Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ತಹಶೀಲ್ದಾರ್ ನ್ಯಾಯಾಲಯಗಳಲ್ಲಿನ ತಕರಾರು ಪ್ರಕರಣಗಳು ನಿಗದಿತ ದಿನಗಳ ಒಳಗೆ ವಿಲೇವಾರಿ ಆಗದಿದ್ದರೆ ಸಂಬಂಧಿತ ಅಧಿಕಾರಿಗಳ ವಿರುದ್ಧ ಮುಂದಿನ ದಿನಗಳಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಎಚ್ಚರಿಸಿದರು. ಸೋಮವಾರ ವಿಕಾಸಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ತಹಶೀಲ್ದಾರರುಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, “ಕಳೆದ ಎರಡು ವರ್ಷಗಳಿಂದ ತಹಶೀಲ್ದಾರ್ ನ್ಯಾಯಾಲಯಗಳ ತಕರಾರು ಅರ್ಜಿಗಳ ವಿಲೇ ಕೆಲಸ ಗಮನಾರ್ಹ ರೀತಿಯಲ್ಲಿ ಪ್ರಗತಿ ಕಂಡಿತ್ತು. ಈ ಮೊದಲು ಒಂದು ಪ್ರಕರಣದ ಇತ್ಯರ್ಥಕ್ಕೆ 212 ದಿನ ತೆಗೆದುಕೊಳ್ಳುತ್ತಿದ್ದರೆ, ಪ್ರಸ್ತುತ 82 ದಿನಕ್ಕೆ ಇಳಿಸಲಾಗಿತ್ತು. ಆದರೆ, ಬರುಬರುತ್ತಾ ತಕರಾರು ಅರ್ಜಿಗಳ ವಿಲೇ ಕೆಲಸ ಮತ್ತೆ ವೇಗ ಕಳೆದುಕೊಳ್ಳುತ್ತಿರುವುದನ್ನು ಒಪ್ಪಲು ಸಾಧ್ಯವಿಲ್ಲ” ಎಂದು ಬೇಸರ ಹೊರಹಾಕಿದರು. ತಕರಾರು ಅರ್ಜಿಗಳ ವಿಲೇಗಾಗಿ ಜನ ಸಾಮಾನ್ಯರು ದಿನನಿತ್ಯ ತಹಶೀಲ್ದಾರ್ ಕಚೇರಿ ಅಲೆಯುವುದನ್ನು ಶಾಶ್ವತವಾಗಿ ತಡೆಯಬೇಕು ಎಂಬ ಕಾರಣದಿಂದಲೇ ಅಭಿಯಾನ ಮಾದರಿಯಲ್ಲಿ ಕೋರ್ಟ್ ಕೇಸ್ ವಿಲೇ ಅಂಕಿತ ಹಾಕಲಾಗಿತ್ತು. ಹಲವು ಅಧಿಕಾರಿಗಳು ಉತ್ತಮವಾಗಿ…
ಬೆಂಗಳೂರು: ಆಗಸ್ಟ್.27, 2025ರಂದು ಗೌರಿ-ಗಣೇಶ ಹಬ್ಬದ ಪ್ರಯುಕ್ತ ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿ ಆದೇಶಿಸಲಾಗಿದೆ. ದಿನಾಂಕ: 27-08-2025 ಬುಧವಾರದಂದು “ಗಣೇಶ ಚತುರ್ಥಿ ಹಬ್ಬದ” ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಅವರು ತಿಳಿಸಿದ್ದಾರೆ.
