Author: kannadanewsnow09

ರಾಯಚೂರು: ಜೆಡಿಎಸ್ ಶಾಸಕಿ ಕರೆಮ್ಮ ಪುತ್ರಿ ಗೌರಿಯವರ ಕಾರು ಬೈಕ್ ಸವಾರನಿಗೆ ಡಿಕ್ಕಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಮಿಯ್ಯಾಪುರ ಕ್ರಾಸ್ ಬಳಿಯಲ್ಲಿ ಜೆಡಿಎಸ್ ಶಾಸಕ ಕರೆಮ್ಮ ಜಿ ನಾಯಕ್ ಅವರ ಪುತ್ರಿ ಗೌರಿ ಬೈಕ್ ಒಂದಕ್ಕೆ ಕಾರನ್ನು ಡಿಕ್ಕಿ ಹೊಡೆದಿದ್ದಾರೆ. ಶಾಸಕಿ ಪುತ್ರಿ ಕಾರು ಡಿಕ್ಕಿಯಾಗಿ ಆಂಧ್ರಪ್ರದೇಶ ಮೂಲದ ಬೈಕ್ ಸವಾರ ಕೋಮಿಶೆಟ್ಟಿ ಕೃಷ್ಣ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇಂದು ಬೆಳಗ್ಗೆಯಿಂದ ನೀರಿಗಾಗಿ ಪಾದಯಾತ್ರೆಯನ್ನು ಶಾಸಕಿ ಕರೆಮ್ಮ ನಡೆಸುತ್ತಿದ್ದರು. ಅತ್ತ ಪಾದಯಾತ್ರೆ ಶುರುವಾದ ಬಳಿಕ ಶಾಸಕಿ ಕರೆಮ್ಮ ಅವರ ಪುತ್ರಿ ಹೊರಟಿದ್ದರು. ಈ ವೇಳೆಯಲ್ಲಿ ಶಾಸಕಿ ಕರೆಮ್ಮ ಜಿ ನಾಯಕರ ಪುತ್ರಿ ಗೌರಿ ಕಾರು ಅಪಘಾತವಾಗಿದೆ. ಶಾಸಕಿ ಪುತ್ರಿ ಗೌರಿ ಕಾರು ಡಿಕ್ಕಿಯಾದಂತ ಘಟನೆಯ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವೀಡಿಯೋ ಕಂಡಂತ ನೆಟ್ಟಿಗರು ಜೆಡಿಎಸ್ ಶಾಸಕಿ ವಿರುದ್ಧ ಆಕ್ರೋಶವನ್ನು…

Read More

ಬೆಂಗಳೂರು: ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ಡಿಎಲ್) 2024-25ನೇ ಸಾಲಿನಲ್ಲಿ 1,787 ಕೋಟಿ ರೂಪಾಯಿ ದಾಖಲೆ ವಹಿವಾಟು ನಡೆಸಿ, ₹416 ಕೋಟಿ ನಿವ್ವಳ ಲಾಭ ಗಳಿಸಿದೆ. ಇದು ಸಾಲಿಗಿಂತ ₹54 ಕೋಟಿ ಹೆಚ್ವು. ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಮತ್ತು ಕೆಎಸ್ ಡಿಎಲ್ ಅಧ್ಯಕ್ಷರೂ ಆದ ಶಾಸಕ ಅಪ್ಪಾಜಿ ಸಿ.ಎಸ್.ನಾಡಗೌಡ ಅವರು ಜಂಟಿ ಹೇಳಿಕೆಯಲ್ಲಿ ವಿವರಿಸಿದ್ದಾರೆ. ಈ ಬಗ್ಗೆ ಬುಧವಾರ ಮಾಹಿತಿ ನೀಡಿರುವ ಸಚಿವರು, ಕಳೆದ ಹಣಕಾಸು ವರ್ಷದಲ್ಲಿ ಸಂಸ್ಥೆಯು 43,144 ಮೆಟ್ರಿಕ್ ಟನ್ ಸಾಬೂನು ಮತ್ತು ಮಾರ್ಜಕಗಳನ್ನು ಮಾರಾಟ ಮಾಡಿ, ದಾಖಲೆಯ ಲಾಭ ಗಳಿಸಿದೆ. ಲಾಭದಲ್ಲಿ ನಿಯಮಾನುಸಾರ ಶೇ.30ರಷ್ಟನ್ನು, ಅಂದರೆ ₹123 ಕೋಟಿಯನ್ನು ಸರಕಾರಕ್ಕೆ ಹಸ್ತಾಂತರಿಸಲಾಗುವುದು ಎಂದಿದ್ದಾರೆ. ಸಂಸ್ಥೆಯು 2023-24ರಲ್ಲಿ 37,916 ಟನ್ ಉತ್ಪನ್ನ ಮಾರಾಟ ಮಾಡಿ, 1,570 ಕೋಟಿ ರೂಪಾಯಿ ವಹಿವಾಟು ನಡೆಸುವ ಮೂಲಕ 362 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿತ್ತು. ಆ ಪೈಕಿ 108 ಕೋಟಿ…

