Author: kannadanewsnow09

ಬೆಂಗಳೂರು: “ಕಾಂಗ್ರೆಸ್ ಸರ್ಕಾರಗಳ ವಿವಿಧ ಜನಪರ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣವನ್ನು ಹಾಕುತ್ತಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಧೀಮಂತ ನಾಯಕರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು. “ನಮ್ಮ ಸರ್ಕಾರ ಗ್ಯಾರಂಟಿ ಯೋಜನೆ ನೀಡಿ ಎರಡು ವರ್ಷವಾಗಿದೆ. ನೀವು ಇದರ ಬಗ್ಗೆ ಜನರಿಗೆ ನೆನಪಿಸುತ್ತಿರಬೇಕು. ನಾವು ಈ ಯೋಜನೆ ಜಾರಿ ಮಾಡಿ ನಿಮ್ಮ ಕೈಗೆ ಅಸ್ತ್ರ ನೀಡಿದ್ದೇವೆ. ನೀವು ಇದನ್ನು ಸರಿಯಾಗಿ ಬಳಸಿಕೊಳ್ಳಬೇಕು. ರೈತರ ಉಚಿತ ವಿದ್ಯುತ್ ಗೆ 20 ಸಾವಿರ ಕೋಟಿ, ವಿವಿಧ ಪಿಂಚಣಿ ಯೋಜನೆಗೆ 10 ಸಾವಿರ ಕೋಟಿ, ಪಂಚ ಗ್ಯಾರಂಟಿ ಯೋಜನೆಗೆ 52 ಸಾವಿರ ಕೋಟಿ, ಸಮಾಜ ಕಲ್ಯಾಣ ಯೋಜನೆಗಳಿಗೆ ಸೇರಿ 1 ಲಕ್ಷ ಕೋಟಿಯಷ್ಟು ಹಣವನ್ನು…

Read More

ಬೆಂಗಳೂರು: ಅರಣ್ಯದೊಳಗೆ ಅತಿಕ್ರಮ ಪ್ರವೇಶ ಮಾಡಿ, ಶವ ಹೂತಿರುವುದು ತನಿಖೆಯಿಂದ ಸಾಬೀತಾದರೆ, ಅರಣ್ಯ ಸಂರಕ್ಷಣಾ ಕಾಯಿದೆಯ ರೀತ್ಯ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀಸಲು ಅರಣ್ಯದಲ್ಲಿ ಯಾವುದೇ ಅರಣ್ಯೇತರ ಚಟುವಟಿಕೆ ನಡೆಸಲು ಅವಕಾಶ ಇಲ್ಲ. ಅಭಿವೃದ್ಧಿ ಕಾರ್ಯಗಳಿಗೆ ಅಥವಾ ಸಾರ್ವಜನಿಕ ಉದ್ದೇಶಕ್ಕೆ ಅರಣ್ಯ ಭೂಮಿ ಬಳಕೆ ಮಾಡಬೇಕಾದಲ್ಲಿ ನಿಯಮಾನುಸಾರ ತೀರುವಳಿ ಅನುಮತಿ (ಎಫ್.ಸಿ.) ಪಡೆಯಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದರು. ಅರಣ್ಯದಲ್ಲಿ ಅಕ್ರಮವಾಗಿ ಶವ ಸಂಸ್ಕಾರ ಮಾಡಿರುವುದು ಈಗ ನಡೆಯುತ್ತಿರುವ ಎಸ್.ಐ.ಟಿ. ತನಿಖೆಯಿಂದ ಸಾಬೀತಾದರೆ ನಿಯಮಾನುಸಾರ ಕ್ರಮ ಆಗುತ್ತದೆ ಎಂದು ಸ್ಪಷ್ಟಪಡಿಸಿದರು. https://kannadanewsnow.com/kannada/sagar-in-hosanagar-mla-gopalakrishna-bellurus-development-program-is-a-prelude-various-works-at-a-cost-of-1-crore/ https://kannadanewsnow.com/kannada/on-the-21st-there-will-be-a-power-outage-in-this-area-of-bangalore/ https://kannadanewsnow.com/kannada/good-news-for-the-people-of-the-state-applications-invited-for-various-schemes-including-ganga-kalyana-swavalambi-sarathi/

