Author: kannadanewsnow09

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗೋ ವಿಶ್ವಾಸ ಹೊಂದಿದ್ದಾರೆ. ಇದೇ ಕಾರಣಕ್ಕಾಗಿ ತಮ್ಮ ಮುಂದಿನ ಸರ್ಕಾರದ 100 ದಿನಗಳ ಕಾರ್ಯಸೂಚಿಯನ್ನು ರಚಿಸಲು 10 ಸಮಿತಿಗಳನ್ನು ನಮೋ ರಚಿಸಿದ್ದಾರೆ. ದೇಶದಲ್ಲಿ ಇದೀಗ ಲೋಕಸಭಾ ಚುನಾವಣೆ ನಡೆಯುತ್ತಿದೆ. ಏತನ್ಮಧ್ಯೆ, ನಾಲ್ಕನೇ ಹಂತದ ಮತದಾನವು ಮೇ 13 ರ ಸೋಮವಾರ ನಡೆಯಲಿದೆ. ಲೋಕಸಭಾ ಚುನಾವಣೆಯ ಫಲಿತಾಂಶಕ್ಕೂ ಮುನ್ನವೇ ಪ್ರಧಾನಿ ಮೋದಿ ಮೂರನೇ ಅವಧಿಗೆ ತಯಾರಿ ಆರಂಭಿಸಿದ್ದಾರೆ. ಮುಂದಿನ 100 ದಿನಗಳ ಸರ್ಕಾರದ ಕಾರ್ಯಸೂಚಿಯನ್ನು ಜೂನ್ 4 ರಂದು ಫಲಿತಾಂಶಗಳು ಹೊರಬಂದ ಕೂಡಲೇ ಮಂತ್ರಿಮಂಡಲದ ಮೊದಲ ಸಭೆಯಲ್ಲಿ ಜಾರಿಗೆ ತರಲಾಗುವುದು. ಮೋದಿ ಪ್ರಸ್ತುತ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದಾರೆ. ಆದರೆ ಅವರು ತಮ್ಮ ಸರ್ಕಾರದ 100 ದಿನಗಳ ಕಾರ್ಯಸೂಚಿಯನ್ನು ಕಾರ್ಯಗತಗೊಳಿಸಲು ತಮ್ಮ ಉನ್ನತ ಕಾರ್ಯದರ್ಶಿಗಳ 10 ಸಮಿತಿಗಳನ್ನು ನೇಮಿಸಿದ್ದಾರೆ. ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಕೆಲಸದ ಕಾರ್ಯಸೂಚಿಯನ್ನು ಅಂತಿಮಗೊಳಿಸಲು ಕಾರ್ಯದರ್ಶಿಗಳ 10 ಗುಂಪುಗಳನ್ನು ರಚಿಸಲಾಗಿದೆ ಎಂದು ಸರ್ಕಾರಿ ಮೂಲಗಳು ಇಂಡಿಯಾ ಟುಡೇಗೆ ತಿಳಿಸಿವೆ. ಪ್ರಧಾನಿ…

Read More

ಪ್ರತಿಯೊಬ್ಬರ ಜೀವನದಲ್ಲಿ ಪ್ರಗತಿ ಬಹಳ ಮುಖ್ಯ. ಹೀಗಾಗಿ, ನಾವು ನಮ್ಮ ವ್ಯಾಪಾರ, ಕೆಲಸ ಅಥವಾ ಕುಟುಂಬದ ಆರ್ಥಿಕತೆಯಲ್ಲಿ ಪ್ರಗತಿಯನ್ನು ಸಾಧಿಸಿದಾಗ, ನಮಗೆ ತಿಳಿಯದೆ ಶತ್ರುಗಳು ಮತ್ತು ದೇಶದ್ರೋಹಿಗಳು ಸೃಷ್ಟಿಯಾಗುತ್ತಾರೆ. ಕನಿಷ್ಠ ನಾವು ನಮ್ಮ ಶತ್ರುಗಳನ್ನು ಒಂದು ರೀತಿಯಲ್ಲಿ ನಂಬಬಹುದು. ಆದರೆ ದೇಶದ್ರೋಹಿಗಳನ್ನು ಹುಡುಕುವುದು ತುಂಬಾ ಕಷ್ಟ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ…

