Author: kannadanewsnow09

ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ಪಿಪಿಇ ಕಿಟ್ ಮತ್ತು ಇತರೆ ಸಾಮಾಗ್ರಿಗಳ ಖರೀದಿಯಲ್ಲಿ ಆಗಿರುವಂತ ಅಕ್ರಮಗಳ ಬಗ್ಗೆ ವೈದ್ಯಕೀಯ ಶಿಕ್ಷಣ ಇಲಾಖೆಯ ಹಿಂದಿನ ಆರ್ಥಿಕ ಸಲಹೆಗಾರ ಹಾಗೂ ಪ್ರಸ್ತುತ ಕಿದ್ವಾಯಿ ಸ್ಮರಕ ಗ್ರಂಥಿ ಸಂಸ್ಥೆಯ ಆರ್ಥಿಕ ಸಲಹೆಗಾರ ರಘು ಜಿ.ಪಿ ಎಂಬುವರನ್ನು ರಾಜ್ಯ ಸರ್ಕಾರ ಅಮಾತನಗೊಳಿಸಿ ಆದೇಶಿಸಿದೆ. ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದಲ್ಲಿ ಸರ್ಕಾರದ ಅನುಮೋದನ ಇಲ್ಲದ ಪಿಪಿಇ ಕಿಟ್ ಮತ್ತು ಇತರೆ ಸಾಮಾಗ್ರಿಗಳನ್ನು ಖರೀದಿಸಿರುವ ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮಗಳನ್ನು ಉಲ್ಲಂಘಿಸಿರುವ ಕುರಿತಂತೆ ತನಿಖೆ ನಡೆಸಲು ಕುರಿತಂತೆ ರಚಿಸಲಾದ ತನಿಖಾ ಸಮಿತಿಯು ನೀಡಿರುವ ವರದಿಯನ್ವಯ ಸದರಿ ಅವಧಿಯಲ್ಲಿ ಅಥಿಕ ಸಲಹೆಗಾರರು (ಜಂಟಿ ನಿಯಂತ್ರಕರು), ವೈದ್ಯಕೀಯ ಶಿಕ್ಷಣ ಇಲಾಖೆ, ಹುದ್ದೆಯಲ್ಲಿ ಸೇವೆ ಸಲ್ಲಿಸಿದ ಶ್ರೀ ರಘು ಜಿ.ಪಿ., ಇವರ ವಿರುದ್ಧ ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು 1957ರ ನಿಯಮ 13ರಡಿ ಜಂಟಿ ಇಲಾಖಾ ವಿಚಾರಣೆಯನ್ನು ಕೈಗೊಳ್ಳಲು ಉದ್ದೇಶಿಸಲಾಗಿರುತ್ತದೆ.…

