Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಮಂಗಳವಾರ ಬಿಡುಗಡೆಯಾದ ಸಿಬ್ಬಂದಿ ಸಚಿವಾಲಯದ ಆದೇಶದ ಪ್ರಕಾರ, ಗುಪ್ತಚರ ಬ್ಯೂರೋ (Intelligence Bureau -IB) ನಿರ್ದೇಶಕ ತಪನ್ ಕುಮಾರ್ ದೇಕಾ ( Tapan Kumar Deka IPS ) ಅವರ ಸೇವಾವಧಿಯನ್ನು ಜೂನ್ 2026 ರವರೆಗೆ ಒಂದು ವರ್ಷದ ವಿಸ್ತರಣೆ ಮಾಡಲಾಗಿದೆ. 1988 ರ ಬ್ಯಾಚ್ ಹಿಮಾಚಲ ಪ್ರದೇಶ ಕೇಡರ್ ಐಪಿಎಸ್ ಅಧಿಕಾರಿಯಾಗಿರುವ ದೇಕಾ ಅವರನ್ನು ಆರಂಭದಲ್ಲಿ ಜೂನ್ 2022 ರಿಂದ ಜಾರಿಗೆ ಬರುವಂತೆ ಎರಡು ವರ್ಷಗಳ ಅವಧಿಗೆ ಗುಪ್ತಚರ ಬ್ಯೂರೋದ ನಿರ್ದೇಶಕರನ್ನಾಗಿ ನೇಮಿಸಲಾಯಿತು. ತಪನ್ ಕುಮಾರ್ ದೇಕಾ ಅವರ ಸೇವಾವಧಿಯನ್ನು ಜೂನ್ 30, 2025 ರ ನಂತರ ಒಂದು ವರ್ಷದ ಅವಧಿಗೆ ಸಂಪುಟದ ನೇಮಕಾತಿ ಸಮಿತಿಯು ಅನುಮೋದಿಸಿದೆ. https://twitter.com/ANI/status/1924764148824736203 https://kannadanewsnow.com/kannada/the-achievements-of-the-state-congress-government-should-reach-every-household-b-r-jayant/ https://kannadanewsnow.com/kannada/tomorrow-there-will-be-a-tiranga-yatra-in-maddiruru-man-mul-director-s-p-swamy/
ಶಿವಮೊಗ್ಗ : ರಾಜ್ಯ ಸರ್ಕಾರದ ಎರಡು ವರ್ಷದ ಸಾಧನೆಯನ್ನು ಮನೆಮನೆಗೆ ತಲುಪಿಸಬೇಕು. ನಾವು ಮಾಡಿದ್ದನ್ನು ಹೇಳಲು ವಿಫಲವಾದರೇ, ಬಿಜೆಪಿಯವರು ಮಾಡದೆ ಇರುವುದನ್ನು ಹೇಳಿ ಯಶಸ್ವಿಯಾಗುತ್ತಿದ್ದಾರೆ. ಆದ್ದರಿಂದ ಕಾರ್ಯಕರ್ತರು ಸರ್ಕಾರದ ಸಾಧನೆಯನ್ನು ಕರಪತ್ರ, ಧ್ವನಿವರ್ಧಕ ಸೇರಿದಂತೆ ಬೇರೆಬೇರೆ ಮಾಧ್ಯಮಗಳ ಮೂಲಕ ಊರೂರಿನಲ್ಲಿ ಪ್ರಚುರಪಡಿಸಬೇಕು ಎಂದು ಸಾಗರ ತಾಲ್ಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ಅಧ್ಯಕ್ಷ ಬಿ.ಆರ್.