Author: kannadanewsnow09

ಮಂಡ್ಯ: ತಾಂತ್ರಿಕ ದೋಷಕ್ಕೆ ಮಂಡ್ಯದ ಮೈಶುಗರ್ ಕಾರ್ಖಾನೆ ಸ್ಥಗಿತಗೊಂಡಿದೆ. ಹೀಗಾಗಿ ಕಾರ್ಖಾನೆಗೆ ರೈತ ಮುಖಂಡರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಮೈಶುಗರ್ ಕಾರ್ಖಾನೆಯ ಆವರಣದಲ್ಲಿ ಕಬ್ಬು ತಂದು ಕಾಯುತ್ತಿದ್ದ ರೈತರ ಸಮಸ್ಯೆಗಳ ಬಗ್ಗೆ ಎಂಡಿಗೆ ಮಾಹಿತಿಯನ್ನು ರೈತ ಮುಂಖಂಡರು ನೀಡಿದ್ದಾರೆ. ಎರಡೆರಡು ದಿನಕ್ಕೂ ಕೆಟ್ಟು ನಿಲ್ಲುತ್ತಿರುವ ಮೈಶುಗರ್ ಕಾರ್ಖಾನೆ ವಿರುದ್ದ ರೈತರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಕಬ್ಬು ಅರೆಯುವಿಕೆ ಸರಿಯಾಗಿ ನಡೆಯದೆ ರೈತರು ಹೈರಾಣಾಗಿದ್ದಾರೆ. ಬೆಳೆದ ಕಬ್ಬು ತಂದು ಕಾರ್ಖಾನೆಯಲ್ಲಿ ದಿನಗಟ್ಟಲೆ ರೈತರು ಕಾಯುತ್ತಿದ್ದಾರೆ. ಕುಡಿಯುವ ನೀರು, ಮೂಲಭೂತ ವ್ಯವಸ್ಥೆ ಆಗ್ರಹಿಸಿದ್ದಾರೆ. ಮೈಶುಗರ್ ಎಂಡಿ ಜೊತೆಯಲ್ಲಿ ಕಾರ್ಖಾನೆ ಪರಿಶೀಲನೆಯನ್ನು ರೈತ ಮುಂಖಂಡರು ನಡೆಸಿದರು. ಆ ಬಳಿಕ ಮೈಶುಗರ್ ಅಧ್ಯಕ್ಷ ಹಾಗೂ ಎಂಡಿ ಜೊತೆ ಸಭೆ ನಡೆಸಲಾಯಿತು. ರೈತರ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಕಾರ್ಖಾನೆ ಸ್ಥಗಿತ, ಕಬ್ಬು ಅರೆಯುವಿಕೆ ತಾಂತ್ರಿಕ ದೋಷ, ಕಬ್ಬಿನ ಹಾಲು ಲಿಕೇಜ್, ಕಬ್ಬು ಒಣಗುತ್ತಿರುವ ಬಗ್ಗೆ ಚರ್ಚೆ ನಡೆಸಲಾಗಿದೆ. ಮೂಲ ಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಲಾಗಿದೆ. ಸರಿಯಾದ…

