Author: kannadanewsnow09

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಒಂದು ವರ್ಷದಲ್ಲಿ ಖಜಾನೆಯನ್ನು ಸಂಪೂರ್ಣ ಖಾಲಿ ಮಾಡಿದೆ. ರಾಜ್ಯ ಕೊಲೆಗಡುಕರ ಸ್ವರ್ಗವಾಗಿ ಬದಲಾಗಿದೆ. ಇಂತಹ ಶೂನ್ಯ ಸಾಧನೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ರಾಜ್ಯಪಾಲರು ಈ ಸರ್ಕಾರವನ್ನು ವಜಾ ಮಾಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರ್ಕಾರದ ಅವಧಿ ಮುಗಿಯತೆಂಬ ಕಾರಣಕ್ಕೆ ಜನರಿಗೆ ಧನ್ಯವಾದ ತಿಳಿಸಿದ್ದಾರೆಯೋ ಅಥವಾ ಕಾನೂನು ಸುವ್ಯವಸ್ಥೆ ಹಾಳು ಮಾಡಿರುವ ಕೊಲೆಗಾರರಿಗೆ ಧನ್ಯವಾದ ಹೇಳಿದ್ದಾರೆಯೋ ಗೊತ್ತಿಲ್ಲ. ನೇಹಾ, ಅಂಜಲಿ ಕೊಲೆಯಾದರು. ಇನ್ನು ಯಾವ ಹೆಣ್ಣುಮಕ್ಕಳು ಕೊಲೆಯಾಗುತ್ತಾರೆ ಎಂಬ ಆತಂಕವಿದೆ. ಹೆಣ್ಣುಮಕ್ಕಳು ಕಾಲೇಜಿಗೆ ಹೋದರೆ ಗ್ಯಾರಂಟಿ ಇಲ್ಲ, ಮನೆಯಿಂದ ಆಚೆಬಂದರೆ ಗ್ಯಾರಂಟಿ ಇಲ್ಲ. ಸರ್ಕಾರ ಎಷ್ಟು ಉಚಿತ ನೀಡಿದರೂ ಬದುಕುವ ಗ್ಯಾರಂಟಿಯೇ ಇಲ್ಲ ಎಂದು ಟೀಕಿಸಿದರು. ಅಂಜಲಿಯ ಕೊಲೆಯ ಹಿಂದೆ ಪೊಲೀಸರ ಲೋಪವಿದೆ ಎಂದು ಗೃಹ ಸಚಿವರೇ ಹೇಳಿದ್ದಾರೆ ಎಂದ ಮೇಲೆ ಸರ್ಕಾರ ಯಾಕೆ ಬದುಕಿರಬೇಕು? ಹಿಂದೂಗಳ ಮಾರಣಹೋಮವಾದರೂ ಇಲ್ಲಿ ಕೇಳುವವರಿಲ್ಲ. ಬೆಂಗಳೂರಿನಲ್ಲಿ…

Read More

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀವ ವೀಡಿಯೋ ಪ್ರಕರಣದ ಬಳಿಕ, ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದಾರೆ. ಈ ಪ್ರಕರಣ ಬೆಳಕಿಗೆ ಬಂದ ನಂತ್ರ ಮನನೊಂದಿದ್ದಂತ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು, ತಮ್ಮ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರು ಎಂಬ ಸ್ಪೋಟ ಮಾಹಿತಿಯನ್ನು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಬಹಿರಂಗ ಪಡಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ನಮ್ಮ ಕುಟುಂಬವನ್ನು ಉದ್ದೇಶ ಪೂರ್ವಕವಾಗಿ ಟಾರ್ಗೆಟ್ ಮಾಡಲಾಗುತ್ತಿದೆ. ನಮ್ಮ ಕುಟುಂಬವನ್ನು ಮುಗಿಸೋದಕ್ಕೆ ಈ ರೀತಿ ಷಡ್ಯಂತ್ರ ನಡೆಸಲಾಗುತ್ತಿದೆ. ಪ್ರಜ್ವಲ್ ರೇವಣ್ಣ ಪ್ರಕರಣದಿಂದ ಮನನೊಂದು, ಹೆಚ್.ಡಿ ದೇವೇಗೌಡರು ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಲು ಹೊರಟಿದ್ದರು ಎಂಬ ಅಂಶವನ್ನು ಬಿಚ್ಚಿಟ್ಟಿದರು. ನಮ್ಮ ಕುಟುಂಬದವರ ಎಲ್ಲಾ ಪೋನ್ ಕದ್ದಾಲಿಕೆ ಮಾಡಲಾಗುತ್ತಿದೆ. ನಾನು ಅಕ್ರಮದ ಬಗ್ಗೆ ಮಾತನಾಡುತ್ತೇನೆ ಎಂಬುದಾಗಿ ನನ್ನ ಮೇಲೂ ಷಡ್ಯಂತ್ರ ರೂಪಿಸಲಾಗಿದೆ. ನನ್ನ ಜೊತೆಗೆ ಇದ್ದಂತ ಸುಮಾರು 45 ಜನರ ಪೋನ್ ಕದ್ದಾಲಿಕೆ ಮಾಡಲಾಗುತ್ತಿದೆ ಎಂದರು. ಈ ಎಲ್ಲಾ ಘಟನೆ, ಪ್ರಕರಣಗಳಿಂದ ಮಾಜಿ…

Read More

ಬೆಂಗಳೂರು: ದಿನಾಂಕ 17-06-2024ರಂದು ಅವಧಿ ಮುಕ್ತಾಯಗೊಳ್ಳುತ್ತಿರುವಂತ ಕರ್ನಾಟಕ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ಕೇಂದ್ರ ಚುನಾವಣಾ ಆಯೋಗದಿಂದ ಚುನಾವಣೆ ಘೋಷಣೆ ಮಾಡಲಾಗಿದೆ. ಜೂನ್.13ರಂದು ಮತದಾನ ನಡೆದು, ಅಂದೇ ಮತಏಣಿಕೆ ಕಾರ್ಯ ನಡೆಸಿ, ಫಲಿತಾಂಶ ಘೋಷಣೆ ಮಾಡಲಾಗುತ್ತಿದೆ. ಈ ಕುರಿತಂತೆ ಕೇಂದ್ರ ಚುನಾವಣಾ ಆಯೋಗದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ವಿಧಾನ ಪರಿಷತ್ತಿನ 11 ಸದಸ್ಯರ ಅಧಿಕಾರಾವಧಿಯು 17.06.2024 ರಂದು ನಿವೃತ್ತಿಯಾಗಲಿದ್ದು, ಈ ಕೆಳಗಿನ ವಿವರಗಳ ಪ್ರಕಾರ ದಿನಾಂಕ 17.06.2024 ರಂದು ಕೊನೆಗೊಳ್ಳಲಿದೆ ಎಂದು ತಿಳಿಸಿದೆ. ದಿನಾಂಕ 17-06-2024ರಂದು ವಿಧಾನ ಪರಿಷತ್ತಿನ ಸದಸ್ಯರಾದಂತ ಅರವಿಂದ್ ಕುಮಾರ್ ಅರಳಿ, ಎನ್ ಎಸ್ ಬೋಸರಾಜು, ಕೆ ಗೋವಿಂದರಾಜ್, ಡಾ.ತೇಜಸ್ವಿನಿ ಗೌಡ, ಮುನಿರಾಜು ಗೌಡ ಪಿಎಂ, ಕೆ.ಪಿ ನಂಜುಂಡಿ, ಬಿಎಂ ಫಾರೂಕ್, ರಘುನಾಥ್ ಮಲ್ಕಾಪುರೆ, ಎನ್ ರವಿಕುಮಾರ್, ಎಸ್ ರುದ್ರೇಗೌಡ ಹಾಗೂ ಕೆ ಹರೀಶ್ ಕುಮಾರ್ ಅವರ ಅವಧಿ ಮುಗಿಯಲಿದೆ. ಈ 11 ಕರ್ನಾಟಕ ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆಗಾಗಿ ಅಧಿಸೂಚನೆ ದಿನಾಂಕ 27-04-2024ರಂದು ಹೊರಡಿಸಲಾಗುತ್ತದೆ.…

