Author: kannadanewsnow09

ಬೆಳ್ತಂಗಡಿ: ತಾಲೂಕಿನ ಬಿಜೆಪಿ ಶಾಸಕ ಹರೀಶ್ ಪೂಂಜ ಅವರನ್ನು ಬಂಧಿಸಿದ್ರೆ ನಾಳೆ ದಕ್ಷಿಣ ಕನ್ನಡ ಜಿಲ್ಲೆಯನ್ನೇ ಬಂದ್ ಮಾಡೋದಾಗಿ ಸಂಸದ ನಳೀನ್ ಕುಮಾರ್ ಕಟೀಲ್ ಎಚ್ಚರಿಕೆ ನೀಡಿದ್ದಾರೆ. ಇಂದು ಅವರ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನ್ಯಾಯ ಕೇಳಿ ಬಿಜೆಪಿ ಶಾಸಕ ಹರೀಶ್ ಪೂಂಜ ಪೊಲೀಸ್ ಠಾಣೆಗೆ ತೆರಳಿದ್ದಾರೆ. ಅಂತವರ ಮೇಲೆ ರಾಜ್ಯ ಕಾಂಗ್ರೆಸ್ ಸರ್ಕಾರ ಹಲವು ಪ್ರಕರಣಗಳನ್ನು ದಾಖಲಿಸಿದೆ ಎಂಬುದಾಗಿ ಕಿಡಿಕಾರಿದರು. ನಾವು ಯಾವುದೇ ಕಾರಣಕ್ಕೂ ಶಾಸಕರನ್ನ ಬಿಟ್ಟುಕೊಡೋ ಮಾತೇ ಇಲ್ಲ. ನಮ್ಮ ಶಾಸಕರನ್ನು ನಾವು ಬಿಟ್ಟುಕೊಡೋ ಪ್ರಶ್ನೆಯೂ ಇಲ್ಲ. ಒಂದು ವೇಳೆ ಶಾಸಕ ಹರೀಶ್ ಪೂಂಜ ಬಂಧಿಸಿದ್ದೇ ಆದ್ರೇ, ನಾಳೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಬಂದ್ ಮಾಡಿ ಖಂಡಿಸೋದಾಗಿ ಎಚ್ಚರಿಕೆ ನೀಡಿದರು. https://kannadanewsnow.com/kannada/jds-files-complaint-against-rahul-gandhi-for-mass-rape-of-400-women-by-prajwal-revanna/ https://kannadanewsnow.com/kannada/army-doesnt-want-agniveer-we-will-throw-it-in-dustbin-rahul-gandhi/

Read More

ಅಹ್ಮದಾಬಾದ್: ಬಾಲಿವುಡ್ ನಟ ಶಾರುಖ್ ಖಾನ್ ಅವರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಈ ಹಿನ್ನಲೆಯಲ್ಲಿ ಅಹಮದಬಾದ್ ನ ಕೆಡಿ ಆಸ್ಪತ್ರೆಗೆ ಶಾರುಖ್ ಖಾನ್ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಬಾಲಿವುಡ್ ನಟ ಶಾರುಖ್ ಖಾನ್ ಅವರನ್ನು ಅಹಮದಾಬಾದ್ನ ಕೆಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಖದ ಆಘಾತದಿಂದಾಗಿ ಅವರು ಅನಾರೋಗ್ಯಕ್ಕೆ ಒಳಗಾದರು. ಐಪಿಎಲ್ ನ ಮೊದಲ ಪ್ಲೇ ಆಫ್ ಪಂದ್ಯವನ್ನು ವೀಕ್ಷಿಸಲು ಕಿಂಗ್ ಖಾನ್ ನಿನ್ನೆ ಅಹಮದಾಬಾದ್ ಗೆ ಬಂದಿದ್ದರು. https://twitter.com/AdityaRajKaul/status/1793265704818360569 https://kannadanewsnow.com/kannada/farmer-activist-jayashree-guran-passes-away/ https://kannadanewsnow.com/kannada/jds-files-complaint-against-rahul-gandhi-for-mass-rape-of-400-women-by-prajwal-revanna/

