Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ : ಆ.27 ರಂದು ಗಣೇಶ ಹಬ್ಬದ ಪ್ರಯುಕ್ತ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಆ.27 ರಂದು ಬಂದ್ ಮಾಡಿ ಸಹಕರಿಸಬೇಕು. ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆ ತಿಳಿಸಿದ್ದಾರೆ.
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಸೆ. 08 ರಿಂದ 13 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಉಚಿತ ಸಿಸಿ ಟಿವಿ ಅಳವಡಿಕೆ ಮತ್ತು ಸರ್ವೀಸಿಂಗ್ ತರಬೇತಿ ಶಿಬಿರವನ್ನು ಏರ್ಪಡಿಸಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 45 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದ್ದು, ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳಿಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು. ಆಸಕ್ತಿಯುಳ್ಳ ಅಭ್ಯರ್ಥಿಗಳು ಸೆ. 08 ರ ಸೋಮವಾರ ಬೆಳಗ್ಗೆ 9.00 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ…
ಶಿವಮೊಗ್ಗ : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಸೆ. 01 ರಿಂದ 30 ರವರೆಗೆ 1 ತಿಂಗಳು ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದ ಬೇಕರಿ ಘಟಕದಲ್ಲಿ ವಿವಿಧ ಬೇಕರಿ ಉತ್ಪನ್ನಗಳಾದ ಬೆಣ್ಣೆ ಬಿಸ್ಕತ್ತು, ಕೋಕೋನಟ್ ಕುಕಿಸ್, ಕೋಕೊನಟ್ ಬಿಸ್ಕತ್ತು, ಮಸಾಲ ಬಿಸ್ಕತ್ತು, ಕೋಕೊನಟ್ ಕ್ಯಾಸಲ್ಸ, ಫ್ರುಟ್ ಕೇಕ್, ಸ್ಪಾಂಜ್ಕೇಕ್, ಜೆಲ್ಕೇಕ್, ಬಟರ್ ಐಸಿಂಗ್, ಮಿಲ್ಕ್ ಬ್ರೆಡ್, ಪಪ್ಪೇಸ್ಟ್ರೀ, ದಿಲ್ ಪಸಂದ್, ಬಾಂಬೆ ಕಾರ ಹಾಗೂ ಇತರೆ ಬೇಕರಿ ಉತ್ಪನ್ನಗಳ ತಯಾರಿಕೆಯ ಬಗ್ಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಆಯೋಜಿಸಿದೆ. ಆಕಸ್ತರು ತರಬೇತಿ ಶುಲ್ಕ ರೂ. 4500/-ಗಳನ್ನು ಪಾವತಿಸಿ, ಆ.30 ರೊಳಗಾಗಿ ದೂರವಾಣಿ ಮೂಲಕ ಅಥವಾ ಖುದ್ದಾಗಿ ಕೃಷಿ ಮಹಾವಿದ್ಯಾಲಯವನ್ನು ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಕೃಷಿ ಮತ್ತು ತೋಟಗಾರಿಕೆ ಮಹಾವಿದ್ಯಾಲಯದ ಪ್ರೋಫೆಸರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ನೋಂದಾವಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಡಾ. ಜಯಶ್ರೀ ಎಸ್. -9449187763 ಮತ್ತು ಜಯಶಂಕರ-9686555897 ಇವರುಗಳನ್ನು ಸಂಪರ್ಕಿಸುವುದು.
