Subscribe to Updates
Get the latest creative news from FooBar about art, design and business.
Author: kannadanewsnow09
ಯಾದಗಿರಿ: ರಾಜ್ಯದಲ್ಲೊಂದು ಶಾಕಿಂಗ್ ಘಟನೆ ಎನ್ನುವಂತೆ ಶಹಾಪುರದ ಸರ್ಕಾರಿ ವಸತಿ ಶಾಲೆಯ ಶೌಚಾಲಯದಲ್ಲಿ 9 ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಬುಧವಾರ ಮಧ್ಯಾಹ್ನ ಆಕೆಗೆ ಹೆರಿಗೆಯಾದರೂ ಗುರುವಾರ ಈ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ದೂರು ದಾಖಲಿಸಿದ ನಂತರ ವರದಿ ಸಲ್ಲಿಸುವಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ್ ಕೊಸಾಂಬೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ವಿದ್ಯಾರ್ಥಿನಿ ಮತ್ತು ಮಗುವನ್ನು ಶಹಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಆಯೋಗದ ಗಮನಕ್ಕೆ ತಂದಿಲ್ಲ ಎಂದು ಹೇಳಿದ ಕೊಸಾಂಬೆ, ಶಾಲೆಯ ಪ್ರಾಂಶುಪಾಲರು ಮತ್ತು ಇತರ ಸಿಬ್ಬಂದಿ ಸದಸ್ಯರ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಲಾಗುವುದು ಎಂದು ಹೇಳಿದರು. ಬಾಲಕಿ ಮತ್ತು ಮಗುವಿನ ಸ್ಥಿತಿ ಆರೋಗ್ಯವಾಗಿದೆ. ಅವರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆಯ ಬಗ್ಗೆ ಅಧಿಕಾರಿಗಳು ಮತ್ತು ಪ್ರಾಂಶುಪಾಲರು ನಮಗೆ ಮಾಹಿತಿ ನೀಡಿಲ್ಲ. ಘಟನೆಯ ಬಗ್ಗೆ ನಮಗೆ ಇತರ ಮೂಲಗಳಿಂದ ಮಾತ್ರ ತಿಳಿದುಬಂದಿದೆ. ವಿವರವಾದ ವರದಿಯನ್ನು…
ಬೆಂಗಳೂರು: ಚಾಮುಂಡೇಶ್ವರಿ ದೇವಾಲಯ ಹಿಂದೂಗಳ ಆಸ್ತಿ ಅಲ್ಲ ಎನ್ನುವ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್ ಹಿಂದೂಗಳ ಭಾವನೆಗೆ ಧಕ್ಕೆ ತಂದಿದ್ದಾರೆ. ಕೂಡಲೇ ಅವರು ಹಿಂದೂಗಳ ಬಳಿ ಕ್ಷಮೆ ಯಾಚಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಹಿಂದೂಗಳನ್ನು ಅಪಮಾನ ಮಾಡುತ್ತಿದೆ. ಧರ್ಮಸ್ಥಳದಿಂದ ಚಾಮುಂಡೇಶ್ವರಿ ದೇವಾಲಯದವರೆಗೂ ಈ ಕೃತ್ಯ ನಡೆಯುತ್ತಿದೆ. ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುವುದಾದರೆ, ಅದೇನು ವಕ್ಫ್ ಮಂಡಳಿಯ ಆಸ್ತಿಯೇ? ಅಲ್ಲಿ ಯಾವಾಗ ಗೋರಿ ಕಟ್ಟುತ್ತಾರೆ ಎಂದು ಕೇಳಬೇಕಿದೆ ಎಂದರು. ಮೈಸೂರು ಮಹಾರಾಜರು ಚಾಮುಂಡೇಶ್ವರಿಯನ್ನು ಕುಲದೇವತೆಯಾಗಿ ಪೂಜಿಸಿಕೊಂಡು ಬಂದಿದ್ದಾರೆ. ಇಂತಹ ಇತಿಹಾಸವಿರುವ ದೇವರನ್ನು ಹಿಂದೂ ದೇವರಲ್ಲ ಎನ್ನುವ ಮೂಲಕ ಕಾಂಗ್ರೆಸ್ ಸರ್ಕಾರ ಮುಸ್ಲಿಮರ ಓಲೈಕೆ ಮಾಡುತ್ತಿದೆ. ಚಾಮುಂಡಿ ಬೆಟ್ಟದ ದೇವಾಲಯ ಯಾರ ಆಸ್ತಿ? ವಕ್ಫ್ ಮಂಡಳಿ, ಮಸೀದಿ, ಚರ್ಚ್ ಗಳನ್ನು ಯಾರಿಗೂ ಬಿಟ್ಟು ಕೊಡಲ್ಲ. ಆದರೆ ಹಿಂದೂ ದೇವಾಲಯ ಮಾತ್ರ ಎಲ್ಲರಿಗೂ ಸೇರಿದೆ ಎನ್ನುತ್ತಾರೆ. ಈ ದೇವಾಲಯವನ್ನು ಮುಟ್ಟಿದರೆ ಇಡೀ ರಾಜ್ಯದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಜಾತಿ ಸಮೀಕ್ಷೆ ಆರಂಭಗೊಂಡಿದೆ. ಈ ಹೊತ್ತಿನಲ್ಲಿ ಜನತೆಗೆ ಸರ್ಕಾರವು ಪ್ರಕಟಣೆಯಲ್ಲಿ ಮಹತ್ವದ ಮಾಹಿತಿ ಹಂಚಿಕೊಂಡಿದೆ. ಅದೇನು ಅಂತ ಮುಂದೆ ಓದಿ. ಈ ಕುರಿತಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಕಾರ್ಯದರ್ಶಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸರ್ಕಾರದ ಆದೇಶ ಸಂಖ್ಯೆ: ಹಿಂವಕ 289 ಬಿಸಿಎ 2025, ದಿನಾಂಕ:13.08.2025 ರಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಜಾತಿಗಳ (ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ) ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲು ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಹಿಂದುಳಿದ ವರ್ಗಗಳು ಮತ್ತು ಇತರೆ ಜಾತಿ/ಉಪಜಾತಿಗಳ ಬಗ್ಗೆ ಸಾರ್ವಜನಿಕರ ಮಾಹಿತಿಗಾಗಿ ದಿನಾಂಕ: 22.08.2025 ರಂದು ಪತ್ರಿಕೆಗಳಲ್ಲಿ ಪುಕಟಣೆ ನೀಡಿ ಯಾವುದೇ ಜಾತಿ/ಉಪಜಾತಿಗಳು ಬಿಟ್ಟು ಹೋಗಿದ್ದಲ್ಲಿ, ಅಂತಹ ಅಂಶಗಳ ಬಗ್ಗೆ, ಸಲಹೆ, ಸೂಚನೆಗಳು ಇದ್ದಲ್ಲಿ, 07 ದಿನಗಳ ಒಳಗೆ ನೀಡಲು ಕೋರಲಾಗಿತ್ತು ಎಂದಿದ್ದಾರೆ. ಸಾರ್ವಜನಿಕರು ಹಾಗೂ ವಿವಿಧ…
