Author: kannadanewsnow09

ಬೆಂಗಳೂರು: ವಿಪಕ್ಷ ನಾಯಕ ಆರ್.ಅಶೋಕ್ ಅವರು ಮಾತನಾಡಿ, ಸಿದ್ದರಾಮಯ್ಯ ಸೇರಿ ಯಾರೇ ಪ್ರಚಾರ ಮಾಡಿದರೂ ಕಾಂಗ್ರೆಸ್ಸಿಗೆ ಇಲ್ಲಿ ಉಳಿಗಾಲ ಇಲ್ಲ ಎಂದು ಅಭಿಪ್ರಾಯಪಟ್ಟರು. ವೈ.ಎ.ನಾರಾಯಣಸ್ವಾಮಿ ಮತ್ತು ಅ.ದೇವೇಗೌಡರ ಗೆಲುವು ನಿಶ್ಚಿತ. ವೈ.ಎ.ನಾರಾಯಣಸ್ವಾಮಿ ಅವರು ಮಾಡಿರುವ ಕೆಲಸ, ಅವರ ಸಂಪರ್ಕ, ನಿರಂತರ ಸೇವೆ ಗಮನಿಸಿ ಅವರ ಆಶೀರ್ವಾದ ಖಚಿತ; ಬೆಂಗಳೂರಿನಲ್ಲಿ ಅ.ದೇವೇಗೌಡರು ಮತದಾರರ ಉತ್ತಮ ಒಲವನ್ನು ಹೊಂದಿದ್ದಾರೆ ಎಂದು ತಿಳಿಸಿದರು. ಎರಡೂ ಪಕ್ಷಗಳು ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ ಎಂದು ಅವರು ನುಡಿದರು. ವೈ.ಎ.ನಾರಾಯಣಸ್ವಾಮಿ ಮತ್ತು ಅ.ದೇವೇಗೌಡ ಅವರು ನಾಮಪತ್ರ ಸಲ್ಲಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಡಿಸಿಎಂ ಗೋವಿಂದ ಕಾರಜೋಳ, ಡಾ.ಅಶ್ವತ್ಥನಾರಾಯಣ, ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್, ಸಂಸದ ಪಿ.ಸಿ.ಮೋಹನ್, ಶಾಸಕ ಸುರೇಶ್ ಗೌಡ, ಮುಖಂಡ ಲಕ್ಷ್ಮೀನಾರಾಯಣ್, ಮಾಜಿ ಶಾಸಕ ಎಂ.ಕೃಷ್ಣರೆಡ್ಡಿ ಮತ್ತಿತರ ಮುಖಂಡರು ಹಾಜರಿದ್ದರು. https://kannadanewsnow.com/kannada/viral-video-voter-standing-in-queue-to-cast-his-vote-slapped-by-andhra-cm-jagans-party-mla/ https://kannadanewsnow.com/kannada/all-our-candidates-will-win-in-legislative-council-elections-by-vijayendra/

Read More

ಬೆಂಗಳೂರು: ವಿಧಾನಪರಿಷತ್ತಿಗೆ ನಡೆಯುವ ಚುನಾವಣೆಗೆ ಇಬ್ಬರು ಅಭ್ಯರ್ಥಿಗಳೂ ಇಂದು ನಾಮಪತ್ರ ಸಲ್ಲಿಸಿದ್ದಾರೆ. ನಮ್ಮೆಲ್ಲ ಅಭ್ಯರ್ಥಿಗಳು ಗೆಲುವು ಸಾಧಿಸುವುದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸದಿಂದ ನುಡಿದರು. ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಅವರು ಮಾತನಾಡಿದರು. ನಮ್ಮ ಪಕ್ಷದ ಎಲ್ಲ ಹಿರಿಯ ಮುಖಂಡರು, ಜೆಡಿಎಸ್ ಪಕ್ಷದ ಸಮ್ಮುಖದಲ್ಲಿ ನಮ್ಮ ಇಬ್ಬರು ಅಭ್ಯರ್ಥಿಗಳು ಶುಭಗಳಿಗೆಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ವಿಧಾನಪರಿಷತ್‍ನಲ್ಲಿ ಅಪಾರ ಅನುಭವ ಇರುವ ನಮ್ಮ ಇಬ್ಬರು ಅಭ್ಯರ್ಥಿಗಳು ಮತ್ತೊಮ್ಮೆ ದೊಡ್ಡ ಅಂತರದಲ್ಲಿ ವಿಜಯಶಾಲಿಯಾಗಿ ಬರಲಿದ್ದಾರೆ ಎಂದು ನುಡಿದರು. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಟ್ಟಾಗಿ ಲೋಕಸಭಾ ಚುನಾವಣೆಯನ್ನು ಎದುರಿಸಿದ್ದೆವು. ಈ ಚುನಾವಣೆಯನ್ನೂ ಒಗ್ಗಟ್ಟಾಗಿ ಎದುರಿಸಿ ಎಲ್ಲ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ತಿಳಿಸಿದರು. https://kannadanewsnow.com/kannada/neha-hiremath-murder-case-cid-to-file-chargesheet-soon/ https://kannadanewsnow.com/kannada/viral-video-voter-standing-in-queue-to-cast-his-vote-slapped-by-andhra-cm-jagans-party-mla/