ಜಯಂತ್ ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಗಾಂಧಿಮಂದಿರದದಲ್ಲಿ ಮಂಗಳವಾರ ಬ್ಲಾಕ್ ಕಾಂಗ್ರೇಸ್‌ನಿಂದ ಏರ್ಪಡಿಸಿದ್ದ ಎರಡು ವರ್ಷಗಳ ಸಾಧನಾ ಸಮಾವೇಶ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿಯವರು ಸಮಾಜವನ್ನು ಧರ್ಮದ ಹೆಸರು ಹೇಳಿ ಒಡೆಯುತ್ತಾರೆ. ಮಾಡದೆ ಇರುವುದನ್ನು ಮಾಡಿದ್ದಾಗಿ ಬಿಂಬಿಸಿ ಗೆಲ್ಲುತ್ತಾರೆ. ಹಿಂದೂ ಧರ್ಮಕ್ಕೆ ಕಳಂಕ ತಂದವರು ಯಾರಾದರೂ ಇದ್ದರೆ ಅದು ಬಿಜೆಪಿಯವರು. ಸಮಾಜದಲ್ಲಿ ಒಡಕನ್ನು ತರುವ ಕೆಲಸ ಬಿಜೆಪಿ ಮಾಡುತ್ತಿದೆ. ಎಲ್ಲ ಧರ್ಮಜಾತಿಯವರನ್ನು ಒಟ್ಟಾಗಿ ಕರೆದೊಯ್ಯುವ ಕೆಲಸ ಕಾಂಗ್ರೇಸ್ ಮಾಡುತ್ತಿದೆ. ಕಾಂಗ್ರೇಸ್ ಸರ್ಕಾರದ ಎರಡು ವರ್ಷದ ಅದ್ವಿತೀಯವಾಗಿದೆ. ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಐದು ಗ್ಯಾರಂಟಿಗಳ ಪೈಕಿ…
ವಿಜಯನಗರ: “ನಮಗೆ ಅಧಿಕಾರ ನೀಡಿ ರಾಜ್ಯದ ಸೇವೆ ಮಾಡಲು ಆಶೀರ್ವಾದ ಮಾಡಿದ ಜನರ ಋಣ ತೀರಿಸಲು ನಮ್ಮ ಸರ್ಕಾರ ಆರನೆಯದಾಗಿ ಭೂ ಗ್ಯಾರಂಟಿ ಯೋಜನೆ ನೀಡುತ್ತಿದೆ. ಎಐಸಿಸಿ ಅಧ್ಯಕ್ಷರ ನಿರ್ದೇಶನದಂತೆ ಕಾಂಗ್ರೆಸ್ ಅಧಿಕಾರದಲ್ಲಿರುವವರೆಗೂ ಗ್ಯಾರಂಟಿ ಯೋಜನೆಗಳು ನಿಲ್ಲಿಸುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ರಾಜ್ಯ ಸರ್ಕಾರಕ್ಕೆ ಎರಡು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಮಂಗಳವಾರ ನಡೆದ ಪ್ರಗತಿಯತ್ತ ಕರ್ನಾಟಕ ಸಮರ್ಪಣೆಯ ಸಂಕಲ್ಪ ಸಮಾವೇಶದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ನಾವಿಂದು ಎರಡು ವರ್ಷಗಳ ಸಂಭ್ರಮಾಚರಣೆ ಮಾಡಲು ಇಲ್ಲಿಗೆ ಬಂದಿಲ್ಲ. ಕರ್ನಾಟಕ ರಾಜ್ಯದ ಜನರ ಋಣ ತೀರಿಸಲು ಸಮರ್ಪಣೆಯ ಸಂಕಲ್ಪ ಕಾರ್ಯಕ್ರಮ ಮಾಡುತ್ತಿದ್ದೇವೆ. ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ 136 ಕ್ಷೇತ್ರಗಳಲ್ಲಿ ಶಾಸಕರನ್ನು ಆಯ್ಕೆ ಮಾಡಿ ನಮಗೆ ಆಶೀರ್ವಾದ ಮಾಡಿದಿರಿ. ನಿಮ್ಮ ಋಣ ತೀರಿಸಲು ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ, ಆರನೇ ಗ್ಯಾರಂಟಿಯಾಗಿ ಭೂ ಗ್ಯಾರಂಟಿ ಯೋಜನೆ…
ಬೆಂಗಳೂರು: ನಗರದ ಕೆಜೆ ಹಳ್ಳಿ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಪತ್ನಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಕೆಜೆ ಹಳ್ಳಿ ಪೊಲೀಸ್ ಠಾಮೆಯ ಸಬ್ ಇನ್ಸ್ ಪೆಕ್ಟರ್ ನಾಗರಾಜ್ ಎಂಬುವರ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಚ್ ಬಿ ಆರ್ ಲೇಔಟ್ ನಲ್ಲಿ ಇರುವಂತ ತಮ್ಮ ಮನೆಯಲ್ಲಿ ಶಾಲಿನಿ ನೇಣಿಗೆ ಶರಣಾಗಿದ್ದಾರೆ. ಅಂದಹಾಗೆ ಮೃತ ಶಾಲಿನಿ ಕೆಜೆ ಹಳ್ಳಿ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ನಾಗರಾಜ್ ಅವರನ್ನು ಎರಡನೇ ಮದುವೆಯಾಗಿದ್ದರು. ಇಂತಹ ಅವರು ನಿನ್ನೆ ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/in-2-years-we-have-fulfilled-142-promises-made-cm-siddaramaiah/ https://kannadanewsnow.com/kannada/tomorrow-there-will-be-a-tiranga-yatra-in-maddiruru-man-mul-director-s-p-swamy/
ಹೊಸಪೇಟೆ : ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆ ಈಡೇರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭಕ್ಕೆ ಕಂದಾಯ ಇಲಾಖೆ ಆಯೋಜಿಸಿದ್ದ “ಸಮರ್ಪಣೆ ಸಂಕಲ್ಪ” ಸಮಾವೇಶದಲ್ಲಿ 111111 ಮಂದಿಗೆ ಹಕ್ಕುಪತ್ರ ವಿತರಣೆ ಮಾಡಿ, ಉಕ್ಕಿನ ಮಹಿಳೆ ಇಂದಿರಾಗಾಂಧಿಯವರ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಮೊದಲ ಬಾರಿ ಮುಖ್ಯಮಂತ್ರಿಯಾಗಿ ನಾವು ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದಲ್ಲದೆ, ಪ್ರಣಾಳಿಕೆಯಲ್ಲಿ ಘೋಷಿಸದ ಹೊಸದಾದ 30 ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಿದ್ದೇವೆ ಎಂದ ಸಿ.ಎಂ ಸಿದ್ದರಾಮಯ್ಯ ಅವರು ಬಿಜೆಪಿ ಏಕೆ ತಾನು ಕೊಟ್ಟಿದ್ದ ಭರವಸೆಗಳನ್ನು ಈಡೇರಿಸದೆ, ಜನರ ಎದುರು ಸುಳ್ಳು ಹೇಳಿಕೊಂಡು ತಿರುಗುತ್ತಿದೆ ಎಂದು ಪ್ರಶ್ನಿಸಿದರು. ಸರ್ವ ಜನಾಂಗದ ಶಾಂತಿಯ ತೋಟ ನಮ್ಮ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ. ಸರ್ವರನ್ನೂ ಸಮಾನವಾಗಿ ಗೌರವಿಸುವ ರಾಜ್ಯ. ಸಂವಿಧಾನದ ಅಡಿಯಲ್ಲಿ ಸರ್ವ…
