Author: kannadanewsnow09

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿ ವ್ಯಾಪ್ತಿಯಲ್ಲಿ ದಿನಾಂಕ 02-11-2025ರಂದು ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. ಈ ಕುರಿತಂತೆ ಸೊರಬ ಮೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ:02.11.2025 ರಂದು 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ಉಳವಿಯಿಂದ ವಿದ್ಯುತ್ ಸರಬರಾಜಾಗುವ ಕೆಳಕಂಡ 11 ಕೆವಿ ಫೀಡರ್‌ಗಳಿಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದಿದ್ದಾರೆ. ದಿನಾಂಕ:02.11.2025 ರಂದು ಉಳವಿ ಟೌನ್‌ನಲ್ಲಿ ವಾಹಕ ಬದಲಾವಣೆ ಕಾಮಗಾರಿಯನ್ನು ನಡೆಸಲು ಉದ್ದೇಶಿಸಿರುವುದರಿಂದ, 110/11 ಕೆವಿ ಉಳವಿ ವಿದ್ಯುತ್‌ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎಫ್1 ಬರಗಿ ಎನ್‌ಜೆನ್ನೈ, ಎಫ್2 ಕಾನಳ್ಳಿ, ಎಫ್-3 ಉಳವಿ, ಎಫ್4 ಹೊಸಬಾಳೆ ಮತ್ತು ಎಫ್-5 ದೂಗೂರು ಫೀಡರ್‌ಗಳ ವ್ಯಾಪ್ತಿಗೊಳಪಡುವ ಎಲ್ಲಾ ಗ್ರಾಮಗಳಿಗೆ ಬೆಳಗ್ಗೆ 10:00 ರಿಂದ ಸಂಜೆ 6:00 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ತಿಳಿಸಿದ್ದಾರೆ. ವರದಿ; ವಸಂತ ಬಿ ಈಶ್ವರಗೆರೆ..,…

Read More

ಬೆಂಗಳೂರು: ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ ಕೆ-ಸೆಟ್ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ (ನ.2) ನಡೆಸಲಿದ್ದು, ಕಟ್ಟುನಿಟ್ಟಿನ ಬಿಗಿ ಕ್ರಮಗಳನ್ನು ಕೈಗೊಂಡಿದೆ. ಈ ಬಾರಿಯೂ ಮುಖಚಹರೆ ಪತ್ತೆ ತಂತ್ರಜ್ಞಾನದ ಮೂಲಕ ಅಭ್ಯರ್ಥಿಗಳನ್ನು ತಪಾಸಣೆ ಮಾಡಿಯೇ ಪರೀಕ್ಷಾ ಕೇಂದ್ರಕ್ಕೆ ಬಿಡಲಾಗುತ್ತದೆ. ಕ್ಯಾಮರಾ ಕಣ್ಗಾವಲಿನಲ್ಲಿ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಒಟ್ಟು 33 ವಿಷಯಗಳಿಗೆ ನಡೆಯುವ ಕೆ-ಸೆಟ್ ಪರೀಕ್ಷೆಯನ್ನು 1.36 ಲಕ್ಷ ಮಂದಿ ತೆಗೆದುಕೊಂಡಿದ್ದಾರೆ. 11 ಜಿಲ್ಲೆಗಳ (ಬೆಂಗಳೂರು, ಬಳ್ಳಾರಿ, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರ್ಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯಪುರ) 316 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಅವರು ವಿವರಿಸಿದ್ದಾರೆ. ಬೆಂಗಳೂರಿನಲ್ಲಿ ಎಲ್ಲ 33 ವಿಷಯಗಳ ಪರೀಕ್ಷೆ ನಡೆದರೆ, ಉಳಿದ ಜಿಲ್ಲೆಗಳಲ್ಲಿ 11 ವಿಷಯಗಳ ಪರೀಕ್ಷೆ ಗಳು ಮಾತ್ರ ನಡೆಯಲಿವೆ. ಈ ಪರೀಕ್ಷೆಗಳಿಗೆ ನೆಗೆಟಿವ್ ಮೌಲ್ಯಮಾಪನ ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಬೆಳಿಗ್ಗೆ 10ರಿಂದ ಮಧ್ಯಾಹ್ನ 1ಗಂಟೆವರೆಗೆ ಪರೀಕ್ಷೆಗಳು ನಡೆಯಲಿದ್ದು, ಒಮ್ಮೆಗೇ ಎರಡೂ…