Read More

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಹುಂಡಿಗೆ ಹಣ ಸೇರಿಸುವುದು ಅನಾದಿ ಕಾಲದಿಂದಲೂ ನಾವೆಲ್ಲರೂ ಪಾಲಿಸಿಕೊಂಡು ಬಂದಿರುವ ಉತ್ತಮ ಪದ್ಧತಿ. ನಮ್ಮ ಪೂರ್ವಜರು ನಮಗೆ ಕಲಿಸಿದ್ದನ್ನು ನಾವು ಮುಂದಿನ ಪೀಳಿಗೆಗೆ ಕಲಿಸುತ್ತಿದ್ದೇವೆ. ಹಣವನ್ನು ಬ್ಯಾಂಕಿಗೆ ಸೇರಿಸಲು ಸರಿಯಾದ ಸಮಯವನ್ನು ಹೇಳಿದರೆ, ಹಣವು ಕಡಿಮೆಯಾಗದೆ ಹೆಚ್ಚಾಗುತ್ತದೆ ಎಂದು ಶಾಸ್ತ್ರಗಳು ಹೇಳುತ್ತವೆ. ಆ ಸಮಯ ಯಾವುದು? ಈ ಆಧ್ಯಾತ್ಮಿಕ ದಾಖಲೆಯ ಮೂಲಕ ನಾವು ರಹಸ್ಯವನ್ನು ನೋಡುವುದನ್ನು ಮುಂದುವರಿಸಲಿದ್ದೇವೆ . ವಿನಿಮಯ ವ್ಯವಸ್ಥೆ ಹೋಯಿತು, ಹಣ ವಿನಿಮಯ ವ್ಯವಸ್ಥೆ ಬಂತು. ಅಂದಿನಿಂದ ಇಂದಿನವರೆಗೂ ಹಣ ಕೊಟ್ಟರೆ ಏನು ಬೇಕಾದರೂ ಸಿಗುತ್ತದೆ ಎಂಬ ಸ್ಥಿತಿ ಮುಂದುವರಿದಿದೆ. ಅಂತಹ ಹಣವನ್ನು ಸಂಗ್ರಹಿಸಲು ಎಲ್ಲರೂ ಹೆಣಗಾಡುತ್ತಿದ್ದಾರೆ. ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕವಾಗಿ ಕೆಲವೊಮ್ಮೆ, ನಾವು ಕೆಲವು ಕೆಲಸಗಳನ್ನು ಮಾಡಿದಾಗ ನಾವು ಫಲಿತಾಂಶಗಳನ್ನು ನೋಡುತ್ತೇವೆ. ನೀವು ಸರಿಯಾದ ಸಮಯವನ್ನು ಕಳೆದುಕೊಂಡರೆ, ನೀವು ಅದನ್ನು ಎಂದಿಗೂ ಹಿಂತಿರುಗಿಸುವುದಿಲ್ಲ ಎಂದು ಅವರು ಹೇಳುತ್ತಾರೆ. ಶಕುನ…

Read More

ಬೆಂಗಳೂರು: ಬೆಂಗಳೂರಿನ ಆರ್.ಆರ್ ನಗರ ವಲಯ ವ್ಯಾಪ್ತಿಯಲ್ಲಿ ರಸ್ತೆಯಲ್ಲಿ ಅನಧಿಕೃತವಾಗಿ ಕೊಳವೆ ಬಾವಿ ಕೊರೆಸಿದವರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಈ ಮೂಲಕ ಬೆಂಗಳೂರಲ್ಲಿ ಅನಧಿಕೃತವಾಗಿ ಕೊಳವೆ ಬಾವಿ ಕೊರೆದಂತವರಿಗೆ ಬಿಬಿಎಂಪಿ ಶಾಕ್ ನೀಡಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಬಿಬಿಎಂಪಿ ಮಾಹಿತಿ ನೀಡಿದ್ದು, ಆರ್.ಆರ್ ನಗರ ವಲಯ ಹೇರೋಹಳ್ಳಿ ವಾರ್ಡ್ನ ವೀರಭದ್ರೇಶ್ವರ ನಗರ ಓಂ ಸಾಯಿ ಪಬ್ಲಿಕ್ ಮುಖ್ಯ ರಸ್ತೆಯಲ್ಲಿ ಅನಧಿಕೃತವಾಗಿ ಹಾಗೂ ಪಾಲಿಕೆ ವತಿಯಿಂದ ಯಾವುದೇ ಅನುಮತಿ ಪಡೆಯದೆ ಕೊಳವೆ ಬಾವಿ ಕೊರೆಸುತ್ತಿರುವವರ ಮೇಲೆ ಎಫ್.ಐ.ಆರ್ ದಾಖಲಿಸಲಾಗಿದೆ ಎಂದಿದೆ. ವೀರಭದ್ರೇಶ್ವರ ನಗರ ಓಂ ಸಾಯಿ ಪಬ್ಲಿಕ್ ಮುಖ್ಯ ರಸ್ತೆಯಲ್ಲಿ ಪಾಲಿಕೆಯಿಂದ ಯಾವುದೇ ಪೂರ್ವಾನುಮತಿ ಪಡೆಯದೆ 3ನೇ ಅಕ್ಟೋಬರ್ 2024 ರಿಂದ 4ನೇ ಅಕ್ಟೋಬರ್ 2024ರ ಸಂಜೆಯವರೆಗೆ ಕೊಳವೆ ಬಾವಿ ಕೊರೆಸುವ ಕಾರ್ಯ ನಡೆದಿರುತ್ತದೆ. ಈ ಸಂಬಂಧ ಪಾಲಿಕೆಗೆ ದೂರು ಬಂದ ಹಿನ್ನೆಲೆಯಲ್ಲಿ ಪಾಲಿಕೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುತ್ತಾರೆ ಎಂದು ತಿಳಿಸಿದೆ. ಸಾರ್ವಜನಿಕ ರಸ್ತೆಯನ್ನು ಅಗೆದು ಹಾಳು ಮಾಡಿ ಕೊಳವೆ…