ಬೆಂಗಳೂರು: ನ್ಯಾಯಮೂರ್ತಿ ಡಾ. ಹೆಚ್.ಎನ್.ನಾಗಮೋಹನ ದಾಸ್ ಅವರ ಏಕ ಸದಸ್ಯ ವಿಚಾರಣಾ ಆಯೋಗದ ನಿರ್ದೇಶನದಂತೆ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ ಕಾರ್ಯವು ಪ್ರಸ್ತುತ ಪ್ರಗತಿಯಲ್ಲಿದೆ. ಮೇ 05 ರಿಂದ ಮನೆ-ಮನೆ ಸಮೀಕ್ಷೆ ನಡೆಸುತ್ತಿದ್ದು, ಸಮೀಕ್ಷೆಯಲ್ಲಿ ಒಂದು ವೇಳೆ ಕೈಬಿಟ್ಟು ಹೋದಂತಹ ಪರಿಶಿಷ್ಟ ಜಾತಿಯ ಕುಟುಂಬದವರು ಈ ಕೆಳಕಂಡಂತೆ ಆನ್‌ಲೈನ್ ಲಿಂಕ್ ಮೂಲಕ ಸ್ವಯಂಘೋಷಣೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಆನ್‌ಲೈನ್ ಮೂಲಕ ಸ್ವಯಂ ಘೋಷಣೆ: ಮನೆ-ಮನೆ ಭೇಟಿ ಸಂದರ್ಭದಲ್ಲಿ ತಮ್ಮ ಮಾಹಿತಿಯನ್ನು ನೀಡದವರು ನೇರವಾಗಿ ಆನ್‌ಲೈನ್ ಲಿಂಕ್ (https://schedulecastesurvey,karnataka.gov.in/selfdeclaraion) ರ ಮೂಲಕ ಮೇ 19 ರಿಂದ ಮೇ 28 ರವರೆಗೆ ಸ್ವಯಂಘೋಷಣೆ ಮಾಡಿಕೊಳ್ಳಲು ಕಲ್ಪಿಸಲಾಗಿದೆ. ಆನ್‌ಲೈನ್‌ನಲ್ಲಿ ಸ್ವಯಂಘೋಷಣೆ ಹೇಗೆ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಯೂಟ್ಯೂಬ್ ಲಿಂಕ್ (https://youtu.be/VASEcMhL930) ಮೂಲಕ ತಿಳಿದುಕೊಳ್ಳಬಹುದು. ಎಲ್ಲಾ ಪ.ಜಾತಿ ಬಾಂದವರು ತಮ್ಮ ಜಾತಿ, ಉಪಜಾತಿ ವಿವರಗಳನ್ನು ದಾಖಲಾತಿಗಳನ್ನು ಉಪಯೋಗಿಸಿಕೊಳ್ಳಲು ಸ್ವಯಂದೃಢೀಕರಣ ಮಾಡಿಕೊಳ್ಳಬುಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ.ಮಲ್ಲಿಕಾರ್ಜುನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/invitation-for-applications-for-the-office-assistant-position-for-retired-soldiers/ https://kannadanewsnow.com/kannada/tomorrow-there-will-be-a-tiranga-yatra-in-maddiruru-man-mul-director-s-p-swamy/
ದಾವಣೆಗೆರೆ: ಬ್ಯಾಂಕ್ ಆಫ್ ಬರೋಡದಲ್ಲಿ ಮಾಜಿ ಸೈನಿಕರಿಗಾಗಿ ಆಫೀಸ್ ಅಸಿಸ್ಟೆಂಟ್ ಹುದ್ದೆಗಳಿಗೆ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ವೆಬ್ ಸೈಟ್ www.bankofbaroda.co.in ನಲ್ಲಿ ಮೇ.23 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಬ್ಯಾಂಕ್‍ನ ಜಾಹೀರಾತು ಸಂಖ್ಯೆ-ಃBoB/HRM/REC/AVT//2025/05 ವೀಕ್ಷಿಸಬಹುದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರಾದ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ ದಾವಣಗೆರೆ ಮೇ.19 (ಕರ್ನಾಟಕ ವಾರ್ತೆ)- ಪ್ರಸಕ್ತ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜಗಳೂರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ, ಪ.