Author: kannadanewsnow09

ಬೆಂಗಳೂರು: ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಸಾರಿಗೆ ಬಸ್ಸುಗಳಲ್ಲಿ ಶಕ್ತಿ ಯೋಜನೆಯ ಅಡಿಯಲ್ಲಿ ಉಚಿತವಾಗಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಮಹಿಳೆಯರು ಉಚಿತವಾಗಿ ಸಾರಿಗೆ ಬಸ್ಸುಗಳಲ್ಲಿ ಸಂಚರಿಸೋದಕ್ಕಾಗಿ ದಾಖಲೆಯಾಗಿ ಆಧಾರ್ ಕಾರ್ಡ್, ವೋಟರ್ ಐಡಿ ಕಾರ್ಡ್ ಸೇರಿದಂತೆ ವಿವಿಧ ದಾಖಲೆಗಳನ್ನು ತೋರಿಸಬೇಕು. ಆದ್ರೇ ಇನ್ಮುಂದೆ ಸಾರಿಗೆ ಬಸ್ಸುಗಳಲ್ಲಿ ಉಚಿತವಾಗಿ ಮಹಿಳೆಯರು ಸಂಚರಿಸೋದಕ್ಕೆ ಶಕ್ತಿ ಸ್ಮಾರ್ಟ್ ಕಾರ್ಡ್ ಪಡೆಯಬೇಕು ಎಂಬುದಾಗಿ ಸುದ್ದಿಯೊಂದು ವೈರಲ್ ಆಗಿತ್ತು. ಆ ವೈರಲ್ ಸುದ್ದಿಯ ಅಸಲಿ ಸತ್ಯ ಏನು ಅಂತ ಮುಂದೆ ಓದಿ. ಸಿದ್ಧರಾಮಯ್ಯ ಮುಖ್ಯಮಂತ್ರಿಯಾದ ಬಳಿಕ ಕಾಂಗ್ರೆಸ್ ಸರ್ಕಾರದಿಂದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಅದರಲ್ಲಿ ಸಾರಿಗೆ ಬಸ್ಸುಗಳಲ್ಲಿ ಮಹಿಳೆಯರು ಉಚಿತವಾಗಿ ಸಂಚರಿಸೋದಕ್ಕೆ ಅವಕಾಶ ಮಾಡಿ ಕೊಡುವಂತ ಶಕ್ತಿ ಯೋಜನೆಯೂ ಒಂದಾಗಿದೆ. ಆರಂಭದಲ್ಲಿ ಇದಕ್ಕಾಗಿ ಮಹಿಳೆಯರು ಶಕ್ತಿ ಸ್ಮಾರ್ಟ್ ಕಾರ್ಡ್ ಪರಿಚಯಿಸಲಾಗುತ್ತದೆ ಎಂದು ಹೇಳಲಾಗಿತ್ತು. ಆದ್ರೇ ಈವರೆಗೆ ಅದನ್ನು ಜಾರಿಗೊಳಿಸಿಲ್ಲ. ಇದರ ನಡುವೆ ಮಹಿಳೆಯರು ಸಾರಿಗೆ ಬಸ್ಸುಗಳಲ್ಲಿ ಉಚಿತವಾಗಿ ಸಂಚರಿಸೋದಕ್ಕೆ ಆಧಾರ್ ಕಾರ್ಡ್, ವೋಟರ್ ಐಡಿ ಕಾರ್ಡ್ ಸೇರಿದಂತೆ…

