Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ಎಲ್ಲ ವೃತ್ತಿಪರ ಕೋರ್ಸ್ ಗಳ ಎರಡನೇ ಸುತ್ತಿನ ಪ್ರವೇಶ ಪ್ರಕ್ರಿಯೆ ಬುಧವಾರದಿಂದ ಆರಂಭವಾಗಿದೆ. ಲಭ್ಯ ಸೀಟುಗಳ ವಿವರಗಳನ್ನು ಕೂಡ ವೆಬ್ ಸೈಟ್ ನಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಗುರುವಾರದಿಂದ (ಆ.21) ಇಚ್ಛೆ/ಆಯ್ಕೆಗಳನ್ನು ಬದಲಿಸುವ/ತೆಗೆಯುವ ಕೆಲಸವನ್ನೂ ಮಾಡಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಆ.25ರವರೆಗೆ ಇಚ್ಛೆ/ಆಯ್ಕೆಗಳನ್ನು ಬದಲಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಆ.29ರಂದು ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶ ಪ್ರಕಟಿಸಲಾಗುವುದು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಆರ್ಯುವೇದ ಕೋರ್ಸ್ ಗಳ ಸೀಟ್ ಮ್ಯಾಟ್ರಿಕ್ಸ್ ಕೂಡ ಪ್ರಕಟಿಸಿದ್ದು, ಈ ಕೋರ್ಸ್ ಗೆ ಮಾತ್ರ ಇಚ್ಚೆ/ಆಯ್ಕೆಗಳನ್ನು ದಾಖಲು ಮಾಡಲು ಅವಕಾಶ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಮೊದಲ ಸುತ್ತಿನಲ್ಲಿ ಚಾಯ್ಸ್-1 ಆಯ್ಕೆ ಮಾಡಿಕೊಂಡು ಪ್ರವೇಶ ಪಡೆದಿರುವವರನ್ನು ಹೊರತುಪಡಿಸಿ, ಛಾಯ್ಸ್- 2 ಹಾಗೂ 3 ಆಯ್ಕೆ ಮಾಡಿದವರಿಗೂ ಆಯುರ್ವೇದ ಕೋರ್ಸ್ ಗಳ ಪ್ರವೇಶಕ್ಕೆ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಅವಕಾಶ ಇರುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇದುವರೆಗೂ ಸೀಟು ಹಂಚಿಕೆಯಾಗದಿರುವವರು…
ಬೆಂಗಳೂರು: ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಮುಖ್ಯಮಂತ್ರಿಗಳು ಮಾನ್ಯ ಸುಪ್ರೀಂ ಕೋರ್ಟಿನ ಆದೇಶವನ್ನೂ ಸರಿಯಾಗಿ ಪಾಲನೆ ಮಾಡಿದಂತೆ ಕಾಣುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜಸ್ಟಿಸ್ ಸದಾಶಿವ ಆಯೋಗದ ವರದಿಯನ್ನೂ ಸರಿಯಾಗಿ ಪಾಲಿಸಿದಂತೆ ಕಾಣುತ್ತಿಲ್ಲ. ಅದೇರೀತಿ ನ್ಯಾ.