Subscribe to Updates
Get the latest creative news from FooBar about art, design and business.
Author: kannadanewsnow09
ಮಂಡ್ಯ: ಜಿಲ್ಲೆಯಲ್ಲಿ ಕೆ ಎಸ್ ಆರ್ ಟಿ ಸಿ ಬಸ್ಸುಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಬಾಚನಹಳ್ಳಿ ಬಳಿಯಲ್ಲಿ ಮೂರು KSRTC ಬಸ್ ಗಳ ನಡುವೆ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿದೆ. ಮೊದಲು ಎರಡು ಬಸ್ಸುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಆ ನಂತ್ರ ಡಿಕ್ಕಿಯಾಗಿ ನಿಂತಿದ್ದಂತ ಬಸ್ಸಿಗೆ ಮತ್ತೊಂದು ಬಸ್ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡಿರುವಂತ ಗಾಯಾಳುಗಳನ್ನು ಮಳವಳ್ಳಿ, ಮೈಸೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಮಳವಳ್ಳಿ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದರು. ಈ ಸಂಬಂಧ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ: ಗಿರೀಶ್ ರಾಜ್, ಮಂಡ್ಯ https://kannadanewsnow.com/kannada/good-news-for-the-states-gram-panchayat-staff-the-government-has-issued-strict-orders-for-salary-payment-every-month/ https://kannadanewsnow.com/kannada/when-bursting-crackers-be-sure-to-follow-this-advice-and-caution/
ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿಗಳಿಗೆ ಪ್ರತಿ ತಿಂಗಳು ವೇತನ ಪಾವತಿಯಲ್ಲಿ ಕೆಲವು ಕಡೆ ವಿಳಂಬವಾಗುತ್ತಿತ್ತು. ಈ ಸಂಬಂಧ ಸರ್ಕಾರಕ್ಕೆ ದೂರುಗಳು ಸಹ ಸಲ್ಲಿಕೆಯಾಗಿದ್ದವು. ಈ ಹಿನ್ನಲೆಯಲ್ಲಿ ಇನ್ಮುಂದೆ ಪ್ರತಿ ತಿಂಗಳು ವೇತನವನ್ನು ಸಕಾಲದಲ್ಲಿ ಪಾವತಿಸುವಂತೆ ರಾಜ್ಯ ಸರ್ಕಾರ ಖಡಕ್ ಆದೇಶ ಹೊರಡಿಸಿದೆ. ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯ್ತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಿಂದ ಹೊರಡಿಸಿರುವಂತ ಆದೇಶದಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ವೇತನವನ್ನು ನಿಯಮಿತವಾಗಿ ಪಾವತಿಸುವುದು ಆದ್ಯತೆಯ ವಿಷಯವಾಗಿರುತ್ತದೆ. ಪ್ರಸ್ತುತ ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಸಿಬ್ಬಂದಿ ವರ್ಗದ ಮಾದರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ದಿನಾಂಕ:01.03.2018ರಿಂದ ಜಾರಿಗೆ ಬರುವಂತೆ ಸರ್ಕಾರದ ನಿಧಿಯಿಂದಲೇ ವೇತನ ಪಾವತಿಸಲು ಕ್ರಮವಹಿಸಲಾಗುತ್ತಿದ್ದು, ಅಗತ್ಯವಿರುವ ಅನುದಾನವನ್ನು ಸಂಬಂಧಿಸಿದ ಗ್ರಾಮ ಪಂಚಾಯಿತಿಗಳ ಇ.ಎಫ್.ಎಂ.ಎಸ್ ಖಾತೆಗಳಿಗೆ ಸರ್ಕಾರದಿಂದಲೇ ಬಿಡುಗಡೆ ಗೊಳಿಸಲಾಗುತ್ತಿದೆ ಎಂದಿದೆ. ಆದಾಗ್ಯೂ ಗ್ರಾಮ ಪಂಚಾಯಿತಿ ನೌಕರರಿಗೆ ವೇತನ ಪಾವತಿಸಲು ವಿಳಂಬ ಮಾಡುತ್ತಿರುವ…
ಬೆಂಗಳೂರು: ನಗರದಲ್ಲಿ ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ಅಕ್ಟೋಬರ್.23ರವರೆಗೆ ಜಾತಿಗಣತಿ ಸಮೀಕ್ಷೆಗೆ ಸರ್ಕಾರ ತಾತ್ಕಾಲಿಕವಾಗಿ ಬ್ರೇಕ್ ಹಾಕಿದೆ. ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೃಷ್ಣಾದಲ್ಲಿ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯ ಪ್ರಗತಿ ಪರಿಶೀಲನೆ ನಡೆಸಿದರು. ಹಿಂದುಳಿದ ವರ್ಗಗಳ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ, ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ಸಮೀಕ್ಷೆಗೆ ಅಕ್ಟೋಬರ್.23ರವರೆಗೆ ತಾತ್ಕಾಲಿಕವಾಗಿ ಬ್ರೇಕ್ ಹಾಕುವಂತ ನಿರ್ಧಾರವನ್ನು ಕೈಗೊಂಡರು. ಅಕ್ಟೋಬರ್ 23ರಿಂದ 31ರವರೆಗೆ ದೀಪಾವಳಿ ಹಬ್ಬದ ಬಳಿಕ ಬೆಂಗಳೂರಲ್ಲಿ ಮತ್ತೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ನಡೆಸಲು ಸಿಎಂ ಸಿದ್ಧರಾಮಯ್ಯ ಸೂಚಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಈ ವೇಳೆ ಸಚಿವರಾದ ಕೆ.ಜೆ.ಜಾರ್ಜ್, ಶಿವರಾಜ ತಂಗಡಗಿ, ರಾಮಲಿಂಗಾ ರೆಡ್ಡಿ, ಭೈರತಿ ಸುರೇಶ್, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂಧನ್ ಆರ್. ನಾಯಕ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್…