Read More

ಶಿವಮೊಗ್ಗ: ಜಿಲ್ಲೆಯಲ್ಲಿ ವೈಯಕ್ತಿಕ ವಿಚಾರಕ್ಕೆ ಉಂಟಾದಂತ ಜಗಳ ತಾರಕಕ್ಕೇರಿದಂತ ವೇಳೆಯಲ್ಲಿ ಗುದ್ದಲಿಯಿಂದಲೇ ಹೊಡೆದು ಸ್ನೇಹಿತನನ್ನು ಕೊಂದಿರುವಂತ ಬೆಚ್ಚಿ ಬೀಳಿಸೋ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ ತಾವರೆಕೊಪ್ಪದಲ್ಲಿ ವೈಯಕ್ತಿಕ ವಿಚಾರಕ್ಕೆ ದೇವರಾಜ್ ಹಾಗೂ ವೆಂಕಟೇಶ್ ಎಂಬುವರ ನಡುವೆ ಜಗಳ ಉಂಟಾಗಿದೆ. ಜಗಳ ತಾರಕ್ಕೇರಿದಂತ ಸಂದರ್ಭದಲ್ಲಿ ಆರೋಪಿ ವೆಂಕಟೇಶ್ ಸ್ನೇಹಿತ ದೇವರಾಜನನ್ನು ಗುದ್ದಲಿಯಿಂದ ಹೊಡೆದಿದ್ದಾನೆ. ಗುದ್ದಲಿಯಿಂದ ಸ್ನೇಹಿತ ದೇವರಾಜ್(31) ಹೊಡೆದ ಪರಿಣಾಮ ಸ್ಥಳದಲ್ಲೇ ತೀವ್ರ ರಕ್ತಸ್ತ್ರಾವದಿಂದ ಸಾವನ್ನಪ್ಪಿದ್ದಾನೆ. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಶಿವಮೊಗ್ಗ ಗ್ರಾಮಾಂತರ ಠಾಣೆಯ ಪೊಲೀಸರು ಆರೋಪಿ ವೆಂಕಟೇಶ್ ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. https://kannadanewsnow.com/kannada/breaking-muda-case-in-trouble-for-cm-again-ed-files-petition-seeking-rejection-of-lokayukta-report/ https://kannadanewsnow.com/kannada/state-government-orders-change-working-hours-of-government-offices-in-the-wake-of-scorching-heat/