Read More

ಬೆಂಗಳೂರು: ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಬಿಬಿಎಂಪಿ ವತಿಯಿಂದ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಗಣೇಶ ಮೂರ್ತಿಗಳ ವಿಸರ್ಜನೆಗಾಗಿ 41 ಕೆರೆ ಅಂಗಳದ ಶಾಶ್ವತ/ತಾತ್ಕಾಲಿಕ ಕಲ್ಯಾಣಿಗಳು ಹಾಗೂ 489 ತಾತ್ಕಾಲಿಕ ಸಂಚಾರಿ ವಾಹನಗಳ ವ್ಯವಸ್ಥೆಯನ್ನು ಎಲ್ಲಾ ವಾರ್ಡ್ ಗಳಲ್ಲಿ ಮಾಡಿಕೊಳ್ಳಲಾಗಿದೆ ಎಂದು ಮುಖ್ಯ ಆಯುಕ್ತರು ತಿಳಿಸಿದ್ದಾರೆ. ಗಣೇಶ ವಿಸರ್ಜನೆಗೆ ಸಂಬಂಧಿಸಿದಂತೆ ಮೇಲ್ವಿಚಾರಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನೋಡಲ್ ಅಧಿಕಾರಿಗಳನ್ನು ಸಹ ನಿಯೋಜಿಸಲಾಗಿದೆ. ಅದರ ಸಂಪೂರ್ಣ ವಿವರಗಳಿಗಾಗಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಅಥವಾ ಬಿಬಿಎಂಪಿ ವೆಬ್ ಸೈಟ್ ಲಿಂಕ್ https://apps.bbmpgov.in/ganesh2025/ ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು. ಪ್ರಮುಖ ಕಲ್ಯಾಣಿಗಳಲ್ಲಿ ಅಗತ್ಯ ವ್ಯವಸ್ಥೆ: ಪ್ರತಿ ವರ್ಷದಂತೆ ಬಿಬಿಎಂಪಿ ವ್ಯಾಪ್ತಿಯಲ್ಲಿನ ಕೆರೆಗಳಾದ ಸ್ಯಾಂಕಿಕೆರೆ, ಹಲಸೂರು ಕರೆ, ಯಡಿಯೂರು ಕೆರೆ ಹಾಗೂ ಹೆಬ್ಬಾಳ ಕೆರೆ ಹಾಗೂ ಇತರೆ ಕೆರೆಗಳ ಅಂಗಳದಲ್ಲಿರುವ ಕಲ್ಯಾಣಿಗಳಲ್ಲಿ ಗಣೇಶ ವಿಸರ್ಜನೆಗೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಕಲ್ಯಾಣಿಗಳ ಆವರಣದಲ್ಲಿ ವ್ಯವಸ್ಥಿತವಾಗಿ ಬ್ಯಾರಿಕೇಡಿಂಗ್‌ಗಳ ಅಳವಡಿಕೆ, ನುರಿತ ಈಜುಗಾರರ/ಜೀವ ರಕ್ಷಕರ ನಿಯೋಜನೆ, ಸಿಸಿಟಿವಿ ಅಳವಡಿಕೆ, ವಿದ್ಯುತ್ ದೀಪಗಳ…

Read More

ಬೆಂಗಳೂರು: ವಿಧಾನಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಆರ್ ಎಸ್ ಎಸ್ ಗೀತೆಯನ್ನು ಹೇಳಬಾರದಿತ್ತು ಎಂಬುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ವಿಧಾನಸಭೆಯಲ್ಲಿ ಆರ್ ಎಸ್ ಎಸ್ ಗೀತೆ ಹೇಳಿದ್ದಕ್ಕೆ ಡಿ.ಕೆ ಶಿವಕುಮಾರ್ ಕ್ಷಮೆಯಾಚಿಸಿದ್ದಾರೆ. ಡಿಕೆ ಶಿವಕುಮಾರ್ ಕ್ಷಮೆಯಾಚಿಸಿದ್ದಾರೆ. ಅಲ್ಲಿಗೆ ಎಲ್ಲ ಮುಗೀತು ಎಂದರು. ಪದೇ ಪದೇ ಡಿ.ಕೆ ಶಿವಕುಮಾರ್ ಸದನದಲ್ಲಿ ಆರ್ ಎಸ್ ಎಸ್ ಗೀತೆ ಹೇಳಿದ್ದನ್ನು ಎತ್ತಿಹಿಡಿಯುವುದು ಬೇಡ. ಕ್ಲೋಸ್ ಆದ ಕೇಸ್ ಓಪನ್ ಮಾಡುವುದಕ್ಕೆ ನಾನು ಹೋಗೋದಿಲ್ಲ. ಇನ್ಮುಂದೆ ಯಾರೂ ಹೀಗೆ ಮಾಡಬಾರದು ಎಂಬುದಾಗಿ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ ನೀಡಿದರು. https://kannadanewsnow.com/kannada/chamundeshwari-is-the-presiding-deity-of-our-land-and-everyone-has-the-right-to-her-vision-dk-shivakumars-clarification/ https://kannadanewsnow.com/kannada/good-news-for-farmers-of-the-state-special-campaign-for-record-amendment-starts-from-september-1/

Read More

ಬೆಂಗಳೂರು : “ಹೇಗೆ ನೀರಿಗೆ, ಬೆಳಕಿಗೆ, ಗಾಳಿಗೆ ಯಾವುದೇ ಜಾತಿ ಧರ್ಮ ಇಲ್ಲವೋ, ಅದೇ ರೀತಿ ದೇವರಿಗೂ ಸಹ ಧರ್ಮವಿಲ್ಲ. ಪ್ರಾರ್ಥನೆಯು ಯಾರೊಬ್ಬರ ಸ್ವತ್ತಲ್ಲ. ನಾನು ನಂಬಿರುವ ಗುರುಗಳು ಮಾನವ ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು. ಚಾಮುಂಡಿ ಬೆಟ್ಟ ಬರೀ ಹಿಂದೂಗಳ ಆಸ್ತಿಯಲ್ಲ ಎನ್ನುವ ಹೇಳಿಕೆಗೆ ಸಂಸದ ಯದುವೀರ ಹಾಗೂ ಪ್ರತಿಪಕ್ಷಗಳ ಟೀಕೆಯ ಬಗ್ಗೆ ಕೇಳಿದಾಗ, “ಚಾಮುಂಡೇಶ್ವರಿ ಎಲ್ಲಾ ಧರ್ಮದವರಿಗೂ ಆಶೀರ್ವಾದ ಮಾಡುವಂತಹ ದೇವರು.‌ ರಾಜ ವಂಶಸ್ಥರು ಹಾಗೂ ನಂತರ ಬಂದ ಸರ್ಕಾರಗಳು ಚಾಮುಂಡಿ ತಾಯಿಯನ್ನು ನಾಡದೇವಿ ಎಂದು ಕರೆದಿವೆ. ಈ ದೇಗುಲ ಸಾರ್ವಜನಿಕರ ಆಸ್ತಿ. ನಾಡಧ್ವಜ, ನಾಡದೇವಿ, ರಾಷ್ಟ್ರಧ್ವಜ ಹಾಗೂ ದೇವರಿಗೆ ಜಾತಿ, ಧರ್ಮ ಬಣ್ಣದ ರಾಜಕೀಯ ಲೇಪನ‌ ಮಾಡುವ ಅಗತ್ಯವಿಲ್ಲ” ಎಂದರು. ಎಲ್ಲಿದೆ ನಿಯಮ ತೋರಿಸಿ?: “ನಾಡದೇವಿಯ ದೇವಸ್ಥಾನಕ್ಕೆ ಕೇವಲ ಹಿಂದುಗಳು‌ ಮಾತ್ರ ಬರಬೇಕು ಎನ್ನುವ ನಿಯಮವಿದೆಯೇ? ಒಂದಷ್ಟು ಸಮುದಾಯದವರು ಬೌದ್ಧ,…

Read More

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಆಗಸ್ಟ್.30ರವರೆಗೆ ರಾಜ್ಯಾಧ್ಯಂತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿರುವಂತ ಭಾರತೀಯ ಹವಾಮಾನ ಇಲಾಖೆಯು, ಆಗಸ್ಟ್.30ರವರೆಗೆ ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್.28ರವರೆಗೆ ಗುಡುಗು, ಗಾಳಿ ಸಹಿತ ಸಾಧಾರಣ ಮಳೆಯು ಅಲ್ಲಲ್ಲಿ ಆಗಲಿದೆ ಎಂಬುದಾಗಿ ತಿಳಿಸಿದೆ. ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಯಲ್ಲಿ ವರುಣ ಆರ್ಭಟಿಸಿದ್ದಾನೆ. ಇದರ ನಡುವೆ ಬೀದರ್ ಜಿಲ್ಲೆಯಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯನ್ನು ಹವಾಮಾನ ಇಲಾಖೆ ನೀಡಿದೆ. ಅಲ್ಲದೇ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೀದರ್, ಭಾಲ್ಕಿ, ಔರಾದ್, ಬಸವಕಲ್ಯಾಣ, ಹುಮ್ನಾಬಾದ್ ಸೇರಿದಂತೆ ವಿವಿಧ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ವಿವಿಧೆಡೆ ಜನ ಜೀವನ ಅಸ್ತವ್ಯಸ್ಥಗೊಂಡಿದ್ದು, ಬೆಳೆ ನಾಶವಾಗುವಂತ ಭೀತಿಯಲ್ಲಿ ಅನ್ನದಾತರಿದ್ದಾರೆ. https://kannadanewsnow.com/kannada/lets-go-to-the-bjps-pilgrimage-site-its-about-politics-not-about-religion-dk-shivakumar/ https://kannadanewsnow.com/kannada/good-news-for-farmers-of-the-state-special-campaign-for-record-amendment-starts-from-september-1/