Read More

ಬೆಂಗಳೂರು: ನಗರದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಈ ನೂತನ ಮಾರ್ಗದಲ್ಲಿ ಹೊಸದಾಗಿ ಹವಾನಿಯಂತ್ರಿತ ಎಲೆಕ್ಟ್ರಿಕ್‌ ವಜ್ರ ವೇಗದೂತ (Express Service) ಬಸ್ ಸಂಚಾರವನ್ನು ಆರಂಭಿಸಲಾಗುತ್ತಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ. ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ, ಕೆಂಪೇಗೌಡ ಬಸ್‌ ನಿಲ್ದಾಣದಿಂದ ಸೆಂಟ್ರಲ್‌ ಟಾಕೀಸ್‌, ಮಲ್ಲೇಶ್ವರ್ಂ 8ನೇ ಕ್ರಾಸ್‌, ಗೋವರ್ಧನ ಟಾಕೀಸ್‌, ಗೊರಗುಂಟೆಪಾಳ್ಯ, ಅರಶಿನಕುಂಟೆ ಮಾರ್ಗವಾಗಿ ನೆಲಮಂಗಲ ಬಸ್‌ ನಿಲ್ದಾಣಕ್ಕೆ Express (Limited Stop) ಸೇವೆಗಳನ್ನು ದಿನಾಂಕ 03.11.2025 ರಿಂದ ಜಾರಿಗೆ ಬರುವಂತೆ ಮಾರ್ಗಸಂಖ್ಯೆ ವಿ-258ಸಿ ರಲ್ಲಿ 06 ಹವಾನಿಯಂತ್ರಿತ ಎಲೆಕ್ಟ್ರಿಕ್‌ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲಾಗುತ್ತದೆ. ಹೀಗಿದೆ ಮಾರ್ಗದ ವೇಳಾ ಪಟ್ಟಿ ವಿವರಗಳು ಮಾರ್ಗಸಂಖ್ಯೆ ವಿ-258ಸಿ ವೇಳಾಪಟ್ಟಿ (ನಿರ್ಗಮನ ಸಮಯ) ಕೆಂಪೇಗೌಡ ಬಸ್‌ ನಿಲ್ದಾಣ ಮಾರ್ಗ ನೆಲಮಂಗಲ ಬಸ್‌ ನಿಲ್ದಾಣ 0600, 0640, 0710, 0740, 0820, 0850, 0930, 1005, 1035, 1105, 1205, 1305,…