Read More

ಖಾನಾಪುರ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಂತ ರೈತ ಹೋರಾಟಗಾರ್ತಿ ಎಂದೇ ಗುರ್ತಿಸಿಕೊಂಡಿದ್ದ ಜಯಶ್ರೀ ಗುರನ್ನವರ ಅವರು, ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಈ ಮೂಲಕ ರೈತ ಹೋರಾಟಗಾರ್ತಿ ‘ಜಯಶ್ರೀ ಗುರನ್ನವರ’ ಇನ್ನಿಲ್ಲವಾಗಿದ್ದಾರೆ. ಖಾನಾಪುರ ತಾಲೂಕಿನ ತೋಲಗಿ ಗ್ರಾಮದ ರೈತ ಹೋರಾಟಗಾರ್ತಿ, ರೈತರ, ದೀನ ದಲಿತರ ಹಾಗೂ ಬಡವರ ಪರವಾಗಿ ನಿರಂತರ ಹೋರಾಟ ಮಾಡಿರುವ ಜಯಶ್ರೀ ಗುರನ್ನವರ ಅವರು, ಅನಾರೋಗ್ಯಕ್ಕೆ ತುತ್ತಾಗಿದ್ದರು. ಬೆಳಗಾವಿಯ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯದ ಸ್ಥಿತಿ ತುಂಬಾ ಚಿಂತಾಜನಕವಾಗಿತ್ತು. ಹೀಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಅವರು, ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಅಂದಹಾಗೇ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಮ್ಮ ಆಪ್ತ ಸಹಾಯಕನ ಮುಖಾಂತರ ರೈತ ಹೋರಾಯಗಾರ್ತಿ ಜಯಶ್ರೀ ಗುರನ್ನವರ್ ಅವರಿಗೆ ಆರ್ಥಿಕವಾಗಿ ಸಹಾಯ ಮಾಡಿ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದರು. https://kannadanewsnow.com/kannada/jds-files-complaint-against-rahul-gandhi-for-mass-rape-of-400-women-by-prajwal-revanna/ https://kannadanewsnow.com/kannada/army-doesnt-want-agniveer-we-will-throw-it-in-dustbin-rahul-gandhi/

Read More

ಬೆಂಗಳೂರು: ಕಾವೇರಿ ನದಿ ನೀರಿಗೆ ಸಂಬಂಧಿಸಿ ರಾಜ್ಯ ಸರಕಾರವು ತನ್ನ ಸಮರ್ಥ ನಿಲುವನ್ನು ಕೋರ್ಟ್ ಮುಂದೆ ತಿಳಿಸಬೇಕಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ದುಡ್ಡು ಹೊಡೆಯೋಕೆ, ಲೂಟಿ ಮಾಡಲು ಈ ಸರಕಾರ ಸಮಯ ಕಳೆಯುತ್ತಿದೆ. ಕಾವೇರಿ ನೀರನ್ನು ಉಳಿಸಿಕೊಳ್ಳುವ ಪ್ರಯತ್ನವನ್ನು ಕರ್ನಾಟಕದ ಕಾಂಗ್ರೆಸ್ ಸರಕಾರ ಮಾಡಿಲ್ಲ ಎಂದು ಟೀಕಿಸಿದರು. ಕೋರ್ಟ್, ಕಾವೇರಿ ಟ್ರಿಬ್ಯೂನಲ್‍ನಲ್ಲಿ ಪದೇಪದೇ ಹಿನ್ನಡೆ ಆಗುತ್ತಿದ್ದರೂ ಕೂಡ ಮುಖ್ಯಮಂತ್ರಿಗಳು ಸಭೆ ಕರೆದು ನಮ್ಮ ನಿಲುವನ್ನು ಕೋರ್ಟ್ ಮತ್ತು ಟ್ರಿಬ್ಯೂನಲ್‍ನಲ್ಲಿ ಮಂಡಿಸಲು ವ್ಯವಸ್ಥೆ ಮಾಡಿಲ್ಲ ಎಂದು ಆಕ್ಷೇಪಿಸಿದರು. ಕಾವೇರಿ ಜಲಾನಯನ ಪ್ರದೇಶದ ರೈತರು ನಿರಂತರ ಹೋರಾಟ ಮಾಡಿದರೂ ಪ್ರಯೋಜನವಾಗಿಲ್ಲ. ರೈತರನ್ನು ಸರಕಾರ ಕಡೆಗಣಿಸುತ್ತಿದೆ ಎಂದು ತಿಳಿಸಿದ ಅವರು, ಈ ಬಗ್ಗೆ ಪ್ರಶ್ನಿಸಿದರೆ ದುರಹಂಕಾರದ ಮಾತನಾಡುತ್ತಾರೆ ಎಂದು ದೂರಿದರು. ಶಾಸಕ ಹರೀಶ್ ಪೂಂಜ ಅವರ ಬಂಧನ ಪ್ರಯತ್ನ ಕುರಿತ ಪ್ರಶ್ನೆಗೆ ಉತ್ತರಿಸಿದ…