ಬೆಂಗಳೂರು: ನಾಡಬಂಧುಗಳಿಗೆ ಗೌರಿ – ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಶುಭ ಕೋರಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ನಾಡಬಂಧುಗಳಿಗೆ ಗೌರಿ – ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು. ಜಲಚರಗಳಿಗೆ, ಪರಿಸರಕ್ಕೆ ಹಾನಿಕಾರಕವಾದ ರಾಸಾಯನಿಕಯುಕ್ತ ಗಣೇಶ ಮೂರ್ತಿಯ ಬದಲಿಗೆ ಮಣ್ಣಿನಿಂದಷ್ಟೇ ಮಾಡಿದ ಪರಿಸರಸ್ನೇಹಿ ಗಣೇಶನನ್ನು ಪೂಜಿಸೋಣ ಎಂದಿದ್ದಾರೆ. ಹಬ್ಬವನ್ನು ಸಂಭ್ರಮ – ಸಡಗರದೊಂದಿಗೆ ಆಚರಿಸುವ ಜೊತೆಗೆ ಪರಿಸರ ಕಾಳಜಿಯನ್ನು ಮರೆಯದಿರೋಣ. ವಿಘ್ನನಿವಾರಕನಾದ ಗಣೇಶನು ನಿಮ್ಮೆಲ್ಲಾ ಕಷ್ಟಗಳನ್ನು ಕಳೆದು ಸುಖ – ಸಮೃದ್ಧಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ. https://twitter.com/CMofKarnataka/status/1959969974690398274
ಬೆಂಗಳೂರು: ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆಯ ಭಾಗವಾಗಿ ಇಂದು ಸಚಿವ ರಾಮಲಿಂಗಾರೆಡ್ಡಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಅವರು ಉಚಿತವಾಗಿ ಮಣ್ಣಿನ ಗಣೇಶ ಮೂರ್ತಿಯನ್ನು ಬೆಂಗಳೂರಿನ ಈ ಸ್ಥಳಗಳಲ್ಲಿ ವಿತರಣೆ ಮಾಡಲಿದ್ದಾರೆ. ಕಳೆದ 10 ರಿಂದ 15 ವರ್ಷಗಳಿಂದ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಮತ್ತು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯರೆಡ್ಡಿ ಅವರು ಸಾರ್ವಜನಿಕರಿಗೆ ಉಚಿತವಾಗಿ ಮಣ್ಣಿನ ಗಣೇಶ ಮೂರ್ತಿಗಳನ್ನು ವಿತರಣೆ ಮಾಡುತ್ತಾ ಬಂದಿದ್ದಾರೆ. POP ಗಣಪಗಳ ವಿಸರ್ಜನೆಯಿಂದ ಮಾಲಿನ್ಯಕ್ಕೆ ಅದರಲ್ಲೂ ಜಲ ಮಾಲಿನ್ಯವಾಗುತ್ತದೆ. ಪರಿಸರ ಮಾಲಿನ್ಯ ತಡೆಗಟ್ಟುವುದು ಮತ್ತು ಅಂತರ್ಜಲದ ಗುಣಮಟ್ಟಕ್ಕೆ ಯಾವುದೇ ಹಾನಿಕಾರಕವಾಗದಂತೆ, ನೈಸರ್ಗಿಕ ಸಮತೋಲನ ಕಾಪಾಡುವಲ್ಲಿ ಸಹಕಾರಿಯಾಗುವ ಈ ಮಣ್ಣಿನ ಗಣಪತಿ ಸ್ಥಾಪನೆ ಮತ್ತು ವಿಸರ್ಜನೆಯ ಉಪಕ್ರಮವು ಪರಿಸರ ಸ್ನೇಹಿಯಾಗಿದೆ. ಇಂದು ಈ ಕೆಳಕಂಡ ಸ್ಥಳದಲ್ಲಿ ರಾಮಲಿಂಗಾರೆಡ್ಡಿ, ಸೌಮ್ಯಾ ರೆಡ್ಡಿ ಅವರು ಮಣ್ಣಿನ ಗಣಪತಿಯನ್ನು ಉಚಿತವಾಗಿ ವಿತರಣೆ 1. ದಿನಾಂಕ: 26.08.2025 ರಂದು ಬೆಳಿಗ್ಗೆ 8.30 ಕ್ಕೆ ಶಾಸಕರ ಕಛೇರಿ, ಕೋರಮಂಗಲ 2. ಬೆಳಿಗ್ಗೆ…
ಬೆಂಗಳೂರು: ರಾಜ್ಯದ ರೈತರಿಗೆ ಗುಡ್ ನ್ಯೂಸ್ ಎನ್ನುವಂತೆ ಅರ್ಜಿ ಹಾಕದಿದ್ದರೂ ಪೌತಿ ಖಾತೆ ಅಭಿಯಾನವನ್ನು ಸರ್ಕಾರದಿಂದ ಆರಂಭಿಸಲಾಗುತ್ತಿದೆ. ಈ ಮೂಲಕ ವಾರಸುದಾರರ ಹಸರಿಗೆ ಜಮೀನು ವರ್ಗಾವಣೆ ಮಾಡುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಸೋಮವಾರ ವಿಕಾಸಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ತಹಶೀಲ್ದಾರರುಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, “ಕಳೆದ ಎರಡು ವರ್ಷಗಳಿಂದ ತಹಶೀಲ್ದಾರ್ ನ್ಯಾಯಾಲಯಗಳ ತಕರಾರು ಅರ್ಜಿಗಳ ವಿಲೇ ಕೆಲಸ ಗಮನಾರ್ಹ ರೀತಿಯಲ್ಲಿ ಪ್ರಗತಿ ಕಂಡಿತ್ತು. ಈ ಮೊದಲು ಒಂದು ಪ್ರಕರಣದ ಇತ್ಯರ್ಥಕ್ಕೆ 212 ದಿನ ತೆಗೆದುಕೊಳ್ಳುತ್ತಿದ್ದರೆ, ಪ್ರಸ್ತುತ 82 ದಿನಕ್ಕೆ ಇಳಿಸಲಾಗಿತ್ತು. ಆದರೆ, ಬರುಬರುತ್ತಾ ತಕರಾರು ಅರ್ಜಿಗಳ ವಿಲೇ ಕೆಲಸ ಮತ್ತೆ ವೇಗ ಕಳೆದುಕೊಳ್ಳುತ್ತಿರುವುದನ್ನು ಒಪ್ಪಲು ಸಾಧ್ಯವಿಲ್ಲ” ಎಂದು ಬೇಸರ ಹೊರಹಾಕಿದರು. ರಾಜ್ಯದಲ್ಲಿ 52 ಲಕ್ಷ ಜಮೀನುಗಳು ಮೃತರ ಹೆಸರಿನಲ್ಲಿದೆ. ಈ ಪೈಕಿ ಫೌತಿ ಖಾತೆ ಆಂದೋಲನದ ಮೂಲಕ 3,35,727 ಪ್ರಕರಣಗಳಲ್ಲಿ ಮೃತರ ಹೆಸರಿನಿಂದ ಅವರ ವಾರಸುದಾರರ ಹೆಸರಿಗೆ ಜಮೀನು ವರ್ಗಾವಣೆ…
ಇತ್ತೀಚೆಗೆ ಹೃದಯಾಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಅಧ್ಯಯನವೊಂದರ ಪ್ರಕಾರ ಬೆಳಗ್ಗೆ 7 ರಿಂದ 11 ಗಂಟೆಯ ಸಮಯದ ಒಳಗೆ ಹೆಚ್ಚಾಗಿ ಆಗುತ್ತಿದ್ದಾವೆ. ಹಾಗಾದ್ರೇ ಇದಕ್ಕೆ ಕಾರಣವೇನು ಎನ್ನುವ ಬಗ್ಗೆ ಮುಂದೆ ಓದಿ. ವಿಶ್ವ ಆರೋಗ್ಯ ಸಂಸ್ಥೆ (WHO) ಪ್ರಕಾರ, 2022 ರಲ್ಲಿ ಅಂದಾಜು 19.8 ಮಿಲಿಯನ್ ಜನರು ಹೃದಯ ಸಂಬಂಧಿ ಕಾಯಿಲೆಗಳಿಂದ ಸಾವನ್ನಪ್ಪಿದ್ದಾರೆ. ಇದು