Author: kannadanewsnow09

ಉಜಿರೆ: ಹೆಣ್ಣು ಮಕ್ಕಳನ್ನು ಪೋಷಕರು ಬೆಳೆಸುವಾಗ ಸಾಮಾನ್ಯವಾಗಿ ಮದುವೆಯ ಬಗ್ಗೆ ಯೋಚನೆ ಮಾಡುತ್ತಾರೆ ವಿದ್ಯಾಭ್ಯಾಸ ನೀಡುತ್ತಾರೆ ಆದರೆ ಉದ್ಯೋಗದ ಬಗ್ಗೆ ಯೋಚಿಸುವುದು ಕಡಿಮೆ.  ಇಂದಿನ ಹೆಣ್ಣು ಮಕ್ಕಳಿಗೆ ವಿದ್ಯೆಯ ಜೊತೆಗೆ ಉದ್ಯೋಗ ಬೇಕು ಮಹಿಳೆಯರಿಗೆ ಆರ್ಥಿಕ ಸ್ವಾತಂತ್ರ್ಯ ಬಹು ಮುಖ್ಯವಾಗುತ್ತದೆ. ನಮ್ಮ ಕೈಯಲ್ಲಿ ನಮ್ಮ ದುಡ್ಡು ಇರಬೇಕು ನಮ್ಮ ಮತ್ತು ಮಕ್ಕಳ ಬೇಕು -ಬೇಡಗಳಿಗೆ, ಸ್ಪಂದಿಸಲು ಅನುಕೂಲವಾಗತ್ತದೆ ಎಂಬುದಾಗಿ ಶೃದ್ಧಾ ಅಮಿತ್ ಹೇಳಿದ್ದಾರೆ. ಅವರು ಉಜಿರೆ ರುಡ್‌ಸೆಟ್‌ ಸಂಸ್ಥೆಯಲ್ಲಿ 06 ದಿನ ಗಳ ಕಾಲ ನಡೆದ ಮದುಮಗಳ ಶೃಂಗಾರ -ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶಿಭಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿ, ಶುಭ ಹಾರೈಸಿದರು. ಈ ವೇಳೆ ಮಾತನಾಡಿದಂತ ಅವರು, ಮುಖ್ಯವಾಗಿ ನಮ್ಮ ಮನೋಬಲ ಏನು, ನಮ್ಮ ಒಳಗೆ ಏನು ಆಸೆ ಇದೆ. ನಮ್ಮಲ್ಲಿ ಏನು ಪ್ರತಿಭೆ ಇದೆ. ನಮ್ಮ ವ್ಯಕ್ತಿತ್ವ ಏನು ಎಂಬುದನ್ನು ತಿಳಿದಿರಬೇಕು. ಪದವಿ ಓದಿದ ನಂತರ ಕೂಡ ಮುಂದೆ ಏನು ಮಾಡಬೇಕು…