Read More

ಬೆಂಗಳೂರು: ವಿವಾದಾದತ್ಮಕ ಒಪ್ಪಂದಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮರುಜೀವ ನೀಡಲು ಮುಂದಾಗಿದ್ದು, ಏಳು ಬಿಡಿಎ ಕಾಂಪ್ಲೆಕ್ಸ್‌ಗಳನ್ನು ಶಾಪಿಂಗ್ ಮಾಲ್‌ಗಳನ್ನಾಗಿ ಪರಿವರ್ತಿಸಲು ಮುಂದಾಗಿದೆ. ಬಿಡಿಎ ವಾಣಿಜ್ಯ ಸಂಕೀರ್ಣಗಳನ್ನು ಹೊಡೆದು ಮಾಲ್ ಕಟ್ಟುವ ಬಿಡಿಎ ನೀತಿಯ ವಿರುದ್ಧ ಆಮ್ ಆದ್ಮಿ ಪಾರ್ಟಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ವೀಣಾ ಸೆರಾವು ನೇತೃತ್ವದಲ್ಲಿ ಕೋರಮಂಗಲದ ಬಿಡಿಎ ಕಾಂಪ್ಲೆಕ್ಸ್‌ಗೆ ಭೇಟಿ ನೀಡಿದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಬಿಡಿಎ ನಿರ್ಧಾರದ ವಿರುದ್ಧ ತೀವ್ರ ವಿರೋಧ ವ್ಯಕ್ತಪಡಿಸಿದರು. ಬಳಿಕ ಮಾತನಾಡಿದ ವೀಣಾ ಸೆರಾವು, ಒಂದು ಪ್ರದೇಶಕ್ಕೆ ಒಂದು ಮಾಲ್ ಸಾಕು. ಯಶಸ್ವಿಯಾಗಿ ನಡೆಯುತ್ತಿರುವ ಬಿಡಿಎ ಕಾಂಪ್ಲೆಕ್ಸ್ ಅನ್ನು ಒಡೆಯುವುದು ಸರಿಯಲ್ಲ. ಈಗಾಗಲೇ ಸಾಕಷ್ಟು ಸಂಚಾರ ದಟ್ಟಣೆಯಿಂದ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗಿದೆ. ಈ ಪ್ರದೇಶಕ್ಕೆ ಸರಿಯಾದ ಫ್ಲೈಓವರ್ ಮತ್ತು ಮೆಟ್ರೋ ಸಂಪರ್ಕವಿಲ್ಲ. ಹೀಗಿರುವಾಗ ಸರ್ಕಾರಿ ಆಸ್ತಿಯನ್ನು ಖಾಸಗೀಕರಣ ಮಾಡುತ್ತಿರುವ ನಿರ್ಧಾರ ಸರಿಯಲ್ಲ. ಮರಗಳನ್ನೆಲ್ಲ ಕಡಿಯಲಾಗಿದೆ. ಇವತ್ತು ಕಾಂಕ್ರೀಟ್ ಕಾಡಾಗಿ ಬೆಂಗಳೂರು ಮಾರ್ಪಟ್ಟಿದೆ ಎಂದರು. ಬ್ರಾಂಡ್…