Read More

ಬೆಂಗಳೂರು: ದೆಹಲಿಗೆ ಸಿಎಂ ಸಿದ್ಧರಾಮಯ್ಯ ತೆರಳಿದ್ದಾರೆ. ಇಂದು ಮಧ್ಯಾಹ್ನ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯನ್ನು ಭೇಟಿಯಾಗಿರುವಂತ ಅವರು, ನಾಳೆ ಮತ್ತಿಬ್ಬರು ಕೇಂದ್ರ ಸಚಿವರನ್ನು ಭೇಟಿಯಾಗಲಿದ್ದಾರೆ. ಮುಖ್ಯಮಂತ್ರಿ ಕಾರ್ಯಾಲಯದಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು ನಾಳೆ ಮಧ್ಯಾಹ್ನ 12.30ಕ್ಕೆ ಕೇಂದ್ರ ಜಲಶಕ್ತಿ ಸಚಿವ ಸಿಆರ್ ಪಾಟೀಲ್ ಅವರನ್ನು ಸಿಎಂ ಸಿದ್ಧರಾಮಯ್ಯ ಅವರು ಭೇಟಿಯಾಗುತ್ತಿರುವುದಾಗಿ ತಿಳಿಸಿದೆ. ಇನ್ನೂ ಮಧ್ಯಾಹ್ನ 2.30ಕ್ಕೆ ಕೇಂದ್ರ ವಿಮಾನಯಾನ ಸಚಿವ ಕೆ.ರಾಂಮೋಹನ್ ನಾಯ್ಡು ಅವರನ್ನು ದೆಹಲಿಯ ರಾಜೀವ್ ಗಾಂಧಿ ಭವನದಲ್ಲಿ ಸಿಎಂ ಸಿದ್ಧರಾಮಯ್ಯ ಭೇಟಿಯಾಗಲಿದ್ದಾರೆ. ಕೇಂದ್ರ ಜಲಶಕ್ತಿ ಸಚಿವರೊಂದಿಗೆ ರಾಜ್ಯದ ಜಲ ವಿವಾದಗಳು, ನೀರಿನ ಸಮಸ್ಯೆ ಸಂಬಂಧ ಸಿಎಂ ಸಿದ್ಧರಾಮಯ್ಯ ಚರ್ಚೆ ನಡೆಸಿದರೇ, ವಿಮಾನಯಾನ ಸಚಿವರೊಂದಿಗೆ ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಚರ್ಚಿಸೋ ಸಾಧ್ಯತೆ ಇದೆ. https://kannadanewsnow.com/kannada/bjp-begins-sit-in-protest-against-price-rise-at-freedom-park-in-bengaluru/ https://kannadanewsnow.com/kannada/breaking-muda-case-in-trouble-for-cm-again-ed-files-petition-seeking-rejection-of-lokayukta-report/

Read More

ಬೆಂಗಳೂರು: ರಾಜ್ಯದಲ್ಲಿ ಬೆಲೆ ಏರಿಕೆ ಗ್ಯಾರಂಟಿ ಕೊಡುವ ಕಾಂಗ್ರೆಸ್ ಪಕ್ಷದ ಸರಕಾರ ಅಧಿಕಾರದಲ್ಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ  ಅವರು ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಇಂದು ಬಿಜೆಪಿಯ ಅಹೋರಾತ್ರಿ ಧರಣಿಯ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ನುಡಿದಂತೆ ನಡೆದ ಸರಕಾರ ಎಂದು ಜಾಹೀರಾತು ನೀಡುತ್ತಿದ್ದಾರೆ. ಇದು ಮನುಷ್ಯತ್ವ ಇರುವ ಸರಕಾರ ಅಲ್ಲ; ಅಧಿಕಾರಕ್ಕೆ ಬಂದ ಕೇವಲ 24 ಗಂಟೆಗಳಲ್ಲಿ ಗ್ಯಾರಂಟಿ ಅನುಷ್ಠಾನ ಮಾಡುವುದಾಗಿ ಹೇಳಿದ್ದರು. ಆದರೆ, ತಿಂಗಳುಗಳೇ ಕಳೆದರೂ ಗ್ಯಾರಂಟಿಗಳು ಸರಿಯಾಗಿ ಅನುಷ್ಠಾನ ಆಗಿಲ್ಲ ಎಂದು ಆಕ್ಷೇಪಿಸಿದರು. ಕುರ್ಚಿಯ ಅಭದ್ರತೆ ಕಾಡುತ್ತಿದ್ದರೆ.. ಮುಖ್ಯಮಂತ್ರಿಗಳೇ ದಯವಿಟ್ಟು ನಿಮ್ಮ ಎ.ಸಿ. ರೂಮಿನಿಂದ ಹೊರಕ್ಕೆ ಬನ್ನಿ. ನೀವು ಬೆಂಗಳೂರಿನ ಸಿಎಂ ಅಲ್ಲ; ರಾಯಚೂರು, ಕೊಪ್ಪಳ, ಬೆಳಗಾವಿ ಸೇರಿ ರಾಜ್ಯದ ಎಲ್ಲ ಜಿಲ್ಲೆಗಳಿಗೆ ಸಚಿವರ ಜೊತೆ ಪ್ರವಾಸ ಮಾಡಿ ಎಂದು ವಿಜಯೇಂದ್ರ ಅವರು ಆಗ್ರಹಿಸಿದರು. ಸಿದ್ದರಾಮಯ್ಯನವರೇ, ಹಿಂದೆ ರಾಜ ಮಹಾರಾಜರು…