Read More

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಟ್ಟಡ ನಿರ್ಮಾಣ ಕಾರ್ಯದ ವೇಳೆ ಸಾರ್ವಜನಿಕ ಆಸ್ತಿಗೆ ಹಾನಿಮಾಡಿರುವವರ ಮೇಲೆ ಬಿಬಿಎಂಪಿಯಿಂದ ಎಫ್.ಐ.ಆರ್ ದಾಖಲಿಸಿದೆ. ಹೀಗಾಗಿ ಬೆಂಗಳೂರಿಗರು ಕಟ್ಟಡ ನಿರ್ಮಾಣದ ವೇಳೆ ಎಚ್ಚರಿಕೆ ವಹಿಸೋದು ಅಗತ್ಯವಿದೆ. ಈ ಕುರಿತು ಬಿಬಿಎಂಪಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ರಾಜರಾಜೇಶ್ವರಿ ನಗರ ವಲಯದ ಕೆಂಚೇನಹಲ್ಲಿಯ ಐಡಿಯಲ್ ಹೋಮ್ಸ್ ಪೆಟ್ರೋಲ್ ಬ್ಯಾಂಕ್ ಬಳಿ ಮಂಜೇಗೌಡ ಎಂಬುವವರು ಕಟ್ಟಡ ನಿರ್ಮಿಸಲು ನಕ್ಷೆ ಮಂಜೂರಾತಿ ಪಡೆಯದೆ ಸುಮಾರು 6-8 ಅಡಿ ಆಳ ತಳಪಾಯದ(Earth Work Excavation) ಕಾಮಗಾರಿಯನ್ನು ಮಾಡುತ್ತಿದ್ದು, ಇದರಿಂದ ಸುಮಾರು 70 ಅಡಿ ಉದ್ದದಷ್ಟು ಪಾದಚಾರಿ ರಸ್ತೆ ಹಾಗೂ ಒಳಚರಂಡಿಯು ಕುಸಿದು ಬಿದ್ದು, ಸಾರ್ವಜನಿಕರು ಓಡಾಡಲು ತೊಂದರೆಯಾಗುತ್ತಿರುತ್ತದೆ ಎಂದಿದೆ. ಅಲ್ಲದೇ ಒಳಚರಂಡಿ ಮುಂಭಾಗದಲ್ಲಿರುವ ಬಿ.ಎಂ.ಟಿ.ಸಿ ಬಸ್ ನಿಲ್ದಾಣವು ಸಹ ಕುಸಿಯುವ ಸಂಭವವಿರುತ್ತದೆ. ಇದರಿಂದ ಇಲಾಖೆಗೆ ಸರಿ ಸುಮಾರು 20 ಲಕ್ಷ ರೂ.ಗಳವರೆಗೂ ನಷ್ಟ ಉಂಟಾಗಿರುತ್ತದೆ ಎಂದು ಹೇಳಿದೆ. ಮುಂದುವರಿದು, ಕಟ್ಟಡ ಕಾಮಗಾರಿ ವೇಳೆಯಲ್ಲಿ ಯಾವುದೇ ಮುಂಜಾಗೃತ ಕ್ರಮ ಅನುಸರಿಸದೆ ಕಾಮಗಾರಿ ಮಾಡುತ್ತಿರುವುದರಿಂದ ಅಕ್ಕ-ಪಕ್ಕದ ಮನೆಗಳಿಗೂ ಸಹ…