Read More

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ಕೇಂದ್ರ ಚುನಾವಣಾ ಆಯೋಗದಿಂದ ಚುನಾವಣೆ ಘೋಷಣೆ ಮಾಡಲಾಗಿದೆ. ಜೂನ್.13ರಂದು ಮತದಾನ ನಡೆದು, ಅಂದೇ ಮತಏಣಿಕೆ ಕಾರ್ಯ ನಡೆಸಿ, ಫಲಿತಾಂಶ ಘೋಷಣೆ ಮಾಡಲಾಗುತ್ತಿದೆ. ಈ ಕುರಿತಂತೆ ಕೇಂದ್ರ ಚುನಾವಣಾ ಆಯೋಗದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ವಿಧಾನ ಪರಿಷತ್ತಿನ 11 ಸದಸ್ಯರ ಅಧಿಕಾರಾವಧಿಯು 17.06.2024 ರಂದು ನಿವೃತ್ತಿಯಾಗಲಿದ್ದು, ಈ ಕೆಳಗಿನ ವಿವರಗಳ ಪ್ರಕಾರ ದಿನಾಂಕ 17.06.2024 ರಂದು ಕೊನೆಗೊಳ್ಳಲಿದೆ ಎಂದಿದೆ. ದಿನಾಂಕ 17-06-2024ರಂದು ವಿಧಾನ ಪರಿಷತ್ತಿನ ಸದಸ್ಯರಾದಂತ ಅರವಿಂದ್ ಕುಮಾರ್ ಅರಳಿ, ಎನ್ ಎಸ್ ಬೋಸರಾಜು, ಕೆ ಗೋವಿಂದರಾಜ್, ಡಾ.ತೇಜಸ್ವಿನಿ ಗೌಡ, ಮುನಿರಾಜು ಗೌಡ ಪಿಎಂ, ಕೆ.ಪಿ ನಂಜುಂಡಿ, ಬಿಎಂ ಫಾರೂಕ್, ರಘುನಾಥ್ ಮಲ್ಕಾಪುರೆ, ಎನ್ ರವಿಕುಮಾರ್, ಎಸ್ ರುದ್ರೇಗೌಡ ಹಾಗೂ ಕೆ ಹರೀಶ್ ಕುಮಾರ್ ಅವರ ಅವಧಿ ಮುಗಿಯಲಿದೆ ಎಂದಿದೆ. ಈ 11 ಕರ್ನಾಟಕ ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆಗಾಗಿ ಅಧಿಸೂಚನೆ ದಿನಾಂಕ 27-04-2024ರಂದು ಹೊರಡಿಸಲಾಗುತ್ತದೆ. ದಿನಾಂಕ 03-06-2024 ನಾಮಪತ್ರ ಸಲ್ಲಿಸಲು…

Read More

ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣ ಸಂಬಂಧ ವಿದೇಶದಿಂದ ಪ್ರಜ್ವಲ್ ಬಂದು ತನಿಖೆಗೆ ಸಹಕಾರ ನೀಡಬೇಕು. ಪ್ರಜ್ವಲ್ ರೇವಣ್ಣ ವಿದೇಶದಿಂದ ಬಂದು ಪೊಲೀಸರಿಗೆ ಶರಣಾಗಬೇಕು. ಎಷ್ಟು ದಿನ ಕಳ್ಳ ಪೊಲೀಸ್ ಆಟ ಆಡ್ತೀಯಾ? ಬಂದು ಶರಣಾಗು ಎಂಬುದಾಗಿ ಪ್ರಜ್ವಲ್ ರೇವಣ್ಣಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮನವಿ ಮಾಡಿದರು. ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಅಶ್ಲೀಲ ವೀಡಿಯೋ ಸಂಬಂಧ ಪ್ರಜ್ವಲ್ ರೇವಣ್ಣ ವಿದೇಶದಿಂದ ತನಿಖೆಗೆ ಸಹಕಾರ ನೀಡಬೇಕು. ನಾನು ಮಾಧ್ಯಮಗಳ ಮೂಲಕ ಮನವಿ ಮಾಡುತ್ತೇನೆ. ಈ ನೆಲದ ಕಾನೂನು ಇದೆ. ಯಾಕೆ ವಿದೇಶದಲ್ಲಿ ಇರಬೇಕು? ಎಷ್ಟು ದಿನ ಕಳ್ಳ ಪೋಲೀಸ್ ಆಟ ಆಡ್ತೀಯಾ ಎಂದರು. ಕೈ ಮುಗಿದು ಮನವಿ ಮಾಡುತ್ತೇನೆ. ನನ್ನ ಹಾಗೂ ಹೆಚ್.ಡಿ ದೇವೇಗೌಡರ ಮೇಲೆ ಗೌರವ ಇದ್ದರೇ 24-48 ಗಂಟೆ ಒಳಗೆ ಬೆಂಗಳೂರಿಗೆ ಬಂದು, ಪೊಲೀಸರಿಗೆ ಶರಣಾಗುವಂತೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮನವಿ ಮಾಡಿದರು. ಅಂದಹಾಗೇ ಅಶ್ಲೀಲ ವೀಡಿಯೋ ಬೆಳಕಿಗೆ ಬರುತ್ತಿದ್ದಂತ ಸಂಸದ ಪ್ರಜ್ವಲ್…

