Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ʼಎಚ್ಪಿವಿʼ ಲಸಿಕೆ ಸಹಕಾರಿಯಾಗಿದೆ. ಪ್ರಥಮ ಹಂತದಲ್ಲಿ ಗಣಿಬಾಧಿತ ಪ್ರದೇಶ ಮತ್ತು ಕಲ್ಯಾಣ ಕರ್ನಾಟಕ ಭಾಗದ 14 ವರ್ಷದ ಹೆಣ್ಣು ಮಕ್ಕಳಿಗೆ ಈ ಲಸಿಕೆ ವಿತರಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ. ಆರೋಗ್ಯ ಸೇವೆಗಳನ್ನ ಬಡ ವರ್ಗದ ಜನರ ಬಳಿಗೆ ತರುವಲ್ಲಿ ಉಚಿತ ಆರೋಗ್ಯ ತಪಾಸಣಾ ಮೇಳಗಳು ಯಶಸ್ವಿಯಾಗುತ್ತಿವೆ. ದೊಡ್ಡ ಮಟ್ಟದ ಆರೋಗ್ಯ ಮೇಳಗಳನ್ನು ಗ್ರಾಮೀಣ ಪ್ತದೇಶದ ಜನರಿಗೆ ಅನುಕೂಲಪಡಿಸಲು ತಾಲೂಕುಗಳಲ್ಲಿ ನಡೆಸಲಾಗುತ್ತಿದೆ. ಕೊಳ್ಳೆಗಾಲ, ಮಾನ್ವಿ ಬಳಿಕ ಇದೀಗ ಸವದತ್ತಿಯಲ್ಲೂ ಆರೋಗ್ಯ ಮೇಳ ಯಶಸ್ವಿಯಾಗಿದೆ ಎಂದರು. ರಾಜ್ಯ ಸರ್ಕಾರ ಗ್ಯಾರಂಟಿಗಳನ್ನ ನೀಡುವುದರ ಜೊತೆಗೆ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಂಡಿದೆ. ವಿಶೇಷವಾಗಿ ಆರೋಗ್ಯ ಕ್ಷೇತ್ರದಲ್ಲಿ ಈ ಬಾರಿಯ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸರ್ಕಾರಿ ಆಸ್ಪತ್ರೆಗಳ ಅಭಿವೃದ್ಧಿಗೆ ಸಾಕಷ್ಟು ಅನುದಾನ ಒದಗಿಸಿದ್ದಾರೆ. ಅಥಣಿಗೆ 50 ಹಾಸಿಗೆಯ ತಾಯಿ ಮಕ್ಕಳ ಆಸ್ಪತ್ರೆ ನೀಡಿದ್ದೇವೆ. ಆರೋಗ್ಯ ಸೇವೆಗಳಲ್ಲಿ ಸಾಕಷ್ಟು…
ಕಥುವಾ: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕರೊಂದಿಗೆ ಭೀಕರ ಗುಂಡಿನ ಚಕಮಕಿ ನಡೆಸುತ್ತಿದ್ದು, ಇದರ ಪರಿಣಾಮವಾಗಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ ಮತ್ತು 5 ಸೈನಿಕರು ಗಾಯಗೊಂಡಿದ್ದಾರೆ. ಐದನೇ ದಿನಕ್ಕೆ ಕಾಲಿಟ್ಟ ಈ ಎನ್ಕೌಂಟರ್ ನಲ್ಲಿ ಜುಥಾನಾ ಪ್ರದೇಶದಲ್ಲಿ ಎರಡೂ ಕಡೆಯ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದೆ. ವರದಿಗಳ ಪ್ರಕಾರ ಗಾಯಗೊಂಡ 5 ಸೈನಿಕರಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರಿಗೆ ಸಹಾಯ ಮಾಡಿದ್ದಾರೆಂದು ನಂಬಲಾದ ಏಳು ಶಂಕಿತರನ್ನು ಬಂಧಿಸಲಾಗಿದೆ. ಅಧಿಕಾರಿಗಳ ಪ್ರಕಾರ, ಹಿರಾನಗರ ವಲಯದಲ್ಲಿ ಭಯೋತ್ಪಾದಕರು ಇದ್ದಾರೆ ಎಂಬ ಗುಪ್ತಚರ ಮಾಹಿತಿಯ ನಂತರ ಭಾನುವಾರ ಸಂಜೆ ಕಥುವಾ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ನಳಿನ್ ಪ್ರಭಾತ್ ಅವರ ನೇತೃತ್ವದಲ್ಲಿ ಭಯೋತ್ಪಾದಕರನ್ನು ನಿಗ್ರಹಿಸಲು ಹೆಚ್ಚುವರಿ ಕಮಾಂಡೋಗಳು, ಡ್ರೋನ್ಗಳು ಮತ್ತು ಸ್ನಿಫರ್ ನಾಯಿಗಳನ್ನು ನಿಯೋಜಿಸಲಾಗಿದೆ. ಈ ಕಾರ್ಯಾಚರಣೆ ಸಂಕೀರ್ಣವಾಗಿದ್ದು, ಭಯೋತ್ಪಾದಕರನ್ನು ಪತ್ತೆಹಚ್ಚಲು ಭದ್ರತಾ ಪಡೆಗಳು ದಟ್ಟ ಕಾಡುಗಳು ಮತ್ತು ನರ್ಸರಿಗಳ ಮೂಲಕ ಸಂಚರಿಸಬೇಕಾಯಿತು.…
ಶಿವಮೊಗ್ಗ: ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನ ಸೇರಿದಂತೆ ಎಲ್ಲಾ ಪದಾಧಿಕಾರಿಗಳ ಸ್ಥಾನವನ್ನು ವಜಾ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಎಂ.ಜಿ ಚಂದ್ರು ಹೇಳಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಅವರು, ಶಿವಮೊಗ್ಗ ಜಿಲ್ಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ(ಶಿವರಾಮೇಗೌಡ ಬಣ)ದ ಪದಾಧಿಕಾರಿಗಳ ಕಾರ್ಯ ಚಟುವಟಿಕೆಗಳು ನಿಷ್ಕ್ರಿಯವಾಗಿದೆ ಎಂದು ತಿಳಿಸಿದ್ದಾರೆ. ಈ ಹಿನ್ನಲೆಯಲ್ಲಿ ಕರವೇ ರಾಜ್ಯಾಧ್ಯಕ್ಷರಾದ ಹೆಚ್.ಶಿವರಾಮೇಗೌಡ ಅವರ ಸೂಚನೆಯ ಮೇರೆಗೆ ಶಿವಮೊಗ್ಗ ಜಿಲ್ಲಾ ಘಟಕ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕು ಮಟ್ಟದ ಘಟಕದ ಅಧ್ಯಕ್ಷ ಸ್ಥಾನ ಹಾಗೂ ಪದಾಧಿಕಾರಿಗಳ ಸ್ಥಾನದಿಂದ ಇಂದಿನಿಂದ ವಜಾ ಮಾಡಲಾಗಿದೆ ಎಂದಿದ್ದಾರೆ. ಇನ್ನೂ ಅತಿ ಶೀಘ್ರದಲ್ಲೇ ಶಿವಮೊಗ್ಗ ಜಿಲ್ಲಾ ಘಟಕ ಹಾಗೂ ತಾಲ್ಲೂಕು ಘಟಕಕ್ಕೆ ಅಧ್ಯಕ್ಷ ಸ್ಥಾನ ಹಾಗೂ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಶಿವಮೊಗ್ಗ ಕರವೇ ಜಿಲ್ಲಾ ಉಸ್ತುವಾರಿ ಎಂ.ಜಿ ಚಂದ್ರು ತಿಳಿಸಿದ್ದಾರೆ. https://kannadanewsnow.com/kannada/partial-cancellation-of-miraj-castle-rock-miraj-trains-extended/ https://kannadanewsnow.com/kannada/bbmp-budget-2025-26-to-be-presented-on-march-29/
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 2025-26ನೇ ಸಾಲಿನ ಬಜೆಟ್ ಅನ್ನು ಮಾರ್ಚ್.29, 2025ರಂದು ಮಂಡಿಸಲಾಗುತ್ತಿದೆ. ಬಿಬಿಎಂಪಿಯ 2025-26ನೇ ಸಾಲಿನ ಬಜೆಟ್ ಮಾರ್ಚ್ 29, ಶನಿವಾರ ಬೆಳಗ್ಗೆ 11ಕ್ಕೆ ಮಂಡನೆಯಾಗಲಿದೆ. ಪಾಲಿಕೆಯ ಆಡಳಿತಗಾರ ಎಸ್.ಆರ್. ಉಮಾಶಂಕರ್ ಅಧ್ಯಕ್ಷತೆ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಉಪಸ್ಥಿತಿಯಲ್ಲಿ ಬಜೆಟ್ ಕಾರ್ಯಕ್ರಮ ನಡೆಯಲಿದ್ದು, ಹಲವು ಗಣ್ಯರು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಡಾ.ಕೆ ಹರೀಶ್ಕುಮಾರ್ ಆಯವ್ಯಯ ಪ್ರಸ್ತುತಪಡಿಸಲಿದ್ದಾರೆ. ಬಜೆಟ್ ಪ್ರಸ್ತುತಿಯು ಯೂಟ್ಯೂಬ್ನಲ್ಲಿ ಲೈವ್ ಬರಲಿದ್ದು, https://youtube.com/live/eydr2vyROL8… ಲಿಂಕ್ ಮೂಲಕ ವೀಕ್ಷಿಸಬಹುದಾಗಿದೆ ಎಂದು ಪಾಲಿಕೆ ತಿಳಿಸಿದೆ. https://twitter.com/KarnatakaVarthe/status/1905186730459988238 https://kannadanewsnow.com/kannada/partial-cancellation-of-miraj-castle-rock-miraj-trains-extended/ https://kannadanewsnow.com/kannada/lok-sabha-passes-immigration-and-foreigners-bill-2025/
ಹುಬ್ಬಳ್ಳಿ: ಹುಬ್ಬಳ್ಳಿ ರೈಲ್ವೆ ವಿಭಾಗದ ಕ್ಯಾಸಲ್ ರಾಕ್-ಲೋಂಡಾ ಮಾರ್ಗದಲ್ಲಿ ರೈಲ್ವೆ ವಿದ್ಯುದ್ದೀಕರಣ ಮತ್ತು ಇತರೆ ಎಂಜಿನಿಯರಿಂಗ್ ಕಾಮಗಾರಿಗಳು ನಡೆಯುತ್ತಿರುವುದರಿಂದ, ಮಿರಜ್-ಕ್ಯಾಸಲ್ ರಾಕ್-ಮಿರಜ್ ನಡುವಿನ ನಿತ್ಯದ ಕಾಯ್ದಿರಿಸದ ಎಕ್ಸ್ ಪ್ರೆಸ್ (ರೈಲು ಸಂಖ್ಯೆ 17333/17334) ರೈಲುಗಳ ಭಾಗಶಃ ರದ್ದತಿಯನ್ನು ಏಪ್ರಿಲ್ 1, 2025 ರಿಂದ ಜೂನ್ 30, 2025 ರವರೆಗೆ ವಿಸ್ತರಿಸಲಾಗಿದೆ. ರೈಲು ಸಂಖ್ಯೆ 17333 ಮಿರಜ್-ಕ್ಯಾಸಲ್ ರಾಕ್ ಡೈಲಿ ಕಾಯ್ದಿರಿಸದ ಎಕ್ಸ್ ಪ್ರೆಸ್ ರೈಲು ಜೂನ್ 30, 2025 ರವರೆಗೆ ಲೋಂಡಾ-ಕ್ಯಾಸಲ್ ರಾಕ್ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಿರುತ್ತದೆ. ಈ ರೈಲು ಲೋಂಡಾ ನಿಲ್ದಾಣದಲ್ಲಿ ತನ್ನ ಪ್ರಯಾಣವನ್ನು ಅಂತ್ಯಗೊಳಿಸಲಿದೆ. ರೈಲು ಸಂಖ್ಯೆ 17334 ಕ್ಯಾಸಲ್ ರಾಕ್-ಮಿರಜ್ ಡೈಲಿ ಕಾಯ್ದಿರಿಸದ ಎಕ್ಸ್ ಪ್ರೆಸ್ ರೈಲು ಜೂನ್ 30, 2025 ರವರೆಗೆ ಕ್ಯಾಸಲ್ ರಾಕ್-ಲೋಂಡಾ ನಡುವೆ ಭಾಗಶಃ ರದ್ದಾಗಿರುತ್ತದೆ ಈ ರೈಲು ಕ್ಯಾಸಲ್ ರಾಕ್ ಬದಲಿಗೆ ಲೋಂಡಾ ನಿಲ್ದಾಣದಿಂದ ತನ್ನ ಪ್ರಯಾಣವನ್ನು ಪ್ರಾರಂಭಿಸಲಿದೆ. ಮೊದಲು, ಈ ರೈಲುಗಳನ್ನು ಭಾಗಶಃ ರದ್ದತಿಯನ್ನು ಮಾರ್ಚ್ 31, 2025…
ನವದೆಹಲಿ: ಲೋಕಸಭೆಯಲ್ಲಿ ಇಂದು ವಲಸೆ ಮತ್ತು ವಿದೇಶಿಯರ ಮಸೂದೆ 2025 ಮಂಡನೆಯ ನಂತ್ರ ಸರ್ವಾನುಮತದಿಂದ ಅಂಗೀಕಾರಗೊಂಡಿದೆ. ಇದಕ್ಕೂ ಮೊದಲು ಲೋಕಸಭೆಯಲ್ಲಿ ವಲಸೆ ಮತ್ತು ವಿದೇಶಿಯರ ಮಸೂದೆ 2025 ರ ಮೇಲಿನ ಚರ್ಚೆಗೆ ಗೃಹ ಸಚಿವ ಅಮಿತ್ ಶಾ ಉತ್ತರಿಸಿದರು. ವಲಸೆ ಮತ್ತು ವಿದೇಶಿಯರ ಮಸೂಧೆ 2025 ಭಾರತದ ಬೆಳವಣಿಗೆಯನ್ನು ವ್ಯಾಖ್ಯಾನಿಸಲು ವಲಸೆ ಮಸೂದೆ, ಭಾರತದಲ್ಲಿ ಅಲ್ಪಸಂಖ್ಯಾತರು ಸುರಕ್ಷಿತರಾಗಿದ್ದಾರೆ ಎಂಬುದಾಗಿ ಅಮಿತ್ ಶಾ ತಿಳಿಸಿದರು. https://twitter.com/ANI/status/1905245953164029958 ಬಾಂಗ್ಲಾದೇಶದ ನುಸುಳುಕೋರರು ಅಥವಾ ರೋಹಿಂಗ್ಯಾಗಳು ಈ ಹಿಂದೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಅಸ್ಸಾಂ ಮೂಲಕ ಭಾರತಕ್ಕೆ ಪ್ರವೇಶಿಸುತ್ತಿದ್ದರು. ಈಗ ಅವರು ಟಿಎಂಸಿ ಅಧಿಕಾರದಲ್ಲಿರುವ ಪಶ್ಚಿಮ ಬಂಗಾಳದ ಮೂಲಕ ಭಾರತವನ್ನು ಪ್ರವೇಶಿಸುತ್ತಾರೆ. ಅವರಿಗೆ ಆಧಾರ್ ಕಾರ್ಡ್, ಪೌರತ್ವ ನೀಡುವವರು ಯಾರು?… ಸಿಕ್ಕಿಬಿದ್ದ ಎಲ್ಲಾ ಬಾಂಗ್ಲಾದೇಶಿಗಳು 24 ಪರಗಣ ಜಿಲ್ಲೆಯ ಆಧಾರ್ ಕಾರ್ಡ್ಗಳನ್ನು ಹೊಂದಿದ್ದಾರೆ. ನೀವು (ಟಿಎಂಸಿ) ಆಧಾರ್ ಕಾರ್ಡ್ಗಳನ್ನು ನೀಡುತ್ತೀರಿ ಮತ್ತು ಅವರು ಮತದಾರರ ಕಾರ್ಡ್ಗಳೊಂದಿಗೆ ದೆಹಲಿಗೆ ಬರುತ್ತಾರೆ… 2026 ರಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲಿದೆ ಮತ್ತು…
ಬೆಂಗಳೂರು: ಮಾರ್ಚ್.28ರ ನಾಳೆಯಿಂದ 30ರವರೆಗೆ ಬೆಂಗಳೂರಿನಿಂದ ವಿವಿಧ ಪ್ರದೇಶಗಳಿಗೆ ಹಾಗೂ ಮಾರ್ಚ್.31ರಂದು ವಿವಿಧೆಡೆಯಿಂದ ಬೆಂಗಳೂರಿಗೆ 2000 ವಿಶೇಷ ಸಾರಿಗೆ ಬಸ್ ವ್ಯವಸ್ಥೆಯನ್ನು ಮಾಡಲಾಗಿದೆ. ಯುಗಾದಿ ಹಾಗೂ ರಂಜಾನ್ ಹಬ್ಬದ ಪ್ರಯುಕ್ತ ಸಾರ್ವಜನಿಕರ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿ 2,000 ಬಸ್ಗಳನ್ನು ರಸ್ತೆಗಿಳಿಸಲಿವೆ. ಮಾರ್ಚ್ 28 ರಿಂದ 30ರ ವರೆಗೆ ಬೆಂಗಳೂರಿನಿಂದ ವಿವಿಧ ಪ್ರದೇಶಗಳಿಗೆ ಹಾಗೂ ಮಾರ್ಚ್ 31 ರಂದು ವಿವಿಧೆಡೆಯಿಂದ ಬೆಂಗಳೂರಿಗೆ ವಿಶೇಷ ಸಾರಿಗೆ ವ್ಯವಸ್ಥೆ ಇರಲಿದೆ. ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ, ಹೊರರಾಜ್ಯಗಳ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚ್ಚಿ, ಪಾಲಕ್ಕಾಡ್, ತ್ರಿಶೂರ್, ಎರ್ನಾಕುಲಂ, ತಿರುಪತಿ, ವಿಜಯವಾಡ ಸಹಿತ ವಿವಿಧೆಡೆ ವಿಶೇಷ ಬಸ್ಗಳು ಸಂಚರಿಸಲಿವೆ. https://ksrtc.in ವೆಬ್ಸೈಟ್ ಮೂಲಕ ಇ-ಟಿಕೆಟ್ ಬುಕ್ಕಿಂಗ್ ಮಾಡಬಹುದು. ನಾಲ್ಕು ಅಥವಾ ಹೆಚ್ಚು…