Read More

ಬೆಂಗಳೂರು: ಅರವಿಂದ ಕೇಜ್ರಿವಾಲ್‌ ಬಹಳ ದಿನ ಜೈಲಲ್ಲಿದ್ದಿದ್ದರಿಂದ ಹುಚ್ಚರಂತೆ ವರ್ತಿಸುತ್ತಿದ್ದಾರೆ. ವಯಸ್ಸಿನ ಆಧಾರದ ಮೇಲೆ ಟಿಕೆಟ್ ನೀಡುವ ಕುರಿತು ಬಿಜೆಪಿಯಲ್ಲಿ ತೀರ್ಮಾನ ಕೈಗೊಂಡಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂಡಿಯಾ ಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಅವರಿಗೆ ಗೊತ್ತಿಲ್ಲ. ಈಗಾಗಲೇ ನರೇಂದ್ರ ಮೋದಿಯವರೇ ಮತ್ತೆ ಪ್ರಧಾನಿಯಾಗುವುದು ನಿಶ್ಚಿತವಾಗಿದೆ. 75 ವರ್ಷ ಕಳೆದವರಿಗೆ ಟಿಕೆಟ್‌ ನೀಡಲಾಗುತ್ತಿದೆ. ಟಿಕೆಟ್‌ ನೀಡುವುದಿಲ್ಲ ಎಂಬ ನಿರ್ಧಾರ ಪಕ್ಷದಲ್ಲಿ ಆಗಿಲ್ಲ. ಇದನ್ನು ಕಾಂಗ್ರೆಸ್‌ನವರೇ ಸೃಷ್ಟಿ ಮಾಡಿಕೊಂಡಿದ್ದಾರೆ. ಕೇಜ್ರಿವಾಲ್‌ ಅವರು ಮರಳಿ ಜೈಲಿಗೆ ಹೋಗಬೇಕಿದೆ. ಅವರು ಮತ್ತೆ ಬಿಡುಗಡೆಯಾಗುವುದಿಲ್ಲ ಎಂದರು. ಅವರು ತಪ್ಪು ಮಾಡಿಲ್ಲವಾದರೆ ನ್ಯಾಯಾಲಯ ಕೂಡಲೇ ಜಾಮೀನು ನೀಡುತ್ತದೆ. ಲಾಲೂ ಪ್ರಸಾದ್‌ ಕೂಡ ಜೈಲಿಗೆ ಹೋಗಿದ್ದಾರೆ. ಜಾಮೀನು ಸಿಕ್ಕಿಲ್ಲ ಎಂದಾದರೆ ಅದಕ್ಕೆ ಸೂಕ್ತವಾದ ಪುರಾವೆ ಇದೆ ಎಂದರ್ಥ. ಅನೇಕ ವಿರೋಧ ಪಕ್ಷಗಳಿದ್ದರೂ ತಪ್ಪು ಮಾಡಿದವರು ಮಾತ್ರ ಜೈಲಿಗೆ ಹೋಗಿದ್ದಾರೆ ಎಂದರು. ವಿಧಾನಪರಿಷತ್‌ ಚುನಾವಣೆಯಲ್ಲಿ ಹೊಂದಾಣಿಕೆ ದೃಷ್ಟಿಯಿಂದ ಪಕ್ಷದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಅಭ್ಯರ್ಥಿಗಳ…

Read More

ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷದ ಸಭೆ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯಿಸಿದರು. ಬಿಜೆಪಿ ಅಧಿಕಾರಕ್ಕೆ ಬಂದರೆ ಮೋದಿ ಅವರ ಅವಧಿ ಕೇವಲ ಒಂದು ವರ್ಷ ಮಾತ್ರ ಎಂಬ ಕೇಜ್ರಿವಾಲ್ ಅವರ ಹೇಳಿಕೆಗೆ ಬಿಜೆಪಿ ಟೀಕೆ ಮಾಡಿರುವ ಬಗ್ಗೆ ಕೇಳಿದಾಗ ಅವರು ಉತ್ತರಿಸಿದ್ದು ಹೀಗೆ; “ಈ ಬಾರಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಪ್ರಧಾನಿಯಾಗಲು ಸಾಧ್ಯವಿಲ್ಲ. ದೇಶದಲ್ಲಿ ಕಾಂಗ್ರೆಸ್ ಹಾಗು ಇಂಡಿಯಾ ಮೈತ್ರಿಕೂಟ ಆಡಳಿತ ಮಾಡಲಿದೆ ಎಂಬ ವಿಶ್ವಾಸ ನನ್ನದು” ಎಂದರು. ಲೋಕಸಭೆ ಮಾದರಿಯಲ್ಲಿ ಪರಿಷತ್ ಚುನಾವಣೆ ಎದುರಿಸುತ್ತೇವೆ: ಪರಿಷತ್ ಚುನಾವಣೆ ಪೂರ್ವಭಾವಿ ಸಭೆ ಬಗ್ಗೆ ಕೇಳಿದಾಗ, “ಶಿಕ್ಷಕರ ಹಾಗು ಪದವೀಧರ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ವಿಚಾರವಾಗಿ ನಮ್ಮ ಪಕ್ಷದ ನಾಯಕರು ಹಾಗು ಪದಾಧಿಕಾರಿಗಳ ಜತೆ ಚರ್ಚೆ ಮಾಡಿದ್ದೇವೆ. ಬ್ಲಾಕ್ ಕಾಂಗ್ರೆಸ್…