Read More

ಬೆಂಗಳೂರು: ಬೇರುಮಟ್ಟದಲ್ಲಿ ಸರ್ಕಾರಿ‌ ನೌಕರರೇ ಸರ್ಕಾರವಿದ್ದಂತೆ. ಸಾರ್ವಜನಿಕರಿಗೆ ಹಾಗೂ ಸರ್ಕಾರಕ್ಕೆ ನೌಕಕರು ಸೇತುವೆಯಾಗಿದ್ದಾರೆ. ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸವನ್ನು ನೌಕರರು ಮಾಡುತ್ತಿದ್ದಾರೆ. ಹಾಗಾಗಿ ಪಂಚತತ್ವಗಳ ಅಳವಡಿಸಿಕೊಂಡು ಕೆಲಸ ಮಾಡಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಜಿಲ್ಲಾಡಳಿತ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಸಂಯುಕ್ತಾಶ್ರಯದಲ್ಲಿ ನಗರದ ಎಸ್ ಎಂ ಪಂಡಿತ ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ 2025 ನೇ ಸಾಲಿನ ಜಿಲ್ಲಾಮಟ್ಟದ ರಾಜ್ಯ ಸರಕಾರಿ ನೌಕರರ ದಿನಾಚರಣೆ ಅಂಗವಾಗಿ ಸರ್ಕಾರಿ ಅಧಿಕಾರಿ/ ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರಧಾನ ಹಾಗೂ 371( ಜೆ) ನಿಮಮಾವಳಿಗಳ ಕಾರ್ಯಾಗಾರ ಉದ್ಘಾಟಿಸಿ‌ ಅವರು ಮಾತನಾಡುತ್ತಿದ್ದರು. ಸಾರ್ವಜನಿಕರಿಗೆ ಸರ್ಕಾರ ಯೋಜನೆಗಳ ನೀತಿಗಳ ಬಗ್ಗೆ ನೌಕರರೇ ತಿಳುವಳಿಕೆ‌ ನೀಡಬೇಕಾಗುತ್ತದೆ. ಇತ್ತೀಚಿನ‌ ಸಾಮಾಜಿಕ ಹಾಗೂ ಶೈಕ್ಷಣಿಕ ಸರ್ವೆ ಮಾಡುವಲ್ಲಿ ಸರ್ಕಾರಿ ನೌಕರರು ಪ್ರಮುಖ ಪಾತ್ರವಹಿಸಿದ್ದಾರೆ. ದಸರಾ ಹಾಗೂ ದೀಪಾವಳಿಯಂತ ಹಬ್ಬಗಳಿಗೂ ಕೂಡಾ ರಜೆ ಇಲ್ಲದೇ ಕೆಲಸ ಮಾಡಿದ್ದಾರೆ. ಜಿಲ್ಲೆಯಲ್ಲಿ…

Read More

ಬೆಂಗಳೂರು: ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧವಾಗಿದ್ದು ಶೇಕಡ 1ರಷ್ಟು ಮೀಸಲಾತಿಯನ್ನು ಯಾವ ರೀತಿಯಲ್ಲಿ ಕಲ್ಪಿಸಬಹುದು ಎಂಬ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಈ ಮೂಲಕ ರಾಜ್ಯದ ಅಲೆಮಾರಿ ಸಮುದಾಯಗಳಿಗೆ ಶೇ.1ರಷ್ಟು ಮೀಸಲಾತಿ ಕಲ್ಪಿಸುವಂತ ಸುಳಿವು ನೀಡಿದ್ದಾರೆ. ಒಳ ಮೀಸಲಾತಿ ಕುರಿತು ಅಲೆಮಾರಿ ಒಕ್ಕೂಟದ ಪದಾಧಿಕಾರಿಗಳ ನಿಯೋಗ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಭೇಟಿ ಮಾಡಿ ಮನವಿ ಅರ್ಪಿಸಿತು. ಸಮುದಾಯದ ಬೇಡಿಕೆಗಳಿಗೆ ಸ್ಪಂದಿಸಿ ಮುಖ್ಯಮಂತ್ರಿಗಳು ಮಾತನಾಡಿದರು. “ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸುಧಾರಣೆಗೆ ಎಸ್ ಸಿ ಪಿ /ಟಿ ಎಸ್ ಪಿ ಕಾರ್ಯ ಕ್ರಮಗಳನ್ನು ಜಾರಿಗೊಳಿಸಿದ್ದೇ ನಮ್ಮ ಸರ್ಕಾರ . ಪ್ರತಿಯೊಬ್ಬರಿಗೂ ಪರಿಹಾರ ಸಿಗಲಿ ಎನ್ನುವುದೇ ಸರ್ಕಾರದ ಉದ್ದೇಶ. ಯಾವುದೇ ಜಾತಿಯೊಳಗೆ ಇನ್ನೊಂದನ್ನು ಸೇರಿಸುವ , ಯಾವುದೇ ಸಮುದಾಯಕ್ಕೆ ಅನ್ಯಾಯ ಮಾಡುವ ಉದ್ದೇಶ ಸರ್ಕಾರಕ್ಕಿಲ್ಲ. ಇದಕ್ಕೊಂದು ಪರಿಹಾರ ಹುಡುಕಿ, ನ್ಯಾಯ ಒದಗಿಸಲಾಗುವುದು” ಎಂದರು. ” ಒಳಮೀಸಲಾತಿ…