Read More

ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಸಿಕಂದರಾಬಾದ್‌-ವಾಸ್ಕೋ-ಡ-ಗಾಮಾ ನಿಲ್ದಾಣಗಳ ನಡುವೆ ಹೊಸ ರೈಲು ಸಂಚಾರ ಪ್ರಾರಂಭಗೊಂಡಿದೆ. ಈ ಬಗ್ಗೆ ನೈರುತ್ಯ ರೈಲ್ವೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ತೆಲಂಗಾಣ ಮತ್ತು ಗೋವಾ ರಾಜ್ಯಗಳ ನಡುವಿನ ಪ್ರವಾಸೋದ್ಯಮ ಮತ್ತು ಸಂಪರ್ಕಕ್ಕೆ ಪ್ರಮುಖ ಉತ್ತೇಜನ ನೀಡುವ ನಿಟ್ಟಿನಲ್ಲಿ, ಸಿಕಂದರಾಬಾದ್ ಮತ್ತು ವಾಸ್ಕೋ-ಡ-ಗಾಮಾ ನಿಲ್ದಾಣಗಳ ನಡುವೆ ಹೊಸ ದ್ವಿ-ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು (ರೈಲುಗಳ ಸಂಖ್ಯೆ 17039/17040) ಪರಿಚಯಿಸಲು ರೈಲ್ವೆ ಮಂಡಳಿಯು ಅನುಮೋದನೆ ನೀಡಿದೆ ಎಂದಿದೆ. ನಿಯಮಿತ ಸೇವೆಯ ವಿವರ ಈ ಕೆಳಗಿನಂತಿವೆ: 1. ಅಕ್ಟೋಬರ್ 9, 2024 ರಿಂದ ಜಾರಿಗೆ ಬರುವಂತೆ, ರೈಲು ಸಂಖ್ಯೆ 17039 ಸಿಕಂದರಾಬಾದ್-ವಾಸ್ಕೋ-ಡ-ಗಾಮಾ ಬೈ-ವೀಕ್ಲಿ ಎಕ್ಸ್‌ಪ್ರೆಸ್ ರೈಲು ಸಿಕಂದರಾಬಾದ್‌ನಿಂದ ಪ್ರತಿ ಬುಧವಾರ ಮತ್ತು ಶುಕ್ರವಾರ ಬೆಳಿಗ್ಗೆ 10:05 ಗಂಟೆಗೆ ಹೊರಟು, ಮರುದಿನ ಬೆಳಿಗ್ಗೆ 5:45 ಕ್ಕೆ ವಾಸ್ಕೋ-ಡ-ಗಾಮಾವನ್ನು ತಲುಪಲಿದೆ. ಮಾರ್ಗದಲ್ಲಿ, ಈ ರೈಲು ಕಾಚಿಗುಡ (10:18/10:20 AM), ಶಾದ್‌ನಗರ (11:04/11:05 AM), ಜಡ್ಚೆರ್ಲಾ (11:37/11:38 AM), ಮಹಬೂಬ್‌ನಗರ (11:55/11:57 AM), ಗದ್ವಾಲ್…