ಬೆಂಗಳೂರು: ನಗರದಲ್ಲಿ ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ಅಕ್ಟೋಬರ್.23ರವರೆಗೆ ಜಾತಿಗಣತಿ ಸಮೀಕ್ಷೆಗೆ ಸರ್ಕಾರ ತಾತ್ಕಾಲಿಕವಾಗಿ ಬ್ರೇಕ್ ಹಾಕಿದೆ. ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಅವರು ಸಮೀಕ್ಷೆ ಪ್ರಗತಿ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆಯನ್ನು ನಡೆಸಿದರು. ಹಿಂದುಳಿದ ವರ್ಗಗಳ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ, ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ಸಮೀಕ್ಷೆಗೆ ಅಕ್ಟೋಬರ್.23ರವರೆಗೆ ತಾತ್ಕಾಲಿಕವಾಗಿ ಬ್ರೇಕ್ ಹಾಕುವಂತ ನಿರ್ಧಾರವನ್ನು ಕೈಗೊಂಡರು. ಅಕ್ಟೋಬರ್ 23ರಿಂದ 31ರವರೆಗೆ ದೀಪಾವಳಿ ಹಬ್ಬದ ಬಳಿಕ ಬೆಂಗಳೂರಲ್ಲಿ ಮತ್ತೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ನಡೆಸಲು ಸಿಎಂ ಸಿದ್ಧರಾಮಯ್ಯ ಸೂಚಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ಬೆಂಗಳೂರು: ದೀಪಾವಳಿ ಹಬ್ಬ ಬಂತೆಂದರೇ ಸಾಕು ಪಟಾಕಿ ಹೊಡೆಯೋದು ಸಹಜ. ಇದರ ಜೊತೆ ಜೊತೆಗೆ ಮಕ್ಕಳು ಕಣ್ಣು, ಕೈಗಳಿಗೆ ಗಾಯಗಳನ್ನು ಮಾಡಿಕೊಳ್ಳುತ್ತಾರೆ. ಕೆಲವರಂತೂ ಕಣ್ಣನ್ನೇ ಕಳೆದುಕೊಂಡು ಬಿಡುತ್ತಾರೆ. ಸೋ ನೀವು ದಿಪಾವಳಿ ಸಂದರ್ಭದಲ್ಲಿ ಪಟಾಕಿ ಅವಘಡವನ್ನು ತಪ್ಪಿಸಲು ಈ ಕೆಳಗಿನ ಕೆಲ ಸಲಹೆ, ಎಚ್ಚರಿಕೆಗಳನ್ನು ತಪ್ಪದೇ ಪಾಲಿಸಿ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಅವಘಡಗಳು ಸಂಭವಿಸದಲ್ಲಿ ಕಣ್ಣಿಗೆ ಹಾನಿಯಾಗುವುದನ್ನು ತಪ್ಪಿಸಲು ಈಗಾಗಲೇ ಬೆಂಗಳೂರಿನ ಮಿಂಟೋ ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳು ಸಜ್ಜುಗೊಂಡಿವೆ. ಪಟಾಕಿ ಅವಘಡದಿಂದ ಉಂಟಾಗುವ ಸುಟ್ಟ ಗಾಯಗಳಿಗೆ ತುರ್ತು ಚಿಕಿತ್ಸೆ ನೀಡಲು ವಿಕ್ಟೋರಿಯಾ ಆಸ್ಪತ್ರೆಯಲ್ಲೂ ವ್ಯವಸ್ಥೆ ಮಾಡಲಾಗಿದೆ. ಪಟಾಕಿ ಸಿಡಿತದಿಂದ ಗಾಯಗೊಂಡಾಗ ಈ ತುರ್ತು ಕಾಳಜಿ ಅಗತ್ಯ ಪಟಾಕಿ ಅವಘಡ ಸಂಭವಿಸಿದಲ್ಲಿ ಗಾಬರಿಯಾಗದೇ ಶಾಂತಿ, ಸಮಾಧಾನದಿಂದ ವರ್ತಿಸುವುದು ಒಳಿತು. ಜೊತೆಗೆ ಮಕ್ಕಳನ್ನು ಗದರದೇ ಸಮಾಧಾನದಿಂದ ಸಂತೈಸಿ. ಗಾಯವಾದ ಕಣ್ಣನ್ನು ಮುಚ್ಚಬೇಡಿ. ಕಣ್ಣೊಳಗೆ ಸೇರಿದ ವಸ್ತುಗಳನ್ನು ತೆಗೆಯದೇ, ಹಗುರಾದ ಪೇಪರ್ ಕಪ್ ಅಥವಾ ಪರಿಶುದ್ಧ ಬಟ್ಟೆಯಿಂದ ನಿಧಾನವಾಗಿ ಮುಚ್ಚಬೇಕು ಅಥವಾ ಹೊದಿಸಿ.…
ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸಿದಂತ ಆಟೋ ಚಾಲಕನೊಬ್ಬನನ್ನು ಸಾರ್ವಜನಿಕವಾಗಿ ನಿಂದಿಸಿದ್ದಲ್ಲದೇ, ಆತನ ಮೇಲೆ ಸಂಚಾರ ಪೊಲೀಸರು ಹಲ್ಲೆ ಕೂಡ ಮಾಡಿದ್ದರು. ಈ ವೀಡಿಯೋ ವೈರಲ್ ಆಗಿತ್ತು. ಈ ಹಿನ್ನಲೆಯಲ್ಲಿ ಹಲ್ಲೆ ಮಾಡಿದ ಪೊಲೀಸ್ ಅಧಿಕಾರಿ, ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಈ ಕುರಿತು ಸಿಎಂ ಸಿದ್ಧರಾಮಯ್ಯ ಅವರ ಕಚೇರಿಯಿಂದ ಮಾಹಿತಿ ಬಿಡುಗಡೆ ಮಾಡಿದ್ದು,ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಕುರಿಯ ಗ್ರಾಮದಲ್ಲಿ ಆಟೋ ಚಾಲಕರೊಬ್ಬರು ಸಮವಸ್ತ್ರ ಧರಿಸದೆ ಆಟೋ ಚಾಲನೆ ಮಾಡಿದ ಕಾರಣ ಸಂಚಾರಿ ಪೊಲೀಸರು ಮೋಟಾರ್ ವಾಹನ ಕಾಯ್ದೆ ಉಲ್ಲಂಘನೆ ಮಾಡಿ ಆಟೋ ಚಾಲಕನನ್ನು ನಿಂದಿಸಿ, ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು. ಈ ವಿಚಾರ ಮುಖ್ಯಮಂತ್ರಿಯವರ ಕಚೇರಿಯ ಕುಂದುಕೊರತೆ ವಿಭಾಗದ ಗಮನಕ್ಕೆ ಬಂದಿದ್ದು, ವಿಶೇಷ ಕರ್ತವ್ಯಾಧಿಕಾರಿಗಳು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು. ಜನಸ್ನೇಹಿ ಆಡಳಿತ ನೀಡುವುದು ಸರ್ಕಾರದ ಆದ್ಯತೆಯಾಗಿದ್ದು, ಅದರಂತೆ ಹಲ್ಲೆ ಮಾಡಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಕರ್ತವ್ಯದಿಂದ ಅಮಾನತುಗೊಳಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ…
ನವದೆಹಲಿ: ಪರಿಣಿತಿ ಚೋಪ್ರಾ ಮತ್ತು ರಾಘವ್ ಚಡ್ಡಾ ಮೊದಲ ಬಾರಿಗೆ ಪೋಷಕರಾಗಿದ್ದಾರೆ. ದಂಪತಿಗಳು ಭಾನುವಾರ ಗಂಡು ಮಗುವನ್ನು ಸ್ವಾಗತಿಸಿದರು. ಅವರು ಸಾಮಾಜಿಕ ಮಾಧ್ಯಮದಲ್ಲಿ ಮುದ್ದಾದ ಪೋಸ್ಟ್ ಮೂಲಕ ಸಂತೋಷದ ಸುದ್ದಿಯನ್ನು ಘೋಷಿಸಿದರು. ಜಂಟಿ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ, ದಂಪತಿಗಳು ತಮ್ಮ ಅಭಿಮಾನಿಗಳು ಮತ್ತು ಹಿತೈಷಿಗಳೊಂದಿಗೆ ಶುಭ ಸುದ್ದಿಯನ್ನು ಹಂಚಿಕೊಂಡರು, ಅವರು ಪೋಷಕರಾಗುತ್ತಿದ್ದಂತೆ ಕೃತಜ್ಞತೆ ಮತ್ತು ಉತ್ಸಾಹವನ್ನು ವ್ಯಕ್ತಪಡಿಸಿದರು. ಪೋಸ್ಟ್‌ನಲ್ಲಿ, “ಅವನು ಅಂತಿಮವಾಗಿ ನಮ್ಮ ಮಗುವಾಗಿದ್ದಾನೆ. ಮತ್ತು ನಾವು ಅಕ್ಷರಶಃ ಹಿಂದಿನ ಜೀವನವನ್ನು ನೆನಪಿಸಿಕೊಳ್ಳಲು ಸಾಧ್ಯವಿಲ್ಲ. ತೋಳುಗಳು ತುಂಬಿವೆ, ನಮ್ಮ ಹೃದಯಗಳು ತುಂಬಿವೆ. ಮೊದಲು ನಾವು ಒಬ್ಬರನ್ನೊಬ್ಬರು