Read More

ಬೆಂಗಳೂರು: ಹಲ್ಲೆಗೊಳಗಾಗಿರುವಂತ ಸ್ಯಾಂಡಲ್ ವುಡ್ ನಟ ಚೇತನ್ ಚಂದ್ರ ಸೇರಿದಂತೆ ಇಬ್ಬರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಮೂಲಕ ಹಲ್ಲೆಗೊಳಗಾದಂತ ನಟ ಚೇತನ್ ಚಂದ್ರ ವಿರುದ್ಧವೂ ಎಫ್ಐಆರ್ ದಾಖಲಾಗಿದೆ. ನಟ ಚೇತನ್ ಚಂದ್ರ ಮೇಲೆ ಹಲ್ಲೆ ಮಾಡಿದಂತ ಆರೋಪದಲ್ಲಿ ಇಬ್ಬರನ್ನು ಕಗ್ಗಲೀಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕಿರಣ್ ಮತ್ತು ಹರೀಶ್ ಎಂಬ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಮತ್ತೊಂದೆಡೆ  ಐಶ್ವರ್ಯಾ ಹಾಗೂ ಪತಿ ಕಿರಣ್ ಮೇಲೆ ಹಲ್ಲೆ ಆರೋಪದಡಿ ಕಗ್ಗಲೀಪುರ ಪೊಲೀಸ್ ಠಾಣೆಗೆ ಐಶ್ವರ್ಯ ದೂರು ನೀಡಿದ್ದರು. ಈ ದೂರು ಆಧರಿಸಿ ನಟ ಚೇತನ್ ಚಂದ್ರ ಹಾಗೂ ಮತ್ತಿಬ್ಬರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ನಟ ಚೇತನ್ ಚಂದ್ರ ವಿರುದ್ಧ ಐಪಿಸಿ ಸೆಕ್ಷನ್ 323, 354 ಹಾಗೂ 34ರಡಿ ಕಗ್ಗಲಿಪುರ ಠಾಣೆಯ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. https://kannadanewsnow.com/kannada/two-accused-arrested-in-actor-chetan-chandra-assault-case/ https://kannadanewsnow.com/kannada/neha-hiremath-murder-case-cid-to-file-chargesheet-soon/

Read More

ಬೆಂಗಳೂರು: ನಟ ಚೇತನ್ ಚಂದ್ರ ಅವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿತ್ತು. ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಕಗ್ಗಲಿಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ನಟ ಚೇತನ್ ಚಂದ್ರ ಮೇಲೆ ಹಲ್ಲೆ ಮಾಡಿದ್ದ ಸಂಬಂಧ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಿರಣ್ ಮತ್ತು ಹರೀಶ್ ಎಂಬುದಾಗಿ ತಿಳಿದು ಬಂದಿದೆ. ಮತ್ತೊಂದೆಡೆ ನಟ ಚೇತನ್ ಚಂದ್ರ ವಿರುದ್ಧವೂ ಎಫ್ಐಆರ್ ದಾಖಲಾಗಿದೆ. ಐಶ್ವರ್ಯಾ ಹಾಗೂ ಪತಿ ಕಿರಣ್ ಮೇಲೆ ಹಲ್ಲೆ ಆರೋಪದಡಿ ಕಗ್ಗಲೀಪುರ ಪೊಲೀಸ್ ಠಾಣೆಗೆ ಐಶ್ವರ್ಯ ದೂರು ನೀಡಿದ್ದರು. ಈ ದೂರು ಆಧರಿಸಿ ನಟ ಚೇತನ್ ಚಂದ್ರ ಹಾಗೂ ಮತ್ತಿಬ್ಬರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ನಟ ಚೇತನ್ ಚಂದ್ರ ವಿರುದ್ಧ ಐಪಿಸಿ ಸೆಕ್ಷನ್ 323, 354 ಹಾಗೂ 34ರಡಿ ಕಗ್ಗಲಿಪುರ ಠಾಣೆಯ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಹಲ್ಲೆಗೊಳಗಾಗಿದ್ದಂತ ನಟ ಚೇತನ್ ಚಂದ್ರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. https://kannadanewsnow.com/kannada/i-have-not-done-anything-wrong-former-minister-hd-revanna/ https://kannadanewsnow.com/kannada/pornographic-video-case-sit-plans-to-issue-red-corner-notice-to-prajwal-revanna/

Read More

ಬೆಂಗಳೂರು: ಯಾವ ಕಾರಣಕ್ಕೂ ನಮ್ಮ ಸರ್ಕಾರವನ್ನು ಆಪರೇಷನ್ ಕಮಲ ಮಾಡಲು ಸಾಧ್ಯವಿಲ್ಲ. ಏಕೆಂದರೆ ಅವರು ಎನ್.ಡಿ. ಎ ಈ ಬಾರಿ ಸೋಲಲಿದೆ. ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಮ್ಮ ಶಾಸಕರು ಯಾರೂ ಮಾರಾಟವಾಗಲು ತಯಾರಿಲ್ಲ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ, ಮಹಾರಾಷ್ಟ್ರದಲ್ಲಿ ಆದಂತೆ ಆಪರೇಶನ್ ಕಮಲ ನಡೆಯಲಿದೆ ಎಂದು ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿದ ಅವರು ಅವರು, ಈಗಾಗಲೇ ಕಳೆದ ಒಂದು ವರ್ಷದಿಂದ ಇಂಥ ಪ್ರಯತ್ನ ಮಾಡಿ ವಿಫಲರಾಗಿದ್ದಾರೆ ಇನ್ನೊಂದು ಬಾರಿ ಏಕೆ ಪ್ರಯತ್ನಿಸುತ್ತಾರೆ. ನಮ್ಮ ಶಾಸಕರು ಯಾರೂ ಮಾರಾಟವಾಗಲು ತಯಾರಿಲ್ಲ. ಮಹಾರಾಷ್ಟ್ರದಲ್ಲಿ ಆದಂತೆ ಆಗಲೂ ಸಾಧ್ಯವಿಲ್ಲ ಎಂದರು. ರಾಜಕೀಯ ಧೃವೀ ಕಾರಣವಾಗಬಹುದೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಗೆಲ್ಲಲಿದ್ದು ನಮ್ಮವರೇ ಪ್ರಧಾನಮಂತ್ರಿಯಾಗಲಿದ್ದಾರೆ ಎಂದರು. ನಮ್ಮ ಅಭ್ಯರ್ಥಿಗಳು ಗೆಲ್ಲಲ್ಲಿದ್ದಾರೆ ಪದವೀಧರರ ಕ್ಷೇತ್ರದಿಂದ ರಾಮೋಜಿ ಗೌಡ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಹಾಗೂ ಶಿಕ್ಷಕರ ಕ್ಷೇತ್ರದಿಂದ ಬಿ. ಟಿ.ಶ್ರೀನಿವಾಸ್…