ನಾಗಮೋಹನ್ ದಾಸ್ ವರದಿಯನ್ನೂ ಸರಿಯಾಗಿ ಪಾಲಿಸಿದಂತೆ ಕಾಣುತ್ತಿಲ್ಲ ಎಂದು ಆಕ್ಷೇಪಿಸಿದರು. ನ್ಯಾ.ನಾಗಮೋಹನ್ ದಾಸ್ ವರದಿಯಲ್ಲಿ ಎ, ಬಿ, ಸಿ, ಡಿ, ಇ ಎಂದು 5 ವರ್ಗಗಳನ್ನು ಮಾಡಿದ್ದರು. ಅದನ್ನು ಎ, ಬಿ, ಸಿ ಎಂದು ಮಾಡಿದ್ದಾರೆ ಎಂದು ಆರೋಪಿಸಿದರು. ನರೇಂದ್ರ ಸ್ವಾಮಿ ಮೊದಲಾದವರ ಮೂಲಕ ನೀವೇ ವಿಂಗಡಣೆ ಮಾಡುವುದಾದರೆ, ಸರಕಾರ ಮತ್ತು ಸಿದ್ದರಾಮಯ್ಯನವರಿಗೆ ಜಸ್ಟಿಸ್ ಸದಾಶಿವ ಆಯೋಗ, ನ್ಯಾ.ನಾಗಮೋಹನ್ ದಾಸ್ ಆಯೋಗಕ್ಕೆ ನೂರಾರು ಕೋಟಿ ಖರ್ಚು ಮಾಡುವ ಅವಶ್ಯಕತೆ ಏನಿತ್ತು ಎಂದು ಕೇಳಿದರು. ಹಿಂದೆ ಬಸವರಾಜ ಬೊಮ್ಮಾಯಿಯವರ ನೇತೃತ್ವದ ಬಿಜೆಪಿ ಸರಕಾರ ಅಧಿಕಾರದಲ್ಲಿ ಇದ್ದಾಗ ಅವರು ಪರಿಶಿಷ್ಟ ಜಾತಿ,…
ಬೆಂಗಳೂರು: ಅನನ್ಯ ಭಟ್ ನಾಪತ್ತೆಯಾಗಿದ್ದರ ಬಗ್ಗೆ ಅವರ ತಾಯಿ ಸುಜಾತಾ ಭಟ್ ಆರೋಪಿಸಿದ್ದರು. ತಮ್ಮ ಮಗಳ ಅಸ್ಥಿ ಪಂಜರ ನೀಡುವಂತೆ ಮನವಿ ಮಾಡಿದ್ದರು. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು ಅನನ್ಯ ಭಟ್ ನಾಪತ್ತೆ ಪ್ರಕರಣವನ್ನು ಎಸ್ಐಟಿಗೆ ಹಸ್ತಾಂತರಿಸಿ ಆದೇಶಿಸಿದೆ. ಇಂದು ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಮಾಡಲಾಗಿದ್ದು, ಅನನ್ಯ ಭಟ್ ನಾಪತ್ತೆ ಪ್ರಕರಣವನ್ನು ಎಸ್ಐಟಿಗೆ ಹಸ್ತಾಂತರಿಸಿ ಆದೇಶಿಸಿದೆ. ಡಿಜಿ ಮತ್ತು ಐಜಿಪಿ ಆದೇಶದ ಮೇರೆಗೆ ಎಸ್ಐಟಿಗೆ ಹಸ್ತಾಂತರಿಸಲಾಗಿದೆ. 2003ರಲ್ಲಿ ಧರ್ಮಸ್ಥಳದಲ್ಲಿ ಅನನ್ಯ ಭಟ್ ನಾಪತ್ತೆಯಾದ ಬಗ್ಗೆ ದೂರು ದಾಖಲಾಗಿತ್ತು. ಅನನ್ಯ ಭಟ್ ಕಾಣೆಯಾಗಿದ್ದ ಬಗ್ಗೆ ದೂರು ಸಲ್ಲಿಕೆಯಾಗಿತ್ತು. ಇದೀಗ ವೈದ್ಯಕೀಯ ವಿದ್ಯಾರ್ಥಿಯಾಗಿದ್ದಂತ ಅನನ್ಯ ಭಟ್ ನಾಪತ್ತೆಯಾಗಿದ್ದರು. ಈ ಪ್ರಕರಣವನ್ನು ಎಸ್ಐಟಿಗೆ ರಾಜ್ಯ ಸರ್ಕಾರ ಹಸ್ತಾಂತರಿ ಅಧಿಕೃತ ಆದೇಶ ಮಾಡಿದೆ. ನಿನ್ನೆ ಫೋಟೋದಲ್ಲಿರುವವಳೇ ನನ್ನ ಮಗಳು ಎಂದಿದ್ದ ಸುಜಾತ ಭಟ್ ದೂರುದಾರೆ ಸುಜಾತ ಭಟ್ ಅವರು, ಎಲ್ಲರೂ ಒಂದೊಂದು ರೀತಿ ತೇಜೋವಧೆ ಮಾಡುತ್ತಿದ್ದಾರೆ. ಅವರಿಗೆ ಬೇರೆ ಕೆಲಸ ಇಲ್ಲ. ನನ್ನ ನೋವು ನನಗೆ…
ಬೆಂಗಳೂರು : ‘ಬೊನ್ ಮ್ಯಾರೋ ಟ್ರಾನ್ಸ್ ಪಲೆಂಟ್ ‘ ಕಾಯಿಲೆ ಯಿಂದ ಬಳಲುತ್ತಿದ್ದ ಎಚ್. ಡಿ. ಕೋಟೆಯ ಹಿರೇಹಳ್ಳಿಯ ಎನ್. ಚೆಲುವಪ್ಪ ಪುತ್ರ ಗಗನ್ ಗೌಡ ಎಂಬ ಒಂಬತ್ತು ವರ್ಷದ ಬಾಲಕ ನಿಗೆ ಸಚಿವ ಜಮೀರ್ ಅಹಮದ್ ಖಾನ್ ಅವರು ವೈಯಕ್ತಿಕವಾಗಿ ಐದು ಲಕ್ಷ ರೂ. ವೈದ್ಯಕೀಯ ನೆರವು ನೀಡಿದರು. ಬಾಲಕನ ವೈದ್ಯಕೀಯ ಚಿಕಿತ್ಸೆಗೆ 35 ಲಕ್ಷ ರೂ. ಅಗತ್ಯವಿದ್ದು,ಎಚ್. ಡಿ. ಕೋಟೆ ಶಾಸಕ ಅನಿಲ್ ಚಿಕ್ಕಮಾದು ಮೂಲಕ ನೆರವಿಗಾಗಿ ಬೆಂಗಳೂರಿಗೆ ಬಂದಿದ್ದ ಬಾಲಕ ಗಗನ್ ಗೌಡ ಹಾಗೂ ಆತನ ತಂದೆ ಚೆಲುವಪ್ಪ ಅವರನ್ನು ವಿಕಾಸ ಸೌಧ ಕಚೇರಿಗೆ ಕರೆಸಿಕೊಂಡ ಸಚಿವರು ಐದು ಲಕ್ಷ ರೂ. ನೀಡಿದರು. ಶಾಸಕರಾದ ಗಣೇಶ್, ಅಸೀಫ್ ಸೇಠ್, ಭರತ್ ರೆಡ್ಡಿ, ಕೆ ಎಂ ಎಫ್ ಮಾಜಿ ಅಧ್ಯಕ್ಷ ಭೀಮಾ ನಾಯ್ಕ್ ಉಪಸ್ಥಿತರಿದ್ದರು. https://kannadanewsnow.com/kannada/from-september-1-the-basava-culture-campaign-closing-ceremony-on-october-5-at-the-palace-grounds-minister-m-b-patil/ https://kannadanewsnow.com/kannada/shocking-incident-in-the-state-a-woman-murdered-by-pushing-a-car-into-a-lake-in-a-cinematic-style-in-hassan/
ಬೆಂಗಳೂರು: ಲಿಂಗಾಯತ ಮಠಾಧೀಶರ ಒಕ್ಕೂಟವು ಸೆ.1ರಿಂದ ಅ.1ರವರೆಗೆ ರಾಜ್ಯದಲ್ಲಿ ನಡೆಸಲಿರುವ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭವು ಅ.5ರಂದು ಇಲ್ಲಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ನಾಡಿನ ಎಲ್ಲೆಡೆಯಿಂದ ಬಸವಣ್ಣನ ಸಾವಿರಾರು ಅನುಯಾಯಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಒಕ್ಕೂಟದ ಹಲವು ಸ್ವಾಮೀಜಿಗಳು ಅಭಿಯಾನ ಮತ್ತು ಸಮಾರೋಪ ಕಾರ್ಯಕ್ರಮದ ರೂಪುರೇಷೆ ಕುರಿತು ಸಚಿವರನ್ನು ಅವರ ಇಲ್ಲಿನ ಅಧಿಕೃತ ನಿವಾಸದಲ್ಲಿ ಬುಧವಾರ ಭೇಟಿಯಾಗಿ, ಎರಡನೇ ಸುತ್ತಿನ ಸಮಾಲೋಚನೆ ನಡೆಸಿದರು. ಬಳಿಕ ಮಾತನಾಡಿದ ಸಚಿವರು, ಬಸವಣ್ಣನ ಹುಟ್ಟೂರಾದ ಬಸವನ ಬಾಗೇವಾಡಿಯಲ್ಲಿ ಸೆ.1ರಂದು ಅಭಿಯಾನಕ್ಕೆ ಚಾಲನೆ ನೀಡಲಾಗುವುದು. ಈ ಅಭಿಯಾನದ ಅಂಗವಾಗಿ ರಾಜ್ಯದ ಪ್ರತಿಯೊಂದು ಜಿಲ್ಲಾ ಕೇಂದ್ರದಲ್ಲೂ ಕಾರ್ಯಕ್ರಮಗಳು ನಡೆಯಲಿವೆ. ಅಕ್ಟೋಬರ್ 5ರಂದು ಬೆಂಗಳೂರಿನಲ್ಲಿ ಅದ್ಧೂರಿ ಸಮಾರೋಪ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರನ್ನು ಆಹ್ವಾನಿಸಲಾಗುವುದು ಎಂದು ತಿಳಿಸಿದ್ದಾರೆ. ಸಭೆಯಲ್ಲಿ ಗದಗಿನ ತೋಂಟದಾರ್ಯ ಸಂಸ್ಥಾನ ಮಠದ ಶ್ರೀ ಸಿದ್ಧರಾಮ ಮಹಾಸ್ವಾಮಿ, ಸಾಣೇಹಳ್ಳಿ ಮಠದ…
ಹಾಸನ: ಜಿಲ್ಲೆಯಲ್ಲಿ ಬೆಚ್ಚಿ ಬೀಳಿಸೋ ಕೃತ್ಯವೊಂದನ್ನು ಎಸಗಲಾಗಿದೆ. ಸಿನಿಮೀಯ ರೀತಿಯಲ್ಲಿ ಕಾರು ಕೆರೆಗೆ ತಳ್ಳಿ ಮಹಿಳೆಯನ್ನು ಹತ್ಯೆಗೈದು, ಕಿಡಿಗೇಡಿಗಳು ಕತೆ ಕಟ್ಟಿರುವಂತ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಚಂದನಹಳ್ಳಿ ಗ್ರಾಮದಲ್ಲಿ ಪ್ರೀತಿ ನಿರಾಕರಿಸಿದಕ್ಕೆ ವಿವಾಹಿತ ಮಹಿಳೆಯನ್ನು ಕೊಲೆ ಮಾಡಿರುವಂತ ಆರೋಪ ಕೇಳಿ ಬಂದಿದೆ. ಸಿನಿಮೀಯ ರೀತಿಯಲ್ಲಿ ಕಾರು ಕೆರೆಗೆ ತಳ್ಳಿ ಮಹಿಳೆ ಹತ್ಯೆಗೈದಿರುವುದಾಗಿ ಹೇಳಲಾಗುತ್ತಿದೆ. ಚಂದನಹಳ್ಳಿ ಸಮೀಪದ ಬೇಲೂರಿನ ಶ್ವೇತಾ(32) ಕೊಲೆ ಮಾಡಲಾಗಿದೆ. ಗಂಡನಿಂದ ದೂರಾಗಿ ತವರು ಮನೆಯನ್ನು ಮೃತ ಶ್ವೇತಾ ಸೇರಿದ್ದರು. ಇಂತಹ ಶ್ವೇತಾಗೆ ಹಾಸನದಲ್ಲಿ ಕೆಲಸ ಮಾಡುವಾಗ ರವಿ ಎಂಬಾತ ಪರಿಚಯವಾಗಿದ್ದನು. ನಾನು ಪತ್ನಿ ಬಿಟ್ಟು ಬರ್ತೀನಿ, ನೀನು ಬಾ ಎಂದು ರವಿ ಎಂಬಾತ ಶ್ವೇತಾ ಪೀಡಿಸಿದ್ದನಂತೆ. ಆದರೇ ಶ್ವೇತ ಮಾತ್ರ ರವಿಯ ಪ್ರಸ್ತಾಪವನ್ನು ನಿರಾಕರಿಸಿದ್ದರು. ಇದೇ ಕಾರಣಕ್ಕೆ ರವಿ ಶ್ವೇತಾಳನ್ನು ಹತ್ಯೆಗೈದಿರುವುದಾಗಿ ಹೇಳಲಾಗುತ್ತಿದೆ. ನಿನ್ನೆ ಹಾಸನದಿಂದ ತನ್ನ ಕಾರಿನಲ್ಲಿ ಶ್ವೇತಾಳನ್ನು ರವಿ ಕರೆತಂದಿದ್ದನು. ಆದರೇ ಚಂದನಹಳ್ಳಿ ಕೆರೆಗೆ ಕಾರು ಬೀಳಿಸಿ ಕತೆಯನ್ನು ಆರೋಪಿ ರವಿ…
ದೊಡ್ಡಬಳ್ಳಾಪುರ: ಜಿಲ್ಲೆಯ ಬಿಸುವನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಹಳೆಯ ವಿದ್ಯಾರ್ಥಿಗಳಿಂದ ಬ್ಲಾಕ್ ಬೋರ್ಡ್, ಅಂಗನವಾಡಿಗೆ ಹಾಸಿಗೆಗಳನ್ನು ವಿತರಣೆ ಮಾಡಲಾಯಿತು. ದೊಡ್ಡ ಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯತಿಯ ಬಿಸುವನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಗೆ ಕಪ್ಪು ಹಲಗೆಯನ್ನು ( ಬ್ಲಾಕ್ ಬೋರ್ಡನ್ನು ಮತ್ತು ಅಂಗನವಾಡಿ ಮಕ್ಜಳಿಗೆ ಹಾಸಿಗೆಯನ್ನು ಈ ಶಾಲೆಯ ಹಳೆಯ ವಿದ್ಯಾರ್ಥಿಳಿಂದ ವಿತರಣೆ ಮಾಡಲಾಯಿತು. ಈ ಮೂಲಕ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಪೂರಕ ಕಲಿಕಾ ವಾತಾವರಣ ನಿರ್ಮಾಣದಲ್ಲಿ ಗ್ರಾಮದ ಹಳೆಯ ವಿದ್ಯಾರ್ಥಿಗಳ ತಂಡ ಪ್ರೋತ್ಸಾಹಿಸಿದರು. ಅಂಗನವಾಡಿ ಮಕ್ಕಳಿಗೆ ಕಲಿಕಾ ಸಾಮಗ್ರಿಗಳನ್ನು ಮತ್ತು ಹಾಸಿಗೆಯನ್ನು ಗ್ರಾಮದ ಹಳೆಯ ವಿದ್ಯಾರ್ಥಿಯಾದ ಸಂಪತ್ ಕುಮಾರ್ ಅವರು ನೀಡಿದರು. ಬಿಸುವನಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಗೆ ಅವಶ್ಯಕವಾಗಿ ಬೇಕಾಗಿದ್ದ ಬ್ಲಾಕ್ ಬೋರ್ಡು ( ಕಪ್ಪು ಹಲಗೆ) ಯನ್ನು ಹಳೆಯ ವಿದ್ಯಾರ್ಥಿಗಳಾದ ಮಂಜುನಾಥ.ಸಿ, ವಿನೋದ್ ಕುಮಾರ್, ಶಶಿಕುಮಾರ್.ಜಿ, ಮುನಿರಾಜ್.ಡಿ, ಮೋಹನ್.ಎನ್ ಮತ್ತು ಆನಂದ.ಎನ್ ಅವರು ನೀಡಿದರು. ಈ ಕಾರ್ಯಕ್ರಮದಲ್ಲಿ ಜನಧ್ವನಿ ವೇದಿಕೆಯ ಮುಖಂಡರಾದ ನಾರಾಯಣ…