Read More

ನವದೆಹಲಿ: ರಾಷ್ಟ್ರ ರಾಜಧಾನಿಯ ಪಂಡಿತ್ ಪಂತ್ ಮಾರ್ಗದಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ ಗುರುವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದೆ. ಎಎನ್ಐ ವರದಿಯ ಪ್ರಕಾರ, ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸೋ ಕಾರ್ಯದಲ್ಲಿ ತೊಡಗಿದ್ದಾವೆ. https://twitter.com/ANI/status/1791061128057156016 ಶಾರ್ಟ್ ಸರ್ಕ್ಯೂಟ್ ನಿಂದಾಗಿ ದೆಹಲಿ ಬಿಜೆಪಿ ಕಚೇರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಸಣ್ಣದು ಎಂದು ಹೇಳಲಾಗಿದೆ. ಘಟನೆಯ ನಂತರ, ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿವೆ. ಬೆಂಕಿ ನಂದಿಸೋ ಕಾರ್ಯ ಪ್ರಗತಿಯಲ್ಲಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/last-date-to-update-aadhaar-card-today-get-it-updated-in-this-simple-way/ https://kannadanewsnow.com/kannada/sex-determination-of-foetus-punishable-3-year-jail-term-fine-up-to-rs-10000-for-violation/

Read More

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯ ಹಿನ್ನಲೆಯಲ್ಲಿ ಬೆಂಗಳೂರಲ್ಲಿ ಜೂನ್.1ರಿಂದ 4ರವರೆಗೆ ಹಾಗೂ ಜೂನ್.6ರಂದು ಮದ್ಯ ಮಾರಾಟವನ್ನು ನಿಷೇಧ ಮಾಡಿ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶಿಸಿದ್ದಾರೆ. ಇಂದು ಆದೇಶ ಹೊರಡಿಸಿರುವಂತ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು, ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರ ಮತ್ತು ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ-2024 ಘೋಷಣೆಯಾಗಿದೆ. ಈ ಚುನಾವಣೆಯು ಮುಕ್ತವಾಗಿ ಹಾಗೂ ನಿಷ್ಪಕ್ಷಪಾತವಾಗಿ ನಡೆಯಲು ಕ್ರಮವಹಿಸಲಾಗಿದೆ ಎಂದಿದ್ದಾರೆ. ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಮತದಾನ ಮುಗಿಯುವ ಅವಧಿಯ ಹಿಂದಿನ 48 ಗಂಟೆಗಳು ಮತ್ತು ಮತ ಏಣಿಕೆಯ ದಿನದಂದು ಶುಷ್ಕ ದಿನ ಎಂದು ಘೋಷಿಸುವಂತೆ ಚುನಾವಣಾಧಿಕಾರಿಗಳು ಕೋರಿರುತ್ತಾರೆ ಎಂದು ತಿಳಿಸಿದ್ದಾರೆ. ಈ ಹಿನ್ನಲೆಯಲ್ಲಿ ದಿನಾಂಕ 01-06-2024ರ ಸಂಜೆ 4 ಗಂಟೆಯಿಂದ ದಿನಾಂಕ 03-06-2024ರ ಸಂಜೆ 4 ಗಂಟೆಯವರೆಗೆ ಹಾಗೂ ಮತ ಏಣಿಕೆಯ ದಿನಾಂಕ 06-06-2024ರ ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಯಾವುದೇ…