Read More

ಬೆಂಗಳೂರು: ಒಟ್ಟಾರೆ ಜನಾಭಿಪ್ರಾಯ, ಜನರ ಸ್ಪಂದನ, 3 ಸುತ್ತಿನಲ್ಲಿ ಮನೆ ಮನೆ ಪ್ರಚಾರದ ಕಾರ್ಯದ ಆಧಾರದಲ್ಲಿ ರಾಜ್ಯದ ಎಲ್ಲ 28 ಲೋಕಸಭಾ ಕ್ಷೇತ್ರಗಳನ್ನೂ ಗೆಲ್ಲುವ ಉತ್ಸಾಹದಲ್ಲಿ ನಾವಿದ್ದೇವೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ವಿ.ಸುನೀಲ್ ಕುಮಾರ್ ಅವರು ತಿಳಿಸಿದರು. ನಗರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಡಿಮೆ ಅವಧಿಯಲ್ಲಿ ಹೆಚ್ಚು ಜನರನ್ನು ತಲುಪುವಂಥ ಪ್ರಯತ್ನ ಯಶಸ್ವಿಯಾಗಿ ನಡೆದಿದೆ ಎಂದು ತಿಳಿಸಿದರು. 3 ರೀತಿಯ ಸಾರ್ವಜನಿಕ ಸಂಪರ್ಕವನ್ನು ಯಶಸ್ವಿಯಾಗಿ ಮಾಡಿದ್ದೇವೆ. ದೊಡ್ಡ ದೊಡ್ಡ ಸಾರ್ವಜನಿಕ ಸಭೆ, ರೋಡ್ ಷೋ, ಮನೆಯಂಗಳದ ಸಭೆಗಳ ಮೂಲಕ ಸಾರ್ವಜನಿಕರನ್ನು ತಲುಪಿ ನಮ್ಮ ವಿಷಯವನ್ನು ತಿಳಿಸಲಾಗಿದೆ ಎಂದರು. ಪ್ರಧಾನಮಂತ್ರಿ ನರೇಂದ್ರ ಮೋದಿಜೀ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೇರಿದಂತೆ 14 ಜನ ರಾಷ್ಟ್ರೀಯ ಪ್ರಮುಖರು ಕರ್ನಾಟಕದಲ್ಲಿ 79 ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಿದ್ದಾರೆ. 39 ಕಡೆಗಳಲ್ಲಿ ರೋಡ್…

Read More

ಶಿವಮೊಗ್ಗ: ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದ ಬಳಿಕ, ಮುಂದಿನ ತರಗತಿಗೆ ಶಾಲಾ ದಾಖಲಾತಿ ಆರಂಭಗೊಂಡಿದೆ. ಕೆಲ ಶಾಲೆಗಳಂತೂ ಸರ್ಕಾರ ನಿಗದಿ ಪಡಿಸಿದ್ದಕ್ಕಿಂತ ಹೆಚ್ಚಿನ ಶುಲ್ಕವನ್ನು ವಸೂಲಿ ಮಾಡುತ್ತಿರೋ ಆರೋಪ ಕೇಳಿ ಬಂದಿದೆ. ಇಂತವರಿಗೆ ನಿಗದಿಗಿಂತ ಹೆಚ್ಚಿನ ಫೀಸ್ ತಗೊಂಡ್ರೆ ಶಾಲಾ ಮಾನ್ಯತೆಯನ್ನೇ ರದ್ದುಗೊಳಿಸೋದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಖಡಕ್ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಡಿದಂತ ಅವರು, ಖಾಸಗಿ ಶಾಲೆಗಳಿಗೆ ನಾನು ಒಂದು ಸಲಹೆ ಕೊಡುತ್ತೇನೆ. ಕಾನೂನಿನ ಪ್ರಕಾರವೇ ಶಾಲೆಯಲ್ಲಿ ಶುಲ್ಕ ತೆಗೆದುಕೊಳ್ಳಬೇಕು. ಈ ಮೂಲಕ ಮಕ್ಕಳಿಗೆ ಅನುಕೂಲ ಮಾಡಿಕೊಡಬೇಕು ಎಂದರು. ಮಕ್ಕಳಿಗೆ ಅನುಕೂಲವಾಗುವ ರೀತಿಯಲ್ಲಿ ಖಾಸಗಿ ಶಾಲೆಗಳು ಸಹಾಯ ಮಾಡಬೇಕು. ಅದರ ಹೊರತಾಗಿ ಅಕ್ರಮವಾಗಿ ಫೀಸ್ ತೆಗೆದುಕೊಂಡ್ರೆ, ಹೆಚ್ಚಿನ ಶುಲ್ಕವನ್ನು ಮಕ್ಕಳ ಪೋಷಕರಿಂದ ವಸೂಲಿ ಮಾಡಿದ್ದೇ ಆದಲ್ಲಿ, ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಶಾಲಾ ಮಾನ್ಯತೆಯನ್ನು ರದ್ದುಗೊಳಿಸೋದಾಗಿ ಎಚ್ಚರಿಕೆ ನೀಡಿದರು. https://kannadanewsnow.com/kannada/villagers-complain-to-sagar-tehsildar-over-conley-pdo-sitting-with-his-eyes-closed-despite-illegal-transportation-of-soil/ https://kannadanewsnow.com/kannada/becoming-a-mother-is-a-natural-phenomenon-court-orders-payment-of-maternity-dues-to-employee/