Read More

ಬೆಂಗಳೂರು: ನಾನು ತಪ್ಪು ಮಾಡಿಲ್ಲ. ತಪ್ಪು ಮಾಡದೇ ಇದ್ರೂ ನನ್ನ ಜೈಲಿಗೆ ಕಳುಹಿಸಲಾಗಿದೆ ಅಂತ ಮಾಜಿ ಸಚಿವ ಹೆಚ್.ಡಿ ರೇವಣ್ಣ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಹತ್ತು ನಿಮಿಷ ಕಣ್ಣೀರಿಟ್ಟಿದ್ದಾರೆ. ಇಂದು ಪರಪ್ಪನ ಅಗ್ರಹಾರದಲ್ಲಿ ಶಾಸಕ ಜಿ.ಟಿ ದೇವೇಗೌಡ ಅವರು, ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಅವರನ್ನು ಭೇಟಿಯಾಗಿ, ಚರ್ಚಿಸಿದರು. ಆ ಬಳಿಕ ಜೈಲಿನಿಂದ ಹೊರಬಂದಾಗ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ಭೇಟಿಯಾಗಿ ಹೆಚ್.ಡಿ ರೇವಣ್ಣ ಅವರ ಕುಶಲೋಪರಿ ಚರ್ಚೆ ಮಾಡಿದೆ. ಈ ವೇಳೆಯಲ್ಲಿ ನಾನು ತಪ್ಪು ಮಾಡದಿರುವ ವಿಚಾರಕ್ಕೆ ಸಿಲುಕಿಸಿದ್ರು ಅಂತ 10 ನಿಮಿಷ ಕಣ್ಣೀರಿಟ್ಟರು ಎಂದರು. ತಪ್ಪು ಮಾಡಿದ್ರೆ ಜೈಲಿಗೆ ಹಾಕಲಿ. ಮಾಡದೇ ಇರೋ ತಪ್ಪಿಗೆ ಜೈಲಿಗೆ ಹಾಕಿದ್ದಾರೆ. ಹಳೇ ವಿಚಾರ ಮೆಲುಕು ಹಾಕಿದ್ರು. ಅವರಿಗೆ ಹಾಸನ ಅಭಿವೃದ್ಧಿಯದ್ದೇ ಚಿಂತೆ ಎಂದರು. ತಪ್ಪು ಮಾಡದಿದ್ರೂ ಜೈಲಿಗೆ ಹಾಕಿದ್ದಾರಲ್ಲ ಅಂತ ಕೊರಗಿದೆ. ನನಗೆ ಈಗಲೂ ಅಭಿವೃದ್ಧಿ ಕಾರ್ಯಗಳ ಬಗ್ಗೆಯೇ ಚಿಂತೆ. ನಾನು ಮಹಿಳೆಯ ಜೊತೆಗೆ ಮಾತನಾಡಿಯೇ 6 ವರ್ಷಗಳಾಗಿವೆ ಎಂದು…

Read More

ಬೆಂಗಳೂರು: ಶಾಸಕರಲ್ಲಿ ಅಭಿವೃದ್ಧಿ ವಿಚಾರವಾಗಿ ಅಸಮಾಧಾನ ಇರೋದು ನಿಜ. ಆದ್ರೇ ಅದೇ ಕಾರಣಕ್ಕೆ ಕಾಂಗ್ರೆಸ್ ಸರ್ಕಾರ ಬೀಳುತ್ತೆ ಅನ್ನೋದು ಸುಳ್ಳಿ. 4 ವರ್ಷ ಕಾಂಗ್ರೆಸ್ ಸರ್ಕಾರ ಇರುತ್ತೆ. ಬೀಳೋ, ಬೀಳಿಸೋ ಮಾತೇ ಇಲ್ಲ ಎಂಬುದಾಗಿ ಪಿ ಡಬ್ಲ್ಯೂ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮುಖ್ಯಮಂತ್ರಿ ಕುರಿತಾಗಿ ನಮ್ಮ ನಮ್ಮಲ್ಲೇ ಜಗಳ ಇದೆ. ಅದು ಪಾರ್ಟಿಯಲ್ಲಿ ಇದೆ. ಮಹಾರಾಷ್ಟ್ರಕ್ಕೆ ಕರ್ನಾಟಕವನ್ನು ಹೋಲಿಕೆ ಮಾಡುವುದು ಬೇಡ. ಏಕನಾಥ ಶಿಂಧೆಗೆ ಮಾತನಾಡುವ ಸ್ವಾತಂತ್ರ್ಯವಿದೆ. ಮಾತನಾಡುತ್ತಾರೆ ಎಂಬುದಾಗಿ ತಿಳಿಸಿದರು. ಭಿನ್ನಮತ ಇದೆ ಅಂತ ಸರ್ಕಾರ ಬೀಳಿಸೋದಕ್ಕೆ ಆಗುತ್ತಾ ಎಂದು ಪ್ರಶ್ನಿಸಿದಂತ ಅವರು, ಶಾಸಕರ ಅಸಮಾಧಾನ ಇದೆ. ಅದಕ್ಕಾಗಿ ಸರ್ಕಾರ ಬೀಳುವುದಿಲ್ಲ. ಅಭಿವೃದ್ಧಿ, ವರ್ಗಾವಣೆ ಬಗ್ಗೆ ಸಮಸ್ಯೆ ಇದೆ. ಅದಕ್ಕೆ ಸರ್ಕಾರ ಬೀಳಲ್ಲ. ಅದು ಎಲ್ಲಾ ಸರ್ಕಾರದಲ್ಲೂ ಇದ್ದೇ ಇರೋದು. ಯಾವುದೇ ಕಾರಣಕ್ಕೂ 4 ವರ್ಷ ಕಾಂಗ್ರೆಸ್ ಸರ್ಕಾರ ಬೀಳುವುದಿಲ್ಲ. ಬೀಳಿಸೋದಕ್ಕೆ ಪ್ರಯತ್ನ ಪಟ್ರೆ ಅದು ಸಾಧ್ಯನೂ ಆಗಲ್ಲ ಅಂತ ಹೇಳಿದರು. https://kannadanewsnow.com/kannada/operation-nath-not-possible-in-karnataka-our-mlas-not-for-sale-siddaramaiah/…