Read More

ಬೆಂಗಳೂರು: ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಲಿ. ತನ್ನ ಕಳೆದ ಹಣಕಾಸು ವರ್ಷದ ಮತ್ತು ಮಾರ್ಚ್ 31, 2024ಕ್ಕೆ ಅಂತ್ಯಗೊಂಡ 4ನೇ ತ್ರೈಮಾಸಿಕ ಅವಧಿಯ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಬ್ಯಾಂಕ್ ಮಾರ್ಚ್ 31ಕ್ಕೆ ಕೊನೆಯಾದ ತ್ರೈಮಾಸಿಕ ಅವಧಿಯಲ್ಲಿ 6,681 ಕೋಟಿ ರೂ. ಸಾಲವನ್ನು ವಿತರಿಸಿದ್ದು, ಕಳೆದ ಹಣಕಾಸು ವರ್ಷದ ಇದೇ ಅವಧಿಗೆ ಹೋಲಿಸಿದರೆ ಸಾಲ ವಿತರಣೆಯಲ್ಲಿ ಶೇ.11ರಷ್ಟು ಬೆಳವಣಿಗೆ ಸಾಧಿಸಲಾಗಿದೆ. ಅದೇ ರೀತಿ, 2023-2024ನೇ ಹಣಕಾಸು ವರ್ಷದಲ್ಲಿ ಬ್ಯಾಂಕ್ ಒಟ್ಟಾರೆ 23,389 ಕೋಟಿ ರೂ. ಸಾಲ ವಿತರಿಸಿದ್ದು, ಕಳೆದ ವಿತ್ತೀಯ ವರ್ಷಕ್ಕೆ ಹೋಲಿಸಿದರೆ ಶೇ.17ರಷ್ಟು ಹೆಚ್ಚಳವಾಗಿದೆ. ಮಾ.31ಕ್ಕೆ ಅಂತ್ಯಗೊಂಡ ತ್ರೈಮಾಸಿಕದಲ್ಲಿ ಕೈಗೆಟಕುವ ದರದಲ್ಲಿ ಒಟ್ಟು730 ಕೋಟಿ ರೂ.ಗಳ ಗೃಹ ಸಾಲ ನೀಡಲಾಗಿದ್ದು, ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಈ ಬಾರಿ ಶೇ.66ರಷ್ಟು ಹೆಚ್ಚು ಸಾಲ ವಿತರಣೆಯಾಗಿದೆ. 2023-2024ನೇ ಹಣಕಾಸು ವರ್ಷದಲ್ಲಿ 2,284 ಕೋಟಿ ರೂ. ಗೃಹ ಸಾಲ ವಿತರಿಸಲಾಗಿದ್ದು, ಕಳೆದ ವಿತ್ತ ವರ್ಷಕ್ಕೆ ಹೋಲಿಸಿದರೆ ಶೇ.64ರಷ್ಟು ಹೆಚ್ಚಳ ಕಂಡಿದೆ. 23-24ರ…

Read More

ಅಹಮದಾಬಾದ್: ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಸೋಮವಾರ ಅಹಮದಾಬಾದ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಲ್ವರು ಐಸಿಸ್ ಭಯೋತ್ಪಾದಕರನ್ನು ಬಂಧಿಸಿದೆ. ಅಹ್ಮದಾಬಾದ್ ವಿಮಾನ ನಿಲ್ದಾಣದಲ್ಲಿ ಶ್ರೀಲಂಕಾ ಮೂಲದ ನಾಲ್ವರು ಐಸಿಸ್ ಉಗ್ರರರನ್ನು ಎಟಿಎಸ್ ಅಧಿಕಾರಿಗಳು ಬಂಧಿಸಿದ್ದಾರೆ. ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗಿದೆ. https://kannadanewsnow.com/kannada/cet-exam-result-to-be-declared-only-after-2nd-puc-exam-2-results-kea/ https://kannadanewsnow.com/kannada/breaking-sc-refuses-to-entertain-plea-against-new-criminal-laws/