Read More

ಬೆಳಗಾವಿ: ಜಿಲ್ಲೆಯಲ್ಲಿ ಶಾಸಕ ರಾಜು ಕಾಗೆ ಸಹೋದರ ಪುತ್ರನಿಂದ ಕಾರು ಅಪಘಾತ ಮಾಡಲಾಗಿದೆ. ಕಾರು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ ಹೊಂದಿದ್ದರೇ, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರು ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಅಪಘಾತ ಸಂಭವಿಸಿದೆ. ಗೋಕಾಕ್ ಮೂಲದ ಬಸವರಾಜ ಪುಡಕಲಕಟ್ಟಿ(22) ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬೈಕ್ ನಲ್ಲಿ ತೆರಳುತ್ತಿದ್ದಂತ ಮತ್ತಿಬ್ಬರಿಗೆ ಗಂಭೀರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲಾಗುತ್ತಿದೆ. ಸಣ್ಣವಿಠ್ಠಲ ದುರದುಂಡಿ, ನಿಂಗಪ್ಪ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಬೆಳಗಾವಿಯ ಖಾಸಗೀ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬಸವರಾಜ ಮೃತದೇಹವನ್ನು ಬಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ. ಕಾರು ಚಲಾಯಿಸುತ್ತಿದ್ದಂತ ರಾಜು ಕಾಗೆ ಅವರ ಸಹೋರನ ಪುತ್ರ ಶ್ರೀಪಾದ್ ಎಂಬುದಾಗಿ ತಿಳಿದು ಬಂದಿದೆ. ಈ ವಿಷಯ ತಿಳಿದು ಘಟನಾ ಸ್ಥಳಕ್ಕೆ ಕಿತ್ತೂರು ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಈ ಸಂಬಂಧ ಕಿತ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/state-government-orders-change-working-hours-of-government-offices-in-the-wake-of-scorching-heat/ https://kannadanewsnow.com/kannada/breaking-muda-case-in-trouble-for-cm-again-ed-files-petition-seeking-rejection-of-lokayukta-report/

Read More

ಬೆಂಗಳೂರು: ದಿನೇ ದಿನೇ ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿನ ಸರ್ಕಾರಿ ಕಚೇರಿ ಕೆಲಸದ ವೇಳೆಯಲ್ಲಿ ಬದಲಾವಣೆ ಮಾಡಿ ಸರ್ಕಾರ ಆದೇಶಿಸಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು ರವರು ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿರುವುದಿಂದ ನೌಕರರು ಕರ್ತವ್ಯ ನಿರ್ವಹಿಸುವಲ್ಲಿ ಎದುರಿಸುತ್ತಿರುವ ತೊಂದರೆಯನ್ನು ಮಾನವೀಯತೆ ದೃಷ್ಟಿಯಿಂದ ಪರಿಗಣಿಸಿ, ಏಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಕಚೇರಿ ಕೆಲಸದ ಸಮಯವನ್ನು ಬೆಳಿಗ್ಗೆ 8.00 ರಿಂದ 1.30 ರವರೆಗೆ ನಿಗದಿಪಡಿಸಿ ಆದೇಶ ಹೊರಡಿಸುವಂತೆ ಕೋರಿರುತ್ತಾರೆ ಎಂದು ತಿಳಿಸಿದ್ದಾರೆ. ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, 2025 ನೇ ಸಾಲಿನ ಏಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಹೆಚ್ಚಿನ ಬಿಸಿಲಿನ ತಾಪಮಾನದ ಹಿನ್ನೆಲೆಯಲ್ಲಿ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಹಾಗೂ…