ವರ್ಗ ಮತ್ತು ಇತರೆ ಜನಾಂಗದವರು ಅರ್ಜಿ ಸಲ್ಲಿಸಬಹುದು. ವೆಬ್ ಸೈಟ್ https://shp.karnataka.gov.in/bcwd ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜೂನ್ 16 ಕೊನೆಯ…
ದಾವಣಗೆರೆ: ಪ್ರಸಕ್ತ ಸಾಲಿಗೆ ಮಂಜೂರಾದ ರಾಜ್ಯದ ಬೆಳಗಾವಿ, ಮೈಸೂರು ಕಂದಾಯ ವಿಭಾಗಗಳಲ್ಲಿನ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಯನ್ನು ಪಡೆಯಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ಯುವಜನರಿಗೆ 90 ದಿನಗಳ ವಸತಿಯುತ ಪುರುಷ & ಮಹಿಳಾ ಅಭ್ಯರ್ಥಿಗಳಿಗೆ ಪ್ರತಿಷ್ಠಿತ ಸಂಸ್ಥೆಯ ಮೂಲಕ ಈ ತರಬೇತಿ ನಡೆಸಲಾಗುವುದು. ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಮೇ.23 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಇಲಾಖೆ ವೆಬ್ ಸೈಟ್ :dom.karkataka.gov.in ನಲ್ಲಿ ಪರಿಶೀಲಿಸಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು. ಹಾಗೂ ಅಲ್ಪಸಂಖ್ಯಾತರ ಸಹಾಯವಾಣಿ ಸಂಖ್ಯೆ: 8277799990 ಸಂಪರ್ಕಿಸಲು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ. https://kannadanewsnow.com/kannada/monsoon-onset-over-kerala-expected-in-next-4-5-days-says-imd/ https://kannadanewsnow.com/kannada/tomorrow-there-will-be-a-tiranga-yatra-in-maddiruru-man-mul-director-s-p-swamy/
ನವದೆಹಲಿ: ಕಳೆದ ವಾರ ಭಾರತ ಹವಾಮಾನ ಇಲಾಖೆ (India Meteorological Department -IMD) ಮುನ್ಸೂಚನೆ ನೀಡಿದಂತೆ, ಮೇ 27 ಕ್ಕಿಂತ ಮೊದಲೇ ಕೇರಳದಲ್ಲಿ ನೈಋತ್ಯ ಮಾನ್ಸೂನ್ ಆರಂಭವಾಗುವ ನಿರೀಕ್ಷೆಯಿದೆ. ಮುಂದಿನ 4-5 ದಿನಗಳಲ್ಲಿ ಕೇರಳದಲ್ಲಿ ನೈಋತ್ಯ ಮಾನ್ಸೂನ್ ಮತ್ತಷ್ಟು ಮುನ್ನಡೆಯಲು ಪರಿಸ್ಥಿತಿಗಳು