Read More

ಬೆಂಗಳೂರು: ಮಹಾರಾಷ್ಟ್ರದಲ್ಲಿ ಆದಂತೆ ಕರ್ನಾಟಕಲ್ಲೂ ಆಪರೇಷನ್ ಆಗಲಿದೆ. ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಪತನಗೊಳ್ಳಲಿದೆ ಎಂಬುದಾಗಿ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಹೇಳಿದ್ದರು. ಆದ್ರೇ ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಆಪರೇಷನ್ ನಾಥ ಸಾಧ್ಯವಿಲ್ಲ. ನಮ್ಮ ಶಾಸಕರು ಯಾರು ಮಾರಾಟಕ್ಕೆ ಇಲ್ಲ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮಹಾರಾಷ್ಟ್ರ ಸಿಎಂ ಭ್ರಮೆಯಲ್ಲಿ ಇದ್ದಾರೆ. ಈಗಾಗಲೇ ಆಪರೇಷನ್ ಮಾಡೋದಕ್ಕೆ ಪ್ರಯತ್ನ ಪಟ್ಟು ವಿಫಲವಾಗಿದೆ. ಈಗ ಮತ್ತೆ ಪ್ರಯತ್ನ ಮಾಡ್ತಾರೆ. ಆದರೇ ಯಾವುದೇ ಕಾರಣಕ್ಕೂ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಆಪರೇಷನ್ ಮಾಡೋಕೆ ಸಾಧ್ಯವಿಲ್ಲ ಎಂದರು. ಲೋಕಸಭಾ ಚುನಾವಣೆಯಲ್ಲಿ ನಾವು ಕರ್ನಾಟಕದಲ್ಲಿ 20 ಸೀಟು ಗೆಲ್ಲುತ್ತೇವೆ. ಅವರು ಸೋಲಲಿದ್ದಾರೆ. ಅದಕ್ಕೆ ಹೀಗೆ ಹತಾಶರಾಗಿ ಕಾಂಗ್ರೆಸ್ ಸರ್ಕಾರವನ್ನು ಬೀಳಿಸೋ ಹೇಳಿಕೆ ನೀಡುತ್ತಿದ್ದಾರೆ ಎಂಬುದಾಗಿ ಮಹಾರಾಷ್ಟ್ರ ಸಿಎಂ ಶಿಂಧೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿರುಗೇಟು ನೀಡಿದರು. https://kannadanewsnow.com/kannada/big-trouble-for-congress-government-in-karnataka-will-it-fall-after-lok-sabha-elections-maha-cms-hint/ https://kannadanewsnow.com/kannada/pornographic-video-case-sit-plans-to-issue-red-corner-notice-to-prajwal-revanna/