Read More

ನವದೆಹಲಿ: ಆಭರಣ ತಯಾರಕರಿಂದ ನಿರಂತರ ಖರೀದಿ ಬೆಂಬಲ ಮತ್ತು ಸಾಗರೋತ್ತರ ಮಾರುಕಟ್ಟೆಗಳಲ್ಲಿನ ದೃಢ ಪ್ರವೃತ್ತಿಗಳಿಂದಾಗಿ ಚಿನ್ನದ ಬೆಲೆ ಸೋಮವಾರ 10 ಗ್ರಾಂಗೆ 250 ರೂ.ಗಳಷ್ಟು ಏರಿಕೆಯಾಗಿ ಸಾರ್ವಕಾಲಿಕ ಗರಿಷ್ಠ 78,700 ರೂ.ಗೆ ತಲುಪಿದೆ.  ಶುಕ್ರವಾರ ಚಿನ್ನದ ಬೆಲೆ 10 ಗ್ರಾಂಗೆ 78,450 ರೂ. ಆದಾಗ್ಯೂ, ಬೆಳ್ಳಿ ಶುಕ್ರವಾರ ಪ್ರತಿ ಕೆ.ಜಿ.ಗೆ 94,200 ರೂ.ಗಳಿಂದ 94,000 ರೂ.ಗೆ ಇಳಿದಿದೆ ಎಂದು ಅಖಿಲ ಭಾರತ ಸರಾಫಾ ಅಸೋಸಿಯೇಷನ್ ತಿಳಿಸಿದೆ. ಏತನ್ಮಧ್ಯೆ, ಶೇಕಡಾ 99.5 ಶುದ್ಧತೆಯ ಚಿನ್ನವು 10 ಗ್ರಾಂಗೆ 200 ರೂ.ಗಳಷ್ಟು ಏರಿಕೆಯಾಗಿ ಸಾರ್ವಕಾಲಿಕ ಗರಿಷ್ಠ ಮಟ್ಟವಾದ 78,300 ರೂ.ಗೆ ತಲುಪಿದೆ. ಹಿಂದಿನ ಸೆಷನ್ನಲ್ಲಿ ಹಳದಿ ಲೋಹವು 10 ಗ್ರಾಂಗೆ 78,100 ರೂ. ಸ್ಟಾಕಿಸ್ಟ್ ಗಳು ಮತ್ತು ಚಿಲ್ಲರೆ ವ್ಯಾಪಾರಿಗಳಿಂದ ದೇಶೀಯ ಬೇಡಿಕೆಯಲ್ಲಿ ಹೆಚ್ಚಳವಾಗಿರುವುದೇ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ. ಇದಲ್ಲದೆ, ಈಕ್ವಿಟಿ ಮಾರುಕಟ್ಟೆಗಳಲ್ಲಿನ ಕುಸಿತವು ಹೂಡಿಕೆದಾರರು ಚಿನ್ನದಂತಹ ಸುರಕ್ಷಿತ ಸ್ವರ್ಗದ ಸ್ವತ್ತುಗಳತ್ತ ಸಾಗಿದ್ದರಿಂದ ಅಮೂಲ್ಯ ಲೋಹದ ಏರಿಕೆಗೆ ಸಹಾಯ ಮಾಡಿತು ಎಂದು…

Read More

ಹೊಸಪೇಟೆ: ರಾಜ್ಯದ ಕೆ ಎಸ್ ಆರ್ ಟಿ ಸಿ ಪ್ರಯಾಣಿಕರಿಗೆ ಐಶಾರಾಮಿ ಮತ್ತೊಂದು ಸುಖಕರ ಪ್ರಯಾಣವನ್ನು ಒದಗಿಸಿಕೊಡಲು ವೇದಿಕೆ ಸಿದ್ಧವಾಗಿದೆ. ಈ ತಿಂಗಳ ಕೊನೆಯ ವಾರದಲ್ಲಿ ಐರಾವತ ಕ್ಲಬ್ ಕ್ಲಾಸ್ 2.0 ಕೆ ಎಸ್ ಆರ್ ಟಿಸಿಗೆ ಸೇರ್ಪಡೆಯಾಗಲಿದ್ದು, ಆ ಬಳಿಕ ಶೀಘ್ರವೇ ರಸ್ತೆಗೆ ಇಳಿದು, ಸಾರಿಗೆ ಬಸ್ ಪ್ರಯಾಣಿಕರಿಗೆ ಹೈಟೆಕ್ ಪ್ರಯಾಣದ ಅನುಭವ ನೀಡಲಿದ್ದಾವೆ. ಇಂದು ಹೊಸಕೋಟೆ ಬಳಿಯಿರುವ ವೋಲ್ವೋ ಬಸ್ ತಯಾರಿಕಾ ಫ್ಯಾಕ್ಟರಿಗೆ ಭೇಟಿ ನೀಡಿ, ಬಸ್ಸನ್ನು ಪರಿವೀಕ್ಷಣೆಯನ್ನು ರಾಮಲಿಂಗಾ ರೆಡ್ಡಿ, ಸಾರಿಗೆ ಹಾಗೂ ಮುಜರಾಯಿ ಸಚಿವರು, ಅಧ್ಯಕ್ಷರು ಎಸ್ ಆರ್ ಶ್ರೀನಿವಾಸ್ (ವಾಸು), ಉಪಾಧ್ಯಕ್ಷರು ಮೊಹಮ್ಮದ್ ರಿಜ್ವಾನ್ ನವಾಬ್ ಮತ್ತು ವ್ಯವಸ್ಥಾಪಕ ನಿರ್ದೇಶಕರು ವಿ.ಅನ್ಬುಕುಮಾರ್, ಭಾಆಸೇ, ಕೆ ಎಸ್ ಆರ್ ಟಿ ಸಿ ರವರುಗಳು ನಡೆಸಿದರು. ಐರಾವತ 2.0 ಮಾದರಿಯ 20 ಬಸ್ಸುಗಳನ್ನು ಕೆ ಎಸ್ ಆರ್ ಟಿ ಸಿ ಯು ಈ ತಿಂಗಳ ಕೊನೆಯ ವಾರದಲ್ಲಿ ತನ್ನ ವಾಹನಗಳ ಸಮೂಹಕ್ಕೆ ಸೇರ್ಪಡೆ ಗೊಳಿಸಲಿದೆ. ಒಂದು ಬಸ್ಸಿನ ದರ…