Read More

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಕಾನ್ಲೆ ಗ್ರಾಮ ಪಂಚಾಯ್ತಿ ಪಿಡಿಓ ವಿರುದ್ಧ ತಹಶೀಲ್ದಾರರಿಗೆ ಗ್ರಾಮಸ್ಥರು ದೂರು ನೀಡಿದ್ದಾರೆ. ಇದಕ್ಕೆ ಕಾರಣ ಗ್ರಾಮದಲ್ಲಿ ಅಕ್ರಮವಾಗಿ ಮಣ್ಣು ಸಾಗಾಟ ಮಾಡಿದ್ರೂ ಪಿಡಿಓ ಮಾತ್ರ ನನಗೂ ಇದಕ್ಕೂ ಸಂಬಂಧವೇ ಇಲ್ಲ ಎನ್ನುವಂತೆ ಕಣ್ ಮುಚ್ಚಿ ಕುಳಿತಿರೋದೇ ಆಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತಹಶೀಲ್ದಾರ್ ಸೈಯದ್ ಕಲೀಂ ಉಲ್ಲಾ ಅವರಿಗೆ ಕಾನ್ಲೆ ಪಂಚಾಯ್ತಿ ಅಧಿಕಾರಿಗಳ ವಿರುದ್ಧ ಅದೇ ಊರಿನ ಗ್ರಾಮದ ಹಿರಿಯ ನಾಗರಿಕರಾದ ಬಡ ರೈತ ಕುಟುಂಬ ದೂರು ನೀಡಿದೆ. ಕಣ್ ಮುಚ್ಚಿ ಕುಳಿತ ಕಾನ್ಲೆ ಗ್ರಾಮ ಪಂಚಾಯ್ತಿ ಪಿಡಿಓ ಸಾಗರ ತಾಲೂಕು ತಾಳಗುಪ್ಪ ಹೋಬಳಿ ಕಾನ್ಲೆ ಗ್ರಾಮ ಪಂಚಾಯ್ತಿಯ ಸರ್ಕಾರಿ ಬೀಳು ಸರ್ವೇ ನಂಬರ್ 104ರಲ್ಲಿ ಸರಿಸುಮಾರು 18 ರಿಂದ 20 ಎಕರೆ ಸರ್ಕಾರಿ ಜಾಗದಲ್ಲಿ ಸಾವಿರಾರು ಲೋಡ್ ಅಕ್ರಮ ಮಣ್ಣು ಲೂಟಿ ಮಾಡಿ ಸಾಗಾಟ ಮಾಡಿಸಿದ್ದಾರೆ. ಅಲ್ಲದೇ ಸರ್ಕಾರದ ಬೊಕ್ಕಸಕ್ಕೆ ಲಕ್ಷಾಂತರ ರೂಪಾಯಿ ನಷ್ಟ ಉಂಟು ಮಾಡಿದ್ದಾರೆ ಎಂಬುದಾಗಿ ಗಂಭೀರವಾಗಿ ಆರೋಪಿಸಲಾಗಿದೆ. ಇದಲ್ಲದೇ…