Read More

ಬೆಂಗಳೂರು: ಲೋಕಸಭಾ ಚುನಾವಣೆಯ ಬಳಿಕ ಕರ್ನಾಟಕ ಕಾಂಗ್ರೆಸ್ ಸರ್ಕಾರ ಇರಲ್ಲ. ಪತನವಾಗಲಿದೆ ಅಂತ ಅನೇಕ ರಾಜಕೀಯ ನಾಯಕರು ಈಗಾಗಲೇ ಹೇಳಿದ್ದಾರೆ. ಮತ್ತೆ ಈ ವಿಷಯ ಮುನ್ನೆಲೆಗೆ ಬಂದಿದ್ದು, ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಬಿಗ್ ಆಪತ್ತು ಎದುರಾಗಿದೆ. ಲೋಕಸಭಾ ಚುನಾವಣೆ ಬಳಿಕ ಪತನವಾಗಲಿದೆ ಅಂತ ಮಹಾರಾಷ್ಟ್ರ ಸಿಎಂ ಏನಾಂಥ ಶಿಂಧೆ ಸುಳಿವು ನೀಡಿದ್ದಾರೆ. ಹೌದು ಲೋಕಸಭಾ ಚುನಾವಣೆಯ ಬಳಿಕ ಕರ್ನಾಟಕ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ನಡೆಯೋ ಸಾಧ್ಯತೆ ಇದೆ. ಬಿಜೆಪಿ-ಜೆಡಿಎಸ್ ನಾಯಕರು ಜೂನ್ ಬಳಿಕ ರಾಜ್ಯ ಸರ್ಕಾರ ಪತನವಾಗಲಿದೆ ಅಂತ ಈಗಾಗಲೇ ಹೇಳಿಕೆ ನೀಡಿದ್ದಾರೆ. ಈ ನಡುವೆ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಅವರು ನೀಡಿರುವಂತ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಮಹಾರಾಷ್ಟ್ರ ಮಾದರಿಯಲ್ಲೇ ಕರ್ನಾಟಕದಲ್ಲೂ ಆಪರೇಷನ್ ನಡೆಯುವ ಸುಳಿವನ್ನು ಮಹಾ ಸಿಎಂ ಏಕನಾಥ ಶಿಂಧೆ ನೀಡಿದ್ದಾರೆ. ಸತಾರದಲ್ಲಿ ಮಾತನಾಡಿರುವಂತ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಪತನಕ್ಕೆ ತೆರೆಮರೆಯಲ್ಲಿ ಸರ್ಕಸ್ ನಡೆಯುತ್ತಿದೆ ಎಂಬುದಾಗಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ನಾನು ಇತ್ತೀಚೆಗೆ ಕರ್ನಾಟಕದ ಒಂದು ಸಭೆಗೆ…

Read More

ಜಾರ್ಖಂಡ್: ಜಾರ್ಖಂಡ್ ನ ಪಲಮು ಎಂಬಲ್ಲಿ ಭಾನುವಾರ ಸಂಭವಿಸಿದ ಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ನಾಲ್ವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಜ್ಯ ರಾಜಧಾನಿ ರಾಂಚಿಯಿಂದ 190 ಕಿ.ಮೀ ದೂರದಲ್ಲಿರುವ ಮನತು ಪೊಲೀಸ್ ಠಾಣೆ ಪ್ರದೇಶದ ಸ್ಕ್ರ್ಯಾಪ್ ಡೀಲರ್ ಸ್ಥಳದಲ್ಲಿ ಸ್ಫೋಟ ಸಂಭವಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪಲಮು ಸೇರಿದಂತೆ ನಾಲ್ಕು ಸ್ಥಾನಗಳಿಗೆ ಲೋಕಸಭಾ ಚುನಾವಣೆಯ ಮುನ್ನಾದಿನದಂದು ಈ ಘಟನೆ ನಡೆದಿದೆ. ಘಟನೆಯಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪಲಮು ಪೊಲೀಸ್ ವರಿಷ್ಠಾಧಿಕಾರಿ ರೀಷ್ಮಾ ರಮೇಸನ್ ಪಿಟಿಐಗೆ ತಿಳಿಸಿದ್ದಾರೆ. “ಬಾಂಬ್ ಸ್ಫೋಟದ ಸಾಧ್ಯತೆ ಸೇರಿದಂತೆ ಎಲ್ಲಾ ಕೋನಗಳಿಂದ ನಾವು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದೇವೆ” ಎಂದು ಅವರು ಹೇಳಿದರು.

Read More