Read More

ಬೆಂಗಳೂರು: ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಕೇಸಲ್ಲಿ ಜೈಲು ಸೇರಿ, ಮಾಜಿ ಸಚಿವ ಹೆಚ್.ಡಿ ರೇವಣ್ಣ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಈ ಬೆನ್ನಲ್ಲೇ ಅವರ ಪತ್ನಿ ಭವಾನಿ ರೇವಣ್ಣ ಕಾರು ಚಾಲಕನಿಗೆ ಎಸ್ಐಟಿ ಅಧಿಕಾರಿಗಳು ಸಮನ್ಸ್ ಜಾರಿಗೊಳಿಸಿದ್ದಾರೆ. ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಕೇಸಿಗೆ ಸಂಬಂಧಿಸಿದಂತೆ ಎಸ್ಐಟಿ ಪೊಲೀಸರಿಂದ ಈಗಾಗಲೇ ಎರಡು ಬಾರಿ ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣ ಅವರ ಕಾರು ಚಾಲಕ ಅಜಿತ್ ಗೆ ಸಮನ್ಸ್ ನೀಡಲಾಗಿತ್ತು. ಹೀಗಿದ್ದರೂ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ ಎನ್ನಲಾಗುತ್ತಿದೆ. ಈ ಹಿನ್ನಲೆಯಲ್ಲಿ ಹೊಳೆನರಸೀಪುರದ ಚಾಲಕ ಅಜಿತ್ ಅವರಿಗೆ ಎಸ್ಐಟಿ ಪೊಲೀಸರಿಂದ ಸಮನ್ಸ್ ಜಾರಿಗೊಳಿಸಲಾಗಿದೆ. ಜೊತೆಗೆ ಸಂತ್ರಸ್ತೆ ಕಿಡ್ನ್ಯಾಪ್ ಕೇಸ್ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನಲ್ಲಿ ಎಸ್ಐಟಿ ಪೊಲೀಸರು ತಿಳಿಸಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/cm-siddaramaiah-to-visit-k-salundi-village-tomorrow-in-connection-with-death-of-one-person-after-consuming-contaminated-water/ https://kannadanewsnow.com/kannada/jds-files-complaint-against-rahul-gandhi-for-mass-rape-of-400-women-by-prajwal-revanna/

Read More

ಬೆಂಗಳೂರು: ಕಲುಷಿತ ನೀರು ಸೇವಿಸಿ ಓರ್ವ ಸಾವನ್ನಪ್ಪಿ, 35ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವಂತ ತಮ್ಮ ಸ್ವಕ್ಷೇತ್ರ ಮೈಸೂರಿನ ಕೆ.ಸಾಲುಂಡಿಗೆ ಸಿಎಂ ಸಿದ್ಧರಾಮಯ್ಯ ನಾಳೆ ಭೇಟಿ ನೀಡಲಿದ್ದಾರೆ. ಮೈಸೂರಿನ ಕೆ.ಸಾಲುಂಡಿ ಗ್ರಾಮಕ್ಕೆ ಭೇಟಿ ನೀಡಲಿರುವಂತ ಸಿಎಂ ಸಿದ್ಧರಾಮಯ್ಯ, ಕಲುಷಿತ ನೀರು ಸೇವಿಸಿ ಸಾವನ್ನಪ್ಪಿದಂತ ಮೃತರ ಕುಟುಂಬಸ್ಥರಿಗೆ ಸಾಂತ್ವಾನ ಹೇಳಲಿದ್ದಾರೆ. ಇನ್ನೂ ಮೈಸೂರಿನ ಕೆ.ಸಾಲುಂಡಿ ಗ್ರಾಮದಲ್ಲಿ ಕುಡಿಯುವ ನೀರು ಕಲುಷಿತಗೊಂಡಿದ್ದು ಹೇಗೆ? ಘಟನೆಯ ನಂತ್ರ ಯಾವೆಲ್ಲ ಕ್ರಮವನ್ನು ವಹಿಸಲಾಗಿದೆ ಎನ್ನುವ ಮಾಹಿತಿಯನ್ನು ಅಧಿಕಾರಿಗಳಿಂದ ಸಿಎಂ ಸಿದ್ಧರಾಮಯ್ಯ ಪಡೆದುಕೊಳ್ಳಲಿದ್ದಾರೆ. ಇದೇ ಸಂದರ್ಭದಲ್ಲಿ ಇಂದು ಸಿಲಿಂಡರ್ ನಿಂದ ಅನಿಲ ಸೋರಿಕೆಯಾಗಿ ನಾಲ್ವರು ದುರ್ಮಣಕ್ಕೆ ಈಡಾದಂತ ಮೈಸೂರಿನ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವಾನ ಹೇಳಲಿದ್ದಾರೆ. https://kannadanewsnow.com/kannada/is-murders-suicides-congress-govts-achievements/ https://kannadanewsnow.com/kannada/jds-files-complaint-against-rahul-gandhi-for-mass-rape-of-400-women-by-prajwal-revanna/