Read More

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆ.ವಿ. ಆಸ್ಟಿನ್ ಟೌನ್ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 21.08.2025 (ಗುರುವಾರ) ರಂದು ಬೆಳಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 03:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ವಿಕ್ಟೋರಿಯ ಲೇಔಟ್, ಪಾಮ್ ಗ್ರೂವು ರೋಡ್, ಬಾಲಾಜಿ ಥಿಯೆಟರ್, ಅಗ್ರಂ ವಿವೆಕನಗರ,ಸಣ್ಣೆಣಹಳ್ಳಿ, ವೊನ್ನರ್ ಪೇಟೆ, ಆಂಜನೆಯ ಟೆಂಪಲ್ ಸ್ಟ್ರೀಟ್, ಕೆಎಸ್ಆರ್ಪಿ ಕ್ವಾಟ್ರಸ್, ಲಿಂಡನ್ ಸ್ಟ್ರೀಟ್, ಪಾಮ್ ಗ್ರೂವು ರೋಡ್, ಕ್ಷೇವಿಯರ್ ಲೇಔಟ್, ಯಲಗುಂಟೆ ಪಾಳ್ಯಮ್, ಏರ್ ಫೋರ್ಸ್, ಲೈಫ್ ಸ್ಟೈಲ್ ಕ್ಯಾಂಬ್ಲ್ ರೋಡ್ ಜಂಕ್ಷನ್, ರಿಚ್ಮಂಡ್ ರೋಡ್, ರುದ್ರಪ್ಪ ಗಾರ್ಡನ್, ಎಮ್ ಜಿ ಗಾರ್ಡನ್, ಆಸ್ಟಿನ್ಟೌನ್ ನೀಲಸಂದ್ರ, ಬಜಾರ್ಸ್ಟ್ರೀಟ್, ಆರ್ ಕೆ ಗಾರ್ಡನ್, ಬೆಂಗಳೂರು ಫರ್ನಿಚರ್ ,ರೋಸ್ ಗಾರ್ಡನ್, ಒ.ಆರ್.ಸಿ ರಸ್ತೆ, ಮತ್ತು ಸುತ್ತಮುತ್ತಲಿನ ಸ್ಥಳಗಳಲ್ಲಿ ಕರೆಂಟ್ ಇರೋದಿಲ್ಲ. 66/11ಕೆವಿ ಪೂರ್ವಾಂಕರ ಪಾಮ್ ಬೀಚ್ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 21.08.2025 (ಗುರುವಾರ) ರಂದು ಬೆಳಗ್ಗೆ 11:00 ಗಂಟೆಯಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ…

Read More

ವಿಧಾನಸಭೆ : ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನಲ್ಲಿ 6 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 35 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಪ್ರಸ್ತುತ ಜಿಲ್ಲಾಧಿಕಾರಿಗಳ ಅನುಮೋದನೆಯೊಂದಿಗೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಹೊನ್ನಾಳಿ ವಿಧಾನಸಭಾ ಕ್ಷೇತ್ರದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಕಳೆದ 2 ವರ್ಷಗಳಿಂದ ನೇಮಕಾತಿ ಮಾಡದೇ ಇರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ ಎಂದು ಶಾಸಕ ಡಿ.ಜಿ.ಶಾಂತನಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಖಾಲಿ ಇರುವ ಅಂಗನವಾಡಿ ಕೇಂದ್ರಗಳಲ್ಲಿ ದೈನಂದಿನ ಚಟುವಟಿಕೆಗಳಿಗೆ ಆಡಚಣೆಯಾಗದಂತೆ ಹತ್ತಿರದ ಅಂಗನವಾಡಿ ಕೇಂದ್ರದ ಕಾರ್ಯಕರ್ತೆಗೆ ಪ್ರಭಾರ ವಹಿಸಿ ಕರ್ತವ್ಯ ನಿರ್ವಹಿಸುವಂತೆ ಕ್ರಮವಹಿಸಲಾಗಿದೆ ಎಂದರು. ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ನೇಮಕಾತಿಗೆ ಅರ್ಜಿ ಸಲ್ಲಿಸಲು ರಾಜ್ಯಾದ್ಯಂತ ಅಭ್ಯರ್ಥಿಗಳಿಗೆ ತಾಂತ್ರಿಕ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಅಪೂರ್ಣಗೊಂಡ ಅರ್ಜಿಗಳನ್ನು ಪೂರ್ಣಗೊಳಿಸಲು ಸಮಯಾವಕಾಶ ನೀಡಲಾಗಿರುತ್ತದೆ. ಈ ಕುರಿತಂತೆ ಜಿಲ್ಲಾ ಮಟ್ಟದ ಆಯ್ಕೆ ಸಮಿತಿಗೂ ಕಾಲಕಾಲಕ್ಕೆ ನಿರ್ದೇಶನ ನೀಡಲಾಗಿದೆ ಎಂದರು.…