ಬೆಂಗಳೂರು: ಮಾಜಿ ಬಿಗ್ ಬಾಸ್ ರಜತ್ ಮಚ್ಚು ಹಿಡಿದು ರೀಲ್ಸ್ ಮಾಡಿ ಕಾನೂನು ಸಂಕಷ್ಟ ಎದುರಿಸುತ್ತಿದ್ದಾರೆ. ಈ ಬೆನ್ನಲ್ಲೇ ಅವರ ಪತ್ನಿ ಹೆಲ್ಮೆಟ್ ಧರಿಸದೇ ಬೈಕ್ ಚಾಲನೆ ಮಾಡಿದಂತ ವೀಡಿಯೋ ವೈರಲ್ ಆಗಿದೆ. ಇವರಿಗೆ ರೂಲ್ಸ್ ಅಪ್ಲೈ ಆಗಲ್ವ ಅಂತ ನೆಟ್ಟಿಗರು ಪ್ರಶ್ನಿಸಿದ್ದಾರೆ. ಮಚ್ಚು ಹಿಡಿದು ರೀಲ್ಸ್ ಮಾಡಿದಂತ ಮಾಜಿ ಬಿಗ್ ಬಾಸ್ ಸ್ಪರ್ಧಿ ರಜತ್ ಪೊಲೀಸ್ ವಶದಲ್ಲಿದ್ದಾರೆ. ಕೋರ್ಟ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಬಸವೇಶ್ವರ ನಗರದ ಪೊಲೀಸರ ವಶಕ್ಕೆ ನೀಡಿದೆ. ಇಂದು ಮಾಜಿ ಬಿಗ್ ಬಾಸ್ ಪತ್ನಿ ಅಕ್ಷಿತಾ ಅವರು ತಮ್ಮ ಪತಿ ರಜತ್ ನೋಡೋದಕ್ಕೆ ಬಸವೇಶ್ವರ ನಗರ ಪೊಲೀಸ್ ಠಾಣೆಗೆ ಸ್ಕೂಟಿಯಲ್ಲಿ ಆಗಮಿಸಿದ್ದರು. ಹೀಗೆ ಆಗಮಿಸಿದ್ದು ಹೆಲ್ಮೆಟ್ ಧರಿಸಲೇ ಆಗಿತ್ತು. ಇದೀಗ ಮಾಜಿ ಬಿಗ್ ಬಾಸ್ ರಜತ್ ಪತ್ನಿ ಅಕ್ಷಿತಾ ಅವರು ಬೈಕ್ ನಲ್ಲಿ ಹೆಲ್ಮೆಟ್ ಇಲ್ಲದೇ ಪೊಲೀಸ್ ಠಾಣೆಗೆ ಬಂದಿರುವಂತ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವೀಡಿಯೋ ನೋಡಿದಂತ ನೆಟ್ಟಿಗರು ಅಲ್ಲ ಸ್ವಾಮಿ ಇವರಿಗೆ…
ಬೆಂಗಳೂರು: ನಿವೃತ್ತ ನ್ಯಾಯಮೂರ್ತಿಗಳಾದ ಗೌರವಾನ್ವಿತ ಹೆಚ್.ಎನ್. ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ಏಕಸದಸ್ಯ ಆಯೋಗ ನೀಡಿದ ಮಧ್ಯಂತರ ವರದಿಯನ್ನು ಸಚಿವ ಸಂಪುಟ ಅಂಗೀಕರಿಸಿರುವುದಾಗಿ ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ಅವರು ತಿಳಿಸಿದರು. ಅವರು ಇಂದು ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದ ಕುರಿತು ವಿಧಾನಸೌಧದ ಸಮ್ಮೇಳನದ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಸಚಿವರ ಹೆಚ್.ಸಿ. ಮಹಾದೇವಪ್ಪ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಶರಣ ಪ್ರಕಾಶ ಪಾಟೀಲ್ ಅವರೊಂದಿಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ನಾಲ್ಕು ಪ್ರಮುಖ ಶಿಫಾರಸ್ಸುಗಳನ್ನು ಮಾಡಿದೆ. ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ಹೊಸದಾದ ಸಮೀಕ್ಷೆ ನಡೆಸಿ ದತ್ತಾಂಶವನ್ನು ಸಂಗ್ರಹಿಸಬೇಕು. ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನದ ಸಾಧನಗಳನ್ನು ಬಳಸಿ 30 ರಿಂದ 40 ದಿವಸಗಳೊಳಗೆ ಹೊಸ ಸಮೀಕ್ಷೆಯನ್ನು ನಡೆಸಬಹುದೆಂದು ತಜ್ಞರು ಅಭಿಪ್ರಾಯ ಪಡುತ್ತಾರೆ. ಹೊಸದಾದ ಸಮೀಕ್ಷೆ ನಡೆಸಲು ಅಗತ್ಯವಿರುವ ಪ್ರಶ್ನಾವಳಿಯನ್ನು ಸಿದ್ದಪಡಿಸಬೇಕು. ಯಾವ ಸಂಸ್ಥೆಯಿಂದ ಸಮೀಕ್ಷೆ ನಡೆಸಬೇಕು.…
ಬೆಂಗಳೂರು: ಧರ್ಮಸ್ಥಳದ ಪೊಲೀಸ್ ಠಾಣೆ ಪಿಎಸ್ಐ ಕಿಶೋರ್ ಎಂಬುವರು ತಮ್ಮ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ್ದಾಗಿ ಆರೋಪ ಕೇಳಿ ಬಂದಿದೆ. ಈ ಸಂಬಂಧ ಪತ್ನಿ ನೀಡಿದ್ದಂತ ದೂರಿನ ಹಿನ್ನಲೆಯಲ್ಲಿ ಎಫ್ಐಆರ್ ಕೂಡ ದಾಖಲಾಗಿದೆ. ಮಂಗಳೂರಿನ ಉಜಿರೆ ಬಳಿಯ ಧರ್ಮಸ್ಥಳದ ಪೊಲೀಸ್ ಠಾಣೆ ಪಿಎಸ್ಐ ಕಿಶೋರ್ ವಿರುದ್ಧ ಅವರ ಪತ್ನಿ ವರ್ಷಾ ಎಂಬುವರು ವರದಕ್ಷಿಣೆ ಕಿರುಕುಳ, ಹಲ್ಲೆ ಆರೋಪ ಮಾಡಿದ್ದಾರೆ. ಈ ಬಗ್ಗೆ ಬೆಂಗಳೂರಿನ ಚಂದ್ರಾಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ದೂರು ಆಧರಿಸಿ ಧರ್ಮಸ್ಥಳ ಪೊಲೀಸ್ ಠಾಣೆ ಪಿಎಸ್ಐ ಕಿಶೋರ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ವೇಳೆ ಮಾತನಾಡಿದಂತ ಅವರು ನನ್ನ ಪತಿ, ಅತ್ತೆ, ಮಾವ ಪದೇ ಪದೇ ಹಣಕ್ಕೆ ಬೇಡಿಕೆ ಇಟ್ಟಿದ್ದರು. ನಾನು ಒಬ್ಬಳೇ ಮಗಳೆಂದು ನನ್ನ ಅಪ್ಪ, ಅಮ್ಮ ಸಾಕಷ್ಟು ಹಣ ನೀಡಿದ್ದರು. ಆದರೂ ಮತ್ತೆ ಮತ್ತೆ ನನ್ನನ್ನು ಹಣಕ್ಕೆ ಪತಿ ಕಿಶೋರ್, ಅತ್ತೆ, ಮಾವ ಪೀಡಿಸಿ ಕಿರುಕುಳ ನೀಡಿದ್ದಾಗಿ ಹೇಳಿದ್ದಾರೆ. ಅಪ್ಪ-ಅಮ್ಮ ಮರ್ಯಾದೆಗೆ ಹೆದರಿ ಒಂದು…