ಮಂಡ್ಯ: ಕುಟುಂಬದಲ್ಲಿನ ಆಸ್ತಿ ಕಲಹ ಸವತಿ ಮಗಳ ಮೇಲೆ ಮಲತಾಯಿ ಅಟ್ಯಾಕ್ ಮಾಡಿರುವಂತ ಘಟನೆ ಮಂಡ್ಯ ಮದ್ದೂರಲ್ಲಿ ನಡೆದಿದೆ. ಇದೀಗ ಸವತಿ ಮಗಳ ಮೇಲೆ ಮಲತಾಯಿ ಕೆಸರು ಗದ್ದೆಯಲ್ಲೇ ದಾಳಿ ನಡೆಸಿರುವಂತ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಡಿ. ಮಲ್ಲಿಗೆರೆ ಗ್ರಾಮದಲ್ಲಿ ಸವತಿ ಮಗಳನ್ನು ಜಮೀನನಲ್ಲಿ ಕೆಡವಿ ಎದೆ ಮೇಲೆ ಕುಳಿತು ಹಲ್ಲೆ ನಡೆಸಿ ಮಲತಾಯಿ ಬೆದರಿಕೆ ಹಾಕಿರುವಂತ ಘಟನೆ ನಡೆದಿದೆ. ಆಸ್ತಿ ಕಲಹಕ್ಕಾಗಿ ಮಲ ಮಗಳ ಮೇಲೆ ಮಲತಾಯಿ ಭಾಗ್ಯ ದೌರ್ಜನ್ಯ, ದಬ್ಬಾಳಿಕೆ ನೆಡೆಸಿದ್ದಾರೆ. ಜಮೀನಿನ ಜಾಗದಲ್ಲಿ ವಿಚಾರದಲ್ಲಿ ಮಲಮಗಳ ರೋಜಾ ಮೇಲೆ ಜೊತೆ ಕದನಕ್ಕಿಳಿದ ಮಲತಾಯಿ. ಮೊದಲನೆ ಹೆಂಡತಿ ಮಗಳಾದ ರೋಜಾಳನ್ನು ಕೆಸರಿನ ಜಮೀನಲ್ಲಿ ಕೆಳಕ್ಕೆ ಕೆಡಿವಿ ಮಲತಾಯಿ ಭಾಗ್ಯ ಹಲ್ಲೆ ಮಾಡಿದ್ದಾರೆ. ಹಲ್ಲೆಯ ವೇಳೆ ಮಗಳು ಕಿರುಚಾಡಿದರು ಮಲತಾಯಿಯ ಮನಸ್ಸು ಮಾತ್ರ ಕರಗಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಜಡೆ ಜಗಳದ ವೀಡಿಯೋ ವೈರಲ್ ಆಗಿದೆ. ಈ ಸಂಬಂಧ ಹಲ್ಲೆಗೊಳದಾ ಮಗಳಿಂದ ಮಲತಾಯಿ ವಿರುದ್ದ…
ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಹರು ಕಾಷನ್ ಡೆಪಾಸಿಟ್ ಪಾವತಿ ಮತ್ತು ಆಯ್ಕೆ/ಇಚ್ಛೆಗಳನ್ನು ಬದಲಿಸಿಕೊಳ್ಳಲು/ ತೆಗೆದುಹಾಕಲು ಆಗಸ್ಟ್ 26ರಂದು ಮಧ್ಯಾಹ್ನ 1ಗಂಟೆವರೆಗೆ ಸಮಯ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಮೊದಲ ಸುತ್ತಿನಲ್ಲಿ ಹಂಚಿಕೆಯಾದ ಸೀಟುಗಳನ್ನು ರದ್ದುಪಡಿಸಿಕೊಳ್ಳಲು ಕೂಡ ಆಗಸ್ಟ್ 26ರಂದು ಬೆಳಿಗ್ಗೆ 11 ಗಂಟೆವರೆಗೆ ಅವಕಾಶ ನೀಡಲಾಗಿದೆ. ಎರಡನೇ ಸುತ್ತಿನ ಅಣಕು/ ತಾತ್ಕಾಲಿಕ ಸೀಟು ಹಂಚಿಕೆಯ ಫಲಿತಾಂಶವನ್ನು ಆಗಸ್ಟ್ 29ರಂದು ಮಧ್ಯಾಹ್ನ 1ಗಂಟೆ ನಂತರ ಪ್ರಕಟಿಸಲಾಗುತ್ತದೆ. ಅಂತಿಮ ಫಲಿತಾಂಶದ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಎಂಜಿನಿಯರಿಂಗ್, ಆರ್ಕಿಟೆಕ್ಚರ್, ಕೃಷಿ ವಿಜ್ಞಾನ, ವೆಡರಿನರಿ, ಫಾರ್ಮಸಿ, ಬಿಎಸ್ಸಿ ನರ್ಸಿಂಗ್, ಯೋಗಾ- ನ್ಯಾಚುರೋಪತಿ, ಬಿಪಿಟಿ, ಬಿಪಿಒ, ಅಲೈಡ್ ಹೆಲ್ತ್ ಸೈನ್ಸ್ ಇತ್ಯಾದಿ ಯುಜಿಸಿಇಟಿ ಕೋರ್ಸ್ ಗಳಿಗೆ ಎರಡನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶದ ನಂತರ ಅಭ್ಯರ್ಥಿಗಳು ಛಾಯ್ಸ್- 1 ಅಥವಾ…
ಹೊನ್ನಾವರದಿಂದ ಕೇವಲ 15 ಕಿಲೋ ಮೀಟರ್ ಹಾಗೂ ಮುರ್ಡೇಶ್ವರದಿಂದ 23 ಕಿಲೋ ಮೀಟರ್ ದೂರದಲ್ಲಿರುವ ಈ ಪವಿತ್ರ ಪುಣ್ಯಧಾಮಕ್ಕೆ ಇಡಗುಂಜಿ ಎಂದು ಹೆಸರು ಹೇಗೆ ಬಂತು ಗೊತ್ತೆ. ಇಡಾ ಎಂದರೆ ಎಡ, ಕುಂಜು ಎಂದರೆ ಗಿಡಗಂಟೆಗಳಿಂದ ತುಂಬಿರುವ ಅರಣ್ಯಪ್ರದೇಶ. ಶರಾವತಿಯ ಎಡ ಭಾಗದಲ್ಲಿರುವ ಅರಣ್ಯದ ರಮಣೀಯತೆಗೆ ಮನಸೋತು ನಾರದ ಮರ್ಷಿಗಳು ಈ ಹೆಸರು ಇಟ್ಟರೆಂದು ಸ್ಥಳ ಪುರಾಣ ಹೇಳುತ್ತದೆ. ದೈವಜ್ಞ ಪಂಡಿತ್ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ ತಾಂತ್ರಿಕ ತಪ್ಪದೆ ಕರೆ ಮಾಡಿ 9686268564 ಇತಿಹ್ಯ: ಪ್ರಾಚೀನ ಕಾಲದಲ್ಲಿ ಇಲ್ಲಿ ವಾಲಖಿಲ್ಯಾದಿ ಋಷಿಗಳೂ…
ರಾಜಸ್ಥಾನ: ಶಾಲಾ ಶಿಕ್ಷಕಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ತನ್ನ ಮೂರು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ರಾಜಸ್ಥಾನದ ಜೋಧ್ ಪುರದಲ್ಲಿ ನಡೆದಿದೆ. ರಾಜಸ್ಥಾನದ ಜೋಧ್ ಪುರದಲ್ಲಿ ವರದಕ್ಷಿಣೆ ಕಿರುಕುಳದಿಂದಾಗಿ ಶಾಲಾ ಶಿಕ್ಷಕಿ ಸಂಜು ಬಿಷ್ಣೋಯಿ ಹಾಗೂ 3 ವರ್ಷದ ಮಗಳು ಯಶಸ್ವಿಯೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದದಾರೆ. ಆತ್ಮಹತ್ಯೆಗೂ ಮುನ್ನ ಶಾಲಾ ಶಿಕ್ಷಕಿ ಸಂಜು ಬಿಷ್ಣೋಯಿ ಬರೆದಿರುವಂತ ಡೆತ್ ನೋಟ್ ಮನೆಯಲ್ಲಿ ಪತ್ತೆಯಾಗಿದೆ. ಅದರಲ್ಲಿ ವರದಕ್ಷಿಣೆಗಾಗಿ ಪತಿ, ಅತ್ತೆ-ಮಾವ, ಅತ್ತಿಗೆ ಕಿರುಕುಳ ನೀಡುತ್ತಿದ್ದರು ಎಂಬುದಾಗಿ ಉಲ್ಲೇಖಿಸಿದ್ದಾರೆ. ಕಳೆದ ಶುಕ್ರವಾರದಂದು ಶಾಲೆಯಿಂದ ಮನೆಗೆ ಬಂದಿದ್ದಂತ ಶಿಕ್ಷಕಿ ಸಂಜು, ತಾನು, ಮಗಳ ಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ಅವರನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. https://kannadanewsnow.com/kannada/names-finalized-for-the-nomination-of-four-members-to-the-karnataka-legislative-council/ https://kannadanewsnow.com/kannada/the-auspicious-time-for-the-renowned-marikamba-jatra-mahotsav-has-been-fixed/
ಬೆಂಗಳೂರು: ಅಂತೂ ಇಂತು ವಿಧಾನ ಪರಿಷತ್ತಿಗೆ ನಾಲ್ವರ ಹೆಸರನ್ನು ಅಂತಿಮಗೊಳಿಸಲಾಗಿದೆ. ರಮೇಶ್ ಬಾಬು, ಆರತಿ ಕೃಷ್ಣ, ಶಿವಕುಮಾರ್ ಹಾಗೂ ಜಕ್ಕಪ್ಪ ಹೆಸರನ್ನು ಫೈನಲ್ ಮಾಡಲಾಗಿದೆ. ಕಾಂಗ್ರೆಸ್ ವಕ್ತಾರ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ಎನ್ಆರ್ ಐ ಸೆಲ್ ಉಪಾಧ್ಯಕ್ಷೆಯಾಗಿರುವಂತ ಡಾ.ಆರತಿ ಕೃಷ್ಣ, ಮೈಸೂರು ಮೂಲದ ಪತ್ರಕರ್ತರಾಗಿರುವಂತ ಶಿವಕುಮಾರ್ ಹಾಗೂ ದಲಿತ ಮುಖಂಡ ಜಕ್ಕಪ್ಪ ಸೇರಿ ನಾಲ್ವರ ಹೆಸರನ್ನು ಅಂತಿಮಗೊಳಿಸಲಾಗಿದೆ. https://kannadanewsnow.com/kannada/how-is-pop-harmful-to-the-environment-here-is-the-information/ https://kannadanewsnow.com/kannada/the-auspicious-time-for-the-renowned-marikamba-jatra-mahotsav-has-been-fixed/
ಬೆಂಗಳೂರು: ನಾಡಿನೆಲ್ಲೆಡೆ ಗಣೇಶ ಹಬ್ಬದ ತಯಾರಿ ಕಳೆಗಟ್ಟಿದೆ. ಈ ವೇಳೆಯಲ್ಲೇ ಪಿಒಪಿ ಗಣೇಶ ಮೂರ್ತಿ ಬದಲಾಗಿ ಮಣ್ಣಿನ ಗಣಪತಿಯನ್ನು ಪ್ರತಿಸ್ಠಾಪಿಸುವಂತೆ ಸರ್ಕಾರ ಸೂಚಿಸಿದೆ. ಒಂದು ವೇಳೆ ಪಿಒಪಿ ಗಣಪತಿ ಕೂರಿಸಿದರೇ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿಯೂ ಸರ್ಕಾರ ಎಚ್ಚರಿಸಿದೆ. ಹಾಗಾದ್ರೆ ಪಿಒಪಿ ಗಣೇಶ ಮೂರ್ತಿ ಪರಿಸರಕ್ಕೆ ಹಾನಿಕಾರಕ ಹೇಗೆ ಎನ್ನುವ ಬಗ್ಗೆ ಮುಂದೆ ಓದಿ. ಈ ಬಗ್ಗೆ ರಾಜ್ಯ ಸರ್ಕಾರವೇ ಮಾಹಿತಿ ನೀಡಿದ್ದು, ಪಿಒಪಿ ಗಣೇಶ ಮೂರ್ತಿಗಳ ಬದಲು ಮಣ್ಣಿನ ಗಣಪನನ್ನು ಪ್ರತಿಷ್ಠಾಪಿಸಿ ಪೂಜಿಸುವಂತೆ ಮನವಿ ಮಾಡಿದೆ. ಪಿಒಪಿ ಗಣಪತಿ ತಯಾರಿಸದಂತೆ, ಕೂರಿಸದಂತೆ ಖಡಕ್ ಸೂಚನೆ ನೀಡಿದೆ. ಪಿಒಪಿ ಪರಿಸರಕ್ಕೆ ಹಾನಿಕಾರಕ ಹೇಗೆ.? ನೀರಿನಲ್ಲಿ ನಿಧಾನವಾಗಿ ಕರಗುತ್ತದೆ. ಪಿಒಪಿ ನೀರಿನಲ್ಲಿ ನಿಧಾನವಾಗಿ ಕರಗುವುದರಿಂದ ಆಮ್ಲಜನಕ ಪ್ರಮಾಣ ಇಳಿಕೆ ಲವಣಾಂಶದಿಂದ ನೀರಿನಲ್ಲಿ ಶಾಶ್ವತ ಗಡಸುತನ ಉಂಟಾಗಲಿದೆ. ರಾಸಾಯನಿಕಯುಕ್ತ ಬಣ್ಣಗಳಿಂದ ನೀರಿನ ಮೂಲಗಳು ಕಲುಷಿತಗೊಳ್ಳಲಿದೆ ಜಲಚರಗಳ ಜೀವಕ್ಕೆ ಕಂಟಕ https://twitter.com/KarnatakaVarthe/status/1959927702313734569
ಬೆಂಗಳೂರು: ನಗರದಲ್ಲಿ ಗಣೇಶ ಹಬ್ಬದ ತಯಾರಿ ಚೋರಾಗಿಯೇ ನಡೆದಿದೆ. ಇದೇ ವೇಳೆಯಲ್ಲಿ ಪೊಲೀಸರು ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದ್ದಾರೆ. ಬೆಂಗಳೂರಿಗರಿಗೆ ಎಚ್ಚರಿಕೆ ಎನ್ನುವಂತೆ ಗಣೇಶೋತ್ಸವಕ್ಕೆ ಬಲವಂತವಾಗಿ ಚಂದಾ ವಸೂಲಿ ಮಾಡಿದ್ರೆ ಅಂತವರ ವಿರುದ್ಧ ಪೊಲೀಸರು ಕಾನೂನು ಕ್ರಮ ಕೈಗೊಳ್ಳಲಿದ್ದಾರೆ. ಇಂದು ಬೆಂಗಳೂರಲ್ಲಿ ಗಣೇಶ ವಿಸರ್ಜನೆ ವೇಳೆಯಲ್ಲಿ ಅಹಿತಕರ ಘಟನೆ ಸಂಭವಿಸದಂತೆ ಕ್ರಮ ವಹಿಸಲು ಡಿಸಿಪಿ, ಎಸಿಪಿಗಳ ಜೊತೆಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಸಭೆ ನಡೆಸಿದರು. ಈ ಬಳಿಕ ಮಾತನಾಡಿದಂತ ಕಮೀಷನರ್ ಸೀಮಂತ್ ಕುಮಾರ್ ಸಿಂಗ್ ಅವರು, ಎಲ್ಲಾ ವಿಭಾಗದ ಡಿಸಿಪಿಗಳು, ಎಸಿಪಿಗಳ ಜೊತೆಗೆ ಸಭೆ ಮಾಡಿದ್ದೇನೆ. ನಿಯಮ ಉಲ್ಲಂಘನೆಯಾದರೇ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದರು. ಬಲವಂತವಾಗಿ ಯಾರೂ ಸಹ ಚಂದಾ ವಸೂಲಿ ಮಾಡುವಂತಿಲ್ಲ. ಬಲವಂತವಾಗಿ ವಸೂಲಿ ಮಾಡಿದ್ರೆ ಪ್ರಕರಣ ದಾಖಲಿಸಲಾಗುತ್ತದೆ. ಇದುವರೆಗೂ ಆ ರೀತಿಯ ಯಾವುದೇ ದೂರುಗಳು ಬಂದಿಲ್ಲ. ಭದ್ರತೆ ವಿಚಾರದಲ್ಲಿ ಎಲ್ಲಾ ಸಿಬ್ಬಂದಿಗೂ ಕ್ರಮಕ್ಕೆ ಸೂಚಿಸಲಾಗಿದೆ ಎಂಬುದಾಗಿ ಬೆಂಗಳೂರು ಕಮಿಷನರ್…