ಬೆಂಗಳೂರು: ದಿನಾಂಕ 30.08 2025 (ಶನಿವಾರ) 09:00 ಗಂಟೆಯಿಂದ 18:00 ಗಂಟೆಯವರೆಗೆ 66kV DG-3 & 66kV DG-4 ಮಾರ್ಗಗಳಲ್ಲಿ 66/11KV ಮಾನ್ಯತಾ S/s ನಿಂದ ಹೆಣ್ಣೂರು ನಗರದ S/s ಬಳಿಯ CTT ವರೆಗೆ DG-4 ಲೈನ್‌ನ ಟವರ್ ಸಂಖ್ಯೆ 18 ರಿಂದ ಟವರ್ ಸಂಖ್ಯೆ 23 ರವರೆಗೆ 1088 ಮೀಟರ್ HTLS ಕಂಡಕ್ಟರನ್ನು ಎಳೆಯಲು, KPTCL ನಿಂದ ಲೈನ್ ಕ್ಲಿಯರ್ ಅನ್ನು ಪಡೆದುಕೊಂಡಿರುವುದರಿಂದ, ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಶೋಭಾ ನಗರ, ಚೊಕ್ಕನಹಳ್ಳಿ ಡೊಮಿನೊ ಪಿಜ್ಜಾ ದೇವ್ ಐಎನ್‌ಎನ್ ಪ್ಯಾರಡೈಸ್ ನೂರ್ ನಗರ, ಮಾಜಿ ಸೈನಿಕ ಲೇಔಟ್, ಪೊಲೀಸ್ ಕ್ವಾರ್ಟರ್ಸ್, ಆರ್‌ಕೆ ಹೆಗ್ಡೆ ನಗರ, ಶಬರಿ ನಗರ, ಹೊಸ ಶಾಂತಿ ನಗರ, ಕೆಂಪೇಗೌಡ ಲೇಔಟ್, ನಾಗೇನಹಳ್ಳಿ ಗ್ರಾಮ, ರೀಜೆನ್ಸಿ ಪಾರ್ಕ್, ಎಸ್ತರ್ ಹಾರ್ಮೋನಿಕ್ ಲೇಔಟ್, ಬಾಲಾಜಿ ಲಾಲಿ ಲೇಔಟ್, ಬಾಲಾಜಿ ಲಾಲಿ ಲೇಔಟ್, ಬಾಲಾಜಿ ಲಾಲಿ ಲೇಔಟ್ ಮಿತ್ತಗಾನಹಳ್ಳಿ ಮತ್ತು ಕೋಗಿಲು ಗ್ರಾಮ, ಬೆಲಹಳ್ಳಿ, ವಿಧಾನ ಸೌಧ…
ಬೆಂಗಳೂರು: ರಾಜ್ಯದಲ್ಲಿರುವ ಜಲಮೂಲಗಳ ಸಮಗ್ರ ನಿರ್ವಹಣೆ ಹಾಗೂ ನೀರಿನ ನಿರ್ವಹಣೆಯಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ತರುವ ನಿಟ್ಟಿನಲ್ಲಿ ಉಪಗ್ರಹ ದತ್ತಾಂಶ ಹಾಗೂ ಎಐ ತಂತ್ರಜ್ಞಾನ ಆಧಾರಿತ ಡಿಜಿಟಲ್ ವಾಟರ್ ಸ್ಟಾಕ್ ಯೋಜನೆ ಅಳವಡಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಣೆಯನ್ನು ನೀಡಿರುವ ಅವರು, ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಅಂತರ್ಜಲದ ಮಟ್ಟ ಕುಸಿತಗೊಂಡಿರುವ ಹಾಗೆಯೇ, ನೀರಿನ ಲಭ್ಯತೆ ಅಸಮರ್ಪಕವಾಗಿರುವ ಸಂಧರ್ಭದಲ್ಲಿ ದೇಶದಲ್ಲೆ ಮೊದಲ ಬಾರಿಗೆ, ಕರ್ನಾಟಕ ಸರ್ಕಾರ ‘ಡಿಜಿಟಲ್ ವಾಟರ್ ಸ್ಟಾಕ್’ (DWS) ಎಂಬ ನೂತನ ತಂತ್ರಜ್ಞಾನ ಆಧಾರಿತ ನೀರಿನ ನಿರ್ವಹಣಾ ವೇದಿಕೆಯನ್ನು ಅನುಷ್ಠಾನಗೊಳಿಸುತ್ತಿದೆ. ಕರ್ನಾಟಕ ಟ್ಯಾಂಕ್ ಸಂರಕ್ಷಣಾ ಮತ್ತು ಅಭಿವೃದ್ಧಿ ಪ್ರಾಧಿಕಾರ (KTCDA) ಈ ಯೋಜನೆಯಲ್ಲಿ ಪ್ರಮುಖ ಪಾತ್ರವಹಿಸಲಿದ್ದು, ರಾಜ್ಯದ ಕೆರೆಗಳು ಮತ್ತು ಇನ್ನಿತರ ಜಲಮೂಲಗಳನ್ನು ಡಿಜಿಟಲ್ ವಾಟರ್ ಸ್ಟಾಕ್ (DWS) ಚಟುವಟಿಕೆ ಅಡಿಯಲ್ಲಿ ಸಮರ್ಪಕವಾಗಿ ಸರ್ವೇ ಸೇರಿದಂತೆ ಮೇಲ್ವಿಚಾರಣೆ ಹಾಗೂ ಅವುಗಳನ್ನು ಸಮರ್ಪಕವಾಗಿ…