ಜಾಗತಿಕ ಸಾವುಗಳಲ್ಲಿ ಸುಮಾರು 32% ಆಗಿದೆ. ಇವುಗಳಲ್ಲಿ, 85% ಸಾವುಗಳು ಹೃದಯಾಘಾತ ಮತ್ತು ಪಾರ್ಶ್ವವಾಯು ಕಾರಣ. ಹೃದಯಕ್ಕೆ ರಕ್ತ ಮತ್ತು ಆಮ್ಲಜನಕವನ್ನು ಕಳುಹಿಸುವ ಅಪಧಮನಿಯಲ್ಲಿ ಅಡಚಣೆ ಉಂಟಾದಾಗ ಹೃದಯಾಘಾತ ಸಂಭವಿಸುತ್ತದೆ. ಇದು ವಿವಿಧ ಕಾರಣಗಳಿಂದ ಸಂಭವಿಸಬಹುದು. ಹೃದ್ರೋಗ ತಜ್ಞ ಡಾ. ಸಂಜಯ್ ಭೋಜರಾಜ್, ಹೃದಯಾಘಾತದ ಪ್ರಮುಖ ಕಾರಣಗಳಲ್ಲಿ ಒಂದನ್ನು ಹಂಚಿಕೊಳ್ಳಲು Instagram ಗೆ ಕರೆದೊಯ್ದರು ಮತ್ತು ಅದು ಒತ್ತಡವಲ್ಲ. ‘ನಿಮ್ಮ ಬೆಳಗಿನ ಸಮಯವು ನಿಮ್ಮ ಹೃದಯಕ್ಕೆ ಹೆಚ್ಚಿನ ಎಚ್ಚರಿಕೆಯ ಕಿಟಕಿಯಾಗಿದೆ’ ಎಂದು ಅವರು ಹೇಳುತ್ತಾರೆ. ಬೆಳಿಗ್ಗೆ ನಿಮ್ಮ ಹೃದಯಕ್ಕೆ ‘ಹೆಚ್ಚಿನ ಎಚ್ಚರಿಕೆಯ ಕಿಟಕಿ’ ಏಕೆ ಬೆಳಿಗ್ಗೆ ನಿಮ್ಮ…
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಈ ಯೋಜನೆಗಳಿಗೆ ಈವರೆಗೆ ಯಾವುದಕ್ಕೆ ಎಷ್ಟು ಖರ್ಚು ಆಗಿದೆ ಎನ್ನುವ ಮಾಹಿತಿಯನ್ನು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಹೆಚ್.ಎಂ ರೇವಣ್ಣ ನೀಡಿದ್ದಾರೆ. ಹಾಗಾದ್ರೆ ಯಾವ ಗ್ಯಾರಂಟಿ ಯೋಜನೆಗೆ ಎಷ್ಟು ಖರ್ಚು ಆಗಿದೆ ಎಂಬ ಮಾಹಿತಿ ಮುಂದಿದೆ ಓದಿ. ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಸಿಎಜಿ ರಿಪೋರ್ಟ್ ವಿಚಾರವಾಗಿ ಮಾತನಾಡಿದಂತ ಹೆಚ್.ಎಂ ರೇವಣ್ಣ ಅವರು, ಖರ್ಚು ಮಾಡಿದ ಲೆಕ್ಕ ಕೊಡಬೇಕು ಅಷ್ಟೇ. ಅದರೆ ಯೋಜನೆ ಟೀಕಿಸಬಾರದು. ಈ ರೀತಿಯ ಕಮೆಂಟ್ ಮಾಡಿರಲಿಲ್ಲ. ಇದಕ್ಕೆ ಸಿಎಂ ಸಿದ್ದರಾಮಯ್ಯ ಉತ್ತರ ಕೊಡ್ತಾರೆ. ಗ್ಯಾರಂಟಿಯಿಂದ ಆರ್ಥಿಕವಾಗಿ ಹೊಡೆತ ಬೀಳುತ್ತೆ ಅನ್ನೋದು ಸತ್ಯಕ್ಕೆ ದೂರವಾಗಿದ್ದು. ಅವ್ರು ಯಾವ ಆಧಾರದ ಮೇಲೆ ಸರ್ವೇ ಮಾಡಿದ್ದಾರೆ ಗೊತ್ತಿಲ್ಲ. ಆಮೇಲೆ ನಾವು ಅದಕ್ಕೆ ಉತ್ತರ ಕೊಡ್ತೇವೆ ಎಂದರು. ಗ್ಯಾರಂಟಿ ಯೋಜನೆಗಳು 98% ಜಾರಿಗೆ ಬಂದಿದೆ. ಅತ್ಯುತ್ತಮ ಪ್ರತಿಕ್ರಿಯೆ ಜನರಿಂದ ಸಿಗುತ್ತಿದೆ. ಶಕ್ತಿಯೋಜನೆಯಿಂದ ರಾಜ್ಯದ ಹಿರಿಮೆಗೆ ಸಾಕ್ಷಿಯಾಗಿದೆ. ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಲಭಿಸಿದೆ. 500 ಕೋಟಿ ಹೆಚ್ಚು ಉಚಿತ ಪ್ರಯಾಣವನ್ನು ಮಾಹಿಳೆಯರು ಮಾಡಿದ್ದಾರೆ. ದೇಶ, ವಿದೇಶದಲ್ಲಿ ಪ್ರಶಂಸೆ ವ್ಯಕ್ತವಾಗಿದೆ. 94,177…
ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿಯನ್ನು ಸರ್ಕಾರ ನಿಗದಿ ಪಡಿಸಿತ್ತು. ಇದೀಗ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿಗಳಿಗೆ ಶಿಕ್ಷಣ, ಉದ್ಯೋಗದಲ್ಲಿ ಒಳ ಮೀಸಲಾತಿ ಕಲ್ಪಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಹಾಗಾದರೆ ಯಾರಿಗೆ ಎಷ್ಟು ಒಳ ಮೀಸಲಾತಿ ಪ್ರಮಾಣ ಅಂತ ಅಧಿಕೃತ ಆದೇಶ ಮುಂದೆ ಓದಿ. ಈ ಕುರಿತಂತೆ ಸಮಾಜ ಕಲ್ಯಾಣ ಇಲಾಖೆಯ ಜಂಟಿ ಕಾರ್ಯದರ್ಶಿ ಅಧಿಕೃತವಾಗಿ ನಡವಳಿ ಹೊರಡಿಸಿದ್ದು, ಕರ್ನಾಟಕ ಸರ್ಕಾರವು ಮಾನ್ಯ ಸರ್ವೋಚ್ಚ ನ್ಯಾಯಾಲಯವು CA No 2317 ರಲ್ಲಿ ಮಾನ್ಯ ಸರ್ವೋಚ್ಚ ನ್ಯಾಯಾಲಯವು ಪಂಜಾಬ್ ರಾಜ್ಯ ಮತ್ತು ಇತರರು Vs ದೇವಿಂದರ್ ಸಿಂಗ್ ಪುಕರಣದಲ್ಲಿ ನೀಡಿರುವ ತೀರ್ಪಿನ ಅನ್ವಯ ಪರಿಶಿಷ್ಟ ಜಾತಿಗಳ ಒಳಮೀಸಲಾತಿ (ವರ್ಗೀಕರಣ) ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಆಯೋಗ ವಿಚಾರಣಾ ಕಾಯ್ದೆ 1952 ರಂತೆ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಇವರ ನೇತೃತ್ವದ ಏಕ ಸದಸ್ಯ ಆಯೋಗವನ್ನು ಸರ್ಕಾರದ ಆದೇಶ ಸಂಖ್ಯೆ : SWD/SLP/8 2024(P-1), ದಿನಾಂಕ: 12-11-2024 ಮತ್ತು…
ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿಯನ್ನು ಸರ್ಕಾರ ನಿಗದಿ ಪಡಿಸಿತ್ತು. ಇದೀಗ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿಗಳಿಗೆ ಶಿಕ್ಷಣ, ಉದ್ಯೋಗದಲ್ಲಿ ಒಳ ಮೀಸಲಾತಿ ಕಲ್ಪಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ಸಮಾಜ ಕಲ್ಯಾಣ ಇಲಾಖೆಯ ಜಂಟಿ ಕಾರ್ಯದರ್ಶಿ ಅಧಿಕೃತವಾಗಿ ನಡವಳಿ ಹೊರಡಿಸಿದ್ದು, ಕರ್ನಾಟಕ ಸರ್ಕಾರವು ಮಾನ್ಯ ಸರ್ವೋಚ್ಚ ನ್ಯಾಯಾಲಯವು CA