Read More

ಚಿಕ್ಕೋಡಿ: ಇಂದು ಮಹಾರಾಷ್ಟ್ರ ಬಳಿಯಲ್ಲಿ ಕ್ರೂಸರ್ ವಾಹನವೊಂದು ಪಲ್ಟಿಯಾದ ಪರಿಣಾಮ, ಅದರಲ್ಲಿದ್ದಂತ ಚಿಕ್ಕೋಡಿಯ ಬಳ್ಳಿಗೇರಿಯ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಅಲ್ಲದೇ ಇನ್ನೂ ಹಲವರು ಗಾಯಗೊಂಡಿರುವಂತ ಘಟನೆ ನಡೆದಿದೆ. ಮಹಾರಾಷ್ಟ್ರದ ಜತ್ತ ಬಳಿಯಲ್ಲಿ ಕ್ರೂಸರ್ ವಾಹನವೊಂದು ಪಲ್ಟಿಯಾದ ಪರಿಣಾಮ, ಅಥಣಿ ತಾಲೂಕಿನ ಬಳ್ಳಿಗೇರಿಯ ಮೂವರು ಮಹಿಳೆಯರು ದುರ್ಮರಣ ಹೊಂದಿದ್ದಾರೆ. ಚಿಕ್ಕೋಡಿಯಿಂದ ಮಹಾರಾಷ್ಟ್ರಕ್ಕೆ ಕೆಲಸಕ್ಕಾಗಿ ಕ್ರೂಸರ್ ನಲ್ಲಿ ತೆರಳುತ್ತಿದ್ದಾಗ, ಕ್ರೂಸರ್ ವಾಹನದ ಎಡಬದಿಯ ಟೈಯರ್ ಸ್ಪೋಟಗೊಂಡು ಪಲ್ಟಿಯಾಗಿದೆ. ಈ ಅಪಘಾತದಲ್ಲಿ ಮಹಾದೇವಿ ಚೌಗಲಾ, ಗೀತಾ ದೊಡ್ಡಮನಿ, ಕಸ್ತೂರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಇದೇ ವಾಹನದಲ್ಲಿ ಸಂಚರಿಸುತ್ತಿದ್ದಂತ ಇತರರಿಗೆ ಗಾಯವಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈಗ ಬಳ್ಳಿಗೇರಿಯಲ್ಲಿ ಮೂವರು ಮಹಿಳೆಯರು ಅಪಘಾತದಲ್ಲಿ ದುರ್ಮರಣದಿಂದಾಗಿ ನೀರವ ಮೌನ ಆವರಿಸಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. https://kannadanewsnow.com/kannada/important-information-for-students-about-registration-for-sslc-exam-ii/ https://kannadanewsnow.com/kannada/becoming-a-mother-is-a-natural-phenomenon-court-orders-payment-of-maternity-dues-to-employee/

Read More

ಬೆಂಗಳೂರು: ಎಸ್ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಕೆಲ ದಿನಗಳ ಹಿಂದೆ ಪ್ರಕಟವಾಗಿತ್ತು. ಈ ಬಾರಿಯೂ ವಿದ್ಯಾರ್ಥಿಗಳೇ ಮೇಲು ಗೈ ಸಾಧಿಸಿದ್ದರು. ಈ ಬೆನ್ನಲ್ಲೇ ಎಸ್ ಎಸ್ ಎಲ್ ಸಿ ಪರೀಕ್ಷೆ-2ಕ್ಕೆ ವೇಳಾಪಟ್ಟಿ, ನೋಂದಣಿಗಾಗಿ ಅರ್ಜಿಯನ್ನು ನೀಡಲಾಗಿದೆ. ಸೋ ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆ-2ಕ್ಕೆ ನೋಂದಾಯಿಸಿಕೊಳ್ಳೋ ಬಗ್ಗೆ ಮಹತ್ವದ ಮಾಹಿತಿಯನ್ನು ಮುಂದೆ ಓದಿ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಪರೀಕ್ಷೆಗಳ ನಿರ್ದೇಶಕರಾದಂತ ಹೆಚ್.ಎನ್ ಗೋಪಾಲಕೃಷ್ಣ ಮಾಹಿತಿ ನೀಡಿದ್ದಾರೆ. ಎಸ್ ಎಸ್ ಎಲ್ ಸಿ ಫಲಿತಾಂಶ ಉತ್ತಮ ಪಡಿಸಿಕೊಳ್ಳುವ ಮತ್ತು ಅನುತ್ತೀರ್ಣ ವಿದ್ಯಾರ್ಥಿಗಳು ಪಾವತಿಸಬೇಕಾಗಿರುವ ಪರೀಕ್ಷಾ ಶುಲ್ಕ ಒಂದು ವಿಷಯಕ್ಕೆ ರೂ.407, ಎರಡು ವಿಷಯಕ್ಕೆ ರೂ.507, ಮೂರು ಅಥವಾ ಅಧಕ್ಕಿಂತ ಮೇಲ್ಪಟ್ಟ ವಿಷಯಕ್ಕೆ ರೂ.686 ಆಗಿದೆ ಎಂದಿದ್ದಾರೆ. ಹೀಗಿವೆ ಎಸ್ ಎಸ್ ಎಲ್ ಸಿ ಪರೀಕ್ಷೆ-2ಕ್ಕೆ ನೋಂದಣಿ ದಿನಾಂಕಗಳು ಮಂಡಳಿಯ ಜಾಲತಾಣದ ಶಾಲಾ ಲಾಗಿನ್ ಮೂಲಕ ವಿದ್ಯಾರ್ಥಿಗಳ ಮಾಹಿತಿಯನ್ನು ಅಪ್ ಲೋಡ್ ಮಾಡಲು ದಿನಾಂಕ 09-05-2024ರಿಂದ ಆರಂಭಗೊಳ್ಳಲಿದೆ. ಮಂಡಳಿಯ…