Read More

ಶಿವಮೊಗ್ಗ: ಜಿಲ್ಲೆಯ ಶಿವಮೊಗ್ಗ ಜಿಲ್ಲಾ ತೋಟಗಾರಿಕೆ ಬೆಳೆಗಾರ ಉತ್ಪನ್ನ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘದ ಆಡಳಿತ ಮಂಡಳಿಯ ಸದಸ್ಯರನ್ನಾಗಿ ಅಶೋಕ್ ಬೇಳೂರು ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ. ಈ ಸಂಬಂಧ ರಾಜ್ಯದ ಸಹಕಾರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 ರ ಪ್ರಕರಣ 28ಎ ಉಪ ಪ್ರಕರಣ (4ಬಿ)(1) ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಶಿವಮೊಗ್ಗ ಜಿಲ್ಲಾ ತೋಟಗಾರಿಕೆ ಬೆಳೆಗಾರ ಉತ್ಪನ್ನ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘ ನಿ., ಶಿವಮೊಗ್ಗ, ಇದರ ಆಡಳಿತ ಮಂಡಳಿಗೆ ಅಶೋಕ ಬೇಳೂರು ತಂದೆ ನಾಗಪ್ಪ, ಬೇಳೂರು ಗ್ರಾಮ, ಕಸಬಾ ಹೋಬಳಿ, ಸಾಗರ ತಾಲ್ಲೂಕು, ಶಿವಮೊಗ, ಜಿಲ್ಲೆ ಇವರನ್ನು ಅಧಿಕಾರೇತರ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಸರ್ಕಾರದ ಮುಂದಿನ ಆದೇಶದವರೆಗೆ ನಾಮನಿರ್ದೇಶನ ಮಾಡಿ ಆದೇಶಿಸಿದ್ದಾರೆ. ಅಂದಹಾಗೇ ಅಶೋಕ್ ಬೇಳೂರು, ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಸಹೋದರರ ಪುತ್ರರಾಗಿದ್ದಾರೆ. ಕಾಂಗ್ರೆಸ್…

Read More

ಬೀದರ್: ಜಿಲ್ಲೆಯಲ್ಲಿ 3.0 ತೀವ್ರತೆಯಲ್ಲಿ ಭೂಕಂಪನ ಉಂಟಾಗಿದೆ. ಭೂಮಿ ಕಂಪಿಸಿದ ಅನುಭವದಿಂದಾಗಿ ಜನರು ಕೆಲ ಕಾಲ ಭಯಭೀತರಾದಂತ ಘಟನೆ ನಡೆದಿದೆ. ಬೀದರ್ ಜಿಲ್ಲೆಯ ಹುಮನಾಬಾದ್ ತಾಲ್ಲೂಕಿನ ಮುದ್ನಾಳ್ ಗ್ರಾಮದಲ್ಲಿ ಭೂಕಂಪನ ಉಂಟಾಗಿದೆ. ಇದರಿಂದಾಗಿ ಭೂಮಿ ಕಂಪಿಸಿದಂತ ಅನುಭವ ಜನರಿಗೆ ಉಂಟಾಗಿದೆ. ಭೂಕಂಪನದ ಕೇಂದ್ರಬಿಂದು ಹುಮನಾಬಾದ್ ತಾಲ್ಲೂಕಿನ ಇಟಗಾ ಗ್ರಾಮದಿಂದ ಸುಮಾರು 5.1 ಕಿಲೋಮೀಟರ್ ಪಶ್ಚಿಮದಲ್ಲಿ ಹಾಗೂ ಚಿಟಗುಪ್ಪ ತಾಲ್ಲೂಕಿನ ಕೊಡಂಬಲ್ ಗ್ರಾಮದಿಂದ 7.3 ಕಿಲೋಮೀಟರ್ ಪಶ್ಚಿಮದಲ್ಲಿ ಎಂಬುದಾಗಿ ಇಲಾಖೆ ಮಾಹಿತಿ ನೀಡಿದೆ. https://kannadanewsnow.com/kannada/good-news-for-book-lovers-kannada-book-authority-announces-50-discount-on-all-books/ https://kannadanewsnow.com/kannada/breaking-renukashwami-murder-case-actor-darshan-gang-scheduled-for-charge-framing-on-nov-3/