Read More

ಮೈಸೂರು: ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆಯಾಗಿ ಒಂದು ತಿಂಗಳು ಕಳೆಯುವಾಗಲೇ ಅಂಜಲಿ ಎಂಬ ಯುವತಿ ಕೊಲೆಯಾಗಿದ್ದಾಳೆ. ರಾಜ್ಯದಲ್ಲಿ ಪೊಲೀಸ್‌ ಇಲಾಖೆ ಸತ್ತಿದೆಯೋ, ಬದುಕಿದೆಯೋ ಒಂದೂ ತಿಳಿಯುತ್ತಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ಹೊರಹಾಕಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಣ್ಣುಮಕ್ಕಳು ಸರಣಿಯಾಗಿ ಕೊಲೆಯಾಗುತ್ತಿದ್ದಾರೆ. ಇದರ ಜೊತೆಗೆ ಲವ್‌ ಜಿಹಾದ್‌ ಕೂಡ ನಡೆಯುತ್ತಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ ಎಂದರು. ಈ ಎಲ್ಲ ಸಮಸ್ಯೆಗಳ ನಡುವೆ ಬರಗಾಲದಿಂದಾಗಿ ಜನರು ತೊಂದರೆಗೊಳಗಾಗಿದ್ದಾರೆ. ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಐದು ವರ್ಷವೂ ಬರಗಾಲ ಬಂದಿತ್ತು. ಬರಗಾಲದ ಪರಿಹಾರವನ್ನು ಕೇಂದ್ರ ಸರ್ಕಾರ ನೀಡಿದೆ. ತಮ್ಮ ಪಾಲಿನ ಹಣವಾಗಿ ಒಂದು ನಯಾಪೈಸೆಯನ್ನೂ ಕಾಂಗ್ರೆಸ್ ಸರ್ಕಾರ ಬಿಡುಗಡೆ ಮಾಡಿಲ್ಲ ಎಂದು ದೂರಿದರು. ಪ್ರಧಾನಿ ನರೇಂದ್ರ ಮೋದಿಯವರಿಗೆ 3 ಕೋಟಿ ರೂಪಾಯಿ ಆಸ್ತಿ ಇದೆ. ಆದರೆ ಡಿ.ಕೆ.ಶಿವಕುಮಾರ್ ಅವರ ಆಸ್ತಿ ಹೆಚ್ಚಾಗಿದೆ. ಹಾಲಿನ ಪ್ರೋತ್ಸಾಹಧನ 700 ಕೋಟಿ ರೂ‌. ಉಳಿಸಿಕೊಂಡಿದ್ದಾರೆ. ಆಂಬ್ಯುಲೆನ್ಸ್ ಚಾಲಕರು, ಗುತ್ತಿಗೆ ಸಿಬ್ಬಂದಿಗೆ ಸಂಬಳ ಪಾವತಿಯಾಗಿಲ್ಲ. ಕೇರಳಕ್ಕೆ ಬಂದ…

Read More

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋಗಳನ್ನು ಪೆನ್ ಡ್ರೈವ್ ಗೆ ಕಾಪಿ ಮಾಡಿ, ಹಂಚಿಕೆ ಮಾಡಿರೋ ಆರೋಪ ಸಂಬಂಧ ಈಗಾಗಲೇ ಕೆಲ ಆರೋಪಿಗಳನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಅಲ್ಲದೇ ಪೆನ್ ಡ್ರೈವ್ ಕೇಸ್ ತನಿಖೆ ಚುರುಕುಗೊಳಿಸಿ 18 ಕಡೆ ಹಾಸನದಲ್ಲಿ ದಾಳಿ ನಡೆಸಿದ್ದರು. ಈ ದಾಳಿಯ ವೇಳೆಯಲ್ಲಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿರೋದಾಗಿ ತಿಳಿದು ಬಂದಿದೆ. ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ಹಂಚಿಕೆ ಸಂಬಂಧ ಎಸ್ಐಟಿ ಅಧಿಕಾರಿಗಳಿಂದ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಹಾಸನದಲ್ಲಿ ಈ ಕೇಸ್ ಸಂಬಂಧ 18 ಕಡೆ ದಾಳಿಯನ್ನು ನಡೆಸಲಾಗಿತ್ತು. ಈ ದಾಳಿಯ ವೇಳೆಯಲ್ಲಿ ಎಸ್ಐಟಿ ಅಧಿಕಾರಿಗಳಿಗೆ ಮಹತ್ವದ ದಾಖಲೆಗಳು ಸಿಕ್ಕಿದ್ದು, ಅವುಗಳನ್ನು ವಶಕ್ಕೆ ಪಡೆದಿದೆ ಎನ್ನಲಾಗುತ್ತಿದೆ. ಹಾಸನ ಪೆನ್ ಡ್ರೈವ್ ಕೇಸ್ ಸಂಬಂಧ ಎಸ್ಐಟಿ ಅಧಿಕಾರಿಗಳು ನಡೆಸಿದಂತ 18 ಕಡೆಯ ದಾಳಿಯಲ್ಲಿ 7 ಪೆನ್ ಡ್ರೈವ್, 6 ಹಾರ್ಡ್ ಡಿಸ್ಕ್ ವಶ ಪಡಿಸಿಕೊಂಡಿದೆ ಎನ್ನಲಾಗುತ್ತಿದೆ. 7 ಪೆನ್ ಡ್ರೈವ್, 6 ಹಾರ್ಡ್ ಡಿಸ್ಕ್, 4…