Read More

ಹಾಸನ: ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ನಿನ್ನೆ ಹಿರಿಯೂರು ಗ್ರಾಮಾಂತರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದರು. ಈಗ ಅವರನ್ನು ವಿಚಾರಣೆಯ ಬಳಿಕ ಬಂಧಿಸಿದ್ದಾರೆ. ಏಪ್ರಿಲ್.1ರಂದು ವಕೀಲ ದೇವರಾಜೇಗೌಡ ವಿರುದ್ಧ ಹಾಸನದ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬುದಾಗಿ ದೂರು ನೀಡಿದ್ದರು. ಈ ದೂರಿನ ಹಿನ್ನಲೆಯಲ್ಲಿ ವಕೀಲ ದೇವರಾಜೇಗೌಡ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ನಿನ್ನೆ ಈ ಪ್ರಕರಣದಲ್ಲಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಗ್ರಾಮಾಂತರ ಠಾಣೆಯ ಪೊಲೀಸರು ವಕೀಲ ದೇವರಾಜೇಗೌಡ ಅವರನ್ನು ವಶಕ್ಕೆ ಪಡೆದಿದ್ದರು. ಆ ಬಳಿಕ ಹೊಳೆನರಸೀಪುರ ಠಾಣೆಯ ಪೊಲೀಸರಿಗೆ ಹಸ್ತಾಂತರಿಸಿದ್ದರು. ಇಂದು ವಕೀಲ ದೇವರಾಜೇಗೌಡ ಅವರನ್ನು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದಂತ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದರು. ಬಳಿಕ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರನ್ನು ಬಂಧಿಸಿರೋದಾಗಿ ತಿಳಿದು ಬಂದಿದೆ. https://kannadanewsnow.com/kannada/bbmp-issues-shock-to-those-who-put-up-banners-illegally-in-bengaluru-fir-lodged/ https://kannadanewsnow.com/kannada/becoming-a-mother-is-a-natural-phenomenon-court-orders-payment-of-maternity-dues-to-employee/