Read More

ಮಡಿಕೇರಿ : ಮಾನವ ಸಂಪನ್ಮೂಲ ಇಲಾಖೆಯ ಅಡಿಯಲ್ಲಿ ನಡೆಯುವ ಜವಾಹರ ನವೋದಯ ವಿದ್ಯಾಲಯದಲ್ಲಿ 2025-26 ನೇ ಸಾಲಿಗೆ 9 ಮತ್ತು 11 ನೇ ತರಗತಿಗೆ ಖಾಲಿ ಇರುವ ಸ್ಥಾನಗಳ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳಿಂದ ಆನ್‍ಲೈನ್‍ನಲ್ಲಿ ಅರ್ಜಿಯನ್ನು ಈಗಾಗಲೇ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ಅಕ್ಟೋಬರ್, 30 ರವರೆಗೆ ವಿಸ್ತರಿಸಿದ್ದು, ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದು. 9ನೇ ತರಗತಿಗೆ ಅರ್ಜಿ ಸಲ್ಲಿಸುವವರು ಕೊಡಗು ಜಿಲ್ಲೆಯ ಸರ್ಕಾರಿ, ಅರೆ ಸರ್ಕಾರಿ, ಅನುದಾನಿತ, ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಪ್ರೌಢಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ ವಿದ್ಯಾರ್ಥಿನಿಯರು ಈ ಪರೀಕ್ಷೆ ಬರೆಯಲು ಅರ್ಹರಾಗಿರುತ್ತಾರೆ. ವಿದ್ಯಾರ್ಥಿಯ ಪಾಲಕರು ಕೊಡಗು ಜಿಲ್ಲೆಯ ನಿವಾಸಿಯಾಗಿದ್ದು, ವಿದ್ಯಾರ್ಥಿಯೂ ಕೂಡ ಕೊಡಗು ಜಿಲ್ಲೆಯಲ್ಲೇ ಓದುತ್ತಿರಬೇಕು. ಅಭ್ಯರ್ಥಿ ದಿನಾಂಕ 01/05/2010 ರಿಂದ 31/07/2012 ರೊಳಗೆ ಜನಿಸಿದವರಾಗಿರಬೇಕು. ಅರ್ಜಿ ಸಲ್ಲಿಸಲು ಅಕ್ಟೋಬರ್, 30 ಕೊನೆಯ ದಿನವಾಗಿದೆ. ಪರೀಕ್ಷೆಯು 2025 ರ ಫೆಬ್ರವರಿ, 08 ರಂದು ನಡೆಯಲಿದೆ. 11 ನೇ ತರಗತಿಗೆ…