Read More

ಬೆಂಗಳೂರು: ನಗರದ ಹಲವು ಶಾಲೆಗಳಿಗೆ ಈಗಾಗಲೇ ಬಾಂಬ್ ಬೆದರಿಕೆ ಹಾಕಲಾಗಿತ್ತು. ಈಗ ಬೆಂಗಳೂರಿನ ಪ್ರತಿಸ್ಠಿತ ಆಸ್ಪತ್ರೆಯೊಂದಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿರುವಂತದ್ದು ಬೆಳಕಿಗೆ ಬಂದಿದೆ. ಬೆಂಗಳೂರಿನ ಹತ್ತಾರು ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಗಳಿಂದ ರಾಜ್ಯದ ರಾಜಧಾನಿ ಜನರು, ಶಾಲಾ ಮಕ್ಕಳ ಪೋಷಕರು ಬೆಚ್ಚಿ ಬಿದ್ದಿದ್ದರು. ಈ ಘಟನೆ ಮಾಸೋ ಮುನ್ನವೇ ನಗರದ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಒಂದಾಗಿರುವಂತ ಸೇಂಟ್ ಫಿಲೋಮಿನಾ ಆಸ್ಪತ್ರೆಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಬೆಂಗಳೂರಿನ ನಾಗಾವಾರದಲ್ಲಿರುವಂತ ಸೇಂಟ್ ಫಿಲೋಮಿನಾ ಆಸ್ಪತ್ರೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಬೆಂಗಳೂರು ಪೊಲೀಸರ ಅಕೌಂಟ್ ಖಾತೆಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಪೊಲೀಸ್ ಇಲಾಖೆಯ ಸಿಟಿ ಎಸ್ ಬಿಗೆ ಬಂದಿದ್ದಂತ ಇ-ಮೇಲ್ ನಿಂದಾಗಿ ತಕ್ಷಣವೇ ಕಾರ್ಯಪ್ರವೃತ್ತರಾದರು. ನಾಗವಾರದ ಸೇಂಟ್ ಫಿಲೋಮಿನಾ ಆಸ್ಪತ್ರೆಗೆ ಶ್ವಾನದಳ, ಬಾಂಬ್ ನಿಷ್ಕ್ರೀಯ ದಳದ ಅಧಿಕಾರಿಗಳು ಭೇಟಿ ನೀಡಿ, ಇಡೀ ಆಸ್ಪತ್ರೆಯನ್ನು ಪರಿಶೀಲನೆ ನಡೆಸಿದರು. ಆದ್ರೇ ಯಾವುದೇ ಬಾಂಬ್ ಪತ್ತೆಯಾಗಿಲ್ಲ. ಹೀಗಾಗಿ ಇದೊಂದು ಹುಸಿ ಬಾಂಬ್ ಬೆದರಿಕೆ…