ಬೆಂಗಳೂರು: ಮಹಾತ್ಮ ಗಾಂಧಿಯವರ ಆತ್ಮಚರಿತ್ರೆಯ 2ನೇ ಸಂಪುಟ ಕುರಿತಂತೆ ಸಲ್ಲಿಸಿದ್ದಂತ ಪಿಐಎಲ್ ಅನ್ನು ಹೈಕೋರ್ಟ್ ವಜಾಗೊಳಿಸಿದೆ. ಮಹಾತ್ಮ ಗಾಂಧಿಯವರ ಆತ್ಮಚರಿತ್ರೆಯ 2ನೇ ಸಂಪುಟ ಪ್ರಶ್ನಿಸಿ ಜಾಗೃತ ಕರ್ನಾಟಕ, ಜಾಗೃತ ಭಾರತ ಸಂಸ್ಥೆಯಿಂದ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಲಾಗಿತ್ತು. ಲೋಕಸಭೆ ಸ್ಪೀಕರ್ ಹಾಗೂ ರಾಹುಲ್ ಗಾಂಧಿ ಪ್ರತಿವಾದಿಯನ್ನಾಗಿಸಲಾಗಿತ್ತು. 1926 ರಿಂದ 1947ರವರೆಗಿನ ಮಹಾತ್ಮ ಗಾಂಧಿ ಆತ್ಮಚರಿತ್ರೆ ಲಭ್ಯವಿಲ್ಲ. ಈ ಬಗ್ಗೆ ಪ್ರತಿವಾದಿಗಳು ಬೆಳಕು ಚೆಲ್ಲಬೇಕೆಂದು ಪಿಐಎಲ್ ನಲ್ಲಿ ಕೋರಲಾಗಿತ್ತು. ಇಂತಹ ಪಿಐಎಲ್ ಅರ್ಜಿ ವಿಚಾರಣೆ ನಡೆಸಿದಂತ ಹೈಕೋರ್ ನ್ಯಾಯಪೀಠವು, ಪಿಐಎಲ್ ವಿಚಾರಣೆಗೆ ಅರ್ಹವಾಗಿಲ್ಲವೆಂದು ವಜಾಗೊಳಿಸಿದೆ. https://kannadanewsnow.com/kannada/court-orders-to-remand-mla-veerendra-pap-pi-to-custody-for-another-6-days/ https://kannadanewsnow.com/kannada/good-news-for-the-people-of-sagar-taluk-doctors-have-been-appointed-to-these-9-hospitals/
ಶಿವಮೊಗ್ಗ: ಸಾಗರ ತಾಲ್ಲೂಕಿನ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಖಾಲಿ ಇದ್ದಂತ 9 ಆಸ್ಪತ್ರೆಗಳಿಗೆ ಒಂದು ವರ್ಷ ಗ್ರಾಮೀಣ ಸೇವೆಯಡಿ ಎಂಬಿಬಿಎಸ್ ವೈದ್ಯರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಆರೋಗ್ಯಾಧಿಕಾರಿ ಆದೇಶದ ಮಾಡಿದ್ದು, ತಾಲ್ಲೂಕಿನಲ್ಲಿ ಒಂದು ವರ್ಷ ಗ್ರಾಮೀಣ ಸೇವೆ ವೈದ್ಯರು ಕೌನ್ಸೆಲಿಂಗ್ ಮುಖಾಂತರ ಸ್ಥಳ ಆಯ್ಕೆ ಮಾಡಿಕೊಂಡಿದ್ದಾರೆ. ತಾಲ್ಲೂಕಿನ ವಿವಿಧ ಆರೋಗ್ಯ ಸಂಸ್ಥೆಗಳಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಂಡಿರುತ್ತಾರೆ ಎಂದಿದ್ದಾರೆ. ಸಾಗರ ತಾಲ್ಲೂಕಿನ ಯಾವ ಆಸ್ಪತ್ರೆಗೆ ಯಾವ ವೈದ್ಯರ ನೇಮಕ? ಇಲ್ಲಿದೆ ಲೀಸ್ಟ್ ಡಾ.ನಿತಿನ್ ದೀಪ್, ನಗರ ಆರೋಗ್ಯ ಕೇಂದ್ರ ಸುಭಾಷ್ ನಗರ, ಸಾಗರ ಡಾ.