Read More

ವಿಧಾನಸಭೆ: ಗ್ರಾಮೀಣ ಪುನರ್ವಸತಿ ಯೋಜನೆಯಡಿ ಪುನರ್ವಸತಿ ಕಾರ್ಯಕರ್ತರನ್ನು ನಿಯಮಾನುಸಾರ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಂಡಿದ್ದು, ಅವರನ್ನು ಖಾಯಂಗೊಳಿಸಲು ನಿಯಮಗಳಲ್ಲಿ ಅವಕಾಶವಿರುವುದಿಲ್ಲ. ಅವರ ಗೌರವಧನವನ್ನು ರೂ.1,000 ಹೆಚ್ಚಳ ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರು ಹೇಳಿದರು. ವಿಧಾನಸೌಧದಲ್ಲಿ ನಡೆಯುತ್ತಿರುವ ಮುಂಗಾರು ಅಧಿವೇಶನದ 7ನೇ ದಿನವಾದ ಬುಧವಾರ ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಮೈಸೂರಿನ ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್.ಶ್ರೀವತ್ಸ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 9 ಸಾವಿರ ರೂಪಾಯಿಯಿಂದ 10 ಸಾವಿರ ರೂಪಾಯಿಗಳಿಗೆ ಹಾಗೂ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 15 ಸಾವಿರ ರೂಪಾಯಿಯಿಂದ 16 ಸಾವಿರ ರೂಪಾಯಿಗೆ ಹೆಚ್ಚಿಸಲಾಗಿದೆ ಎಂದರು. ಪ್ರಸ್ತುತ 5601 ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು, 450 ನಗರ ಪುನರ್ವಸತಿ ಕಾರ್ಯಕರ್ತರು ಹಾಗೂ 172 ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಸಚಿವರ ಮಾಹಿತಿ ನೀಡಿದರು. ಗ್ರಾಮೀಣ ಪುನರ್ವಸತಿ ಯೋಜನೆಯಡಿಯಲ್ಲಿ…

Read More

ಬೆಂಗಳೂರು : “ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಒಳ ಮೀಸಲಾತಿ ವಿಚಾರದಲ್ಲಿ ಎಲ್ಲಾ ಸಮುದಾಯದವರಿಗೂ ಸಮಾನತೆ ನೀಡಿ, ತೃಪ್ತಿಯಾಗುವಂತೆ ನಮ್ಮ ಸರ್ಕಾರ ತೀರ್ಮಾನ ಮಾಡಿದೆ. ಇದು ದೇವರಾಜ ಅರಸು ಅವರಿಗೆ ನಮ್ಮ ಸರ್ಕಾರ ಸಲ್ಲಿಸುತ್ತಿರುವ ನಮನ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಜನ್ಮದಿನಾಚರಣೆ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ಇಬ್ಬರೂ ನಾಯಕರ ಭಾವಚಿತ್ರಕ್ಕೆ ಬುಧವಾರ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು. “ನ್ಯಾಯಮೂರ್ತಿ ಸದಾಶಿವ ಆಯೋಗ ರಚನೆಯಾಗಿ 25 ವರ್ಷವಾಗಿದೆ. ನಮ್ಮ ಸರ್ಕಾರ ಸುದೀರ್ಘ ಚರ್ಚೆ ಮಾಡಿ ಪರಿಶಿಷ್ಟ ಸಮುದಾಯದವರ ಒಳಮಿಸಲಾತಿ ವಿಚಾರಕ್ಕೆ ಒಂದು ಸ್ವರೂಪ ನೀಡಿದೆ. ಪರಿಶಿಷ್ಟ ಜಾತಿಯ ಎಡಗೈ ಹಾಗೂ ಬಲಗೈನವರು ಸಮಾಧಾನವಾಗಿ ಇದನ್ನು ಒಪ್ಪಿಕೊಂಡಿದ್ದಾರೆ. ಎಲ್ಲರಿಗೂ ನ್ಯಾಯ ಒದಗಿಸುವ ಕೆಲಸವನ್ನು ಮಾಡಿದ್ದೇವೆ. ಸಚಿವ ಸಂಪುಟ ಸಭೆಯಲ್ಲಿ ನಿನ್ನೆ ಕೈಗೊಂಡ ತೀರ್ಮಾನ ಐತಿಹಾಸಿಕವಾದದ್ದು. ಈ ಬಗ್ಗೆ ಮುಖ್ಯಮಂತ್ರಿಗಳು ಸದನದಲ್ಲಿ ಘೋಷಣೆ ಮಾಡಲಿದ್ದಾರೆ. ನಾನು 1989…