Read More

ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಜೈಲು ಪಾಲಾಗಿ ಜಾಮೀನಿನ ಮೇಲೆ ಹೊರ ಬಂದ ಬಳಿಕ, ಈಗ ಮಾಜಿ ಸಚಿವ ಹೆಚ್.ಡಿ ರೇವಣ್ಣ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವಂತ ಲೈಂಗಿಕ ದೌರ್ಜನ್ಯ ಆರೋಪದ ಕೇಸ್ ಎದುರಿಸುತ್ತಿದ್ದಾರೆ. ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿತು. ಅಂತಿಮವಾಗಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಈಗ ಕೋರ್ಟ್ ಕಸ್ಟಡಿಗೆ ನೀಡಿದ್ದು, ಜಾಮೀನು ಅರ್ಜಿಯ ಆದೇಶವನ್ನು ಕಾಯ್ದಿರಿಸಿದೆ. ಇಂದು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ನಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಜಾಮೀನು ಅರ್ಜಿಯ ವಿಚಾರಣೆ ನಡೆಸಿತು. ಈ ಪ್ರಕರಣದಲ್ಲಿ ಜಾಮೀನು ನೀಡದಂತೆ ಎಸ್ಐಟಿ ಪರ ಎಸ್ ಪಿಪಿ ಆಕ್ಷೇಪಿಸಿದರು. ಎಸ್ಐಟಿ ಎಸ್ ಪಿಪಿ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರ ಮುಂದೆ ಇಂದು ಬೆಳಿಗ್ಗೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೆರೆಂಡರ್ ಆಗಿದ್ದಾರೆ. ಒಮ್ಮೆ ಸೆರೆಂಡರ್ ಆದ ಮೇಲೆ ಕಸ್ಟಡಿಗೆ ಪಡೆಯಬೇಕು. ರಾಜಕಾರಣಿಯಾದ…

Read More

ಬೆಂಗಳೂರು: ರಾಜ್ಯದಲ್ಲಿ 2023-24ನೇ ಸಾಲಿನಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ, ಬರ ಆವರಿಸಿತ್ತು. ಈ ಹಿನ್ನಲೆಯಲ್ಲಿ ಸರ್ಕಾರ ಬರ ಪರಿಹಾರ ನೀಡುವುದಾಗಿ ಘೋಷಣೆ ಮಾಡಿತ್ತು. ಈಗಾಗಲೇ ಬರ ಪರಿಹಾರದ ಹಣವನ್ನು ರೈತರ ಖಾತೆಗೆ ಜಮಾ ಮಾಡಲಾಗಿದೆ. ನಿಮ್ಮ ಖಾತೆಗೆ ಬಂದಿದ್ಯಾ ಇಲ್ವ ಅಂತ ಒಮ್ಮೆ ಈ ಕೆಳಗಿನ ವಿಧಾನದಲ್ಲಿ ಚೆಕ್ ಮಾಡಿ. ರಾಜ್ಯ ಸರ್ಕಾರವು 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬರ ಪರಿಹಾರ ಘೋಷಣೆ ಮಾಡಿತ್ತು. ಬೆಳೆಹಾನಿಗೆ ಸಂಬಂಧಿಸಿದಂತೆ ರೈತರಿಗೆ ಎಸ್ ಡಿ ಆರ್ ಎಫ್, ಎನ್ ಡಿ ಆರ್ ಎಫ್ ಮಾರ್ಗಸೂಚಿಯಂತೆ ಪರಿಹಾರವನ್ನು ಜಮಾ ಮಾಡಿದೆ. ಮೊದಲ ಹಂತದಲ್ಲಿ ಅರ್ಹ ರೈತರಿಗೆ ರೂ.2000 ಪರಿಹಾರವನ್ನು ಪಾವತಿ ಮಾಡಿದೆ. ಬೆಳೆ ಸಮೀಕ್ಷೆಯ ದತ್ತಾಂಶದ ಮಾಹಿತಿಯ ಮೇಲೆ FRUITS ID ಹೊಂದಿರುವಂತ ರೈತರಿಗೆ ಪರಿಹಾರ ತಂತ್ರಾಂಶದ ಮೂಲಕ ಹಂತ ಹಂತವಾಗಿ ಪರಿಹಾರವನ್ನು ಖಾತೆಗೆ ಜಮಾ ಮಾಡಲಾಗಿದೆ. ಯಾವುದೇ ಮಧ್ಯವರ್ತಿಗಳ ಹಾವಳಿಯಿಲ್ಲದಂತೆ ರೈತರ ಖಾತೆಗೆ ನೇರವಾಗಿ ಬರ ಪರಿಹಾರದ ಹಣವನ್ನು ಜಮಾ ಮಾಡಲಾಗಿದೆ. ಬರ…