Read More

ಬೆಂಗಳೂರು: ನಗರದಲ್ಲಿ ಕೋರ್ಟ್ ಆದೇಶದಂತೆ ಅನಧಿಕೃತವಾಗಿ ಬ್ಯಾನರ್ ಹಾಕುವುದನ್ನು ನಿಷೇಧಿಸಲಾಗಿದೆ. ಆದರೂ ಅಕ್ರಮವಾಗಿ ಬ್ಯಾನರ್ ಅಳವಡಿಸಿರುವವರ ಮೇಲೆ ಬಿಬಿಎಂಪಿಯಿಂದ ಎಫ್.ಐ.ಆರ್ ದಾಖಲಿಸಿ ಶಾಕ್ ನೀಡಲಾಗಿದೆ. ಬೆಂಗಳೂರು ನಗರ ಪದ್ಮನಾಭನಗರ ವಿಧಾನ ಸಭಾ ಕ್ಷೇತ್ರದ ಬನಶಂಕರಿ 2ನೇ ಹಂತ ದೇವೇಗೌಡ ಪೆಟ್ರೋಲ್ ಬಂಕ್ ವೃತ್ತ, ಎಂ ಕೆ ಪುಟ್ಟಲಿಂಗಯ್ಯ ರಸ್ತೆಯ ವಿವಿಧ ಕಡೆಗಳಲ್ಲಿ ಸಾರ್ವಜನಿಕ ಸ್ವತ್ತಿಗೆ “ಶ್ರೀ ಕಾರ್ತಿಕ್ ವೆಂಕಟೇಶ ಮೂರ್ತಿ ರವರಿಗೆ ಹುಟ್ಟು ಹಬ್ಬದ ಶುಭಾಶಯಗಳು” ಎಂಬ ಬ್ಯಾನರ್ ಗಳನ್ನು ಅಕ್ರಮವಾಗಿ ಅಳವಡಿಸಿ ನಗರದ ಸೌಂಧರ್ಯ ವನ್ನು ಹಾಳುಮಾಡಿರುತ್ತಾರೆ. ಈ ಸಂಬಂಧ ಪ್ಲೈಯಿಂದ ಸ್ಕ್ವಾಡ್ ತಂಡದ ನಾಯಕ ಅವೀಶ್ ಹೆಚ್.ಎಂ ರವರು ಬನಶಂಕರಿ ಪೊಲೀಸ್ ಠಾಣೆಯಲ್ಲಿ ದಿನಾಂಕ: 10-05-2024 ರಂದು ದೂರು ನೀಡಿ ಎಫ್.ಐ.ಆರ್ ದಾಖಲಿಸಿರುತ್ತಾರೆ. ಇಂತಹ ಅಕ್ರಮ ಮತ್ತು ಅನಧಿಕೃತ ಬ್ಯಾನರ್‌ಗಳು ಆಸ್ತಿ ವಿರೂಪ ಕಾಯ್ದೆ ಮತ್ತು ಬಿಬಿಎಂಪಿ ಕಾಯ್ದೆಯ ಉಲ್ಲಂಘನೆಯಾಗಿದ್ದು, ಬಿಬಿಎಂಪಿಯಲ್ಲಿ ಎಲ್ಲಿಯಾದರೂ ಇಂತಹ ಅನಧಿಕೃತ ಪೋಸ್ಟರ್ ಅಥವಾ ಬ್ಯಾನರ್‌ಗಳನ್ನು ಹಾಕಿದರೆ ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತದೆ. ಅಕ್ರಮ ಬ್ಯಾನರ್ ಮತ್ತು…