Read More

ಬೆಂಗಳೂರು: ಬಿಜೆಪಿ ನಡೆಸಿದಂತ ಧರ್ಮಸ್ಥಳ ಚಲೋ ಅದು ರಾಜಕೀಯ ಚಲೋ ಹೊರತೇ, ಅದು ಧರ್ಮದ ಚಲೋ ಅಲ್ಲ ಎಂಬುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಇಂದು ತಮ್ಮ ನಿವಾಸದ ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, “ಇದು ಬಿಜೆಪಿಯ ರಾಜಕೀಯ ಅಜೆಂಡಾ. ಇಂತಹ ಬಿಜೆಪಿ ಅಲ್ಪಸಂಖ್ಯಾತ ಇಲಾಖೆಯನ್ನು ಮುಚ್ಚಿಬಿಡಲಿ. ನಮ್ಮ ದೇಶದ ನಿವಾಸಿಗಳೆಲ್ಲರನ್ನು ನಾವು ಒಪ್ಪಿಕೊಳ್ಳಲೇ ಬೇಕು. ಅವರನ್ನು ದೇಶದಿಂದ ಓಡಿಸಿ ಬಿಡಲು ಆಗುತ್ತದೆಯೇ?” ಎಂದರು. ಜೆಡಿಎಸ್ ತನ್ನ ಸಾಮಾಜಿಕ ‌ಜಾಲತಾಣದಲ್ಲಿ ನಕಲಿ ಪತ್ರ ಹರಿಬಿಟ್ಟಿರುವ ಬಗ್ಗೆ ಕೇಳಿದಾಗ, “ಅವರು ಯಾವತ್ತಿದ್ದರೂ ಫೇಕ್. ಜೆಡಿಎಸ್ ಎಂದಿಗೂ ಫೇಕ್ ಕೆಲಸಗಳನ್ನೇ ಮಾಡುವುದು. ನಾನು ಹೆದರಿಕೊಂಡು ಬಿಟ್ಟೆ, ರಣಹೇಡಿ ಅಂತಲಾದರೂ ಟೀಕೆ ಮಾಡಿಕೊಳ್ಳಲಿ, ಪರವಾಗಿಲ್ಲ, ಅವರ ದೊಡ್ಡ, ದೊಡ್ಡ ನಾಯಕರುಗಳಿಗೆ ಹೆದರಿಕೊಳ್ಳದವನು ನಾನು. ಈಗ ಈ ಟ್ವೀಟ್ ಗಳಿಗೆ ಹೆದರಿಕೊಳ್ಳುತ್ತೇನೆಯೇ? ವಿಜಯೇಂದ್ರ ಹಾಗೂ ಅಶೋಕ್ ಅವರು ತಮ್ಮ,‌ ತಮ್ಮ ಸಮಾಧಾನಕ್ಕೆ ಮಾತನಾಡುತ್ತಿದ್ದಾರೆ‌” ಎಂದರು. ಧರ್ಮಸ್ಥಳ ಚಲೋ ಬಗ್ಗೆ ಕೇಳಿದಾಗ, “ಅದು ರಾಜಕೀಯದ‌ ಚಲೋ. ಧರ್ಮದ ಚಲೋ…