ಹೊಂದಿದ್ದೇವೆ, ಈಗ ನಮಗೆ ಎಲ್ಲವೂ ಇದೆ… ಕೃತಜ್ಞತೆಯಿಂದ ಪರಿಣಿತಿ ಮತ್ತು ರಾಘವ್ ಎಂದಿದ್ದಾರೆ. https://kannadanewsnow.com/kannada/those-who-have-grown-up-using-the-facilities-of-bangalore-are-criticizing-and-tweeting-dks/ https://kannadanewsnow.com/kannada/these-are-the-main-causes-of-99-of-heart-attacks-and-strokes-study/
ಕೆಎನ್ಎನ್ ಡಿಜಿಟಲ್ ಡೆಸ್ಕ್: ಹೃದಯಾಘಾತ ಮತ್ತು ಪಾರ್ಶ್ವವಾಯು ಸೇರಿದಂತೆ ಬಹುತೇಕ ಎಲ್ಲಾ ಪ್ರಮುಖ ಹೃದಯ ಸಂಬಂಧಿ ಘಟನೆಗಳು ಕೇವಲ ನಾಲ್ಕು ಪ್ರಮುಖ ಮಾರ್ಪಡಿಸಬಹುದಾದ ಅಪಾಯಕಾರಿ ಅಂಶಗಳಿಗೆ ಸಂಬಂಧಿಸಿವೆ ಎಂದು ಹೊಸ ಅಧ್ಯಯನವು ಬಹಿರಂಗಪಡಿಸಿದೆ. ಹೃದಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಯಾರಿಗಾದರೂ, ಈ ಸಂಶೋಧನೆಯು ತಡೆಗಟ್ಟುವಿಕೆಯಲ್ಲಿನ ಅಪಾಯ ಮತ್ತು ಅವಕಾಶ ಎರಡನ್ನೂ ಒತ್ತಿಹೇಳುತ್ತದೆ. ಅಧ್ಯಯನವು ಏನು ಕಂಡುಹಿಡಿದಿದೆ ಜರ್ನಲ್ ಆಫ್ ದಿ ಅಮೇರಿಕನ್ ಕಾಲೇಜ್ ಆಫ್ ಕಾರ್ಡಿಯಾಲಜಿಯಲ್ಲಿ ಪ್ರಕಟವಾದ ಅಧ್ಯಯನವು ದಕ್ಷಿಣ ಕೊರಿಯಾ ಮತ್ತು ಯುನೈಟೆಡ್ ಸ್ಟೇಟ್ಸ್‌ನಾದ್ಯಂತ 9 ಮಿಲಿಯನ್‌ಗಿಂತಲೂ ಹೆಚ್ಚು ವಯಸ್ಕರ ಆರೋಗ್ಯ ಡೇಟಾವನ್ನು ವಿಶ್ಲೇಷಿಸಿದೆ. ಅವರ ತೀರ್ಮಾನಗಳು ಸ್ಪಷ್ಟವಾಗಿದ್ದವು: 99 ಪ್ರತಿಶತ ಹೃದಯಾಘಾತ, ಪಾರ್ಶ್ವವಾಯು ಅಥವಾ ಹೃದಯ ವೈಫಲ್ಯಗಳು ಘಟನೆಗೆ ಮೊದಲು ಕನಿಷ್ಠ ನಾಲ್ಕು ಅಪಾಯಕಾರಿ ಅಂಶಗಳಲ್ಲಿ ಒಂದನ್ನು ಹೊಂದಿದ್ದ ಜನರಲ್ಲಿ ಸಂಭವಿಸಿವೆ. 60 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಹಿಳೆಯರಲ್ಲಿ – ಸಾಮಾನ್ಯವಾಗಿ ಕಡಿಮೆ ಅಪಾಯದಲ್ಲಿದೆ ಎಂದು ಪರಿಗಣಿಸಲಾಗುತ್ತದೆ – ಅಂತಹ ಹೃದಯ ಸಂಬಂಧಿ ಘಟನೆಗಳಲ್ಲಿ 95 ಪ್ರತಿಶತಕ್ಕಿಂತ…
ಬೆಂಗಳೂರು : “ಬೆಂಗಳೂರಿನ ಸೌಲಭ್ಯಗಳನ್ನು ಬಳಸಿಕೊಂಡು ಉದ್ಯಮ ಆರಂಭಿಸಿ ದೊಡ್ಡ ಮಟ್ಟಕ್ಕೆ ಬೆಳೆದವರು. ಈಗ ಬೆಂಗಳೂರಿನ ಬಗ್ಗೆ ಟೀಕೆ ಮಾಡಿ ಟ್ವೀಟ್ ಮಾಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಘನತೆಗೆ ಚ್ಯುತಿ ತರುತ್ತಿರುವವರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು. ಬೆಂಗಳೂರಿನ ಕೋರಮಂಗಲದ ವೀರ ಯೋಧ ಉದ್ಯಾನವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ “ಬೆಂಗಳೂರು ನಡಿಗೆ” ಅಭಿಯಾನದ ಅಂಗವಾಗಿ “ನಾಗರಿಕರೊಂದಿಗೆ ಸಂವಾದ” ನಡೆಸಿ, ಅವರ ಅಹವಾಲುಗಳನ್ನು ಆಲಿಸಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾತನಾಡಿದರು. “ಬೆಂಗಳೂರಿಗೆ ಬಂದು ಬೆಳೆದಿರುವವರು ಹಿಂದೆ ಹೇಗಿದ್ದೆವು, ಪ್ರಸ್ತುತ ಹೇಗಿದ್ದೇವೆ ಎಂಬುದನ್ನು ಮರೆತು ಟ್ವೀಟ್ ಮಾಡುತ್ತಿದ್ದಾರೆ. ನಾವು ನಮ್ಮ ಮೂಲವನ್ನು ಮರೆಯಬಾರದು, ಮೂಲವನ್ನು ಮರೆತರೆ ಯಶಸ್ಸು ಸಾಧಿಸುವುದಿಲ್ಲ ಎಂದು ನಾನು ನಂಬಿದ್ದೇನೆ” ಎಂದು ತಿಳಿಸಿದರು. “ನಗರದಾದ್ಯಂತ ಎಲ್ಲೆಲ್ಲಿ ರಸ್ತೆಗುಂಡಿಗಳಿವೆ ಎಂಬುದನ್ನು ಸಾರ್ವಜನಿಕರೇ ಫೋಟೊ ತೆಗೆದು ಅದನ್ನು ಮೊಬೈಲ್ ಆ್ಯಪ್ ಮೂಲಕ ಸರ್ಕಾರದ ಗಮನಕ್ಕೆ ತರುವ ವ್ಯವಸ್ಥೆಯನ್ನು ಇಡೀ ದೇಶದಲ್ಲಿಯೇ ಮೊದಲ ಬಾರಿಗೆ ನಾವು ರೂಪಿಸಿದ್ದೇವೆ. ಮಾಧ್ಯಮಗಳೂ ಸಹ ಸುದ್ದಿ ಮಾಡುತ್ತಿವೆ. ನಾನು…
ಬೆಂಗಳೂರು: ಕಳಪೆ ರಸಗೊಬ್ಬರ, ಕಳಪೆ ಕೀಟನಾಶಕಗಳು ರೈತನ ಬದುಕನ್ನು ನಾಶ ಮಾಡುತ್ತಿವೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಕಳವಳ ವ್ಯಕ್ತಪಡಿಸಿದರು. ಬೆಂಗಳೂರಿನ ಯಲಹಂಕದಲ್ಲಿರುವ ರಾಷ್ಟ್ರೀಯ ಕೃಷಿ ಕೀಟ ಸಂಪನ್ಮೂಲ ಬ್ಯೂರೋ (ICAR) 33ನೇ ಸಂಸ್ಥಾಪನಾ ದಿನಾಚರಣೆ ಹಾಗೂ 3ನೇ ಕೃಷಿ ಕೀಟ ಜೈವಿಕ ನಿಯಂತ್ರಣ ಪ್ರದರ್ಶನವನ್ನು ಉದ್ಘಾಟಿಸಿ ಕೇಂದ್ರ ಸಚಿವರು ಮಾತನಾಡಿದರು. ಮನುಕುಲಕ್ಕೆ ಭೂಮಿ ಬಹಳ ಮುಖ್ಯ ಎಂಬುದನ್ನು ನಾವು ಮರೆಯಬಾರದು. ಮನುಷ್ಯನ ಆರೋಗ್ಯದಂತೆ ಭೂಮಿಯ ಆರೋಗ್ಯವು ಅತೀ ಮುಖ್ಯ. ಆದರೆ, ಕಳಪೆ ರಸಗೊಬ್ಬರ ಹಾಗೂ ಕೀಟನಾಶಕಗಳು ಮನುಷ್ಯ, ಭೂಮಿಯ ಆರೋಗ್ಯವನ್ನು ಹಾಳು ಮಾಡುತ್ತಿವೆ ಎಂದು ಕುಮಾರಸ್ವಾಮಿ ಅವರು ಆತಂಕ ವ್ಯಕ್ತಪಡಿಸಿದರು. ರಾಜ್ಯದಲ್ಲಿ ತೆಂಗು ಬೆಳೆಗಾರರು ಕಷ್ಟದಲ್ಲಿ ಇದ್ದಾರೆ. ಕಪ್ಪುತಲೆ ಹುಳದ ಬಾಧೆಯಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸ್ವತಃ ನನ್ನ ತೋಟವು ಈ ಸಂಕಷ್ಟಕ್ಕೆ ತುತ್ತಾಗಿದ್ದು, ತೆಂಗಿನ ಮರಗಳ ಗರಿಗಳು ಒಣಗುತ್ತಿವೆ. ಸ್ವತಃ ನಾನೇ ಸಂಕಷ್ಟಕ್ಕೆ ಸಿಲುಕಿದ್ದೇನೆ ಎಂದು ಸಚಿವರು ಹೇಳಿದರು. ಪ್ರಧಾನಿ ನರೇಂದ್ರ…