Read More

ಬೆಂಗಳೂರು: ಪುಸ್ತಕ ಪ್ರಿಯರಿಗೆ ಗುಡ್ ನ್ಯೂಸ್ ಎನ್ನುವಂತೆ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳ ಮೇಲೆ ಶೇ.50ರಷ್ಟು ರಿಯಾಯಿತಿಯನ್ನು ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ ಕಿರಣ್ ಸಿಂಗ್ ಅವರು ಮಾಹಿತಿ ನೀಡಿದ್ದು, ಕನ್ನಡ ರಾಜ್ಯೋತ್ಸವದ ಅಂಗವಾಗಿ 2025ರ ನವೆಂಬರ್‌‌‌ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಖಡಾ 50%ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಲು ಕೋರಿದ್ದಾರೆ. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ (ಸಂಪರ್ಕ ಸಂಖ್ಯೆ:080-22107705) ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್‌ ಲೈನ್‌ https://kpp.karnataka.gov.in (ಆನ್‌ಲೈನ್‌ ಪುಸ್ತಕ ಖರೀದಿಗೆ ವಿಭಾಗ ಇಲ್ಲಿ ವೀಕ್ಷಿಸಿ) ನಲ್ಲಿ…

Read More

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ವಿಧಾನಸೌಧದ ಒಳಗೆ ಆಕ್ರೋಶ ವ್ಯಕ್ತವಾಗಿದೆ. ಇಂದು ವಿಧಾನಸೌಧದ ಒಳಗೆ ಸರ್ಕಾರದ ವಿರುದ್ಧ ಧಿಕ್ಕಾರವನ್ನು ಅಲೆಮಾರಿಗಳು ಕೂಗಿರುವುದಾಗಿ ತಿಳಿದು ಬಂದಿದೆ. ವಿಧಾನಸೌಧದ ಒಳಗೆ ಸರ್ಕಾರಕ್ಕೆ ಧಿಕ್ಕಾರವನ್ನು ಅಲೆಮಾರಿಗಳು ಕೂಗಿದ್ದಾರೆ. ಒಳಮೀಸಲಾತಿ ವಿಚಾರವಾಗಿ ಅಲೆಮಾರಿ ಮುಖಂಡರ ಜೊತೆಗೆ ಸಭೆ ನಡೆಸಿದ್ದರು. ಸಭೆ ಮುಗಿಸಿ ಸಿಎಂ ತೆರಳುತ್ತಿದ್ದಂತೆ ಅಲೆಮಾರಿಗಳ ಮುಖಂಡರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ವಿಧಾನಸೌಧದ ಒಳಗೆ ಸರ್ಕಾರಕ್ಕೆ ಧಿಕ್ಕಾರವನ್ನು ಅಲೆಮಾರಿ ಮುಖಂಡರು ಕೂಗಿದ್ದಾರೆ. ರಾಜ್ಯ ಸರ್ಕಾರದಿಂದ ನಮಗೆ ನ್ಯಾಯ ಸಿಗುತ್ತಿಲ್ಲವೆಂದು ಅಸಮಾಧಾನವನ್ನು ಹೊರ ಹಾಕಿದ್ದಾರೆ. ಅಲ್ಲದೇ ಸುಪ್ರೀಂ ಕೋರ್ಟ್ ಆದೇಶದಂತೆ ತಳಸಮುದಾಯಕ್ಕೆ ನ್ಯಾಯಬೇಕು ಎಂಬುದಾಗಿಯೂ ಆಗ್ರಹಿಸಿದ್ದಾರೆ. ಸಾಮಾಜಿಕ ನ್ಯಾಯದಂತೆ ಅಲೆಮಾರಿ ಸಮಾಜಕ್ಕೆ ಮೀಸಲಾತಿ ಕೊಡಿ. ಯಾವುದೇ ಪ್ಯಾಕೇಜ್ ಬೇಡವೆಂದು ಅಲೆಮಾರಿ ಮುಖಂಡರು ಆಕ್ರೋಶವನ್ನು ವಿಧಾನಸೌಧದ ಒಳಗೆ ಹೊರ ಹಾಕಿದ್ದಾರೆ. https://kannadanewsnow.com/kannada/narasapur-express-special-train-service-extended-up-to-kakinada-town/ https://kannadanewsnow.com/kannada/breaking-renukashwami-murder-case-actor-darshan-gang-scheduled-for-charge-framing-on-nov-3/