ದೈನಂದಿನ ತಪ್ಪದೆ ಹೇಳಬೇಕಾದ ಪ್ರಾರ್ಥನಾ ಶ್ಲೋಕಗಳು ಶ್ರೀ ಗಣಪತಿ ಶ್ಲೋಕ ಅಗಜಾನನ ಪದ್ಮಾರ್ಕಂ ಗಜಾನನಂ ಅಹರ್ನಿಶಂ | ಅನೇಕದಂ ತಂ ಭಕ್ತಾನಾಂ ಏಕದಂತಮುಪಾಸ್ಮಹೇ || ಶ್ರೀ ಕೃಷ್ಣ ಶ್ಲೋಕ ವಸುದೇವಸುತಂ ದೇವಂ ಕಂಸ ಚಾಣೂರ ಮರ್ದನಂ | ದೇವಕೀ ಪರಮಾನಂದಂ ಕೃಷ್ಣಂ ವಂದೇ ಜಗದ್ಗುರುಂ || ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು…
ನವದೆಹಲಿ: ಭಾರತವು ಬುಧವಾರ ಒಡಿಶಾದ ಚಾಂಡಿಪುರದಲ್ಲಿರುವ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್‌ನಿಂದ ತನ್ನ ಮಧ್ಯಂತರ ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿ ‘ಅಗ್ನಿ-5’ ಅನ್ನು ಯಶಸ್ವಿಯಾಗಿ ಪರೀಕ್ಷಿಸಿತು. ಸ್ಟ್ರಾಟೆಜಿಕ್ ಫೋರ್ಸಸ್ ಕಮಾಂಡ್‌ನ ಆಶ್ರಯದಲ್ಲಿ ನಡೆಸಲಾದ ಈ ಉಡಾವಣೆಯು ಕ್ಷಿಪಣಿಯ ಎಲ್ಲಾ ಕಾರ್ಯಾಚರಣೆ ಮತ್ತು ತಾಂತ್ರಿಕ ನಿಯತಾಂಕಗಳನ್ನು ಮೌಲ್ಯೀಕರಿಸಿದೆ. ಇದು ದೇಶದ ಕಾರ್ಯತಂತ್ರದ ತಡೆಗಟ್ಟುವಿಕೆ ಸಾಮರ್ಥ್ಯಗಳಿಗೆ ಗಮನಾರ್ಹ ಉತ್ತೇಜನವನ್ನು ಸೂಚಿಸುತ್ತದೆ ಎಂದು ರಕ್ಷಣಾ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. https://twitter.com/ANI/status/1958165707042013540 ಆಗಸ್ಟ್ 20, 2025 ರಂದು ಒಡಿಶಾದ ಚಾಂಡಿಪುರದ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್‌ನಿಂದ ಮಧ್ಯಂತರ ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿ ‘ಅಗ್ನಿ 5’ ಅನ್ನು ಯಶಸ್ವಿಯಾಗಿ ಪರೀಕ್ಷಿಸಲಾಯಿತು. ಉಡಾವಣೆಯು ಎಲ್ಲಾ ಕಾರ್ಯಾಚರಣೆ ಮತ್ತು ತಾಂತ್ರಿಕ ನಿಯತಾಂಕಗಳನ್ನು ಮೌಲ್ಯೀಕರಿಸಿತು. ಇದನ್ನು ಕಾರ್ಯತಂತ್ರದ ಪಡೆಗಳ ಕಮಾಂಡ್‌ನ ಆಶ್ರಯದಲ್ಲಿ ನಡೆಸಲಾಯಿತು ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. https://twitter.com/ANI/status/1958165279470444665 https://kannadanewsnow.com/kannada/opposition-disrupts-the-assembly-proceedings-maddur-mla-k-m-uday/ https://kannadanewsnow.com/kannada/d-devaraja-arasus-public-contributions-model-maddur-tahsildar-parashuram-sathigeri/
ಮಂಡ್ಯ : ಹಿಂದುತ್ವದ ವಿಚಾರವನ್ನಷ್ಟೆ ಮುಂದಿಟ್ಟುಕೊಂಡು ವಿಪಕ್ಷ ನಾಯಕರು ಸದನದ ಸಮಯಯನ್ನು ಹಾಳು ಮಾಡುತ್ತಿದ್ದಾರೆ ಎಂದು ಮದ್ದೂರು ಶಾಸಕ ಕೆ.ಎಂ.ಉದಯ್ ಬುಧವಾರ ವಾಗ್ದಾಳಿ ನಡೆಸಿದರು. ಮದ್ದೂರು ತಾಲೂಕಿನ ಕುದುರಗುಂಡಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯದ ಅಭಿವೃದ್ಧಿ, ಸಮಸ್ಯೆ ಹಾಗೂ ರೈತರ ಬಗ್ಗೆ ಸದನದಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕಿದ್ದ ವಿರೋಧ ಪಕ್ಷದ ನಾಯಕರು ದೇವಸ್ಥಾನ, ಹಿಂದುತ್ವದ ವಿಚಾರಗಳನ್ನಷ್ಟೆ ಮುಂದಿಟ್ಟುಕೊಂಡು ಎರಡರೆಡು ವಾರಗಳ ಕಾಲ ಚರ್ಚಿಸಿ ಸದನದ ಅಮೂಲ್ಯ ಸಮಯವನ್ನು ಹಾಳು ಮಾಡುತ್ತಿದ್ದಾರೆ ಎಂದರು ಕಿಡಿಕಾರಿದರು. ವಿಪಕ್ಷ ನಾಯಕರಿಗೆ ರಾಜ್ಯದ ಅಭಿವೃದ್ಧಿಪಡಿಸುವ ಬಗ್ಗೆ ಚಿಂತೆಯಿಲ್ಲ. ರಾಜ್ಯದ ಪ್ರತಿಯೊಂದು ವಿಧಾನಸಭಾ ಕ್ಷೇತ್ರಗಳ ಶಾಸಕರ ಸಮಸ್ಯೆಗಳನ್ನು ಚರ್ಚಿಸಲು ಸಮಯಾವಕಾಶ ಕೊರತೆಯಾಗುತ್ತಿದೆ. ಕೆಲ ಬಿಲ್ ಗಳಿಗೆ ಮಾತ್ರ ಅನುಮತಿ ಸಿಗುತ್ತಿದೆ. ಶಾಸಕರು ಸಂಕ್ಷಿಪ್ತವಾಗಿ ಚರ್ಚಿಸಲು ವಿರೋಧ ಪಕ್ಷದ ನಾಯಕರ ಕಾಲಹರಣದಿಂದ ಅಡ್ಡಿಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. ಸದನದಲ್ಲಿ ಚರ್ಚೆಗೆ ಅವಕಾಶ ಇಲ್ಲದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಪ್ರತ್ಯೆಕವಾಗಿ…