Read More

ಬೆಂಗಳೂರು : “ಹೇಗೆ ನೀರಿಗೆ, ಬೆಳಕಿಗೆ, ಗಾಳಿಗೆ ಯಾವುದೇ ಜಾತಿ ಧರ್ಮ ಇಲ್ಲವೋ, ಅದೇ ರೀತಿ ದೇವರಿಗೂ ಸಹ ಧರ್ಮವಿಲ್ಲ. ಪ್ರಾರ್ಥನೆಯು ಯಾರೊಬ್ಬರ ಸ್ವತ್ತಲ್ಲ. ನಾನು ನಂಬಿರುವ ಗುರುಗಳು ಮಾನವ ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು. ಚಾಮುಂಡಿ ಬೆಟ್ಟ ಬರೀ ಹಿಂದೂಗಳ ಆಸ್ತಿಯಲ್ಲ ಎನ್ನುವ ಹೇಳಿಕೆಗೆ ಸಂಸದ ಯದುವೀರ ಹಾಗೂ ಪ್ರತಿಪಕ್ಷಗಳ ಟೀಕೆಯ ಬಗ್ಗೆ ಕೇಳಿದಾಗ, “ಚಾಮುಂಡೇಶ್ವರಿ ಎಲ್ಲಾ ಧರ್ಮದವರಿಗೂ ಆಶೀರ್ವಾದ ಮಾಡುವಂತಹ ದೇವರು.‌ ರಾಜ ವಂಶಸ್ಥರು ಹಾಗೂ ನಂತರ ಬಂದ ಸರ್ಕಾರಗಳು ಚಾಮುಂಡಿ ತಾಯಿಯನ್ನು ನಾಡದೇವಿ ಎಂದು ಕರೆದಿವೆ. ಈ ದೇಗುಲ ಸಾರ್ವಜನಿಕರ ಆಸ್ತಿ. ನಾಡಧ್ವಜ, ನಾಡದೇವಿ, ರಾಷ್ಟ್ರಧ್ವಜ ಹಾಗೂ ದೇವರಿಗೆ ಜಾತಿ, ಧರ್ಮ ಬಣ್ಣದ ರಾಜಕೀಯ ಲೇಪನ‌ ಮಾಡುವ ಅಗತ್ಯವಿಲ್ಲ” ಎಂದರು. ಹಿಂದುತ್ವದ ಮೇಲಿನ ದಾಳಿ ಹಾಗೂ ಬಾನು ಮುಷ್ತಾಕ್ ಆಯ್ಕೆಯ ಬಗ್ಗೆ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ, “ನಾವು ಆಚರಣೆ…