Read More

ಕೆಎನ್ಎನ್ ಸಿನಿಮಾ ಡೆಸ್ಕ್. ನಿಂತ ನಿಲುವಿನಲ್ಲೇ ಆವರಿಸಿಕೊಳ್ಳಬಲ್ಲ ಹಾಡೊಂದಕ್ಕಾಗಿ ಅನುಕ್ಷಣವೂ ಹಾತೊರೆಯುವ ದೊಡ್ಡದೊಂದು ಸಂಗೀತ ಪ್ರೇಮಿಗಳ ದಂಡು ನಮ್ಮ ನಡುವಲ್ಲಿದೆ. ಯಾವ ಸುಳಿವೂ ಕೊಡದೆ ಚೆಂದದ್ದೊಂದು ಹಾಡು ಅಚಾನಕ್ಕಾಗಿ ಕಿವಿ ಸೋಕಿದರೆ ಅವರಿಗೆಲ್ಲ ಅಕ್ಷರಶಃ ರೋಮಾಂಚನ. ಬೃಂದಾ ಆಚಾರ್ಯ ಮತ್ತು ಭರತ್ ಬೋಪಣ್ಣ ನಟಿಸಿರುವ ಆಲ್ಬಂ ಸಾಂಗ್ ಇದೀಗ ಅಂಥಾದ್ದೊಂದು ಅನುಭೂತಿಯನ್ನು ಬೇಷರತ್ತಾಗಿ ಕೊಡಮಾಡಿದೆ. ಸಾಹಿತ್ಯ, ಸಂಗೀತ, ಪರಿಕಲ್ಪನೆ, ನಟನೆ ಸೇರಿದಂತೆ ಎಲ್ಲದರಲ್ಲಿಯೂ ವಿಶೇಷವಾಗಿರುವ `ಸಾವಿರ ಗುಂಗಲ್ಲಿ’ ಆಲ್ಬಂ ಸಾಂಗ್ ಈಗ ಟ್ರೆಂಡಿಂಗಿನತ್ತ ದಾಪುಗಾಲಿಡುತ್ತಿದೆ. ಇತ್ತೀಚಿನ ದಿನಮಾನದಲ್ಲಿ ಸಿನಿಮಾಗಳಾಚೆಗೆ ಹಾಡುಗಳು ರೂಪುಗೊಳ್ಳೋದೇ ಅಪರೂಪ. ಆಲ್ಬಂ ಸಾಂಗ್ ಅನ್ನೋ ರೋಮಾಂಚಕ ಪರಿಕಲ್ಪನೆ ಅದೇಕೋ ಬರಬರುತ್ತಾ ನೇಪಥ್ಯಕ್ಕೆ ಸರಿದುಬಿಟ್ಟಿದೆ. ಇಂಥಾ ಹೊತ್ತಲ್ಲಿ `ಸಾವಿರ ಗುಂಗಲ್ಲಿ’ ಎಂಬ ಆಲ್ಬಂ ಸಾಂಗ್ ತನ್ನ ನವಿರು ಶೈಲಿಯೊಂದಿಗೆ ಕೇಳುಗರನ್ನೆಲ್ಲ ಸೋಕುತ್ತಿದೆ. ಮತ್ತಷ್ಟು ಮನಸುಗಳನ್ನು ಆವರಿಸಿಕೊಳ್ಳುತ್ತಾ ಮುಂದುವರೆಯುತ್ತಿದೆ. ಅಂದಹಾಗೆ, ಕೃಷ್ಣ ನಂಜುಂಡಯ್ಯನವರ ಪರಿಕಲ್ಪನೆ, ನಿರ್ದೇಶನದಲ್ಲಿ ಮೂಡಿ ಬಂದಿದೆ. ಬೃಂದಾ ಆಚಾರ್ಯ, ಭರತ್ ಬೋಪಣ್ಣ, ಮಯೂರ್ ಸಾಗರ್, ಕೃತಿಕಾ ಗೌಡ, ಮಾನಿನಿ…

Read More

ಮಂಡ್ಯ :- ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬದ ವಿರುದ್ಧ ಕಾಂಗ್ರೆಸ್ ಪಕ್ಷದ ನಾಯಕರು ನಡೆಸುತ್ತಿರುವ ವ್ಯವಸ್ಥಿತ ಷಡ್ಯಂತ್ರವನ್ನು ಖಂಡಿಸಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ವತಿಯಿಂದ ಮದ್ದೂರು ಪಟ್ಟಣದ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ರಸ್ತೆ ಸಂಚಾರ ತಡೆದು ಭಾನುವಾರ ಬೃಹತ್ ಪ್ರತಿಭಟನೆ ಮಾಡಲಾಯಿತು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡರ ಪ್ರತಿಕೃತಿ ದಹಿಸಿ ಅವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿ, ಹೆದ್ದಾರಿ ಸಂಚಾರ ತಡೆದ ಪರಿಣಾಮ ಕೆಲಕಾಲ ಸಂಚಾರದಲ್ಲಿ ಅಸ್ತವ್ಯಸ್ತಗೊಂಡಿತ್ತು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಅವರು ಮಾತನಾಡಿ, ಪೆನ್ ಡ್ರೈವ್ ವಿಚಾರದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಅಣಿಯಲು ಕಾಂಗ್ರೆಸ್ ಪಕ್ಷದ ನಾಯಕರು ಮುಂದಾಗಿರುವುದು ಸರಿಯಲ್ಲ. ಕಾಂಗ್ರೆಸ್ ಪಕ್ಷದ ನಾಯಕರು ನಾಲಿಗೆ ಇದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಲಘುವಾಗಿ ಮಾತನಾಡುವುದು ಸರಿಯಲ್ಲ ಎಂದು ಎಚ್ಚರಿಕೆ ನೀಡಿದರು. ಹೆಣ್ಣು ಮಕ್ಕಳ ಬಗ್ಗೆ ಕಾಳಜಿ…