Read More

ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ರಿಯೋ ಒಲಿಂಪಿಕ್ಸ್ 2016 ರಲ್ಲಿ ನಾಲ್ಕನೇ ಸ್ಥಾನ ಪಡೆದ ಭಾರತದ ಸ್ಟಾರ್ ಜಿಮ್ನಾಸ್ಟ್ ದೀಪಾ ಕರ್ಮಾಕರ್ ಜಿಮ್ನಾಸ್ಟಿಕ್ಸ್ಗೆ ನಿವೃತ್ತಿ ಘೋಷಿಸಿದ್ದಾರೆ. ಕಷ್ಟಕರವಾದ ಪ್ರೊಡುನೋವಾ ವಾಲ್ಟ್ ಮಾಡಲು ಹೆಸರುವಾಸಿಯಾದ ದೀಪಾ ಗಾಯದ ಸಮಸ್ಯೆಗಳಿಂದ ಬಳಲುತ್ತಿದ್ದರು ಮತ್ತು ಅವರ ದೇಹದ ಪರಿಸ್ಥಿತಿಯನ್ನು ಪರಿಗಣಿಸಿ, ಅವರು ನಿವೃತ್ತಿಯ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ದೀಪಾ ಸೋಷಿಯಲ್ ಮೀಡಿಯಾ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಅಲ್ಲಿ ಅವರು ಅಭಿಮಾನಿಗಳಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ ಮತ್ತು ಅವರ ನಿರ್ಧಾರದ ನಿಜವಾದ ಕಾರಣವನ್ನು ಬಹಿರಂಗಪಡಿಸಿದ್ದಾರೆ. ದೀಪಾ ಇತ್ತೀಚೆಗೆ ಏಷ್ಯನ್ ಚಾಂಪಿಯನ್ಶಿಪ್ ಗೆದ್ದ ಮೊದಲ ಭಾರತೀಯ ಜಿಮ್ನಾಸ್ಟ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಏಷ್ಯನ್ ಜಿಮ್ನಾಸ್ಟಿಕ್ಸ್ ಚಾಂಪಿಯನ್ಶಿಪ್ 2024ರಲ್ಲಿ ದೀಪಾ ಕರ್ಮಾಕರ್ ಏಷ್ಯನ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದರು. https://kannadanewsnow.com/kannada/breaking-former-minister-b-sriramulus-facebook-instagram-accounts-hacked/ https://kannadanewsnow.com/kannada/dissolve-assembly-and-go-for-elections-based-on-caste-census-report-hdk/

Read More

ಬಳ್ಳಾರಿ : ರೈಲ್ವೆ ಇಲಾಖೆಯಲ್ಲಿ ಒಟ್ಟು 12 ಲಕ್ಷ ಹುದ್ದೆಗಳಿದ್ದು, ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಈ ಪರೀಕ್ಷೆಯನ್ನು ಕನ್ನಡದಲ್ಲಿಯೇ ಬರೆಯಲು ಆದೇಶ ನೀಡಲಾಗಿದ್ದು, ನಮ್ಮ ರಾಜ್ಯದ ಯುವಕರು ಇದರ ಉಪಯೋಗ ಪಡೆದುಕೊಳ್ಳಬೇಕು, ಮುಂದಿನ ದಿನಗಳಲ್ಲಿಯೂ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಲಾಗುತ್ತದೆ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಎಂದು ತಿಳಿಸಿದ್ದಾರೆ. ಬಳ್ಳಾರಿ ಜಿಲ್ಲೆಯ ವಿವಿಧ ರೈಲ್ವೆ ಯೋಜನೆಗಳಿಗೆ ಸಂಬಂಧಿಸಿದಂತೆ ನೂತನ ಜಿಲ್ಲಾಡಳಿತ ಭವನದ ಕಚೇರಿ ಸಭಾಂಗಣದಲ್ಲಿ ರೈಲ್ವೆ ಇಲಾಖೆ ಅಧಿಕಾರಿಗಳು ಮತ್ತು ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆ ನಂತರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಬಳ್ಳಾರಿ-ಹೊಸಪೇಟೆ ಭಾಗದಲ್ಲಿ ವಿವಿಧ ರೈಲ್ವೆ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಇದಕ್ಕಾಗಿ 6,200 ಕೋಟಿ ರೂ. ವ್ಯಯಿಸಲಾಗುತ್ತಿದೆ. ಈಗಾಗಲೇ ವಿವಿಧ ಯೋಜನೆಗಳ ಸರ್ವೇ ಕಾರ್ಯ ಪೂರ್ಣಗೊಳಿಸಲಾಗಿದ್ದು, ಅವುಗಳ ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಿದರು. ಬಳ್ಳಾರಿ-ಚಿಕ್ಕಜಾಜೂರು ಮಾರ್ಗದ 185…

Read More