Read More

ಧಾರವಾಡ: ಸಿಎಂ ಸಿದ್ಧರಾಮಯ್ಯ ಅವರ ಆರ್ಥಿಕ ಸಲಹೆಗಾರ ಹಾಗೂ ಶಾಸಕ ಬಸವರಾಜ ರಾಯರೆಡ್ಡಿ ಅವರ ಫಾರ್ಮ್ ಹೌಸಿನಲ್ಲಿ ದರೋಡೆಗೆ ಯತ್ನಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ 15 ದರೋಡೆಕೋರರನ್ನು ಪೊಲೀಸರು ಬಂಧಿಸಿದ್ದಾರೆ. ಧಾರವಾಡ ತಾಲ್ಲೂಕಿನ ದಡ್ಡಿಕಮಲಾಪುರ ಗ್ರಾಮದ ಬಳಿಯಲ್ಲಿ ಶಾಸಕ ಬಸವರಾಜ ರಾಯರೆಡ್ಡಿ ಅವರಿಗೆ ಸೇರಿದಂತ ಮಮತಾ ಎಂಬ ಹೆಸರಿನಡಿ ಫಾರ್ಮ್ ಹೌಸ್ ಇದೆ. ಕಳೆದ ಆಗಸ್ಟ್.13ರಂದು ಸುಮಾರು 8ರಿಂದ 10 ಜನರ ಗುಂಪು ಫಾರ್ಮ್ ಪೌಸ್ ಗೆ ನುಗ್ಗಿ ಅಲ್ಲಿ ಮಲಗಿದ್ದಂತ ಕಣ್ಣಪ್ಪ ಜಡ್ಲಿ, ಹನುಮಂತ ಧನದಾವರ್, ಅಶೋಕ ಪೋತಲಿ, ಲಕ್ಷ್ಮಣ ಚಂದರಗಿ ಎಂಬುವರಿಗೆ ಚಾಕು ತೋರಿಸಿ ಹೆದರಿಸಿ, ಕೈಕಾಲು ಕಟ್ಟಿ ಹಾಕಿ ಅವರ ಬಳಿಯಲ್ಲಿನ ಮೊಬೈಲ್ ಪೋನ್, ಇತರೆ ವಸ್ತುಗಳನ್ನು ದರೋಡೆ ಮಾಡಿದ್ದರು. ಈ ವಿಷಯ ತಿಳಿದು ಅದೇ ದಿನ ಎಸ್ಪಿ ಗುಂಜನ್ ಆರ್ಯ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ, ದರೋಡೆಕೋರರ ಬಂಧನಕ್ಕೆ 8 ತಂಡವನ್ನು ರಚಿಸಿದ್ದರು. ಈ ತಂಡವು ತನಿಖೆ ನಡೆಸಿ 15 ಜನ ಆರೋಪಿಗಳನ್ನು…