Read More

ಬೆಂಗಳೂರು: ಸಂಸದ ಪ್ರಜ್ವರ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಸಂತ್ರಸ್ತೆಯಾಗಿರುವಂತ ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಆರೋಪಿ ಸತೀಶ್ ಬಾಬುಗೆ ಮೇ.24ರವರೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಮಹಿಳೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಜಾಮೀನು ಮಂಜೂರು ಮಾಡಲಾಗಿತ್ತು. ಆದ್ರೇ ಇದೇ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವಂತ ಆರೋಪಿ ಸತೀಶ್ ಬಾಬುಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಮೇ.24ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಇನ್ನೂ ಮಹಿಳೆ ಕಿಡ್ನ್ಯಾಪ್ ಕೇಸಲ್ಲಿ ಬಂಧನಕ್ಕೆ ಒಳಗಾಗಿರುವಂತ ಮತ್ತೋರ್ವ ಆರೋಪ ಕೀರ್ತಿಗೆ ಹೆಚ್ಚಿನ ವಿಚಾರಣೆಗಾಗಿ ಪೊಲೀಸರ ಕಷ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. https://kannadanewsnow.com/kannada/last-date-to-update-aadhaar-card-today-get-it-updated-in-this-simple-way/ https://kannadanewsnow.com/kannada/sex-determination-of-foetus-punishable-3-year-jail-term-fine-up-to-rs-10000-for-violation/