Read More

ಹಾವೇರಿ: ಬೆಂಗಳೂರು ಧಾರವಾಡ ಮಧ್ಯ ಸಂಚರಿಸುವ ವಂದೇ ಭಾರತ ರೈಲು ಹಾವೇರಿಯಲ್ಲಿ ನಿಲುಗಡೆಗೆ ಆದೇಶ ನೀಡಿರುವ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ಪತ್ರಿಕೆ ಪ್ರಕಟಣೆ ಹೊರಡಿಸಿರುವ ಅವರು, ಭಾರತ ದೇಶದಲ್ಲಿ ಕಳೆದ ಹತ್ತು ವರ್ಷ ಎಲ್ಲ ರಂಗದಲ್ಲಿ ಬಹಳ ದೊಡ್ಡ ಕ್ರಾಂತಿಯಾಗಿದೆ ವಿಶೇಷವಾಗಿ ರೈಲ್ವೆ ಸಂಕರ್ಕ, ಡಿಜಿಟಲ್, ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯಾಗಿದೆ. ಜಗತ್ತಿನಲ್ಲಿಯೇ ಅತಿ ದೊಡ್ಡ ರೈಲ್ವೆ ಜಾಲ ಹೊಂದಿರುವ ದೇಶ ಭಾರತ ಕರ್ನಾಟಕದಲ್ಲಿ ಅತಿ ಹೆಚ್ಚು ರೈಲ್ವೆ ಲೈನು ಆಗಿರುವುದ ಕಳೆದ ಹತ್ತು ವರ್ಷದ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ, ಕೇಂದ್ರ ಸರ್ಕಾರ ಕರ್ನಾಟಕದ ರೈಲ್ವೆ ಯೋಜನೆಗಳ ಅಭಿವೃದ್ದಿಗೆ ಕಳೆದ ವರ್ಷ 7 ಸಾವಿರ ಕೋಟಿ ರೂ. ಹಾಗೂ ಈ ವರ್ಷ 7 ಸಾವಿರ ಕೋಟಿ ರೂ. ಅನುದಾನ…

Read More

ನವದೆಹಲಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಗೆ ಹೈಕೋರ್ಟ್ ಜಾಮೀನು ನೀಡಲಾಗಿತ್ತು. ಈ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್ ಗೆ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆಯನ್ನು ಏಪ್ರಿಲ್ 22ಕ್ಕೆ ಮುಂದೂಡಿಕೆ ಮಾಡಲಾಗಿದೆ. ನಟ ದರ್ಶನ್ ಗೆ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಹೈಕೋರ್ಟ್ ಜಾಮೀನು ನೀಡಿತ್ತು. ಈ ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಇಂದು ಅರ್ಜಿಯ ವಿಚಾರಣೆ ನಡೆಸಿದಂತ ಸುಪ್ರೀಂ ಕೋರ್ಟ್ ನ್ಯಾಯಪೀಠವು ಏಪ್ರಿಲ್ 22ಕ್ಕೆ ಮುಂದೂಡಿಕೆ ಮಾಡಿದೆ. ಇನ್ನೂ ನಟ ದರ್ಶನ್ ಜಾಮೀನು ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಏಪ್ರಿಲ್ 22ಕ್ಕೆ ನಿಗದಿ ಪಡಿಸಿದೆ. ಏಪ್ರಿಲ್ 22ರಂದು ನಟ ದರ್ಶನ್ ಗೆ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಸುಪ್ರೀಂ ಕೋರ್ಟ್ ಯಾವ ತೀರ್ಪು ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

Read More

ಚಿತ್ರದುರ್ಗ: ಜಿಲ್ಲೆಯಲ್ಲಿ ಧಾರುಣ ಘಟನೆಯೊಂದು ನಡೆದಿದೆ. ಕೃಷಿ ಹೊಂಡದಲ್ಲಿ ಮುಳುಗಿ ತಂದೆ-ಮಗ ಧಾರುಣವಾಗಿ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಚಿತ್ರದುರ್ಗ ತಾಲ್ಲೂಕಿನ ಹುಲ್ಲೂರು ಸಿಂಗಾಪುರದಲ್ಲಿ ಕೃಷಿ ಹೊಂಡಕ್ಕೆ ಬಿದ್ದಂತ ಮಗನನ್ನು ರಕ್ಷಣೆ ಮಾಡಲು ಹೋಗಿ ತಂದೆಯೂ ಸಾವನ್ನಪ್ಪಿದ್ದಾರೆ. ಈಜಾಡಲು ಹೋಗಿ ನೀರಲ್ಲಿ ಮುಳುಗಿ ತಂದೆ ಬಸವರಾಜ (50) ಹಾಗೂ ಪುತ್ರ ಆಕಾಶ್ (15) ಸಾವನ್ನಪ್ಪಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/state-government-officials-employees-invited-for-sarvottam-seva-award/ https://kannadanewsnow.com/kannada/diesel-price-hiked-by-rs-2-per-litre-r-ashoka/

Read More