Read More

ನವದೆಹಲಿ: ಗೃಹ ಸಚಿವ ಅಮಿತ್ ಶಾ ಅವರು ಲೋಕಸಭೆಯಲ್ಲಿ ಸರ್ಕಾರದ ಮೂರು ಪ್ರಮುಖ ಮಸೂದೆಗಳನ್ನು ಮಂಡಿಸಿದ್ದಾರೆ. ಈ ಮಸೂದೆಗಳಲ್ಲಿ ಪಿಎಂ, ಸಿಎಂ, ಸಚಿವರನ್ನು ಪದಚ್ಯುತಿಗೊಳಿಸುವಂತ ಮಸೂದೆ ಸೇರಿಯೂ ಸೇರಿದೆ. ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಲೋಕಸಭೆಯಲ್ಲಿ ಸಂವಿಧಾನ (ನೂರ ಮೂವತ್ತನೇ ತಿದ್ದುಪಡಿ) ಮಸೂದೆ, 2025, ಕೇಂದ್ರಾಡಳಿತ ಪ್ರದೇಶಗಳ ಸರ್ಕಾರ (ತಿದ್ದುಪಡಿ) ಮಸೂದೆ, 2025, ಜಮ್ಮು ಮತ್ತು ಕಾಶ್ಮೀರ ಪುನರ್ವಿಂಗಡಣೆ (ತಿದ್ದುಪಡಿ) ಮಸೂದೆ, 2025 ಅನ್ನು ಮಂಡಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಡಿಸಿದಂತ ಪಿಎಂ, ಸಿಎಂ, ಸಚಿವರ ವಿರುದ್ಧದ ಪದಚ್ಯುತಿಗೊಳಿಸುವಂತ ಮಸೂದೆಗೆ ವಿಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಅಲ್ಲದೇ ಲೋಕಸಭೆಯಲ್ಲಿ ಗದ್ದಲ, ಕೋಲಾಹಲ ಕೂಡ ಉಂಟಾಯಿತು. ಹೀಗಾಗಿ ಲೋಕಸಭೆಯ ಸದನವನ್ನು ಸ್ಪೀಕರ್ ಮಧ್ಯಾಹ್ನ 3 ಗಂಟೆಗೆ ಮುಂದೂಡಿಕೆ ಮಾಡಿದ್ದಾರೆ. https://twitter.com/ANI/status/1958085031559151815 https://kannadanewsnow.com/kannada/sagar-in-hosanagar-mla-gopalakrishna-bellurus-development-program-is-a-prelude-various-works-at-a-cost-of-1-crore/ https://kannadanewsnow.com/kannada/consideration-to-provide-special-concession-for-the-education-of-orphaned-children-minister-lakshmi-hebbalkar/

Read More

ವಿಧಾನಸಭೆ: ಅನಾಥಾಶ್ರಮಗಳಲ್ಲಿ ಇರುವ ಮಕ್ಕಳಿಗೆ ಪದವಿ ಪೂರ್ವ ಶಿಕ್ಷಣದವರೆಗೂ ದಾಖಲಾತಿ ಬಗ್ಗೆ ಯಾವುದೇ ಸಮಸ್ಯೆ ಇರುವುದಿಲ್ಲ. ಉನ್ನತ ಶಿಕ್ಷಣಕ್ಕೆ ದಾಖಲಾಗುವ ಸಂದರ್ಭದಲ್ಲಿ ಸಾಮಾನ್ಯವರ್ಗದ ಇತರ ಮಕ್ಕಳಂತೆ ಈ ಮಕ್ಕಳನ್ನು ದಾಖಲಾತಿ ಮಾಡಲಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಇಂಥ ಮಕ್ಕಳಿಗೆ ವಿಶೇಷ ರಿಯಾಯಿತಿ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕರ್ನಾಟಕದಲ್ಲಿ 108 ಸರ್ಕಾರಿ, 54 ಅನುದಾನಿತ ಮತ್ತು 550 ಖಾಸಗಿ ಒಟ್ಟು 712 ಮಕ್ಕಳ ಪಾಲನಾ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, 712 ಸಂಸ್ಥೆಗಳಲ್ಲಿ ಒಟ್ಟು ಮಕ್ಕಳ ಸಾಮರ್ಥ್ಯ 38,975 ಇದ್ದು, ಈ ಪೈಕಿ 17048 (7874 ಹೆಣ್ಣು, 9175 ಗಂಡು) ಮಕ್ಕಳು ದಾಖಲಾಗಿರುತ್ತಾರೆ ಎಂದು ಮಾಹಿತಿ ನೀಡಿದರು. ಮಕ್ಕಳ ಪಾಲನಾ ಸಂಸ್ಥೆಗಳಿಗೆ ಅನಾಥ, ನಿರ್ಗತಿಕ ಹಾಗೂ ಒಪ್ಪಿಸಲ್ಪಟ್ಟ ಮಕ್ಕಳು, ಮಕ್ಕಳ ಕಲ್ಯಾಣ ಸಮಿತಿಯ ಆದೇಶದಂತೆ ದಾಖಲಾಗುತ್ತಿದ್ದು, ಕೆಲವು ಮಕ್ಕಳಿಗೆ ಸಂಬಂಧಿಸಿದಂತೆ ತಮ್ಮ ಕೌಟುಂಬಿಕ ಹಿನ್ನೆಲೆ…