Read More

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಅದೇ ಪೆನ್ ಡ್ರೈವ್ ವೈರಲ್ ಮಾಡಿದಂತ ಆರೋಪಿಗಳಾದಂತ ಚೇತನ್, ಲಿಖಿತ್ ಹೆಸರಿನ ಇಬ್ಬರು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಇದೇ ಸಂದರ್ಭದಲ್ಲಿ ಪೆನ್ ಡ್ರೈವ್ ಹಂಚಿಕೆ ಆರೋಪ ಎದುರಿಸುತ್ತಿರೋ ನವೀನ್ ಗೌಡ ಎಂಬಾತ ನನಗೆ ದಾರಿಯಲ್ಲಿ ಸಿಕ್ಕಿದ್ದಂತ ಪೆನ್ ಡ್ರೈವ್ ಅನ್ನು ಎ ಮಂಜುಗೆ ಕೊಟ್ಟಿದ್ದೆ ಎಂಬುದಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಈ ಕುರಿತಂತೆ ಫೆಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವಂತ ನವೀನ್ ಗೌಡ, ಏಪ್ರಿಲ್ 20ರಂದು ನನಗೆ ರಸ್ತೆಯಲ್ಲಿ ಸಿಕ್ಕಿದ್ದಂತ ಪೆನ್ ಡ್ರೈವ್ ಅನ್ನು ಅರಕಲಗೂಡು ಶಾಸಕರಾದಂತ ಎ ಮಂಜು ಅವರಿಗೆ ಏಪ್ರಿಲ್.21ರಂದು ನೀಡಿದ್ದೇನೆ. ಏಪ್ರಿಲ್.21ರಂದು ಅರಕಲಗೂಡಿನ ಮಾರುತಿ ಕಲ್ಯಾಣ ಮಂಟಪದಲ್ಲಿ ನೀಡಿದ್ದೇನೆ ಎಂದಿದ್ದಾರೆ. ಇನ್ನೂ ಮುಂದುವರೆದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಹೇಳಿದ ಹಾಗೆ ವೀಡಿಯೋ ವೈರಲ್ ಹಿಂದೆ ಇರುವ ಮಹಾ ನಾಯಕ ಅರಕಲಗೂಡು ಶಾಸಕರೇ ಆಗಿರಬಹುದು ಎಂಬುದಾಗಿ ತಿಳಿಸಿದ್ದಾರೆ. https://kannadanewsnow.com/kannada/breaking-big-twist-to-kidnapping-case-against-revanna-missing-victim-releases-video-statement/ https://kannadanewsnow.com/kannada/conspiracy-is-being-hatched-to-finish-jds-but-no-one-can-do-it-mla-a-manju/

