂದರೆಯಾಗಿದೆ ಎಂಬುದಾಗಿ ಸರ್ಕಾರದ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್, ರಾಜ್ಯದ 90 ಸರ್ಕಾರಿ ಐಟಿಐ ಗಳಲ್ಲಿ…

Read More