Read More

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-2 ಹಾಗೂ ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶದ ನಂತ್ರ, ಸಾಮಾನ್ಯ ಪ್ರವೇಶ ಪರೀಕ್ಷೆ( CET-2024) ಫಲಿತಾಂಶ ಪ್ರಕಟಿಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ಪಷ್ಟ ಪಡಿಸಿದೆ. ಈ ಬಗ್ಗೆ ಎಕ್ಸ್ ನಲ್ಲಿ ಮಾಹಿತಿ ಪೋಸ್ಟ್ ಮಾಡಿದ್ದು, ದ್ವಿತೀಯ ಪಿಯುಸಿ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾದ ನಂತರವೇ ಕೆಸಿಇಟಿ-24ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದಿದೆ. ಇದಲ್ಲದೆ, ಪ್ರಕಟಣೆಯ ದಿನಾಂಕಕ್ಕೆ ಮುಂಚಿತವಾಗಿ ಫಲಿತಾಂಶಗಳನ್ನು ಪ್ರಕಟಿಸುವ ದಿನಾಂಕವನ್ನು ಕೆಇಎ ಅಧಿಕೃತವಾಗಿ ತಿಳಿಸುತ್ತದೆ. ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೆ ಒಳಗಾಗಬಾರದು. ಹೆಚ್ಚಿನ ಮಾಹಿತಿಗೆ ಸಂಬಂಧಿಸಿದಂತೆ ಕೆಇಎ ಅಧಿಕೃತ ಜಾಲತಾಣ www.kea.kar.nic.in ಗೆ ಭೇಟಿ ನೀಡಿ ಪರಿಶೀಲಿಸಬಹುದು ಎಂದು ಹೇಳಿದೆ. https://twitter.com/KEA_karnataka/status/1792446348773708038 https://kannadanewsnow.com/kannada/did-cm-siddaramaiah-thank-the-killers/ https://kannadanewsnow.com/kannada/breaking-sc-refuses-to-entertain-plea-against-new-criminal-laws/

Read More

ಬೆಂಗಳೂರು: ಮುಖ್ಯಮಂತ್ರಿಗಳು ಕೊಲೆಗಡುಕರಿಗೆ ಧನ್ಯವಾದ ಹೇಳಿದ್ದಾರಾ? ತಮ್ಮ ಸರಕಾರದ ಅವಧಿ ಮುಗಿದುದಕ್ಕೆ ಬೈಬೈ- ಗುಡ್ ಬೈ ಎಂದು ಧನ್ಯವಾದ ಹೇಳಿದ್ದಾರೋ ಅರ್ಥ ಆಗಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅವರ ಮುಖದ ಕಳೆ ನೋಡಿದರೆ ಅವರು ಸರಕಾರದ ಕೊನೆ ಅವಧಿ ಎದುರಿಸುತ್ತಿರುವಂತಿತ್ತು ಎಂದು ವಿಶ್ಲೇಷಿಸಿದರು. ಕಾಂಗ್ರೆಸ್ ಸರಕಾರದ ಒಂದು ವರ್ಷ ಕೊಲೆಗಡುಕರಿಗೆ ಹರ್ಷ. ಒನ್ ಇಯರ್ ಖಜಾನೆ ಫುಲ್ ಕ್ಲಿಯರ್, ಖಾಲಿ ಖಾಲಿ. ವರುಷ ಒಂದು ಸಮಸ್ಯೆಗಳು ನೂರೊಂದು. ಕಾಂಗ್ರೆಸ್ ಸರಕಾರ ಬಂತು; ಜನರ ಮುಖದಲ್ಲಿ ಹರ್ಷ ಇಲ್ಲ ಎಂದು ತಿಳಿಸಿದರು. ಕಾಂಗ್ರೆಸ್ ಲೂಟಿ ಎಷ್ಟು ಕೋಟಿ ಎಂದು ಜನರು ಲೆಕ್ಕ ಹಾಕುತ್ತಿದ್ದಾರೆ. ನೇಹಾ, ಮೀನಾ, ಅಂಜಲಿ ಎಂಬ ಮಹಾಲಕ್ಷ್ಮಿಯರು. ನಮ್ಮ ಮನೆಯ ಮಹಾಲಕ್ಷಿಯರಿಗಿಲ್ಲ ಬದುಕುವ ಭಾಗ್ಯ ಎಂದರಲ್ಲದೆ, ನೇಹಾ, ಮೀನಾ, ಅಂಜಲಿ ಆಯ್ತು. ಮುಂದೆ ಯಾರೆಂದು ನಮ್ಮ ಹೆಣ್ಮಕ್ಕಳು ಆತಂಕದಿಂದ…

Read More