Read More

ಬೆಂಗಳೂರು: ಮಂಡ್ಯದ ಕೆರಗೋಡಿನಲ್ಲಿ ಹನುಮಧ್ವಜ ಘಟನೆಯ ಸಂಬಂಧ ಪ್ರತಿಭಟನೆ ನಡೆಸಿದವರ ವಿರುದ್ಧ ಪೊಲೀಸರು ರೌಡಿ ಶೀಟರ್ ತೆರೆಯುತ್ತಿದ್ದಾರೆ ಎನ್ನಲಾಗುತ್ತಿದೆ. ಒಂದು ವೇಳೆ ಹೀಗೆ ಮಾಡಿದ್ದೇ ಆದಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ ಎಂಬುದಾಗಿ ಬಿವೈ ವಿಜಯೇಂದ್ರ ಖಡಕ್ ಎಚ್ಚರಿಕೆ ನೀಡಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜಕ್ಕೆ ಆದ ಅಪಮಾನ ಖಂಡಿಸಿ ಪ್ರತಿಭಟನೆ ನಡೆಸಿದ್ದ ಹನುಮಭಕ್ತರ ವಿರುದ್ಧ ರೌಡಿಶೀಟರ್ ಪಟ್ಟಿಗೆ ಸೇರ್ಪಡೆ ಮಾಡಲು ಪೊಲೀಸರು ವಹಿಸಿರುವ ಕ್ರಮ ಕಾಂಗ್ರೆಸ್ ಸರ್ಕಾರದ ದ್ವೇಷ ರಾಜಕಾರಣಕ್ಕೆ ದುರ್ಬಳಕೆಯಾಗುತ್ತಿರುವ ಕಾನೂನು ಅಸ್ತ್ರವಾಗಿದೆ ಎಂದಿದ್ದಾರೆ. ಗ್ರಾಮೀಣ ಭಾಗದ ಹನುಮ ಭಕ್ತರು ತಮ್ಮ ಭಾವನೆಗಳನ್ನು ಘಾಸಿಗೊಳಿಸಿದ ಆಡಳಿತ ವ್ಯವಸ್ಥೆಯ ವಿರುದ್ಧ ಪ್ರತಿಭಟನೆ ನಡೆಸಿದ್ದು ನಿರೀಕ್ಷಿತ ಘಟನೆಯಾಗಿದೆ. ಆದರೆ ಹಿಂದೂ ಶ್ರದ್ಧೆಯ ಭಕ್ತರು ಹಾಗೂ ಸಂಘಟನೆಗಳ ಕಾರ್ಯಕರ್ತರುಗಳಿಗೆ ಗೂಂಡಾಗಿರಿ ಹಣೆಪಟ್ಟಿ ಕಟ್ಟಲು ಪೊಲೀಸರು ನೋಟೀಸ್ ನೀಡಿರುವುದು ಅತ್ಯಂತ ಖಂಡನೀಯ ಎಂಬುದಾಗಿ ಹೇಳಿದ್ದಾರೆ. ಹನುಮಧ್ವಜ ಘಟನೆಯಲ್ಲಿ ಪ್ರತಿಭಟಿಸಿದವರ ಮೇಲೆ ರೌಡಿಶೀಟರ್ ತೆರೆದದ್ದೇ ಆದಲ್ಲಿ…

Read More

ಬ್ರೆಜಿಲ್: ಇಲ್ಲಿನ ರಿಯೊ ಗ್ರಾಂಡೆ ಡೊ ಸುಲ್ ರಾಜ್ಯದಲ್ಲಿ ಸುರಿಯುತ್ತಿರುವಂತ ಭಾರೀ ಮಳೆಯಿಂದಾಗಿ ಇದುವರೆಗೆ 136 ಜನರು ಸಾವನ್ನಪ್ಪಿದ್ದಾರೆ. ಅಲ್ಲದೇ 125 ಮಂದಿ ನಾಪತ್ತೆಯಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಬಿರುಗಾಳಿ ಹಾಗೂ ಪ್ರವಾಹದ ಪರಿಣಾಮವಾಗಿ ಬ್ರೆಜಿಲ್ ನ 446 ನಗರಗಳಿಗೆ ಹಾನಿಯಾಗಿದೆ. ರಾಜ್ಯದ 20 ಲಕ್ಷಕ್ಕೂ ಹೆಚ್ಚು ಜನರು ಪ್ರವಾಹದಿಂದ ನೆರೆ ಸಂತ್ರಸ್ತರಾಗಿದ್ದಾರೆ. ಸದ್ಯ ಪ್ರವಾಹ ಪೀಡಿತ ಪ್ರದೇಶದಲ್ಲಿ ಸಿಲುಕಿದ್ದಂತ 5,37,000 ಜನರನ್ನು ಸ್ಥಳಾಂತರಿಸಲಾಗಿದೆ. https://kannadanewsnow.com/kannada/breaking-congress-releases-list-of-6-candidates-for-karnataka-legislative-council-elections/ https://kannadanewsnow.com/kannada/lok-sabha-elections-2024-no-reservation-on-the-basis-of-religion-says-pm-modi/

Read More