ಮಧುರ, ನಮ್ಮ ಕ್ಲಿನಿಕ್, ನೆಹರು ನಗರ, ಸಾಗರ ಡಾ.ಎಂ.ಡಿ ಹನೀಫ್, ಸಮುದಾಯ ಆರೋಗ್ಯ ಕೇಂದ್ರ, ಆನಂದಪುರ ಡಾ.ರೀಟಾ ಗ್ಲೋರಿ ಕೆ.ವಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಕಾರ್ಗಲ್ ಡಾ.ಪ್ರಸನ್ನ ಕುಮಾರ್, ಪ್ರಾಥಮಿಕ ಆರೋಗ್ಯ ಕೇಂದ್ರ, ಬ್ಯಾಕೋಡು ಡಾ.ಅಮಿತಾ ಮಡಿವಾಳರ, ಪ್ರಾಥಮಿಕ ಆರೋಗ್ಯ ಕೇಂದ್ರ, ಶಿರವಂತೆ ಡಾ.ವಿನಿತ್.ಬಿ, ಪ್ರಾಥಮಿಕ…
ಬೆಂಗಳೂರು: ಆನ್ ಲೈನ್ ಹಾಗೂ ಆಪ್ ಲೈನ್ ಗ್ಯಾಬ್ಲಿಂಗ್ ನಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿದ್ದಂತ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಇಡಿ ಕೋರ್ಟ್ ಗೆ ಹಾಜರು ಪಡಿಸಲಾಯಿತು. ಈ ಪ್ರಕರಣದ ವಿಚಾರಣೆ ನಡೆಸಿದಂತ ಕೋರ್ಟ್, ಮತ್ತೆ 6 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. ಇಡಿ ಅಧಿಕಾರಿಗಳಿಂದ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಅಕ್ರಮ ಹಣ ವರ್ಗಾವಣೆ ಆರೋಪದಡಿ ಬಂಧಿಸಲಾಗಿತ್ತು. ಬಂಧಿತ ಆರೋಪಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಗೆ ಇಡಿ ಅಧಿಕಾರಿಗಳು ಹಾಜರುಪಡಿಸಿದರು. ಈ ಪ್ರಕರಣದ ವಿಚಾರಣೆ ನಡೆಸಿದಂತ ಜನಪ್ರತಿನಿಧಿಗಳ ನ್ಯಾಯಾಲಯವು ಬಂಧಿಸುವಾಗ ಆರೋಪಿ ವಿರುದ್ಧ ಯಾವ ಕೇಸ್ ಗಳನ್ನ ಉಲ್ಲೇಖಿಸಿದ್ದೀರಿ? ಎಂಬುದಾಗಿ ಇಡಿ ಅಧಿಕಾರಿಗಳಿಗೆ ನ್ಯಾಯಾಧೀಶರು ತರಾಟೆಗೆ ತೆಗೆದುಕೊಂಡರು. 2011ರ ಕೇಸ್ ರದ್ದಾಗಿದೆ. 2016ರ ಸಿಬಿಐ ಕೇಸ್ ಸಹ ಕ್ಲೋಸ್ ಆಗಿದೆ. ಯಾವ ಪ್ರಕರಣ ಆಧರಿಸಿ ಇಸಿಐಆರ್ ದಾಖಲಿಸಿದ್ದೀರಿ ಎಂಬುದಾಗಿ ಇಡಿ ಅಧಿಕಾರಿಗಳಿಗೆ ಜನಪ್ರತಿನಿಧಿಗಳ ಕೋರ್ಟ್ ನ್ಯಾಯಮೂರ್ತಿಗಳು ಕೇಳಿದರು. ಈ…
ಶಿವಮೊಗ್ಗ: ವಿಶ್ವ ವಿಖ್ಯಾತ ಜೋಗ್ ಪಾಲ್ಸ್ ನಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆಯತ್ನಕ್ಕೆ ಮುಂದಾಗಿದ್ದಾನೆ. ಆದರೇ ಆ ವ್ಯಕ್ತಿಯನ್ನು ಮನವೊಲಿಸಿದಂತ ಕಾರ್ಗಲ್ ಠಾಣೆಯ ಪಿಎಸ್ಐ ನಾಗರಾಜ್ ಹೆಚ್.