Read More

ಮೈಸೂರು: ಲೋಕಸಭಾ ಚುನಾವಣೆ ಬಳಿಕ ನಡೆಯುತ್ತಿರುವಂತ ವಿಧಾನ ಪರಿಷತ್ ಚುನಾವಣೆಯಲ್ಲೂ ಬಿಜೆಪಿಗೆ ಬಂಡಾಯದ ಬಿಸಿ ಎದುರಾಗಿದೆ. ಬಿಜೆಪಿಯ ಮಾಜಿ ಶಾಸಕ ರಘುಪತಿ ಭಟ್ ನಾಮಪತ್ರ ಹಿಂಪಡೆಯೋ ಮಾತೇ ಇಲ್ಲ ಎಂಬುದಾಗಿ ಬಂಡಾಯದ ಭಾವುಟ ಹಾರಿಸಿದ್ದಾರೆ. ಇಂದು ನೈರುತ್ಯ ಪದವೀಧರರ ಕ್ಷೇತ್ರ ಬಿಜೆಪಿ ಕಾರ್ಯಕರ್ತರು ಬೆಂಬಲಿತ ಅಭ್ಯರ್ಥಿಯಾಗಿ ಮಾಜಿ ಶಾಸಕ ರಘುಪತಿ ಭಟ್ ಅವರು ನಾಮಪತ್ರ ಸಲ್ಲಿಸಿದ್ದಾರೆ. ಇದಕ್ಕೂ ಮೊದಲು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದರು. https://twitter.com/RaghupathiBhat/status/1790997688626110911 ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ಬಿಜೆಪಿಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ. ನಾಮಪತ್ರ ಸಲ್ಲಿಸಿದ ಮೇಲೆ ಹಿಂತೆಗೆಯೋ ಮಾತೇ ಇಲ್ಲ ಎಂದರು. ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತನಿಗೆ ಟಿಕೆಟ್ ನೀಡಿದ್ರೆ ನನ್ನ ಆಕ್ಷೇಪ ಇರಲಿಲ್ಲ. ನಾನು ನಾಮಪತ್ರ ಕೂಟ ಸಲ್ಲಿಸುತ್ತಿರಲಿಲ್ಲ. ಆದ್ರೇ ಹೊರಗಿನಿಂದ ಬಂದವರಿಗೆ ಟಿಕೆಟ್ ನೀಡಲಾಗಿದೆ ಎಂಬುದಾಗಿ ಬೇಸರ ವ್ಯಕ್ತ ಪಡಿಸಿದರು. ಈ ಮೊದಲು ನನಗೆ ಟಿಕೆಟ್ ಕೈ ತಪ್ಪಿದಾಗ ಕಾಂಗ್ರೆಸ್ ಪಕ್ಷದಿಂದ ಆಹ್ವಾನ ಬಂದಿತ್ತು. ಆದರೇ ನಾನು…

Read More

ಬೆಂಗಳೂರು: ನಗರ ವ್ಯಾಪ್ತಿಯಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಡೆಂಘೀ ನಿಯಂತ್ರಣಕ್ಕೆ ಈಗಾಗಲೇ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ರವರು ತಿಳಿಸಿದರು. ರಾಷ್ಟ್ರೀಯ ಡೆಂಘೀ ದಿನಾಚರಣೆಯ ಅಂಗವಾಗಿ ಇಂದು ಪೂರ್ವ ವಲಯದ ರಾಮಸ್ವಾಮಿ ಪಾಳ್ಯದಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತದನಾಡಿದ ಅವರು, ಡೆಂಘೀ ಪ್ರಕರಣಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪಾಲಿಕೆ ವ್ಯಾಪ್ತಿಯ ಎಲ್ಲಾ ವಾರ್ಡ್ ಗಳಲ್ಲಿ ಸೊಳ್ಳೆ ನಿಯಂತ್ರಣ ಕುರಿತು ಅರಿವು ಮೂಡಿಸುವ ಹಾಗೂ ಔಷಧಿ ಸಿಂಪಡಣೆಯನ್ನು ಈಗಾಗಲೇ ಪ್ರಾರಂಭಿಸಲಾಗಿದೆ ಎಂದು ಹೇಳಿದರು. ಮಳೆ ಬಂದಾಗ ನೀರು ಸಂಗ್ರಹವಾಗಿ ಸೊಳ್ಳೆಗಳ ಸಂತತಿ ಹೆಚ್ವಾಗಲಿದ್ದು, ಅದನ್ನು ಫಾಗಿಂಗ್ ಮತ್ತು ಔಷಧಿ ಸಿಫಡಿಸುವ ಮೂಲಕ ತಡೆಯಬೇಕು. ಹೂವಿನ ಕುಂಡ, ಬೀಸಾಕಿದ ಟೈರ್, ನೀರು ಸಂಗ್ರಹಿಸುವ ತೊಟ್ಟಿ, ನೀರಿನ ಬಾಟಲ್ ಸೇರಿದಂತೆ ಇನ್ನಿತರೆಡೆ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಈ ಸಂಬಂಧ ಅಂತಹ ಜಾಗದಲ್ಲಿ ನೀರು ಸಂಗ್ರಹವಾಗದಂತೆ ನೋಡಿಕೊಳ್ಳಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಆಯಾ ವಲಯದ ವಾರ್ಡ್…

Read More