Read More

ಮೈಸೂರು: ದಕ್ಷಿಣ ಮಧ್ಯ ರೈಲ್ವೆಯು ರೈಲು ಸಂಖ್ಯೆ 07033/34 ನರಸಾಪುರ – ಮೈಸೂರು – ನರಸಾಪುರ ವಿಶೇಷ ಎಕ್ಸ್‌ಪ್ರೆಸ್ ರೈಲಿನ ಸಂಚಾರವನ್ನು ನವೆಂಬರ್ 3, 2025 ರಿಂದ ನವೆಂಬರ್ 29, 2025 ರವರೆಗೆ ಕಾಕಿನಾಡ ಟೌನ್‌ವರೆಗೆ ವಿಸ್ತರಿಸಲು ಸೂಚಿಸಿದೆ. ಈ ಮೊದಲು ನರಸಾಪುರ ಮತ್ತು ಮೈಸೂರು ನಡುವೆ ಸಂಚರಿಸುತ್ತಿದ್ದ ರೈಲು ಸಂಖ್ಯೆ 07033, ಈಗ ನವೆಂಬರ್ 3, 2025 ರಿಂದ ನವೆಂಬರ್ 28, 2025 ರವರೆಗೆ ಕಾಕಿನಾಡ ಟೌನ್ ಮತ್ತು ಮೈಸೂರು ನಡುವೆ ಕಾರ್ಯಾಚರಣೆ ಮಾಡಲಿದೆ. ಅದೇ ರೀತಿ, ಈ ಮೊದಲು ಮೈಸೂರು ಮತ್ತು ನರಸಾಪುರ ನಡುವೆ ಸಂಚರಿಸುತ್ತಿದ್ದ ರೈಲು ಸಂಖ್ಯೆ 07034, ಈಗ ನವೆಂಬರ್ 4, 2025 ರಿಂದ ನವೆಂಬರ್ 29, 2025 ರವರೆಗೆ ಮೈಸೂರು ಮತ್ತು ಕಾಕಿನಾಡ ಟೌನ್ ನಡುವೆ ಸಂಚರಿಸಲಿದೆ. ರೈಲು ಸಂಖ್ಯೆ 07033 ಕಾಕಿನಾಡ ಟೌನ್ – ಮೈಸೂರು ವಿಶೇಷ ಎಕ್ಸ್‌ಪ್ರೆಸ್ ರೈಲು ಕಾಕಿನಾಡ ಟೌನ್‌ನಿಂದ ಬೆಳಿಗ್ಗೆ 9 ಗಂಟೆಗೆ ಹೊರಟು, ಮರುದಿನ ಸಂಜೆ 4 ಗಂಟೆಗೆ…

Read More