ಎನ್ ಅವರು, ಆತ್ಮಹತ್ಯೆ ಯತ್ನದಿಂದ ಪಾರು ಮಾಡಿ, ಬದುಕಿನ ಪಾಠ ಮಾಡಿದ್ದಾರೆ. ಅಲ್ಲದೇ ಜೀವದ ಅಮೂಲ್ಯತೆಯ ಬಗ್ಗೆ ತಿಳಿಹೇಳಿ, ಊರಿಗೆ ಮರಳಿಸುವಂತ ಕೆಲಸವನ್ನು ಮಾಡಿದ್ದಾರೆ. ಆಟೋ ಚಾಲಕ ಸುಳಿವು ಕಳೆದ ಆಗಸ್ಟ್.25, 2025ರಂದು ಮಧ್ಯಾಹ್ನ 1.30ರ ಸುಮಾರಿಗೆ ಆಟೋ ಚಾಲಕ ಶಿಯಾಬ್ ಎಂಬುವರು ಜೋಗ್ ಫಾಲ್ಸ್ ರೌಂಡ್ಸ್ ನಲ್ಲಿದ್ದಂತ ಪೊಲೀಸರಿಗೆ ಒಬ್ಬ ವ್ಯಕ್ತಿ ಜೋಗ್ ಫಾಲ್ಸ್ ಅಪಾಯಕಾರಿ ಸ್ಥಳಗಳ ಬಗ್ಗೆ ವಿಚಾರಿಸಿದಂತ ಮಾಹಿತಿಯನ್ನು ನೀಡಿದ್ದಾರೆ. ಆತ ಆತ್ಮಹತ್ಯೆಗೆ ಮುಂದಾಗಿರುವಂತ ಸುಳಿವು ಅದರೊಂದಿಗೆ ಪೊಲೀಸರಿಗೆ ಸಿಕ್ಕಿದೆ. ಕೂಡಲೇ ಅಲರ್ಟ್ ಆದಂತ ಕಾರ್ಗಲ್ ಠಾಣೆಯ ಪಿಎಸ್ಐ ನಾಗರಾಜ್.ಹೆಚ್.ಎನ್ ಅವರು ತಮ್ಮ ಸಿಬ್ಬಂದಿಯೊಂದಿಗೆ ಆ ವ್ಯಕ್ತಿಯನ್ನು ಪತ್ತೆಹಚ್ಚಿದ್ದಾರೆ. 20 ದಿನಗಳ ಹಿಂದೆಯೇ ಮನೆ ಬಿಟ್ಟಿದ್ದ ವ್ಯಕ್ತಿ ಆ ವ್ಯಕ್ತಿಯ ಬಗ್ಗೆ ವಿಚಾರಿಸಿದಾಗ ಆತ ಸಾಲದಿಂದ ಬೇಸತ್ತು ಜೀವನದಲ್ಲಿ ಜಿಗುಪ್ಸೆಯನ್ನು ಬೆಂಗಳೂರು ಮೂಲದ ಬಟ್ಟೆ…
ಮಂಗಳೂರು: ಇಲ್ಲಿನ ಕರ್ನಾಟಕ-ಕೇರಳ ಗಡಿ ಭಾಗವಾಗಿರುವಂತ ತಲಪಾಡಿಯಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಒಂದು ಹಿಂದೆ ತೆಗೆದುಕೊಳ್ಳುವಾಗ ಚಾಲಕನ ನಿಯಂತ್ರಣ ತಪ್ಪಿ ಆಟೋಗೆ ಡಿಕ್ಕಿಯಾದ ಪರಿಣಾಮ ಬಾಲಕಿ ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ. ಆ ಭಯಾನಕ ಬೆಚ್ಚಿ ಬೀಳಿಸುವಂತ ವೀಡಿಯೋ ಕೆಳಗಿದೆ ನೋಡಿ. ಮಂಗಳೂರಿನ ಕರ್ನಾಟಕ-ಕೇರಳ ಗಡಿ ಭಾಗದ ತಲಪಾಡಿಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಕೆ ಎಸ್ ಆರ್ ಟಿ ಸಿ ಬಸ್ ಬ್ರೇಕ್ ಫೇಲ್ ಆದಂತ ಪರಿಣಾಮ, ನಿಯಂತ್ರಣ ಕಳೆದುಕೊಂಡು ರಸ್ತೆ ಬದಿ ನಿಂತಿದ್ದಂತ ಜನರಿಗೆ ಡಿಕ್ಕಿ ಹೊಡೆದಿದೆ. ಈ ಸಂದರ್ಭದಲ್ಲಿ ರಸ್ತೆ ಪಕ್ಕದಲ್ಲಿ ನಿಂತಿದ್ದಂತ ಬಾಲಕಿ ಸೇರಿದಂತೆ ಆರು ಮಂದಿ ದುರ್ಮರಣ ಹೊಂದಿದ್ದಾರೆ. ಈ ಭೀಕರ ಅಪಘಾತದಲ್ಲಿ ಬಾಲಕಿ ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದರೇ, 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನೂ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.…