ಅನುಕೂಲಕರವಾಗಿವೆ ಎಂದು ಐಎಂಡಿ ಮಂಗಳವಾರ ತಿಳಿಸಿದೆ. ಕೇರಳದಲ್ಲಿ ಸಾಮಾನ್ಯವಾಗಿ ಆರಂಭವಾಗುವ ದಿನಾಂಕ ಜೂನ್ 1 – ಇದು ದೇಶದಲ್ಲಿ ನಾಲ್ಕು ತಿಂಗಳ ಕಾಲ ನಡೆಯುವ ನೈಋತ್ಯ ಮಾನ್ಸೂನ್ ಋತುವಿನ ಆರಂಭವನ್ನು ಸೂಚಿಸುತ್ತದೆ. ಮಾನ್ಸೂನ್ ಮಾರುತಗಳು ಬಲಗೊಳ್ಳುತ್ತಿದ್ದಂತೆ, ಜೂನ್ ಮೂಲಕ ದೇಶದ ಉಳಿದ ಭಾಗಗಳಿಗೆ ಮಾನ್ಸೂನ್ ಮುಂದುವರಿಯುತ್ತದೆ ಮತ್ತು ಜುಲೈ ಮಧ್ಯದ ವೇಳೆಗೆ ಇಡೀ ದೇಶವನ್ನು ಆವರಿಸುತ್ತದೆ. ಎಲ್ಲಾ ಸಾಗರ ಮತ್ತು ವಾತಾವರಣದ ಅಂಶಗಳು ಆರಂಭಿಕ ಮಾನ್ಸೂನ್ ಆರಂಭಕ್ಕೆ ಅನುಕೂಲಕರವಾಗಿವೆ ಎಂದು ಐಎಂಡಿಯ ಹಿರಿಯ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. ದಕ್ಷಿಣ ಅರೇಬಿಯನ್ ಸಮುದ್ರದ ಕೆಲವು ಭಾಗಗಳು, ಮಾಲ್ಡೀವ್ಸ್ ಮತ್ತು ಕೊಮೊರಿನ್ ಪ್ರದೇಶದ ಉಳಿದ ಭಾಗಗಳು, ಲಕ್ಷದ್ವೀಪದ ಕೆಲವು ಭಾಗಗಳು, ತಮಿಳುನಾಡು,…
ನವದೆಹಲಿ: ಸತತ ಮಳೆಯಿಂದ ತತ್ತರಿಸುತ್ತಿರುವ ಜನರು ಡಿಸಿಎಂ ಡಿಕೆ ಶಿವಕುಮಾರ್ ಅವರ ಬ್ರ್ಯಾಂಡೆಡ್ ನರಕದಲ್ಲಿ ನರಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು; ಜನ ಸತ್ತು ಬದುಕುತ್ತಿದ್ದರೆ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸಾಧನಾ ಸಮಾವೇಶದ ಚಿಂತೆ! ವಾರದಿಂದ ಬಣ್ಣಬಣ್ಣದ ಸರಣಿ ಗ್ಯಾರಂಟಿ ಜಾಹೀರಾತು ಬೇರೆ..! ಬೆಂಗಳೂರು ಜನ ಬ್ರ್ಯಾಂಡೆಡ್ ನರಕದಲ್ಲಿದ್ದಾರೆ! ನಗರ ನರಳುತ್ತಿದ್ದರೆ ಇವರಿಗೆ ಪ್ರಚಾರದ ಗೀಳು ಎಂದು ಕಿಡಿ ಕಾರಿದ್ದಾರೆ. ಕಾಂಗ್ರೆಸ್ ಸರಕಾರದ ಸಾಧನೆ ಬೆಂಗಳೂರು ರಸ್ತೆಗಳಲ್ಲಿ, ಚರಂಡಿಗಳಲ್ಲಿ ಕೊಚ್ಚೆಯಾಗಿ ಕೊಚ್ಚಿ ಹೋಗುತ್ತಿದೆ. ಇವರಿಗೆ ಆತ್ಮಸಾಕ್ಷಿ ಎನ್ನುವುದು ಇದೆಯಾ? ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು. ಡಿಸಿಎಂ ಡಿ.ಕೆ.ಶಿವಕುಮಾರ್ ಮಾತಿನ ಡಬ್ಬಾ ಹೊಡೆಯುವುದು ಬಿಟ್ಟು, ಪ್ರತಿಪಕ್ಷಗಳನ್ನು ನಿಂದಿಸುವುದನ್ನು ಪಕ್ಕಕ್ಕಿಟ್ಟು ಕೆಲಸ ಮಾಡಲಿ. ವಾರ್ ರೂಂನಲ್ಲಿ ಕೂತು ಜೆಡಿಎಸ್, ಬಿಜೆಪಿ ಮೇಲೆ ಪ್ರಾಕ್ಸಿವಾರ್ ಮಾಡಿದರೆ ಪ್ರಯೋಜನವೇನು) ಕೈಲಾಗದವನಿಗೆ ಬಾಯಿ ಭದ್ರ ಇರುವುದಿಲ್ಲ. ಈ ಮನುಷ್ಯ ಆ…