Read More

ಬೆಂಗಳೂರು: ಲೋಕಸಭಾ ಚುನಾವಣೆಯ ನಂತರ ರಾಜ್ಯ ಸರಕಾರ ಉರುಳಿ ಬೀಳಲಿದೆ ಎನ್ನುವ ಎಚ್ ಡಿ ಕುಮಾರಸ್ವಾಮಿ ಅವರ ಮಾತು ಬರೀ ಹಗಲುಗನಸು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಲೇವಡಿ ಮಾಡಿದ್ದಾರೆ. ಶನಿವಾರ ತಮ್ಮ‌ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಅವರು ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಕನಿಷ್ಠಪಕ್ಷ 20 ಕ್ಷೇತ್ರಗಳಲ್ಲಿ ಗೆಲ್ಲಲಿದೆ. ವಿಜಯಪರದಲ್ಲಂತೂ ಕಾಂಗ್ರೆಸ್ ಅಭ್ಯರ್ಥಿ ಒಂದು ಲಕ್ಷ ಮತಗಳ ಅಂತರದಿಂದ ಜಯಭೇರಿ ಬಾರಿಸಲಿದ್ದಾರೆ. ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳು ಮತದಾರರ ಮನ ಗೆದ್ದಿವೆ. ಫಲಿತಾಂಶದ ನಂತರ ಜೆಡಿಎಸ್ ಗತಿ ಏನಾಗಲಿದೆ ಕಾದು ನೋಡೋಣ ಎಂದು ಅವರು ಪ್ರತಿಪಾದಿಸಿದರು. ಜೆಡಿಎಸ್ ಪಕ್ಷದ ಅನೇಕರು ಕಾಂಗ್ರೆಸ್ಸಿನ ಸಂಪರ್ಕದಲ್ಲಿ ಇದ್ದಾರೆ. ಪೆನ್ ಡ್ರೈವ್ ಪ್ರಕರಣವು ಅವರಿಗೆ ತಲೆನೋವಾಗಿ ಪರಿಣಮಿಸಿದೆ ಎಂದು ಅವರು ವಿವರಿಸಿದರು. ಪ್ರಜ್ವಲ್ವ ರೇವಣ್ಣನವರ ಕಾಮಕಾಂಡವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಕುಮಾರಸ್ವಾಮಿ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. ಈ ಮೂಲಕ ಕ್ಲೀನ್ ಚಿಟ್ ತೆಗೆದುಕೊಂಡು, ಬಿಜೆಪಿಯಿಂದ…

Read More

ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಆರೋಪಿಯಾಗಿರುವಂತ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಹುಡುಕಿ ಕೊಟ್ಟವರಿಗೆ 1 ಲಕ್ಷ ಬಹುಮಾನ ನೀಡಲಾಗುತ್ತದೆ ಎಂಬುದಾಗಿ ಜನತಾ ಪಕ್ಷದ ಕಾರ್ಯಕರ್ತರು ಪೋಸ್ಟರ್ ಅಂಟಿಸಿದ್ದರು. ಹೀಗೆ ಪೊಸ್ಟರ್ ಅಂಟಿಸಿದ್ದಂತ ಜನತಾ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜ್ಯ ಹಾಗೂ ಕೇಂದ್ರ ಸರ್ಕಾರವು ಸಂಸದ ಪ್ರಜ್ವಲ್ ರೇವಣ್ಮನನ್ನು ಹುಡುಕುವಲ್ಲಿ ವಿಫಲವಾಗಿದೆ. ಈ ಹಿನ್ನಲೆಯಲ್ಲಿ ಆರೋಪಿ ಪ್ರಜ್ವಲ್ ರೇವಣ್ಣನನ್ನು ಹುಡುಕಿ ಕೊಟ್ಟವರಿಗೆ 1 ಲಕ್ಷ ಬಹುಮಾನ ನೀಡಲಾಗುತ್ತದೆ ಎಂಬುದಾಗಿ ಜನತಾ ಪಕ್ಷದ ಕಾರ್ಯಕರ್ತರು ಪೋಸ್ಟರ್ ಅಂಟಿಸಿದ್ದರು. ಬೆಂಗಳೂರಿನ ಕೆಲವೆಡೆ ಹೀಗೆ ಪೋಸ್ಟರ್ ಅಂಟಿಸಿದಂತ ಕಾರ್ಯಕರ್ತರನ್ನು ಪೊಲೀಸರು ಈಗ ವಶಕ್ಕೆ ಪಡೆದಿದ್ದು, ಹಚ್ಚಿದ್ದಂತ ಪೋಸ್ಟರ್ ಗಳನ್ನು ಪೊಲೀಸರು ತೆರವುಗೊಳಿಸಿದ್ದಾರೆ. https://kannadanewsnow.com/kannada/becoming-a-mother-is-a-natural-phenomenon-court-orders-payment-of-maternity-dues-to-employee/ https://kannadanewsnow.com/kannada/at-least-50-killed-in-afghanistan-floods/

Read More