Read More

ಶಿವಮೊಗ್ಗ: ಇತ್ತೀಚೆಗೆ ಪ್ರತಿಷ್ಠಿತ ಮ್ಯಾಗಜಿನ್ ಔಟ್ ಲುಕ್- ಐಕೇರ್ ಸಂಸ್ಥೆ ಬಿಡುಗಡೆ ಮಾಡಿರುವ ದೇಶದ ಸಾರ್ವಜನಿಕ ವಿಶ್ವವಿದ್ಯಾಲಯದ ರ್ಯಾಂಕಿಂಗ್ ನಲ್ಲಿ ಕುವೆಂಪು ವಿವಿ 30ನೇ ಶ್ರೇಣಿ ಪಡೆದು ಮಹತ್ವದ ಸಾಧನೆ ಮಾಡಿದೆ. ಕಳೆದ ತಿಂಗಳು ನ್ಯಾಕ್ ನಿಂದ ‘ಎ’ ಶ್ರೇಣಿ ಪಡೆದು ಹೆಮ್ಮೆ ಮೂಡಿಸಿದ್ದ ವಿವಿ, ಮತ್ತೆ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆಯುವ ಸಾಧನೆ ಮಾಡಿದೆ. ಐದು ಮಾನದಂಡಗಳಲ್ಲಿ ಸಾರ್ವಜನಿಕ ವಿಶ್ವವಿದ್ಯಾಲಯಗಳನ್ನು 1000 ಅಂಕಗಳಿಗೆ ಮೌಲ್ಯಮಾಪನ ಮಾಡಿರುವ ರ್ಯಾಂಕಿಂಗ್ ಶೈಕ್ಷಣಿಕ ಮತ್ತು ಸಂಶೋಧನಾ ಚಡುವಟಿಕೆಗಳಿಗೆ 400 ಅಂಕಗಳು, ಕೈಗಾರಿಕಾ ವಿನಿಮಯಕ್ಕೆ 200 ಅಂಕಗಳು, ಮೂಲಭೂತ ಸೌಕರ್ಯಗಳಿಗೆ 150 ಅಂಕಗಳು, ಆಡಳಿತ ಮತ್ತು ವಿಸ್ತರಣೆಗೆ 150 ಅಂಕಗಳು ಹಾಗೂ ವೈವಿಧ್ಯತೆ ಚಟುವಟಿಕೆಗಳಿಗೆ 100 ಅಂಕಗಳನ್ನು ನಿಗದಿಗೊಳಿಸಲಾಗಿದೆ. ಕುವೆಂಪು ವಿವಿ ಒಟ್ಟು 862.25 ಅಂಕಗಳೊಂದಿಗೆ 30ನೇ ಸ್ಥಾನ ಪಡೆದಿದೆ. ಉಳಿದಂತೆ ಕರ್ನಾಟಕದ ವಿಶ್ವೇಶ್ವರಾಯ ತಾಂತ್ರಿಕ ವಿಶ್ವವಿದ್ಯಾಲಯ 6ನೇ ಸ್ಥಾನ ಪಡೆದಿದ್ದರೆ, ಮೈಸೂರು ವಿವಿ 08ನೇ ಸ್ಥಾನ ಮತ್ತು ಬೆಂಗಳೂರು ವಿವಿ 24ನೇ ಸ್ಥಾನ ಮತ್ತು ಮಂಗಳೂರು…

Read More