Read More

ಬೆಂಗಳೂರು: ನಾಡದೇವಿಯ ದೇವಸ್ಥಾನಕ್ಕೆ ಕೇವಲ ಹಿಂದುಗಳು‌ ಮಾತ್ರ ಬರಬೇಕು ಎನ್ನುವ ನಿಯಮವಿದೆಯೇ? ಒಂದಷ್ಟು ಸಮುದಾಯದವರು ಬೌದ್ಧ, ಕ್ರಿಶ್ಚಿಯನ್, ಇಸ್ಲಾಂ ಧರ್ಮಕ್ಕೆ ಸೇರಿಕೊಂಡಿದ್ದಾರೆ. ಇವರನ್ನು ದೇವಾಲಯಕ್ಕೆ ಬರಬೇಡಿ ಎಂದು ಹೇಳಲು ಆಗುತ್ತದೆಯೇ? ತಂದೆ-ತಾಯಿ ಬೇರೆ, ಬೇರೆ ಧರ್ಮಕ್ಕೆ ಸೇರಿರುತ್ತಾರೆ. ಇಂತಹ ಮಕ್ಕಳ ಆಚರಣೆ ಬೇರೆ,‌‌ ಬೇರೆ ಇರುತ್ತದೆ. ಬ್ಯಾರಿಗಳು ನಮಗಿಂತ ಅದ್ಭುತವಾಗಿ ಕನ್ನಡ ಮಾತನಾಡುತ್ತಾರೆ. ಅವರನ್ನು ಮುಸ್ಲಿಮರು ಎಂದು ತಳ್ಳಿಬಿಡಲು ಆಗುತ್ತದೆಯೇ? ಮುಸ್ಲಿಮರು ಶ್ಲೋಕವೊಂದನ್ನು ಪಠಣ ಮಾಡುವ ವಿಡಿಯೋ ನೋಡಿದೆ. ಅವರು ಸಹ ನಮ್ಮ ಧರ್ಮದ ಬಗ್ಗೆ ತಿಳಿದುಕೊಂಡಿದ್ದಾರೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಬುಧವಾರ ಪ್ರತಿಕ್ರಿಯಿಸಿದ ಅವರು, ಮಹಾರಾಜರ ಆಳ್ವಿಕೆ ಕಾಲದಲ್ಲಿಯೂ ವಿದೇಶಗಳಿಂದ ಅತಿಥಿಗಳನ್ನು ದಸರಾಕ್ಕೆ ಆಹ್ವಾನ ಮಾಡುತ್ತಿದ್ದರು. ವಿದೇಶಿ ಧರ್ಮಿಯರೂ ಇಲ್ಲಿಗೆ ಬಂದು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಚರ್ಚ್,‌ ಮಸೀದಿ, ಜೈನ ಬಸದಿ, ಗುರುದ್ವಾರ ಹೀಗೆ ಎಲ್ಲಾ ಕಡೆ ನಮ್ಮನ್ನು ಒಳಗೆ ಬಿಡುವುದಿಲ್ಲವೇ. ಈ ಹಿಂದೆ ಕವಿ ನಿಸಾರ್ ಅಹಮದ್ ಅವರು ದಸರಾ ಉದ್ಘಾಟನೆ…

Read More

ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವಂತ ಜಗ್ಗ ಆಲಿಯಾಸ್ ಜಗದೀಶ್ ಎಂಬಾತನನ್ನು ಸಿಐಡಿ ಪೊಲೀಸರು ಬಂಧಿಸಿದ್ದರು. ಬಂಧಿತ ಆರೋಪಿಯನ್ನು ಸಿಐಡಿ ಪೊಲೀಸರ ವಶಕ್ಕೂ ಹೆಚ್ಚಿನ ವಿಚಾರಣೆಗೆ ನೀಡಲಾಗಿದೆ. ಇದೇ ಸಂದರ್ಭದಲ್ಲಿ ನನಗೂ ಬೈರತಿ ಬಸವರಾಜ್ ಗೂ ಸಂಬಂಧವಿಲ್ಲ ಎಂಬುದಾಗಿ ಎ1 ಆರೋಪಿ ಜಗ್ಗ ಹೇಳಿದ್ದಾಗಿ ತಿಳಿದು ಬಂದಿದೆ. ಮಂಗಳವಾರದಂದು ಬಿಕ್ಲು ಶಿವ ಕೊಲೆ ಕೇಸಲ್ಲಿ ಎ1 ಆರೋಪಿಯಾಗಿದ್ದಂತ ಜಗದೀಶ್ ಆಲಿಯಾಸ್ ಜಗ್ಗ ನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು. ಹೆಚ್ಚಿನ ವಿಚಾರಣೆಗಾಗಿ 10 ದಿನಗಳ ಕಾಲ ಸಿಐಡಿ ವಶಕ್ಕೂ ನೀಡಲಾಗಿದೆ. ಸಿಐಡಿಯ ಎಸ್ ಪಿ ವೆಂಕಟೇಶ್ ನೇತೃತ್ವದಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಬಿಕ್ಲು ಶಿವನ ಜೊತೆ ಇದ್ದ ವೈಷಮ್ಯದ ಬಗ್ಗೆ, ಕಿತ್ತಗನೂರಿನ ಜಮೀನಿನ ಗಲಾಟೆಯ ಬಗ್ಗೆ, ಹಳೆಯ ಕೇಸ್ ಗಳ ಬಗ್ಗೆ ವಿಚಾರಣೆ ವೇಳೆಯಲ್ಲಿ ಹಲವು ಮಹತ್ವದ ಮಾಹಿತಿಯನ್ನು ಜಗ್ಗ ನೀಡಿದ್ದಾಗಿ ಹೇಳಲಾಗುತ್ತಿದೆ. ಇದಲ್ಲದೇ ಬೈರತಿ ಬಸವರಾಜ್ ಜೊತೆಗಿನ ಸಂಪರ್ಕದ ಬಗ್ಗೆಯೂ ಬಾಯಿ ಬಿಡಿಸಲು ಯತ್ನಿಸಲಾಗಿತತು. ಆದರೇ ಜಗ್ಗ…