Read More

ಬೆಂಗಳೂರು: ಹತ್ಯೆ ಮತ್ತು ಆತ್ಮಹತ್ಯೆ ಕಾಂಗ್ರೆಸ್ ಸರಕಾರದ ಸಾಧನೆಯೇ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಮಾಜಿ ಸಚಿವ ಸಿ.ಟಿ.ರವಿ ಅವರು ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರವು ಒಂದು ವರ್ಷವನ್ನು ಪೂರ್ಣಗೊಳಿಸಿ ಸಂಭ್ರಮಾಚರಣೆಯನ್ನೂ ಮಾಡಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳಿಗೆ ಹತ್ತಾರು ಪ್ರಶ್ನೆಗಳನ್ನು ಕೇಳಲು ಬಯಸುತ್ತೇನೆ ಎಂದು ನುಡಿದರು. ಈ ಸರಕಾರ ಅಧಿಕಾರಕ್ಕೆ ಬಂದ ಆರಂಭದಲ್ಲಿ ಜೈನ ಮುನಿಗಳ ಹತ್ಯೆಯಿಂದ ಆರಂಭಗೊಂಡು ತಿಂಗಳಿಗೆ ಶತಕಗಳ ಗಡಿಯನ್ನು ಹತ್ಯೆ- ಆತ್ಮಹತ್ಯೆಯಲ್ಲಿ ದಾಟಿದೆ ಎಂದು ಆಕ್ಷೇಪಿಸಿದರು. ಸಾವಿರಕ್ಕೂ ಹೆಚ್ಚು ಹತ್ಯೆ, ಸಾವಿರಕ್ಕೂ ಹೆಚ್ಚು ಆತ್ಮಹತ್ಯೆ ಸರಕಾರದ ಸಾಧನೆಯೇ ಎಂದು ಅವರು ಕೇಳಿದರು. ನ್ಯಾಷನಲ್ ಕ್ರೈಂ ಬ್ಯೂರೋ ರೆಕಾಡ್ರ್ಸ್ ಪ್ರಕಾರ ಕಳೆದ 4 ತಿಂಗಳಲ್ಲಿ ಕರ್ನಾಟಕದಲ್ಲಿ 430ಕ್ಕೂ ಹೆಚ್ಚು ಕೊಲೆಗಳು ನಡೆದಿವೆ ಎಂದು ವರದಿ ಹೇಳುತ್ತದೆ. ಕಳೆದ 10 ತಿಂಗಳಲ್ಲಿ 700ಕ್ಕೂ ಹೆಚ್ಚು ರೈತರ ಆತ್ಮಹತ್ಯೆ ಆಗಿದೆ ಎಂದು ಸರಕಾರದ…

Read More

ಬೆಂಗಳೂರು: ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜ ಅವರನ್ನು ಬಂಧಿಸಿದ್ದೇ ಆದಲ್ಲಿ ಮುಂದಾಗೋ ಅನಾಹುತಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ಹೊಣೆ ಎಂಬುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಗುಡುಗಿದ್ದಾರೆ. ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು,  ದಕ್ಷಿಣ ಕನ್ನಡದಲ್ಲಿ ಕಾನೂನು- ಸುವ್ಯವಸ್ಥೆ ಸುಗಮವಾಗಿ ಹೋಗುತ್ತಿರುವ ಸಂದರ್ಭದಲ್ಲಿ ನಮ್ಮ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಮಾಡುವುದನ್ನು ಸಹಿಸಲು ಅಸಾಧ್ಯ ಎಂದು ಅವರು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದರು. ಪೊಲೀಸರು ಕಾನೂನು- ಸುವ್ಯವಸ್ಥೆ ಹದಗೆಡಲು ಕುಮ್ಮಕ್ಕು ನೀಡುತ್ತಿದ್ದಾರೆ. ಶಾಸಕರ ಮೇಲೆ ಕ್ರಮ ಸಲ್ಲದು; ವಿನಾಕಾರಣ ನಮ್ಮ ಕಾರ್ಯಕರ್ತರ ಮೇಲೆ ಎಫ್‍ಐಆರ್ ದಾಖಲಿಸಿದ್ದು, ಅವರನ್ನು ಬಿಡುಗಡೆ ಮಾಡಿ ಎಂದು ಆಗ್ರಹಿಸಿದರು. ಇತ್ತೀಚೆಗೆ ಅಕ್ರಮ ಕ್ವಾರಿ ವಿಚಾರವಾಗಿ ಪೊಲೀಸರು ಎಫ್‍ಐಆರ್ ದಾಖಲಿಸಿದ್ದರು. ಈ ವಿಚಾರವಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರನ್ನು ಬಂಧನ ಮಾಡಲು ಪೊಲೀಸರು ಪ್ರಯತ್ನ ಮಾಡುತ್ತಿರುವುದು ಖಂಡನೀಯ ಎಂದು ತಿಳಿಸಿದರು. ಶಾಸಕರ ಬಂಧನ ಪ್ರಯತ್ನದಿಂದ ಉತ್ತಮ ಸಂದೇಶ ರಾಜ್ಯಕ್ಕೆ ಹೋಗುವುದಿಲ್ಲ ಎಂದು ಅವರು ನುಡಿದರು. ದಕ್ಷಿಣ…