No 2317 ರಲ್ಲಿ ಮಾನ್ಯ ಸರ್ವೋಚ್ಚ ನ್ಯಾಯಾಲಯವು ಪಂಜಾಬ್ ರಾಜ್ಯ ಮತ್ತು ಇತರರು Vs ದೇವಿಂದರ್ ಸಿಂಗ್ ಪುಕರಣದಲ್ಲಿ ನೀಡಿರುವ ತೀರ್ಪಿನ ಅನ್ವಯ ಪರಿಶಿಷ್ಟ ಜಾತಿಗಳ ಒಳಮೀಸಲಾತಿ (ವರ್ಗೀಕರಣ) ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಆಯೋಗ ವಿಚಾರಣಾ ಕಾಯ್ದೆ 1952 ರಂತೆ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಇವರ ನೇತೃತ್ವದ ಏಕ ಸದಸ್ಯ ಆಯೋಗವನ್ನು ಸರ್ಕಾರದ ಆದೇಶ ಸಂಖ್ಯೆ : SWD/SLP/8 2024(P-1), ದಿನಾಂಕ: 12-11-2024 ಮತ್ತು ದಿನಾಂಕ: 03-12-2024 ರಂತೆ ರಚಿಸಿ ಆದೇಶಿಸಲಾಗಿದೆ. ಅದರಂತೆ, ಸದರಿ ಆಯೋಗವು ದಿನಾಂಕ: 04-08-2025 ರಂದು…
ಬೆಂಗಳೂರು: ನಗರದಲ್ಲಿ ಗುಂಡಿ ಮುಚ್ಚಲು ಬಿಡಿಗಾಸು ಇಲ್ಲದ ಕಾಂಗ್ರೆಸ್ ಸರ್ಕಾರ, ಸುರಂಗ ಮಾಡುತ್ತೇವೆ ಎಂದು ಜನರಿಗೆ ಮಂಕುಬೂದಿ ಎರಚುತ್ತಿದೆ ಎಂದು ಮಾಜಿ ಶಾಸಕ ಹಾಗೂ ನಗರ ಜೆಡಿಎಸ್ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡರು ದೂರಿದರು. ಯಶವಂತಪುರ ವಿಧಾನಸಭಾ ಕ್ಷೇತ್ರದ ದೊಡ್ಡ ಬಿದರುಕಲ್ಲು ವಾರ್ಡಿನಲ್ಲಿ ಜೆಡಿಎಸ್ ಕಾರ್ಯಕರ್ತರ ಸಮಾವೇಶ ಹಾಗೂ ಪಕ್ಷದ ಸದಸ್ಯತ್ವ ನೊಂದಣಿ ಮಿಸ್ಡ್ ಕಾಲ್ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳ ಹೆಸರಿನಲ್ಲಿ ಜನರನ್ನು ಮೋಸ ಮಾಡುತ್ತಿದೆ. ಅವುಗಳ ನೆಪದಲ್ಲಿ ಬರೀ ಘೋಷಣೆಗಳನ್ನು ಮಾಡುತ್ತಾ ಕಾಲಹರಣ ಮಾಡುತ್ತಿದೆ. ಗ್ಯಾರಂಟಿಗಳಿಂದ ರಾಜ್ಯದ ಅಭಿವೃದ್ಧಿ ಹಳಿ ತಪ್ಪಿದೆ ಎಂದು ಸಿಎಜಿ ವರದಿಯಲ್ಲಿ ಹೇಳಿದ್ದಾರೆ. ಇಡೀ ದೇಶಕ್ಕೆ ಕಾಂಗ್ರೆಸ್ ಸರ್ಕಾರ ಕೆಟ್ಟ ಪರಂಪರೆಯನ್ನು ಹಾಕಿಕೊಟ್ಟಿದೆ ಎಂದು ಅವರು ಆರೋಪಿಸಿದರು. ಅಭಿವೃದ್ಧಿ ಇಲ್ಲ, ನಿರ್ಮಾಣ ಕಾರ್ಯಗಳು ಇಲ್ಲ. ನೀರಾವರಿ ಯೋಜನೆಗಳು ನೆನೆಗುದಿಗೆ ಬಿದ್ದಿವೆ. ರಾಜ್ಯವನ್ನು ಮುಂದಕ್ಕೆ ಕೊಂಡೊಯ್ಯಬಲ್ಲ ದೂರದೃಷ್ಟಿ ಯೋಜನೆಗಳ ಜಾರಿ ಆಗುತ್ತಿಲ್ಲ. ಕೇವಲ ಜನರ ಮೇಲೆ ತೆರಿಗೆ ಮತ್ತು ಬೆಲೆ…