Read More

ಬೆಂಗಳೂರು: ಸೆಪ್ಟಂಬರ್ 01 ರಿಂದ ಹದಿನೈದು ದಿನಗಳ ಕಾಲ ಪಹಣಿಯಲ್ಲಿನ ಸಣ್ಣಪುಟ್ಟ ತಿದ್ದುಪಡಿಗಳನ್ನು ಮಾಡಿಕೊಡಲು ವಿಶೇಷ ಅಭಿಯಾನ ಆರಂಭಿಸಲಾಗುವುದು, ರೈತರು ಕೂಡಲೆ ತಮ್ಮ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಂಬಂಧಿಸಿದ ತಹಸಿಲ್ದಾರರಿಗೆ ಸಲ್ಲಿಸಬೇಕೆಂದು ರಾಜ್ಯ ಸರ್ಕಾರ ತಿಳಿಸಿದೆ. ಪಹಣಿ, ಆರ್‍ಟಿಸಿ ಯಲ್ಲಿನ ಲೋಪದೋಷಗಳ ತಿದ್ದುಪಡಿ ಅಧಿಕಾರವನ್ನು ಈ ಮೊದಲು ತಹಸಿಲ್ದಾರರಿಗೆ ನೀಡಲಾಗಿತ್ತು. ಆದರೆ ಇದೀಗ, ಈ ಅಧಿಕಾರವನ್ನು ಉಪವಿಭಾಗಾಧಿಕಾರಿಗಳಿಗೆ ವಹಿಸಲಾಗಿರುತ್ತದೆ. ಆರ್‍ಟಿಸಿ ಯಲ್ಲಿನ ಸಣ್ಣಪುಟ್ಟ ದೋಷಗಳಿಂದ ರೈತರಿಗೆ ಹಲವು ವಿಧದ ತೊಂದರೆಯಾಗುತ್ತಿದೆ. ಇದನ್ನು ಪರಿಹರಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂಬುದಾಗಿ ರೈತ ಮುಖಂಡರುಗಳು ಜಿಲ್ಲಾಡಳಿತದ ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಇದೀಗ ರೈತರಿಗೆ ಅನುಕೂಲವಾಗುವಂತಾಗಲು ಸೆಪ್ಟಂಬರ್ 01 ರಿಂದ ಹದಿನೈದು ದಿನಗಳ ಕಾಲ ಜಿಲ್ಲೆಯಾದ್ಯಂತ ಆಯಾ ತಾಲ್ಲೂಕು ಕೇಂದ್ರಗಳಲ್ಲಿ ಪಹಣಿ ತಿದ್ದುಪಡಿ ಅಭಿಯಾನವನ್ನು ಕೈಗೊಳ್ಳಲಾಗುವುದು. ಪಹಣಿಯಲ್ಲಿನ ಸಣ್ಣ ಪುಟ್ಟ ದೋಷಗಳನ್ನು ತಿದ್ದುಪಡಿ ಮಾಡಲು (ಅಪೀಲು ಪ್ರಕರಣಗಳನ್ನು ಹೊರತುಪಡಿಸಿ) ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ರೈತರು ತಮ್ಮ ಅರ್ಜಿಗಳನ್ನು ಸಂಬಂಧಿಸಿದ ದಾಖಲೆಗಳೊಂದಿಗೆ ಆಯಾ ತಹಸಿಲ್ದಾರರಿಗೆ ಸಲ್ಲಿಸಬೇಕು. ತಹಸಿಲ್ದಾರರು…

Read More