Read More

ನವದೆಹಲಿ: ದೆಹಲಿಯ ನಾರ್ತ್ ಬ್ಲಾಕ್ನಲ್ಲಿರುವ ಗೃಹ ಸಚಿವಾಲಯದ ಕಚೇರಿಗೆ ಬಾಂಬ್ ಬಗ್ಗೆ ಇಮೇಲ್ ಬೆದರಿಕೆ ಬಂದಿದೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ದೆಹಲಿಯ ನಾರ್ತ್ ಬ್ಲಾಕ್ನಲ್ಲಿರುವ ಗೃಹ ಸಚಿವಾಲಯದ (ಎಂಎಚ್ಎ) ಕಚೇರಿಗೆ ಬಾಂಬ್ ಬಗ್ಗೆ ಇಮೇಲ್ ಬೆದರಿಕೆ ಬಂದಿದೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಅಗ್ನಿಶಾಮಕ ಟೆಂಡರ್ ಗಳೊಂದಿಗೆ ಬಾಂಬ್ ನಿಷ್ಕ್ರಿಯ ದಳದ ತಂಡವನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. https://twitter.com/ANI/status/1793244757931806980 https://kannadanewsnow.com/kannada/phone-tapping-not-done-siddaramaiah-on-hdks-allegation/ https://kannadanewsnow.com/kannada/give-top-priority-to-bengalurus-beauty-cm-siddaramaiah-during-city-rounds/

Read More

ಬೆಂಗಳೂರು: ನಾವು ಯಾವುದೇ ಪೋನ್ ಟ್ಯಾಪಿಂಗ್ ಮಾಡಿಲ್ಲ. ಮಾಡೋದು ಇಲ್ಲ. ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆರೋಪ ಎಲ್ಲ ಸುಳ್ಳು. ನಿರಾಧಾರವಾಗಿದೆ ಅಂತ ಸಿಎಂ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ. ಇಂದು ಬೆಂಗಳೂರು ಸಿಟಿ ರೌಂಡ್ಸ್ ನಡೆಸಿದ ಬಳಿಕ, ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕೃಷ್ಣಾದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಲೋಕಸಭೆಯ ನಂತರ ಬಿಬಿಎಂಪಿ ಚುನಾವಣೆ ಬಗ್ಗೆ ಚಿಂತನೆ ಬಿಬಿಎಂಪಿ ಚುನಾವಣೆ ಬಗ್ಗೆ ಲೋಕಸಭೆ ಫಲಿತಾಂಶದ ನಂತರ ಚಿಂತಿಸಲಾಗುವುದು ಎಂದರು. ಸುಳ್ಳು ಹೇಳುತ್ತಾರೆ ಸಿಎಂ , ಡಿಸಿಎಂ ಫೋಟೋ ಶೂಟ್ ಮಾಡಿಸಿಕೊಂಡಿದ್ದಾರೆ ಎಂದು ಬಿಜೆಪಿಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಆರ್. ಅಶೋಕ್ ಕೇವಲ ಸುಳ್ಳು ಹೇಳುತ್ತಾರೆ ಎಂದರು. ಫೋನ್ ಟ್ಯಾಪಿಂಗ್ ಮಾಡಿಲ್ಲ, ಮಾಡುವುದೂ ಇಲ್ಲ ನಮ್ಮ ರಾಜಕೀಯ ಜೀವನದಲ್ಲಿ ಫೋನ್ ಟ್ಯಾಪಿಂಗ್ ಮಾಡಿಲ್ಲ, ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಿದರು.…

Read More